Tag: Council elections

  • ತೀವ್ರ ಕುತೂಹಲ ಕೆರಳಿಸಿರುವ ಪರಿಷತ್ ಚುನಾವಣಾ ಫಲಿತಾಂಶ – ಇಂದು ಮತ ಏಣಿಕೆ

    ತೀವ್ರ ಕುತೂಹಲ ಕೆರಳಿಸಿರುವ ಪರಿಷತ್ ಚುನಾವಣಾ ಫಲಿತಾಂಶ – ಇಂದು ಮತ ಏಣಿಕೆ

    ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿರುವ ವಿಧಾನಪರಿಷತ್ ಚುನಾವಣಾ ಮತಗಳ ಏಣಿಕೆ ಕಾರ್ಯಕ್ಕೆ ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

    ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಡಿಸೆಂಬರ್ 10 ರಂದು ಚುನಾವಣೆ ನಡೆದಿತ್ತು. ಕಣದಲ್ಲಿ ನಾಲ್ವರು ಅಭ್ಯರ್ಥಿಗಳಿದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಇಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯ ಆರಂಭವಾಗಲಿದೆ. ಇಂದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಒಂದು ವೇಳೆ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಯಾವೊಬ್ಬ ಅಭ್ಯರ್ಥಿಯೂ ಗೆಲ್ಲದಿದ್ದಲ್ಲಿ, ಎರಡನೇ ಪ್ರಾಶಸ್ತ್ಯದ ಮತಗಳ ಏಣಿಕೆ ಮಾಡಬೇಕಾಗುತ್ತದೆ. ಈ ರೀತಿ ಆದಲ್ಲಿ ಮಾತ್ರ ಫಲಿತಾಂಶ ಪ್ರಕಟವಾಗುವುದು ತಡವಾಗಲಿದೆ. ಇದನ್ನೂ ಓದಿ: ‘ಪಾಕಿಸ್ತಾನಿ ಆಹಾರೋತ್ಸವ’ ಎಂದು ಬರೆದ ಫ್ಲೆಕ್ಸ್ ಕಿತ್ತೆಸೆದು ಬೆಂಕಿಯಲ್ಲಿ ಸುಟ್ಟ ಬಜರಂಗ ದಳ

    ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಬಿಜೆಪಿಯಿಂದ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜೆಡಿಯು ಅಭ್ಯರ್ಥಿಯಾಗಿ ಶಶಿಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರವಿ ಸ್ಪರ್ಧಿಸಿದ್ದರು. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಆ ಪಕ್ಷದ ಜನಪ್ರತಿನಿಧಿಗಳು ಯಾರಿಗೆ ತಮ್ಮ ಮತ ನೀಡಿದ್ದಾರೆ ಎಂಬುದು ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.

    ಶಿವಮೊಗ್ಗ ಜಿಲ್ಲೆಯ 7 ಹಾಗೂ ದಾವಣಗೆರೆ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಒಳಗೊಂಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಶೇ.99.86ರಷ್ಟು ಮತದಾನವಾಗಿತ್ತು. ಮತ ಎಣಿಕೆ ಕಾರ್ಯ ನಡೆಯುವ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹ್ಯಾದ್ರಿ ಕಾಲೇಜಿನ ವ್ಯಾಪ್ತಿಯಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 15 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ. ಇದನ್ನೂ ಓದಿ: ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪುಟ ಸೇರಿದ 5 ವರ್ಷದ ಪೋರಿ

  • ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೀದರ್‌ನಲ್ಲಿ ಕುದುರೆ ವ್ಯಾಪಾರ ಜೋರು

    ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೀದರ್‌ನಲ್ಲಿ ಕುದುರೆ ವ್ಯಾಪಾರ ಜೋರು

    ಬೀದರ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಕುದುರೆ ವ್ಯಾಪಾರ ಜೋರಾಗಿದ್ದು, ಬಸವಕಲ್ಯಾಣ ತಾಲೂಕಿನ ಮುಚಳಂಬ ಗ್ರಾಮ ಪಂಚಾಯತಿಯ ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿಗಳಿಗೆ ಕಾಂಗ್ರೆಸ್ ಮುಖಂಡರು ಹಣದ ಆಮಿಷ ಒಡ್ಡಿದ್ದಾರೆ.

    ಕಾಂಗ್ರೆಸ್ ಮುಖಂಡ ಆನಂದ್ ದೇವಪ್ಪ, ನರಶೆಟ್ಟಿ ಸೇರಿದಂತೆ ಕಾಂಗ್ರೆಸ್ ಪ್ರಮುಖರು ಮುಚಳಂಬ ಗ್ರಾಮದ ಲಿಂಗೇಶ್ವರ ದೇವಸ್ಥಾನದಲ್ಲಿ ಕುದುರೆ ವ್ಯಾಪಾರ ಮಾಡಿದ ವೀಡಿಯೋ ಈಗಾ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಮಕ್ಕಳನ್ನು ಪೋಷಕರು ಈ ರೀತಿ ಕಾಪಾಡಿಕೊಳ್ಳಿ

    ಬಿಜೆಪಿ ಒಂದು ಮತಕ್ಕೆ ಅಡ್ವಾನ್ಸ್ ಆಗಿ 10 ಸಾವಿರ ನೀಡುತ್ತಿದ್ದು, ನಾವು ಅಡ್ವಾನ್ಸ್ ಆಗಿ 20 ಸಾವಿರ ನೀಡುತ್ತೇವೆ. ಬಳಿಕ ಬಿಜೆಪಿ 60 ರಿಂದ 70 ಸಾವಿರ ಫಿಕ್ಸ್ ಮಾಡಿದೆ. ನಾವು ಇನ್ನು ಹೆಚ್ಚಿನ ಹಣ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಹಣದ ಆಮಿಷ ಹಾಕಿದ್ದಾರೆ.

    BJP - CONGRESS

    ಈ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹುಮ್ನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಸಹೋದರ ಭೀಮ್ ರಾವ್ ಬಿ ಪಾಟೀಲ್ ಸ್ಪರ್ಧೆ ಮಾಡಿದ್ದಾರೆ.

  • ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ ಇಲ್ಲ: ದೇವೇಗೌಡ

    ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ ಇಲ್ಲ: ದೇವೇಗೌಡ

    ತುಮಕೂರು: ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.

    ಪರಿಷತ್ ಚುನಾವಣೆ ಹಿನ್ನೆಲೆ, ತುಮಕೂರು ತಾಲೂಕಿನ ಬಳಗೆರೆಯ ಶಾಸಕ ಗೌರಿಶಂಕರ್ ನಿವಾಸದಲ್ಲಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮತ್ತು ಪರಿಷತ್ ಚುನಾವಣೆಯ ಬಗ್ಗೆ ಮಾತನಾಡಿದರು.

    ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಗೆ ಇರುವಂತಹ ಕಷ್ಟ ಒಂದು ಮಾತಲ್ಲಿ ಹೇಳೋಕೆ ಆಗಲ್ಲ. ಇಡೀ ಪ್ರಪಂಚವನ್ನ ಪೀಡಿಸ್ತಿರೋ ಕೊರೊನಾನ ಎದುರಿಸೋದು ಅಷ್ಟು ಸುಲಭ ಅಲ್ಲ. ನಮ್ಮ ದೇಶ ಚಿಕ್ಕ ದೇಶವಲ್ಲ, 130 ಕೋಟಿ ಜನಸಂಖ್ಯೆ ಇರೋ ದೇಶವಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ಆರ್ಥಿಕ ಅವ್ಯವಹಾರ ಇದೆ ಎಂದು ಅಧಿಕೃತ ವಿರೋಧ ಪಕ್ಷ ಇದರ ಬಗ್ಗೆ ವ್ಯಾಖ್ಯಾನ ಮಾಡ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ರಸ್ತೆ ಗುಂಡಿ – ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ

    ಎಂಎಲ್ ಸಿ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಅನಿಲ್‍ಕುಮಾರ್ ಅವರನ್ನು ಸ್ಪರ್ಧೆಗೆ ನಿಲ್ಲಿಸಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾಯಿತ ಮತದಾರರನ್ನು ಭೇಟಿಯಾಗುತ್ತಿದ್ದೇವೆ. 7 ಕ್ಷೇತ್ರಗಳಲ್ಲಿ ಮಾತ್ರ ನಾವು ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲರೂ ಚುನಾವಣೆಯಲ್ಲಿ ಗೆಲ್ಲಲೇ ಬೇಕು. ಶಾಸಕರು, ಮಾಜಿ ಶಾಸಕರು, ಮುಖಂಡರು ಎಲ್ಲರು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿ ಬಹಳ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇವೆ. ವಿಜಯಪುರದಲ್ಲಿ 890, ಗುಲ್ಬರ್ಗಾದಲ್ಲಿ ಸಾವಿರ ಚಿಲ್ಲರೆ ವೋಟ್ ಗಳಿವೆ. ಬೀದರ್ ನಲ್ಲಿ 490, ರಾಯಚೂರಿನಲ್ಲಿ 890 ವೋಟ್ ಗಳಿವೆ. ಧಾರವಾಡ, ಗದಗ, ಹಾವೇರಿಯಲ್ಲಿ ವೋಟ್ ಗಳಿವೆ. ಅಲ್ಲಿ ನಾವು ಅಭ್ಯರ್ಥಿಗಳನ್ನು ಹಾಕಲು ಸಾಧ್ಯವಾಗಿಲ್ಲ. ಇಲ್ಲಿ ಕಾಂಗ್ರೆಸ್, ಬಿಜೆಪಿ ಅವರಿಗೆ ಹೆಚ್ಚಿನ ಮತಗಳಿವೆ. ಭಾನುವಾರ ಸಭೆ ನಡೆಸಿ ಧಾರವಾಡ, ಗದಗ ಹಾವೇರಿಯಲ್ಲಿ ಮತಗಳನ್ನು ಯಾರಿಗೆ ಕೊಡಬೇಕು ಎಂದು ತಿಳಿಸುತ್ತೇವೆ ಎಂದು ಹೇಳಿದರು.

    ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ ಇಲ್ಲ. ಇಲ್ಲಿ ಬಿಜೆಪಿ ಕಾಂಗ್ರೆಸ್ ಅವರು ಸತ್ಯವಂತರು ಎಂದು ಹೇಳೋರು ಇದ್ದರೆ ಚರ್ಚೆ ಮಾಡೋಣ. ಮಣ್ಣಿನಮಗ ಅಂತಾ ನನ್ನ ತಂದೆ ನನಗೆ ನಾಮಕರಣ ಮಾಡಿಲ್ಲ. ಯಾರು ನಾಮಕರಣ ಮಾಡಿದ್ರೋ ನನಗೆ ಗೊತ್ತಿಲ್ಲ. ಯಾರು ಹೇಳಿದ್ರೋ, ಯಾವಾಗ ಹೇಳಿದ್ರೋ ಗೊತ್ತಿಲ್ಲ. ಅದನ್ನ ಹೇಳಿಕೊಂಡು ಬರ್ತಿದ್ದಾರೆ, ಯಾರು ಅಂತಾ ಹುಡುಕಲಿ. ಹೀಗೆ ಹೇಳಿ ಅಂತಾ ನಾನು ಯಾರಿಗಾದರೂ ಹೇಳಿದ್ದೀನಾ. ಜನರಿಗೆ ನನ್ನ ಮೇಲೆ ಪ್ರೀತಿ ಹಾಗೂ ಹೋರಾಟದ ಮೇಲೆ ನಂಬಿಕೆಯಿಂದ ಹಾಗೆ ಕೂಗ್ತಾರೆ ಎಂದರು. ಇದನ್ನೂ ಓದಿ: ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

    ಮಾಜಿ ಸಿಎಂ ಕುಮಾರಸ್ವಾಮಿ ಅವರು ಆ ಭಾಗದ ಮುಖಂಡರ ಸಭೆ ನಡೆಸಲಿದ್ದಾರೆ. ಯಾರಿಗೆ ಬೆಂಬಲ ನೀಡಬೇಕು ಎಂದು ಭಾನುವಾರ ತೀರ್ಮಾನ ಮಾಡುತ್ತೇವೆ. ತುಮಕೂರು ಜಿಲ್ಲೆಯ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಈ ಚುನಾವಣೆಯಲ್ಲಿ ಸ್ವಂತ ಶಕ್ತಿಯಿಂದ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

     

  • ಯಾವುದೇ ಕಾರಣಕ್ಕೂ ನಾವು ಜೆಡಿಎಸ್‍ನಿಂದ ಪರಿಷತ್‍ಗೆ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ

    ಯಾವುದೇ ಕಾರಣಕ್ಕೂ ನಾವು ಜೆಡಿಎಸ್‍ನಿಂದ ಪರಿಷತ್‍ಗೆ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ

    ಬೆಂಗಳೂರು: ಯಾವುದೇ ಕಾರಣಕ್ಕೂ ನಾವು ಜೆಡಿಎಸ್ ನಿಂದ ಪರಿಷತ್ ಗೆ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಚಿವ ಮತ್ತು ಸಹಕಾರ ಮಹಾ ಮಂಡಳಿ ಅಧ್ಯಕ್ಷ ಜಿಟಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

    ಮೈಸೂರು ಪರಿಷತ್ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಿಂದ ಪರಿಷತ್ ಚುನಾವಣೆಗೆ ನನ್ನ ಕುಟುಂಬದಿಂದ ಯಾರು ನಿಲ್ಲೋದಿಲ್ಲ. ನನ್ನ ಮಗನೂ ಸ್ಪರ್ಧೆ ಮಾಡೋದಿಲ್ಲ. ಯಾವುದೇ ಕಾರಣಕ್ಕೂ ನಾವು ಜೆಡಿಎಸ್ ನಿಂದ ಪರಿಷತ್ ಗೆ ಸ್ಪರ್ಧೆ ಮಾಡೊಲ್ಲ. ನಾನು ಎರಡೂವರೇ ವರ್ಷಗಳಿಂದ ಜೆಡಿಎಸ್ ನಿಂದ ದೂರ ಇದ್ದೇನೆ. ಅವರು ನಮ್ಮನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆದಿಲ್ಲ, ನಾನು ಹೋಗಿಲ್ಲ. ಈಗ ನಮ್ಮ ಕ್ಷೇತ್ರದಲ್ಲಿ ಅಧ್ಯಕ್ಷನನ್ನ ನೇಮಕ ಮಾಡಿ ನನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ನನಗೆ ಕರೆ ಮಾಡಿ ಪಕ್ಷ ಬಿಡಬೇಡಿ ಅಂದ್ರು. ನಾನು ಅವರಿಗೆ ಕ್ಷಮಿಸಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಪ್ಪು ಮರಕೋತಿ ಆಟವಾಡುತ್ತಿದ್ದನ್ನು ಸದಾ ನೆನಪಿಸಿಕೊಳ್ಳುವ ಬಾಲ್ಯದ ಗೆಳೆಯ

    HDD

    ನಿಖಿಲ್ ಕೂಡಾ ನನ್ನ ಮನೆಗೆ ಬಂದಿದ್ದರು. ಅವರಿಗೆ ಎಲ್ಲ ವಿಷಯ ವಿವರವಾಗಿ ಹೇಳಿದ್ದೇನೆ. ನನಗೆ ಎರಡು ಬಾರಿ ಕುಮಾರಸ್ವಾಮಿ ಅವರು ಮಂತ್ರಿ ಸ್ಥಾನ ತಪ್ಪಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಾನು ಕೇಳಿದ ಮಂತ್ರಿ ಸ್ಥಾನ ಕೊಡಲಿಲ್ಲ. ಹುಣಸೂರು ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ನಾಯಕರಿಗೆ ನನ್ನ ಮಗನನ್ನ ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇನೆ. ಕುಮಾರಸ್ವಾಮಿ ಅವರಿಂದ ನನಗೆ ಅನ್ಯಾಯ ಆಗಿದೆ. ಈಗ ನಮ್ಮ ಕುಟುಂಬದಿಂದ ಪರಿಷತ್ ಗೆ ಸ್ಪರ್ಧೆ ಮಾಡ್ತಾರೆ ಎಂದು ಸುದ್ದಿ ಹರಡಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾವು ಜೆಡಿಎಸ್‍ನಿಂದ ಸ್ಪರ್ಧೆ ಮಾಡೊಲ್ಲ. ಟಿಕೆಟ್ ಕೊಡೋಕೆ ನಾವು ಸಿದ್ಧ ಇದ್ದೇವೆ ಅವರು ತೆಗೆದುಕೊಳ್ಳುತ್ತಿಲ್ಲ ಎಂದು ತೋರಿಸೋಕೆ ಸಾರಾ ಮಹೇಶ್ ಹೀಗೆ ಹೇಳ್ತಿದ್ದಾರೆ ಎಂದು ಆರೋಪಿಸಿದರು.

    ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಬಂದ ಸಮಯದಲ್ಲಿ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ತೀರ್ಮಾನ ಮಾಡ್ತೀನಿ. ಒಂದು ಸಾರಿ ಜನರನ್ನು ಕೇಳದೆ ಬಿಜೆಪಿಗೆ ಹೋಗಿ ಅನುಭವಿಸಿದ್ದೇನೆ. ಮತ್ತೆ ಆ ತಪ್ಪು ಮಾಡಲ್ಲ. ಕ್ಷೇತ್ರದ ಜನರ ಅಭಿಪ್ರಾಯ ಕೇಳಿ ಮುಂದಿನ ತೀರ್ಮಾನ ಮಾಡ್ತೀನಿ ಎಂದು ಅವರು ಉತ್ತರಿಸಿದರು. ಇದನ್ನೂ ಓದಿ: ಸಣ್ಣ ವಯಸ್ಸಿನ ದೊಡ್ಡ ಕಲಾವಿದನನ್ನು ಕಳೆದುಕೊಂಡಿದ್ದೇವೆ: ರಮೇಶ್ ಜಾರಕಿಹೊಳಿ

    ಜಿಟಿ ದೇವೇಗೌಡರು 68ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದು, ಈ ಕಾರ್ಯಕ್ರಮವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಕಾರ್ಯಕ್ರಮ ಸಹಕಾರ ಇಲಾಖೆ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನಲೆ ಸರಳವಾಗಿ ಆಚರಣೆ ಮಾಡಲಾಯಿತು. ಈ ವೇಳೆ ಸಹಕಾರ ಪತ್ರಿಕೆಯನ್ನು ಸೋಮಶೇಖರ್ ಅವರು ಬಿಡುಗಡೆ ಮಾಡಿದರು.

  • ಪರಿಷತ್ ಚುನಾವಣಾ ಕಾವು: ಸಭಾಪತಿ ಹೊರಟ್ಟಿ ಬೆಂಬಲಿಗನಿಂದ ಜೀವ ಬೆದರಿಕೆ

    ಪರಿಷತ್ ಚುನಾವಣಾ ಕಾವು: ಸಭಾಪತಿ ಹೊರಟ್ಟಿ ಬೆಂಬಲಿಗನಿಂದ ಜೀವ ಬೆದರಿಕೆ

    ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣಾ ಕಾವು ಏರುತ್ತಿದೆ. ಚುನಾವಣೆಗೆ ಆರೇಳು ತಿಂಗಳು ಬಾಕಿ ಇದೆ. ಆದ್ರೆ ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಭಿಮಾನಿಗಳು ಬ್ಯಾಟ್ ಬೀಸುತ್ತಿದ್ದಾರೆ. ಈ ವಿಚಾರವಾಗಿಯೇ ಬಸವರಾಜ ಹೊರಟ್ಟಿ ಬೆಂಬಲಿಗರೊಬ್ಬರು, ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೊರಟ್ಟಿಯವರ ಬೆಂಬಲಿಗ ಗಜಾನನ ಅನ್ವೇಕರ್, ರವೀಂದ್ರ ಪಾಟೀಲ್ ಎಂಬವರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಬಸವರಾಜ್ ಹೊರಟ್ಟಿಯವರು ವಿರುದ್ಧ ಸಂಘ ಕಟ್ಟಿಕೊಂಡು ಅವರ ವಿರುದ್ಧ ಬರುವ ಚುನಾವಣೆಯಲ್ಲಿ ಪ್ರಚಾರ ಮಾಡಬಾರದು ಎಂದು ಗಜಾನನ ಅನ್ವೇಕರ್, ರವೀಂದ್ರ ಪಾಟೀಲ್‍ಗೆ ಧಮ್ಕಿ ಹಾಕಿರುವ ಬಗ್ಗೆ ಆರೋಪವಿದೆ. ಇದನ್ನೂ ಓದಿ: ಅಮರೀಂದರ್‌ ಹೊಸ ಪಕ್ಷ ಸ್ಥಾಪನೆ – ರೈತರ ಸಮಸ್ಯೆ ಪರಿಹಾರವಾದರೆ ಬಿಜೆಪಿ ಜೊತೆ ಮೈತ್ರಿ

    ತನ್ನ ಸಹರಚರೊಂದಿಗೆ ಆಗಮಿಸಿದ ಗಜಾನನ ಹಾಗೂ ತನ್ನಿಬ್ಬರು ಸಹಚರರು ರವೀಂದ್ರ ಪಾಟೀಲ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಶೋಕ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಇದನ್ನೂ ಓದಿ: ಇಂದು ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಭವಿಷ್ಯ ನಿರ್ಧಾರ