Tag: cottonpet police

  • ನಾಯಿ ಮಾಂಸದ ವದಂತಿ – ಮಟನ್ ಶಾಪ್‌ಗಳ ಪರಿಶೀಲನೆಗೆ ಮುಂದಾದ ಆಹಾರ ಸುರಕ್ಷತಾ ಇಲಾಖೆ

    ನಾಯಿ ಮಾಂಸದ ವದಂತಿ – ಮಟನ್ ಶಾಪ್‌ಗಳ ಪರಿಶೀಲನೆಗೆ ಮುಂದಾದ ಆಹಾರ ಸುರಕ್ಷತಾ ಇಲಾಖೆ

    ಬೆಂಗಳೂರು: ನಗರದಲ್ಲಿ (Bengaluru) ನಾಯಿ ಮಾಂಸದ (Dog Meat) ವದಂತಿ ಹರಡುತ್ತಿದ್ದಂತೆ, ಮಾಂಸ ಎಂದರೆ ಒಂದು ಕ್ಷಣ ಯೋಚಿಸುವ ಪರಿಸ್ಥಿತಿ ಜನರ ಮನಸ್ಸಲ್ಲಿ ನಿರ್ಮಾಣವಾಗಿದೆ. ಇನ್ನೂ ವದಂತಿ ಬೆನ್ನಲ್ಲೇ ಆಹಾರ ಸುರಕ್ಷತಾ ಇಲಾಖೆ (Health and Food Safety Department) ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಬೆಂಗಳೂರಿನ ಮಟನ್ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲು ತೀರ್ಮಾನಿಸಿದೆ.

    ಮಟನ್ ಸ್ವಚ್ಚತೆ ಮತ್ತು ಅಂಗಡಿಗಳಲ್ಲಿಡೋ ಕೋಲ್ಡ್ ಸ್ಟೋರೇಜ್‌ನಲ್ಲಿರೋ ಮಾಂಸ ಎಷ್ಟು ಸೇಫ್? ಎಂಬ ಬಗ್ಗೆ ಪರಿಶೀಲನೆ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ. ಅದಕ್ಕಾಗಿ ಬೆಂಗಳೂರಿನ ಕೆಲವೆಡೆ ಸ್ಯಾಂಪಲ್‌ಗಳನ್ನು ಸಹ ಸಂಗ್ರಹಿಸಲಾಗಿದೆ. ಇನ್ನೂ ವದಂತಿ ಬೆನ್ನಲ್ಲೇ ಹೋಟೆಲ್ ಮಾಲೀಕರು ಕಳವಳ ವ್ಯಕ್ತಪಡಿಸಿದ್ದು, ತಾವೇ ಖುದ್ದಾಗಿ ಮಾಂಸ ಖರೀದಿಗೆ ಮುಂದಾಗಿದ್ದಾರೆ.

    ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜಾಗಿದ್ದ ಮಾಂಸ ನಾಯಿಯದ್ದು ಎಂಬ ಆರೋಪವನ್ನು ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ಹಾಗೂ ಆತನ ಸಹಚರರು ಮಾಡಿದ್ದರು. ಇದೇ ವಿಚಾರವಾಗಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಮಾಂಸವಿದ್ದ ಬಾಕ್ಸ್‌ಗಳನ್ನು ತಡೆದು  ಪ್ರತಿಭಟಿಸಿದ್ದರು. ಇದಾದ ಬೆನ್ನಲ್ಲೇ ಮಾಂಸದ ಕ್ವಾಲಿಟಿ ಬಗ್ಗೆ ಪ್ರಶ್ನೆ ಎದ್ದಿದೆ. ಈ ಘಟನೆಯಿಂದ ಅಲರ್ಟ್ ಆಗಿರುವ ಆಹಾರ ಮತ್ತು ಸುರಕ್ಷತಾ ಇಲಾಖೆ ಬೆಂಗಳೂರಿನಲ್ಲಿ ಮಟನ್ ಅಂಗಡಿಗಳ ಪರಿಶೀಲನೆಗೆ ಮುಂದಾಗಿದೆ.

    ಬೆಂಗಳೂರಿನ ಎಲ್ಲಾ ಪ್ರದೇಶದ ಮಟನ್ ಅಂಗಡಿಗಳು, ದೊಡ್ಡ ಹೋಟೆಲ್ ಮತ್ತು ದೊಡ್ಡ ಮಟನ್ ಶಾಪ್ ಗಳಲ್ಲಿ ಮಾಂಸವನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಶೇಖರಣೆ ಮಾಡ್ತಾರೆ. ಕೋಲ್ಡ್ ಸ್ಟೋರೇಜ್ ಮಾಂಸದ ಕ್ವಾಲಿಟಿ ಚೆಕ್ ಮಾಡಲಿದ್ದಾರೆ. -18 ಡಿಗ್ರಿ ಸೆಲ್ಸಿಯಸ್ ಇದ್ರೆ 8 ರಿಂದ 10 ತಿಂಗಳುಗಳ ಕಾಲ ತಿನ್ನಬಹುದಂತೆ. 4 ಡಿಗ್ರಿ ಸೆಂಟಿಗ್ರೇಡ್‌ನಲ್ಲಿ ಇದ್ರೆ ಮಾಂಸ ಚೆನ್ನಾಗಿರಲಿದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಮಾಡಲಾಗುತ್ತದೆ.

    ಇದೀಗ ರಾಜಸ್ಥಾನದಿಂದ ಬಂದಿರುವ ಮಾಂಸ ಯಾವ ಪ್ರಾಣಿಯದ್ದು ಎಂದು ತಿಳಿಯಲು ಹೈದರಾಬಾದ್‌ನ ಎಫ್‌ಎಸ್‌ಎಲ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಈ ಬಗ್ಗೆ ವರದಿ ಬರಲು 10 ರಿಂದ 14 ದಿನ ಬೇಕಾಗಿದ್ದು, ಈ ಅವಧಿಯಲ್ಲಿ ನಗರದ ಮಾಂಸದಂಗಡಿಗಳ ಪರಿಶೀಲನೆ ನಡೆಯಲಿದೆ.

  • ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

    ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

    ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

    ಶನಿವಾರ ಕಾಟನ್ ಪೇಟೆ ಪೊಲೀಸರ (Cottonpet Police) ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿಯನ್ನ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ವಿಕ್ಟೋರಿಯಾ ಆಸ್ಪತ್ರೆಯಿಂದ ಕರೆತಂದಿದ್ದ ಪೊಲೀಸರು ಕೋರಮಂಗಲದ ಜ್ಯೂಡಿಷಿಯಲ್ ಬ್ಲಾಕ್ ನಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಈ ವೇಳೆ 5ನೇ ಎಸಿಎಂಎಂ ಕೋರ್ಟ್ (ACMM Court) ನ್ಯಾಯಾಧೀಶ ಶಿವಕುಮಾರ್‌ ಅವರು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಸೋಮವಾರ (ಜು.29) ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

    ಪುನೀತ್‌ ಕೆರೆಹಳ್ಳಿ ಅರೆಸ್ಟ್‌ ಆಗಿದ್ದೇಕೆ?
    ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.

    ಬಂಧನವಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿತ್ತು. ಹಾಗಾಗಿ ಸಂಜೆ ವೇಳೆ ಕರೆದೊಯ್ದು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.

    ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.

  • ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ – ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

    ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ – ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.

    ಬಂಧನವಾಗುತ್ತಿದ್ದAತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

    ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ. ಅದರೆ ಇನ್ನೂ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

    ಬೆಂಗಳೂರಿನ ಐಶಾರಾಮಿ ಹಾಗೂ ಸಾಮಾನ್ಯ ಹೋಟೆಲ್‌ಗಳಿಗೆ ರಾಜಸ್ಥಾನದಿಂದ ಬರುತ್ತಿದ್ದ ಮಾಂಸ ಸರಬರಾಜಾಗುತ್ತಿತ್ತು. ಪ್ರಕರಣ ಸಂಬಂಧ ಮಾಂಸ ಸರಬರಾಜು ಮಾಡುತ್ತಿದ್ದ ಅಬ್ದುಲ್ ರಜಾಕ್ ಎಂಬವರನ್ನು ಇಂದು (ಶನಿವಾರ) ವಿಚಾರಣೆ ಮಾಡುವ ಸಾಧ್ಯತೆ ಇದೆ.

    ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.