Tag: court order

  • ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ವೀಡಿಯೋ ಸರ್ವೆ ವೇಳೆ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಹಿಂದೂ ಮಹಿಳೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಅರ್ಹವೇ ಎನ್ನುವ ಬಗ್ಗೆ ಮೊದಲು ವಿಚಾರಣೆ ನಡೆಸಲಾಗುವುದು. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜಿಲ್ಲಾ ನ್ಯಾಯಧೀಶ ಅಜಯ್ ಕೃಷ್ಣ ವಿಶ್ವೇಶ ಆದೇಶಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಕೃಷ್ಣ ಅವರು ಇಂದು ಆದೇಶ ನೀಡಿದ್ದು, ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು. ಅದಕ್ಕೂ ಮುನ್ನ ಏಳು ದಿನಗಳೊಳಗೆ ವೀಡಿಯೋಗ್ರಫಿ ಸರ್ವೆಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಈ ವಿಚಾರಣೆ ಬಳಿಕ ವೀಡಿಯೋಗ್ರಫಿ ಸರ್ವೆ ಆಧರಿಸಿ ವಿಚಾರಣೆ ಮುಂದುವರಿಸುವ ಬಗ್ಗೆ ಕೋರ್ಟ್ ತೀರ್ಮಾನಿಸುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ 

    ಶಿವಲಿಂಗ ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಸಲ್ಲಿರುವ ಅರ್ಜಿ 1991ರ ಕಾಯಿದೆ ಮತ್ತು ಆದೇಶ 7, ನಿಯಮ 11 ಉಲ್ಲಂಘಿಸುತ್ತದೆ. ಹೀಗಾಗಿ ಇಡೀ ಪ್ರಕರಣವನ್ನು ವಜಾ ಮಾಡಬೇಕು ಎಂದು ಮಸೀದಿ ಪರ ಅರ್ಜಿದಾರರು ವಾದ ಮಂಡಿಸಿದ್ದರು.

    ಇದಕ್ಕೆ ಪ್ರತಿವಾದ ಸಲ್ಲಿಸಿದ್ದ ಐವರು ಮಹಿಳೆಯರು ಮತ್ತು ಹಿಂದೂ ಸೇನಾ ಪರ ವಕೀಲರು, ಮಸೀದಿ ದೇವಸ್ಥಾನಕ್ಕೆ ಸೇರಿದ್ದು, ಇದನ್ನು ಅತಿಕ್ರಮಣ ಮಾಡಿಕೊಂಡು ಮಸೀದಿ ನಿರ್ಮಿಸಲಾಗಿದೆ. ಈಗ ಶಿವಲಿಂಗ ಪತ್ತೆಯಾಗಿರುವುದೇ ಇದಕ್ಕೆ ಸಾಕ್ಷಿ. ಹೀಗಾಗಿ ಸರ್ವೆ ವೇಳೆ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

    ರಾಮಮಂದಿರ ವಿವಾದ ಉತ್ತುಂಗದ ವೇಳೆ, 1991ರಲ್ಲಿ ಪೂಜಾ ಸ್ಥಳಗಳ ನಿರ್ಬಂಧ ಕಾಯ್ದೆ ಜಾರಿ ಮಾಡಲಾಗಿತ್ತು. ಅದರಲ್ಲಿ ಸ್ವಾತಂತ್ರ್ಯದ ನಂತರದ ದಿನಾಂಕದಿಂದ ಯಾವುದೇ ಧಾರ್ಮಿಕ ಕಟ್ಟಡಗಳನ್ನು ಬದಲಾಯಿಸುವುದು ಅಥವಾ ಅದರ ರಚನೆಗೆ ಧಕ್ಕೆ ಮಾಡುವಂತಿಲ್ಲ. ಅದು ಇದ್ದಂತಯೇ ಮುಂದುವರಿಸಬೇಕು ಎಂದು ನಿಯಮ ರೂಪಿಸಲಾಗಿತ್ತು. ಇದನ್ನೂ ಓದಿ: ನಯನತಾರಾಗೆ ಲೋಕಲ್ ಫುಡ್ ತಿನ್ನಿಸಿದ ಭಾವಿಪತಿ ವಿಘ್ನೇಶ್ 

    ಇದೇ ಅಂಶವನ್ನು ಮುಂದಿಟ್ಟುಕೊಂಡು ಈಗ ಮಸೀದಿ ಆಡಳಿತ ಮಂಡಳಿ ಕಾನೂನು ಹೋರಾಟ ಮಾಡುತ್ತಿದೆ. 1991ರ ಕಾಯಿದೆ ಅನ್ವಯ ಇಡೀ ಪ್ರಕರಣವೇ ವಿಚಾರಣೆಗೆ ಯೋಗ್ಯವಲ್ಲ ಎಂದು ಕೋರ್ಟ್‍ನಲ್ಲಿ ವಾದ ಮಂಡಿಸಿದೆ. ಆದರೆ ರಾಮಮಂದಿರ ರೀತಿಯಲ್ಲೇ ಈ ಪ್ರಕರಣವನ್ನು ಪರಿಗಣಿಸಲು ಹಿಂದೂ ಪರ ವಕೀಲರು ಮನವಿ ಮಾಡುತ್ತಿದ್ದಾರೆ.

  • ದಿವ್ಯಾ ಹಾಗರಗಿ ವಾರದಲ್ಲಿ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು – ನ್ಯಾಯಾಲಯ ಆದೇಶ

    ದಿವ್ಯಾ ಹಾಗರಗಿ ವಾರದಲ್ಲಿ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು – ನ್ಯಾಯಾಲಯ ಆದೇಶ

    ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಸೇರಿ 6 ಜನರಿಗೆ ಕಂಟಕ ಎದುರಾಗಿದೆ. ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ದಾವುದ್ ಇಬ್ರಾಹಿಂಗೆ ನೀಡಲಾಗಿದ್ದ ಅರೆಸ್ಟ್ ವಾರೆಂಟ್ ಮಾದರಿಯಲ್ಲಿಯೇ ಈ 6 ಆರೋಪಿಗಳಿಗೆ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

    ಕರ್ನಾಟಕದ ಅಪರಾಧ ಪ್ರಕರಣಗಳಲ್ಲಿ ಇಂತಹ ಅರೆಸ್ಟ್ ವಾರೆಂಟ್ ಜಾರಿ ಆಗಿರುವುದು ಬಹು ಅಪರೂಪ. ತನಿಖಾ ಹಂತದಲ್ಲಿ ಜಾರಿ ಮಾಡಲಾಗುವ ವಾರೆಂಟ್ ಅನ್ವಯ ಆರೋಪಿಗಳು ಎಲ್ಲಿದ್ದರೂ ಬಂದು ಶರಣಾಗಲೇ ಬೇಕು. ಇಲ್ಲದಿದ್ದರೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕುವ ಸಾಧ್ಯತೆ ಇರುತ್ತದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು – ರಾಜ್ಯಪಾಲರಿಗೆ ಎಎಪಿ ಮನವಿ

    court order law

    ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ಮಾಸ್ಟರ್ ಮೈಂಡ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ರವೀಂದ್ರ ಮೇಳಕುಂದಿ, ಅರ್ಚನಾ, ಕಾಶಿನಾಥ್, ಶಾಂತಿಬಾಯಿಗೆ ಕಲಬುರಗಿಯ 3ನೇ ಜೆಎಂಎಫ್‌ಸಿ ನ್ಯಾಯಾಲಯ ಇಂತಹದೊಂದು ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ದಾವುದ್ ಇಬ್ರಾಹಿಂಗೆ ನೀಡಲಾಗಿದ್ದ ಅರೆಸ್ಟ್ ವಾರೆಂಟ್ ಉಲ್ಲೇಖಿಸಿ, ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಕೋರಿಕೆ ಸಲ್ಲಿಸಿದ್ದರು. ಇದನ್ನೂ ಓದಿ: ಬಿಜೆಪಿ ಪ್ರಮುಖರೊಂದಿಗೆ ಆರೋಪಿ ದಿವ್ಯಾ ಹಾಗರಗಿ ಫೋಟೋ ವೈರಲ್

    ಸಿಐಡಿ ಕೋರಿಕೆಯಂತೆ ತನಿಖಾ ಹಂತದ ಅರೆಸ್ಟ್ ವಾರೆಂಟ್ ಜಾರಿ ಮಾಡಿ, ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವಾರದ ಒಳಗಡೆ ಆರೋಪಿಗಳು ಶರಣಾಗದಿದ್ದರೆ, ಉದ್ಘೋಷಿತ ಅಪರಾಧಿ ಎಂದು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳವ ಎಲ್ಲಾ ಸಾಧ್ಯತೆ ಇದೆ. ಕಳೆದ 15 ದಿನಗಳಿಂದ ದಿವ್ಯಾ ಸೇರಿ 6 ಮಂದಿ ಆರೋಪಿಗಳು ಸಿಐಡಿಯಿಂದ ತಲೆ ಮರೆಸಿಕೊಂಡಿದ್ದಾರೆ. ಸಾಕಷ್ಟು ಶೋಧ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂತಹ ಕಠಿಣ ಮಾರ್ಗಕ್ಕೆ ಸಿಐಡಿ ಇಳಿದಿದೆ.

  • ರೈತನಿಗೆ ಪರಿಹಾರ ನೀಡಲು ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ

    ರೈತನಿಗೆ ಪರಿಹಾರ ನೀಡಲು ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ

    ಕಲಬುರಗಿ: ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆಯವರಿಗೆ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣಕ್ಕೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್‌ರವರ ಸರ್ಕಾರಿ ಕಾರು ಜಪ್ತಿಗೆ ಕಲಬುರಗಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಸಿದೆ.

    2008ರಲ್ಲಿ ರೈತ ಕಲ್ಲಪ್ಪ ಮೇತ್ರೆಯ 33 ಗುಂಟೆ ಜಮೀನು ಭೀಮಾ ಏತ ನಿರಾವರಿ ಯೋಜನೆಯಲ್ಲಿ ಮುಳುಗಡೆಯಾಗಿತ್ತು. ಮುಳುಗಡೆಯಾದ ಜಮೀನಿಗೆ 7.39.632 ಪರಿಹಾರ ನೀಡವಂತೆ ಕೋರ್ಟ್ ಆದೇಶ ಮಾಡಿತ್ತು. ಕೋರ್ಟ್ ಆದೇಶ ಆದರೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ಕಾರು ಜಪ್ತಿಗೆ ಇದೀಗ ಕೋರ್ಟ್ ಆದೇಶ ಮಾಡಿದೆ. ಕೋರ್ಟ್ ಆದೇಶದ ಹಿನ್ನೆಲೆ ಕಾರು ಜಪ್ತಿಗೆ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಆಗಮಿಸಿದ್ದಾರೆ. ಇದನ್ನೂ ಓದಿ: ಹೋಟೆಲ್‍ನಲ್ಲಿ ಊಟ, ತಿಂಡಿ ಸಪ್ಲೈಗೆ ಬಂತು ರೋಬೋ – ಮೈಸೂರಿನ ಜನತೆಯ ಮನಗೆದ್ದ ಸಪ್ಲೇಯರ್ ಲೇಡಿ

    ಕೂಡಲೇ ಎಚ್ಚೆತ್ತ ಭೂಸ್ವಾಧೀನ ಇಲಾಖೆ ಅಧಿಕಾರಿಗಳು ವಕೀಲರೊಂದಿಗೆ ಮತ್ತು ಕಲ್ಲಪ್ಪ ಜೊತೆ ಸಂಧಾನ ನಡೆಸಿ ಚೆಕ್ ಕೋರ್ಟ್‌ ನೀಡುವುದಾಗಿ ಹೇಳಿದ್ದಾರೆ. ಬಳಿಕ ಕಲ್ಲಪ್ಪ ಅಧಿಕಾರಿಗಳಿಗೆ ಹಣ ಪಾವತಿಸುವಂತೆ ಕಾಲಾವಕಾಶ ನೀಡಿದ್ದಾರೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬರುವವರೆಗೂ ಮಗಳು ಮನೆಯಲ್ಲೇ ಇರಲಿ: ಮಂಡ್ಯ ಪೋಷಕರು

  • ವಿಚ್ಛೇದನ ಜೀವನಾಂಶ ಹಣ ಹೊಂದಿಸಲಾಗಿಲ್ಲ ಅಂತ ಪತಿ ಆತ್ಮಹತ್ಯೆ

    ವಿಚ್ಛೇದನ ಜೀವನಾಂಶ ಹಣ ಹೊಂದಿಸಲಾಗಿಲ್ಲ ಅಂತ ಪತಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ವಿಚ್ಛೇದನದ ನಂತರ ಪತ್ನಿಗೆ ಜೀವನಾಂಶದ ಹಣ ನೀಡಲಾಗದೇ ಜೈಲಿಗೆ ಹೋಗುವ ಭಯದಿಂದ ಪತಿಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.  ಇದನ್ನೂ ಓದಿ: ಸೊಸೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ ಮಾವ!

    ದೊಡ್ಡಬಳ್ಳಾಪುರ ನಗರದ ಪ್ರಿಯದರ್ಶಿನಿ ಬಡವಾಣೆಯ ಅಮೀರ್(30) ಮೃತ ವ್ಯಕ್ತಿ. ಮೃತ ಅಮೀರ್ ಶಿಡ್ಲಘಟ್ಟ ಮೂಲದ ನೂರ್ ಜಾನ್ ಜೊತೆ ವಿವಾಹವಾಗಿದ್ದು, ಕೌಟುಂಬಿಕ ಕಲಹದ ಹಿನ್ನಲೆ ನ್ಯಾಯಾಲಯದ ಮೆಟ್ಟಿಲೇರಿ ವಿಚ್ಛೇದನ ಪಡೆದಿದ್ದರು. ಪತ್ನಿಗೆ 1 ಲಕ್ಷ ಜೀವನಾಂಶ ಹಣ ಪಾವತಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಆದರೆ ಅಮೀರ್  ಗೆ 1 ಲಕ್ಷ ಹಣ ಹೊಂದಿಸಲಾಗಲಿಲ್ಲ.

    ಇದರಿಂದ ಜೀವನಾಂಶದ ಹಣ ಕೊಡದಿದ್ದರೆ ಜೈಲಿಗೆ ಹೋಗುವ ಭೀತಿ ಕಾಡಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಮೀರ್‌‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಅಮೀರ್ ಸಾವನ್ನಪ್ಪಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಪೆಗಾಸಸ್ ಮೂಲಕ ಗೂಢಚರ್ಯೆ ಪ್ರಕರಣ – ತನಿಖೆಗೆ ತಜ್ಞರ ಸಮಿತಿ ರಚಿಸಲಿರುವ ಸುಪ್ರೀಂ

  • ಕೋರ್ಟ್ ಸ್ಟೇ ನೀಡದೇ ಇದ್ರೆ ಬಿಎಸ್‍ವೈ ವಿರುದ್ಧ 30 ಎಫ್‍ಐಆರ್ ಆಗ್ತಿತ್ತು: ಗೋ ಮಧುಸೂದನ್

    ಕೋರ್ಟ್ ಸ್ಟೇ ನೀಡದೇ ಇದ್ರೆ ಬಿಎಸ್‍ವೈ ವಿರುದ್ಧ 30 ಎಫ್‍ಐಆರ್ ಆಗ್ತಿತ್ತು: ಗೋ ಮಧುಸೂದನ್

    ಬೆಂಗಳೂರು: ಬಿಎಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಹಾಕಿದ್ದ ಎಫ್‍ಐಆರ್‍ಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ ಸರ್ಕಾರಕ್ಕೆ ತಪರಾಕಿ ಹಾಕಿದೆ ಎಂದು ಬಿಜೆಪಿ ವಕ್ತಾರ ಗೋ ಮಧುಸೂದನ್ ಹೇಳಿದ್ದಾರೆ.

    ಹೈಕೋರ್ಟ್ ಆದೇಶ ಪ್ರಕಟವಾದ ಬಳಿಕ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮೇಲೆ ಒಂಂದೇ ಪ್ರಕರಣಕ್ಕೆ ಎರಡು ಎಫ್‍ಐಆರ್‍ಗಳನ್ನು ಎಸಿಬಿ ಹಾಕಿರುವುದು ಸರಿಯಲ್ಲ ಅಂತಾ ಕೋರ್ಟ್ ತಿಳಿಸಿದೆ. ಅಷ್ಟೇ ಅಲ್ಲದೇ ಇನ್ನೂ 25-30 ಎಫ್‍ಐಆರ್‍ಯನ್ನು ಬಿಎಸ್‍ವೈ ವಿರುದ್ಧ ಹಾಕುವುದು ಎಸಿಬಿನ ಉದ್ದೇಶವಾಗಿತ್ತು. ಆದರೆ ಅದಕ್ಕೆಲ್ಲಾ ಕೋರ್ಟ್ ತಡೆ ನೀಡಿದೆ ಎಂದು ಸಂತಸದಿಂದ ಹೇಳಿದರು.

    ಶಿವರಾಂ ಕಾರಂತ ಬಡಾವಣೆಗೆ ನೋಟಿಫಿಕೇಷನ್ ಆಗಿದ್ದ ಭೂಮಿಯಲ್ಲಿ ಒಂದಿಂಚೂ ಭೂಮಿಯನ್ನು ಬಿಡಿಎ ಬಿಟ್ಟುಕೊಟ್ಟಿಲ್ಲ. ಹಾಗಾಗಿ ನೊಟಿಫೈ ಆಗಿದ್ದ ಭೂಮಿ ಡಿನೊಟಿಫೈ ಆಗೇ ಇಲ್ಲ. ಆದ್ದರಿಂದ ಎಸಿಬಿ ಎಫ್‍ಐಆರ್ ಹಾಕಿರುವುದೇ ಕಾನೂನು ಬಾಹಿರವಾಗಿದೆ. ಇನ್ನೂ ಮುಂದೆ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಎಸಿಬಿಗೆ ಅಧಿಕಾರವೇ ಇಲ್ಲ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

    ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸ ಮಾಡಲು ನಿರ್ಧಾರ ಮಾಡಿದ್ದರು. ಆದರೆ ಅದನ್ನು ಸಿಎಂ ಸಿದ್ದರಾಮಯ್ಯ ತಡೆಯುವ ಉದ್ದೇಶವನ್ನು ಇಟ್ಟುಕೊಂಡಿದ್ದರು. ಆದರೆ ಇಂದು ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಸಿಎಂಗೆ ಮುಖಭಂಗವಾಗಿದೆ ಎಂದರು.

    ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಡಾ.ಶಿವರಾಮ ಖಾರಂತ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಪಡಿಸಿಕೊಂಡಿದ್ದ ಜಮೀನಿನಲ್ಲಿ 257 ಎಕರೆ 20.5 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲು ಆದೇಶಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸಿಬಿ ಎಫ್‍ಐಆರ್ ದಾಖಲಾಗಿತ್ತು.

    ಹೈಕೋರ್ಟ್ ತಡೆಯಾಜ್ಞೆ:
    ಎಫ್‍ಐಆರ್ ದಾಖಲಿಸಲು ವಿಳಂಬ ಮಾಡಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತು ಮಾಡುವ ದಾಖಲೆಗಳಿಲ್ಲ ಎಂದು ಹೇಳಿ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಬಿಎಸ್‍ವೈ ವಿರುದ್ಧ ದಾಖಲಾಗಿದ್ದ ಎಫ್‍ಐಆರ್‍ಗೆ ತಡೆಯಾಜ್ಞೆ ನೀಡಿದೆ. ಡಿನೋಟಿಫೈ ಮಾಡಿ ಲಾಭ ಮಾಡಿಕೊಂಡಿರುವ ಬಗ್ಗೆ ಸೂಕ್ತ ಸಾಕ್ಷ್ಯಗಳಿಲ್ಲ. ಅಷ್ಟೇ ಅಲ್ಲದೇ ಒಂದೇ ದೂರಿನಲ್ಲಿ ಎರಡು ಎಫ್‍ಐಆರ್ ದಾಖಲಿಸುವುದು ಕಾನೂನು ಬಾಹಿರ ಎಂದು ನ್ಯಾ. ಅರವಿಂದ್ ಕುಮಾರ್ ಅಭಿಪ್ರಾಯಪಟ್ಟು ತಡೆಯಾಜ್ಞೆ ನೀಡಿದ್ದಾರೆ.