ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲನ್ನೇ (Kalaburagi jail) ತನ್ನ ಕಂಟ್ರೋಲ್‍ನಲ್ಲಿ ಇಟ್ಟುಕೊಳ್ಳಲು ಯತ್ನಿಸಿದ್ದ ಶಂಕಿತ ಉಗ್ರ ಜುಲ್ಫಿಕರ್ ಸೇರಿ ಆರು ಜನ ಕೈದಿಗಳ ಸ್ಥಳಾಂತರಕ್ಕೆ ಕಾರಾಗೃಹ ಇಲಾಖೆ ಮುಂದಾಗಿದೆ.
ಕೈದಿಗಳನ್ನು ರಾಜ್ಯದ ವಿವಿಧ ಜೈಲ್‍ಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಜುಲ್ಫಿಕರ್ 2013ರಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯಾಗಿದ್ದಾನೆ. ಇನ್ನೂ ಈತನ ಜೊತೆ ಶಿವಮೊಗ್ಗದ ರೌಡಿಶೀಟರ್ ಬಚ್ಚನ್ ಸೇರಿ ಆರು ಜನ ವರ್ಗಾವಣೆಗೆ ಇಲಾಖೆ ಮುಂದಾಗಿದೆ.
ಉಗ್ರ ಜುಲ್ಫಿಕರ್ ಬೇರೆ ಜೈಲಿಗೆ ಶಿಫ್ಟ್ ಮಾಡಲು ಎನ್‍ಐಎ ಕೋರ್ಟ್‍ನ ಅನುಮತಿ ಪಡೆಯಲಾಗಿದೆ. ಶಿವಮೊಗ್ಗ ರೌಡಿ ಶೀಟರ್ ಬಚ್ಚನ್ ಸ್ಥಳಾಂತರಕ್ಕೆ ಶಿವಮೊಗ್ಗ ಕೋರ್ಟ್ ಅನುಮತಿ ನೀಡಿದೆ. ಆರೋಪಿಗಳು ಕಲಬುರಗಿ ಸೆಂಟ್ರಲ್ ಜೈಲಿನ ವಾತವರಣವನ್ನೆ ಹಾಳು ಮಾಡಿದ್ದರು. ಜೈಲು ಅಧಿಕಾರಿಗಳ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡಿ ಹೈಫೈ ಜೀವನ ನಡೆಸುತ್ತಿದ್ದರು. ಜೈಲಿಗೆ ಹೊಸ ಮುಖ್ಯ ಅಧೀಕ್ಷರು ಬರುತ್ತಿದ್ದಂತೆ ಇವರ ಹೈಫೈ ಲೈಫ್‍ಗೆ ಬ್ರೇಕ್ ಬಿದ್ದಿತ್ತು.
ಇದರಿಂದ ಜೈಲಿನೊಳಗೆ ಆರೋಪಿಗಳು ಪ್ರತಿಭಟನೆ ಮಾಡಿದ್ದರು. ಅಲ್ಲದೇ ಜೈಲು ಅಧೀಕ್ಷಕರ ಕಾರು ಸ್ಫೋಟಿಸೋ ಬೇದರಿಕೆ ಹಾಕಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಜೈಲು ಮುಖ್ಯ ಅಧೀಕ್ಷಕಿ ಡಾ.ಅನಿತಾ ಅವರು ಆರೊಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದರು.
2019ರ ಮೇ 29 ರಂದು ನಡೆದಿದ್ದ ಪುರಸಭೆ ಚುನಾವಣೆಯಲ್ಲಿ ಮಾಲೂರು ಪುರಸಭೆಯ 27 ನೇ ವಾರ್ಡ್‌ನಿಂದ ಬಿಜೆಪಿ ಬೆಂಬಲದಿಂದ ಸುಮಿತ್ರಾ ಆಯ್ಕೆಯಾಗಿದ್ದರು. 19ನೇ ವಯಸ್ಸಿನಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ನಾಮಪತ್ರದಲ್ಲಿ 19 ವರ್ಷ ಎಂದು ನಮೂದಿಸಿದ್ದರೂ ಚುನಾವಣಾ ಅಧಿಕಾರಿಗಳ ಬೇಜವಾಬ್ದಾರಿಯಿಂದ ಸ್ಪರ್ಧೆಗೆ ಅವಕಾಶ ಸಿಕ್ಕಿತ್ತು.
ನಾಮಪತ್ರ ತಿರಸ್ಕಾರ ಮಾಡದೇ ಚುನಾವಣಾಧಿಕಾರಿಗಳು ಸ್ಪರ್ಧೆಗೆ ಅವಕಾಶ ನೀಡಿದ್ದರು. 19 ವರ್ಷಕ್ಕೆ ಸ್ಪರ್ಧೆ ಮಾಡಲು ಅವಕಾಶ ಇಲ್ಲ ಎಂದು ಪರಾಜಿತಾ ಅಭ್ಯರ್ಥಿ ಗಾಯತ್ರಿ ಕೋರ್ಟ್ ಮೆಟ್ಟಿಲೇರಿದ್ದರು. ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದಿದ್ದೇನೆ, ಸದಸ್ಯೆಯಾಗಿ ನಿರ್ದೇಶನ ನೀಡಬೇಕೆಂದು ಕೋರ್ಟ್‌ನಲ್ಲಿ ಗಾಯತ್ರಿ ಮನವಿ ಮಾಡಿದ್ದರು. ಇದನ್ನೂ ಓದಿ: 3ನೇ ಮದುವೆಗಾಗಿ ಪತ್ನಿಯ ಹತ್ಯೆ – ಶವ ವಿವಸ್ತ್ರಗೊಳಿಸಿ ಎಸೆದಿದ್ದ ಆರೋಪಿ ಅರೆಸ್ಟ್
ನ್ಯಾಯಾಲಯದಿಂದ ಸುಮಿತ್ರಾ ಆಯ್ಕೆ ಅಸಿಂಧು ಎಂದು ಮಾತ್ರ ತೀರ್ಪು ಬಂದಿದೆ. ಪುರಸಭೆ ಅವಧಿ ಇನ್ನು 8 ತಿಂಗಳು ಮಾತ್ರ ಬಾಕಿ ಇದ್ದು, ಉಪಚುನಾವಣೆ ನಡೆಯುವುದು ಅನುಮಾನ.
ಲಕ್ನೋ: ಉತ್ತರಪ್ರದೇಶದ (Uttar Pradesh) ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ (Shahi Jama Masjid) ಸಮೀಕ್ಷೆ ವಿರೋಧಿಸಿ ಪ್ರತಿಭಟನಾಕಾರರು ಪೊಲೀಸರು ಹಾಗೂ ಸಮಿಕ್ಷಾ ತಂಡದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಸಮೀಕ್ಷಾ ತಂಡ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಅಧಿಕಾರಿಗಳ ಮೇಲೆ ಗುಂಪು ಕಲ್ಲು ತೂರಾಟ ನಡೆಸಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಶ್ರುವಾಯು ಸಿಡಿಸಿದ್ದಾರೆ. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮಸೀದಿಯ ಮುಖ್ಯಸ್ಥರು ಗುಂಪನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದು, ಅವರ ಪ್ರಯತ್ನಗಳು ವಿಫಲವಾದವು.
#WATCH | Uttar Pradesh: An incident of stone pelting took place in Sambhal when a survey team reached Shahi Jama Masjid to conduct a survey of the mosque. Police used tear gas to control the situation.
ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, ನ್ಯಾಯಾಲಯದ (Court) ಆದೇಶದ ಮೇರೆಗೆ ಸಂಭಾಲ್‌ನಲ್ಲಿ ಸರ್ವೆ ನಡೆಸಲಾಗುತ್ತಿದೆ. ಕೆಲ ಸಮಾಜ ವಿರೋಧಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ರೀತಿಯ ಸಮೀಕ್ಷೆಯನ್ನು ನವೆಂಬರ್ 19ರಂದು ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಸಲಾಗಿತ್ತು. ಆದ್ರೆ ಕಳೆ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ನಿಷೇಧಾಜ್ಞೆ ವಿಧಿಸಲಾಗಿದೆ.
ಶಾಹಿ ಜಾಮಾ ಮಸೀದಿ ಮೂಲತಃ ಹರಿ ಹರ್ ಮಂದಿರ ಎಂದು ವಕೀಲ ವಿಷ್ಣು ಶಂಕರ್ ಜೈನ್ ಎಂಬವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಮೊಘಲರ ದೊರೆ ಬಾಬರ್ ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಿದ್ದ ಎಂದು ಉಲ್ಲೇಖಿಸಲಾಗಿದೆ. ಈ ಅರ್ಜಿಯನ್ನು ಪರಿಗಣಿಸಿದ್ದ ನ್ಯಾಯಾಲಯ ವಿಡಿಯೋ ಹಾಗೂ ಫೋಟೋ ತೆಗೆದು ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.
ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ ಜಿಲ್ಲಾ ಸತ್ರ ನ್ಯಾಯಾಲಯವು 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ (Life Imprisonment) ವಿಧಿಸಿ ತೀರ್ಪು ನೀಡಿದೆ.
ತುಮಕೂರಿನ (Tumakuru) 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ದೋಷಿ ಎಂದು ಕೋರ್ಟ್ ಆದೇಶಿಸಿತ್ತು. ಇದೀಗ ಕೋರ್ಟ್ 21 ಮಂದಿಗೂ ಜೀವಾವಧಿ ಶಿಕ್ಷೆ ವಿಧಿಸಿದ್ದು, ಒಟ್ಟು 2,83,200 ರೂ. ದಂಡ ವಿಧಿಸಿದೆ. ಅಂದರೆ ತಲಾ ಒಬ್ಬರಿಗೆ 13,500 ದಂಡ ವಿಧಿಸಿದೆ.ಇದನ್ನೂ ಓದಿ: ಕೊಪ್ಪಳ | 6 ತಿಂಗಳಿಂದ ಪಡಿತರ ಪಡೆಯದ 5,779 ಬಿಪಿಎಲ್ ಕಾರ್ಡ್ ರದ್ದು
ಒಟ್ಟು 21 ದೋಷಿಗಳ ಪೈಕಿ ಇಬ್ಬರು ಮಹಿಳೆಯರು, 19 ಜನ ಪುರುಷರಿದ್ದಾರೆ. ಆಗಿನ ಡಿವೈಎಸ್‌ಪಿ ಶಿವರುದ್ರಸ್ವಾಮಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ನಾಗಿರೆಡ್ಡಿ ಆದೇಶ ಹೊರಡಿಸಿದ್ದಾರೆ.
ಘಟನೆ ಏನು?
ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರ ಜೂನ್ 20ರಂದು ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.ಇದನ್ನೂ ಓದಿ: ಆಮೀರ್ ಖಾನ್ ಜೊತೆಗಿನ ಸುದೀಪ್ ಫೋಟೋ ವೈರಲ್- ಸಿನಿಮಾ ಬಗ್ಗೆ ಸಿಗಲಿದ್ಯಾ ಗುಡ್ ನ್ಯೂಸ್?
ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ (Dalit Woman) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ 21 ಆರೋಪಿಗಳಿಗೆ ಇಂದು ನ್ಯಾಯಾಲಯ (Court) ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.
ತುಮಕೂರಿನ (Tumakuru) 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಇದನ್ನೂ ಓದಿ: ರೇಷನ್ ಕಾರ್ಡ್ ಗೊಂದಲಕ್ಕೆ ನಾನೇ ಹೊಣೆ, 7 ವಾರದೊಳಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್ : ಮುನಿಯಪ್ಪ
ಚಿಕ್ಕನಾಯಕನಹಳ್ಳಿ (Chikkanayakana Halli) ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್ ಅರೆಸ್ಟ್ ವಾರೆಂಟ್
ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ಬಾಲಕಿ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿಗೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2021ರ ನವೆಂಬರ್ 21ರಂದು ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿತ್ತು.
ಹೊರ ರಾಜ್ಯದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ನವೆಂಬರ್ 21 ರಂದು ಟೈಲ್ಸ್ ಫ್ಯಾಕ್ಟರಿಯಲ್ಲಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ಫ್ಯಾಕ್ಟರಿ ಒಳಗಡೆ ಇದ್ದ ಚರಂಡಿಯಲ್ಲಿ ಬಾಲಕಿ ಮೃತದೇಹ ಎಸೆದಿದ್ದರು. ಮೂವರು ಆರೋಪಿಗಳೂ ಟೈಲ್ಸ್ ಫ್ಯಾಕ್ಟರಿ ಸಿಬ್ಬಂದಿಯಾಗಿದ್ದರು. ಆರೋಪಿಗಳ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಾಗಿತ್ತು.
ಇಬ್ಬರು ಆರೋಪಿಗಳು ಈ ಹಿಂದೆಯೂ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಾಲಕಿ ತಂದೆ ಮತ್ತು ತಾಯಿ ಕುಡಿತದ ಚಟಕ್ಕೆ ಬಿದ್ದಿದ್ದು, ಇದನ್ನೇ ಬಳಸಿ ದೌರ್ಜನ್ಯ ಎಸಗಿದ್ದರು. ಪ್ರಕರಣ ಸಂಬAಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಲೇಕೇರಿ ಬಂದರಿನಿಂದ (Belekeri Port) ಅಕ್ರಮವಾಗಿ ಅದಿರು ರಫ್ತು (llegal Export of Iron Ore) ಪ್ರಕರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳಲ್ಲಿ ದೋಷಿಯಾಗಿದ್ದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ (Satish Sail) ಶನಿವಾರ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ (Special Courts for MP/MLA) ನ್ಯಾಯಾಧೀಶ ಗಜಾನನ ಭಟ್ ಶುಕ್ರವಾರ ಶಿಕ್ಷೆ ಪ್ರಮಾಣದ ಅರ್ಜಿಯನ್ನು ವಿಚಾರಣೆ ನಡೆಸಿ ಶನಿವಾರ ಶಿಕ್ಷೆಯನ್ನು ಪ್ರಕಟಿಸುವುದಾಗಿ ತಿಳಿಸಿದರು.
ಇಂದು ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ಅವರು, 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳಿಗೆ ಜೈಲು ಶಿಕ್ಷೆಯ ಜೊತೆಗೆ ಗರಿಷ್ಠ ದಂಡ ವಿಧಿಸುವಂತೆ ಮನವಿ ಮಾಡಿದರು.
ಸತೀಶ್ ಸೈಲ್ ಪರ ವಕೀಲ ಮೂರ್ತಿ ಡಿ ನಾಯ್ಕ್ ಅವರು, ಶಾಸಕ ಸತೀಶ್ ಸೈಲ್ ಗೆ ಅನಾರೋಗ್ಯ ಇದೆ. ಸದ್ಯ ಸತೀಶ್ ಸೈಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯ ಕಾರಣದಿಂದ ಬೇಲ್ ಕೂಡ ಪಡೆದಿದ್ದರು. ಹೀಗಾಗಿ ಕನಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೇ ಸತೀಶ್ ಸೈಲ್ ಆರೋಗ್ಯಕ್ಕೆ ಸಂಬಂಧಿಸಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.
ಈ ಬೆನ್ನಲ್ಲೇ ನ್ಯಾಯಾಲಯದಲ್ಲಿ ಹಾಜರಿದ್ದ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಚೇತನ್ ಷಾ, ಸೋಮಶೇಖರ್, ಜನಾರ್ದನ ರೆಡ್ಡಿಯ ಆಪ್ತ ಸ್ವಸ್ತಿಕ್ ನಾಗರಾಜ್, ಖಾರದಪುಡಿ ಮಹೇಶ್, ಕೆವಿ ಗೋವಿಂದರಾಜುನನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಿದರು.
2009-10ರ ನಡುವೆ ನಡೆದಿದ್ದ ಬೆಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದ ಆರು ಪ್ರಕರಣಗಳ ತನಿಖೆ ನಡೆಸಿದ್ದ ಸಿಬಿಐ 2013ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಎಂಟು ತಿಂಗಳ ಅವಧಿಯಲ್ಲಿ ಸೈಲ್ ಮಾಲೀಕತ್ವದ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲಿಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರೋದನ್ನು ಪತ್ತೆ ಹಚ್ಚಿತ್ತು. 2012ರಲ್ಲಿ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ, 2013ರಲ್ಲಿ ಬಂಧಿಸಿತ್ತು. ಆಗ ಸತೀಶ್ ಸೈಲ್ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಲ್ಲಿ ಇದ್ದರು. ವಿಶೇಷ ಏನೆಂದರೆ ಆಗಲೂ ಕೂಡ ಸತೀಶ್ ಸೈಲ್ ಶಾಸಕರಾಗಿದ್ದರು.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ (Baramulla) ಜಿಲ್ಲಾ ನ್ಯಾಯಾಲಯದಲ್ಲಿ (Court) ಸಾಕ್ಷಿಗಾಗಿ ತಂದಿದ್ದ ಗ್ರೆನೇಡ್ ಸ್ಫೋಟಗೊಂಡು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದುಅಧಿಕಾರಿಗಳು ತಿಳಿಸಿದ್ದಾರೆ.
ಬಾರಾಮುಲ್ಲಾ ಪಟ್ಟಣದ ನ್ಯಾಯಾಲಯದ ಸಾಕ್ಷ್ಯ ಕೊಠಡಿ ಒಳಗೆ ಪ್ರಕರಣ ಒಂದರ ಸಾಕ್ಷ್ಯವಾಗಿ ಗ್ರೆನೇಡ್ ಸಂಗ್ರಹಿಸಿಲಾಗಿತ್ತು. ಅದು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 1:5ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಪೋಲೀಸ್ ಸಿಬ್ಬಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕೋರ್ಟ್ ಬಳಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ವದಂತಿಗಳಿಗೂ ಕಿವಿಗೊಡದಂತೆ ನಾಗರಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.
ಕೊಪ್ಪಳ: 10 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ 101 ಜನರನ್ನು ತಪ್ಪಿತಸ್ಥರು ಎಂದು ನ್ಯಾಯಾಲಯ ಇಂದು (ಅ.22) ತೀರ್ಪು ನೀಡಿದೆ.
ಅಸ್ಪೃಶ್ಯತೆ ಆಚರಣೆಯ ಹಿನ್ನೆಲೆಯಲ್ಲಿ 10 ವರ್ಷಗಳ ಹಿಂದೆ ನಡೆದ ಗಲಭೆಯಲ್ಲಿ ಭಾಗಿಯಾದ 101 ಜನರ ವಿರುದ್ಧ ಆರೋಪ ಸಾಬೀತಾಗಿದ್ದು, ಅ.24ರಂದು ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.ಇದನ್ನೂ ಓದಿ: ಸ್ಟೈಲೀಶ್ ಆಗಿ ಸೀರೆಯುಟ್ಟು ಹಾಟ್ ಆಗಿ ಕಾಣಿಸಿಕೊಂಡ ನಿಶ್ವಿಕಾ ನಾಯ್ಡು
2014ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹೊಟೇಲ್ ಹಾಗೂ ಕ್ಷೌರದ ಅಂಗಡಿಯನ್ನು ಧ್ವಂಸ ಮಾಡಿದ್ದರು. ಜೊತೆಗೆ ದಲಿತ ಕೇರಿಯ 4 ಗುಡಿಸಲುಗಳನ್ನು ಸುಟ್ಟು ಹಾಕಿದ್ದರು. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ದಲಿತರ ಮೇಲೆಯೂ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಘಟನೆಯಲ್ಲಿ ಭಾಗಿಯಾದ 117 ಜನರಲ್ಲಿ 101 ಜನರ ಮೇಲಿನ ಆರೋಪ ಸಾಬೀತಾಗಿದೆ. ಇದರಿಂದಾಗಿ ಭಾರಿ ಪ್ರಮಾಣದಲ್ಲಿ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.
ಈ ಪ್ರಕರಣದ ವಿಚಾರಣೆ ನಡೆಸಿದ ಕೊಪ್ಪಳ (Koppala) ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕರಣದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದ್ದಾರೆ. ಅದರಲ್ಲಿ ಕೆಲವರು ಸಾವನ್ನಪ್ಪಿದ್ದು, 101 ಜನರು ಮಾತ್ರ ಜೀವಂತವಾಗಿದ್ದಾರೆ. ಅವರಲ್ಲಿ ನ್ಯಾಯಲಯಕ್ಕೆ ಹಾಜರಾಗಿದ್ದ 100 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅಸ್ಪೃಶ್ಯತೆಯ ಕಾರಣಕ್ಕೆ ಶಿಕ್ಷೆಯಾಗುತ್ತಿರುವುದು ಇದು ದೊಡ್ಡ ಪ್ರಕರಣವಾಗಿದೆ ಎಂದು ಅಭಿಯೋಜಕರು ತಿಳಿಸಿದ್ದಾರೆ.
ಕೆಲವರು ಮಾಡಿರುವ ದೌರ್ಜನ್ಯದಿಂದಾಗಿ ಈಗ ಗ್ರಾಮದ ಕೆಲವು ಅಮಾಯಕರು ಶಿಕ್ಷೆ ಅನುಭವಿಸುವಂತಾಗಿದೆ. ದಲಿತರ ಮೇಲಿನ ದೌರ್ಜನ್ಯಕ್ಕೆ ಈಗ ಶಿಕ್ಷೆಯಾಗುತ್ತಿದೆ. ನ್ಯಾಯಲಯದ ತೀರ್ಪಿಗೆ ಎಲ್ಲರೂ ಬದ್ಧರಾಗಿರಬೇಕು. ಮುಂದಿನ ದಿನಗಳಲ್ಲಿ ಅಮಾಯಕರು ಹೊರಬರಲಿ ಎಂದು ಗ್ರಾಮಸ್ಥರು ಹೇಳಿದ್ದಾರೆ.
– ಐವರು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರಿಂದ ಚಾರ್ಜ್‌ಶೀಟ್ – ಆಗಸ್ಟ್ 2023 ಮತ್ತು ಏಪ್ರಿಲ್ 2024 ರ ನಡುವೆ ಹತ್ಯೆಗೆ ಪ್ಲ್ಯಾನ್
ಮುಂಬೈ: ನಟ ಸಲ್ಮಾನ್ ಖಾನ್ (Salman Khan) ಅವರನ್ನು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಅವರ ಫಾರ್ಮ್‌ಹೌಸ್ ಬಳಿ ಹತ್ಯೆ ಮಾಡಲು 25 ಲಕ್ಷ ರೂ. ಸುಪಾರಿ ಪಡೆಯಲಾಗಿತ್ತು ಎಂಬ ಶಾಕಿಂಗ್ ವಿಚಾರ ಮುಂಬೈ ಪೊಲೀಸರ (Mumbai Police) ತನಿಖೆಯಿಂದ ಬೆಳಕಿಗೆ ಬಂದಿದೆ.
ಸಲ್ಮಾನ್ ಖಾನ್ ಹತ್ಯೆ ಯತ್ನ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರದ ನವಿ ಮುಂಬೈ ಪೊಲೀಸರು ಐವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಆರೋಪಿಗಳು ಪಾಕಿಸ್ತಾನದಿಂದ (Pakistan) ಅತ್ಯಾಧುನಿಕ ಶಸ್ತ್ರಾಸ್ತ್ರಗಳಾದ ಎಕೆ 47, ಎಕೆ 92 ಮತ್ತು ಎಂ 16 ಮತ್ತು ಟರ್ಕಿ ನಿರ್ಮಿತ ಜಿಗಾನಾ ಆಯುಧವನ್ನು ಖರೀದಿಸಲು ಸಿದ್ಧತೆ ನಡೆಸಿತ್ತು. ಆರೋಪಿಗಳು ಸಲ್ಮಾನ್ ಖಾನ್ ಅವರ ಹತ್ಯೆಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರನ್ನು ನೇಮಿಸಿಕೊಂಡಿದ್ದಾರೆ. ಅವರೆಲ್ಲರೂ ಪುಣೆ, ರಾಯಗಡ, ನವಿ ಮುಂಬೈ, ಥಾಣೆ ಮತ್ತು ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ.
ಪಾಣಿಪತ್‌ನಿಂದ ಬಂಧಿತನಾಗಿದ್ದ ಸುಖಾ ಶೂಟರ್ ಅಜಯ್ ಕಶ್ಯಪ್ ಅಲಿಯಾಸ್ ಎಕೆ ಮತ್ತು ನಾಲ್ಕು ಮಂದಿ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ. ಬಿಗಿ ಭದ್ರತೆ ಮತ್ತು ಬುಲೆಟ್ ಪ್ರೂಫ್ ವಾಹನಗಳು ಇರುವ ಕಾರಣ ಸಲ್ಮಾನ್ ಖಾನ್ ಅವರ ಕೊಲೆಯನ್ನು ನಡೆಸಲು ಅತ್ಯಾಧುನಿಕ ಆಯುಧಗಳು ಬೇಕಾಗುತ್ತವೆ ಎಂಬ ನಿರ್ಧಾರಕ್ಕೆ ತಂಡ ಬಂದಿತ್ತು.
ಸುಖಾ ಪಾಕಿಸ್ತಾನ ಮೂಲದ ಶಸ್ತ್ರಾಸ್ತ್ರ ವ್ಯಾಪಾರಿ ಡೋಗರ್ ಜೊತೆ ವೀಡಿಯೊ ಕರೆ ಮೂಲಕ ಸಂಪರ್ಕಿಸಿದ್ದ. AK-47 ಮತ್ತು ಇತರ ಸುಧಾರಿತ ಶಸ್ತ್ರಾಸ್ತ್ರಗಳನ್ನು ಹೊಂದಿಸುವ ಸಲುವಾಗಿ ಮಾತುಕತೆ ನಡೆದಿತ್ತು. ಡೋಗರ್ ಶಸ್ತ್ರಾಸ್ತ್ರಗಳನ್ನು ಪೂರೈಸಲು ಒಪ್ಪಿಕೊಂಡಿದ್ದ. ಸುಖಾ 50 ಪ್ರತಿಶತ ಹಣವನ್ನು ಮುಂಗಡ ಪಾವತಿಸುತ್ತೇನೆ ಮತ್ತು ಉಳಿದ ಮೊತ್ತವನ್ನು ಭಾರತದಲ್ಲಿ ವಿತರಿಸಲಾಗುವುದು ಎಂದು ಭರವಸೆ ನೀಡಿದ್ದ.
ಎಲ್ಲಾ ಶೂಟರ್‌ಗಳು ಕೃತ್ಯ ಎಸಗಲು ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅವರ ಅನುಮತಿಗಾಗಿ ಕಾಯುತ್ತಿದ್ದರು.
ಸಲ್ಮಾನ್ ಖಾನ್ ಅವರನ್ನು ಹತ್ಯೆ ನಡೆಸಿದ ಬಳಿಕ ಎಲ್ಲರೂ ಕನ್ಯಾಕುಮಾರಿಯಲ್ಲಿ ಸೇರಬೇಕು. ನಂತರ ಬೋಟ್ ಮೂಲಕ ಶ್ರೀಲಂಕಾಗೆ ತೆರಳಿ ಅಲ್ಲಿಂದ ಭಾರತ ಭಾರತೀಯ ತನಿಖಾ ಸಂಸ್ಥೆಗಳು ತಲುಪಲು ಸಾಧ್ಯವಾಗದ ದೇಶಕ್ಕೆ ತೆರಳಲು ಪ್ಲ್ಯಾನ್ ಮಾಡಿದ್ದರು.
ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣದ ತನಿಖೆ ಇಳಿದಾಗ ಹತ್ಯೆಯ ಸಂಚು ಬಯಲಾಗಿದೆ ಎಂದು ಪೊಲೀಸರು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.