Tag: Cotton Candy

  • ಯಾವುದೇ ಹಾಡನ್ನು ಕದ್ದಿಲ್ಲ, ಕಾನೂನು ಸಮರಕ್ಕೆ ಸಿದ್ಧ: ಚಂದನ್‌ ಶೆಟ್ಟಿ

    ಯಾವುದೇ ಹಾಡನ್ನು ಕದ್ದಿಲ್ಲ, ಕಾನೂನು ಸಮರಕ್ಕೆ ಸಿದ್ಧ: ಚಂದನ್‌ ಶೆಟ್ಟಿ

    ಹುಬ್ಬಳ್ಳಿ: ನಾನು ಯಾವುದೇ ಹಾಡು, ಹಾಡಿನ ಸಾಲನ್ನು ಕದ್ದಿಲ್ಲ ಎಂದು ಗಾಯಕ ಚಂದನ್‌ ಶೆಟ್ಟಿ (Chandan Shetty) ಹೇಳಿದ್ದಾರೆ.

    ಕಾಟನ್ ಕ್ಯಾಂಡಿ (Cotton Candy) ಹಾಡಿನ ತುಣುಕುಗಳನ್ನು ಕದಿಯಲಾಗಿದೆ ಎಂಬ ಆರೋಪವನ್ನು ಗಾಯಕ ಚಂದನ ಶೆಟ್ಟಿ ತಳ್ಳಿಹಾಕಿದ್ದಾರೆ.

    ಹುಬ್ಬಳ್ಳಿಯಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು ಇದು ಕಾಕತಾಳೀಯ. ನಾನು ಯಾವುದೇ ಹಾಡು, ಹಾಡಿನ ಸಾಲು, ಟ್ಯೂನ್ ಕದ್ದಿಲ್ಲ. ಯಾವುದೋ ವಿವ್ ಇಲ್ಲದ ಸಾಂಗ್ ಕದ್ದು ನಾನು ಹಾಡು ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಹೇಳಿದರು.

     

    ಈ ಕುರಿತು ಕಾನೂನು ಹೋರಾಟ ಮಾಡಲು ಸಿದ್ಧನಿದ್ದೇನೆ. ನಾನು ಬಹಳಷ್ಟು ಕಷ್ಟಪಟ್ಟು ಹಾಡು ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಟನ್ ಕ್ಯಾಂಡಿ V/S ವೈ ಬುಲ್ ರ‍್ಯಾಪರ್‌ ವಾರ್ – ಚಂದನ್ ಶೆಟ್ಟಿ ಮೇಲೆ ಟ್ಯೂನ್ ಕದ್ದ ಆರೋಪ

    ಏನಿದು ವಿವಾದ?
    ಹೊಸ ವರ್ಷಕ್ಕೆ ರಿಲೀಸ್ ಆದ ಕಾಟನ್ ಕ್ಯಾಂಡಿ ಸಾಂಗ್ ಟ್ಯೂನ್ ನಾನು ಆರು ವರ್ಷದ ಹಿಂದೆ ಮಾಡಿದ ವೈ ಬುಲ್ (Y Bull) ಪಾರ್ಟಿ ಸಾಂಗ್ ಟ್ಯೂನ್ ಒಂದೇ ಇದೆ ಎಂದು ಯುವರಾಜ್ ಹೇಳಿದ್ದಾರೆ. ಮೊದಲ ಪಲ್ಲವಿ, ಸೆಕೆಂಡ್ ಚರಣವನ್ನು ಚಂದನ್‌ ಶೆಟ್ಟಿ ಕಾಪಿ ಮಾಡಿದ್ದಾರೆ. ಆರು ವರ್ಷಗಳ ಹಿಂದೆ ತುಂಬಾನೇ ಕಷ್ಟಪಟ್ಟು ಹಣ ಕೂಡಿಟ್ಟು ರ‍್ಯಾಪ್‌ ಸಾಂಗ್ ಮಾಡಿದ್ದೇನೆ ಎಂದು ಯುವರಾಜ್‌ (Yuvraj) ಪಬ್ಲಿಕ್‌ ಟಿವಿಗೆ ತಿಳಿಸಿದ್ದಾರೆ.

  • PublicTV Explainer: ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ‘ಕಲರ್’ ಗೋಬಿ, ಪಾನಿಪುರಿ, ಕಬಾಬ್ ಖಾದ್ಯಗಳಿಗೂ ಬ್ರೇಕ್ – ಯಾಕೆ ಗೊತ್ತಾ?

    PublicTV Explainer: ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ‘ಕಲರ್’ ಗೋಬಿ, ಪಾನಿಪುರಿ, ಕಬಾಬ್ ಖಾದ್ಯಗಳಿಗೂ ಬ್ರೇಕ್ – ಯಾಕೆ ಗೊತ್ತಾ?

    ಕಾಟನ್ ಕ್ಯಾಂಡಿ ಎಂದರೆ ಮಕ್ಕಳಿಗೆ ಬಹಳ ಇಷ್ಟ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರೆ ಕಲರ್ ಕಲರ್ ಕಾಟನ್ ಕ್ಯಾಂಡಿಗಳು (Cotton Candy) ಮಕ್ಕಳನ್ನು ಕೈಬೀಸಿ ಕರೆಯುತ್ತಿರುತ್ತವೆ. ಬಾಯಿಗಿಟ್ಟರೆ ಕರಗುತ್ತದೆ, ನಾಲಿಗೆಗೆ ರುಚಿಯಾಗಿರುತ್ತದೆ ಅಂತ ಮಕ್ಕಳು ಅದನ್ನು ತುಂಬಾ ಇಷ್ಟ ಪಟ್ಟು ತಿನ್ನುತ್ತಾರೆ. ಮಕ್ಕಳ ಆಸೆಗೆ ಕಟ್ಟುಬಿದ್ದು ಪೋಷಕರು ಸ್ವಲ್ಪವೂ ಯೋಚಿಸದೇ ಕ್ಯಾಂಡಿ ಕೊಡಿಸುತ್ತಾರೆ. ಆದರೆ ಇಂತಹ ಪದಾರ್ಥಗಳು ಆರೋಗ್ಯಕ್ಕೆ ಹಾನಿಕಾರಕ ಎಂಬುದನ್ನು ವೈದ್ಯಕೀಯ ಲೋಕ ಸಾರಿ ಸಾರಿ ಹೇಳುತ್ತಿದೆ.

    ಆರೋಗ್ಯಕ್ಕೆ ಹಾನಿಕರವಾದ ಇಂತಹ ಪದಾರ್ಥಗಳಿಗೆ ಹಲವು ರಾಜ್ಯಗಳಲ್ಲಿ ನಿಷೇಧಿಸಿ ಇತರೆ ರಾಜ್ಯಗಳಿಗೆ ಮಾದರಿಯಾಗಿವೆ. ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಗೋಬಿ ಮಂಚೂರಿ (Gobi Manchurian), ಪಾನಿಪುರಿ, ಕಬಾಬ್ ಇತರೆ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗಿದೆ.

    ಕಲರ್ ಕಾಟನ್ ಕ್ಯಾಂಡಿ ನಿಷೇಧ ಏಕೆ? ಅದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳೇನು? ನಿಯಮ ಉಲ್ಲಂಘಿಸಿ ಮಾರಾಟ ಮಾಡಿದ್ರೆ ಶಿಕ್ಷೆ ಏನು? ಖಾದ್ಯಗಳಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಸದಂತೆ ಕರ್ನಾಟಕ ಕೈಗೊಂಡಿರುವ ಕ್ರಮಗಳೇನು?

    ಏನಿದು ಕಾಟನ್ ಕ್ಯಾಂಡಿ?
    ಇದೊಂದು ಸಿಹಿ ತಿನಿಸು. ಮಕ್ಕಳಿಗೆ ಪ್ರಿಯವಾದ ತಿನಿಸು. ಇದು ತಿನ್ನಲು ಹತ್ತಿಯಂತೆ ಇರುತ್ತದೆ. ಆಕರ್ಷಣೀಯವಾಗಿ ಇರಲೆಂದು ಈ ತಿನಿಸಿಗೆ ಕೃತಕ ಬಣ್ಣ ಬಳಸಲಾಗುತ್ತದೆ. ಮಕ್ಕಳೇ ಇದನ್ನು ಹೆಚ್ಚು ಖರೀದಿಸಿ ತಿನ್ನುತ್ತಾರೆ.

    ಇದು ಅಪಾಯಕಾರಿಯೇ?
    ಹೌದು, ಕಾಟನ್ ಕ್ಯಾಂಡಿಯಲ್ಲಿ ಬಳಸುವ ರೋಡಮೈನ್-ಬಿ ಅತ್ಯಂತ ಅಪಾಯಕಾರಿ. ತಿನಿಸು ಕಲರ್‌ಫುಲ್ ಆಗಿ ಕಾಣಲಿ ಎಂದು ಇದನ್ನು ಬಳಸುತ್ತಾರೆ. ಆದರೆ ರೋಡಮೈನ್-ಬಿಯನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ. ಇದನ್ನು ಇಂಕ್, ಬಟ್ಟೆಗಳು (ಬಣ್ಣಕ್ಕೆ) ಮತ್ತು ಸೌಂದರ್ಯವರ್ಧಕಗಳಿಗೂ ಬಳಸಲಾಗುತ್ತದೆ.

    ಆರೋಗ್ಯದ ಮೇಲಾಗುವ ದುಷ್ಪರಿಣಾಮ ಏನು?
    ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ಕಾಟನ್ ಕ್ಯಾಂಡಿಗೆ ರೋಡಮೈನ್-ಬಿಯನ್ನು ಬಳಸಲಾಗುತ್ತದೆ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ. ಅಷ್ಟೇ ಅಲ್ಲ, ಮಿದುಳು, ಮೂತ್ರಪಿಂಡ, ಹೃದಯಕ್ಕೂ ಹಾನಿ ಮಾಡಬಲ್ಲದು.

    ಮಕ್ಕಳಿಗೆ ತೊಂದರೆಯೇನು?
    ಕಾಟನ್ ಕ್ಯಾಂಡಿಯಲ್ಲಿನ ಹೆಚ್ಚಿನ ಸಕ್ಕರೆ ಅಂಶವು ದೊಡ್ಡ ಪ್ರಮಾಣದ ಅಪಾಯವನ್ನುಂಟು ಮಾಡುತ್ತದೆ. ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ಪೌಷ್ಟಿಕಾಂಶ ಮತ್ತು ಆಹಾರ ಪದ್ಧತಿಯಲ್ಲಿ ಪರಿಣಿತರಾಗಿರುವ ಪ್ರೊಫೆಸರ್ ಟಾಮ್ ಸ್ಯಾಂಡರ್ಸ್, ಕ್ಯಾಂಡಿ ಫ್ಲೋಸ್‌ನಿಂದ ಮಕ್ಕಳಲ್ಲಿ ಹಲ್ಲು ಕ್ಷಯ ಉಂಟಾಗಲು ಕಾರಣವಾಗುತ್ತದೆ ಎಂದಿದ್ದಾರೆ.

    ವಿದೇಶಗಳಲ್ಲಿ ಎಲ್ಲೆಲ್ಲಿ ಬ್ಯಾನ್?
    ಯೂರೋಪ್, ಯುಕೆ ಮತ್ತು ಕ್ಯಾಲಿಫೋರ್ನಿಯಾದಲ್ಲೂ (California) ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. 2014 ರಲ್ಲಿ ವೆಸ್ಟ್ ಯಾರ್ಕ್ಷೈರ್‌ನಲ್ಲಿ ಮೊದಲ ಬಾರಿಗೆ ಪರೀಕ್ಷೆ ನಡೆಸಲಾಯಿತು. ಆಗ ಏಷ್ಯನ್ ಸಿಹಿತಿಂಡಿಗಳಲ್ಲಿ ರೋಡಮೈನ್-ಬಿ ಇರುವುದು ದೃಢಪಟ್ಟಿತು.

    ಭಾರತದ ಯಾವ ರಾಜ್ಯಗಳಲ್ಲಿ ನಿಷೇಧ?
    ಕ್ಯಾನ್ಸರ್‌ಗೆ ಕಾರಣವಾಗುವ ರಾಸಾಯನಿಕ ಅಂಶವಿರುವುದು ಸಾಬೀತಾದ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿಯಲ್ಲಿ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಕರ್ನಾಟಕದಲ್ಲಿ ಬಣ್ಣ ಬಳಸಿ ಮಾಡಿದ ಕಾಟನ್ ಕ್ಯಾಂಡಿಗಳನ್ನು ನಿಷೇಧಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಲ್ಲದೇ, ಬಣ್ಣ ರಹಿತ ಕಾಟನ್ ಕ್ಯಾಂಡಿ ತಯಾರಿಕೆಗೆ ನಿರ್ಬಂಧ ಇಲ್ಲ ಎಂದು ಹೇಳಿದೆ. ಜೊತೆಗೆ ಆಂಧ್ರಪ್ರದೇಶ ಮತ್ತು ದೆಹಲಿಯಲ್ಲೂ ಕಾಟನ್ ಕ್ಯಾಂಡಿ ನಿಷೇಧಕ್ಕೆ ಕ್ರಮಕೈಗೊಳ್ಳಲಾಗಿದೆ. ಕಾಟನ್ ಕ್ಯಾಂಡಿಗೆ ಬಳಸುವ ಪದಾರ್ಥಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

    ಕರ್ನಾಟಕದಲ್ಲಿ ಬ್ಯಾನ್?
    ಕೃತಕ ಬಣ್ಣ ಬಳಸಿ ಮಾಡಿದ ಕಾಟನ್ ಕ್ಯಾಂಡಿಗಳನ್ನು ಕರ್ನಾಟಕದಲ್ಲಿ ನಿಷೇಧಿಸಲಾಗುವುದು. ಬಣ್ಣ ಬರಲು ಬಳಸುವ ರೋಡಮೈನ್-ಬಿಯನ್ನು ಕಾಟನ್ ಕ್ಯಾಂಡಿಯಲ್ಲಿ ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವಂತಿಲ್ಲ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ.

    ಗೋಬಿ ಮಂಚೂರಿ ಕಥೆ ಏನು?
    ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಹೀಗೆ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಬೀದಿ ಬದಿಯ ತಳ್ಳುವ ಗಾಡಿ ವ್ಯಾಪಾರಿಗಳಿಂದ ಹಿಡಿದು ದೊಡ್ಡ ದೊಡ್ಡ ಹೋಟೆಲ್‌ವರೆಗೂ ಈ ಆದೇಶ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ. ಬಣ್ಣ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯಾದ್ಯಂತ 171 ಕಡೆ ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆ ಪೈಕಿ 107 ಕಡೆಗಳಲ್ಲಿನ ಗೋಬಿ ಮಂಚೂರಿಗಳಲ್ಲಿ ಹಾನಿಕಾರಕ ಕೃತಕ ಬಣ್ಣ ಬಳಸಲಾಗಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

    ಕೃತಕ ಬಣ್ಣ ಬಳಸಿದ್ರೆ ಶಿಕ್ಷೆ ಏನು?
    ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ನಿಯಮ 59 ರಡಿ 7 ವರ್ಷಗಳ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಬಹುದು.

  • ರಾಜ್ಯದಲ್ಲೂ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್?

    ರಾಜ್ಯದಲ್ಲೂ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್?

    ಬೆಂಗಳೂರು: ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯಲ್ಲಿ (Gobi Manchuri) ಕೆಲವು ಹಾನಿಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಗೋವಾ, ತಮಿಳುನಾಡು ಈ ಆಹಾರಗಳನ್ನು ಬ್ಯಾನ್ ಮಾಡಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ಕಲರ್ ಜೆಲ್ಲಿಗಳನ್ನು ಸ್ಯಾಂಪಲ್ ಟೆಸ್ಟ್‌ಗೆ ಒಳಪಡಿಸಿಲಾಗಿತ್ತು. ಇದೀಗ ಕಾಟನ್ ಕ್ಯಾಂಡಿ ಜೆಲ್ಲಿ ಹಾಗೂ ಗೋಬಿ ಮಂಚೂರಿಯ ಟೆಸ್ಟಿಂಗ್ ರಿಪೋರ್ಟ್ ಆರೋಗ್ಯ ಇಲಾಖೆ (Health Department) ಕೈ ಸೇರಿದೆ.

    ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ನಿರ್ಧಾರ ಕೈಗೊಳ್ಳಲಿದ್ದು, ಸೋಮವಾರ (ಮಾ.11) ಆರೋಗ್ಯ ಸಚಿವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ ಕಾಟನ್ ಕ್ಯಾಂಡಿ ಬ್ಯಾನ್ ಮಾಡುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ನಾವು ತ್ಯಾಗ ಮಾಡಿ ಬಂದವರು, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್

    ಗೋಬಿ ಮಂಚೂರಿಯಲ್ಲಿ Sunset Yellow ಹಾಗೂ Tartrazine ಹಾನಿಕಾರಕ ಅಂಶ ಇರೋದ್ರಿಂದ ಎರಡೂ ರಾಸಾಯನಿಕ ಅಂಶಗಳನ್ನು ಬಳಕೆ ಮಾಡದೇ ಇರುವ ಥರ ಆರೋಗ್ಯ ಸಚಿವರು ಘೋಷಣೆ ಮಾಡುವ ಸಾಧ್ಯತೆ ಇದೆ. ಟೆಸ್ಟಿಂಗ್‌ನಲ್ಲಿ ಹಾನಿಕಾರಕ ಅಂಶ ಇರೋದು ವರದಿಯಲ್ಲಿ ತಿಳಿದು ಬಂದಿರುವುದಾಗಿ ಪಬ್ಲಿಕ್ ಟಿವಿಗೆ ಆಹಾರ ಮತ್ತು ಸುರಕ್ಷತಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಕಾಂಗ್ರೆಸ್ ಶಾಸಕ ವಾಸು ಅನಾರೋಗ್ಯದಿಂದ ನಿಧನ

    ರೊಡಮೈನ್ ಬಿ ಸೇವನೆಯಿಂದ ಆರೋಗ್ಯದ ಮೇಲೆ ಪರಿಣಾಮ ಏನು?
    ರೊಡಮೈನ್ ಬಿ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳಿದ್ದು, ಕಣ್ಣು ದೃಷ್ಟಿ ಸಮಸ್ಯೆ ಹಾಗೂ ಲಿವರ್ ಸಂಬಂಧಿ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಗೋಬಿಯಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಖಾಯಿಲೆ ಬರುವ ಸಾಧ್ಯತೆಗಳು ಹೆಚ್ಚಿವೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಬಳ್ಳಾರಿಯಲ್ಲಿ ತನಿಖೆ ಚುರುಕು, ಬಾಂಬರ್‌ನಂತೆ ಡ್ರೆಸ್‌ ಹಾಕಿ ಓರ್ವನ ವಿಚಾರಣೆ

    ತಮಿಳುನಾಡಿನ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ಬಾಂಬೆ ಮಿಠಾಯಿಯಲ್ಲಿ ರೊಡಮೈನ್-ಬಿ ಅಂಶ ಇರುವುದು ದೃಢಪಟ್ಟಿದೆ. ಹೀಗಾಗಿ ಅಲ್ಲಿ ಬ್ಯಾನ್ ಆಗಿತ್ತು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ರಾಜ್ಯದಲ್ಲೂ ಬಾಂಬೆ ಮಿಠಾಯಿಯ ಮಾದರಿಗಳನ್ನು ತೆಗೆದುಕೊಳ್ಳಲಾಗಿತ್ತು. ಇದನ್ನೂ ಓದಿ: ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗೋದು ಅನುಮಾನ – ಮೈಸೂರಿನಿಂದ ಯದುವೀರ್‌ ಸ್ಪರ್ಧೆ?

    ಗೋಬಿ ಮಂಚೂರಿಗೆ ಬಳಕೆ ಮಾಡುವ ಕೆಲವೊಂದು ಕಲರ್‌ಗಳನ್ನು ಬ್ಯಾನ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಅಲ್ಲದೇ ಗೋಬಿ ಮಂಚೂರಿಗೆ ಬಳಕೆ ಮಾಡುವ ಮೂರು ಬಗೆಯ ಕಲರ್‌ಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದೆ. Sunset Yellow ಕಲರ್, Tartrazine, ಸಿಂಥೆಟಿಕ್ ಕಲರ್ ಸಾಸ್‌ಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದ್ದು, ಕಲರ್‌ಗಳನ್ನ ಬಳಕೆ ಮಾಡದೇ ಗೋಬಿಮಂಚೂರಿಗೆ ಮಾರಾಟಕ್ಕೆ ಅವಕಾಶ ಕೊಡಬಹುದು. ಕಾಟನ್ ಕ್ಯಾಂಡಿ ಸಂಪೂರ್ಣ ಬ್ಯಾನ್‌ಗೆ ನಿರ್ಧರಿಸುವ ಸಾಧ್ಯತೆ ಹೆಚ್ಚಾಗಿದ್ದು, ಸೋಮವಾರ ಮಹತ್ವದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವರು ಈ ಬಗ್ಗೆ ಘೋಷಣೆ ಮಾಡೋ ಸಾಧ್ಯತೆಯಿದೆ. ಇದನ್ನೂ ಓದಿ: ರಣಬಿಸಿಲ ನಡುವೆ ದಾಖಲೆಯ ವಿದ್ಯುತ್ ಬಳಕೆ – ಲೋಡ್ ಶೆಡ್ಡಿಂಗ್ ಭೀತಿ