Tag: Coronoa

  • ಮತ್ತೆ ಬೆಂಗಳೂರಿನ ಮೂವರಲ್ಲಿ ಕಾಣಿಸಿಕೊಂಡ ಕೊರೊನಾ

    ಮತ್ತೆ ಬೆಂಗಳೂರಿನ ಮೂವರಲ್ಲಿ ಕಾಣಿಸಿಕೊಂಡ ಕೊರೊನಾ

    ಬೆಂಗಳೂರು: ನಗರದಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದು, ಇದೀಗ ಮತ್ತೆ ಮೂರು ಜನರಲ್ಲಿ ಕೊರೊನಾ (Corona) ಕಾಣಿಸಿಕೊಂಡಿದೆ.

    ಬೆಂಗಳೂರಿನ (Bengaluru) ಮೂರು ಏರಿಯಾಗಳಾದ ಡಿಜೆಹಳ್ಳಿ, ಸಿವಿರಾಮನ್ ನಗರ ಹಾಗೂ ಜೈ ಭುವನೇಶ್ವರಿ ನಗರದಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಿಗೆ ಕೊರೊನಾ ಪಾಸಿಟಿವ್ ಆಗಿದೆ.ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

    ಮೂವರಿಗೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಕೋವಿಡ್ ಕಾಣಸಿಕೊಂಡಿದ್ದು. ಸದ್ಯ ಹೋಂ ಐಸೋಲೇಷನ್‌ನಲ್ಲಿ ಟ್ರೀಟ್‌ಮೆಂಟ್ ತೆಗೆದುಕೊಳ್ಳುತ್ತಿದ್ದಾರೆ.

    ಈಗಾಗಲೇ ಮಲ್ಲೇಶ್ವರಂನ 45 ವರ್ಷದ ವ್ಯಕ್ತಿಗೆ ಹಾಗೂ ರಾಜಾಜಿನಗರದ 38 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಇಬ್ಬರನ್ನು ಹೋಂ ಐಸೂಲೇಷನ್‌ನಲ್ಲಿ ಇರಿಸಲಾಗಿದೆ.

    ಮೇ 17ರಂದು ಬೆಂಗಳೂರಿನಲ್ಲಿ ವೈಟ್‌ಫೀಲ್ಡ್‌ನ (WhiteField) 84 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ. ಮೇ 13ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು, ಕೊರೊನಾಗೆ ತುತ್ತಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಕೇಸ್ ಇವೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಒಟ್ಟು ಮೂರು ಜನ ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸದ್ಯ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಮುನೀರ್‌ಗೆ ಬೆಂಕಿ ಫೋಟೋ ಗಿಫ್ಟ್‌ ನೀಡಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕ್‌!

     

  • ಕೇರಳ ಆಸ್ಪತ್ರೆಯಿಂದ ಓಡಿ ಹೋಗಿದ್ದ ಅಮೆರಿಕ ದಂಪತಿ ಕೊನೆಗೂ ಪತ್ತೆ

    ಕೇರಳ ಆಸ್ಪತ್ರೆಯಿಂದ ಓಡಿ ಹೋಗಿದ್ದ ಅಮೆರಿಕ ದಂಪತಿ ಕೊನೆಗೂ ಪತ್ತೆ

    – ಅಲೆಪ್ಪಿ ಆಸ್ಪತ್ರೆಯಿಂದ ಶುಕ್ರವಾರ ಪರಾರಿ
    – ದಂಪತಿಗಾಗಿ ಶೋಧ ಕಾರ್ಯ ನಡೆಸಿದ್ದ ಪೊಲೀಸರು

    ತಿರುವನಂತಪುರಂ: ಆಸ್ಪತ್ರೆಗೆ ದಾಖಲಾದ ಬಳಿಕ ಪರಾರಿಯಾಗಿದ್ದ ಅಮೆರಿಕ ಪ್ರಜೆಗಳು ಕೊನೆಗೂ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಮೆರಿಕದ ಮೂಲದ ದಂಪತಿ ದೋಹಾ ಮೂಲಕ ಮಾರ್ಚ್ 9 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ದಂಪತಿ ಪೈಕಿ ಒಬ್ಬರಲ್ಲಿ ಕೊರೊನಾ ಲಕ್ಷಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲೆಪ್ಪಿ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದರು.

    ಆಸ್ಪತ್ರೆ ದಾಖಲಾಗುವಾಗ ನಾವು ಅಮೆರಿಕದ ಪ್ರಜೆಗಳು, ಕಳೆದ ಮೂರು ವರ್ಷಗಳಿಂದ ಲಂಡನ್ ನಲ್ಲಿ ನೆಲೆಸಿದ್ದೇವೆ ಎಂದು ತಿಳಿಸಿದ್ದರು. ಆಸ್ಪತ್ರೆಯ ಸಿಬ್ಬಂದಿ ನಿಮ್ಮನ್ನು  ಕೊರೊನಾ ಪರೀಕ್ಷೆಗೆ ಒಳಪಡಿಸಬೇಕು. ಪ್ರತ್ಯೇಕ ನಿಗಾದಲ್ಲಿರಬೇಕು ಎಂದು ಸೂಚಿಸಿದ್ದರು. ಅದರೆ ದಂಪತಿ ಕೊರೊನಾ ಪರೀಕ್ಷೆ ನಡೆಸಲು ಅನುಮತಿ ನೀಡಿರಲಿಲ್ಲ.

    ಈ ಸಂಬಂಧ ಪೊಲೀಸರು ಮಾಹಿತಿ ನೀಡಿ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ಪರೀಕ್ಷೆಗೆ ವೈರಾಲಜಿ ಆಸ್ಪತ್ರೆಗೆ ದಾಖಲಾಗಬೇಕು, ಪ್ರತ್ಯೇಕ ನಿಗಾದಲ್ಲಿರಬೇಕು ಎಂದು ಸೂಚಿಸಿದ್ದರು. ಈ ಮಧ್ಯೆ ದಂಪತಿ ಯಾರಿಗೂ ತಿಳಿಸದೇ ಶುಕ್ರವಾರ ಆಸ್ಪತ್ರೆಯಿಂದ ಪರಾರಿಯಾಗಿದ್ದರು. ನಾಪತ್ತೆಯಾದ ಈ ದಂಪತಿ ಪತ್ತೆ ಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು.

    ಇಂದು ಬೆಳಗ್ಗೆ ಈ ದಂಪತಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದ್ದು, ಈಗ ಆಸ್ಪತ್ರೆಗೆ ದಾಖಲಿಸಿ ನಿಗಾ ಇಡಲಾಗಿದೆ. ದಂಪತಿ ಕ್ಯಾಬ್ ಮೂಲಕ ಪ್ರಯಾಣಿಸಿದ್ದು ಕ್ಯಾಬ್ ಚಾಲಕನನ್ನು ಸಹ ದಾಖಲಿಸಿ ನಿಗಾ ಇಡಲಾಗಿದೆ.

    ಕೇರಳದಲ್ಲಿ 19 ಮಂದಿ ಕೊರೊನಾ ಪೀಡಿತರಿದ್ದಾರೆ. ಶುಕ್ರವಾರ ಒಂದು ಕೇಸ್ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಂಖ್ಯೆ 19ಕ್ಕೆ ಏರಿಕೆ ಆಗಿತ್ತು.