Tag: corporator

  • ಆತ ನೇರವಾಗಿ ಮಂಚಕ್ಕೆ ಕರೆದ: ಭಯಾನಕ ಸತ್ಯ ಬಿಚ್ಚಿಟ್ಟ ನಟಿ ತೇಜಸ್ವಿನಿ

    ಆತ ನೇರವಾಗಿ ಮಂಚಕ್ಕೆ ಕರೆದ: ಭಯಾನಕ ಸತ್ಯ ಬಿಚ್ಚಿಟ್ಟ ನಟಿ ತೇಜಸ್ವಿನಿ

    ಮೀಟೂ ಪ್ರಕರಣಗಳು ಒಂದೊಂದೆ ಬೆಳಕಿಗೆ ಬರುತ್ತಿವೆ. ಸಿನಿಮಾ ರಂಗದ ಕರಾಳಮುಖವನ್ನು ಬಿಚ್ಚಿಡುತ್ತಾ, ಒಬ್ಬೊಬ್ಬರೇ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಹೇಳುತ್ತಿದ್ದಾರೆ. ತಮಗೆ ತೊಂದರೆ ಕೊಟ್ಟವರ ಹೆಸರನ್ನು ನೇರವಾಗಿ ಹೇಳದೇ ತಮ್ಮ ಬದುಕಿನಲ್ಲಿ ನಡೆದ ಆ ಕರಾಳ ಸತ್ಯವನ್ನು ಬಯಲು ಮಾಡುವ ಮೂಲಕ ಚಿತ್ರರಂಗದ ಮತ್ತೊಂದು ಮುಖವನ್ನು ಅನಾರವಣಗೊಳಿಸುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮರಾಠಿ ಸಿನಿಮಾ ರಂಗದ ನಟಿಯು ಕೂಡ ಸೇರಿಕೊಂಡಿದ್ದಾರೆ.

    ಇದು ಚಿತ್ರರಂಗದಲ್ಲಿ ನಡೆದಿರುವ ಘಟನೆ ಅಲ್ಲದೇ ಇದ್ದರೂ, ಸಿನಿಮಾ ರಂಗದಲ್ಲಿ ಇರುವವರಿಗೆ ಆದ ಕಹಿ ಘಟನೆ ಆಗಿದ್ದರಿಂದ ಸಿನಿಮಾ ರಂಗ ಇದನ್ನು ಗಂಭೀರವಾಗಿಯೇ ತಗೆದುಕೊಂಡಿದೆ. ಈ ಘಟನೆ ನಡೆದದ್ದು ಮರಾಠಿ ಸಿನಿಮಾ ರಂಗದಲ್ಲಾಗಿದ್ದು, ತಮ್ಮ ಜೀವನದಲ್ಲಿ ನಡೆದ ಘಟನೆಯನ್ನು ನಟಿ  ತೇಜಸ್ವಿನಿ ಪಂಡಿತ್ ಹತ್ತು ವರ್ಷಗಳ ನಂತರ ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಮನಬಿಚ್ಚಿ ಮಾತನಾಡಿದ್ದಾರೆ.

    ಆಗ ತಾನೆ ಸಿನಿಮಾ ರಂಗಕ್ಕೆ ಬಂದ ದಿನಗಳವು. ಹಾಗಾಗಿ ನನ್ನ ಬಳಿ ತುಂಬಾ ಹಣ ಇರಲಿಲ್ಲ. ಒಂದು ರೀತಿಯಲ್ಲಿ ಕಡಿಮೆ ಹಣದಲ್ಲೇ ನಾನು ಬದುಕು ನಡೆಸುತ್ತಿದ್ದೆ. ಹಾಗಾಗಿ ನನ್ನ ಬಳಿ ಹಣ ಇಲ್ಲ ಅನ್ನು ಕಾರಣಕ್ಕಾಗಿ ಅಂಥದ್ದೊಂದು ಘಟನೆಗೆ ಸಾಕ್ಷಿಯಾಗಬೇಕಾಯಿತು. ಪುಣೆಯ ಅಪಾರ್ಟ್ಮೆಂಟ್ ನಲ್ಲಿ ನಾನು ವಾಸವಿದ್ದೆ. ಆ ಅಪಾರ್ಟ್ಮೆಂಟ್ ಕಾರ್ಪೋರೇಟ್ ಒಬ್ಬರಿಗೆ ಸೇರಿದ್ದಾಗಿತ್ತು. ಬಾಡಿಗೆ ಪಾವತಿಸಲು ಅವರ ಬಳಿ ಹೋದಾಗ, ನೇರವಾಗಿಯೇ ಅವನು ಮಂಚಕ್ಕೆ ಕರೆದ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ತೇಜಸ್ವೀನಿಯನ್ನು ಅವನು ನೇರವಾಗಿ ಮಂಚಕ್ಕೆ ಬರುತ್ತೀಯಾ ಎಂದು ಕೇಳಿದಾಗ ಶಾಕ್ ಆಗಿದ್ದರಂತೆ. ಕೋಪದಿಂದಲೇ ಅವನಿಗೆ ನೀರಿನ ಲೋಟವನ್ನು ಮುಖಕ್ಕೆ ಎಸೆದು ಬಂದಿದೆ ಎಂದು ಹೇಳಿಕೊಂಡಿದ್ದಾರೆ. ‘ಆಗ ಬೈ ಅರಾಚೆ’ ಸಿನಿಮಾದ ಮೂಲಕ ಮರಾಠಿ ಚಿತ್ರರಂಗಕ್ಕೆ ಕಾಲಿಟ್ಟ ತೇಜಸ್ವೀನಿ ಆನಂತರ ಹಲವು ಚಿತ್ರಗಳನ್ನು ಮಾಡಿದ್ದಾರೆ. ಈ ಘಟನೆಯಿಂದಾಗಿ ಅವರು ಎಚ್ಚರಿಕೆಯಿಂದ ಬದುಕಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುವತಿ ವಿಚಾರಕ್ಕೆ ಗಲಾಟೆ – ರೌಡಿ ಕಾರ್ಪೊರೇಟರ್‌ನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಯುವತಿ ವಿಚಾರಕ್ಕೆ ಗಲಾಟೆ – ರೌಡಿ ಕಾರ್ಪೊರೇಟರ್‌ನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಹುಬ್ಬಳ್ಳಿ: ನಗರದಲ್ಲಿ (Hubballi) ರೌಡಿ ಕಾರ್ಪೊರೇಟರ್ ಮತ್ತೆ ಬಾಲಬಿಚ್ಚಿದ್ದು, ರಾತ್ರಿ ವೇಳೆ ಪಬ್‍ನಲ್ಲಿ ಗಲಾಟೆ ಮಾಡಿ ಅಂದರ್ ಆಗಿದ್ದಾನೆ.

    ರಾತ್ರಿ ವೇಳೆ ಪಬ್‍ವೊಂದರಲ್ಲಿ ಇಬ್ಬರ ಮೇಲೆ ಕಾರ್ಪೊರೇಟರ್ ಚೇತನ್ ಆ್ಯಂಡ್ ಗ್ಯಾಂಗ್ ಬಾಟಲಿಯಿಂದ ಹಲ್ಲೆ ನಡೆಸಿದ ಆರೋಪದಡಿ ಪಾಲಿಕೆ ಸದಸ್ಯ ಮತ್ತು ಆತನ ಸ್ನೇಹಿತರನ್ನು ಗೋಕುಲ್ ಠಾಣೆಯ (Gokul Police Staton)) ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬಾದಾಮಿಯಲ್ಲಿ ಸ್ಪರ್ಧಿಸದಿದ್ರೆ ಹೆಣ್ಮಕ್ಕಳು ಧರಣಿಗೆ ಕೂರ್ತಿವಿ ಅಂದಿದ್ದಾರೆ: ಸಿದ್ದರಾಮಯ್ಯ

    ಯುವತಿ ವಿಚಾರಕ್ಕೆ ರಾಹುಲ್ ಮತ್ತು ಚೇತನ್ ನಡುವೆ ಹಿರೇಕೆರೂರು ಗೋಕುಲ್ ರಸ್ತೆಯ ಐಸ್ ಕ್ಯೂಬ್ ಪಬ್‍ನಲ್ಲಿ ಗಲಾಟೆಯಾಗಿದೆ. ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡು ಪಾಲಿಕೆ ಸದಸ್ಯ ಚೇತನ್, ರಾಹುಲ್ ತಲೆಗೆ ಮದ್ಯದ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಗೋಕುಲ್ ರೋಡ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕಾರ್ಪೊರೇಟ್ ಚೇತನ್ ಮತ್ತು ಆತನ ಸ್ನೇಹಿತರನ್ನು ಬಂಧಿಸಿದ್ದಾರೆ. ಇದನ್ನೂ ಓದಿ : ದೆಹಲಿ ರೇಪ್ ಕೇಸ್ – ಮರಣದಂಡನೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿದ ಸುಪ್ರೀಂ

    Live Tv
    [brid partner=56869869 player=32851 video=960834 autoplay=true]

  • ಸಚಿವ ಆನಂದ್ ಸಿಂಗ್, ಕಾರ್ಪೊರೇಟರ್ ನಡುವೆ ರಾಜೀನಾಮೆ ಸಮರ

    ಸಚಿವ ಆನಂದ್ ಸಿಂಗ್, ಕಾರ್ಪೊರೇಟರ್ ನಡುವೆ ರಾಜೀನಾಮೆ ಸಮರ

    ಬಳ್ಳಾರಿ: ಸಚಿವ ಆನಂದ್ ಸಿಂಗ್ ದೌರ್ಜನ್ಯ ಆರೋಪ ಪ್ರಕರಣ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿದಿನ ಹೊಸಹೊಸ ರೂಪ ಪಡೆದುಕೊಳ್ತಿದೆ. ಇದೀಗ ಮಿನಿಸ್ಟರ್ ವರ್ಸಸ್ ಕಾರ್ಪೋರೇಟರ್ ಹಂತಕ್ಕೆ ತಲುಪಿದ್ದು, ಇಬ್ಬರೂ ಪರಸ್ಪರ ರಾಜೀನಾಮೆ ಕೊಡೊ ಚಾಲೆಂಜ್ ಹಾಕಿಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಆನಂದ್ ಸಿಂಗ್ ಪ್ರೆಸ್‍ಮೀಟ್ ಮಾಡಿ ತನ್ನ ಮೇಲಿರುವ ಭೂ ಕಬಳಿಕೆ ಆರೋಪ ಸುಳ್ಳು ಅಂತ ಹೇಳಿದ್ರು. ಇದಕ್ಕೆ ಪ್ರತಿಯಾಗಿ ಸುದ್ದಿಗೋಷ್ಟಿ ನಡೆಸಿರೋ ಹೊಸಪೇಟೆ ನಗರಸಭೆ 6ನೇ ವಾರ್ಡ್‍ನ ಕಾರ್ಪೋರೇಟರ್ ಖದೀರ್, ಸಚಿವರ ಮನೆಯ ನಿರ್ಮಾಣವೇ ಅಕ್ರಮ ಅಂತ ದಾಖಲೆ ಬಿಡುಗಡೆ ಮಾಡಿದ್ದಾರೆ. ಆನಂದ್ ಸಿಂಗ್ ಅವರೇ ನಿಮ್ಮ ಅಕ್ರಮ ಸಾಬೀತು ಮಾಡಿದ್ದೀನಲ್ಲ ಈಗ ರಾಜೀನಾಮೆ ಕೊಡಿ. ನೀವು ಅಕ್ರಮ ಮಾಡಿಲ್ಲ ಅಂತ ಸಾಬೀತು ಮಾಡಿದ್ರೆ ನಾನು ರಾಜೀನಾಮೆ ಕೊಡ್ತೀನಿ ಅಂತ ಸವಾಲೆಸೆದಿದ್ದಾರೆ.

    ಸಚಿವರ ವಿರುದ್ಧದ ಆರೋಪವೇನು..?: ಹೊಸಕೋಟೆ ಬೈಪಾಸ್ ರಸ್ತೆ ಬಳಿ ಸರ್ಕಾರಿ ಜಮೀನು, ಸರ್ವೇ ನಂ.66 ಬಿ 2ರಲ್ಲಿ ಚರಂಡಿ ಜಾಗ 5 ಸೆಂಟ್ ಹಾಗೂ ಮೆ.ಸುರಕ್ಷಾ ಎಂಟರ್‍ಪ್ರೈಸಸ್‍ನವರಿಂದಲೂ 70 ಸೆಂಟ್‍ವರೆಗೆ ಒತ್ತುವರಿ ಮಾಡಿಕೊಳ್ಳಲಾಗಿದೆ. ಹಳ್ಳದ ನೀರು ಸರಾಗವಾಗಿ ಹೋಗುವ ವ್ಯವಸ್ಥೆ ಹಾಳಾಗಿದೆ. ಅಂದಾಜು 20 ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವ ಬಗ್ಗೆ ಸಚಿವರ ವಿರುದ್ಧ ಆರೋಪ ಮಾಡಲಾಗ್ತಿದೆ. ಇದನ್ನೂ ಓದಿ: ಸಚಿವ ಆನಂದ್ ಸಿಂಗ್ ವಿರುದ್ಧ ಪ್ರಕರಣ ದಾಖಲು!

    ಈ ಸಂಬಂಧ ಕಳೆದೆರಡು ದಿನಗಳ ಹಿಂದೆ ಸುದ್ದಿಗೋಷ್ಟಿ ನಡೆಸಿದ್ದ ಸಚಿವ ಆನಂದ್ ಸಿಂಗ್, ಜಾಗದ ಸರ್ವೇ ನಡೆಸಿ ಸಂಬಂಧಿಸಿದ ಇಲಾಖೆಗಳಿಂದ ಲೋಕಾಯುಕ್ತರಿಗೆ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿ ಯಾವುದೇ ಜಾಗ ಒತ್ತುವರಿಯಾಗಿಲ್ಲ ಅಂತಾ ಲೋಕಾಯುಕ್ತರೇ ಆದೇಶ ಮಾಡಿದ್ದಾರೆ. ಹೊಸಪೇಟೆಯಲ್ಲಿ ನನ್ನ ಮೇಲೆ ಭೂಗಳ್ಳರಿಂದ ಹುನ್ನಾರ ನಡೀತಿದ್ದು, ನನ್ನ ಮೇಲೆ ಎಸ್‍ಸಿ/ ಎಸ್‍ಟಿ ದೌರ್ಜನ್ಯ ಕೇಸ್ ದಾಖಲಾಗಿದೆ ಎಂದಿದ್ರು.

    ಏನೇ ಆಗಲಿ ವಿಜಯನಗರ ಕ್ಷೇತ್ರದಲ್ಲೀಗ ಈ ಭೂಕಬಳಿಕೆ ಪ್ರಕರಣ ದಿನೇ ದಿನೇ ಹೊಸ ರೂಪ ಪಡೆದುಕೊಳ್ತಿದೆ. ಸಚಿವ ಹಾಗೂ ಕಾರ್ಪೋರೇಟರ್‍ರ ಈ ಪರಸ್ಪರ ರಾಜೀನಾಮೆ ಚಾಲೆಂಜ್ ಎಲ್ಲಿಗೋಗಿ ನಿಲ್ಲುತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಅಯೂಬ್‌ಖಾನ್ ಹತ್ಯೆ – ಎಫ್‌ಬಿಯಲ್ಲಿ ಬಿಲ್ಡಪ್ ಕೊಟ್ಟಿದ್ದ ಆರೋಪಿ ಮತೀನ್ ಖಾನ್ ಬಂಧನ

    ಅಯೂಬ್‌ಖಾನ್ ಹತ್ಯೆ – ಎಫ್‌ಬಿಯಲ್ಲಿ ಬಿಲ್ಡಪ್ ಕೊಟ್ಟಿದ್ದ ಆರೋಪಿ ಮತೀನ್ ಖಾನ್ ಬಂಧನ

    ಬೆಂಗಳೂರು: ಚಾಮರಾಜಪೇಟೆ ಮಾಜಿ ಕಾರ್ಪೊರೇಟರ್ ಪತಿ ಅಯೂಬ್ ಖಾನ್ ಹತ್ಯೆ ಆರೋಪಿ ಮತೀನ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

    ಇದೇ ತಿಂಗಳ ಜುಲೈ 13ರಂದು ಅಯೂಬ್ ಖಾನ್ ಹತ್ಯೆ ಮಾಡಲಾಗಿತ್ತು. 4 ದಿನಗಳಿಂದ ಮಂಡ್ಯ, ರಾಮನಗರ, ಕೋಲಾರ ಸೇರಿದಂತೆ ಹಲವು ಕಡೆಗಳಲ್ಲಿ ಸುತ್ತಾಡಿಕೊಂಡು ಆರೋಪಿ ಮತೀನ್ ಖಾನ್ ತಲೆಮರೆಸಿಕೊಂಡಿದ್ದ. ನಂತರ ನಾಜೀಮಾ ಖಾನ್ ಹಂತಕರ ತಲೆಗೆ 10 ಕೋಟಿ ಆಫರ್ ನೀಡಿರುವ ಬಗ್ಗೆ ವಿಡಿಯೋವೊಂದನ್ನು ಹರಿಬಿಟ್ಟಿದ್ದ. ಇದೀಗ ಕೆಂಗೇರಿ ಬಳಿ ಪೊಲೀಸರು ಮತೀನ್ ಖಾನ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಂತ್, ಪಾಂಡ್ಯ ಪರಾಕ್ರಮ ಭಾರತಕ್ಕೆ ಏಕದಿನ ಸರಣಿ – ಇಂಗ್ಲೆಂಡ್‍ಗೆ ತವರಿನಲ್ಲಿ ಮುಖಭಂಗ

    ಏನಿದು ಘಟನೆ?
    ಜುಲೈ 13 ರಂದು ಬೆಂಗಳೂರಿನ ಚಾಮರಾಜಪೇಟೆ ಬಳಿಯ ಟಿಪ್ಪು ನಗರದ ಮಾಜಿ ಕಾರ್ಪೋರೇಟರ್ ನಾಜಿಮಾ ಖಾನ್ ಪತಿ ಅಯೂಬ್ ಖಾನ್‌ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಖುದ್ದು ಅಯೂಬ್ ಖಾನ್ ಅಣ್ಣನ ಮಗ ಮತೀನ್ ಖಾನ್ ಚಾಕು ಇರಿದಿದ್ದ. ನಡುರಸ್ತೆಯಲ್ಲೇ ಕುಸಿದುಬಿದ್ದಿದ್ದ ಆಯೂಬ್ ಖಾನ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರೂ ಬದುಕುಳಿಯಲಿಲ್ಲ. ಇದನ್ನೂ ಓದಿ: ಪರಿಹಾರದ ಹಣ ಪಡೆಯಲು ಜನರು ಉದ್ದೇಶಪೂರ್ವಕವಾಗಿ ಮನೆ ಬೀಳಿಸುತ್ತಿದ್ದಾರೆ – ತಹಶೀಲ್ದಾರ್ ಪತ್ರ ತಂದ ಅನುಮಾನ

    ನಂತರ ಪತಿಯ ಹತ್ಯೆ ಖಂಡಿಸಿದ ಪತ್ನಿ ನಾಜೀಮಾ ಖಾನ್ ತನ್ನ ಪತಿ ಹಂತಕರ ತಲೆ ಕಡಿದವರಿಗೆ 10 ಕೋಟಿ ಕೊಡುವುದಾಗಿ ಘೋಷಿಸಿದ್ದರು. ಇದಕ್ಕೆ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಒಂದಷ್ಟು ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದ ಮತೀನ್ ಖಾನ್ `ಹತ್ತಾರು ವರ್ಷಗಳಿಂದ ಮಸೀದಿಯನ್ನು ಅಭಿವೃದ್ದಿ ಮಾಡಿದ್ದೆ, ಅಧ್ಯಕ್ಷ ಸ್ಥಾನ ಕೊಡ್ತಿನಿ ಅಂದಿದ್ದ ಚಿಕ್ಕಪ್ಪ ಅಯೂಬ್ ಖಾನ್ ಕೊನೆ ಕ್ಷಣದಲ್ಲಿ ತನ್ನ ಮಗನನ್ನು ಅಧ್ಯಕ್ಷನಾಗಿ ಮಾಡಿದ್ದ. ಆಗಲೂ ನಾನು ಸುಮ್ಮನಿದ್ದೆ. ಆದರೆ ಅಯೂಬ್ ಖಾನ್‌ಗೆ ನಾನು ಏರಿಯಾದಲ್ಲಿರೋದು ಇಷ್ಟ ಇರಲಿಲ್ಲ. ಇದೇ ಕಾರಣಕ್ಕೆ ಗಲಾಟೆ ತೆಗೆದು ನನಗೆ ತೊಂದರೆ ಕೊಡ್ತಿದ್ದ. ಕೊಲೆಯಾದ ದಿನ ಕೂಡ ಅಯೂಬ್ ಖಾನ್ ಮತ್ತು ಮಗ ಇಬ್ಬರು ನನ್ನ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡೋಕೆ ಮುಂದಾದ್ರು. ಪ್ರಾಣ ರಕ್ಷಣೆ ವೇಳೆ ಚಾಕು ತಗುಲಿ ಅಯೂಬ್ ಖಾನ್ ಮೃತಪಟ್ಟರು. ಅಯೂಬ್ ಖಾನ್ ಹೆಂಡತಿ ನಾಜೀಮಾ, ನನ್ನ ತಲೆ ಕಡಿದು ತಂದವರಿಗೆ ಹತ್ತು ಕೋಟಿ ಕೊಡ್ತೀನಿ ಅಂತಾ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದಾರೆ. ಆ 10 ಕೋಟಿನಾ, ಯಾರಿಗೆ ಕೊಡ್ತೀರಿ ಹೇಳಲಿ, ದರ್ಗಾದವರಿಗೆ, ನನ್ನ ಕುಟುಂಬದವರಿಗೆ ಕೊಡ್ತೀರಾ? ಒಂದು ಕೆಲಸ ಮಾಡಿ ಶಾಸಕ ಜಮೀರ್ ಅಹಮದ್ ಖಾನ್‌ಗೆ ಕೊಡಲಿ, ನಾನೇ ತಲೆ ಕಡಿದುಕೊಳ್ತೀನಿ’ ಎಂದು ಘೋಷಣೆ ಮಾಡಿದ್ದ.

    Live Tv
    [brid partner=56869869 player=32851 video=960834 autoplay=true]

  • JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ – ರಕ್ತಸಿಕ್ತವಾಗಿ ಪತ್ತೆಯಾದ ಕಾರು

    JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ – ರಕ್ತಸಿಕ್ತವಾಗಿ ಪತ್ತೆಯಾದ ಕಾರು

    ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬಿನ್ನಿಪೇಟೆ ವಾರ್ಡ್‍ನ ಮಾಜಿ ಕಾರ್ಪೊರೇಟರ್ ಐಶ್ವರ್ಯ ಅವರ ಪತಿ ರೋಹಿತ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇಂದು ರೋಹಿತ್ ಕಾರು ರಕ್ತಸಿಕ್ತ  ಸ್ಥಿತಿಯಲ್ಲಿ ಪತ್ತೆಯಾಗಿದೆ.

    ರೋಹಿತ್ ನಂದಗುಡಿ ಸಮೀಪದ ತನ್ನ ಜಮೀನಿನಲ್ಲಿ ರೇಸ್ ಟ್ರ್ಯಾಕ್ ಮಾಡಿದ್ದರು. ರೋಹಿತ್ ಆಗಾಗ ಅಲ್ಲಿಗೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ. ಕಳೆದ ವಾರವೂ ಸಹ ಇದೇ ರೀತಿ ತಮ್ಮ ಜಮೀನಿನ ರೇಸ್ ಟ್ರ್ಯಾಕ್ ಬಳಿ ಹೋಗಿ ಬರುತ್ತೇನೆ ಎಂದು ಮನೆಯವರಿಗೆ ಹೇಳಿ ತಮ್ಮ ಸ್ನೇಹಿತರಿಂದ ಹಣ ಪಡೆದು ಜಮೀನಿಗೆ ರೋಹಿತ್ ಬಂದಿದ್ದರು. ಆ ಬಳಿಕ ರೋಹಿತ್ ನಾಲ್ಕು ದಿನಗಳಾದರೂ ಸಹ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಇದನ್ನೂ ಓದಿ: ಮೇಕೆಗೆ ತಾಳಿ ಕಟ್ಟಿದ ಯುವಕ – ಮದುವೆಯಾಗಲು ಇತ್ತು ಬಲವಾದ ಕಾರಣ

    ನಾಪತ್ತೆಯಾಗಿ 8 ದಿನಗಳ ಬಳಿಕ ಇಂದು ರೋಹಿತ್ ಮೊಬೈಲ್ ಸ್ವಿಚ್ ಆಫ್ ಆಗಿ ಹೆದ್ದಾರಿಯಲ್ಲಿತ್ತು. ಜೊತೆಗೆ ಅವರ ಕಾರು ಪತ್ತೆಯಾಗಿದೆ. ಕಾರಿನ ಮೇಲೆ ರಕ್ತದ ಕಲೆ ಪತ್ತೆಯಾಗಿದ್ದು, ಜೊತೆಗೆ ಪಕ್ಕದಲ್ಲೇ ಇರುವ ದೇವಸ್ಥಾನದ ಬಳಿ ಚಪ್ಪಲಿ ಮತ್ತು ಬೆಲ್ಟ್ ಸಹ ಪತ್ತೆಯಾಗಿದೆ. ರೋಹಿತ್ ಜಮೀನು ವ್ಯವಹಾರ, ಸೇರಿದಂತೆ ಹಣಕಾಸು ವ್ಯವಹಾರಗಳನ್ನು ಮಾಡಿಕೊಂಡಿದ್ದರು ಹಾಗಾಗಿ ಅವರನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿರುವ ಸಂಶಯ ಕುಟುಂಬಸ್ಥರಿಂದ ವ್ಯಕ್ತವಾಗಿದೆ. ಇದನ್ನೂ ಓದಿ: ಕಳ್ಳತನ ಮಾಡಲು ಹೋಗಿ ಬಾಲಕಿಯನ್ನ ಅಪಹರಿಸಿದ ಖತರನಾಕ್ ಕಳ್ಳ

    ರೋಹಿತ್ ನಾಪತ್ತೆಯಾಗಿರುವ ಬಗ್ಗೆ ಕಿಡ್ನಾಪ್ ಪ್ರಕರಣವನ್ನು ದಾಖಲಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ಪೊಲೀಸ್ ಉಪವಿಭಾಗದ ವ್ಯಾಪ್ತಿಯ ನಂದಗುಡಿ ಪೋಲೀಸರು ಮೂರು ತಂಡಗಳನ್ನು ರಚನೆ ಮಾಡಿ ಹುಡುಕಾಟ ನಡೆಸುತ್ತಿದ್ದಾರೆ. ಈಗಾಗಲೇ ಪೊಲೀಸರು ಅನುಮಾನದ ಮೇಲೆ 8 ಜನರನ್ನು ವಶಕ್ಕೆ ಪಡೆದ ತನಿಖೆ ಮುಂದುವರಿಸಿದ್ದಾರೆ.

  • ಸತ್ಯ ಹೇಳುವ ಧೈರ್ಯವಿಲ್ಲದ ಕೈ ನಾಯಕರಿಂದ ಅಖಂಡಗೆ ನ್ಯಾಯ ಸಿಗಲು ಸಾಧ್ಯವೇ – ಸುಧಾಕರ್ ಪ್ರಶ್ನೆ

    ಸತ್ಯ ಹೇಳುವ ಧೈರ್ಯವಿಲ್ಲದ ಕೈ ನಾಯಕರಿಂದ ಅಖಂಡಗೆ ನ್ಯಾಯ ಸಿಗಲು ಸಾಧ್ಯವೇ – ಸುಧಾಕರ್ ಪ್ರಶ್ನೆ

    ಬೆಂಗಳೂರು: ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಎಂದು ಶಿಕ್ಷಣ ಸಚಿವ ಸುಧಾಕರ್ ಪ್ರಶ್ನಿಸಿದರು.

    ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್‌ಗಳ ವಿಚಾರಣೆ ವಿಚಾರವಾಗಿ ಸಚಿವ ಸುಧಾಕರ್ ಟ್ವೀಟ್ ಮೂಲಕ ಟೀಕೆ ಮಾಡಿದ್ದಾರೆ. ಮೊದಲಿಗೆ “ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ?” ಎಂಬ ಗಾದೆಯ ಮಾತನ್ನು ಹೇಳಿದ್ದಾರೆ.

    ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯ ಹೊರ ಬರುತ್ತಿದೆ. ಕಾಂಗ್ರೆಸ್ ಕಾರ್ಪೊರೇಟರ್‌ಗಳ ಸಂಪತ್‍ರಾಜ್, ಜಾಕೀರ್ ಅವರು ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಮತ್ತೊಂದು ಟ್ವೀಟ್ ಮಾಡಿದ್ದು, “ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂಥದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ, ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ” ಎಂದು ಕಾರ್ಪೊರೇಟರ್‌ಗಳ ವಿಚಾರಣೆ ವಿಚಾರವಾಗಿ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

  • ಮಂಗಳೂರು ಕಾರ್ಪೊರೇಟರ್ ಸುಮಂಗಲಾ ರಾವ್‍ಗೆ ಕೊರೊನಾ ಪಾಸಿಟಿವ್

    ಮಂಗಳೂರು ಕಾರ್ಪೊರೇಟರ್ ಸುಮಂಗಲಾ ರಾವ್‍ಗೆ ಕೊರೊನಾ ಪಾಸಿಟಿವ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢವಾಗಿದೆ.

    ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡಿನ ಕಾರ್ಪೊರೇಟರ್ ಸುಮಂಗಲಾ ರಾವ್ ಅವರಿಗೆ ಇಂದು ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಸುಂಮಗಲಾ ರಾವ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಾಕಿದ್ದು, ತಮ್ಮ ಪತಿಗೂ ಪಾಸಿಟಿವ್ ಆಗಿದ್ದು ಗುಣಮುಖರಾಗುತ್ತಿದ್ದೇವೆ ಎಂದಿದ್ದಾರೆ.

    ಕಳೆದ ಕೆಲ ದಿನದ ಹಿಂದೆ ಕುಂಜತ್ತಬೈಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಕಾರ್ಪೊರೇಟರ್ ಭಾಗಿಯಾಗಿದ್ದರು. ಇದೇ ಸಭೆಗೆ ಬಂದಿದ್ದ ವ್ಯಕ್ತಿಯೋರ್ವನಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ಏಳು ದಿನಗಳಿಂದ ಕಾರ್ಪೊರೇಟರ್ ಸೆಲ್ಫ್ ಕ್ವಾರಂಟೈನ್ ಆಗಿದ್ದರು. ಇದೀಗ ಅವರ ವರದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.

  • ಸಿದ್ದಾಪುರ ಕಾರ್ಪೊರೇಟರ್‌ಗೂ ತಗುಲಿದ ಸೋಂಕು

    ಸಿದ್ದಾಪುರ ಕಾರ್ಪೊರೇಟರ್‌ಗೂ ತಗುಲಿದ ಸೋಂಕು

    ಬೆಂಗಳೂರು: ಮಹಾಮಾರಿ ಕೊರೊನಾ ಗಲ್ಲಿಗಲ್ಲಿಗೂ ಅಟಕಾಯಿಸಿಕೊಳ್ತಿದೆ. ಬೆಂಗಳೂರಿನಲ್ಲಿ ಕಾರ್ಪೊರೇಟರ್ ದೇಹಕ್ಕೂ ವೈರಸ್ ಹೊಕ್ಕಿದೆ.

    ಸಿದ್ದಾಪುರ ವಾರ್ಡ್ ಕಾರ್ಪೊರೇಟರ್ ಮುಜಾಯಿದ್ ಪಾಷಾಗೆ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ 39 ವರ್ಷದ ಕಾರ್ಪೊರೇಟರ್ ಮುಜಾಯಿದ್ ಪಾಷಾ ಕಂಟೈನ್ಮೆಂಟ್ ಝೋನ್‍ನಲ್ಲಿ ಓಡಾಡಿದ್ದರು.

    4 ದಿನಗಳಿಂದ ಪುಲಕೇಶಿನಗರದ ತಂಗಿ ಮನೆಯಲ್ಲಿ ವಾಸವಿದ್ದರು. ಕಳೆದ ಒಂದು ವಾರದಿಂದ ಜ್ವರ-ಶೀತದಿಂದ ಬಳಲುತ್ತಿದ್ದ ಕಾರ್ಪೊರೇಟರ್‍ಗೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿದೆ. ಸದ್ಯಕ್ಕೆ ಕಾರ್ಪೊರೇಟರ್ ಮನೆಯವರನ್ನ ಮತ್ತು ಸಂಪರ್ಕದಲ್ಲಿದ್ದವರನ್ನ ಕ್ವಾರಂಟೈನ್ ಮಾಡಲಾಗಿದೆ.

    4 ದಿನದ ಹಿಂದೆನೆ ಪಾಸಿಟಿವ್ ಅಂತ ಬಂದಿತ್ತು. ಸ್ವತಃ ಕಾರ್ಪೊರೇಟರ್ ಅವರೇ ಆರೋಗ್ಯಾಧಿಕಾರಿಗಳಿಗೆ ಯಾರಿಗೂ ಹೇಳಬೇಡಿ ಅಂದಿದ್ದಾರೆ. ಆದರೆ 4 ದಿನದ ಹಿಂದೆನೆ ಕಾರ್ಪೊರೇಟರ್ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರಂತೆ. ಹೀಗಾಗಿ ವಿಷಯವನ್ನು ಯಾರಿಗೂ ಹೇಳದೇ ಅಧಿಕಾರಿಗಳು ಮುಚ್ಚಿಟಿದ್ದರು. ಆದರೆ 4 ದಿನದ ಹಿಂದೆಯೇ ಆರೋಗ್ಯಾಧಿಕಾರಿಗಳು ಪ್ರೈಮರಿ ಕಾಂಟ್ಯಾಕ್ಟ್ ಅನ್ನು ಕ್ವಾರಂಟೈನ್ ಮಾಡಿದ್ದಾರೆ. ಕಾರ್ಪೊರೇಟರ್ ಪಕ್ಕದ ಮನೆಯವರಿಗೆ ಪಾಸಿಟಿವ್ ಬಂದಿತ್ತಂತೆ ಹೀಗಾಗಿ ಇವರಿಗೆ ಸೊಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ 4 ಜನ ಪ್ರಾಥಮಿಕ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ಪರಪ್ಪನ ಅಗ್ರಹಾರ ಜೈಲಿಗೆ ಇಮ್ರಾನ್ ಪಾಷಾ ಶಿಫ್ಟ್

    ಪರಪ್ಪನ ಅಗ್ರಹಾರ ಜೈಲಿಗೆ ಇಮ್ರಾನ್ ಪಾಷಾ ಶಿಫ್ಟ್

    ಬೆಂಗಳೂರು: ಕೊರೊನಾ ಲಾಕ್‍ಡೌನ್ ಉಲ್ಲಂಘಿಸಿ ಮೆರವಣಿಗೆ ನಡೆಸಿ ಬಂಧನವಾಗಿದ್ದ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಕೋವಿಡ್-19 ಹಿನ್ನೆಲೆ ಸರ್ಕಾರ ವಿಧಿಸಿದ್ದ ನಿಮಯ ಉಲ್ಲಂಘಿಸಿದ ಪ್ರಕರಣವನ್ನು 3ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು, ಇಮ್ರಾನ್ ಪಾಷಾ ಸೇರಿದಂತೆ 24 ಜನ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

    ಕೋರ್ಟ್ ಆದೇಶದ ಬಳಿಕ ಪೊಲೀಸರು ಇಮ್ರಾನ್ ಪಾಷಾ ಸೇರಿದಂತೆ 24 ಜನ ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 28 ಆರೋಪಿಗಳನ್ನ ಬಂಧಿಸಲಾಗಿತ್ತು. ಆದರೆ ಒಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ ಮೂವರ ರಿಪೋರ್ಟ್ ಬರಬೇಕಿದೆ. ಹೀಗಾಗಿ 24 ಆರೋಪಿಗಳನ್ನ ಮಾತ್ರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

    ಆರೋಪಿಗಳನ್ನು ಅರೆಸ್ಟ್ ಮಾಡಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇಂದು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಿದರು. ಬಳಿಕ ಇಮ್ರಾನ್ ಪಾಷಾ ಮತ್ತು ಬಂಟರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಕೋರ್ಟ್ ಆದೇಶದಂತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಏನಿದು ಪ್ರಕರಣ?:
    ಕೋವಿಡ್-19 ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಮ್ರಾನ್ ಪಾಷಾ ಜೂನ್ 7ರಂದು ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಬಿಡುಗಡೆಯಾದ ಪಾಷಾರನ್ನು ಕಾರ್ಯಕರ್ತರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಪಾದರಾಯನಪುರದಲ್ಲಿರುವ ನಿವಾಸಕ್ಕೆ ಕರೆ ತಂದಿದ್ದರು.

    ಈ ವೇಳೆ ಬೈಕ್‍ಗಳಲ್ಲಿ ಕುಳಿತವರು ಹಲ್ಮೆಟ್ ಇಲ್ಲದೇ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದಿದ್ದರೂ ಗುಂಪಾಗಿ ಮೆರವಣಿಗೆ ಮಾಡಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ರಾಜಕೀಯ ಮೆರವಣಿಗೆ ನಡೆಸಬಾರದು ಎಂದು ಸೂಚಿಸಿದ್ದರೂ ಭಾರೀ ಸಂಖ್ಯೆಯಲ್ಲಿ ಮೆರವಣಿಗೆ ನಡೆಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ ಪೊಲೀಸರು ಇಮ್ರಾನ್ ಪಾಷಾರನ್ನು ಬಂಧಿಸಿದ್ದರು.

    ಹಾಟ್ ಸ್ಪಾಟ್ ಆಗಿದ್ದ ಪ್ರದೇಶದಲ್ಲಿ ಮೆರವಣಿಗೆ ನಡೆಸುತ್ತಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ತೆರೆದ ಕಾರಿನಲ್ಲಿ ಹೂ ಮಳೆಯೊಂದಿಗೆ ಕ್ಷೇತ್ರಕ್ಕೆ ಬರುತ್ತಿದ್ದ ಇಮ್ರಾನ್ ಪಾಷಾರನ್ನು ನಡೆಸಿಕೊಂಡೇ ಠಾಣೆಗೆ ಕರೆಸಿಕೊಂಡು ಹೋಗಿ ಬಂಧಿಸಿದ್ದರು. ಈ ವೇಳೆ ಲಘು ಲಾಠಿ ಚಾರ್ಜ್ ಮಾಡಿ ಪೊಲೀಸರು ಗುಂಪನ್ನು ಚದುರಿಸಿದ್ದರು.

  • ಆಸ್ಪತ್ರೆಗೆ ಹೋಗಲು ರಾದ್ಧಾಂತ ಮಾಡಿದ್ದ ಕಾರ್ಪೊರೇಟರ್ ಇಮ್ರಾನ್ ಪಾಷಾ ಗುಣಮುಖ

    ಆಸ್ಪತ್ರೆಗೆ ಹೋಗಲು ರಾದ್ಧಾಂತ ಮಾಡಿದ್ದ ಕಾರ್ಪೊರೇಟರ್ ಇಮ್ರಾನ್ ಪಾಷಾ ಗುಣಮುಖ

    – ಇಂದು ಡಿಸ್ಚಾರ್ಜ್, 14 ದಿನ ಹೋಮ್ ಕ್ವಾರಂಟೈನ್‍ನಲ್ಲಿರಲು ಸೂಚನೆ

    ಬೆಂಗಳೂರು: ಕೊರೊನಾ ಸೋಂಕು ತಗುಲಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿ, ಮನೆ ಮುಂದೆ ಹೈ ಡ್ರಾಮಾ ಮಾಡಿದ್ದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಲಿದ್ದಾರೆ.

    ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಇಮ್ರಾನ್ ಪಾಷಾ ಅವರನ್ನು 7 ದಿನಕ್ಕೊಮ್ಮೆ ಕೋವಿಡ್-19 ಟೆಸ್ಟ್ ಮಾಡಲಾಗಿತ್ತು. ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲು ನಿರ್ಧರಿಸಲಾಗಿದೆ.

    ಡಿಸ್ಚಾರ್ಜ್ ಮಾಡಿದ ತಕ್ಷಣ ಮನಸೋ ಇಚ್ಛೆ ಓಡಾಡುವಂತಿಲ್ಲ, 14 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಸೀಲ್ ಹಾಕಿ ಕ್ವಾರಂಟೈನ್‍ನಲ್ಲಿರುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಕೊರೊನಾ ಸೋಂಕು ತಗುಲಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿ, ಮನೆ ಮುಂದೆ ಹೈ ಡ್ರಾಮಾ ಮಾಡಿದ್ದರು. ಈ ಮೂಲಕ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದ್ದರು. ಇದೀಗ ಚಿಕಿತ್ಸೆ ಪಡೆದು ಗುಣಮುಖವಾಗಿದ್ದಾರೆ.

    ಇಮ್ರಾನ್ ಪಾಷಾ ಡಿಸ್ಚಾರ್ಜ್ ಹಿನ್ನೆಲೆಯಲ್ಲಿ ಬೆಳಗ್ಗೆ 11.45ಕ್ಕೆ ಇಮ್ರಾನ್ ಆಸ್ಪತ್ರೆಯಿಂದ ಹೊರ ಬರಲಿದ್ದು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್‍ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಮ್ರಾನ್ ನೇರವಾಗಿ ಪಾದರಾಯನಪುರ ಮನೆಗೆ ಬರಲಿದ್ದಾರೆ.

    ಕಾರ್ಪೊರೇಟರ್ ಹೈಡ್ರಾಮಾ:
    ಪಾದರಾಯನಪುರ ವಾರ್ಡ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಮೇ 29ರಂದು ಕೊರೊನಾ ಸೋಂಕು ದೃಢಪಟ್ಟಿದ್ದರೂ ಆಸ್ಪತ್ರೆ ಸೇರಿದ್ದು ಮೇ 30 ಮಧ್ಯಾಹ್ನದ ಹೊತ್ತಿಗೆ. ಇಮ್ರಾನ್ ಪಾಷಾ ಆಸ್ಪತ್ರೆಗೆ ದಾಖಲಗಲು ನಿರಾಕರಿಸಿ ಮೊಂಡಾಟ ಪ್ರದರ್ಶಿಸಿದ್ದರು. ಮನೆ ಬಳಿಗೆ ಪೊಲೀಸರು, ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಬಂದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬಂದಿರಲಿಲ್ಲ.

    ಕಾರ್ಪೊರೇಟರ್ ಇಮ್ರಾನ್ ತಂದೆ ಆರೀಫ್, ಶಾಸಕ ಜಮೀರ್ ಅಹ್ಮದ್ ಮಾತನ್ನೂ ಕೇಳಲಿಲ್ಲ. ಕೊನೆಗೆ ಪೊಲೀಸರು, ನೀವು ಆಸ್ಪತ್ರೆಗೆ ಬರಲಿಲ್ಲ ಅಂದ್ರೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡ್ತೀವಿ ಎಂದು ವಾರ್ನಿಂಗ್ ಕೊಟ್ಟರು. ಸತತ ಮೂರು ಗಂಟೆಗಳ ಹೈಡ್ರಾಮಾ ಬಳಿಕ ಇಮ್ರಾನ್ ಪಾಷಾ ಪಿಪಿಇ ಕಿಟ್ ಸಮೇತ ಮನೆಯಿಂದ ಹೊರಬಂದು, ಜನರತ್ತ ಕೈಬೀಸಿ ಅಂಬುಲೆನ್ಸ್ ಹತ್ತಿ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದರು.

    ಇಮ್ರಾನ್ ಬೆಂಬಲಿಗರನ್ನು ನಿಯಂತ್ರಿಸುವುದು ಪೊಲೀಸರಿಗೆ ಕಷ್ಟವಾಗಿಬಿಟ್ಟಿತ್ತು. ಇಮ್ರಾನ್ ಪಾಷಾ 200ಕ್ಕೂ ಹೆಚ್ಚು ಮಂದಿ ಜೊತೆ ಸಂಪರ್ಕದಲ್ಲಿದ್ದು, ಎಲ್ಲರನ್ನೂ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಕಾರ್ಪೊರೇಟರ್ ನಡುವಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂಥಾದ್ದೆಲ್ಲಾ ಸಹಿಸೋಕೆ ಆಗಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಶನಿವಾರ ಗರಂ ಆಗಿದ್ದರು. ಅಷ್ಟೇ ಅಲ್ಲದೆ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ಧ ಕ್ರಮಕ್ಕೆ ಕಂದಾಯ ಸಚಿವ ಅಶೋಕ್ ಆಗ್ರಹಿಸಿದ್ದರು. ಅಲ್ಲದೆ ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ), 270 (ವೈರಸ್ ಹಬ್ಬಿಸಲು ಯತ್ನ), 271 (ರೋಗ ನಿರೋಧಕ ನಿರ್ಬಂಧ ನಿಯಮವನ್ನು ಉಲ್ಲಂಘಿಸುವುದು) ಹಾಗೂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.