Tag: Court of Representatives

  • ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ – ಕೇಸ್ ಖುಲಾಸೆಯಾದ್ರೂ ಇಲ್ಲ ಬಿಡುಗಡೆ ಭಾಗ್ಯ

    ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ – ಕೇಸ್ ಖುಲಾಸೆಯಾದ್ರೂ ಇಲ್ಲ ಬಿಡುಗಡೆ ಭಾಗ್ಯ

    ಬೆಂಗಳೂರು: ಕೆ.ಆರ್.ನಗರ (KR Nagar) ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಭವಿಷ್ಯ ಇಂದು (ಬುಧವಾರ) ನಿರ್ಧಾರವಾಗಲಿದೆ.

    26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ಇಂದು ತೀರ್ಪು ನೀಡಲಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಬಹಳ ಮಹತ್ವದ್ದಾಗಿರಲಿದೆ.ಇದನ್ನೂ ಓದಿ: Shivamogga | ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ – ಇಬ್ಬರು ದುರ್ಮರಣ, 13ಕ್ಕೂ ಹೆಚ್ಚು ಮಂದಿಗೆ ಗಾಯ

    ಈಗಾಗಲೇ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‌ಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ಕ್ಕೆ ಆದೇಶ ಕಾಯ್ದಿರಿಸಿತ್ತು. ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಸದ್ಯ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇಂದಿನ ಪ್ರಕರಣದ ಕೇಸ್ ಖುಲಾಸೆಯಾದ್ರೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಇನ್ನೂ ಮೂರು ಪ್ರಕರಣಗಳು ಬಾಕಿ ಇರೋದ್ರಿಂದ ಕೇಸ್ ಖುಲಾಸೆಯಾದ್ರೂ ಬಿಡುಗಡೆ ಆಗೋದು ಅನುಮಾನವಾಗಿದೆ.

    ಏನಿದು ಪ್ರಕರಣ?
    ಕೆ.ಆರ್.ನಗರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನು ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿಕೊಂಡು ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

    ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಸ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.

    ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ದೃಶ್ಯವಿದ್ದ ಪೆನ್ ಡ್ರೈವ್‌ಗಳನ್ನು ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಜ್ವಲ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಇದನ್ನೂ ಓದಿ: ಡಾ.ರಾಜ್ ಅಪಹರಣ ಪ್ರಕರಣಕ್ಕೆ 25 ವರ್ಷ – 2000 ಇಸವಿಯಲ್ಲಿ ಅಪಹರಿಸಿದ್ದ ವೀರಪ್ಪನ್

  • MUDA Scam | ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು – ಇಂದು ಕೋರ್ಟ್‌ನಲ್ಲಿ ಭವಿಷ್ಯ!

    MUDA Scam | ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು – ಇಂದು ಕೋರ್ಟ್‌ನಲ್ಲಿ ಭವಿಷ್ಯ!

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ (MUDA Scam) ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Court of Representatives) ಪ್ರಕಟಿಸಲಿದೆ.

    ನ್ಯಾಯಾಲಯದ ಈ ಆದೇಶ ಆಧರಿಸಿ ಸಿದ್ದರಾಮಯ್ಯ (Siddaramaiah) ಅವರು ವಿಚಾರಣೆ ಎದುರಿಸಲಿದ್ದಾರೆಯೇ ಎಂಬುದು ಗೊತ್ತಾಗಲಿದೆ. ಕೋರ್ಟ್‌ ನೀಡುವ ಆದೇಶ ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರನ್ನು ಅಭಿಯೋಜನೆಗೆ ಅನುಮತಿ ಪರಿಗಣಿಸಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆಯಿದೆ. ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದತ್ತ ಎಲ್ಲರ ಚಿತ್ರ ಇದೆ. ಇದನ್ನೂ ಓದಿ: ಮೈಸೂರು ದಸರಾ 2024: ಜಂಬೂಸವಾರಿ ಆನೆಗಳ ಪಟ್ಟಿ ರಿಲೀಸ್‌ – ಈ ಬಾರಿಯೂ ಅಭಿಮನ್ಯು ʻಕ್ಯಾಪ್ಟನ್‌ʼ

    ಐದು ದಿನಗಳ ಹಿಂದೆಯಷ್ಟೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ.

    ದೂರುದಾರರ ಪರವಾಗಿ ವಕೀಲರಾದ ಲಕ್ಷ್ಮಿ ಐಯ್ಯಂಗಾರ್ ಅವರು ವಾದ ಮಂಡಿಸಿದ್ದರು. ಮುಡಾ ಹಗರಣದ ವಿಚಾರದಲ್ಲಿ ತಕ್ಷಣಕ್ಕೆ ಅಭಿಯೋಜನೆಯ ಅಗತ್ಯ ಇಲ್ಲ. ಅದಿಲ್ಲದೆಯೇ ಪ್ರಕರಣವನ್ನ ವಿಚಾರಣೆಗೊಳಪಡಿಸಬಹುದು ಎಂದು ವಾದ ಮಂಡಿಸಿ, ಅಯ್ಯಪ್ಪ ಮತ್ತು ಮಂಜು ಸುರಾನಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲೇಖಿಸಿದರು. ಇದನ್ನೂ ಓದಿ: Mysuru | ಶುರುವಾಯ್ತು ಹೊಸ ವಿವಾದ – ರಾಜ್ಯ ಸರ್ಕಾರ & ರಾಜಮನೆತನದ ನಡುವೆ ಜಟಾಪಟಿ

    ಪ್ರಕರಣದ ಬೆಳವಣಿಗೆ ಏನು?
    • ಮುಡಾ ಅಕ್ರಮ ಸಂಬಂಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕಳೆದ ವಾರ ಅರ್ಜಿ ಸಲ್ಲಿಕೆಯಾಗಿತ್ತು.
    • ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರಿಂದ ಖಾಸಗಿ ದೂರು ಸಲ್ಲಿಕೆಯಾಗಿತ್ತು.
    • ಈ ಅರ್ಜಿಯನ್ನು ವಿಚಾರಣೆಗೆ ಆಂಗೀಕರಿಸಬೇಕೇ ಎಂಬ ಬಗ್ಗೆ ಇಂದು (ಆ.13) ಕೋರ್ಟ್ ಆದೇಶ ನೀಡಲಿದೆ.
    • ಕೋರ್ಟ್ ವಿಚಾರಣೆಗೆ ಅಂಗೀಕರಿಸಿದರೆ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆಐಿದೆ
    • ಕೋರ್ಟ್ ಆದೇಶ ಗಮನಿಸಿ ಸಿದ್ದು ವಿರುದ್ಧ ಪ್ರಾಸಿಕ್ಯೂಷನ್ ಬಗ್ಗೆ ರಾಜ್ಯಪಾಲರು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
    * ಈಗಾಗಲೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ಅಬ್ರಹಾಂ ಕರೆಸಿ ರಾಜ್ಯಪಾಲರು ಮಾಹಿತಿ ಸಹ ಪಡೆದುಕೊಂಡಿದ್ದಾರೆ.