ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ (Presidential Elections) ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಕೊಲೊರಾಡೋ ಕೋರ್ಟ್ (Colorado Court) ಅನರ್ಹಗೊಳಿಸಿದೆ.
ಕ್ಯಾಪಿಟಲ್ ಹಿಲ್ (Capitol Hill) ದಂಗೆಯಲ್ಲಿ ಟ್ರಂಪ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಪ್ರಕಟಿಸಿದೆ. ಆದೇಶವನ್ನು ಪ್ರಶ್ನಿಸಲು ಜ.4ರವರೆಗೆ ಮೇಲ್ಮನವಿ ಸಲ್ಲಿಸಲು ಟ್ರಂಪ್‌ಗೆ ಅವಕಾಶ ನೀಡಲಾಗಿದೆ.
ಅಮೆರಿಕದ ಇತಿಹಾಸದಲ್ಲಿ ಮಾಜಿ ಅಧ್ಯಕ್ಷರೊಬ್ಬರನ್ನು ಚುನಾವಣೆಯಿಂದಲೇ ಅನರ್ಹಗೊಳಿಸಿದ್ದು ಇದೇ ಮೊದಲು. ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಟ್ರಂಪ್ ವಕ್ತಾರರು, ಇದೊಂದು ಸಂಪೂರ್ಣ ದೋಷಪೂರಿತ ಆದೇಶ. ಈ ತೀರ್ಪನ್ನು ಪ್ರಶ್ನಿಸಿ ಅಮೆರಿಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್ ಸ್ಲಿಪ್ ಮತದಾರರ ಕೈಗೆ ನೀಡಬೇಕು
ಏನಿದು ಪ್ರಕರಣ?
2021ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಿ ಟ್ರಂಪ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಭಾಷಣದಿಂದ ಪ್ರಭಾವಿತರಾಗಿ 2 ಸಾವಿರಕ್ಕೂ ಹೆಚ್ಚು ಟ್ರಂಪ್ ಬೆಂಬಲಿಗರು ಜನವರಿ 6 ರಂದು ಅಮೆರಿಕದ ಸಂಸತ್ ಕಟ್ಟಡ ಅಥವಾ ಕ್ಯಾಪಿಟಲ್ ಹಿಲ್ ಮೇಲೆ ನುಗ್ಗಿ ದಾಂಧಲೆ ನಡೆಸಿದ್ದರು. ಈ ಸಂಬಂಧ ವಾಷಿಂಗ್ಟನ್‌ನಲ್ಲಿ 15 ದಿನ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಈ ಸಂಬಂಧ ಟ್ರಂಪ್ ವಿರುದ್ಧ ಕೇಸ್ ದಾಖಲಾಗಿತ್ತು.
ಮುಂಬೈ: ಅಪ್ರಾಪ್ತ ಹುಡುಗಿಯನ್ನು ಅನುಚಿತವಾಗಿ ಸ್ಪರ್ಶಿಸಿ ʻಹಾಟ್ʼಎಂದು ಕರೆದಿದ್ದಕ್ಕಾಗಿ 50 ವರ್ಷದ ವೃದ್ಧನಿಗೆ ಮುಂಬೈ ವಿಶೇಷ ನ್ಯಾಯಾಲಯವು (Mumbai Speical Court) 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ವಿಶೇಷ ಪೋಕ್ಸೊ ನ್ಯಾಯಾಲಯದ (POCSO Court) ನ್ಯಾಯಾಧೀಶರಾದ ಎಸ್.ಸಿ ಜಾಧವ್ ಅವರು ಡಿಸೆಂಬರ್ 14 ರಂದು ಆರೋಪಿಗೆ ಭಾರತೀಯ ದಂಡ ಸಂಹಿತೆಗೆ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಹಿಂಬಾಲಿಸುವುದು ಮತ್ತು ಕಿರುಕುಳ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿದ್ದಾರೆ.
ಈ ಪ್ರಕರಣವು 2016ರ ಮೇ 24ರಂದು ನಡೆದಿತ್ತು. ಆಗ ಹುಡುಗಿಗೆ 13 ವರ್ಷ ವಯಸ್ಸಾಗಿತ್ತು. ಸಂತ್ರಸ್ತೆ ಮತ್ತು ಪ್ರಾಸಿಕ್ಯೂಷನ್ ಸಾಕ್ಷಿಯ ಒಟ್ಟಾರೆ ಸಾಕ್ಷ್ಯವನ್ನು ಪರಿಶೀಲಿಸಿಸಲಾಯಿತು. ಈ ವೇಳೆ ಹುಡುಗಿ ಆ ದಿನಾಂಕದಂದು ಅಂದು ಮಸೀದಿ ಬಳಿ ನಿಂತಿದ್ದಾಗ ಆರೋಪಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ, ಜೊತೆಗೆ ಆಕೆ ತುಂಬಾ ʻಹಾಟ್ʼ ಆಗಿ ಕಾಣ್ತಿದ್ದಾಳೆ ಎಂದು ಕರೆದಿದ್ದ. ಅಷ್ಟೇ ಅಲ್ಲದೇ ಆಕೆ ಕೆನ್ನೆಗೆ ಮುತ್ತಿಡಲು ಬಯಸಿದ್ದ, ಆಕೆಯನ್ನು ತನ್ನೊಂದಿಗೆ ಕೆರೆದುಕೊಂಡು ಹೋಗಬೇಕು ಅನ್ನಿಸುತ್ತದೆ ಎಂಬ ಮಾತುಗಳನ್ನಾಡಿರುವುದು ಸಾಬೀತಾಗಿದೆ.
ಲಕ್ನೋ: ಶ್ರೀಕೃಷ್ಣ ಜನ್ಮಭೂಮಿಯಲ್ಲಿ (Krishna Janmabhoomi) ನಿರ್ಮಾಣವಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು (Shahi Idagh Mosque) ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ (Allahabad High Court) ಸಮ್ಮತಿ ನೀಡಿದೆ.
ಶ್ರೀ ಕೃಷ್ಣನ ಜನ್ಮಸ್ಥಳವು ಮಸೀದಿಯ ಕೆಳಗೆ ಇದೆ ಮತ್ತು ಮಸೀದಿಯು ಹಿಂದೂ ದೇವಾಲಯವಾಗಿದೆ ಎಂದು ತೋರಿಸುವ ಹಲವು ಚಿಹ್ನೆಗಳು ಇವೆ. ಹೀಗಾಗಿ ಮಸೀದಿಯನ್ನು ಪರಿಶೀಲಿಸಲು ಆಯೋಗವನ್ನು ಸ್ಥಾಪಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ಹಿಂದೂ ದೇವಾಲಯಗಳ ವಿಶಿಷ್ಟ ಲಕ್ಷಣವಾಗಿರುವ ಕಮಲದ ಆಕಾರದ ಸ್ತಂಭವು ಅಸ್ತಿತ್ವದಲ್ಲಿದೆ. ಕೃಷ್ಣ ಜನಿಸಿದ ರಾತ್ರಿ ಆತನನ್ನು ರಕ್ಷಿಸಿದ ಹಿಂದೂ ದೇವತೆಗಳಲ್ಲಿ ಒಬ್ಬನಾದ ಶೇಷನಾಗನ ಚಿತ್ರವೂ ಇದೆ. ಮಸೀದಿಯ ಕಂಬದ ತಳದಲ್ಲಿ ಹಿಂದೂ ಧಾರ್ಮಿಕ ಚಿಹ್ನೆಗಳು ಮತ್ತು ಕೆತ್ತನೆಗಳು ಸಹ ಗೋಚರಿಸುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಜಾಗದ ಸಂಪೂರ್ಣ ಹಕ್ಕು ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ನೀಡಬೇಕು. ಹೀಗಾಗಿ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡಿ ಮಂದಿರಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಅರ್ಜಿದಾರರು ಕೋರ್ಟ್ ಮೆಟ್ಟಿಲೇರಿದ್ದಾರೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಾಲಿವುಡ್ ನಟಿ, ಹಾಗೂ ಡಾನ್ಸರ್ ಜರೀನ್ ಖಾನ್ ಅವರಿಗೆ ಷರತ್ತುಬದ್ಧ ಜಾಮೀನು (Bail) ಸಿಕ್ಕಿದೆ. ವಿದೇಶ ಪ್ರವಾಸ ಮಾಡದಂತೆ ನಿರ್ಬಂಧದ ಜೊತೆಗೆ ಮೂವತ್ತು ಸಾವಿರ ರೂಪಾಯಿಗಳ ಬಾಂಡ್ ಅನ್ನು ಭದ್ರತೆಗೆ ನೀಡುವಂತೆ ಆದೇಶಿಸಲಾಗಿದೆ.
ನಟಿ ಜರೀನ್ ಖಾನ್‌ಗೆ (Zareen Khan) ಈ ಹಿಂದೆ ಸಂಕಷ್ಟ ಎದುರಾಗಿತ್ತು. ವಂಚನೆ ಪ್ರಕರಣದ ಸಂಬಂಧಿಸಿದಂತೆ ಜರೀನ್ ಖಾನ್‌ಗೆ ಕೋಲ್ಕತಾ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ವಂಚನೆ ಪ್ರಕರಣ ಸಂಬಂಧವಾಗಿ ಜರೀನ್ ಖಾನ್‌ಗೆ ಕೋಲ್ಕತಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು..
2018ರಲ್ಲಿ ಕೋಲ್ಕತಾದಲ್ಲಿ (Kolkata) ಆಯೋಜಿಸಿದ್ದ ದುರ್ಗಾ ಪೂಜೆ ಕಾರ್ಯಕ್ರಮದಲ್ಲಿ ಜರೀನ್‌ಗೆ ಆಹ್ವಾನ ನೀಡಲಾಗಿತ್ತು. ಈ ಸಮಾರಂಭಕ್ಕಾಗಿ ಸಂಭಾವನೆ ಕೂಡ ನೀಡಲಾಗಿತ್ತು. ಆದರೆ ಅಂದು ನಟಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಈ ವಿಚಾರವಾಗಿ ನಟಿಯ ವಿರುದ್ದ ಆಯೋಜಕರು ಎಫ್‌ಐಆರ್ ದಾಖಲಿಸಿದ್ದರು. 2018ರಿಂದ ದಾಖಲಾದ ಪ್ರಕರಣದ ಕುರಿತು ನಟಿ ಕೋರ್ಟ್ ವಿಚಾರಣೆಗೆ ಹಾಜರಾಗಲಿಲ್ಲ.
ಅರೆಸ್ಟ್ ವಾರೆಂಟ್ ಕುರಿತು ನಟಿ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇದರಲ್ಲಿ ಸತ್ಯವಿಲ್ಲ. ಈ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡುತ್ತೇನೆ ಎಂದಿದ್ದರು. ವೀರ್, ಹೇಟ್ ಸ್ಟೋರಿ 3, ಹೌಸ್‌ಫುಲ್ 2 ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿಗೆ ಬಂಧನದ ಭೀತಿ ಎದುರಾಗಿತ್ತು.
ತಮಿಳು ನಾಡಿನ ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಪತ್ನಿ ಲತಾ (Lata) ಅವರಿಗೆ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ (Court)ಗೆ ಹಾಜರಾಗಬೇಕು ಎಂದು ಬೆಂಗಳೂರಿನ (Bangalore) 1ನೇ ಎಸಿಎಂಎಂ ನ್ಯಾಯಾಲಯ ತಿಳಿಸಿದೆ. ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು.
ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು. ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು.
ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು. ಈಗ ಕೋರ್ಟ್ ಖುದ್ದು ಹಾಜರಾಗಲು ಆದೇಶ ನೀಡಿದೆ. ಕೋರ್ಟಿಗೆ ಲತಾ ಅವರು ಬರೋದು ಇದೀಗ ಅನಿವಾರ್ಯವಾಗಿದೆ.
ಮೂರನೇ ಎಸಿಎಂಎಂ ನ್ಯಾಯಾಲಯ (ACMM Court) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಇಬ್ಬರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಲಿದ್ದಾರೆ. ಪ್ರಕರಣದಲ್ಲಿ ಚೈತ್ರಾ ಎ1 ಆರೋಪಿಯಾಗಿದ್ದರೆ ಶ್ರೀಕಾಂತ್ ಎ2 ಆರೋಪಿಯಾಗಿದ್ದಾರೆ.
ಚೈತ್ರಾ ಸೇರಿದಂತೆ 7 ಆರೋಪಿಗಳಿಗೆ ಸೆ.23 ರಂದು ಮೂರನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತ್ತು.
ಏನಿದು ಪ್ರಕರಣ?
ಚೈತ್ರಾ ಅವರು ಉದ್ಯಮಿ ಗೋವಿಂದಬಾಬು ಪೂಜಾರಿಗೆ (Govind Babu Poojari) ಬೈಂದೂರು (Baindur) ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು. ಬೆಂಗಳೂರಿಗೆ ಬಂದಾಗ ಚೈತ್ರಾ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದರು. ಇದನ್ನೂ ಓದಿ: ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ
ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 5 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ಮರಳಿ ನೀಡುವಂತೆ ಕೇಳಿದ್ದಾರೆ. ಆದರೆ ಚೈತ್ರಾ ಹಣ ನೀಡಿರಲಿಲ್ಲ. ಹಣ ನೀಡದ ಕಾರಣ ಗೋವಿಂದಬಾಬು ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಮತ್ತು ಅವರ ಸ್ನೇಹಿತರನ್ನು ಬಂಧಿಸಿದ್ದರು.
ಮಡಿಕೇರಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 21 ಆರೋಪಿಗಳಿಗೆ ನ್ಯಾಯಾಲಯ (Court) ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ 21 ಮಂದಿ ಆರೋಪಿಗಳನ್ನು ಮಡಿಕೇರಿ (Madikeri) ಗ್ರಾಮಾಂತರ ಠಾಣೆಯ ಪೊಲೀಸರು (Police) ಬಂಧಿಸಿದ್ದಾರೆ.
ಮಡಿಕೇರಿಯ ವಿವಿಧ ಕಾಫಿ ಎಸ್ಟೇಟ್ ಸೇರಿದಂತೆ ಹಲವೆಡೆ ಪೊಲೀಸರು ಮುಂಜಾನೆ 5 ಗಂಟೆ ವೇಳೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಕಳ್ಳತನ ಹಾಗೂ ಚೆಕ್ ಬೌನ್ಸ್ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 21 ಜನರನ್ನು ಬಂಧಿಸಲಾಗಿದೆ. ಬಂಧಿಸಲಾದ ಆರೋಪಿಗಳಿಗೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು, ಆದರೂ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ: ಡಿಕೆ ಶಿವಕುಮಾರ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ಆರೋಪಿಯಾಗಿರುವ ಸದ್ಯ ಜಾಮೀನು (Bail) ಪಡೆದುಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ (Delhi Court) ಅನುಮತಿ ನೀಡಿದೆ. ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ದುಬೈಗೆ (Dubai) ಪ್ರಯಾಣಿಸಲು ಅನುಮತಿ ನೀಡಿದರು.
ದುಬೈನಲ್ಲಿ ನಡೆಯಲಿರುವ COP28 ಸ್ಥಳೀಯ ಹವಾಮಾನ ಆಕ್ಷನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಡಿ.ಕೆ ಶಿವಕುಮಾರ್ ಅವರನ್ನು COP28 ಅಧ್ಯಕ್ಷ-ನಿಯೋಜಿತ ಹಿಸ್ ಎಕ್ಸಲೆನ್ಸಿ ಡಾ ಸುಲ್ತಾನ್ ಅಹ್ಮದ್ ಅಲ್ ಜಾಬರ್ ಮತ್ತು ಹವಾಮಾನ ಮಹತ್ವಾಕಾಂಕ್ಷೆ ಮತ್ತು ಪರಿಹಾರದ ಕುರಿತ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ವಿಶೇಷ ಪ್ರತಿನಿಧಿ ಮೈಕೆಲ್ ಆರ್ ಬ್ಲೂಮ್‌ಬರ್ಗ್ ಅವರು ಆಹ್ವಾನಿಸಿದ್ದಾರೆ. ಇದು ವಿಶ್ವಸಂಸ್ಥೆಯು ಆಯೋಜಿಸುವ ವಾರ್ಷಿಕ ಅಂತರಾಷ್ಟ್ರೀಯ ಹವಾಮಾನ ಶೃಂಗಸಭೆಯಾಗಿದೆ.
ಭಾರತದ ಸಂವಿಧಾನದ 21ನೇ ವಿಧಿಯ ಪ್ರಕಾರ ವಿದೇಶಕ್ಕೆ ಪ್ರಯಾಣಿಸುವ ಹಕ್ಕು ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಆರೋಪಿಯು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ ಮತ್ತು ವಿಚಾರಣೆಯನ್ನು ಎದುರಿಸಲು ಲಭ್ಯವಿಲ್ಲ ಎಂದು ಕಂಡು ಬಂದರೆ ಮಾತ್ರ ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಅರೋಪಿಯ ಹಕ್ಕನ್ನು ನಿರ್ಬಂಧಿಸಬಹುದು ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದರು. ಇದನ್ನೂ ಓದಿ: 4ನೇ ತರಗತಿ ವಿದ್ಯಾರ್ಥಿಗೆ ಕೈವಾರದಿಂದ 108 ಬಾರಿ ಚುಚ್ಚಿದ ಸಹಪಾಠಿಗಳು
ಕರ್ನಾಟಕದಿಂದ ಎಂಟು ಬಾರಿ ಶಾಸಕರಾಗಿದ್ದಾರೆ ಪ್ರಸ್ತುತ ಅವರು ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಗಮನಿಸಿದ ನ್ಯಾಯಾಧೀಶರು, ಅವರು ಭಾರತದಿಂದ ಪಲಾಯನ ಮಾಡುವ ಸಾಧ್ಯತೆ ತುಂಬಾ ವಿರಳ ಎಂದು ಹೇಳಿದರು. ಅರ್ಜಿದಾರರ ಅರ್ಜಿಯನ್ನು ಅನುಮತಿಸಲು ಯಾವುದೇ ಅಡ್ಡಿಯಿಲ್ಲ. ಆದ್ದರಿಂದ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಶಿವಕುಮಾರ್ ಸಲ್ಲಿಸಿದ ಅರ್ಜಿಯನ್ನು ಅನುಮತಿಸಲಾಗಿದೆ ಮತ್ತು ನವೆಂಬರ್ 29, 2023 ರಿಂದ ಡಿಸೆಂಬರ್ 3 ರವರೆಗೆ ಜಾರಿಗೆ ಬರುವಂತೆ ದುಬೈಗೆ ಪ್ರಯಾಣಿಸಲು ಅವರಿಗೆ ಅನುಮತಿ ನೀಡಲಾಗಿದೆ.
ನ್ಯಾಯಾಧೀಶರು ಆರೋಪಿಗೆ ಹಲವಾರು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದ್ದಾರೆ. ಪ್ರಯಾಣದ ಮೊದಲು ನ್ಯಾಯಾಲಯದ ಮುಂದೆ ಅವರ ಹೆಸರಿನಲ್ಲಿ 5 ಲಕ್ಷ ರೂ. ಎಫ್‌ಡಿಆರ್ ಅನ್ನು ಒದಗಿಸಬೇಕು ಮತ್ತು ಅವರ ಸಂಪೂರ್ಣ ಪ್ರಯಾಣದ ವಿವರವನ್ನು ದೂರವಾಣಿ ಅಥವಾ ಮೊಬೈಲ್ ಸಂಖ್ಯೆಯೊಂದಿಗೆ ಸಲ್ಲಿಸಬೇಕು. ಆರೋಪಿಗಳು ವಿದೇಶಕ್ಕೆ ಪ್ರಯಾಣಿಸುವಾಗ ಯಾವುದೇ ಸಹ-ಆರೋಪಿಗಳನ್ನು ಸಂಪರ್ಕಿಸಲು ಪ್ರಯತ್ನಿಸಬಾರದು ಅಥವಾ ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು ಎಂದು ನ್ಯಾಯಾಧೀಶರು ಷರತ್ತು ವಿಧಿಸಿದ್ದಾರೆ.
ಶಿವಕುಮಾರ್ ಅವರಿಗೆ 2019ರ ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ನ್ಯಾಯಾಲಯದ ಅನುಮತಿಯಿಲ್ಲದೆ ಅವರು ದೇಶವನ್ನು ತೊರೆಯಬಾರದು ಎಂಬ ಷರತ್ತು ವಿಧಿಸಿತ್ತು. ಈಗಾಗಲೇ ತನಿಖೆ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ದೂರು ಸಲ್ಲಿಸಲಾಗಿದೆ ಎಂದು ಮನವಿಯಲ್ಲಿ ಸಲ್ಲಿಸಲಾಗಿದೆ.
ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.
ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದಾರೆ. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಆಗಿದೆ ಎಂದು ವರದಿ ಆಗಿದೆ.
ಮನ್ಸೂರ್ ಅಲಿ ಖಾನ್ (Mansoor Ali Khan) ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳು ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.
ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು.
ಇದೀಗ ಖಷ್ಬೂ (Khushboo) ಈ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಮನ್ಸೂರ್ ಅಲಿ ಖಾನ್ ನಂತಹ ಕೊಳಕು ಮನಸ್ಥಿತಿಯವರಿಗೆ ಕಾನೂನು ಮೂಲಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಇಂತಹ ಗಂಡಸರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಮಾತನಾಡಿದ್ದಾರೆ. ಮತ್ತು ತಾವು ಕಾನೂನು ಮೂಲಕವೇ ಉತ್ತರಿಸುವುದಾಗಿ ತಿಳಿಸಿದ್ದರು. ಇದೀಗ ಮನ್ಸೂರ್ ಕಾನೂನು ಕುಣಿಕೆಯಲ್ಲಿ ತೂಗಾಡುತ್ತಿದ್ದಾರೆ.
ಮೈಸೂರು: ಮೈಸೂರಿನ (Mysuru) ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ (Hospital) ಬೀಗ ಹಾಕಲು ನ್ಯಾಯಾಲಯ (Court) ಆದೇಶಿಸಿದೆ. ಆಸ್ಪತ್ರೆ ವೈದ್ಯನ (Doctor) ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಗೋಕುಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಬೀಗ ಹಾಕಿ ವೈದ್ಯ ಡಾ.ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದ್ದು, ತಕ್ಷಣ ಆಸ್ಪತ್ರೆಯಲ್ಲಿರುವ ರೋಗಿಗಳನ್ನ ಸ್ಥಳಾಂತರಿಸುವಂತೆ ಕೆಪಿಎಂಇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿಗಳು ಜಂಟಿಯಾಗಿ ಆದೇಶಿಸಿದ್ದಾರೆ. ಮೈಸೂರಿನ ರವಿಗೌಡ ಎಂಬವರು ಆಸ್ಪತ್ರೆ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಸೋಮವಾರದಿಂದ ಟಫ್ ರೂಲ್ಸ್ – ಪಿಜಿಗಳಿಗಾಗಿಯೇ ಹೊಸ ವೆಬ್ ಪೋರ್ಟಲ್
ರವಿಗೌಡ ಅವರ ಚಿಕ್ಕಪ್ಪ ಶಿವಣ್ಣ 2016ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ 2017ರಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಒಂದು ಆಪರೇಷನ್‌ಗಾಗಿ ನಾಲ್ಕು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಆಸ್ಪತ್ರೆಯಲ್ಲಿದ್ದ ವೇಳೆ ಕೇವಲ ಒಂದು ಆಪರೇಷನ್‌ಗೆ ಕುಟುಂಬಸ್ಥರ ಬಳಿ ಅನುಮತಿ ಪಡೆದು ಸತತ ನಾಲ್ಕು ಆಪರೇಷನ್ ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಸಾವ್ನಪ್ಪಿದ್ದರು. ನಂತರ 2017ರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಆರೋಪದ ಮೇಲೆ ರವಿ ಕೆಪಿಎಂಎಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಸುಳ್ಳು ಜಾಹೀರಾತು ನೀಡಿದರೆ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡ ಹಾಕಬೇಕಾಗುತ್ತೆ: ಸುಪ್ರೀಂ ಎಚ್ಚರಿಕೆ
2021ರಲ್ಲಿ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಆರೋಗ್ಯ ಇಲಾಖೆಯ ಜಾಗೃತಕೋಷದ ಜಾಗೃತಾಧಿಕಾರಿಗೆ ದೂರು ಸಲ್ಲಿಸಿದ್ದರು. ಪರಿಹಾರ ಕೊಡಿಸುವಂತೆ 2018ರಲ್ಲಿ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಸಮರ ಸಾರಿದ್ದ ರವಿ ಗೌಡರಿಗೆ ಗೆಲುವಾಗಿತ್ತು. ಇದರಲ್ಲೂ 15 ಲಕ್ಷ ರೂ. ಕೊಡುವಂತೆ ಆದೇಶ ಮಾಡಲಾಗಿತ್ತು. ಇದನ್ನೂ ಓದಿ: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಕಸರತ್ತು – ಅಧ್ಯಕ್ಷರ ಮೊದಲ ಪಟ್ಟಿ ಫೈನಲ್: ಸಭೆಯಲ್ಲಿ ಏನಾಯ್ತು?