Tag: Corporators

  • ನಿಮ್ ಹತ್ರ ಬಂಡೆ ಇರ್ಬೋದು, ನಿಮ್ಮಿಂದ ಬಂದಿರುವ ಒಂದೊಂದು ಡೈನಾಮೈಟ್‍ ಅದನ್ನು ಪುಡಿ ಮಾಡ್ತಾರೆ: ಕಟೀಲ್

    ನಿಮ್ ಹತ್ರ ಬಂಡೆ ಇರ್ಬೋದು, ನಿಮ್ಮಿಂದ ಬಂದಿರುವ ಒಂದೊಂದು ಡೈನಾಮೈಟ್‍ ಅದನ್ನು ಪುಡಿ ಮಾಡ್ತಾರೆ: ಕಟೀಲ್

    – ಲಿಂಬಾವಳಿ, ಅಶೋಕ್ ಜೋಡೆತ್ತುಗಳು

    ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್‍ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

    ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ ಮಾಡುತ್ತಿದ್ದೀರಿ, ಇದು ನಡೆಯಲ್ಲ. ನಿಮ್ಮನ್ನ ಬಂಡೆ ಎಂದು ಕರೆಯುತ್ತಾರೆ. ನಿಮ್ಮ ಬಳಿ ಬಂಡೆ ಇರಬಹುದು. ಆದರೆ ನಮ್ಮ ಬಳಿ ನಿಮ್ಮಿಂದ ಬಂದಿರುವ ಡೈನಾಮೈಟ್‍ಗಳಿವೆ. ಒಂದೊಂದು ಡೈನಾಮೈಟ್‍ ಗಳು ನಿಮ್ಮನ್ನು ಪುಡಿಪುಡಿ ಮಾಡುತ್ತಾರೆ ಎಂದರು.

    ತಿಹಾರ್ ಜೈಲಿಗೆ ಹೋದಾಗ ಜನ ನೋಡಿದ್ದಾರೆ. ಜೈಲಿಗೆ ಹೋದಾಗ ಮೆರವಣಿಗೆ, ಜೈಲಿನಿಂದ ಹೊರಬಂದಾಗ ಮೆರವಣಿಗೆ, ಕುಂತಾಗ ಮೆರವಣಿಗೆ, ನಿಂತಾಗ ಮೆರವಣಿಗೆ. ಸಾಕು ನಿಮ್ಮ ಮೆರವಣಿಗೆ, ನೀವು ಮನೆಯಲ್ಲಿ ಕೂರಿ ಎಂದು ಜನ ಕೂರಿಸುತ್ತಾರೆ. ಜಾತಿ ರಾಜಕೀಯ ನಡೆಯಲ್ಲ, ಅಭಿವೃದ್ಧಿ ರಾಜಕೀಯದ ಮೂಲಕ ಮುನಿರತ್ನ ಜನರ ಹೃದಯದಲ್ಲಿ ಇದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಮನೆ, ಮನೆಗೆ ಹೋಗಿ ಜನರ ಕಷ್ಟ ಕೇಳಿದ್ದಾರೆ. ಮುನಿರತ್ನ ಅವರನ್ನು ಪ್ರೀತಿಯಿಂದ ನಮ್ಮ ಪಕ್ಷ ಬರಮಾಡಿಕೊಂಡಿದೆ ಎಂದು ಹೊಗಳಿದರು.

    ಸಚಿವ ಆರ್.ಅಶೋಕ್ ಮತ್ತು ಅರವಿಂದ ಲಿಂಬಾವಳಿ ಜೋಡೆತ್ತುಗಳು. ಈ ಜೋಡೆತ್ತುಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಮುನಿರತ್ನ ಗೆಲ್ಲಿಸುತ್ತಾರೆ. ರಾಜರಾಜೇಶ್ವರಿ ನಗರದಲ್ಲಿ ಗೆಲ್ಲುವ ಮೂಲಕ ವಿಶ್ವದಾಖಲೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅಭಿವೃದ್ಧಿಯ ಹರಿಕಾರರು, ಸಾಮಾನ್ಯ ಜನರ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಮಾಜಿ ಶಾಸಕ ಮುನಿರತ್ನ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ, ಪ್ರಧಾನಿ ಮೋದಿ, ಯಡಿಯೂರಪ್ಪ ಸರ್ಕಾರದ ಒಳ್ಳೆಯ ಕಾರ್ಯ ಒಪ್ಪಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ. ಎಲ್ಲರನ್ನೂ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಸಕ್ಕರೆ ಸೇರಿದೆ. ಹಾಲಿನ ಜೊತೆ ಸಕ್ಕರೆ ಸೇರಿದಾಗ ಸಿಹಿ ಕೊಡುತ್ತೆ. ರಾಜರಾಜೇಶ್ವರಿನಗರದಲ್ಲಿ ಹಾಲು-ಸಕ್ಕರೆ ಸೇರಿ ಗೆಲುವಿನ ಸಿಹಿ ಕೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆ ಆಪರೇಷನ್ ಕಮಲ ಜೋರಾಗಿದ್ದು, ಆರ್‍ಆರ್ ನಗರದ ಕಾಂಗ್ರೆಸ್ ಕಾರ್ಪೊರೇಟರ್ ಗಳು ಕಮಲ ಪಾಳಯಕ್ಕೆ ಬರುತ್ತಿದ್ದಾರೆ. ಮುನಿರತ್ನ ವಿರುದ್ಧವಿದ್ದ ಕಾಂಗ್ರೆಸ್ ಕಾರ್ಪೋರೇಟರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಚ್‍ಎಂಟಿ ವಾರ್ಡ್ ಕಾಂಗ್ರೆಸ್ ಕಾರ್ಪೋರೇಟರ್ ಆಶಾ ಸುರೇಶ್ ಅವರು ಅಧಿಕೃತವಾಗಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಲಗ್ಗೆರೆ ಮಂಜುಳಾ ನಾರಾಯಣಸ್ವಾಮಿ ಈಗಾಗಲೇ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ.

    ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ ಕಟೀಲ್, ಬಿಜೆಪಿ ಉಪಾಧ್ಯಕ್ಷ ಲಿಂಬಾವಳಿ, ಸಚಿವ ಆರ್. ಅಶೋಕ್ ಹಾಗೂ ಆರ್.ಆರ್ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಹ ಭಾಗಿಯಾಗಿದ್ದರು.

    ಐವರು ಕಾರ್ಪೋರೇಟರ್ಸ್ ಬಿಜೆಪಿಗೆ ಸೇರ್ಪಡೆ
    ಕಾಂಗ್ರೆಸ್ ಮುಖಂಡರಾದ ಮಾಜಿ ಮೇಯರ್ ನಾರಾಯಣಸ್ವಾಮಿ, ಕಾಂಗ್ರೆಸ್ ಕಾರ್ಪೋರೇಟರ್ ಗಳಾದ ಜಾಲಹಳ್ಳಿಯ ಶ್ರೀನಿವಾಸ್, ಯಶವಂತಪುರದ ಜಿ.ಕೆ.ವೆಂಕಟೇಶ್, ಹೆಚ್‍ಎಂಟಿ ವಾರ್ಡ್ ನ ಆಶಾ ಸುರೇಶ್, ಲಕ್ಷ್ಮೀದೇವಿನಗರದ ವೇಲು ನಾಯ್ಕರ್, ಕೊಟ್ಟಿಗೆಪಾಳ್ಯ ವಾರ್ಡ್ ಮೋಹನ್ ಕುಮಾರ್, ಲಗ್ಗೆರೆ ವಾರ್ಡ್ ನ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯ ಸಿದ್ದೇಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

  • ಭೈರತಿ ಬಸವರಾಜ್ ಬೆಂಬಲಿಸಿದ 4 ಜನ ಕಾಂಗ್ರೆಸ್ ಕಾರ್ಪೊರೇಟರ್​ಗಳ ಉಚ್ಛಾಟನೆ

    ಭೈರತಿ ಬಸವರಾಜ್ ಬೆಂಬಲಿಸಿದ 4 ಜನ ಕಾಂಗ್ರೆಸ್ ಕಾರ್ಪೊರೇಟರ್​ಗಳ ಉಚ್ಛಾಟನೆ

    ಬೆಂಗಳೂರು: ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಅವರನ್ನು ಬೆಂಬಲಿಸಿದ 4 ಜನ ಕಾಂಗ್ರೆಸ್ ಕಾರ್ಪೊರೇಟರ್​ಗಳನ್ನು ಕೆಪಿಸಿಸಿ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

    ಕೆ.ಆರ್.ಪುರಂ ಕ್ಷೇತ್ರ ವ್ಯಾಪ್ತಿಯ ಬಸವನಪುರ ವಾರ್ಡ್‍ನ ಜಯಪ್ರಕಾಶ್, ದೇವಸಂದ್ರ ವಾರ್ಡ್‍ನ ಶ್ರೀಕಾಂತ್, ಎ ನಾರಾಯಣಪುರದ ಸುರೇಶ್ ಹಾಗೂ ವಿಜ್ಞಾನನಗರ ವಾರ್ಡ್‍ನ ಹೆಚ್‍ಜಿ ನಾಗರಾಜ್ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಕಾರ್ಪೊರೇಟರ್ ಗಳು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ನಾಲ್ಕು ಜನ ಕಾಪೊರೇಟರ್ ಗಳನ್ನು ಉಚ್ಚಾಟನೆ ಮಾಡಿದ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್

    ಅನರ್ಹ ಶಾಸಕ ಭೈರತಿ ಬಸವರಾಜ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಭೈರತಿ ಬಸವರಾಜ್ ಸೇರಿದಂತೆ 17 ಜನ ಶಾಸಕರನ್ನು ಅನರ್ಹಗೊಳಿಸಿದ್ದರು. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸಿಕ್ಕಿದೆ. ಹೀಗಾಗಿ ಅನರ್ಹ ಶಾಸಕ ಭೈರತಿ ಬಸವರಾಜ್ ಸ್ವಕ್ಷೇತ್ರ ಕೆ.ಆರ್.ಪೇಟೆಯಿಂದ ಸ್ಪರ್ಧೆಗೆ ಇಳಿದಿದ್ದಾರೆ.

    ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ತ್ರಿಕೋನ ಹಣಾಹಣಿ ಏರ್ಪಟ್ಟಿದ್ದು, ಬಿಜೆಪಿಯಿಂದ ಭೈರತಿ ಬಸವರಾಜ್, ಕಾಂಗ್ರೆಸ್‍ನಿಂದ ನಾರಾಯಣಸ್ವಾಮಿ ಹಾಗೂ ಜೆಡಿಎಸ್‍ನಿಂದ ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದಾರೆ. ಕೆ.ಆರ್.ಪುರಂಯಲ್ಲಿ ಗೆಲುವಿಗೆ ಭರ್ಜರಿ ಪ್ಲ್ಯಾನ್ ರೂಪಿಸಿರುವ ಬಿಜೆಪಿ ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ ಅವರಿಗೆ ಉಸ್ತುವಾರಿ ನೀಡಿದೆ.

  • ಶಾಸಕರ ಬೆಂಬಲಿತ ಕಾರ್ಪೋರೇಟರ್‌ಗಳ ರಾಜೀನಾಮೆ ಚರ್ಚೆ?

    ಶಾಸಕರ ಬೆಂಬಲಿತ ಕಾರ್ಪೋರೇಟರ್‌ಗಳ ರಾಜೀನಾಮೆ ಚರ್ಚೆ?

    ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಕಾರ್ಪೋರೇಟರ್ ರಾಜೀನಾಮೆ ನೀಡಲು ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಶಾಸಕರಾದ ರಾಮಲಿಂಗಾರೆಡ್ಡಿ, ಎಸ್.ಟಿ ಸೋಮಶೇಖರ್, ಭೈರತಿ ಬಸವರಾಜ್ ಹಾಗೂ ಮುನಿರತ್ನ ಬೆಂಬಲಿತ ಕಾರ್ಪೋರೇಟರ್ ರಾಜೀನಾಮೆ ನೀಡಲು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶಾಸಕರ ಬೆಂಬಲದಿಂದ ಗೆದ್ದ ಕಾರ್ಪೋರೇಟರ್‌ಗಳು ನಿಷ್ಠೆ ತೋರಿಸಲು ನಿರ್ಧರಿಸಿದ್ದಾರೆ.

    ಶಾಸಕರು ಸೂಚನೆ ಕೊಟ್ಟರೆ ಸುಮಾರು 12 ಕಾರ್ಪೋರೇಟರ್‌ಗಳು ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಬೆಂಬಲಿಗರಾದ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಹಾಗೂ ಚಂದ್ರಪ್ಪ, ಮುನಿರತ್ನ ಬೆಂಬಲಿಗರಾದ ಜಿ.ಕೆ ವೆಂಕಟೇಶ್ ಹಾಗೂ ವೇಲು ನಾಯರ್ ಹಾಗೂ ಎಸ್.ಟಿ ಸೋಮಶೇಖರ್ ಬೆಂಬಲಿತ ಕಾರ್ಪೋರೇಟರ್ ರಾಜಣ್ಣ ಹೀಗೆ ಹಲವು ಕಾರ್ಪೋರೇಟರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.