Tag: court

  • ಐಷಾರಾಮಿ ಮನೆಯಲ್ಲಿ ಸಮಸ್ಯೆ, ಕೋರ್ಟ್ ಮೆಟ್ಟಿಲು ಏರಿದ ಪ್ರಿಯಾಂಕಾ

    ಐಷಾರಾಮಿ ಮನೆಯಲ್ಲಿ ಸಮಸ್ಯೆ, ಕೋರ್ಟ್ ಮೆಟ್ಟಿಲು ಏರಿದ ಪ್ರಿಯಾಂಕಾ

    ಬಾಲಿವುಡ್ ಖ್ಯಾತನಟಿ ಪ್ರಿಯಾಂಕಾ ಚೋಪ್ರಾ (Priyanka) ಲಾಸ್ ಏಂಜಲೀಸ್ (Los Angeles) ನಲ್ಲಿ ದುಬಾರಿ ಮೊತ್ತದ ಬಂಗಲೆ ಖರೀದಿಸಿದ್ದರು. ಅದೊಂದು ಐಷಾರಾಮಿ ಮನೆಯಾಗಿತ್ತು. ಈ ಮನೆ ಖರೀದಿಗಾಗಿಯೇ ಅವರು ಬರೋಬ್ಬರಿ 20 ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಇದೀಗ ಆ ಮನೆಯ ಮಾಲೀಕರ ವಿರುದ್ಧ ಕೋರ್ಟ್ (Court) ಮೆಟ್ಟಿಲು ಏರಿದ್ದಾರೆ ಪ್ರಿಯಾಂಕಾ ದಂಪತಿ.

    ಏಳು ಮಲಗುವ ಕೋಣೆಗಳು, ಒಂಬತ್ತು ಸ್ನಾನದ ಗೃಹಗಳು ಸೇರಿದಂತೆ ಸ್ಪಾ ಮತ್ತು ಸ್ಟೀಮ್ ಶವರ್, ಜಿಮ್ ಹಾಗೂ ವೈನ್ ಸೆಲ್ಲಾರ್, ಹೋಂ ಥಿಯೇಟರ್ ಹೀಗೆ ಎಲ್ಲ ಸೌಕರ್ಯವನ್ನು ಆ ಮನೆ ಒಳಗೊಂಡಿತ್ತು. ಮನೆ ಖರೀದಿಸಿದ ನಂತರ ಪೂಲ್ ಮತ್ತು ಸ್ಪಾಗಳಲ್ಲಿ ಸಮಸ್ಯೆ ಕಂಡು ಬಂದಿವೆಯಂತೆ. ಅಲ್ಲದೇ ಬಾರ್ಬೆಕ್ಯೂ ಜಾಗದಲ್ಲಿ ನೀರು ಸೋರಿಕೆ ಆಗಿರುವ ಕಾರಣದಿಂದಾಗಿ ಮೇ 2023ರಲ್ಲಿ ಮೊಕದ್ದಮೆಯನ್ನು ಹೂಡಿದ್ದಾರೆ.

     

    ಸದ್ಯ ಪ್ರಿಯಾಂಕಾ ಮತ್ತು ನಿಕ್ ಜೋನಾಸ್ (Nick Jonas) ದಂಪತಿ ಆ ಮನೆಯಲ್ಲಿ ವಾಸ ಮಾಡುತ್ತಿಲ್ಲ. ಆಗಲೇ ಖಾಲಿ ಮಾಡಿಕೊಂಡು ಬೇರೆ ಮನೆಯಲ್ಲಿ ವಾಸವಿದ್ದಾರೆ. ಮನೆಯಲ್ಲಿ ಹಾನಿ ಆಗಿದ್ದು ಮತ್ತು ಮಾರಾಟಗಾರರು ಅಂತಹ ಮನೆಯನ್ನು ಕೊಟ್ಟಿದ್ದನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ನೀಡುವಂತೆ ಅವರು ಕೋರ್ಟಿಗೆ ಮೊರೆ ಹೋಗಿದ್ದಾರೆ.

  • ಭಾರೀ ಬಿಗಿ ಭದ್ರತೆಯಲ್ಲಿ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿ ಕೋರ್ಟ್‍ಗೆ ಹಾಜರು

    ಭಾರೀ ಬಿಗಿ ಭದ್ರತೆಯಲ್ಲಿ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿ ಕೋರ್ಟ್‍ಗೆ ಹಾಜರು

    ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿಯನ್ನು ಶಿವಮೊಗ್ಗ (Shivamogga) ಪೊಲೀಸರು (Police) ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಿದ್ದಾರೆ. ಕೋರ್ಟ್‍ಗೆ (Court) ಕರೆತಂದ ವೇಳೆ ಕೋರ್ಟ್ ಆವರಣದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದ ಕೃಷ್ಣಮೂರ್ತಿ ಮಾವೋವಾದಿ ನಕ್ಸಲರ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದ.

    ಆರೋಪಿ ವಿರುದ್ಧ 5 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ತೀರ್ಥಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ, ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಅದರಲ್ಲಿ ಹೊಸಗದ್ದೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಸುಟ್ಟಿದ್ದು ಮತ್ತು ಫಾರೆಸ್ಟ್ ಗೇಟ್ ಸುಟ್ಟ ಪ್ರಕರಣ ಸೇರಿದೆ. ಇದನ್ನೂ ಓದಿ: ಕೆಐಆರ್‌ಡಿಎಲ್ ಇಇ ಮನೆ ಮೇಲೆ ಲೋಕಾ ದಾಳಿ – ಆದಾಯಕ್ಕಿಂತಲೂ 165 ಪಟ್ಟು ಅಧಿಕ ಆಸ್ತಿ ಪತ್ತೆ

    ನ.2021 ರಲ್ಲಿ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನು ಬಂಧಿಸಿದ್ದರು. ಬಳಿಕ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಲ್ಲಿ ಇರಿಸಿದ್ದರು. ಮಂಗಳವಾರ ರಾತ್ರಿ ಶಿವಮೊಗ್ಗ ಪೊಲೀಸರು ಬಾಡಿ ವಾರೆಂಟ್ ಮೇಲೆ ಬಿಗಿ ಬಂದೋಬಸ್ತ್‍ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಕೇರಳ ಹಾಗೂ ಕರ್ನಾಟಕ ಸೇರಿದಂತೆ ಆರೋಪಿ ವಿರುದ್ಧ ಒಟ್ಟು 62 ಪ್ರಕರಣ ದಾಖಲಾಗಿವೆ.

    ನಕ್ಸಲ್ ಮುಖಂಡ ಸಾಕೇತ್ ರಾಜನ್ ಬಳಿಕ ನಕ್ಸಲ್ ನಾಯಕನಾಗಿ ಗುರುತಿಸಿಕೊಂಡಿದ್ದ ಬಿ.ಜಿ.ಕೃಷ್ಣಮೂರ್ತಿ ಪ್ರಮುಖ 5 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಇಂದು ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು ನಾಳೆಗೆ ಮತ್ತೊಂದು ಪ್ರಕರಣದ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಪಾರ್ಕ್ ಮಾಡಿದ್ದ ಕಾರಿನಿಂದ 2.65 ಕೋಟಿ ರೂ. ನಗದು ವಶ

  • ರೇಪ್ ಕೇಸ್ – ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ 8 ವರ್ಷ ಜೈಲು

    ರೇಪ್ ಕೇಸ್ – ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ 8 ವರ್ಷ ಜೈಲು

    ಕಠ್ಮಂಡು: ನೇಪಾಳದ (Nepal) ನೆಲದಲ್ಲಿ ಕ್ರಿಕೆಟ್ (Cricket) ಬೆಳೆಸಿ ದೇಶದ ಕೀರ್ತಿ ಹೆಚ್ಚಿಸಿದ್ದ ಕ್ರಿಕೆಟಿಗ ಸಂದೀಪ್ ಲಮಿಚಾನೆ (24) (Sandeep Lamichhane) ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

    17 ವರ್ಷದ ಯುವತಿಯ ಅತ್ಯಾಚಾರ ಪ್ರಕರಣದಲ್ಲಿ 2023ರ ಅಕ್ಟೋಬರ್‍ನಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ ಈ ಪ್ರಕರಣ ಸಾಬೀತಾದ ಹಿನ್ನೆಲೆ ಕಠ್ಮಂಡು ಜಿಲ್ಲಾ ನ್ಯಾಯಾಲಯ (Court) 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ 3 ಲಕ್ಷ ರೂ. ದಂಡ ವಿಧಿಸಿದ್ದು, 2 ಲಕ್ಷ ರೂ.ಗಳನ್ನು ಸಂತ್ರಸ್ಥೆಗೆ ಪರಿಹಾರ ನೀಡುವಂತೆ ಆದೇಶಿಸಿದೆ. 2022ರ ಆಗಸ್ಟ್‌ನಲ್ಲಿ ಕಠ್ಮುಂಡುವಿನ ಹೋಟೆಲ್ ಒಂದರಲ್ಲಿ ಅತ್ಯಾಚಾರ ಮಾಡಿದ್ದಾರೆ ಎಂದು 18 ವರ್ಷದ ಯುವತಿಯೊಬ್ಬಳು ಸಂದೀಪ್ ಮಿಚಾನೆ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಮೈಲುಗಲ್ಲು ಸಾಧಿಸುವತ್ತ ಹಿಟ್‌ಮ್ಯಾನ್ – ಕೊಹ್ಲಿಯನ್ನ ಹಿಂದಿಕ್ಕಿ ನಂ.1 ಪಟ್ಟಕ್ಕೇರುತ್ತಾರಾ ರೋಹಿತ್‌?

    ಇದೀಗ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

    ಆರೋಪಗಳ ಹೊರತಾಗಿಯೂ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಅವರು ತಮ್ಮ ತಂಡಕ್ಕಾಗಿ ಕ್ರಿಕೆಟ್ ಆಡುವುದನ್ನು ಮುಂದುವರೆಸಿದ್ದರು. ಕಳೆದ ನವೆಂಬರ್‍ನಲ್ಲಿ ನಡೆದ ಟಿ20 ಏಷ್ಯಾ ಫೈನಲ್‍ನಲ್ಲಿ ಒಮಾನ್ ವಿರುದ್ಧ ನೇಪಾಳ ಪರ ಕೊನೆ ಬಾರಿಗೆ ಆಡಿದ್ದರು. ಇದೀಗ 2023ರ ಡಿಸೆಂಬರ್‍ನಲ್ಲಿ ಆರೋಪ ಸಾಬೀತಾಗಿತ್ತು. ಇದೀಗ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟ ಮಾಡಿದೆ.

    ನೇಪಾಳದಲ್ಲಿ ಕ್ರಿಕೆಟ್‍ನ್ನು ಪೋಷಿಸಿದ್ದ ಸಂದೀಪ್ ಲಮಿಚಾನೆ, ಏಕದಿನ ಮತ್ತು ಟಿ20 ಕ್ರಿಕೆಟ್‍ನಲ್ಲಿ ತಮ್ಮ ದೇಶದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಐಪಿಎಲ್‍ನಲ್ಲಿ 2018-20ರ ಅವಧಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಇದನ್ನೂ ಓದಿ: ಅರ್ಜುನ ಪ್ರಶಸ್ತಿ ಪಡೆದ ಬೆಂಕಿ ಬೌಲರ್‌ ಮೊಹಮ್ಮದ್‌ ಶಮಿ – ಇನ್ಯಾರಿಗೆಲ್ಲಾ ಸಿಕ್ತು ಪ್ರಶಸ್ತಿ?

  • ದತ್ತಪೀಠದ ಗೋರಿ ಧ್ವಂಸ ಪ್ರಕರಣ – ನ್ಯಾಯಾಲಯಕ್ಕೆ ಹಾಜರಾದ 14 ಹಿಂದೂ ಕಾರ್ಯರ್ತರು

    ದತ್ತಪೀಠದ ಗೋರಿ ಧ್ವಂಸ ಪ್ರಕರಣ – ನ್ಯಾಯಾಲಯಕ್ಕೆ ಹಾಜರಾದ 14 ಹಿಂದೂ ಕಾರ್ಯರ್ತರು

    ಚಿಕ್ಕಮಗಳೂರು: ದತ್ತಪೀಠದ (Datta Peeta) ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನ ಆರೋಪಿಗಳು ನ್ಯಾಯಾಲಯಕ್ಕೆ (Court) ಹಾಜರಾಗಿದ್ದಾರೆ.

    2017ರ ಡಿ.3 ರಂದು ನಡೆದಿದ್ದ ದತ್ತಪೀಠದ ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನ ಹಿಂದೂ ಕಾರ್ಯಕರ್ತರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಇಂದು (ಸೋಮವಾರ) ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಇದನ್ನೂ ಓದಿ: ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಕೇಸ್‌ – ಅಪರಾಧಿಗಳ ಬಿಡುಗಡೆ ಮಾಡಿದ ಗುಜರಾತ್‌ ಸರ್ಕಾರದ ಆದೇಶ ರದ್ದು

    2017ರಲ್ಲಿ ಕಾಂಗ್ರೆಸ್ (Congress) ಸರ್ಕಾರದ ಅವಧಿಯಲ್ಲಿ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿಯ ದರ್ಗಾದ ವಿಚಾರವಾಗಿ ದತ್ತಜಯಂತಿ ವೇಳೆ ಗಲಾಟೆ ನಡೆದಿತ್ತು. ಈ ವೇಳೆ ಉದ್ರಿಕ್ತರ ಗುಂಪು ಗೋರಿಗಳನ್ನು ಧ್ವಂಸಗೊಳಿಸಿತ್ತು. ಈ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ, 2023ರ ಅ.24ರಂದು ಚಿಕ್ಕಮಗಳೂರು (Chikkamagaluru) ಗ್ರಾಮಾಂತರ ಪೊಲೀಸರು (Police) ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

    ನ್ಯಾಯಾಲಯದ ಕಲಾಪ ಮುಗಿದ ಬಳಿಕ ಕೋರ್ಟ್ ಪಕ್ಕದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಹಿಂದೂ ಕಾರ್ಯಕರ್ತರು ಸಕಾರದ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರು ವೋಟಿಗಾಗಿ ಕಾಶ್ಮೀರ ಸಹ ಪಾಕಿಸ್ತಾನಕ್ಕೆ ಸೇರಿದ್ದು ಅಂತಾರೆ – ವಿಶ್ವನಾಥ್ ಕಿಡಿ

  • ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ 31 ವರ್ಷಗಳ ಬಳಿಕ ಅರೆಸ್ಟ್

    ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ 31 ವರ್ಷಗಳ ಬಳಿಕ ಅರೆಸ್ಟ್

    ಮುಂಬೈ: ಕೊಲೆ ಪ್ರಕರಣವೊಂದರಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು 31 ವರ್ಷಗಳ ನಂತರ ಮಹಾರಾಷ್ಟ್ರ (Maharashtra) ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ದೀಪಕ್ ಭಿಸೆ (62) ಎಂದು ಗುರುತಿಸಲಾಗಿದೆ. ಪೊಲೀಸರು ಸುಮಾರು 31 ವರ್ಷಗಳಿಂದಲೂ ನಿರಂತರವಾಗಿ ಆತನಿಗಾಗಿ ಹುಡುಕಾಟ ನಡೆಸಿದ್ದರು. ಆರೋಪಿ ಬಗ್ಗೆ ವಿಚಾರಿಸಲು ಆತನ ಊರಿಗೆ ತೆರಳಿದಾಗ ಆತ ಮೃತಪಟ್ಟಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದರು. ಈಗ ದೀಪಕ್ ಪಾಲ್ಘರ್ ಜಿಲ್ಲೆಯ ನಲಸೋಪಾರಾ ಎಂಬಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗನಿಗೆ ಟಿಕೆಟ್ ಪಡೆಯೋಕೆ ಪ್ರಯತ್ನಿಸುತ್ತಿದ್ದೇನೆ – ಈಶ್ವರಪ್ಪ

    ಆರೋಪಿಗಾಗಿ ಹುಟುಕಾಟ ನಡೆಸಿದ್ದ ಪೊಲೀಸರಿಗೆ ಮೊದಲು ಆತನ ಪತ್ನಿಯ ಮೊಬೈಲ್ ನಂಬರ್ ಸಿಕ್ಕಿದೆ. ಇದರಿಂದ ಆರೋಪಿಯ ಸುಳಿವು ಸಿಕ್ಕಿದೆ. ಆರೋಪಿ 1989 ರಲ್ಲಿ ರಾಜುಚಿಕ್ಕ ಎಂಬಾತನನ್ನು ಕೊಲೆಗೈದು ಧಮೇರ್ಂದ್ರ ಸರೋಜ್ ಎಂಬವರ ಕೊಲೆಗು ಸಹ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕೊಲೆ ಪ್ರಕರಣದಲ್ಲಿ ಆರೋಪಿ ದೀಪಕ್‍ನನ್ನು ಹಿಂದೆ ಬಂಧಿಸಲಾಗಿತ್ತು. ಆತ 1992 ರಲ್ಲಿ ಜಾಮೀನು ಪಡೆದ ಬಳಿಕ ವಿಚಾರಣೆಗೆ ಹಾಜರಾಗಿರಲಿಲ್ಲ. 2003 ರಲ್ಲಿ ನ್ಯಾಯಾಲಯ (Court) ಆತ ತಲೆಮರೆಸಿಕೊಂಡಿದ್ದಾನೆ ಎಂದು ಘೋಷಿಸಿತ್ತು. ಇದನ್ನೂ ಓದಿ: ನಿಮ್ಮ ಮಗನ ಎಂಪಿ ಮಾಡಲು ನನ್ನ ಮೇಲೆ ಆರೋಪ ಮಾಡ್ತಿದ್ದೀರಿ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ

  • ರಜನಿ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್: ಜಾಮೀನು ಮಂಜೂರು

    ರಜನಿ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್: ಜಾಮೀನು ಮಂಜೂರು

    ಮಿಳು ನಾಡಿನ ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಪತ್ನಿ ಲತಾ (Lata) ಅವರಿಗೆ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ (Court)ಗೆ ಹಾಜರಾಗಬೇಕು ಎಂದು ಬೆಂಗಳೂರಿನ (Bangalore) 1ನೇ ಎಸಿಎಂಎಂ ನ್ಯಾಯಾಲಯ ತಿಳಿಸಿತ್ತು. ಅದರಂತೆ ಇಂದು ಖುದ್ದಾಗಿ ಲತಾ ಅವರು ಬೆಂಗಳೂರಿನ ಕೋರ್ಟಿಗೆ ಹಾಜರಾಗಿದ್ದರು.

    ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು. ಅವರ ಮನವಿಯಂತೆ ಲತಾ ಹಾಜರಾದರು. ಜೊತೆಗೆ ಜಾಮೀನು ನೀಡುವಂತೆ ಲತಾ ಪರ ವಕೀಲರು ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಮಾನ್ಯ ನ್ಯಾಯಾಲಯ ಷರತ್ತು ಬದ್ದ ಜಾಮೀನು (Bail) ಮಂಜೂರು ಮಾಡಿದೆ. ಎರಡು ವೈಯಕ್ತಿಕ ಬಾಂಡ್ ನೀಡುವಂತೆ ಸೂಚನೆ ನೀಡಿದ್ದಾರೆ ನ್ಯಾಯಮೂರ್ತಿ ಆನಂದ್ ಕರಿಯಮ್ಮನವರ್.

    ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು. ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು.

     

    ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು. ಹಾಗಾಗಿ ಕೋರ್ಟ್ ಖುದ್ದು ಹಾಜರಾಗಲು ಆದೇಶ ನೀಡಿತ್ತು. ಕೋರ್ಟಿಗೆ ಲತಾ ಅವರು ಬರೋದು ಅನಿವಾರ್ಯವಾಗಿತ್ತು. ಹಾಗಾಗಿ ಖುದ್ದಾಗಿಯೇ ಅವರು ಹಾಜರಾಗಿದ್ದರು.

  • ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಗೆ ಕೋರ್ಟ್ ಶಾಕ್

    ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಗೆ ಕೋರ್ಟ್ ಶಾಕ್

    ತೆಲುಗಿನ ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಅವರಿಗೆ ಕೋರ್ಟ್ ಶಾಕ್ ನೀಡಿದೆ. ಪಲ್ಲವಿ ಪ್ರಶಾಂತ್ ಸಲ್ಲಿಸಿದ್ದ ಜಾಮೀನು (Bail) ಅರ್ಜಿಯನ್ನು ನಾಂಪಲ್ಲಿ ನ್ಯಾಯಾಲಯ ತಿರಸ್ಕರಿಸಿದೆ. ವಿಧ್ವಂಸಕ ಕೃತ್ಯ ಹಾಗೂ ಅಶಾಂತಿಗೆ ಕಾರಣ ಆಗಿದ್ದಾರೆ ಎನ್ನುವ ಕಾರಣಕ್ಕಾಗಿ ತೆಲುಗಿನ ಬಿಗ್ ಬಾಸ್ ಸೀಸನ್ 7 ರ ವಿಜೇತ ಪಲ್ಲವಿ ಪ್ರಶಾಂತ್ ಅವರನ್ನು ಹೈದರಾಬಾದ್ ನ ಜುಬಿಲಿ ಹಿಲ್ಸ್ ಪೊಲೀಸರು ಬಂಧಿಸಿದ್ದರು. (Arrest). ಪಲ್ಲವಿ ಪ್ರಶಾಂತ್ ಅವರ ಜೊತೆಗೆ ಸಹೋದರ ಮನೋಹರ್ ಅವರನ್ನು ಕೂಡ ಬಂಧಿಸಲಾಗಿತ್ತು. ನ್ಯಾಯಾಲಯವು ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

    ಏನಿದು ಪ್ರಕರಣ?

    ಬಿಗ್ ಬಾಸ್ (Bigg Boss) ಕಂಟೆಸ್ಟೆಂಟ್ ಅಭಿಮಾನಿಗಳು ಕಿತ್ತಾಡಿಕೊಂಡ ಪ್ರಕರಣ ಹೈದರಾಬಾದ್ ನಲ್ಲಿ ಮೊನ್ನೆ ನಡೆದಿತ್ತು. ಫಿನಾಲೆ ವೇಳೆ ಸ್ಟುಡಿಯೋದಲ್ಲಿ ಗಲಾಟೆ ನಡೆದಿದ್ದು, ಕಾರು ಮತ್ತು ಬಸ್ ಗಳು ಜಖಂ ಆಗಿದ್ದವು. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿತ್ತು. ಈ ವೇಳೆ ಕಂಟೆಸ್ಟೆಂಟ್ ಆಗಿದ್ದ ಅಮರ್ ದೀಪ್  (Amar Deep) ಮತ್ತು ಪಲ್ಲವಿ ಪ್ರಶಾಂತ್ (Pallavi Prashant) ಅವರ ಅಭಿಮಾನಿಗಳು ಆಗಮಿಸಿ ದಾಂಧಲೆ ಮಾಡಿದ್ದರು.

    ಗ್ರ್ಯಾಂಡ್ ಫಿನಾಲೆಯಲ್ಲಿ ತಮ್ಮ ನೆಚ್ಚಿನ ಕಂಟೆಸ್ಟೆಂಟ್ ವಿನ್ನರ್ ಆಗುತ್ತಾರೆ ಎನ್ನುವುದು ಅವರವರ ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ, ಆಗಿದ್ದು ಉಲ್ಟಾ ಎನ್ನುವ ಕಾರಣಕ್ಕಾಗಿ ಗಲಾಟೆ ಶುರುವಾಗಿತ್ತು. ಪಲ್ಲವಿ ಪ್ರಶಾಂತ್ ವಿನ್ ಆಗಿ, ಅಮರ್ ದೀಪ್ ರನ್ನರ್ ಅಪ್ ಆಗಿ ಘೋಷಣೆ ಆಗುತ್ತಿದ್ದಂತೆಯೇ ಗಲಾಟೆ ಶುರುವಾಗಿತ್ತು. ಇಬ್ಬರ ಫ್ಯಾನ್ಸ್ ಮಾತು ವಿಕೋಪಕ್ಕೆ ಹೋದ ಕಾರಣದಿಂದಾಗಿ ಆರ್.ಟಿ.ಸಿ ಬಸ್ ಮತ್ತು ಕಾರಿನ ಗಾಜು ಪುಡಿ ಪುಡಿ ಆಗಿದೆ.

     

    ಪಲ್ಲವಿ ಪ್ರಶಾಂತ್ ಅಭಿಮಾನಿಗಳು ರನ್ನರ್ ಅಪ್ ಆಗಿದ್ದ ಅಮರ್ ಅವರ ಕಾರಿನ ಮೇಲೂ ದಾಳಿ ಮಾಡಿದ್ದರು. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಅನಾಹುತ ಆಗಿರುವುದನ್ನು ತಡೆದಿದ್ದರು. ಜೊತೆ ಇನ್ನೋರ್ವ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಶ್ರೀ ಅವರು ಕಾರಿನ ಗಾಜು ಪುಡಿ ಪುಡಿ ಆಗಿತ್ತು.  ಈ ಕುರಿತಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ ಪ್ರಶಾಂತ್ ಅವರನ್ನು ಬಂಧಿಸಲಾಗಿದೆ.

  • ಡಿವೋರ್ಸ್ ಕೇಳಿದವನಿಗೆ ಕೋರ್ಟ್ ಆವರಣದಲ್ಲೇ ಹಲ್ಲೆ – ನಾಲ್ವರು ಜೈಲಿಗೆ

    ಡಿವೋರ್ಸ್ ಕೇಳಿದವನಿಗೆ ಕೋರ್ಟ್ ಆವರಣದಲ್ಲೇ ಹಲ್ಲೆ – ನಾಲ್ವರು ಜೈಲಿಗೆ

    ವಿಜಯಪುರ: ವಿವಾಹ ವಿಚ್ಛೇದನ (Divorce) ಪ್ರಕರಣಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಕೋರ್ಟ್‍ಗೆ (Court) ಬಂದಿದ್ದ ವೇಳೆ ಆತನ ಪತ್ನಿಯ ಕುಟುಂಬಸ್ಥರು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮುದ್ದೇಬಿಹಾಳದಲ್ಲಿ (Muddebihal) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಮುದ್ದೇಬಿಹಾಳದ ರೂಢಗಿ ಗ್ರಾಮದ ಮಹೇಶ್ ಬಸಪ್ಪ ನಂದಿಹಾಳ ಎಂಬಾತ ತನ್ನ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಇದರ ಸಲುವಾಗಿ ವಿಚಾರಣೆಗಾಗಿ ಡಿ.20 ರಂದು ಆತ ಕೋರ್ಟಿಗೆ ಬಂದಿದ್ದ. ಈ ವೇಳೆ ಆತನನ್ನು ನ್ಯಾಯಾಲಯದ ಎದುರಿನ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು- ಉತ್ತರ ಪತ್ರಿಕೆ ಫುಲ್ ವೈರಲ್

    ಕೋರ್ಟಿನ ಮೊದಲನೇ ಗೇಟ್‍ನ ಮುಂಭಾಗದಲ್ಲಿ ಮುತ್ತಪ್ಪ ಬಸಪ್ಪ ಬಿರಾದಾರ, ಬಸಪ್ಪ ಭೀಮಪ್ಪ ಬಿರಾದಾರ, ಚನ್ನಮ್ಮ ಬಸಪ್ಪ ಬಿರಾದಾರ, ಈರಮ್ಮ ಉರ್ಫ ಸುಮಿತ್ರಾ ಸೇರಿಕೊಂಡು ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕೆಲವರು ತನ್ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮಹೇಶ್ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಕಳೆದ ಎರಡು ವರ್ಷಗಳ ಹಿಂದೆ ಹಲ್ಲೆಗೊಳಗಾದ ಮಹೇಶ್, ಈರಮ್ಮ ಉರ್ಫ ಸುಮಿತ್ರಾ ಎಂಬಾಕೆಯನ್ನು ಮದುವೆ ಆಗಿದ್ದ. ಮದುವೆಯ ಬಳಿಕ ಕೆಲವು ದಿನಗಳಲ್ಲೇ ಮಹಿಳೆ ಏಳು ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿ, ಮಹಿಳೆಯ ತವರು ಮನೆಯವರನ್ನು ಕರೆಸಿ ಆಕೆಯನ್ನು ಅವರೊಂದಿಗೆ ಕಳಿಸಿದ್ದ. ಬಳಿಕ ವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ.

    ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಮುದ್ದೇಬಿಹಾಳ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮೋದಿ ಓಡಾಡೋದು ಐಷಾರಾಮಿ ಫ್ಲೈಟ್ ಅಲ್ವಾ: ಸಿದ್ದರಾಮಯ್ಯ ಪ್ರಶ್ನೆ

  • ಸುಕೇಶ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ ಜಾಕ್ವೆಲಿನ್

    ಸುಕೇಶ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ ಜಾಕ್ವೆಲಿನ್

    ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ಸುಳ್ಳು ಜಾತಿ ಪ್ರಮಾಣಪತ್ರ – ಸಶಸ್ತ್ರ ಪೊಲೀಸ್ ಪೇದೆಗೆ 7 ವರ್ಷ ಜೈಲು

    ಸುಳ್ಳು ಜಾತಿ ಪ್ರಮಾಣಪತ್ರ – ಸಶಸ್ತ್ರ ಪೊಲೀಸ್ ಪೇದೆಗೆ 7 ವರ್ಷ ಜೈಲು

    ಹಾವೇರಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ (Police) ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಯೊಬ್ಬನಿಗೆ ಇಲ್ಲಿನ (Haveri) ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) 7 ವರ್ಷ ಜೈಲು ಹಾಗೂ 30 ಸಾವಿರ ರೂ. ದಂಡ ವಿಧಿಸಿದೆ.

    ಸೋಮಶೇಖರ್ ಭೀಮಪ್ಪ ಕುಂಕುಮಗಾರ ಎಂಬಾತ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಹಿರೇಕೆರೂರು ತಾಲೂಕಿನ ಭೋಗಾವಿ ಗ್ರಾಮದ ಈತ ಮೂಲತಃ ಕುಂಕುಮಗಾರ (ಬಲಿಜ ಜನಾಂಗ) ಜಾತಿಗೆ ಸೇರಿದ್ದರೂ ಸಹ, ಭೋಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಹನುಮಂತಪ್ಪ ತಳವಾರನ ಸಹಕಾರ ಪಡೆದು ಚನ್ನದಾಸರ ಎಂದು ಜಾತಿ ಕಾಲಂನಲ್ಲಿ ನಮೂದಿಸಿದ್ದ. ಬಳಿಕ ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಇತರೆ ದಾಖಲಾತಿಗಳನ್ನು ಸೃಷ್ಟಿಸಿ, ಹಿರೇಕೆರೂರು ತಹಸೀಲ್ದಾರರಿಗೆ ಸಲ್ಲಿಸಿ, ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದಿದ್ದ. ಇದನ್ನೂ ಓದಿ: ಸ್ಮೃತಿ ಇರಾನಿ ಭೇಟಿಯಾದ ಲಕ್ಷ್ಮಿ ಹೆಬ್ಬಾಳ್ಕರ್: ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಮನವಿ

    ಈ ನಕಲಿ ದಾಖಲಾತಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದಾನೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅಧ್ಯಕ್ಷರ ನಡಾವಳಿಯಿಂದ ಮತ್ತು ತನಿಖೆಯಿಂದ ಆರೋಪ ದೃಢಪಟ್ಟಿದೆ. ಈ ಆಧಾರದ ಮೇಲೆ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ದಾವಣಗೆರೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ತನಿಖಾಧಿಕಾರಿ ಪೊಲೀಸ್ ಆರಕ್ಷಕ ಉಪ ನಿರೀಕ್ಷಕರಾದ ಜಯರತ್ನಮ್ಮ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ತಿದ್ದುಪಡಿ ಕಾಯ್ದೆ- 2015 ಅಡಿಯಲ್ಲಿ ಆಪಾದನೆಗಳು ರುಜುವಾತದ ಹಿನ್ನೆಲೆಯಲ್ಲಿ ನ್ಯಾ.ಜಿ.ಎಲ್.ಲಕ್ಷ್ಮೀನಾರಾಯಣ ಅವರಿದ್ದ ಪೀಠ ಅಪರಾಧಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

    ಸರ್ಕಾರದ ಪರವಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸರೋಜಾ ಜಿ.ಕೂಡಲಗಿಮಠ ಅವರು ವಾದ ಮಂಡಿಸಿದ್ದರು. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ