Tag: court

  • ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

    ರೇಣುಕಾಸ್ವಾಮಿ ಹತ್ಯೆ ಕೇಸ್ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

    ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy murder case) ನಾಲ್ವರು ಆರೋಪಿಗಳನ್ನ ತುಮಕೂರು ಜಿಲ್ಲಾ ಕಾರಾಗೃಹಕ್ಕೆ (Tumakuru jail) ಸ್ಥಳಾಂತರಿಸಲಾಗಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‍ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ (Court) ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆದೇಶ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳನ್ನ ಸ್ಥಳಾಂತರಿಸಿದ್ದಾರೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸಲ್ಲ: ಹೆಚ್‌ಡಿಕೆ

    ಭದ್ರತಾ ದೃಷ್ಟಿಯಿಂದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಮನವಿಯನ್ನು ಪರಿಗಣಿಸಿದ್ದ ನ್ಯಾಯಾಲಯ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಆದೇಶಿಸಿತ್ತು.

    ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಲ್ಲರೂ ಒಂದೇ ಕಡೆ ಇರುವುದು ಸೂಕ್ತವಲ್ಲ ಎಂಬ ಉದ್ದೇಶದಿಂದ ಕೆಲವರನ್ನು ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ

  • ಬೆಂಗಳೂರು ಕೋರ್ಟ್‌ಗೆ ಉದಯನಿಧಿ ಸ್ಟಾಲಿನ್‍ ಹಾಜರು- ಬಿಗ್ ರಿಲೀಫ್

    ಬೆಂಗಳೂರು ಕೋರ್ಟ್‌ಗೆ ಉದಯನಿಧಿ ಸ್ಟಾಲಿನ್‍ ಹಾಜರು- ಬಿಗ್ ರಿಲೀಫ್

    ಬೆಂಗಳೂರು: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತಮಿಳುನಾಡು ಸಚಿವ (Tamilnadu Minister) ಎಂ.ಕೆ ಉದಯನಿಧಿ ಸ್ಟಾಲಿನ್‍ಗೆ (Udhayanidhi Stalin) ಬಿಗ್ ರಿಲೀಫ್ ಸಿಕ್ಕಿದೆ.

    ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಅವರು ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಸ್ಟಾಲಿನ್ ಹಾಜರಾತಿಯನ್ನು ಪರಿಗಣಿಸಿದ ಕೋರ್ಟ್, 5 ಸಾವಿರ ನಗದು ಹಾಗೂ 50 ಸಾವಿರ ಮೊತ್ತದ ಆರೋಪಿ ವೈಯಕ್ತಿಕ ಬಾಂಡ್ ಮೇರೆಗೆ ಜಾಮೀನು ನೀಡಿದೆ. ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು.

    ಸ್ಟಾಲಿನ್ ಪರ ವಕೀಲರ ವಾದ ಏನಿತ್ತು?: ಉಳಿದ ಆರೋಪಿಗಳು ಎಲ್ಲಿ ಜಡ್ಜ್ ಪ್ರಶ್ನೆಗೆ ಸ್ಟಾಲಿನ್ ಪರ ವಕೀಲರು, 2- 4 ವರೆಗಿನ ಆರೋಪಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ದೇಶಾದ್ಯಂತ ಏಳು ಪ್ರಕರಣಗಳು ದಾಖಲಾಗಿವೆ. ಅವರಲ್ಲಿ ಒಬ್ಬರು ರಾಜ್ಯದ ಕ್ರೀಡಾ ಸಚಿವ. ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಕೋರ್ಟ್‍ಗೆ ಮನವಿ ಮಾಡಿಕೊಂಡರು. ಇದೇ ವೇಳೆ ಸುಪ್ರೀಂ ಕೋರ್ಟ್ ನಿಂದ ವಿನಾಯಿತಿ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶ ಪ್ರತಿ ಸಿಕ್ಕಿಲ್ಲ. ಹೀಗಾಗಿ ಜುಲೈ ಕೊನೆಯ ವಾರದ ಒಳಗೆ ಪ್ರತಿ ನೀಡಲು ಸೂಚನೆ ನೀಡಲಾಗಿದೆ ಎಂದರು.

    ಏನಿದು ಪ್ರಕರಣ?: 2023ರ ಸೆಪ್ಟೆಂಬರ್ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಯಾವುದೇ ಕ್ಷಣದಲ್ಲಾದ್ರೂ ಪ್ರೀತಂ ಗೌಡಗೆ ಎಸ್‍ಐಟಿಯಿಂದ ನೊಟೀಸ್

    ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಇದರ ಹೊರತಾಗಿಯೂ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

  • ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್- ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ ‘ದಾಸ’?

    ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್- ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ ‘ದಾಸ’?

    – ಇಂದು ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ (Renukaswamy Case) ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಆದರೆ ಜೈಲು ಸೇರಿದ ನಟನನ್ನು ಸೆಕ್ಯುರಿಟಿ ಸೆಲ್‍ನಲ್ಲಿ ಇಟ್ಟಿರುವುದು ಕುತೂಹಲ ಹುಟ್ಟಿದೆ.

    ಹೌದು. ವಿಐಪಿ ಸೆಲ್ ಪಕ್ಕದ ಸೆಕ್ಯುರಿಟಿ ಸೆಲ್ ನಲ್ಲಿ ದರ್ಶನ್ (Challenging Star Darshan) ವಾಸವಾಗಿದ್ದಾರೆ. ಈ ಸೆಲ್‍ಗೆ ಇತರೆ ಯಾವುದೇ ಆರೋಪಿಗಳು ಅಥವಾ ಸಿಬ್ಬಂದಿಗೆ ಎಂಟ್ರಿ ಇಲ್ಲ. ಈ ಮೂಕ ನಟನನ್ನು ಸೆಕ್ಯುರಿಟಿ ಸೆಲ್ ನಲ್ಲಿಟ್ಟು ಸಿಬ್ಬಂದಿ ರಕ್ಷಣೆ ನೀಡುತ್ತಿದ್ದಾರೆ. ಇದನ್ನೂ ಓದಿ: ದರ್ಶನ್ ಪ್ರಕರಣ: ತಪ್ಪಿಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದ ನಿರ್ದೇಶಕ ಓಂ ಪ್ರಕಾಶ್ ರಾವ್

    ಇನ್ನು ಕೊಲೆ ಆರೋಪಿಗಳು ಒಟ್ಟಿಗೆ ಸೇರಿ ಸಾಕ್ಷ್ಯಗಳ ಮೇಲೆ ಪರಿಣಾಮ ಬೀರಬಹುದು. ರೇಣುಕಾಸ್ವಾಮಿ ಕೊಲೆ ಕೇಸ್ ಸಾಕಷ್ಟು ಸದ್ದು ಮಾಡಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಇತರೆ ನಟರ ಫ್ಯಾನ್ಸ್‍ಗಳಿದ್ದು, ಜೈಲಿನಲ್ಲೂ ಫ್ಯಾನ್ಸ್‍ಗಳ ನಡುವೆ ಗಲಾಟೆ ಆಗುವ ಸಾಧ್ಯತೆಗಳಿವೆ. ಮತ್ತೊಂದು ಕಡೆ ಕೆಲ ದರ್ಶನ್ ಅಭಿಮಾನಿಗಳಿಂದಲೇ ಆರೋಪಿಗಳ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಇದೆ. ಈ ನಡುವೆ ದರ್ಶನ್ ಜೈಲಿಗೆ ಬರಲು, ಜೊತೆಗಿದ್ದವರೇ ಕಾರಣ ಅನ್ನೋ ಮಾತುಗಳು ಕೇಳಿಬಂದಿವೆ. ಈ ಎಲ್ಲಾ ಕಾರಣಗಳಿಂದಾಗಿ ನಟ ದರ್ಶನ್ ರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡುವಂತೆ ಎಸ್‍ಪಿಪಿ ಮನವಿ ಮಾಡಿದ್ದಾರೆ.

    ಇಂದು ಅರ್ಜಿ ವಿಚಾರಣೆ: ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಕುರಿತು ಸೋಮವಾರ ಅರ್ಜಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿತ್ತು. ಹಾಗಾಗಿ ಇಂದು ಈ ಸಂಬಂಧ ವಾದ ಪ್ರತಿವಾದ ನಡೆಯಲಿದ್ದು, ದರ್ಶನ್ ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

  • ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು

    ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣ (Renukaswamy case) ಸಂಬಂಧ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ದರ್ಶನ್ ಸೇರಿ ನಾಲ್ವರಿಗೆ 13 ದಿನ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿದೆ. ಈ ನಡುವೆ ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.

    ಆನ್‍ಲೈನ್‍ನಲ್ಲಿ ಎಲೆಕ್ಟ್ರಿಕ್ ಶಾಕ್ ಟಾರ್ಚ್ ಖರೀದಿ ಮಾಡಿರುವುದು ಬಯಲಾಗಿದೆ. ಆರೋಪಿ ಧನ್ ರಾಜ್ ಆನ್ ಲೈನ್ ಬುಕ್ ಮಾಡಿಕೊಂಡು ಎಲೆಕ್ಟ್ರಿಕ್ ಟಾರ್ಚ್ ತರಿಸಿಕೊಂಡಿದ್ದಾನೆ. ಈ ಬಗ್ಗೆ ಸಾಕ್ಷಿದಾರನ ಬಳಿ 164 ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ತಲೆಕೆಡಿಸಿಕೊಳ್ಳಬೇಡಿ ಸರ್- ಜೈಲುಪಾಲಾದ ದರ್ಶನ್‌ಗೆ ಧೈರ್ಯ ಹೇಳಿದ ಅಭಿಮಾನಿ

    ಪ್ರಕರಣದ ಎಲ್ಲಾ ಆರೋಪಿಗಳು ವೆಬ್ ಆ್ಯಪ್ (Web App) ಬಳಕೆ ಮಾಡಿದ್ದಾರೆ. ವೆಬ್ ಆ್ಯಪ್ ಮೂಲಕ ಆರೋಪಿತರು ಮಾತನಾಡಿದ್ದಾರೆ. ಬಳಿಕ ಎಲ್ಲಾ ಆರೋಪಿಗಳು ಸಿಮ್ ಬಿಸಾಡಿ ಹೊಸ ಸಿಮ್ ಖರೀದಿ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಕೊಲೆಯಾದ ರೇಣುಕಾಸ್ವಾಮಿಯ ಮೊಬೈಲ್ ಫೋನ್ ಸುಮ್ಮನಹಳ್ಳಿ ಮೋರಿಯಲ್ಲಿ ಎಸೆದಿದ್ದಾರೆ. ಹಾಗಾಗಿ ರೇಣುಕಾ ಸ್ವಾಮಿಯ ಮೊಬೈಲ್ ನಲ್ಲಿದ್ದ ಡಾಟಾ ನಿಷ್ಕ್ರಿಯಗೊಂಡಿದೆ. ಈ ನಿಷ್ಕ್ರಿಯಗೊಂಡಿರೋ ಡಾಟಾ ಮರಳಿ ಪಡೆಯಲು ಮೃತನ ಹೆಸರಲ್ಲಿ ಹೊಸ ಸಿಮ್ ಕಾರ್ಡ್ ಪಡೆಯಲಾಗಿದೆ. ಸಂಬಂಧಪಟ್ಟ ಕಂಪನಿಯ ಸಿಮ್ ಕಾರ್ಡ್ ಪಡೆದು ಡಾಟಾ ರಿಟ್ರೀವ್‍ಗೆ ಕಳಿಸಲಾಗಿದೆ.

    ಇಷ್ಟು ಮಾತ್ರವಲ್ಲದೇ ಆರೋಪಿಗಳು ಮೃತ ರೇಣುಕಾಸ್ವಾಮಿಯ ಬಟ್ಟೆ ಕೂಡ ಬದಲಾವಣೆ ಮಾಡಿದ್ದಾರೆ. ಈ ನಡುವೆ ಸಾಕ್ಷಿದಾರರಿಗೆ ಎ2 ದರ್ಶನ್ ಸಹಚರರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಜೈಲಿನಲ್ಲಿರೋ ದರ್ಶನ್ ಅಭಿಮಾನಿ ಕೈದಿಗಳಿಂದ ಹಲ್ಲೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿಕೊಳ್ಳಲಾಗಿದೆ.

    ನಟ ದರ್ಶನ್ ವಿರುದ್ಧ 2011 ರಲ್ಲಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್‍ಗಳು ದಾಖಲಾಗಿದೆ. 498ಎ, 323, 355 506ಬಿ, 27 ಆರ್ಮ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿರೋದನ್ನ ಉಲ್ಲೇಖ ಮಾಡಲಾಗಿದೆ.

  • ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

    ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್‌ ಹಾಗೂ ಕೊಲೆ ಪ್ರಕರಣದಲ್ಲಿ ಇಂದು ಜೈಲು ಪಾಲಾದ ಅಮ್ಮನನ್ನು ಕಂಡು ಪವಿತ್ರಾ ಗೌಡ ಮಗಳು ಕಣ್ಣೀರು ಹಾಕಿದ್ದಾಳೆ.‌

    ಹೌದು. ಕೊಲೆ ಪ್ರಕರಣ ಸಂಬಂಧ ಇಂದು ಮಧ್ಯಾಹ್ನದ ಬಳಿಕ ಆರೋಪಿಗಳನ್ನು ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್‌, ದರ್ಶನ್‌ ಸಹಿತ 4 ಮಂದಿಯನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿದರೆ, ಪವಿತ್ರಾ ಗೌಡ ಸಹಿತ 9 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಇತ್ತ ಕೋರ್ಟ್‌ ಹೊರಗಡೆ ಪವಿತ್ರಾ ಗೌಡ ತಾಯಿ ಹಾಗೂ ಮಗಳು ಕಾಯುತ್ತಾ ನಿಂತಿದ್ದರು. ಪವಿತ್ರಾ ಗೌಡ (Pavithra Gowda) ಕೋರ್ಟ್‌ನಿಂದ ಹೊರ ಬಂದು ಪೊಲೀಸ್‌ ವ್ಯಾನ್‌ ಹತ್ತುತ್ತಿದ್ದಂತೆಯೇ ಇಬ್ಬರು ಕೂಡ ಪವಿತ್ರಾ ಗೌಡ ಅವರನ್ನು ಕಂಡು ಕಣ್ಣೀರು ಹಾಕಿದ್ದಾರೆ. ಇನ್ನು ಪವಿತ್ರಾ ಗೌಡ ಕೂಡ ಇಬ್ಬರನ್ನು ನೋಡಿ ಗದ್ಗದಿತರಾದರು. ಬಳಿಕ ಅಮ್ಮ ಹಾಗೂ ಮಗಳನ್ನು ಸಮಾಧಾನ ಪಡಿಸಿದ್ದಾರೆ.

    ಕಣ್ಣೀರು ಹಾಕುತ್ತಾ ಇದ್ದ ಮಗಳಿಗೆ, ಏನೂ ಆಗಲ್ಲ.. ಸುಮ್ಮನೇ ಇರು ಸುಮ್ಮನೆ ಇರು ಎಂದು ಪವಿತ್ರಾ ಗೌಡ ಸಮಾಧಾನ ಮಾಡಿದ್ದಾರೆ. ಆದರೆ ಹೆಚ್ಚಿನ ಮಾತುಕತೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಕೂಡಲೇ ವ್ಯಾನ್‌ ಹೊರಟಿದ್ದು, ಅಳುತ್ತಲೇ ತಲೆ ತಗ್ಗಿಸಿಕೊಂಡು ಪವಿತ್ರಾ ಪರಪ್ಪನ ಅಗ್ರಹಾರ ಜೈಲಿನತ್ತ ತೆರಳಿದರು. ಇದನ್ನೂ ಓದಿ: ದರ್ಶನ್‌ ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಜೈಲಿಗೆ

  • ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ

    ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ

    -ಪ್ರತಿ ಪ್ರಕರಣದಲ್ಲೂ ಪುರುಷತ್ವ ಪರೀಕ್ಷೆಯಿಂದ ಮುಜುಗರ ಎಂದ ಪ್ರಜ್ವಲ್

    ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Court) ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.

    ಎರಡನೇ ಕೇಸ್‍ನಲ್ಲಿ ಬಾಡಿ ವಾರೆಂಟ್ ಪಡೆದಿದ್ದ ಎಸ್‍ಐಟಿ, ಇಂದು ಕೋರ್ಟ್‍ಗೆ ಹಾಜರುಪಡಿಸಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಎಸ್‍ಐಟಿಗೆ ನೋಟಿಸ್ ನೀಡಿ ಅರ್ಜಿ ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಮೂಲಕ ಪ್ರಜ್ವಲ್‍ಗೆ ನ್ಯಾಯಾಂಗ ಬಂಧನ ಮುಂದುವರಿಸಲಾಗಿದೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

    ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ನಿಮಗೆ ಆರೋಗ್ಯ ಸಮಸ್ಯೆ ಇದೆಯೇ ಎಂದು ವಿಚಾರಿಸಿದ್ದಾರೆ. ಈ ವೇಳೆ ಪ್ರಜ್ವಲ್ ಉಸಿರಾಟದ ಸಮಸ್ಯೆ ಇದೆ. ಎಂಆರ್‍ಐ ಮಾಡಿಸಬೇಕಿದೆ ಎಂದು ಹೇಳಿದ್ದಾರೆ. ನಾನು ಎರಡು ಕೇಸ್‍ನಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಇದರಿಂದ ತುಂಬಾ ಮುಜುಗರ ಆಗತ್ತೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳ್ತಾರೆ. ಈಗಾಗಲೇ ಎರಡು ಬಾರಿ ಒಂದೇ ಟೆಸ್ಟ್ ಮಾಡಲಾಗಿದೆ ಎಂದು ಅವರು ಜಡ್ಜ್ ಮುಂದೆ ಅಳಲು ತೋಡಿಕೊಂಡಿದ್ದಾರೆ.

    ಈ ವೇಳೆ ಮೂರನೇ ಕೇಸ್‍ನಲ್ಲಿ ಕಸ್ಟಡಿಗೆ ಬಾಡಿ ವಾರಂಟ್ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಜೂ.19 ರಂದು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ

  • ತೆಲಂಗಾಣದಲ್ಲಿ 1,200ಕ್ಕೂ ಹೆಚ್ಚು ಫೋನ್‌ಗಳ ಕದ್ದಾಲಿಕೆ – ಚಾರ್ಜ್‌ಶೀಟ್‌ ಸಲ್ಲಿಕೆ, ಬಿಆರ್‌ಎಸ್‌ ನಾಯಕರ ಹೆಸರಿಲ್ಲ

    ತೆಲಂಗಾಣದಲ್ಲಿ 1,200ಕ್ಕೂ ಹೆಚ್ಚು ಫೋನ್‌ಗಳ ಕದ್ದಾಲಿಕೆ – ಚಾರ್ಜ್‌ಶೀಟ್‌ ಸಲ್ಲಿಕೆ, ಬಿಆರ್‌ಎಸ್‌ ನಾಯಕರ ಹೆಸರಿಲ್ಲ

    ಹೈದರಾಬಾದ್‌: ತೆಲಂಗಾಣದಲ್ಲಿ (Telangana) ಬಿರುಗಾಳಿ ಎಬ್ಬಿಸಿದ್ದ ಫೋನ್‌ ಟ್ಯಾಪಿಂಗ್‌ (Phones Tapping) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು 1,200ಕ್ಕೂ ಹೆಚ್ಚು ಫೋನ್‌ಗಳನ್ನು ಕದ್ದಾಲಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ (Chargesheet) ಸಲ್ಲಿಕೆ ಮಾಡಿದ್ದಾರೆ.

    ಆರೋಪಿಗಳು ಮತ್ತು ಹಿರಿಯ ಪೊಲೀಸ್‌ ಅಧಿಕಾರಿಗಳು ಶೇಖರಣಾ ಸಾಧನಗಳನ್ನು ಹಾನಿ ಮಾಡುವ ಮೂಲಕ ಸಾಕ್ಷ್ಯವನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ ಎಂಬ ವಿಚಾರವನ್ನು ಹೈದರಾಬಾದ್ ಪೊಲೀಸರು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಚಾರ್ಜ್‌ಶೀಟ್‌ನಲ್ಲಿ ಯಾವೊಬ್ಬ ಬಿಆರ್‌ಎಸ್‌ ನಾಯಕರ (BRS Leaders) ಹೆಸರನ್ನು ಉಲ್ಲೇಖಿಸಿಲ್ಲ. ಇದನ್ನೂ ಓದಿ: ಸಿನಿಮಾ ಇಂಡಸ್ಟ್ರಿಯಿಂದಲೇ ದರ್ಶನ್ ಬ್ಯಾನ್ ಮಾಡಬೇಕು: ರೇಣುಕಾಸ್ವಾಮಿ ತಾಯಿ ಆಕ್ರೋಶ

     

    ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ ಪ್ರಣೀತ್ ರಾವ್, ಹೆಚ್ಚುವರಿ ಅಧೀಕ್ಷಕರಾದ ಭುಜಂಗ ರಾವ್ ಮತ್ತು ತಿರುಪತಣ್ಣ, ಮಾಜಿ ಉಪ ಪೊಲೀಸ್ ಆಯುಕ್ತ (ಟಾಸ್ಕ್ ಫೋರ್ಸ್) ರಾಧಾ ಕಿಶನ್ ರಾವ್ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಮಾಜಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥ ಪ್ರಭಾಕರ ರಾವ್ ಮತ್ತು ಸ್ಥಳೀಯ ಮಾಧ್ಯಮ ಸಂಸ್ಥೆಯ ಹಿರಿಯ ಉದ್ಯೋಗಿ ಶ್ರವಣ್‌ ಕುಮಾರ್‌ ನಾಪತ್ತೆಯಾಗಿದ್ದಾರೆ.

    ಕಳೆದ ವರ್ಷ ಎ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಗೆ ಆದೇಶಿಸಿತ್ತು. ಚಂದ್ರಶೇಖರ್‌ ರಾವ್‌ ನೇತೃತ್ವದ ಸರ್ಕಾರ ವಿರೋಧಿ ರಾಜಕೀಯ ಪಕ್ಷಗಳ ನಾಯಕರು, ಸೆಲೆಬ್ರಿಟಿಗಳು, ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಸೇರಿದಂತೆ ಹಲವಾರು ಉನ್ನತ ವ್ಯಕ್ತಿಗಳ ಫೋನ್ ಕದ್ದಾಲಿಕೆ ಮಾಡಲು ಅನುಮತಿ ನೀಡಿದ್ದು ತೆಲಂಗಾಣದಲ್ಲಿ ಬಿರುಗಾಳಿ ಎಬ್ಬಿಸಿತ್ತು. ತನ್ನ ಫೋನನ್ನೇ  ಕದ್ದಾಲಿಕೆ ಮಾಡಲಾಗಿದೆ ಎಂದು ಹಾಲಿ ಸಿಎಂ ರೇವಂತ್‌ ರೆಡ್ಡಿ ಆರೋಪಿಸಿದ್ದರು.

    ಈ ಸಂಬಂಧ ಮಾರ್ಚ್ 10 ರಂದು ಪ್ರಕರಣ ದಾಖಲಾಗಿದ್ದು, ಹೈದರಾಬಾದ್ ಪೊಲೀಸರು 90 ದಿನಗಳ ಒಳಗಡೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

     

  • ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

    ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

    ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ (Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲಾ  13 ಆರೊಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

    ವಿಚಾರಣೆ ವೇಳೆ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಚಾರಣೆ ವೇಳೆ ನ್ಯಾಯಾಲಯ (Court) ದರ್ಶನ್‍ಗೆ ಯಾವುದಾದರೂ ತೊಂದರೆ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ, ಇಲ್ಲ ಎಂದು ದರ್ಶನ್ ಪ್ರತಿಕ್ರಿಯಿಸಿದರು. ವಕೀಲರ ನೇಮಕ ಮಾಡಿಕೊಳ್ಳುತ್ತೀರಾ? ಎಂಬ ಪ್ರಶ್ನೆಗೆ, ಹೌದು ಎಂದರು. ಬಳಿಕ ಮನೆಯವರಿಗೆ ಬಂಧನದ ಮಾಹಿತಿ ನೀಡಿದ್ದೇನೆ ಎಂದು ನ್ಯಾಯಾಲಯಕ್ಕೆ ದರ್ಶನ್ ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ ಟೀಂ ರೌದ್ರವತಾರಕ್ಕೆ ನರಳಿ ನರಳಿ ಪ್ರಾಣಬಿಟ್ಟ ರೇಣುಕಾಸ್ವಾಮಿ!

    ಈ ವೇಳೆ ದರ್ಶನ್ ಪರ ವಕೀಲ ನಾರಾಯಣಸ್ವಾಮಿ, ದರ್ಶನ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ರೇಣುಕಾಸ್ವಾಮಿ ಶವ ಕೂಡ ಪತ್ತೆಯಾಗಿದೆ. ಇಷ್ಟೇ ಅಲ್ಲದೇ ದರ್ಶನ್ ವಿರುದ್ಧ ಯಾವುದೇ ಆರೋಪಗಳಿಲ್ಲ. ಅವರು ಎಲ್ಲೂ ತಪ್ಪಿಸಿಕೊಂಡಿಲ್ಲ. ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಪೊಲೀಸ್ ಕಸ್ಟಡಿ ಅಗತ್ಯವಿಲ್ಲ ಎಂದು ವಾದಿಸಿದರು.

    ವಿಚಾರಣೆ ಬಳಿಕ 6ನೇ ಎಸಿಎಂಎಂ ನ್ಯಾಯಾಧೀಶ ವಿಶ್ವನಾಥ್ ಗೌಡರ್, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ನಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದಾರೆ.

    ಏನಿದು ಪ್ರಕರಣ?: ನಟ ದರ್ಶನ್ ಹಾಗೂ ಆರೋಪಿಗಳು ಮೆಡಿಕಲ್ ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಶನಿವಾರ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆ ತಂದು 24 ಗಂಟೆ ನಿರಂತರ ಚಿತ್ರ ಹಿಂಸೆ ನೀಡಿದ್ದಾರೆ. ತನ್ನ ಸ್ನೇಹಿತ ಉದ್ಯಮಿ, ವಿನಯ್‍ಗೆ ಸೇರಿದ ಆರ್‍ಆರ್ ನಗರದದ ಪಟ್ಟಣಗೆರೆ ಗೋಡೌನ್‍ಗೆ ರೇಣುಕಾಸ್ವಾಮಿಯನ್ನು ಕರೆ ತಂದು ಅಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿದ್ದರು.

    ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಜೊತೆ ಸಂಪರ್ಕ ಸಾಧಿಸಲು ಹುಡುಗಿ ಹೆಸರಿನಲ್ಲಿ ಫೇಕ್ ಖಾತೆಯನ್ನು ದರ್ಶನ್ ತಂಡ ತೆರೆದಿತ್ತು. ಈ ಖಾತೆಯ ಮೂಲಕ ರೇಣುಕಾಸ್ವಾಮಿಯ ಜೊತೆ ಸಂವಹನ ಮಾಡಲಾಗುತ್ತಿತ್ತು.

    ಶನಿವಾರ ಮಾತನಾಡಲು ಮನೆಯಿಂದ ಹೊರಗಡೆ ಬಾ ಎಂದು ಖಾತೆಯಿಂದ ಮಸೇಜ್ ಕಳುಹಿಸಲಾಗಿತ್ತು. ಈ ಮಸೇಜ್‍ಗೆ ಒಪ್ಪಿ ಆತನ ಮನೆಯಿಂದ ಹೊರಗೆ ಬಂದಿದ್ದ. ಚಿತ್ರದುರ್ಗದಲ್ಲಿರುವ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಸೇನಾ ಅಧ್ಯಕ್ಷ ರಘು ದರ್ಶನ್ ನೇತೃತ್ವದಲ್ಲಿ ಅಪಹರಣ ಮಾಡಿ ಬೆಂಗಳೂರಿಗೆ ಕರೆ ತರಲಾಗಿತ್ತು.

    ಹಲ್ಲೆ ನಡೆಸುವ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸ್ಥಳದಲ್ಲಿ ಇದ್ದರು. ದರ್ಶನ್ ಹೊಡೆದ ಬಳಿಕ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ ಎಂದು ಉಳಿದ ಆರೋಪಿಗಳು ತಪ್ಪೊಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈಗ ಮೈಸೂರಿನಲ್ಲಿದ್ದ ದರ್ಶನ್ ಅವರನ್ನು ಬಂಧಿಸಿ ಕರೆ ತಂದಿದ್ದರು. ಇದನ್ನೂ ಓದಿ: ಮೂಗು, ಬಾಯಿ, ದವಡೆ ಕತ್ತರಿಸಿ ವಿಕೃತಿ ಮೆರೆದು ಶವವನ್ನು ಮೋರಿಗೆ ಎಸೆದಿದ್ದ ದರ್ಶನ್‌ ಟೀಂ

  • ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ

    ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ

    ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಎಸ್‍ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ.

    ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‍ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸ್ತಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ ಹತ್ತು ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೀತಿದೆ.

    ಇದೇ ವೇಳೆ ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ನಡೆಸಲಾಗಿದೆ. ಬಳಿಕ ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿದೆ. ಒಂದು ಪ್ರಕರಣದ ತನಿಖೆಯನ್ನ ಎಸ್‍ಐಟಿ ಬಹುತೇಕ ಪೂರ್ಣಗೊಳಿಸಿದೆ. ಇದೀಗ ಇನ್ನುಳಿದ ಎರಡು ಕೇಸ್ ಸಂಬಂಧ ತನಿಖೆ ಶುರು ಮಾಡಿದೆ. ಸಿಐಡಿಯಲ್ಲಿ (CID) ಎರಡು ಪ್ರತ್ಯೇಕ ಕೇಸ್‍ಗಳು ದಾಖಲಾಗಿದ್ದು, ಅದರಲ್ಲಿ ಎಸ್‍ಐಟಿ ಒಂದು ಪ್ರಕರಣದ ತನಿಖೆ ಆರಂಭಿಸಲಿದೆ. ಹಾಗಾಗಿ ಕೋರ್ಟ್‍ಗೆ ಹಾಜರುಪಡಿಸಿ ಮತ್ತೊಮ್ಮೆ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಇದನ್ನೂ ಓದಿ: ಬುಮ್ರಾ ಬೆಂಕಿ ಬೌಲಿಂಗ್‌, ಭಾರತಕ್ಕೆ ರೋಚಕ 6 ರನ್‌ ಜಯ – ಗುಂಪು ಹಂತದಲ್ಲೇ ಪಾಕ್‌ ಹೊರಕ್ಕೆ?

  • ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು ಆರೋಪ ಕೇಸ್‌ – ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು, ಡಿಕೆಸು ಪ್ರಾಪರ್ಟಿ ಶ್ಯೂರಿಟಿ

    ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು ಆರೋಪ ಕೇಸ್‌ – ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು, ಡಿಕೆಸು ಪ್ರಾಪರ್ಟಿ ಶ್ಯೂರಿಟಿ

    ಬೆಂಗಳೂರು: ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು ಆರೋಪ ಪ್ರಕರಣದಲ್ಲಿ (40 Percent Commission Advertisement Case) ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಗೆ (Rahul Gandi) ರಿಲೀಫ್ ಸಿಕ್ಕಿದೆ. ಖುದ್ದು ಹಾಜರಾಗಿದ್ದ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ. ರಾಹುಲ್ ಜಾಮೀನಿಗೆ ಡಿಕೆಸು ಪ್ರಾಪರ್ಟಿ ಶ್ಯೂರಿಟಿ ನೀಡಿದ್ದಾರೆ.

    ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಜಾಹೀರಾತು ಸೇರಿದಂತೆ ಸುಳ್ಳು ಜಾಹೀರಾತುಗಳನ್ನು ನೀಡಿದ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು. 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (Special Court of Representatives) ಮುಂದೆ ಹಾಜರಾಗಿ ಕಟಕಟೆಯಲ್ಲಿ ನಿಂತಿದ್ದರು. ರಾಹುಲ್ ಅರ್ಜಿಯನ್ನ ಪುರಸ್ಕರಿಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತು. ಅಲ್ಲದೇ ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ. ಮಾಜಿ ಸಂಸದ ಡಿ.ಕೆ ಸುರೇಶ್‌ (DK Suresh),  ರಾಹುಲ್‌ ಗಾಂಧಿ ಅವರಿಗೆ 50 ಸಾವಿರ ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿದ್ದು, ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಾಲಯಕ್ಕೆ ರಾಹುಲ್ ಜೊತೆಗೆ ಡಿಕೆಶಿ, ಸಿದ್ದರಾಮಯ್ಯ ಜೊತೆಯಾಗಿ ಆಗಮಿಸಿ ಪ್ರಕ್ರಿಯೆ ಮುಗಿಸಿ ಜೊತೆಯಲ್ಲಿ ತೆರಳಿದ್ದು ವಿಶೇಷವಾಗಿತ್ತು.

    ಅಂದಹಾಗೆ ಬಿಜೆಪಿ ಪರಿಷತ್ ಸದಸ್ಯ ಕೇಶವ ಪ್ರಸಾದ್ ನೀಡಿದ್ದ ಖಾಸಗಿ ದೂರನ್ನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದ್ರೆ ಎರಡು ಬಾರಿ ವಿಚಾರಣೆಗೆ ವಿನಾಯಿತಿ ಪಡೆದು ಗೈರಾಗಿದ್ದ ರಾಹುಲ್ ಗಾಂಧಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಖುದ್ದು ಹಾಜರಾದ ರಾಹುಲ್ ಗಾಂಧಿ ಜಾಮೀನು ಪ್ರಕ್ರಿಯೆ‌ ಮುಗಿಸಿದ್ದಾರೆ.

    ರಾಹುಲ್ ಕೋರ್ಟ್ ಆಗಮಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣ, ಕೋರ್ಟ್ ಹಾಲ್ ನಲ್ಲಿ ಜನ ಕಿಕ್ಕಿರಿದಿದ್ದರು. ಅಲ್ಲದೆ ನ್ಯಾಯಾಲಯದ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ರಾಹುಲ್ ಪರ ಘೋಷಣೆಗಳನ್ನ ಕೂಗಿದ್ರು. ಇನ್ನೊಂದೆಡೆ ರಾಹುಲ್ ಖುದ್ದು ಹಾಜರಾದ ಹಿನ್ನೆಲೆಯಲ್ಲಿ ಸಿವಿಲ್ ಕೋರ್ಟ್ ಸುತ್ತಮುತ್ತ ಹೆಚ್ಚಿನ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

    2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಕಾಂಗ್ರೆಸ್ ಪಕ್ಷದ ಜಾಹೀರಾತುಗಳು ಮತ್ತು ಪ್ರಚಾರದ ಘೋಷಣೆಗಳನ್ನು ವಿರೋಧಿಸಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕ ಕೇಶವ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

    ಬಿಜೆಪಿಯು ಸಾರ್ವಜನಿಕ ಕಾಮಗಾರಿಗಳ ನಿರ್ವಹಣೆಗಾಗಿ ಗುತ್ತಿಗೆದಾರರು ಮತ್ತು ಇತರರಿಂದ 40% ಕಮಿಷನ್ ಮಾಡುತ್ತಿದೆ ಎಂದು ಜಾಹೀರಾತುಗಳಲ್ಲಿ ಕಾಂಗ್ರೆಸ್ ಪಕ್ಷವು ಆರೋಪಿಸಿತ್ತು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತನ್ನ ಪಕ್ಷದ ಸದಸ್ಯರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ನಾಯಕರು ಸುಳ್ಳು ಜಾಹೀರಾತನ್ನು ಪ್ರಕಟಿಸಿದೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಆರೋಪಿಸಿತ್ತು.