Tag: Costal Karnataka

  • ಮುಂದಿನ 3 ಗಂಟೆಗಳಲ್ಲಿ ಕರಾವಳಿ, ಮಧ್ಯ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

    ಮುಂದಿನ 3 ಗಂಟೆಗಳಲ್ಲಿ ಕರಾವಳಿ, ಮಧ್ಯ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಕರಾವಳಿ (Coastal Karnataka) ಮತ್ತು ಮಧ್ಯ ಕರ್ನಾಟಕದಲ್ಲಿ (Central Karnataka) ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ (IMD) ಹೇಳಿದೆ.

    ಮನೆಯೊಳಗೆ ಇರಿ, ಸಾಧ್ಯವಾದರೆ ಪ್ರಯಾಣ ತಪ್ಪಿಸಿ. ಮರಗಳ ಕೆಳಗಡೆ ಆಶ್ರಯ ಪಡೆಯಬೇಡಿ. ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂದು ಐಎಂಡಿ ಸೂಚನೆ ನೀಡಿದೆ.