ಭೋಜಪುರಿ ಖ್ಯಾತನಟ, ಹಾಗೂ ಬಿಜೆಪಿ ಮುಖಂಡ ರವಿ ಕಿಶನ್ (Ravi Kishan) ವಿರುದ್ಧ ಕೆಲವು ದಿನಗಳಿಂದ ತಾಯಿ-ಮಗಳು ನಿರಂತರ ಆರೋಪ ಮಾಡುತ್ತಿದ್ದಾರೆ. ನಟಿ ಶಿನೋವಾ ಮತ್ತು ಅವರ ತಾಯಿ ಇಬ್ಬರೂ ರವಿ ಕಿಶನ್ ಬಗ್ಗೆ ಸಾಕಷ್ಟು ಆರೋಪ ಮಾಡಿದ್ದಾರೆ. ನನಗೆ ಮಗಳನ್ನು ಕೊಟ್ಟು ರವಿ ಕೈ ಕೊಟ್ಟಿದ್ದಾರೆ ಎಂದು ಮೊನ್ನೆಯಷ್ಟೇ ಶಿನೋವಾ ಅಮ್ಮ ಅಪರ್ಣಾ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
ಭೋಜಪುರಿ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಶಿನೋವಾ (Shinova), ಇದೀಗ ಕೋರ್ಟ್ ಮೆಟ್ಟಿಲು ಏರಿದ್ದರು, ರವಿ ಕಿಶನ್ ನನ್ನ ತಂದೆ ಎಂದು ಸಾಬೀತು ಪಡಿಸೋದಕ್ಕಾಗಿ ಡಿಎನ್ಎ (DNA) ಪರೀಕ್ಷೆಗೂ ಸಿದ್ಧ ಎಂದಿದ್ದರು. ಡಿಎನ್ಎ ಚೆಕ್ ಮಾಡಿಸೋಕಾಗಿ ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿಯನ್ನೂ ಅವರು ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಈ ಎಲ್ಲ ಆರೋಪವನ್ನೂ ರವಿ ಕಿಶನ್ ನಿರಾಕರಿಸುತ್ತಲೇ ಬಂದಿದ್ದಾರೆ. ದುಡ್ಡಿಗಾಗಿ ತಾಯಿ ಮತ್ತು ಮಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. 20 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಹಣ ಕೊಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ಹಾಕುವುದಾಗಿ ಬೆದರಿಸುತ್ತಿದ್ದಾರೆ ಎಂದು ಕಿಶನ್ ಪರ ವಕೀಲರು ಹೇಳಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ (Sandeshkhali) ಕೇಂದ್ರೀಯ ತನಿಖಾ ದಳ (CBI) ನಡೆಸಿದ ಮಹತ್ವದ ದಾಳಿಯಲ್ಲಿ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಅಮಾನತುಗೊಂಡ ಟಿಎಂಸಿ ನಾಯಕ ಶೇಖ್ ಷಹಜಹಾನ್ (Sheikh Shahjahan) ಮತ್ತವರ ಸಹಚರರ ವಿರುದ್ಧ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳ ತನಿಖೆಯನ್ನು ಸಿಬಿಐಗೆ ವಹಿಸಿದ ನಂತರ ಈ ದಾಳಿ ನಡೆದಿದೆ. ಇದರೊಂದಿಗೆ ಕಳೆದ ಜನವರಿ 5 ರಂದು ಜಾರಿ ನಿರ್ದೇಶನಾಲಯದ (ED) ತಂಡದ ಮೇಲೆ ದಾಳಿ ನಡೆಸಿದವರಿಗೆ ಸಂಬಂಧಿಸಿದ ಅಡಗುತಾಣಗಳ ಮೇಲೂ ಸಿಬಿಐ ತಂಡ ದಾಳಿ ನಡೆಸಿದೆ.
ಸಂತ್ರಸ್ತರಿಗಾಗಿ ಸಹಾಯವಾಣಿ:
ಈಗಾಗಲೇ ಶೇಖ್ ಷಹಜಹಾನ್ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಸಂದೇಶ್‌ಖಾಲಿಯಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಹಾಗೂ ಭೂಮಿದಾರರಿಗಾಗಿ ಪ್ರತ್ಯೇಕ ಸಹಾಯವಾಣಿ ಮತ್ತು ಇಮೇಲ್ ವಿಳಾಸ ತೆರೆದಿದೆ. ಸಂತ್ರಸ್ತರು ತಮಗಾದ ಅನ್ಯಾಯ ಹೇಳಿಕೊಳ್ಳಬಹುದು, ಅವರ ಮಾಹಿತಿಗಳನ್ನು ಗೌಪ್ತವಾಗಿ ಇಡಲಾಗುತ್ತದೆ ಎಂದು ಸಿಬಿಐ ಹೇಳಿದೆ. ಈ ಬೆನ್ನಲ್ಲೇ ಒಂದೇ ದಿನ ಸುಮಾರು 50 ದೂರುಗಳು ಬಂದಿವೆ. ಶೇಖ್ ಷಹಜಹಾನ್ ಅವರಿಂದ ಭೂಕಬಳಿಕೆ ಸಂಬಂಧ ಹೆಚ್ಚಿನ ದೂರುಗಳು ಹೇಳಿಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ನಿಷೇಧಿಸಿ, ಮರು ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ
ಷೇಕ್ ಷಹಜಹಾನ್ ಸಿಕ್ಕಿಬಿದ್ದದ್ದು ಹೇಗೆ?
ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: 2nd Phase Voting: ಹೇಮ ಮಾಲಿನಿಗಿಂತಲೂ ಸ್ಟಾರ್ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ!
ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಕುರಿತಂತೆ ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ತಾತ್ಕಾಲಿಕ ತಡೆಯಾಜ್ಞೆ ತಂದಿದ್ದಾರೆ. ದಿನೇಶ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ (Dharmabeeru Nadaprabhu Kempegowda) ಚಿತ್ರಕ್ಕೆ ಅನುಮತಿ ನೀಡಬಾರದು ಎಂದು ಅವರು ಕೋರ್ಟಿಗೆ ಮೊರೆ ಹೋಗಿದ್ದರು. ಈ ಕುರಿತಂತೆ ಧರ್ಮಭೀರು ನಾಡಪ್ರಭು ಕೆಂಪೇಗೌಡ ಚಿತ್ರದ ನಿರ್ಮಾಪಕ ಕಿರಣ್ (Kiran), ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದು, ತಮ್ಮ ಪ್ಯಾನ್ ವರ್ಲ್ಡ್ ಸಿನಿಮಾ. ಅದು ಮೊದಲು ಇಂಗ್ಲಿಷ್ (English) , ನಂತರದಲ್ಲಿ ಕನ್ನಡ ಚಿತ್ರವಾಗಿ ಬರಲಿದೆ. ಯುಕೆಯಲ್ಲಿ ನಾವು ಟೈಟಲ್ ಸೇರಿದಂತೆ ಹಕ್ಕು ಸ್ವಾಮ್ಯವನ್ನು ಅಲ್ಲಿಯೇ ಮಾಡುತ್ತೇವೆ ಎಂದಿದ್ದಾರೆ.
ಏನಿದು ಪ್ರಕರಣ?
ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಟಿ. ಎಸ್. ನಾಗಾಭರಣ ಅವರ ನಿರ್ದೇಶನದಲ್ಲಿ ಮೂಡಿ ಬರಬೇಕಿರುವ, ಕೆಂಪೇಗೌಡರ ಪಾತ್ರಕ್ಕೆ ಡಾಲಿ ಧನಂಜಯ್ ಆಯ್ಕೆಯಾಗಿರುವ ಸಿನಿಮಾದ ಚಿತ್ರೀಕರಣದ ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆಯೇ ಧರ್ಮಭೀರು ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಸಿನಿಮಾವೊಂದು ಘೋಷಣೆ ಆಗಿತ್ತು. ಈ ಸಿನಿಮಾವನ್ನು ನಿಲ್ಲಿಸುವಂತೆ ನಾಗಾಭರಣ ಕೋರ್ಟ್ ಮೆಟ್ಟಿಲು ಏರಿದ್ದರು.
ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು (Court) ಮಧ್ಯಂತರ ಆದೇಶದ ಅನುಸಾರ, ನಿರ್ಮಾಪಕ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ದಿನೇಶ್ ಬಾಬೂ, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಈಶ್ವರ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರತಿನಿಧಿಗಳಾದ ನಿರ್ಮಾಪಕರಾದ ಎಂ. ಎನ್. ಶಿವರುದ್ರಪ್ಪ ಮತ್ತು ರಾಹುಲ್ ಗುಂಡಾಲ, ನಿರ್ದೇಶಕ ಟಿ.ಎಸ್. ನಾಗಾಭರಣ, ಸಹಲೇಖಕಿ ಪ್ರತಿಭಾ ನಂದಕುಮಾರ್ ಇವರ “ನಾಡಪ್ರಭು ಕೆಂಪೇಗೌಡ” ಚಿತ್ರದ ಚಿತ್ರಕಥೆಯ ಟ್ರೇಡ್‌ಮಾರ್ಕ್, ಶೀರ್ಷಿಕೆ, ಬ್ರಾಂಡ್, ಪೂರ್ವಪ್ರತ್ಯಯ ಮತ್ತು ಪ್ರತ್ಯಯ ಸೇರಿಕೆ, ರಿಮೇಕ್, ಅಳವಡಿಕೆ ಕುರಿತ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಪ್ರಸ್ತಾವಿತ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಅಥವಾ ಸಾರ್ವಜನಿಕರಿಗೆ ಸಂವಹನಗಳನ್ನು ಮಾಡದಂತೆ ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ಕುರಿತಂತೆ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಎಂ ಎನ್ ಶಿವರುದ್ರಪ್ಪ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬೆಂಗಳೂರು, ಇಲ್ಲಿ ದಾವೆ ಹೂಡಿದ್ದರು.
ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಟಿ. ಎಸ್. ನಾಗಾಭರಣ (TS Nagabharan) ಅವರ ನಿರ್ದೇಶನದಲ್ಲಿ ಮೂಡಿ ಬರಬೇಕಿರುವ, ಕೆಂಪೇಗೌಡರ ಪಾತ್ರಕ್ಕೆ ಡಾಲಿ ಧನಂಜಯ್ ಆಯ್ಕೆಯಾಗಿರುವ ಸಿನಿಮಾದ ಚಿತ್ರೀಕರಣದ ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆಯೇ ಧರ್ಮಭೀರು ನಾಡಪ್ರಭು ಕೆಂಪೇಗೌಡ (Dharmabhiru Nadaprabhu Kempegowda) ಹೆಸರಿನಲ್ಲಿ ಸಿನಿಮಾವೊಂದು ಘೋಷಣೆ ಆಗಿತ್ತು. ಈ ಸಿನಿಮಾವನ್ನು ನಿಲ್ಲಿಸುವಂತೆ ನಾಗಾಭರಣ ಕೋರ್ಟ್ ಮೆಟ್ಟಿಲು ಏರಿದ್ದರು.
ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ಆದೇಶದ ಅನುಸಾರ, ನಿರ್ಮಾಪಕ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ದಿನೇಶ್ ಬಾಬೂ, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಈಶ್ವರ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರತಿನಿಧಿಗಳಾದ ನಿರ್ಮಾಪಕರಾದ ಎಂ. ಎನ್. ಶಿವರುದ್ರಪ್ಪ ಮತ್ತು ರಾಹುಲ್ ಗುಂಡಾಲ, ನಿರ್ದೇಶಕ ಟಿ.ಎಸ್. ನಾಗಾಭರಣ, ಸಹಲೇಖಕಿ ಪ್ರತಿಭಾ ನಂದಕುಮಾರ್ ಇವರ “ನಾಡಪ್ರಭು ಕೆಂಪೇಗೌಡ” ಚಿತ್ರದ ಚಿತ್ರಕಥೆಯ ಟ್ರೇಡ್‌ಮಾರ್ಕ್, ಶೀರ್ಷಿಕೆ, ಬ್ರಾಂಡ್, ಪೂರ್ವಪ್ರತ್ಯಯ ಮತ್ತು ಪ್ರತ್ಯಯ ಸೇರಿಕೆ, ರಿಮೇಕ್, ಅಳವಡಿಕೆ ಕುರಿತ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಪ್ರಸ್ತಾವಿತ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಅಥವಾ ಸಾರ್ವಜನಿಕರಿಗೆ ಸಂವಹನಗಳನ್ನು ಮಾಡದಂತೆ ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ಕುರಿತಂತೆ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಎಂ ಎನ್ ಶಿವರುದ್ರಪ್ಪ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬೆಂಗಳೂರು, ಇಲ್ಲಿ ದಾವೆ ಹೂಡಿದ್ದರು.
ಬೆಂಗಳೂರು: ನಗರದ (Bengaluru) ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ (Rameshwaram Cafe Blast Case) ಬಂಧನಕ್ಕೊಳಗಾದ ಇಬ್ಬರು ಆರೋಪಿಗಳನ್ನು ಎನ್‍ಐಎ (NIA) ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ (Court) ಆರೋಪಿಗಳನ್ನು 10 ದಿನಗಳ ಕಾಲ ಎನ್‍ಐಎ ಕಸ್ಟಡಿಗೆ ನೀಡಿದೆ.
ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ ಹಿನ್ನೆಲೆ ನ್ಯಾಯಾಧೀಶರ ಮನೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಎನ್‍ಐಎ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ಹಾಜರಾಗಿದ್ದು, ವಾದ ಮಂಡಿಸಿದರು. ಈ ವೇಳೆ ಎನ್‍ಐಎ ಎಸ್ಪಿ ಶಿವವಿಕ್ರಮ್ ಕೂಡ ಹಾಜರಿದ್ದರು. ಇದನ್ನೂ ಓದಿ: ಬೆಂಗಳೂರು ಕೆಫೆ ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ
ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು. ಬಳಿಕ ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್ ಮತೀನ್ ತಾಹ, ಮುಸಾವಿರ್ ಹುಸೇನ್‍ನನ್ನು ಎನ್‍ಐಎ ಪೊಲೀಸರು ಕರೆತಂದಿದ್ದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಮೋದಿ ಆಗಮನ – ಪ್ರಧಾನಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್ ಅಭ್ಯರ್ಥಿ
ನವದೆಹಲಿ: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಕೆ. ಕವಿತಾ (K Kavitha) ಮನವಿಯನ್ನು ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಲಾಗಿದೆ.
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಸೋಮವಾರ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ (Rose Avenue Court) ನಡೆದ ವಿಚಾರಣೆಯಲ್ಲಿ, ನ್ಯಾಯಾಲಯವು ಈಗಾಗಲೇ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ನ್ಯಾ. ಕಾವೇರಿ ಬವೇಜಾ, ಅವರಿಗೆ ಮಧ್ಯಂತರ ಜಾಮೀನು ನೀಡಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದರು.
ಪತ್ರದ ಮೂಲಕ ಮನವಿ: ಕವಿತಾ ಅವರು ನಾಲ್ಕು ಪುಟಗಳ ಪತ್ರವನ್ನು ನೀಡಿದ್ದರು. ಪತ್ರದಲ್ಲಿ ಮದ್ಯ ಹಗರಣದಲ್ಲಿ ಭಾಗಿಯಾಗಿಲ್ಲ. ಅಲ್ಲದೇ ಹಗರಣದಿಂದ ನಾನು ಯಾವುದೇ ಪ್ರಯೋಜನಗಳನ್ನು ಪಡೆದಿಲ್ಲ. ಇಡಿ ಮತ್ತು ಸಿಬಿಐ ತನಿಖೆ ಮಾಧ್ಯಮ ವಿಚಾರಣೆಯಾಗಿದೆ ಎಂದು ದೂರಿದ್ದಾರೆ.
ದೆಹಲಿ ಮದ್ಯ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 15 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಿಂದ ಇಡಿ ಕೆ ಕವಿತಾ ಅವರನ್ನು ಬಂಧಿಸಿದೆ. ಮಾರ್ಚ್ 23ರವರೆಗೆ ಇಡಿ ಕಸ್ಟಡಿಯಲ್ಲಿದ್ದರು. ಮಾರ್ಚ್ 26 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಏಪ್ರಿಲ್ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಅಂದಿನಿಂದ ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಜನವರಿ 2022 ರಂದು ತಾವಿಬ್ಬರೂ ದೂರ ಆಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು ಐಶ್ವರ್ಯ ರಜನಿಕಾಂತ್ (Aishwarya Rajinikanth). ಆ ನಂತರ ಅದನ್ನು ನಟ ಧನುಷ್ (Dhanush) ಕೂಡ ಖಚಿತ ಪಡಿಸಿದ್ದರು. ಅದಾದ ನಂತರ ಇಬ್ಬರನ್ನೂ ಒಟ್ಟಾಗಿಸುವ ಪ್ರಯತ್ನ ನಡೆಯಿತು. ಸ್ವತಃ ರಜನಿಕಾಂತ್ ಅವರೇ ಇಬ್ಬರೊಂದಿಗೂ ಮಾತನಾಡಿದ್ದರು. ಆದರೆ, ಪ್ರಯತ್ನ ವಿಫಲವಾಗಿತ್ತು.
ಜನವರಿ 2022ರಲ್ಲೇ ಘೋಷಿಸಿದ್ದು ಈಗ ಕೋರ್ಟ್ (Court) ಮೆಟ್ಟಿಲು ಏರಿದೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ (Divorce) ಅರ್ಜಿ ಸಲ್ಲಿಸಿದ್ದಾರೆ ಎಂದು ಆಪ್ತರು ಖಚಿತ ಪಡಿಸಿದ್ದಾರೆ ಎಂದು ಆಗ್ಲಂ ವೆಬ್ ಸೈಟ್ ವೊಂದು ವರದಿ ಮಾಡಿದೆ. ಪರಸ್ಪರ ಒಪ್ಪಿಗೆಯಿಂದ ಸೆಕ್ಷನ್ 13 ಬಿ ಅಡಿಯಲ್ಲಿ ಅವರು ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿಗೆ 18 ವರ್ಷಗಳ ನೆನಪುಗಳಿವೆ. ಲಿಂಗ ಮತ್ತು ಯಾತ್ರಾ ಹೆಸರಿನ ಇಬ್ಬರು ಪುತ್ರರೂ ಇದ್ದಾರೆ. ಐಶ್ವರ್ಯ ನಿರ್ದೇಶಕಿಯಾಗಿ ಹಲವಾರು ಚಿತ್ರಗಳನ್ನು ಮಾಡಿದ್ದರೆ, ಧನುಷ್ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಸಾಕಷ್ಟು ಹೆಸರು ಮಾಡಿದ್ದಾರೆ. ಹಾಗಾಗಿ ಈ ಜೋಡಿ ದೂರ ಆಗುತ್ತಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಶಾಕ್ ಆಗಿದೆ.
ವಿಚ್ಛೇದನ ಘೋಷಿಸಿದ ನಂತರ ಇಬ್ಬರೂ ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರು. ಧನುಷ್ ಸಿನಿಮಾಗೆ ಐಶ್ವರ್ಯ, ಪತ್ನಿಯ ಚಿತ್ರಕ್ಕೆ ಧನುಷ್ ಅಭಿನಂದನೆಗಳನ್ನು ಸಲ್ಲಿಸುತ್ತಾ, ಮತ್ತೆ ಒಂದಾಗುವ ಸೂಚನೆ ಎನ್ನುವಂತೆ ದಿನಗಳನ್ನು ದೂಡುತ್ತಿದ್ದರು. ಎರಡು ವರ್ಷಗಳ ಬಳಿಕ ಮತ್ತೆ ಶಾಕ್ ನೀಡಿದೆ ಈ ಜೋಡಿ.
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ (Violation Of Election Code) ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು (Udupi Chikkamgaluru) ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojary) ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್ 30 ರಂದು ಕಠಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲಾಗಿತ್ತು.
ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರಾಗಿದೆ. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ (Arrest) ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಪೊಲೀಸ್ ಠಾಣೆಯಲ್ಲಿ ಗೋಳಾಡಿದ್ದರು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು.
ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಮಾರ್ಚ್ 22ರಂದು ಬಂಧಿಸಿದ್ದರು. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆದಿತ್ತು.
ನಾನು ಮಗು ಕರೆದುಕೊಂಡು ಬಂದು 15 ದಿನ ಆಗಿದೆ. ಹಾಗೆ ಕರೆದುಕೊಂಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದರು ಸೋನು. ಕೊನೆಗೆ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ಕಿಚ್ಚ ಸುದೀಪ್ (Sudeep) ತಮ್ಮ ಮೇಲೆ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ನಿರ್ಮಾಪಕ ಎನ್.ಎಂ.ಸುರೇಶ್ (N.M. Suresh) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸುದೀಪ್ ವಿರುದ್ಧ ಸುಳ್ಳು ಆಸ್ತಿ ಸಂಪಾದನೆ ಮತ್ತು ವಂಚನೆಯ ಆರೋಪವನ್ನು ಸುರೇಶ್ ಮಾಡಿದ್ದರು.
ಸುದೀಪ್ ಅವರ ವಿರುದ್ಧ ಮಾನಹಾನಿಕರ ಮತ್ತು ಸಮಾಜದಲ್ಲಿ ಅವರ ಹೆಸರನ್ನು ಕೆಡಿಸುವಂತಹ ಆರೋಪದ ಪ್ರಕರಣವನ್ನು ದಾಖಲಿಸಲಾಗಿದೆ. ಸಮನ್ಸ್ ಜಾರಿ ಮಾಡುವ ಕ್ರಮದಲ್ಲಿ ಯಾವುದೇ ಅಕ್ರಮ ಕಂಡು ಬಂದಿಲ್ಲ. ಹಾಗಾಗಿ ರದ್ದು ಮಾಡಲಾಗದು ಎಂದು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಪ್ರಕರಣ ಸಂಬಂಧ ಐಪಿಸಿ 499 ಮತ್ತು 500 ಅಡಿಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಸುರೇಶ್ ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ ಸುದೀಪ್ ಈ ವಿಚಾರವಾಗಿ ಕೋರ್ಟಿಗೆ ಹಾಜರಾಗಿದ್ದರು. ಸುದೀಪ್ ಅವರ ಹೇಳಿಕೆಯನ್ನು ಆಲಿಸಿದ್ದ 13ನೇ ಎಸಿಎಂಎಂ ಕೋರ್ಟನ ನ್ಯಾ.ವೆಂಕಣ್ಣ ಬಸಪ್ಪ ಹೊಸಮನಿ ಅವರು ಸುದೀಪ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಅಂಗೀಕಾರ ಮಾಡಿದ್ದರು. ಜೊತೆಗೆ ನಿರ್ಮಾಪಕರಾದ ಎಂ.ಎನ್.ಕುಮಾರ್ ಹಾಗೂ ಸುರೇಶ್‌ಗೆ ಸಮನ್ಸ್ ಜಾರಿಯಾಗಿತ್ತು.
ನಿರ್ಮಾಪಕ ಎಂ.ಎನ್. ಕುಮಾರ್ (M.n Kumar) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಿ ನಟ ಸುದೀಪ್ (Sudeep) ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ಹಲವು ಫೋಟೋಗಳೊಂದಿಗೆ ಕೋರ್ಟ್ ಮುಂದೆ ದಾಖಲೆಗಳನ್ನೂ ಅವರು ಸಲ್ಲಿಸಿದ್ದರು.