Tag: court

  • ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

    ಲಕ್ನೋ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ತಂಡ ಇಂದು (ಸೋಮವಾರ) ವಾರಣಾಸಿಯ (Varanasi) ಜ್ಞಾನವಾಪಿ (Gyanvapi) ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.

    ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ (Court) ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಈ ಸರ್ವೆ ಆರಂಭಗೊಂಡಿದೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಸಮೀಕ್ಷೆ ಸೀಲ್ ಮಾಡಿದ ಶಿವಲಿಂಗದ ಆಕೃತಿ ಇರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಾ ಪ್ರದೇಶಗಳಲ್ಲೂ ನಡೆಯಲಿದೆ. ಮಸೀದಿಯಲ್ಲಿ ಶಿವಲಿಂಗದಂತೆ ಕಾಣುವ ರಚನೆ 2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿತ್ತು. ಈಗ ನಡೆಯುತ್ತಿರುವ ಸಮೀಕ್ಷೆಯ ವರದಿಯನ್ನು ಆ.4ರ ಒಳಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

    ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ತಪಾಸಣೆ ನಡೆಸಲಾಗುತ್ತಿದೆ. ಪುರಾತನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ನಂತರ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ಬಗ್ಗೆ ಸಂಪೂರ್ಣ ಸತ್ಯವನ್ನು ಹೊರತರಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದಿದ್ದರು. ಆದರೆ ಜ್ಞಾನವಾಪಿ ಮಸೀದಿಯ ಸಿಬ್ಬಂದಿ ಶಿವಲಿಂಗದ ರಚನೆಯು ವಝುಖಾನಾದಲ್ಲಿ ಕಾರಂಜಿಯ ಒಂದು ಭಾಗವಾಗಿದೆ ಎಂದು ಹೇಳಿದ್ದರು. ವಿಚಾರಣೆಯ ಭಾಗವಾಗಿ ವೈಜ್ಞಾನಿಕ ತನಿಖೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

    ಅರ್ಜಿದಾರರ ಪರವಾಗಿಯೂ ಪ್ರತಿನಿಧಿಸುವ ಸುಭಾಷ್ ನಂದನ್ ಚತುರ್ವೇದಿ, ನ್ಯಾಯಾಲಯದ ನಿರ್ಧಾರವು ಪ್ರಕರಣದಲ್ಲಿ ಮಹತ್ವದ ತಿರುವು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸರ್ವೇಗೆ ಕೋರ್ಟ್ ಅನುಮತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking: ಹಾಸ್ಟೆಲ್ ಹುಡುಗರಿಗೆ ಸಿಕ್ಕ ಜಯ: ರಮ್ಯಾ ಸಲ್ಲಿಸಿದ್ದ ಅರ್ಜಿ ವಜಾ

    Breaking: ಹಾಸ್ಟೆಲ್ ಹುಡುಗರಿಗೆ ಸಿಕ್ಕ ಜಯ: ರಮ್ಯಾ ಸಲ್ಲಿಸಿದ್ದ ಅರ್ಜಿ ವಜಾ

    ನುಮತಿ ಇಲ್ಲದೇ ತಮ್ಮ ಫೋಟೋ ಮತ್ತು ವಿಡಿಯೋವನ್ನು ಹಾಸ್ಟೇಲ್ ಹುಡುಗರು ಬೇಕಾಗಿದ್ದರೆ (Hostel Hudugaru Bekagiddare) ಚಿತ್ರತಂಡ ಬಳಸಿಕೊಂಡಿದೆ ಎಂದು ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದರು ಮೋಹಕ ತಾರೆ ರಮ್ಯಾ (Ramya). ತಮ್ಮ  ಅನುಮತಿ ಇಲ್ಲದೇ ಫೋಟೋ ಮತ್ತು ವಿಡಿಯೋ ಬಳಸಿಕೊಂಡಿದ್ದಕ್ಕೆ ಪರಿಹಾರವಾಗಿ ಒಂದು ಕೋಟಿ ರೂಪಾಯಿ ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಿದ್ದರು.

    ನಿನ್ನೆ ಕೋರ್ಟ್ ಮುಂದೆ ಬಂದಿದ್ದ ಈ ವಿಚಾರಣೆಯನ್ನು ಒಂದು ದಿನ ಮುಂದಕ್ಕೆ ಹಾಕಿ, ಮತ್ತೆ ಇಂದು ವಿಚಾರಣೆ ನಡೆಸಿತು ಮಾನ್ಯ ನ್ಯಾಯಾಲಯ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ಹುಡುಗರಿಗೆ ಜಯ ಸಿಕ್ಕಿದ್ದು, ರಮ್ಯಾ ಸಲ್ಲಿಸಿದ್ದ  ಅರ್ಜಿಯನ್ನು (Application) ಮಾನ್ಯಾ ನಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ:ರಮ್ಯಾ ಬದಲು ರಚಿತಾ ರಾಮ್: ಎರಡು ಬಾರಿ ರಮ್ಯಾ ಸ್ಥಾನ ತುಂಬಿದ ರಚ್ಚು

    ಕೋರ್ಟ್ (Court) ನಲ್ಲಿಇಂದು ನಡೆದ ವಿಚಾರಣೆಯಲ್ಲಿ ಹಾಸ್ಟೆಲ್ ಹುಡುಗರ ಪರ ಆದೇಶ ಹೊರ ಬಂದಿದ್ದು, ನಾಳೆ ಯಾವುದೇ ತಡೆ ಇಲ್ಲದೆ ಹಾಸ್ಟೆಲ್ ಹುಡುಗರು ಸಿನಿಮಾ ರಿಲೀಸ್ ಆಗಲಿದೆ. ಹಾಸ್ಟೆಲ್ ಹುಡುಗರ ಪರ ವಕೀಲ ವೇಲನ್ ಅವರು ವಾದ ಮಾಡಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯವು, ರಮ್ಯಾ ಹಾಕಿದ್ದ ಕೇಸ್ ತೆರವುಗೊಳಿಸಿ, ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

     

    ರಮ್ಯಾ ಸೇರಿದಂತೆ ಅನೇಕ ಸ್ಟಾರ್ ನಟ-ನಟಿಯರು ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಗಂತ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ. ರಮ್ಯಾ ಕೂಡ ಈ ಸಿನಿಮಾದಲ್ಲಿ ಉಪನ್ಯಾಸಕಿಯ ಪಾತ್ರ ಮಾಡಿದ್ದರು. ಅದು ಅತಿಥಿ ಪಾತ್ರವಾಗಿತ್ತು. ಈ ಪಾತ್ರದ ವಿರುದ್ದವೇ ಅವರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವರಾಜ್ ಕುಮಾರ್ ಮಧ್ಯ ಪ್ರವೇಶಕ್ಕೆ ನಿರ್ಮಾಪಕ ಎನ್.ಕುಮಾರ್ ಮನವಿ

    ಶಿವರಾಜ್ ಕುಮಾರ್ ಮಧ್ಯ ಪ್ರವೇಶಕ್ಕೆ ನಿರ್ಮಾಪಕ ಎನ್.ಕುಮಾರ್ ಮನವಿ

    ನಿರ್ಮಾಪಕ ಎನ್.ಕುಮಾರ್ (N. Kumar) ಮಾಡಿದ ಆರೋಪದ ಕುರಿತಂತೆ ಎಲ್ಲ ಮಾತುಗಳು ಅಲ್ಲಲ್ಲೇ ನಿಲ್ಲುತ್ತಿವೆ. ಕೋರ್ಟ್ (Court) ಗಿಂತ ಬೆಸ್ಟ್ ಯಾವುದೇ ಇಲ್ಲ ಎನ್ನುವ ಕಾರಣಕ್ಕಾಗಿ ನಾನು ನ್ಯಾಯಾಲಯಕ್ಕೆ ಬಂದಿದ್ದೇನೆ ಎಂದು ಮೊನ್ನೆಯಷ್ಟೇ ಕಿಚ್ಚ ಸುದೀಪ್ (Sudeep) ತಿಳಿಸಿದ್ದರು. ಈ ಮೂಲಕ ಸಂಧಾನದ ಮಾತೇ ಇಲ್ಲ ಎನ್ನುವುದನ್ನು ಪರೋಕ್ಷವಾಗಿ ಸ್ಪಷ್ಟ ಪಡಿಸಿದರು. ಅದರಲ್ಲೂ ಮಧ್ಯಸ್ಥಿಕೆಯ ವಿಚಾರವಾಗಿ ತಮಗೆ ಇಷ್ಟವಿಲ್ಲ ಎನ್ನುವುದನ್ನೂ ಅವರು ಸೂಚ್ಯವಾಗಿ ಹೇಳಿದ್ದರು.

    ಸುದೀಪ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಂತೆಯೇ ನಿರ್ಮಾಪಕ ಕುಮಾರ್ ಮತ್ತೆ ಸಂಧಾನದ ಮಾತುಗಳನ್ನು ಆಡಿದ್ದಾರೆ. ನಾನು ಸಂಧಾನಕ್ಕೆ ಸಿದ್ಧನಾಗಿದ್ದೇನೆ. ಫಿಲ್ಮ್ ಚೇಂಬರ್ ನಲ್ಲೇ ಕೂತು ಮಾತನಾಡೋಣ ಎಂದು ಮತ್ತೆ ಹೇಳಿಕೆ ನೀಡಿದ್ದಾರೆ. ಸುದೀಪ್ ಅವರ ಮಾನಹಾನಿ ಮಾಡುವಂತಹ ಯಾವುದೇ ಮಾತುಗಳನ್ನು ಆಡಿಲ್ಲ. ನನ್ನ ನೋವುಗಳನ್ನು ನಾನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:ರಿಲೀಸ್‌ಗೂ ಮುನ್ನವೇ ಬರೋಬ್ಬರಿ 32 ಕೋಟಿಗೆ ಸೇಲ್ ಆಯ್ತು ರಶ್ಮಿಕಾ ಮಂದಣ್ಣ ಸಿನಿಮಾ

    ನಿನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಮುಂದಿರುವ ಡಾ.ರಾಜ್ ಕುಮಾರ್ ಪ್ರತಿಮೆಯ ಬಳಿ ಎನ್.ಕುಮಾರ್ ಹೋರಾಟಕ್ಕೆ ಕೂತಿದ್ದಾರೆ. ಹಲವರು ಅವರಿಗೆ ಸಾಥ್ ಕೂಡ ನೀಡಿದ್ದಾರೆ. ಆ ಹೋರಾಟ ಇವತ್ತು ಮುಂದುವರೆದಿದೆ. ಈ ವಿಷಯದಲ್ಲಿ ಶಿವರಾಜ್ ಕುಮಾರ್ (Shivaraj Kumar) ಮಧ್ಯ ಪ್ರವೇಶ ಮಾಡಬೇಕು ಎಂದು ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಇಂದು ಕೂಡ ಈ ಕುರಿತಂತೆ ಚರ್ಚೆ ನಡೆಯಲಿದೆ.

     

    ಫಿಲ್ಮ್ ಚೇಂಬರ್ ಮತ್ತು ನಿರ್ಮಾಪಕರ ಸಂಘವು ಇಂದು ಮತ್ತೆ ಸಭೆ ನಡೆಸಲಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡುವ ಕುರಿತು ಮಾತುಕತೆ ನಡೆಯಲಿದೆಯಂತೆ. ಒಂದು ವೇಳೆ ಶಿವಣ್ಣನ ಭೇಟಿಯು ಫಲ ಕೊಡುತ್ತಾ ಅಥವಾ ಕೋರ್ಟಿನಲ್ಲೇ ಇದು ತೀರ್ಮಾನ ಆಗುತ್ತಾ ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್-ಕುಮಾರ್ ಪ್ರಕರಣ: ಶಿವಣ್ಣ ಮಧ್ಯಸ್ಥಿಕೆ ಅನುಮಾನ

    ಸುದೀಪ್-ಕುಮಾರ್ ಪ್ರಕರಣ: ಶಿವಣ್ಣ ಮಧ್ಯಸ್ಥಿಕೆ ಅನುಮಾನ

    ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ಮಾಪಕ ಎನ್.ಕುಮಾರ್ (N. Kumar) ಆರೋಪ ಪ್ರತ್ಯಾರೋಪದ ಮಾತುಗಳು ನಟ ಶಿವರಾಜ್ ಕುಮಾರ್ ಮನೆಯಲ್ಲಿ ಕೊನೆಗೊಳ್ಳಲಿವೆ ಎಂದು ನಂಬಲಾಗಿತ್ತು. ಇನ್ನೊಂದು ವಾರದಲ್ಲಿ ಈ ಪ್ರಕರಣಕ್ಕೆ ಇತಿಶ್ರೀ ಹಾಡುವಂತಹ ಮಾತುಗಳನ್ನು ಸ್ವತಃ ಶಿವರಾಜ್ ಕುಮಾರ್ (Shivaraj Kumar)ಆಡಿದ್ದರು. ಆದರೆ, ಸುದೀಪ್ ಯಾಕೋ ಅದಕ್ಕೆ ಮನಸು ಮಾಡುತ್ತಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಇಂದು ಕಿಚ್ಚ ಕೋರ್ಟ್ (Court)ಮೆಟ್ಟಿಲು ಏರಿದ್ದಾರೆ.

    ಎನ್.ಕುಮಾರ್ ಪರವಾಗಿ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘದಲ್ಲಿ ಹಲವು ಸಭೆಗಳು ನಡೆದಿವೆ. ಕಿಚ್ಚ ಕೋರ್ಟ್ ಮೆಟ್ಟಿಲು ಏರುತ್ತಿದ್ದಂತೆಯೇ ಮತ್ತೆ ನಿರ್ಮಾಪಕ ಸಂಘ ಹಾಗೂ ವಾಣಿಜ್ಯ ಮಂಡಳಿ ಮತ್ತೊಂದು ಸಭೆ ಮಾಡಿ, ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಕಿಚ್ಚ ಕೋರ್ಟಿನಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎನ್.ಕುಮಾರ್, ‘ನಾನು ಸುದೀಪ್ ಅವರ ಮಾನ ತೆಗೆಯುವಂತಹ ಕೆಲಸ ಮಾಡಿಲ್ಲ. ನನ್ನ ನೋವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದೇನೆ. ಅದಕ್ಕೂ ಮೊದಲ ನಿರ್ಮಾಪಕರ ಸಂಘ ಮತ್ತು ವಾಣಿಜ್ಯ ಮಂಡಳಿಯ ಗಮನಕ್ಕೂ ತಂದಿದ್ದೆ. ಒಟ್ಟಿಗೆ ಕೂತು ಮಾತನಾಡಿ, ಬಗೆಹರಿಸಿಕೊಳ್ಳಬೇಕು ಎನ್ನುವುದು ನನ್ನ ಉದ್ದೇಶವಾಗಿತ್ತು’ ಎಂದಿದ್ದಾರೆ.

     

    ಆದರೆ, ಸುದೀಪ್ ಈ ವಿಚಾರದಲ್ಲಿ ಸಿಡಿದೆದ್ದಂತೆ ಕಾಣುತ್ತಿದೆ. ಕೋರ್ಟ್ ಆವರಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸುದೀಪ್, ಕಾನೂನು ಮೂಲಕವೇ ಉತ್ತರಿಸುತ್ತೇನೆ ಎಂದು ಸ್ಪಷ್ಟವಾಗಿ ನುಡಿಡಿದ್ದಾರೆ. ಶಿವರಾಜ್ ಕುಮಾರ್ ಮಧ್ಯ ಪ್ರವೇಶದ ಕುರಿತು ಮಾತನಾಡಿದ ಸುದೀಪ್, ‘ಕೋರ್ಟಿಗಿಂತ ಮತ್ತೊಂದು ಸ್ಥಳ ಬೇಕಿಲ್ಲ’ ಎಂದು ಸ್ಪಷ್ಟವಾಗಿ ಸಂದೇಶವನ್ನು ರವಾಣಿಸಿದ್ದಾರೆ.  ಅಲ್ಲಿಗೆ ಬಹುಶಃ ಶಿವಣ್ಣನ ಮಧ್ಯ ಪ್ರವೇಶ ಗೊಂದಲದಿಂದ ಕೂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್ ಕಾನೂನು ಸಮರ: ವಕೀಲರ ಜೊತೆ ಚರ್ಚಿಸ್ತೀನಿ ಎಂದ ನಿರ್ಮಾಪಕ ಕುಮಾರ್

    ಸುದೀಪ್ ಕಾನೂನು ಸಮರ: ವಕೀಲರ ಜೊತೆ ಚರ್ಚಿಸ್ತೀನಿ ಎಂದ ನಿರ್ಮಾಪಕ ಕುಮಾರ್

    ನಿರ್ಮಾಪಕ ಎನ್.ಕುಮಾರ್ (N. Kumar) ವಿರುದ್ದ ಕಾನೂನು ಸಮರಕ್ಕೆ ಇಂದು ಸುದೀಪ್ (Kiccha Sudeep) ಅಧಿಕೃತವಾಗಿ ಇಳಿದಿದ್ದಾರೆ. ಇಂದು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ ಆಗಮಿಸಿದ್ದ ಅವರು, ನಿರ್ಮಾಪಕ ಎನ್.ಕುಮಾರ್ ವಿರುದ್ಧ ಕ್ರಿಮಿನಲ್ ಮಾನನಷ್ಟ (Defamation) ಪ್ರಕರಣ ದಾಖಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸುದೀಪ್, ‘ನಾನು ಯಾರಿಗೆ ಉತ್ತರ ಕೊಡಬೇಕಿದೆಯೋ, ಅದನ್ನು ಕೋರ್ಟಿನಲ್ಲಿ (Court) ಕೊಡುವೆ’ ಎಂದರು.

    ಈ ಕುರಿತು ನಿರ್ಮಾಪಕ ಎನ್.ಕುಮಾರ್ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ‘ಅವರು ಈ ಹಿಂದೆ ನನಗೆ ಕಳುಹಿಸಿದ್ದ ನೋಟಿಸ್ ಜುಲೈ 13ಕ್ಕೆ ಸಿಕ್ಕಿದೆ. ಅದು ಇಂಗ್ಲಿಷಿನಲ್ಲಿತ್ತು. ನನಗೆ ಇಂಗ್ಲಿಷ್ ಬರುವುದಿಲ್ಲ. ಹಾಗಾಗಿ ಇಂದು ವಕೀಲರನ್ನು ಭೇಟಿ ಮಾಡಲು ಸಮಯ ನಿಗದಿ ಮಾಡಿದ್ದೆ. ಅಷ್ಟರಲ್ಲೇ ಅವರು ಕೋರ್ಟಿಗೆ ಹೋಗಿದ್ದಾರೆ. ನನ್ನ ಮೇಲೆ ಏನೆಲ್ಲ ಆರೋಪ ಮಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಕಾನೂನು ಸಲಹೆ ಪಡೆದುಕೊಂಡು ನಾನು ಪ್ರತಿಕ್ರಿಯೆ ಮಾಡುತ್ತೇನೆ’ ಎಂದರು. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ನಾನು ತುಂಬಾ ತಾಳ್ಮೆ ಇರುವಂತಹ ನಿರ್ಮಾಪಕ. ನನಗೆ ಆದ ನೋವನ್ನು ಮಾಧ್ಯಮಗಳೊಂದಿಗೆ ಹೇಳಿಕೊಂಡಿದ್ದೇನೆ. ನಾನು ನಿರ್ಮಾಪಕನಾಗಿ ಮೂವತ್ತಕ್ಕೂ ಹೆಚ್ಚು ಸಿನಿಮಾ ಮಾಡಿದ್ದೇನೆ. ವಿತರಕನಾಗಿ ನೂರಾರು ಚಿತ್ರಗಳನ್ನು ವಿತರಣೆ ಮಾಡಿದ್ದೇನೆ. ಸರಿ ತಪ್ಪುಗಳು ನನಗೂ ಅರ್ಥವಾಗುತ್ತವೆ. ನಾನು ಮತ್ತು ಸುದೀಪ್ ಇಬ್ಬರ ಮಧ್ಯ ನಡೆದ ಮಾತುಕತೆಗೆ ಅವರು ಬದ್ಧರಾಗಲಿ ಎಂದಷ್ಟೇ ಹೇಳುತ್ತೇನೆ’ ಎಂದರು ಕುಮಾರ್.

    ನಮಗೆ ಏನೇ ತೊಂದರೆಯಾದರೂ ನಾವು ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೊರೆ ಹೋಗುತ್ತೇವೆ. ನಾನು ಅಲ್ಲಿಗೇ ಹೋಗಿದ್ದು. ವಾಣಿಜ್ಯ ಮಂಡಳಿಯಲ್ಲಿ ಕೂತು ಮಾತನಾಡೋಣ ಬನ್ನಿ ಎಂದು ಕರೆದರೂ ಅವರು ಬರಲಿಲ್ಲ. ಕೋರ್ಟಿಗೆ ಹೋಗಿದ್ದಾರೆ. ನಾನು ಈ ಕುರಿತು ನನ್ನ ವಕೀಲರನ್ನು ಸಂಪರ್ಕಿಸುತ್ತೇನೆ ಎನ್ನುವುದು ಕುಮಾರ್ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋರ್ಟಿಗೆ ಹಾಜರಾದ ಕಿಚ್ಚ : ಕಾನೂನು ಮೂಲಕ ಉತ್ತರ ಎಂದ ಸುದೀಪ್

    ಕೋರ್ಟಿಗೆ ಹಾಜರಾದ ಕಿಚ್ಚ : ಕಾನೂನು ಮೂಲಕ ಉತ್ತರ ಎಂದ ಸುದೀಪ್

    ನ್ನ ವಿರುದ್ಧ ಯಾರೆಲ್ಲ ಆರೋಪ ಮಾಡಿದ್ದಾರೋ ಅವರಿಗೆ ಕಾನೂನು ಮೂಲಕ ಉತ್ತರ ಕೊಡಬೇಕಿದೆ. ಹಾಗಾಗಿ ಕೋರ್ಟಿಗೆ ಹಾಜರಾಗುತ್ತಿರುವುದಾಗಿ ಕಿಚ್ಚ ಸುದೀಪ್ (Kiccha Sudeep) ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಕಷ್ಟಪಟ್ಟು ಹೆಸರು ಸಂಪಾದಿಸಿದ್ದೇನೆ. ಅದನ್ನು ಹಾಳು ಮಾಡಿಕೊಳ್ಳಲು ನಾನು ಸಿದ್ದನಿಲ್ಲ. ಜನರಿಗೆ ತಪ್ಪು ಸಂದೇಶ ಹೋಗಬಾರದು ಎನ್ನುವ ಕಾರಣಕ್ಕಾಗಿ ಕೋರ್ಟಿಗೆ ಬಂದಿರುವೆ. ಅಲ್ಲಿಯೇ ಅವರಿಗೆಲ್ಲ ಉತ್ತರ ನೀಡುತ್ತೇನೆ’ ಎಂದರು ಕಿಚ್ಚ.

    ಮಧ್ಯಾಹ್ನ ಮೂರು ಗಂಟೆಯ ಹೊತ್ತಿಗೆ ಬೆಂಗಳೂರಿನ ಕಾರ್ಪೊರೇಷನ್ ಹತ್ತಿರದ ಎಸಿಎಂಎಂ ನ್ಯಾಯಾಲಯಕ್ಕೆ ಕಿಚ್ಚ ಸುದೀಪ್ ಆಗಮಿಸಿ, ನಿರ್ಮಾಪಕ ಕುಮಾರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ (Defamation) ಹೂಡಿದ್ದಾರೆ. ಕೋರ್ಟ್ (Court) ಹಾಲ್ 13 ರಲ್ಲಿ ಸುದೀಪ್ ಹಾಜರಾಗಿದ್ದರು. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು 17.08.2023ಕ್ಕೆ ನಿಗದಿ ಮಾಡಿದೆ.

    ಈ ಹಿಂದೆ ಕುಮಾರ್ (N. Kumar) ಅವರಿಗೆ ಸುದೀಪ್ ಲೀಗಲ್ ನೋಟಿಸ್ (Notice) ನೀಡಿದ್ದರು. ಹತ್ತು ದಿನಗಳ ಗಡುವು ಕೂಡ ನೀಡಿದ್ದರು. ಕುಮಾರ್ ಬಹಿರಂಗ ಕ್ಷಮೆ ಕೇಳದೇ ಇದ್ದರೆ, ಕ್ರಿಮಿನಲ್ ಡಿಪಾಮೇಷನ್ ಹಾಕುವುದಾಗಿಯೂ ನೋಟಿಸ್ ನಲ್ಲಿ ತಿಳಿಸಿದ್ದರು. ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೇ ಇರುವ ಕಾರಣಕ್ಕಾಗಿ ಕಾನೂನು ಹೋರಾಟ ನಡೆಸಲು ಸುದೀಪ್ ಮುಂದಾಗಿದ್ದಾರೆ.

    ಸುದೀಪ್ ಅವರು ತಮ್ಮಿಂದ ಹಣ ಪಡೆದು, ವಂಚಿಸಿದ್ದಾರೆ ಎಂದು ಕುಮಾರ್ ಈ ಹಿಂದೆ ಆರೋಪ ಮಾಡಿದ್ದರು. ಕಾಲ್ ಶೀಟ್ ಕೊಡದೇ ತಮಗೆ ಸತಾಯಿಸುತ್ತಿದ್ದಾರೆ ಎಂದು ಅವರು ಸುದೀಪ್ ಮೇಲೆ ಆರೋಪ ಮಾಡಿದ್ದರು. ಅದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಮಾತಿನ ಹಿನ್ನೆಲೆಯಾಗಿ ಸುದೀಪ್ ಕಾನೂನು ಮೊರೆ ಹೋಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿರ್ಮಾಪಕ ಕುಮಾರ್ ಆರೋಪ : ಕೋರ್ಟಿಗೆ ಇಂದು ಕಿಚ್ಚ ಹಾಜರ್?

    ನಿರ್ಮಾಪಕ ಕುಮಾರ್ ಆರೋಪ : ಕೋರ್ಟಿಗೆ ಇಂದು ಕಿಚ್ಚ ಹಾಜರ್?

    ನಿರ್ಮಾಪಕ ಎನ್.ಕುಮಾರ್ (N. Kumar) ವಿರುದ್ಧ ಮಾನನಷ್ಟ ನೋಟಿಸ್ ಕಳುಹಿಸಿದ್ದ ಕಿಚ್ಚ ಸುದೀಪ್ (Kiccha Sudeep) ಅವರಿಗೆ ಕುಮಾರ್ ಅವರಿಂದ ಯಾವುದೇ ಉತ್ತರ ಬಾರದೇ ಇರುವ ಕಾರಣಕ್ಕಾಗಿ ಇಂದು ಸುದೀಪ್ ಕೋರ್ಟಿಗೆ (Court) ಹಾಜರಾಗಲಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.

    ಮಧ್ಯಾಹ್ನ ಸುದೀಪ್ ಬೆಂಗಳೂರಿನ ಕಾರ್ಪೊರೇಷನ್ ಹತ್ತಿರದ ಎಸಿಎಂಎಂ ನ್ಯಾಯಾಲಯಕ್ಕೆ ಕಿಚ್ಚ ಸುದೀಪ್ ಹಾಜರಾಗಿದ್ದು, ಕುಮಾರ್ ವಿರುದ್ಧ ಕ್ರಿಮಿನಲ್ ಡಿಪಾಮೇಷನ್ (Defamation) ಕೇಸ್ ಹೂಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೋರ್ಟ್ ಹಾಲ್ 21ರಲ್ಲಿ ಸುದೀಪ್ ಹಾಜರಾಗಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

    ಈ ಹಿಂದೆ ಕುಮಾರ್ ಅವರಿಗೆ ಸುದೀಪ್ ಲೀಗಲ್ ನೋಟಿಸ್ ನೀಡಿದ್ದರು. ಹತ್ತು ದಿನಗಳ ಗಡುವು ಕೂಡ ನೀಡಿದ್ದರು. ಕುಮಾರ್ ಬಹಿರಂಗ ಕ್ಷಮೆ ಕೇಳದೇ ಇದ್ದರೆ, ಕ್ರಿಮಿನಲ್ ಡಿಪಾಮೇಷನ್ ಹಾಕುವುದಾಗಿಯೂ ನೋಟಿಸ್ ನಲ್ಲಿ ತಿಳಿಸಿದ್ದರು. ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೇ ಇರುವ ಕಾರಣಕ್ಕಾಗಿ ಕಾನೂನು ಹೋರಾಟ ನಡೆಸಲು ಸುದೀಪ್ ಮುಂದಾಗಿದ್ದಾರೆ.

    ಸುದೀಪ್ ಅವರು ತಮ್ಮಿಂದ ಹಣ ಪಡೆದು, ವಂಚಿಸಿದ್ದಾರೆ ಎಂದು ಕುಮಾರ್ ಈ ಹಿಂದೆ ಆರೋಪ ಮಾಡಿದ್ದರು. ಕಾಲ್ ಶೀಟ್ ಕೊಡದೇ ತಮಗೆ ಸತಾಯಿಸುತ್ತಿದ್ದಾರೆ ಎಂದು ಅವರು ಸುದೀಪ್ ಮೇಲೆ ಆರೋಪ ಮಾಡಿದ್ದರು. ಅದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಮಾತಿನ ಹಿನ್ನೆಲೆಯಾಗಿ ಸುದೀಪ್ ಕಾನೂನು ಮೊರೆ ಹೋಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲನಟಿ ವಂಶಿಕಾ ಹೆಸರಿನಲ್ಲಿ ದೋಖಾ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಿಶಾ

    ಬಾಲನಟಿ ವಂಶಿಕಾ ಹೆಸರಿನಲ್ಲಿ ದೋಖಾ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಿಶಾ

    ಟ ಮಾಸ್ಟರ್ ಆನಂದ್ ಪುತ್ರಿ, ಬಾಲನಟಿ ವಂಶಿಕಾ ಹೆಸರಿನಲ್ಲಿ ವಂಚನೆ (Fraud) ಮಾಡಿದ್ದ ಆರೋಪಿ ನಿಶಾ ನರಸಪ್ಪಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎ.ಸಿ.ಎಮ್.ಎಮ್ ಕೋರ್ಟ್ (Court) ಆದೇಶ ಹೊರಡಿಸಿದೆ. ತಮ್ಮ ಮಗಳ ಹೆಸರಿನಲ್ಲಿ ನಿಶಾ ಎನ್ನುವವರು ದೋಖಾ ಮಾಡುತ್ತಿದ್ದಾರೆ ಎಂದು ಆನಂದ್ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು.

    ಏನಿದು ಪ್ರಕರಣ?

    ಸ್ಯಾಂಡಲ್‌ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ (Master Anand) ಪುತ್ರಿ, ಬಾಲನಟಿ ವಂಶಿಕಾ (Vamshika) ಹೆಸರು ಬಳಸಿ ಮಹಿಳೆಯೊಬ್ಬಳು ವಂಚನೆ ಮಾಡಿರುವ ಆರೋಪದ ಮೇಲೆ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ (Yashaswini) ಸದಾಶಿವನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಯಶಸ್ವಿನಿ ಜೊತೆ ಮೋಸ ಹೋಗಿರುವ ಇತರರಿಂದ ನಿಶಾ ವಿರುದ್ಧ ದೂರು ದಾಖಲಿಸಲಾಗಿತ್ತು. ಆರೋಪಿ ನಿಶಾರನ್ನ ಪೊಲೀಸರು ಬಂಧಿಸಿದ್ದರು.

    ಮಕ್ಕಳ ಟ್ಯಾಲೆಂಟ್ ಶೋ, ಮಕ್ಕಳ ಮಾಡೆಲಿಂಗ್, ಇವೆಂಟ್ ಮ್ಯಾನೇಜ್‌ಮೆಂಟ್ ನಡೆಸುತ್ತೇನೆ ಎಂದು ಹೇಳಿ ಮಕ್ಕಳ ಪೋಷಕರಿಂದ ಲಕ್ಷಾಂತರ ರೂ. ಹಣವನ್ನು ನಿಶಾ ನಂಬಿಸಿ ದೋಚಿದ್ದಾರೆ ಎನ್ನಲಾಗುತ್ತಿದೆ. ಸಾಕಷ್ಟು ಜನರಿಂದ ಹಣ ಪಡೆದು ಮೋಸ ಹೋದ ಕೆಲವರು ನಿಶಾರ ವಿರುದ್ಧ ದೂರು ನೀಡುವ ಮೂಲಕ ಕಿಡಿಕಾರಿದ್ದಾರೆ. ಹೀಗಿರುವಾಗ ಈ ನಡುವೆ ಮಾಸ್ಟರ್ ಆನಂದ್‌ರ ಪುತ್ರಿ ವಂಶಿಕಾ ಹೆಸರು ಹೇಳಿಕೊಂಡು ಹಲವರಿಗೆ ಮೋಸ ಮಾಡಿದ್ದಾರಂತೆ ನಿಶಾ ನರಸಪ್ಪ. ವಂಶಿಕಾ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸುಮಾರು 40 ಲಕ್ಷ ರೂ. ಹಣವನ್ನು ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಿಶಾರ ಮೋಸಕ್ಕೆ ಒಳಗಾದವರು, ವಂಶಿಕಾರ ತಾಯಿ ಯಶಸ್ವಿನಿ ಆನಂದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ:ಕೈ ಮೇಲೆತ್ತಿ ಹೊಟ್ಟೆ ಕಾಣುವಂತೆ ಪೋಸ್ ಕೊಟ್ಟ ಅನಸೂಯಾಗೆ ನೆಟ್ಟಿಗರಿಂದ ಕ್ಲಾಸ್

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಪತ್ನಿ ಪಬ್ಲಿಕ್ ಟಿವಿಗೆ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ನನಗೆ ಇನ್ಸ್ಟಾಗ್ರಾಂ ಖಾತೆಯ ಮೂಲಕ ನಿಶಾ ನರಸಪ್ಪ (Nisha Narasappa) ಪರಿಚಯ ಆದರು. ಒಂದಷ್ಟು ಇವೆಂಟ್‌ಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ್ವಿ. ಆಕೆ ಗ್ರೂಪ್‌ನಲ್ಲಿ ಅವರೊಬ್ಬರೇ ಗೊತ್ತಿತ್ತು. ಮೊದಲು ಆಕೆ ಕೆಲಸಗಳು ಜನ್ಯೂನ್ ಆಗಿತ್ತು. ಆರೇಳು ತಿಂಗಳ ಬಳಿಕ ಒಂದಷ್ಟು ಸಮಸ್ಯೆ ಆಗಿತ್ತು. ನಿಶಾ ಜೊತೆ ಕೆಲಸ ಮಾಡಿದವರೆಲ್ಲಾ ನೆಗೆಟಿವ್ ಕಾಮೆಂಟ್ ಮಾಡ್ತಿದ್ದರು. ಇದನ್ನು ನಿಶಾ ಗಮನಕ್ಕೆ ತಂದಿದ್ದೆ, ಹಾಗಾಗಿ ಆಕೆ ನನ್ನ ಬಳಿ ಮಾತಾನಾಡೋದನ್ನ ನಿಲ್ಲಿಸಿದ್ರು.

    ಈಗ ಒಂದಷ್ಟು ಜನ ನನಗೆ ಮೆಸೇಜ್ ಮಾಡುತ್ತಿದ್ದಾರೆ. ವಂಶಿಕಾ ಹೆಸರು ಬಳಸಿ ವಂಚನೆ ಮಾಡಿಕೊಂಡು ಹಣ ಮಾಡ್ತಿದ್ತಾರೆ ಅಂತಾ ನನ್ನ ಗಮನಕ್ಕೆ ಬಂತು. ಸ್ಟೇಷನ್‌ಗೆ ಕರೆದುಕೊಂಡು ಬಂದಿದ್ದಾರೆ ಅಂತಾ ಗೊತ್ತಾದ ಬಳಿಕ ನಾನು ಠಾಣೆಗೆ ಬಂದೆ. ಇವರಿಂದ ಹಲವರಿಗೆ ವಂಚನೆಯಾಗಿದೆ. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ನಾನು ಪ್ರಯ್ನ ಮಾಡ್ತಿದ್ದೀನಿ. ಇದೇ ವಿಚಾರವಾಗಿ ಮಧ್ಯಾಹ್ನ ಲೈವ್ ಮಾಡಿದ್ದೀನಿ. ಸೀರಿಯಲ್, ಮೂವಿ, ರಿಯಾಲಿಟಿ ಶೋ ಮಾಡುಸ್ತಿನಿ ಅಂತ ವಂಚನೆ ಮಾಡಿದ್ದಾರೆ. ನನ್ನ ಮಗಳ ಹೆಸರು ದುರ್ಬಳಕೆ ಆಗಿದೆ ನಾನು ದೂರು ನೀಡಿದ್ದೇನೆ. ಮೊದಲಿಗೆ ಸಣ್ಣಪುಟ್ಟ ಹಣ ಅಂದು ಕೊಂಡಿದ್ದೆ ಅದು ದೊಡ್ಡ ಮಟ್ಟದಲ್ಲಿ ಹಣ ಪಡೆದುಕೊಂಡಿದ್ದಾರೆ. ಆಕೆ ಪಡೆದ ದುಡ್ಡುನ್ನು ಎಲ್ಲರಿಗೂ ವಾಪಸ್ ಕೊಡಬೇಕು. ಸಾಕಷ್ಟು ವಿಚಾರ ಠಾಣೆಗೆ ಬಂದ ಮೇಲೆ ತಿಳಿಯಿತು ಎಂದು ಯಶಸ್ವಿನಿ ಆನಂದ್ ಮಾತನಾಡಿದ್ದಾರೆ.

     

    ನಿಶಾ ನರಸಪ್ಪಗೆ ವಂಚನೆಯೇ ಉದ್ಯೋಗವಾಗಿತ್ತು. ವಂಶಿಕಾ ಮಾತ್ರವೇ ಅಲ್ಲದೆ ಚಿತ್ರರಂಗದ ಹಲವರ ಹೆಸರಿನಲ್ಲಿ ಹಣ ಹಲವರಿಂದ ಹಣ ಪಡೆದಿದ್ದ ನಿಶಾ ಆ ನಂತರ ಹಣ ಪಡೆದವರ ಕರೆಗಳನ್ನು ರಿಸೀವ್ ಮಾಡುತ್ತಿರಲಿಲ್ಲವಂತೆ, ಕರೆ ಮಾಡಿದರೂ ದರ್ಪದಿಂದ ಮಾತನಾಡುತ್ತಿದ್ದರಂತೆ. ಹೀಗೆ ವಂಚನೆ ಹಣದಿಂದಲೇ ಐಶಾರಾಮಿ ಜೀವನವನ್ನು ನಿಶಾ ನರಸಪ್ಪ ನಡೆಸುತ್ತಿದ್ದರು. ಆದರೆ ಈಗ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂ ಧರ್ಮ ಸ್ವೀಕರಿಸಿದ್ದೇನೆ, ಸಸ್ಯಾಹಾರಿ ಜೀವನಶೈಲಿ ಅನುಸರಿಸ್ತೇನೆ – ಪ್ರೇಮಿಗಾಗಿ ಬದಲಾದ ಪಾಕ್‌ ಮಹಿಳೆ

    ಹಿಂದೂ ಧರ್ಮ ಸ್ವೀಕರಿಸಿದ್ದೇನೆ, ಸಸ್ಯಾಹಾರಿ ಜೀವನಶೈಲಿ ಅನುಸರಿಸ್ತೇನೆ – ಪ್ರೇಮಿಗಾಗಿ ಬದಲಾದ ಪಾಕ್‌ ಮಹಿಳೆ

    ಲಕ್ನೋ: ವೀಸಾ ಇಲ್ಲದೇ ಭಾರತಕ್ಕೆ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ (Pakistani Woman) ಸೀಮಾ ಹೈದರ್ ಜೈಲಿನಿಂದ ಬಿಡುಗಡೆಯಾದ ನಂತರ ಉತ್ತರ ಪ್ರದೇಶದ ತನ್ನ ಪ್ರೇಮಿ ಸಚಿನ್‌ ಮೀನಾ ಜೊತೆಗೆ ದಾಂಪತ್ಯ ಜೀವನ ಶುರು ಮಾಡಿದ್ದಾಳೆ. ಅಲ್ಲದೇ ತಾನು ಇನ್ನೆಂದಿಗೂ ಪಾಕಿಸ್ತಾನಕ್ಕೆ ಹಿಂದಿರುಗಲ್ಲ, ಭಾರತೀಯ ಸಂಸ್ಕೃತಿಯನ್ನ (Indian Culture) ಹೃದಯದಿಂದ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

    ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ ಮಾತನಾಡಿರುವ ಪಾಕ್‌ ಮಹಿಳೆ, ನಾನೀಗ ನನ್ನ ದಿನಚರಿಯಲ್ಲಿ ಹಿಂದೂ ಸಂಸ್ಕೃತಿಯನ್ನ ಅಳವಡಿಸಿಕೊಂಡಿದ್ದೇನೆ. ನನ್ನ ಕೊರಳಲ್ಲಿ ರಾಧೆಯ ಪಟ್ಟಿಯನ್ನ ಧರಿಸೋದು, ಜನರನ್ನ ಕೈಮುಗಿದು ನಮಸ್ಕರಿಸುವುದು, ಆಶೀರ್ವಾದಕ್ಕಾಗಿ ಹಿರಿಯರ ಪಾದಗಳನ್ನ ಮುಟ್ಟಿ ನಮಸ್ಕರಿಸುವುದು, ದೇವರನ್ನ ಪ್ರಾರ್ಥಿಸುವುದು ಹಾಗೂ ಹಿಂದೂ ಸಂಪ್ರದಾಯದಂತೆ ಸಸ್ಯಹಾರಿ ಜೀವನ ಶೈಲಿಯನ್ನ ಅಳವಡಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Made by Tata iPhones – ಕೋಲಾರದಲ್ಲಿ ಐಫೋನ್‌ ತಯಾರಿಸಲಿದೆ ಟಾಟಾ!

    ಭಾರತಕ್ಕೆ ಅಕ್ರಮವಾಗಿ ತನ್ನ 4 ಮಕ್ಕಳೊಂದಿಗೆ ಪ್ರವೇಶಿಸಿದ್ದ ಮಹಿಳೆ ಮತ್ತು ಆತನ ಪ್ರಿಯಕರ ಹಾಗೂ ಅವರಿಬ್ಬರಿಗೆ ಆಶ್ರಯ ನೀಡಿದ್ದ ಪ್ರಿಯಕರನ ತಂದೆಯನ್ನ ಗ್ರೇಟರ್ ನೋಯ್ಡಾ ಪೊಲೀಸರು (Noida Police) ಜುಲೈ ಬಂಧಿಸಿದ್ದರು. ಶುಕ್ರವಾರ ಸ್ಥಳೀಯ ನ್ಯಾಯಾಲಯ (Local Court) ಈ ಮೂವರಿಗೂ ಜಾಮೀನು ನೀಡಿತು. ಕಾಗದ ಪತ್ರಗಳ ಪರಿಶೀಲನೆ ಕೆಲಸ ಮುಗಿದ ಬಳಿಕ ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಜೈಲಿನಿಂದ ಬಿಡುಗಡೆಗೊಂಡ ನಂತರ ಹೊಸದಾಗಿ ದಾಂಪತ್ಯ ಜೀವನ ಶುರು ಮಾಡಿದ್ದಾರೆ. ಇದನ್ನೂ ಓದಿ: ಭಾರತ ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಬಲ್ಲದು – ವಿಶ್ವ ಮುಸ್ಲಿಂ ಲೀಗ್‌ ಮುಖ್ಯಸ್ಥ

    ಸೀಮಾ ಭಾರತಕ್ಕೆ ಬಂದ ಹಾದಿಯೇ ರೋಚಕ:
    ನನ್ನದು ತುಂಬಾ ದೀರ್ಘ ಪ್ರಯಾಣವಾಗಿತ್ತು ಎಂದು ಸೀಮಾ ಹೇಳಿಕೊಂಡಿದ್ದಾಳೆ. ಮೊದಲ ಮದುವೆಯಾದ ನಂತರ ಕರಾಚಿಯಿಂದ ದುಬೈಗೆ ಹೋಗಿದ್ದೆ. ಅಲ್ಲಿಂದ ನೇಪಾಳಕ್ಕೆ ಹೋದ್ವಿ. ಕೊನೆಗೆ ಪೋಖ್ರಾ ದಾರಿ ಹಿಡಿಯುವ ಮುನ್ನ ಸಚಿನ್‌ನನ್ನ ಭೇಟಿಯಾಗಿದ್ದೆ. ನಂತರ ನಾನು ಪಾಕಿಸ್ತಾನಕ್ಕೆ, ಸಚಿನ್ ಭಾರತಕ್ಕೆ ಮರಳಿದ್ದರು. ಅದಾದ ಮೇಲೆ ಸೀಮಾ ಹಾಗೂ ಪತಿ ನಡುವೆ ಭಿನ್ನಾಭಿಪ್ರಾಯ ಶುರುವಾಗಿ ಪಾಕಿಸ್ತಾನ ತೊರೆಯಲು ಮುಂದಾದಳು. ಸೀಮಾ ತನಗಿದ್ದ ಒಂದು ಫ್ಲಾಟ್ ಅನ್ನು 12 ಲಕ್ಷ ರೂ.ಗೆ (ಪಾಕಿಸ್ತಾನ ರೂಪಾಯಿಗಳಲ್ಲಿ) ಮಾರಾಟ ಮಾಡಿ, ತನಗೆ ಮತ್ತು ತನ್ನ ನಾಲ್ಕು ಮಕ್ಕಳಿಗೆ ನೇಪಾಳಕ್ಕೆ ವಿಮಾನ ಟಿಕೆಟ್ ಮತ್ತು ವೀಸಾ ವ್ಯವಸ್ಥೆ ಮಾಡಿಕೊಂಡಳು. ಕಳೆದ ಮೇ ತಿಂಗಳಲ್ಲಿ ದುಬೈ ಮೂಲಕ ನೇಪಾಳಕ್ಕೆ ಬಂದ ಸೀಮಾ, ಅಲ್ಲಿಂದ ಮೇ 13ರಂದು ಗ್ರೇಟರ್ ನೋಯ್ದಾಗೆ ಬಂದಿಳಿದಿದ್ದಳು. ಸಚಿನ್ ತನ್ನ ಪ್ರಿಯತಮೆಯ ಗುಟ್ಟು ಬಿಟ್ಟುಕೊಡದೇ ನೋಯ್ಡಾದಲ್ಲೇ ಬಾಡಿಗೆ ಮನೆ ಮಾಡಿ ಇರಿಸಿದ್ದ. ಈ ವಿಷಯ ಬೆಳಕಿಗೆ ಬಂದ ನಂತರ ಜುಲೈ 4ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮತ್ತೆ ಸುದೀಪ್ ಪರ ಜಾಕ್ ಮಂಜು ಬ್ಯಾಟಿಂಗ್

    ಇಂದು ಮತ್ತೆ ಸುದೀಪ್ ಪರ ಜಾಕ್ ಮಂಜು ಬ್ಯಾಟಿಂಗ್

    ಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನಟ ಸುದೀಪ್ (Sudeep) ಸುದೀರ್ಘವಾಗಿ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ಚಲನಚಿತ್ರ ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ ಬರೆದರೂ, ಆರೋಪಗಳು ಮಾತ್ರ ನಿಲ್ಲುತ್ತಿಲ್ಲ. ವಾರದ ಹಿಂದೆಯಷ್ಟೇ ನಿರ್ಮಾಪಕ ಎನ್.ಎಂ. ಕುಮಾರ್ (NM Kumar) ತಮಗೆ ಸುದೀಪ್ ಕಾಲ್ ಶೀಟ್ ನೀಡುತ್ತಿಲ್ಲವೆಂದು ಆರೋಪ ಮಾಡಿದ್ದರೆ, ನಿನ್ನೆಯಷ್ಟೇ ಮತ್ತೋರ್ವ ನಿರ್ಮಾಪಕ ರೆಹಮಾನ್ (Rahman) ಕೂಡ ಸುದೀಪ್ ಅವರಿಂದ ತಮಗೆ ಹಾನಿಯಾಗಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದ್ದರು.

    ಇವತ್ತು ಸುದೀಪ್ ಅವರ ಆಪ್ತ ಜಾಕ್ ಮಂಜು (Jack Manju) ಮತ್ತೊಂದು ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ್ದಾರೆ. ಸುದೀಪ್ ಬಗ್ಗೆ ಆರೋಪ ಮಾಡಿದ ರೆಹಮಾನ್ ಜೊತೆಯಲ್ಲೇ ಪತ್ರಿಕಾಗೋಷ್ಠಿ ಮಾಡುವುದಾಗಿ ತಿಳಿಸಿದ್ದಾರೆ. ರೆಹಮಾನ್ ಬರುತ್ತಾರೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಸುದೀಪ್ ಮೇಲಿನ ಆರೋಪಗಳಿಗೆ ತಾವು ಉತ್ತರಿಸುವುದಾಗಿ ಜಾಕ್ ಮಂಜು ಹೇಳಿದ್ದಾರೆ. ಜೊತೆಗೆ ಸುದೀಪ್ ಅವರ ಅಭಿಮಾನಿಗಳು ಕೂಡ ಇಂದು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕುವುದಾಗಿ ಸಂದೇಶವನ್ನು ರವಾನಿಸಿದ್ದಾರೆ.

    ಕುಮಾರ್ ಅವರು ಮಾಡಿದ ಆರೋಪಕ್ಕೆ ಈಗಾಗಲೇ ಸುದೀಪ್ ಕಾನೂನು ಮೂಲಕವೇ ಉತ್ತರಿಸಿದ್ದಾರೆ. ತಮ್ಮ ಮೇಲೆ ಸುಖಾಸುಮ್ಮನೆ ಆರೋಪ ಮಾಡಿ, ತಮ್ಮ ವ್ಯಕ್ತಿತ್ವಕ್ಕೆ ಕುಮಾರ್ ಧಕ್ಕೆ ತರುತ್ತಿದ್ದಾರೆ ಎಂದು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮಾನನಷ್ಟ ಕಟ್ಟಿಕೊಡಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ. ನೋಟಿಸ್ ಕಳುಹಿಸುತ್ತಿದ್ದಂತೆಯೇ ಕುಮಾರ್ ಮತ್ತೆ ಪತ್ರಿಕಾಗೋಷ್ಠಿ ನಡೆಸಿ ಸುದೀಪ್ ತಮಗೆ ಮೋಸ ಮಾಡಿದ್ದು ನಿಜ ಎಂದು ಮತ್ತೆ ನುಡಿದಿದ್ದರು.

    ಈ ಎಲ್ಲ ಆರೋಪ ಪ್ರತ್ಯಾರೋಪಕ್ಕೆ ಉತ್ತರ ಎನ್ನುವಂತೆ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ ಬರೆದಿದ್ದಾರೆ. ಮೂರು ಸಂಸ್ಥೆಗಳು ನಿರ್ಮಾಪಕರ ಪರ ನಿಲ್ಲಬೇಕೋ ಅಥವಾ ಕಲಾವಿದರ ಪರ ನಿಲ್ಲಬೇಕೋ ಎನ್ನುವ ಸಂದಿಗ್ಧತೆಗೆ ಒಳಗಾಗದೇ ನನ್ನ ಮೇಲೆ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದ್ದರೆ, ನ್ಯಾಯಾಯಲದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ‘ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿ ಅಷ್ಟೇ. ಸ್ಪಂದಿಸಬೇಕಾದದ್ದು ನಿಮ್ಮ ಕರ್ತವ್ಯ. ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ ನನಗೆ ಯಾವುದೇ ತಕರಾರು ಇರುವುದಿಲ್ಲ. ಯಾವುದೇ ನಿರ್ಮಾಪಕರು, ಯಾರೇ ಕಲಾವಿದರು, ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತೃ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಮಾತೃ ಸಂಸ್ಥೆಗಳಿಗೂ ಕಿಚ್ಚ ಪಾಠ ಮಾಡಿದ್ದಾರೆ.

    27 ವರ್ಷಗಳ ಕಾಲ ನಾನೂ ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. 80 ವರ್ಷಗಳ ಕಾಲ ಚಿತ್ರರಂಗದ ರಥ ಎಳೆದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೇಯೆ. ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ, 45 ಸಿನಿಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟತನಕ್ಕಲ್ಲ ಎಂದು ಹೇಳುವ ಮೂಲಕ ತಮಗೂ ನಿರ್ಮಾಪಕರಿಂದ ಬಾಕಿ ಬರಬೇಕಾಗಿದ್ದನ್ನೂ ನೆನಪಿಸಿದ್ದಾರೆ.

    ಚಿತ್ರರಂಗದ ಮುಂದಿನ ಭವಿಷ್ಯಕ್ಕೆ ಕೆಟ್ಟ ಉದಾಹರಣೆ ದಕ್ಕಬಾರದು ಎಂದು ಇಷ್ಟು ಕಠಿಣವಾದ ಹೋರಾಟ ಮಾಡುತ್ತಿರುವುದಾಗಿ ಕಿಚ್ಚ ಪತ್ರದಲ್ಲಿ ಬರೆದಿದ್ದಾರೆ. ಯಾರದ್ದೋ ಆಗಲಿ ಜೀವನ-ಜೀವ ಉಳಿಸಲು ಪ್ರಯತ್ನಿಸಿದ್ದೇನೇ ಹೊರತು, ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ ಎಂದು ಹೇಳುವ ಮೂಲಕ ಎನ್.ಎಂ. ಸುರೇಶ್ ಅವರಿಗೂ ಇದೇ ಪತ್ರದಲ್ಲಿ ಉತ್ತರ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]