-ನ್ಯಾಯಮೂರ್ತಿಗಳ ಸಹಿಯನ್ನೇ ನಕಲಿ ಮಾಡಿ ನೇಮಕಾತಿ ಪತ್ರ ಹಂಚಿಕೆ!
ಕೊಪ್ಪಳ: ನ್ಯಾಯಾಲಯದಲ್ಲಿ (Court) ಕೆಲಸ ಕೊಡಿಸೋದಾಗಿ ಹಲವಾರು ಜನರಿಗೆ ಲಕ್ಷಾಂತರ ರೂ. ಹಣ ವಂಚಿಸಿರುವ ಪ್ರಕರಣ ಕೊಪ್ಪಳದಲ್ಲಿ (Koppal) ನಡೆದಿದೆ.
ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ವಂಚನೆ ಆರೋಪ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್, ಜವಾನ ಹುದ್ದೆ ಖಾಲಿ ಇದೆ ಎಂದು ಜನರಿಗೆ ನಂಬಿಸುತ್ತಿದ್ದ. ಅಲ್ಲದೇ ಉದ್ಯೋಗ ಕೊಡಿಸುತ್ತೇನೆ ಎಂದು ಪ್ರತಿಯೊಬ್ಬರ ಬಳಿ 7 ಲಕ್ಷ ರೂ. ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಹಣ ಪಡೆದವರಿಗೆ ನಕಲಿ ನೇಮಕಾತಿ ಪತ್ರ ಕೊಟ್ಟಿದ್ದಾನೆ. ಅಲ್ಲದೇ ನೇಮಕಾತಿ ಪತ್ರದಲ್ಲಿ ನ್ಯಾಯಮೂರ್ತಿಗಳ ಸಹಿಯನ್ನು ನಕಲಿ ಮಾಡಿದ್ದಾನೆ. ರಾಜ್ಯದ ಹಲವೆಡೆ ಇಂತಹ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಬೆಂಗಳೂರು (Bengaluru) ಮೂಲದ ಅಬ್ದುಲ್ ರಜಾಕ್ ಎಂಬವರು ಸಿದ್ದಲಿಂಗಯ್ಯ ವಿರುದ್ಧ ಸಿಸಿಬಿ (CCB) ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ದರ್ಶನ್ (Darshan) ಮತ್ತು ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನ (Judicial Custody) ಅವಧಿ ಸೆ.17ವರೆಗೆ ವಿಸ್ತಣೆಯಾಗಿದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.
ಪವಿತ್ರಾ ಗೌಡ, ದರ್ಶರ್ನ್ ಸೇರಿದಂತೆ ಎಲ್ಲಾ ಆರೋಪಿಗಳ ಹೆಸರನ್ನು ನ್ಯಾಯಾಧೀಶರು ಕರೆದಾಗ ಆರೋಪಿಗಳು ಎಸ್ ಸರ್ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢೀಕರಿಸಿದರು. ಇದನ್ನೂ ಓದಿ: ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದ ಪವಿತ್ರಾ ಗೌಡ
ಈ ವೇಳೆ ಸಂಪೂರ್ಣ ಚಾರ್ಜ್‌ಶೀಟ್ ನೀಡಬೇಕು. ಎಲೆಕ್ಟ್ರಾನಿಕ್ಸ್ ಸಾಕ್ಷ್ಯಗಳನ್ನು ಒಂದು ವಾರದಲ್ಲಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದರು. ಆದರೆ ಇನ್ನೂ ನೀಡಿಲ್ಲ ಎಂದು ಆರೋಪಿಗಳ ಪರ ವಕೀಲರು ಕೋರ್ಟ್ ಗಮನಕ್ಕೆ ತಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ CrPC ಸೆಕ್ಷನ್ 164 ಹೇಳಿಕೆಯನ್ನು ಸರ್ಟಿಫೈ ಕಾಪಿ ಕೊಡುವಂತೆ ದರ್ಶನ್, ಪವಿತ್ರಾ ಗೌಡ ಸಹಾಯಕ ಈ ಪ್ರಕರಣದಲ್ಲಿ ಎ9 ಆರೋಪಿಯಾಗಿರುವ ರಾಜನ ಪರ ವಕೀಲರು ಕೋರ್ಟ್‌ನಲ್ಲಿ ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸೆಷನ್ಸ್ ಕೋರ್ಟ್‌ನಲ್ಲಿ ಪಡೆದುಕೊಳ್ಳಿ ಎಂದು ಸೂಚಿಸಿದರು.
ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಕೋರ್ಟ್‌ಗೆ ಸಕಾಲಕ್ಕೆ ಹಾಜರಾಗದಿದ್ದಕ್ಕೆ ಸಿಬಿಐ ತನಿಖಾಧಿಕಾರಿ ಹಾಗೂ ವಕೀಲರ ವಿರುದ್ಧ ಸೀಲ್ದಾ ಕೋರ್ಟ್ ಗರಂ ಆಗಿದೆ. ಅತ್ಯಾಚಾರ ಮತ್ತು ಕೊಲೆ ಆರೋಪಿಗೆ ಜಾಮೀನು ನೀಡಬೇಕಾ ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿತು.
ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯಿತು. ಆದರೆ, ಸಿಬಿಐನ ತನಿಖಾಧಿಕಾರಿ ಕೋರ್ಟ್‌ನಲ್ಲಿ ಹಾಜರಿರಲಿಲ್ಲ. ಇತ್ತ ತನಿಖಾ ಸಂಸ್ಥೆಯ ವಕೀಲರು 40 ನಿಮಿಷ ತಡವಾಗಿ ಹಾಜರಾದರು. ಇದರಿಂದ ಕೋಪಗೊಂಡ ನ್ಯಾಯಾಲಯ, ಪ್ರಕರಣದ ಪ್ರಮುಖ ಆರೋಪಿಗೆ ಜಾಮೀನು ನೀಡಬೇಕೆ ಎಂದು ಗರಂ ಆಯಿತು. ತನಿಖಾ ಸಂಸ್ಥೆಯ ಈ ನಡೆ ಆಲಸ್ಯ ಮನೋಭಾವವನ್ನು ತೋರಿಸುತ್ತದೆ ಎಂದು ಚಾಟಿ ಬೀಸಿತು.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಂದ ಪ್ರಕರಣದಲ್ಲಿ ಬಂಧಿತನಾಗಿರುವ ಸಂಜಯ್ ರಾಯ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು.
ರಾಯ್ ಪರ ವಕೀಲರು ಜಾಮೀನಿಗಾಗಿ ವಾದ ಮಂಡಿಸುತ್ತಿದ್ದಂತೆ, ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಪಮೇಲಾ ಗುಪ್ತಾ ಅವರಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ತಡವಾಗಿ ಬರುತ್ತಾರೆ ಎಂದು ತಿಳಿಸಲಾಯಿತು. ಅದಕ್ಕೆ ಮ್ಯಾಜಿಸ್ಟ್ರೇಟ್, ನಾನು ಸಂಜಯ್ ರಾಯ್‌ಗೆ ಜಾಮೀನು ನೀಡಬೇಕೇ? ಇದು ಸಿಬಿಐನ ಆಲಸ್ಯ ಮನೋಭಾವ ತೋರಿಸುತ್ತದೆ. ಇದು ಅತ್ಯಂತ ದುರದೃಷ್ಟಕರ ಎಂದು ಗರಂ ಆದರು.
ವಕೀಲರು ಅಂತಿಮವಾಗಿ ಸುಮಾರು 40 ನಿಮಿಷಗಳ ಕೋರ್ಟ್‌ಗೆ ಬಂದರು. ವಿಳಂಬಕ್ಕೆ ಕಾರಣ ತಿಳಿಸಿದರು. ನಂತರ ವಾದಗಳು ಮುಂದುವರೆದವು. ಎರಡೂ ಕಡೆಯವರ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.
ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ (K.N Jagadish Kumar) ಅವರನ್ನು ಕೊಡಿಗೆಹಳ್ಳಿ ಪೊಲೀಸರು (Kodigehalli Police) ಬಂಧಿಸಿದ್ದಾರೆ.
ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ (Court) ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ (Goa) ಪತ್ತೆಯಾಗಿದ್ದು, ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ.
ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಅವರು ಕೋರ್ಟ್‍ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ದರ್ಶನ್‌ಗೆ ರಾಜ್ಯಾತಿಥ್ಯ ಪ್ರಕರಣದ ಪ್ರಾಥಮಿಕ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಅವರನ್ನ ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ (Ballari Jail) ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದ ಪ್ರಾಥಮಿಕ ವಿಚಾರಣೆ ಮುಕ್ತಾವಾಗಿದೆ. ಭದ್ರತಾ ಕಾರಣಗಳಿಂದಾಗಿ ಬುಧವಾರ (ಆ.28) ರಾತ್ರಿಯೇ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಈ ಕುರಿತ ಮಾಹಿತಿಯ ವೀಡಿಯೋ ಇಲ್ಲಿದೆ…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ (Darshan) ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ (Judicial Custody) ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.
ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ದರ್ಶನ್ ಅವರನ್ನು ಇಂದು ಸಂಜೆ ಅಥವಾ ರಾತ್ರಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಶಿರಾ ತುಮಕೂರು ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಕರತರಲಾಗುತ್ತದೆ.
ಉಡುಪಿ: ಕಾರ್ಕಳದಲ್ಲಿ (Karkala) ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ (Police Coustody) ಒಪ್ಪಿಸಿದೆ.
ಈ ಬಗ್ಗೆ ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಮಾತನಾಡಿ, ಪ್ರಮುಖ ಆರೋಪಿಗಳಾದ ಅಲ್ತಾಫ್, ರಿಚರ್ಡ್ನನ್ನು ಪೊಲೀಸ್ ಕಸ್ಟಡಿಗೆ ಕಾರ್ಕಳ ನಗರಠಾಣೆ ಪೊಲೀಸರು ಕೇಳಿದ್ದರು. ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರ ಕರೆಸಿ ಬಿಯರ್ ಬಾಟಲಿ ತರಿಸಿದ್ದ. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದನ್ನೂ ಓದಿ: ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು
– ಜೈಲು ಸೇರಿ 72 ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇಕೆ?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಪರ ವಕೀಲರು ಜಾಮೀನಿಗಾಗಿ (Court Bail) ಸೋಮವಾರ (ಆ.19) ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 22ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳೇ ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಭರದ ಸಿದ್ಧತೆ ನಡೆಸುತ್ತಿದ್ದಾರೆ. ಈ ಹೊತ್ತಿನಲ್ಲಿ ಪವಿತ್ರಾಗೌಡ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಬೆಸ್ಕಾಂ ಎಡವಟ್ಟು; 1 ತಿಂಗಳಿಗೆ ಬರೋಬ್ಬರಿ 5.86 ಲಕ್ಷ ರೂ. ವಿದ್ಯುತ್ ಬಿಲ್ – ಹೌಹಾರಿದ ಮನೆ ಮಾಲೀಕ
ಪವಿತ್ರಾಗೆ ಜೈಲು ಏಕೆ?
ಕಳೆದ ಜೂನ್ 11ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ, ಎ3 ಪವನ್, ಎ4 ರಾಘವೇಂದ್ರ, ಎ5 ನಂದೀಶ್, ಎ6 ಜಗದೀಶ್, ಎ7 ಅನುಕುಮಾರ್, ಎ10 ವಿನಯ್, ಎ11 ನಾಗರಾಜ್, ಎ12 ಲಕ್ಷ್ಮಣ್, ಎ13 ದೀಪಕ್, ಎ14 ಪ್ರದೋಶ್, ಎ16 ನಿಖಿಲ್ ಆರೋಪಿಗಳು ಜೈಲು ಪಾಲಾಗಿದ್ದಾರೆ. ಸದ್ಯ ತನಿಖೆಯಲ್ಲಿ 200ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿದ್ದಾರೆ. ಇದನ್ನೂ ಓದಿ: ಕೈಹಿಡಿಯದ ಅದೃಷ್ಟ- ಅಕ್ಷಯ್ ಕುಮಾರ್ ನಟನೆಯ ‘ಖೇಲ್ ಖೇಲ್ ಮೇ’ ಚಿತ್ರ ಹೀನಾಯ ಸೋಲು
ಕೊಲೆ ಕೇಸ್ ಭೇದಿಸಿದ್ದು ಹೇಗೆ?
ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದನೆಂದು ಆರೋಪಿಸಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಮತ್ತು ಗ್ಯಾಂಗ್ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಕಿಡ್ನ್ಯಾಪ್ ಮಾಡಿತ್ತು. ಬಳಿಕ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್‍ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಕೊಲೆಯ ಬಳಿಕ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ಮೋರಿ ಬಳಿ ಎಸೆಯಲಾಗಿತ್ತು. ಇದಾದ ನಂತರ ನಾಲ್ವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು. ಈ ವೇಳೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇರುವುದು ಬಯಲಾಗಿತ್ತು.
ನಂತರ ಪೊಲೀಸರು ಮೈಸೂರಿಗೆ ತೆರಳಿ ದರ್ಶನ್‌ರನ್ನ ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತಂದಿದ್ದರು. ಬಳಿಕ ಒಬ್ಬೊಬ್ಬರಂತೆ 17 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ – ಸಿಆರ್‌ಪಿಎಫ್ ಅಧಿಕಾರಿ ಹುತಾತ್ಮ
ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ದ ದಾಖಲಾದ ಎರಡು ಖಾಸಗಿ ದೂರುಗಳ ವಿಚಾರಣೆಯನ್ನು ಬೆಂಗಳೂರಿನ ಜನ್ರಪತಿನಿಧಿಗಳ ಕೋರ್ಟ್ ಇಂದು ನಡೆಸಿತು.
ಶಿವಮೊಗ್ಗ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದ ವ್ಯಕ್ತಿಯನ್ನು ಹತ್ಯೆಗೈದಿದ್ದ ಆರೋಪಿಗಳಿಗೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ನೀಡಿದೆ.
ಶಿಕ್ಷೆಗೆ ಗುರಿಯಾದ ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ಅಪರಾಧಿಗಳು 2021ರಲ್ಲಿ, ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಡುತ್ತಾನೆ ಎಂಬ ಕಾರಣಕ್ಕೆ ಇರ್ಫಾನ್ ಎಂಬಾತನನ್ನು ಟಿಪ್ಪು ನಗರದಲ್ಲಿ ಮಾರಕಾಸ್ತ್ರಗಳಿಂದ ಚುಚ್ಚಿ ಹತ್ಯೆಗೈದಿದ್ದರು.
ಪ್ರಕರಣ ಸಂಬಂಧ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಅಲ್ಲದೇ ಈ ಆರೋಪಿಗಳಿಗೆ ಜಾಮೀನು ನೀಡಬಾರದು. ಜಾಮೀನು ನೀಡಿದರೆ ಮೃತ ಇರ್ಫಾನ್ ಕುಟುಂಬಕ್ಕೆ ತೊಂದರೆ ನೀಡುತ್ತಾರೆ ಎಂದು ಪೊಲೀಸರು ಹಾಗೂ ಸರ್ಕಾರಿ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ವಾದ ಆಲಿಸಿದ ನ್ಯಾಯಾಲಯ ಎಂಟು ಮಂದಿ ಆರೋಪಿಗಳಿಗೆ ತಲಾ 5 ಸಾವಿರ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.