Tag: Corporation Board

  • ಪಕ್ಷಕ್ಕೆ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೂ ಅಧಿಕಾರ – ಡಿಕೆ ಶಿವಕುಮಾರ್

    ಪಕ್ಷಕ್ಕೆ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೂ ಅಧಿಕಾರ – ಡಿಕೆ ಶಿವಕುಮಾರ್

    ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೂ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ನಿಗಮ ಮಂಡಳಿ (Corporation Board) ಅಧಿಕಾರವಧಿಯನ್ನು ಎರಡು ವರ್ಷ ಮೀಸಲಿಗೆ ಕೆಲ ಶಾಸಕರ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ ಎಂದರು. ಇದನ್ನೂ ಓದಿ: ಸದ್ದಿಲ್ಲದೇ ಮೊದಲ ಹಂತದ ಶೂಟಿಂಗ್ ಮುಗಿಸಿದ ದರ್ಶನ್ ನಟನೆಯ ಡೆವಿಲ್

    ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ (Siddaramaiah) ಅವರದ್ದು ಏನೂ ಇಲ್ಲ, ನನ್ನದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಹೈಕಮಾಂಡ್ (Congress High Command) ಹೇಳಿದ ಹಾಗೆ ಎರಡು ವರ್ಷಕ್ಕೆ ಅಧಿಕಾರ ಸೀಮಿತ ಮಾಡಿದ್ದೇವೆ ಅಂತ ಸಮರ್ಥನೆ ನೀಡಿದರು. ಇದನ್ನೂ ಓದಿ: Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ಮೈತ್ರಿ ಸರ್ಕಾರ ಪತನ

    ಬಿಜೆಪಿ 543 ಕ್ಷೇತ್ರಗಳಲ್ಲೂ ಗೆಲ್ಲಲಿ:
    ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? 136 ಸ್ಥಾನ ನಮಗೆ ಬಂತು. 28 ಕ್ಷೇತ್ರ ಮಾತ್ರವಲ್ಲ ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ, ಬೇಡ ಎಂದವರು ಯಾರು? ಎಂದು ಕುಟುಕಿದ್ದಾರೆ.

    ವಿಧಾನಸಭಾ ಚುನಾವಣೆಯಲ್ಲಿ ನಾವು 136-140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು? ಅಂತ ವಿಧಾನಸಭೆ ಸೋಲನ್ನ ಬಿಜೆಪಿಗೆ ನೆನಪು ಮಾಡಿದ್ದಾರೆ.

  • ಎಲ್ಲರ ಅಭಿಪ್ರಾಯ ಪಡೆದು, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗಿದೆ: ಡಿಕೆಶಿ

    ಎಲ್ಲರ ಅಭಿಪ್ರಾಯ ಪಡೆದು, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗಿದೆ: ಡಿಕೆಶಿ

    ಬೆಂಗಳೂರು: ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ-ಮಂಡಳಿಗಳಿಗೆ (Corporation Board) ನೇಮಕ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.

    ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಿಗಮ-ಮಂಡಳಿಗಳಿಗೆ ನೇಮಕ‌ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ. ಸಚಿವರು ತಮ್ಮ ಅಭಿಪ್ರಾಯ ಕೇಳಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ನೇಮಕದ ಬಗ್ಗೆ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯ ಪಡೆದಿದ್ದೇವೆ. ಕೆಲವರು ಇಂತಹವರಿಗೆ ಸ್ಥಾನ ನೀಡಬೇಕು ಎಂಬ ಪಟ್ಟಿ ಕೊಟ್ಟಿದ್ದಾರೆ. ಆ ಪತ್ರವನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

    ಮಂತ್ರಿ ಆಗಬೇಕು, ದೊಡ್ಡ ಮಂಡಳಿಗಳು ಸಿಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಎರಡು ವರ್ಷಗಳ ನಂತರ ಮತ್ತೆ ಬದಲಾವಣೆ ಆಗುತ್ತದೆ. ಅವಧಿ ಮುಗಿದ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ಪಕ್ಷ ಯಾವುದೇ ಹುದ್ದೆ ಕೊಟ್ಟರೂ ಸೇವೆ ಮಾಡಬೇಕು. ಯಾರೂ ಗಾಬರಿಯಾಗುವ ಅವಶ್ಯಕತೆಯಿಲ್ಲ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬ್ಲಾಕ್‌ನಲ್ಲಿ ದುಡಿದಂತಹ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

    ಈಗ 39 ಜನ ಶಾಸಕರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಚುನಾವಣಾ ಸಮಯದಲ್ಲಿ ಕೆಲವರಿಗೆ ಮಾತು ಕೊಡಲಾಗಿತ್ತು. ಅದರಂತೆ ಒಂದಷ್ಟು ಜನರಿಗೆ ಹುದ್ದೆ ನೀಡಲಾಗಿದೆ. ಎಲ್ಲರನ್ನೂ ತೃಪ್ತಿಪಡಿಸಿದ್ದೇವೆ ಎಂದು ಹೇಳುವುದಿಲ್ಲ. ಪ್ರತಿ ಕ್ಷೇತ್ರದಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳಿದ್ದರು. ಪ್ರಸ್ತುತ ಕೆಲವರಿಗೆ ಅವಕಾಶ ನೀಡಲಾಗಿದೆ. ಮುಂದೆ ಉಳಿದವರಿಗೆ ಅವಕಾಶ ಕಲ್ಪಿಸಲಾಗುವುದು. ನಾವು ಎಲ್ಲರನ್ನೂ ಗೌರವಿಸಿ ಕೆಲಸ ಮಾಡಿದ್ದೇವೆ, ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಾಗದು: ಡಿಕೆಶಿ

    ನೂರಾರು ಕಾರ್ಯಕರ್ತರಿಗೆ ಅವಕಾಶ ನೀಡಲು ಹುದ್ದೆಗಳನ್ನು ಸೃಷ್ಟಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಸ್ಥಳೀಯ ಮಟ್ಟದಲ್ಲಿ ಆಸ್ಪತ್ರೆ ಸಮಿತಿ, ಬಗರ್‌ ಹುಕುಂ ಸಾಗುವಳಿ ಸಮಿತಿ, ಆಶ್ರಯ ಸಮಿತಿ, ಮುನಿಸಿಪಾಲಿಟಿ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಅವಕಾಶ ನೀಡಲಾಗುವುದು. ಈ ವಿಚಾರದಲ್ಲಿ ಮಾಧ್ಯಮಗಳು ಅನಗತ್ಯ ಗೊಂದಲ ಮೂಡಿಸುವ ಪ್ರಶ್ನೆ ಕೇಳಿದರೆ ನಾನು ಕೇಳುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

    ಕ್ರೀಡಾ ಪ್ರಾಧಿಕಾರಕ್ಕೆ ಸಚಿವರೇ ಅಧ್ಯಕ್ಷರಾಗಿರುತ್ತಾರೆ ಎಂದು ಬೈಲಾ ಮಾಡಲಾಗಿದೆ. ಈ ಹಿಂದೆ ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಬೈಲಾ ಮಾಡಲಾಗಿತ್ತು. ಈಗ ಮತ್ತೆ ಪರಿಷ್ಕರಿಸಲಿಸಲಾಗುವುದು ಎಂದಿದ್ದಾರೆ. ಶಾಸಕ ನರೇಂದ್ರ ಸ್ವಾಮಿಯವರ ನೇಮಕ ವಿಚಾರ ಪ್ರಕರಣ ನ್ಯಾಯಲಯದಲ್ಲಿದೆ. ಪ್ರಕರಣ ಇತ್ಯರ್ಥವಾದ ತಕ್ಷಣ ನರೇಂದ್ರ ಸ್ವಾಮಿಯವರಿಗೂ ಹುದ್ದೆ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಅಂತಿದ್ದಾರೆ, ಪುಣ್ಯಕ್ಕೆ ರಾಷ್ಟ್ರಪತಿ ಎಂದಿಲ್ಲ: ಪ್ರಹ್ಲಾದ್ ಜೋಶಿ

    ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಮರು ಆಯ್ಕೆ ಮಾಡಿ ಎಂಬ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಗ್ಗೆ ಮಾತನಾಡಿ, ಆ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರದಲ್ಲಿ ಗೆಲ್ಲುತ್ತದೆ. ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಲಿದ್ದಾರೆ. ಜಗದೀಶ್‌ ಶೆಟ್ಟರ್‌ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್‌ ನಿರ್ನಾಮ ಮಾಡಿ ಎಂದು ಕರೆಕೊಟ್ಟಿದ್ದರೆ. ಈ ಹಿಂದೆ ಕಾಂಗ್ರೆಸ್‌ ಗೆಲ್ಲಿಸಿ, ಬಿಜೆಪಿ ನಿರ್ನಾಮ ಮಾಡಿ ಎಂದು ಹೇಳಿದ್ದರು ಎಂದಿದ್ದಾರೆ.

  • ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

    ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

    – 36 ಶಾಸಕರಿಗೆ ನಿಗಮ ಮಂಡಳಿ ಅಧಿಕಾರ

    ಬೆಂಗಳೂರು: ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿರುವ ಮೊದಲ ಪಟ್ಟಿಯನ್ನು ಸರ್ಕಾರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 36 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ಸಿಕ್ಕಿದೆ.

    ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಹೀಗಿದೆ..
    1. ಹಂಪನ ಗೌಡ ಬಾದರ್ಲಿ – (ಸಿಂಧನೂರು)- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ (ಕೆಎಸ್‌ಎಸ್‌ಐಡಿಸಿ)
    2. ಎನ್.ಎ.ಹ್ಯಾರಿಸ್ – (ಶಾಂತಿನಗರ) – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)
    3. ಪಿ.ಎಂ.ನರೇಂದ್ರ ಸ್ವಾಮಿ (ಮಳವಳ್ಳಿ) – ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ
    4. ಕೆ.ಎಂ.ಶಿವಲಿಂಗೇಗೌಡ (ಅರಸೀಕೆರೆ) – ಕರ್ನಾಟಕ ಗೃಹ ಮಂಡಳಿ
    5. ಕಂಪ್ಲಿ ಗಣೇಶ್ (ಕಂಪ್ಲಿ) – ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
    6. ಪುಟ್ಟರಂಗಶೆಟ್ಟಿ – (ಚಾಮರಾಜನಗರ) ಮೈಸೂರು ಸೇಲ್ಸ್ ಅಂಡ್ ಇಂಟರ್ ನ್ಯಾಷನಲ್ (ಎಂಎಸ್‌ಐಎಲ್)
    7. ಎಸ್.ಎನ್.ನಾರಾಯಣಸ್ವಾಮಿ – (ಬಂಗಾರ ಪೇಟೆ)- ಕರ್ನಾಟಕ ರಾಜ್ಯ ನಗರ ಮೂಲ ಸೌಕರ್ಯ ಮತ್ತು ಹಣಕಾಸು ಸಂಸ್ಥೆ
    8. ರೂಪಕಲಾ – (ಕೆಜಿಎಫ್ ) – ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮ
    9. ರಮೇಶ್ ಬಂಡಿಸಿದ್ದೇಗೌಡ – (ಶ್ರೀರಂಗ ಪಟ್ಟಣ) – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಚೆಸ್ಕಾಂ)
    10. ಜಿ.ಟಿ.ಪಾಟೀಲ್ – (ಬೀಳಗಿ) – ಹಟ್ಟಿ ಚಿನ್ನದ ಗಣಿ ಅಭಿವೃದ್ಧಿ ನಿಗಮ
    11 ಎಸ್.ಎನ್.ಸುಬ್ಬಾರೆಡ್ಡಿ- (ಬಾಗೆಪಲ್ಲಿ) – ಬೀಜ ಅಭಿವೃದ್ಧಿ ನಿಗಮ
    12. ವಿನಯ್ ಕುಲಕರ್ಣಿ- (ಧಾರವಾಡ) – ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ
    13. ಕಾಶಪ್ಪ ವಿಜಯನಾಂದ ಶಿವಶಂಕರಪ್ಪ – ಹುನುಗುಂದ – ಕರ್ನಾಟಕ ಕ್ರೀಡಾ ಪ್ರಾಧಿಕಾರ
    14. ಜಿ.ಗೋವಿಂದಪ್ಪ- (ಹೊಸದುರ್ಗ)- ಕರ್ನಾಟಕ ಆಹಾರ ಅಭಿವೃದ್ಧಿ ನಿಗಮ
    15. ಬಸವರಾಜ್ ನೀಲಪ್ಪ ಶಿವಣ್ಣನವರ್ -(ಬ್ಯಾಡಗಿ)- ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
    16. ಪ್ರಸಾದ್ ಅಬ್ಬಯ್ಯ (ಹುಬ್ಬಳ್ಳಿ ಧಾರವಾಡ ಪೂರ್ವ) – ಕೊಳಗೇರಿ ಅಭಿವೃದ್ಧಿ ಮಂಡಳಿ
    17. ಟಿ.ರಘುಮೂರ್ತಿ (ಚಳ್ಳಕೆರೆ) – ರಾಜ್ಯ ಕೈಗಾರಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
    18. ಬಿ.ಶಿವಣ್ಣ (ಆನೇಕಲ್) – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)
    19. ಕನೀಜ್ ಫಾತಿಮಾ (ಕಲಬುರಗಿ ಉತ್ತರ) – ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿನಿಗಮ
    20. ಬಸನಗೌಡ ದದ್ದಲ್ (ರಾಯಚೂರು ಗ್ರಾಮೀಣ) – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
    21. ಎ.ಬಿ.ರಾಜೇಗೌಡ (ಶೃಂಗೇರಿ) – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ
    22. ಬಿ.ಕೆ.ಸಂಗಮೇಶ- (ಭದ್ರಾವತಿ)- ಲ್ಯಾಂಡ್ ಆರ್ಮಿ
    23. ಬೇಳೂರು ಗೋಪಾಲಕೃಷ್ಣ -(ಸಾಗರ)- ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
    24. ಅನಿಲ್ ಚಿಕ್ಕಮಾದು – ಹೆಗ್ಗಡ ದೇವನಕೋಟೆ – ಜಂಗಲ್ ಲಾಡ್ಜಸ್
    25. ಟಿಡಿ ರಾಜೇಗೌಡ – ಶೃಂಗೇರಿ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಗಮ ನಿಯಮಿತ
    26. ಅಪ್ಪಾಜಿ ಸಿಎಸ್ ನಾಡಗೌಡ – ಮುದ್ದೇಬಿಹಾಳ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
    27. ಹೆಚ್‌ಸಿ ಬಾಲಕೃಷ್ಣ – ಮಾಗಡಿ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮ
    28. ರಾಜಾ ವೆಂಕಟಪ್ಪ ನಾಯಕ್ – ಶೋರಾಪುರ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ
    29. ಕೌಜಲಗಿ ಮಹಾಂತೇಶ ಶಿವಾನಂದ – ಬೈಲಹೊಂಗಲ – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
    30. ಭರಮಗೌಡ ಅಲಗೌಡ ಕಾಗೆ – ಕಾಗವಾಡ – ಹುಬ್ಬಳ್ಳಿ ಸಾರಿಗೆ ನಿಗಮ (ವಾಯುವ್ಯ ಸಾರಿಗೆ)
    31. ಎಸ್‌ಆರ್ ಶ್ರೀನಿವಾಸ – ಗುಬ್ಬಿ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
    32. ಶ್ರೀನಿವಾಸ ಮಾನೆ – ಹಾನಗಲ್ – ಮಾನ್ಯ ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
    33. ಯಮುನಪ್ಪ ವೈ ಮೇಟಿ – ಬಾಗಲಕೋಟೆ – ಬಾಗಲಕೋಟೆ ನಗರಾಭಿವೃದ್ದಿ ಪ್ರಾಧಿಕಾರ
    34. ಸತೀಶ್‌ ಕೃಷ್ಣ ಸೈಲ್‌ – (ಕಾರವಾರ) – ಕರ್ನಾಟಕ ಮಾರ್ಕೆಟಿಂಗ್‌ ಕನ್ಸಲ್ಟೆಂಟ್‌ & ಏಜೆನ್ಸೀಸ್‌
    35. ಶರತ್‌ ಕುಮಾರ್‌ ಬಚ್ಚೇಗೌಡ – (ಹೊಸಕೋಟೆ) – ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
    36. ಜೆ.ಎನ್.ಗಣೇಶ್‌ – (ಕಂಪ್ಲಿ) – ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ

  • ನಿಗಮ ಮಂಡಳಿ ನೇಮಕಕ್ಕೆ ನಮ್ಮ ಅಭಿಪ್ರಾಯ ಪಡೆದಿಲ್ಲ – ಹೈಕಮಾಂಡ್ ವಿರುದ್ಧವೇ ಪರಮೇಶ್ವರ್ ಅಸಮಾಧಾನ

    ನಿಗಮ ಮಂಡಳಿ ನೇಮಕಕ್ಕೆ ನಮ್ಮ ಅಭಿಪ್ರಾಯ ಪಡೆದಿಲ್ಲ – ಹೈಕಮಾಂಡ್ ವಿರುದ್ಧವೇ ಪರಮೇಶ್ವರ್ ಅಸಮಾಧಾನ

    ಬೆಂಗಳೂರು: ನಮ್ಮ ಅಭಿಪ್ರಾಯ ತೆಗೆದುಕೊಂಡು ಮಾಡದಿರುವುದಕ್ಕೆ ನಿಗಮ ಮಂಡಳಿ (Corporation Board) ನೇಮಕ ಇಷ್ಟು ಗೊಂದಲ ಆಗ್ತಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwara), ಹೈಕಮಾಂಡ್ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ.

    ನಿಗಮ ಮಂಡಳಿ ನೇಮಕ ತಡ ಆಗ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಗಮ ಮಂಡಳಿ ನೇಮಕಾತಿಗೆ ನಮ್ಮ ಅಭಿಪ್ರಾಯವನ್ನೂ ಪಡೆಯಬೇಕು. ಆದ್ರೆ ನಮ್ಮನ್ನ ಯಾರೂ ಕೇಳಿಲ್ಲ. ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿರಬಹುದು. ಆದರೆ ನಮ್ಮ ಜತೆ ಮಾತನಾಡಿ ಪಟ್ಟಿ ಮಾಡಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮಗೆ ದಶರಥ ರಾಮ ಬೇಕು, ಮೋದಿ ರಾಮ  ಬೇಡ- ಜಿ. ಪರಮೇಶ್ವರ್ ಹೊಸ ವಿವಾದ

    ಜಿಲ್ಲಾವಾರು ಕೆಲಸ ಮಾಡಿರೋದು ನಮಗೆ ಗೊತ್ತಿರುತ್ತೆ. ಸಿಎಂ, ಪಕ್ಷದ ‌ಅಧ್ಯಕ್ಷರು ಇದ್ದಾರೆ ಅವರಿಗೆ ಜವಾಬ್ದಾರಿ ಕೊಡಬೇಕು. ಸಿಎಂ, ಅಧ್ಯಕ್ಷರು ಜಿಲ್ಲಾ ನಾಯಕರ ಜೊತೆ ಮಾತನಾಡಿ ಪಟ್ಟಿ ಮಾಡಬೇಕು. ಆದರೆ ಈಗ ಜನರಲ್ ಸೆಕ್ರೆಟರಿ ಅವರೇ ಮಾಡ್ತಿದ್ದಾರೆ. ಪಟ್ಟಿ ನಿಧಾನವಾಗಿದೆ. ನೋಡೋಣ ಏನ್ ಮಾಡ್ತಾರೆ ಅಂತ ಎಂದು ಹೇಳಿದ್ದಾರೆ.

    ಕಾರ್ಯಕರ್ತರು ಯಾರ‍್ಯಾರು ಕೆಲಸ ಮಾಡಿದ್ದಾರೆ ಅಂತ ನನಗೆ ಗೊತ್ತಿದೆ. ಹತ್ತಾರು ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ನಮ್ಮ ಅಭಿಪ್ರಾಯ ಪಡೆಯದೇ ಇರೋದಕ್ಕೆ ಹೀಗೆ ಆಗಿದೆ. ಕೆಲಸ ಮಾಡೋರಿಗೆ ಕೊಡದೇ ಹೋದ್ರೆ, ಕೆಲಸ ಮಾಡಿರೋರಿಗೆ ನೋವಾಗುತ್ತದೆ. ಅಸಮಾಧಾನ ಆಗುತ್ತದೆ, ಹೀಗಾಗಿ ಮುಖಂಡರು, ಜಿಲ್ಲಾ ಅಧ್ಯಕ್ಷರನ್ನ ಕೇಳಬೇಕಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್ 

  • ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ

    ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ

    ಬೆಂಗಳೂರು: ನಿಗಮ ಮಂಡಳಿಗಳಲ್ಲಿ (Corporation Board) ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಬೆಂಗಳೂರಿನ (Bengaluru) ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡಾ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿರುತ್ತಾರೆ. ಅದಕ್ಕಾಗಿ ಎಲ್ಲರ ಜೊತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ ವೇಳೆಗೆ ನಿಗಮ ಮಂಡಳಿ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು. ಇದನ್ನೂ ಓದಿ: ನೆಲದ ಕಾನೂನು ಎಲ್ಲರಿಗೂ ಒಂದೆ: ಪ್ರತಾಪ್ ಸಿಂಹ ಸಹೋದರನ ಬಂಧನಕ್ಕೆ ಈಶ್ವರ್ ಖಂಡ್ರೆ ಪ್ರತಿಕ್ರಿಯೆ

    ಜನಸಾಮಾನ್ಯರು ತಮ್ಮ ಕಷ್ಟಗಳನ್ನು ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು. ಅವರ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ. ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಸಂಸದರು ಭಾಗವಹಿಸಲು ಆಹ್ವಾನ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌: ಹೆಚ್‌ಡಿಕೆ ವ್ಯಂಗ್ಯ

    ಜನವರಿ 10ರ ಪಕ್ಷದ ಸಭೆ ಬಗ್ಗೆ ಕೇಳಿದಾಗ, ಲೋಕಸಭೆ ಚುನಾವಣೆ (Lok Sabha Election) ಸಿದ್ಧತೆ ವಿಚಾರವಾಗಿ ಜನವರಿ 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜೊತೆ ಸಭೆ ಮಾಡುತ್ತೇವೆ. ಜ.4ರಂದು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಭೆ ಇದೆ. ಚುನಾವಣೆ ಅಭ್ಯರ್ಥಿ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚೆ ಮಾಡಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

    ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆಗೆ ಬಿಜೆಪಿಯವರು (BJP) ಆಗ್ರಹಿಸಿರಬಹುದು. ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚುಕಮ್ಮಿ ಆಗಿರುತ್ತದೆ. ಅದೇನು ವಿಚಾರ ಎಂದು ನೋಡುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

    ಇನ್ನೂ ಅಲ್ಪಸಂಖ್ಯಾತ ಸಮುದಾಯಕ್ಕೆ 1,000 ಕೋಟಿ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಮ್ಮನ್ನು ರಾಮನಗರಕ್ಕೆ ಕರೆದುಕೊಂಡು ಹೋಗುತ್ತೇನೆ. ಅಲ್ಲಿ ಪ್ರವಾಹ ಪರಿಸ್ಥಿತಿ ಬಂದ ಪ್ರದೇಶದ ಸ್ಥಿತಿಗತಿ ಹೇಗಿದೆ ಎಂದು ಬಂದು ನೋಡಿ. ಅವರು ಹೇಗೆ ಬದುಕುತ್ತಿದ್ದಾರೆ ಎಂಬುದೇ ಆಶ್ಚರ್ಯ. ಜನರ ಬದುಕು ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ. 224 ಕ್ಷೇತ್ರಗಳಿಗೆ ಈ ಅನುದಾನ ಹಂಚಿದರೆ ಎಷ್ಟು ಸಿಗುತ್ತದೆ. ಹಳ್ಳಿಗಳಲ್ಲಿ ನರೇಗಾ ಯೋಜನೆ ಅವಕಾಶವಿದೆ. ಆದರೆ ಈ ಸಮುದಾಯ ಹೆಚ್ಚಾಗಿ ನಗರ ಪ್ರದೇಶದಲ್ಲಿ ವಾಸವಿದ್ದಾರೆ. ಹೀಗಾಗಿ ಅವರಿಗೆ ಹೆಚ್ಚು ಅವಕಾಶ ಇಲ್ಲ. ಅವರ ಪ್ರದೇಶ ಸ್ವಚ್ಛ ಮಾಡಿ, ಬದುಕು ಬದಲಿಸಬೇಕು ಎಂದು ಸಿಎಂ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರ ಓಲೈಕೆ ರಾಜಕಾರಣ ಎಂಬ ಟೀಕೆ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ಟೀಕೆ ಮಾಡುತ್ತಿರಲಿ. ನಾವು ಬಡವರ ಪರ ಕೆಲಸ ಮಾಡುತ್ತಿರುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ

  • ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ: ಡಿಕೆಶಿ

    ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ: ಡಿಕೆಶಿ

    ಬೆಂಗಳೂರು: ನಿಗಮ ಮಂಡಳಿ (Corporation Board) ನೇಮಕ ಪಟ್ಟಿ ಅಂತಿಮಗೊಳಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಇಂದು (ಸೋಮವಾರ) ದೆಹಲಿಗೆ ತೆರಳಿದ್ದು, ವರಿಷ್ಠರು ಹಾಗೂ ಹೈಕಮಾಂಡ್ ಜೊತೆ ಮಂಗಳವಾರ ಚರ್ಚೆ ನಡೆಸಲಿದ್ದಾರೆ.

    ದೆಹಲಿಗೆ (New Delhi) ತೆರಳುವ ಮುನ್ನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಡಿಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಜಾತಿಗಣತಿಗೆ ನಮ್ಮ ವಿರೋಧ ಇಲ್ಲ.. ಕೆಲವು ಆತಂಕಗಳಿವೆ: ಎಂ.ಬಿ.ಪಾಟೀಲ್

    ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ. ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿದರೆ, ಅವರು ಹೋಗಿ ಭೇಟಿ ಮಾಡುತ್ತಾರೆ ಎಂದರು. ಇದನ್ನೂ ಓದಿ: ಕೋವಿಡ್ ಉಲ್ಬಣವಾಗುತ್ತಿದೆ ಎಂದು ಆತಂಕಗೊಳ್ಳುವುದು ಬೇಡ: ಡಿ.ಕೆ ಶಿವಕುಮಾರ್

  • ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ

    ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ

    ಬೆಂಗಳೂರು: ನಿಗಮ-ಮಂಡಳಿಯಲ್ಲಿ (Corporation Board) ಮೊದಲ ಬಾರಿ ಶಾಸಕರಾದವರು ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದವರಿಗೆ ಸ್ಥಾನ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಿಎಂ, ಸುರ್ಜೇವಾಲ ಹಾಗೂ ನಾನು ಎಲ್ಲರೂ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲ (Randeep Surjewala) ಹೈಕಮಾಂಡ್ ಬಳಿ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಇವತ್ತು ಚುನಾವಣೆ ಪ್ರಚಾರ ಮುಗಿಯುತ್ತದೆ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಆಗುತ್ತದೆ ಎಂದರು. ಇದನ್ನೂ ಓದಿ: ಕೃಷ್ಣ ಭೈರೇಗೌಡರ ಆರೋಪ ತನಿಖೆಯಾಗುವ ತನಕ ಸದನಕ್ಕೆ ಹೋಗಲ್ಲ: ಬಿ.ಆರ್ ಪಾಟೀಲ್

    ಮೊದಲ ಬಾರಿ ಶಾಸಕರಾದವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ಇಲ್ಲ. ಅದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತೆಗೆದುಕೊಂಡು ಸ್ಪರ್ಧೆ ಮಾಡಿದವರಿಗೂ ನಿಗಮ-ಮಂಡಳಿ ಸ್ಥಾನ ಇಲ್ಲ ಎಂದರು. ಮೊದಲ ಹಂತದಲ್ಲಿ ಶಾಸಕರಿಗೆ ಕೊಡಲಾಗುತ್ತದೆ. ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಸ್ಥಾನ ಕೊಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಆರ್ ಪಾಟೀಲ್ ಎಮೋಷನಲ್ ಆಗಿ ಪತ್ರ ಬರೆದಿರಬಹುದು: ಎಂ.ಬಿ ಪಾಟೀಲ್

  • ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ – ಸಿಎಂ ಬೊಮ್ಮಾಯಿ ಅಂಕಿತ

    ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ – ಸಿಎಂ ಬೊಮ್ಮಾಯಿ ಅಂಕಿತ

    ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ.

    2019ರಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಈ ಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ. ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ರಾಯಚೂರಿನಿಂದ ಕಾಣೆಯಾಗಿದ್ದ PUC ವಿದ್ಯಾರ್ಥಿನಿಯರು ಪತ್ತೆ – ಹುಬ್ಬಳ್ಳಿಗೆ ಹೋಗಿದ್ದೇಕೆ ಎಂಬುದೇ ಸಸ್ಪೆನ್ಸ್

    ಯಾರಿಗೆ – ಯಾವ ನಿಗಮ ಮಂಡಳಿ?

    • ಧರ್ಮಣ್ಣ ದೊಡ್ಡಮನಿ – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ
    • ಗುತ್ತಿಗೆನೂರು ವಿರೂಪಾಕ್ಷಗೌಡ-ಕರ್ನಾಟಕ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ
    • ಕೌಟಿಲ್ಯ ರಘು- ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ (ಮೈಲಾಕ್) ನಿಗಮದ ಅಧ್ಯಕ್ಷ
    • ಮಲ್ಲಿಕಾರ್ಜುನ್ ಬಸವಣ್ಣಪ್ಪ ತುಬಾಕಿ- ಮದ್ಯಪಾನ ಸಂಯಮ ಮಂಡಳಿ
    • ಕೆಪಿ ವೆಂಕಟೇಶ್ – ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
    • ದೇವೇಂದ್ರನಾಥ ಕೆ ನಾದ್- ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮ
    • ಚಂಗಾವರ ಮಾರಣ್ಣ – ಕಾಡುಗೊಲ್ಲ ಅಭಿವೃದ್ಧಿ ನಿಗಮ
    • ಎಂ.ಕೆ.ಶ್ರೀನಿವಾಸ್ – ವಸ್ತು ಪ್ರದರ್ಶನ ಪ್ರಾಧಿಕಾರ
    • ಎಂ.ಕೆ.ವಾಸುದೇವ್- ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ
    • ಎನ್‌ಎಂ ರವಿನಾರಾಯಣರೆಡ್ಡಿ – ದ್ರಾಕ್ಷಿ ಮತ್ತು ವೈನ್ ಬೋರ್ಡ್
    • ಚಂದ್ರಶೇಖರ ಕವಟಗಿ – ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ
    • ಬಿ.ಸಿ.ನಾರಾಯಣಸ್ವಾಮಿ – ರೇಷ್ಮೆ ಮಾರಾಟ ಮಂಡಳಿ
    • ಗೌತಮ್ ಗೌಡ – ರೇಷ್ಮೆ ಉದ್ಯಮಗಳ ನಿಗಮ
    • ಮಣಿರಾಜ ಶೆಟ್ಟಿ – ಗೇರು ಅಭಿವೃದ್ಧಿ ನಿಗಮ
    • ಗೋವಿಂದ ಜಟ್ಟಪ್ಪ ನಾಯ್ಕ – ಪಶ್ಚಿಮ ಘಟ್ಟಗಳ ಸಂರಕ್ಷಣ ಕಾರ್ಯಪಡೆ
    • ಎಂ ಶಿವಕುಮಾರ್ – ಮೃಗಾಲಯ ಪ್ರಾಧಿಕಾರ
    • ಎನ್‌.ಎಂ.ರವಿ ಕಾಳಪ್ಪ – ಜೀವ ವೈವಿಧ್ಯ ಮಂಡಳಿ
    • ಎಂ.ವಿ.ತೀರ್ಥರಾಮ – ರೀತ್ಯಾ ಆಡಳಿತ ಮಂಡಳಿ
    • ವೆಂಕಟಪ್ಪ – ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
    • ಮಲ್ಲಪ್ಪ – ಕರಕುಶಲ ಅಭಿವೃದ್ಧಿ ನಿಗಮ

    Live Tv
    [brid partner=56869869 player=32851 video=960834 autoplay=true]

  • ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ವಾಪಸ್

    ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ವಾಪಸ್

    ಬೆಂಗಳೂರು: ರಾಜ್ಯ ಸರ್ಕಾರ 46 ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ ಮಂಡಳಿ ಬಿಟ್ಟು ಉಳಿದ 46 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆದಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಈ ಹಿಂದಿನ ನೇಮಕಾತಿಯಲ್ಲಿದ್ದ ಸದಸ್ಯರೇ ಮುಂದುವರಿಯಲಿದ್ದಾರೆ. ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಎಲ್.ಆರ್.ಮಹದೇವಸ್ವಾಮಿ, ರವಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಗೆ ರವಿ ಕುಶಾಲಪ್ಪ, ಕರ್ನಾಟಕ ಗೇರು ಅಭಿವೃದ್ಧಿ ನಿಗಮಕ್ಕೆ ಮಣಿರಾಜ ಶೆಟ್ಟಿ, ಕರ್ನಾಟಕ ಜೀವ ವೈವಿದ್ಯ ಮಂಡಳಿಗೆ ಅನಂತ ಹೆಗಡೆ ಆಶೀಸರ್ ಮೊದಲಾದವರು ಅಧ್ಯಕ್ಷರಾಗಿದ್ದಾರೆ.

    ಉಪಾಧ್ಯಕ್ಷರಾಗಿ ಕರ್ನಾಟಕದಲ್ಲಿ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಕೆ.ರೇವಣ್ಣಪ್ಪ ಕೋಳಗಿ, ಕರ್ನಾಟಕ ಕ್ರೀಡಾ ಪ್ರಾಧಿಕಾರಕ್ಕೆ ಕೆ.ಪಿ.ಪುರುಷೋತ್ತಮ್, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮಕ್ಕೆ ನೀಲಕಂಠ ಬಿ.ಮಾಸ್ತರಮರಡಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ ಎಸ್.ದತ್ತಾತ್ರಿ ಬಿನ್ ಸೂರ್ಯ ನಾರಾಯಣರಾವ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಎಸ್.ಎನ್.ಈಶ್ವರಪ್ಪ ಹಾಗೂ ಬೆಂಗಳೂರು ಸಾರಿಗೆ ಸಂಸ್ಥೆಗೆ ಎಂ.ಆರ್.ವೆಂಕಟೇಶ್ ಅವರೇ ನಾಮ ನಿರ್ದೇಶಿತರಾಗಿ ಮುಂದುವರಿಯಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ

    ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ

    ಬೆಂಗಳೂರು: ವಿವಿಧ ಮಂಡಳಿಗಳ ಅಭಿವೃದ್ಧಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಮತ್ತು ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಸಿ 500 ಕೋಟಿ ಮೀಸಲಿರಿದ್ದಾರೆ.

    ಬಡ, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಅಭ್ಯುದಯಕ್ಕೆ ಸರ್ಕಾರದ ಒತ್ತು. ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರುಸು ಹಿಂದುಳಿದ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಉಪ್ಪಾರ, ಆರ್ಯವೈಶ್ಯ, ಮರಾಠಾ, ಅಂಬಿಗರ ಚೌಡಯ್ಯ, ಕಾಡುಗೊಲ್ಲರ, ಸವಿತಾ ಅಭಿವೃದ್ಧಿ ನಿಗಮಗಳಿಗೆ ಪ್ರಸಕ್ತ ಸಾಲಿನಲ್ಲಿ 500 ಕೋಟಿ ಮೀಸಲು.

    ವೀರಶೈವ ಲಿಂಗಾಯತ ಸಮಾಜದ ಸಮಗ್ರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.ಗಳ ಅನುದಾನ. ಈಗಾಗಲೇ 100 ಕೋಟಿ ಬಿಡುಗಡೆಗೊಳಿಸಲಾಗಿದೆ. ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪನೆ. ನಿಗಮ ಚಟುವಟಿಕೆಗಳಿಗೆ 500 ಕೋಟಿ ವೆಚ್ಚ ಮಾಡಲು ಯೋಜಿಸಲಾಗಿದೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ ಮೀಸಲು

    ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಚರ್ಚ್ ಗಳ ದುರಸ್ತಿ, ನವೀಕರಣ, ಸಮುದಾಯದ ಭವನ ಕಟ್ಟಡ ನಿರ್ಮಾಣ, ಆನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ನೆರವು ಮುಂತಾದ ಕಾರ್ಯಕ್ರಮಳಿಗೆ 200 ಕೋಟಿ ಮೀಸಲು

    2020-21ನೇ ಸಾಲಿನಲ್ಲಿ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮಗಳೊಂದಿಗೆ ಆಂಗ್ಲ ಮಾಧ್ಯಮ ಆರಂಭಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು.

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಮಾದರಿ ಶಾಲೆ/ಕಾಲೇಜುಗಳಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಅನುಷ್ಠಾನಗೊಳಿಸಿ, ಸದರಿ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಎಲ್ಲ ವಿಷಯಗಳಲ್ಲಿ ಬೋಧನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು.

    ಶ್ರವಣಬೆಳಗೊಳ ಸೇರಿದಂತೆ ಮತ್ತಿತ್ತರ ಜೈನ ಪುಣ್ಯ ಕ್ಷೇತ್ರಗಳಲ್ಲಿ ವಸತಿ ಗೃಹ, ಪಾದಚಾರಿ ರಸ್ತೆಗಳು ಮತ್ತು ಇತರೆ ಮೂಲಭೂತ ಸೌಕರ್ಯಗಳಿಗಾಗಿ 50 ಕೋಟಿ ಮೀಸಲು. ಡಾ.ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ್ದ ಹಾಸನದ ಎ.ಕೆ.ಬೋರ್ಡಿಂಗ್ ಹೋಮ್‍ಗೆ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ನೀಡಲಾಗಿದೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಕೊಲ್ಹಾಪುರಿ ಪಾದರಕ್ಷೆಗಳ ಕ್ಲಸ್ಟರ್ ಮತ್ತು ಚಿತ್ರದುರ್ಗ ನಗರದಲ್ಲಿ ಕೇಂದ್ರ ಪಾದರಕ್ಷಾ ತರಬೇತಿ ಸಂಸ್ಥೆಯ ವಿಸ್ತರಣಾ ಕೇಂದ್ರ ಪ್ರಾರಂಗಣ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಗಳನ್ನು ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕಾರಣ ಮಾಡಲಾಗುವುದು.