Tag: County Cricket

  • ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಲಂಡನ್: ಇಂಗ್ಲೆಂಡ್‍ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್‍ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಆಟಗಾರರಾದ ಚೇತೇಶ್ವರ ಪೂಜಾರ, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿ ಭರ್ಜರಿ ಪ್ರದರ್ಶನ ನೀಡಿ ಗಮನಸೆಳೆದಿದ್ದಾರೆ.

    ಟೀಂ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯ ಪೂಜಾರ ಇದೀಗ ಸಸೆಕ್ಸ್ ತಂಡದ ನಾಯಕರಾಗಿದ್ದು, ಮಿಡೆಕ್ಸ್ ವಿರುದ್ಧದ ಪಂದ್ಯದಲ್ಲಿ ಪೂಜಾರ 231 ರನ್ (403 ಎಸೆತ, 21 ಬೌಂಡರಿ, 3 ಸಿಕ್ಸ್) ಬಾರಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.  ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಟಿ20 ಕ್ರಿಕೆಟ್ ಲೀಗ್‍ನಲ್ಲಿ ಫ್ರಾಂಚೈಸಿ ಖರೀದಿಸಿದ ರಿಲಯನ್ಸ್ ಇಂಡಸ್ಟ್ರೀಸ್

    ಇತ್ತ ಟೀಂ ಇಂಡಿಯಾದಿಂದ ಹೊರಗುಳಿದಿರುವ ಆಲ್‍ರೌಂಡರ್ ವಾಷಿಂಗ್ಟನ್ ಸುಂದರ್ ಕೌಂಟಿ ಕ್ರಿಕೆಟ್‍ನಲ್ಲಿ ನಾರ್ಥಾಂಪ್ಟನ್‍ಶೈರ್ ತಂಡದ ಪರ ಆಡುತ್ತಿದ್ದು, ಲಂಕಾಶೈರ್ ವಿರುದ್ಧದ ಪಂದ್ಯದಲ್ಲಿ 22 ಓವರ್ ಎಸೆದು 1 ಮೇಡನ್ ಓವರ್ ಸಹಿತ 5 ವಿಕೆಟ್ ಕಿತ್ತು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಕರಾವಳಿಯ ಉಸೇನ್ ಬೋಲ್ಟ್ ಖ್ಯಾತಿಯ ಕಂಬಳ

    ಕೆಂಟ್ ತಂಡದ ಪರ ಆಡುತ್ತಿರುವ ಇನ್ನೋರ್ವ ಟೀಂ ಇಂಡಿಯಾ ವೇಗಿ ನವದೀಪ್ ಸೈನಿ ವಾರ್ವಿಕ್‍ಷೈರ್ ವಿರುದ್ಧದ ಪಂದ್ಯದಲ್ಲಿ 18 ಓವರ್ ಎಸೆದು 4 ಮೇಡನ್ ಓವರ್ ಸಹಿತ 5 ವಿಕೆಟ್ ಪಡೆದಿದ್ದಾರೆ.

    ಈ ಮೂವರು ಆಟಗಾರರು ಕೂಡ ಮತ್ತೆ ಟೀಂ ಇಂಡಿಯಾ ಪರ ಕಂಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ. ಪೂಜಾರ ಟೆಸ್ಟ್ ತಂಡಕ್ಕೆ ಮಾತ್ರ ಸೀಮಿತವಾದರೆ, ಸೈನಿ ಮತ್ತು ಸುಂದರ್ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯಲು ಪರದಾಡುತ್ತಿದ್ದಾರೆ. ಆಗೊಮ್ಮೆ ಈಗೊಮ್ಮೆ ತಂಡಕ್ಕೆ ಎಂಟ್ರಿಕೊಟ್ಟು ಹೊರ ಹೋಗುತ್ತಿದ್ದಾರೆ. ಮುಂದಿನ ಟಿ20 ವಿಶ್ವಕಪ್‍ಗೂ ಮುನ್ನ ತಂಡದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಇವರಿಬ್ಬರು ಮೈದಾನದಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೌಂಟಿ ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ಔಟ್

    ಕೌಂಟಿ ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ಔಟ್

    ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ನ ಕೌಂಟಿ ಕ್ರಿಕೆಟ್ ಆಡುತ್ತಿಲ್ಲ ಎಂದು ಬಿಸಿಸಿಐ ಸ್ಪಷ್ಟನೆ ನೀಡಿದೆ.

    ನಾಯಕ ವಿರಾಟ್ ಕೊಹ್ಲಿ ಕುತ್ತಿಗೆ ಉಳುಕು ಹಾಗೂ ಬೆನ್ನು ಹುರಿ (ಹರ್ನಿಯೇಟೆಡ್ ಡಿಸ್ಕ್) ಸಮಸ್ಯೆಯಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಹಂತಕ್ಕೆ ತಲುಪಿದ್ದಾರೆ. ಹೀಗಾಗಿ ಅವರು ಇಂಗ್ಲೆಂಡ್‍ನ ಕೌಂಟಿ ಕ್ರಿಕೆಟ್ ಪಂದ್ಯಗಳಿಗೆ ಲಭ್ಯವಾಗುತ್ತಿಲ್ಲ ಎಂದು ಬಿಸಿಸಿಐ ಗುರುವಾರ ಸ್ಪಷ್ಟನೆ ನೀಡಿದೆ.

    ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮಹತ್ವದ ಸರಣಿ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೊಹ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂದು ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

    ಶಸ್ತ್ರ ಚಿಕಿತ್ಸೆಗೆ ಒಳಗಾದ ಬಳಿಕ ಕೆಲ ದಿನಗಳು ವಿಶ್ರಾಂತಿ ಪಡೆಯಲಿದ್ದು, ಜೂನ್ 15 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿಯಿಂದ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ವೈದ್ಯಕೀಯ ವಿಭಾಗ, ಮುಂದಿನ ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಸರಣಿಯ ವೇಳೆಗೆ ಗಾಯದ ಸಮಸ್ಯೆಯಿಂದ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದೆ. 

    ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಹೆಚ್ಚಿನ ಹಿಡಿತ ಸಾಧಿಸುವ ಉದ್ದೇಶದಿಂದ ಕೊಹ್ಲಿ ಕೌಂಟಿ ಕ್ರಿಕೆಟ್ ಆಡಲಿ ನಿರ್ಧರಿಸಿದ್ದರು. ಈ ಹಿಂದೆ 2014 ರಲ್ಲಿ ಇಂಗ್ಲೆಂಡ್ ಸರಣಿಯಲ್ಲಿ ಆಡಿದ್ದ ಕೊಹ್ಲಿ ಕಳಪೆ ಆಟ ಪ್ರದರ್ಶಿಸಿದ್ದರು. ಕೆಲ ದಿನಗಳ ಹಿಂದೆ ಕೌಂಟಿ ಕ್ರಿಕೆಟ್ ಆಡಲು ಒಪ್ಪಂದಕ್ಕೆ ಸಹಿ ಹಾಕಿದ್ದ ಕೊಹ್ಲಿ 3 ಚಾಂಪಿಯನ್ ಗೇಮ್ಸ್, ಐದು ದೇಶಿಯ ಏಕದಿನ ಪಂದ್ಯಗಳಲ್ಲಿ ಸರ್ರೆ ತಂಡದ ಪರ ಆಡಲಿದ್ದರು.