Tag: court

  • ಚೆಕ್ ಬೌನ್ಸ್ ಕೇಸ್: ಕೋರ್ಟ್ ಕಟಕಟೆಯಲ್ಲಿ ನಟಿ ಅಮೀಶಾ ಪಟೇಲ್

    ಚೆಕ್ ಬೌನ್ಸ್ ಕೇಸ್: ಕೋರ್ಟ್ ಕಟಕಟೆಯಲ್ಲಿ ನಟಿ ಅಮೀಶಾ ಪಟೇಲ್

    ಬಾಲಿವುಡ್ ನಟಿ ಅಮೀಶಾ ಪಟೇಲ್ (Ameesha Patel) ಶನಿವಾರ ರಾಂಚಿ ಸಿವಿಲ್ ಕೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚೆಕ್ ಬೌನ್ಸ್ (Cheque bounce case) ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರು ರಾಂಚಿ  (Ranchi) ಸಿವಿಲ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

    ನಿರ್ಮಾಪಕ ಅಜಯ್ ಕುಮಾರ್ ಸಿಂಗ್ (Ajay Kumar Singh) ಅವರು ಈ ಹಿಂದೆ ದೇಸಿ ಮ್ಯಾಜಿಕ್ ಹೆಸರಿನಲ್ಲಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಸಿನಿಮಾದಲ್ಲಿ ನಟಿಸಲು ಅಮೀಶಾ ಪಟೇಲ್ ಅವರಿಗೆ 2.5 ಕೋಟಿ ರೂಪಾಯಿಯನ್ನು ನೀಡಿದ್ದರು. ಆದರೆ, ಅಮೀಶಾ ಆ ಸಿನಿಮಾದಲ್ಲಿ ನಟಿಸಲಿಲ್ಲ. ಹಾಗಾಗಿ ಹಣವನ್ನು ವಾಪಸ್ಸು ನೀಡುವಂತೆ ತಿಳಿಸಿದ್ದರು. ಚೆಕ್ ಕೊಟ್ಟು ಬೌನ್ಸ್ ಮಾಡಿದ್ದರು ಅಮೀಶಾ. ಇದನ್ನೂ ಓದಿ:ಸುದೀಪ್ ಬಗ್ಗೆ ಬೇಸರ ಹೊರಹಾಕಿದ ಸಚಿವ ಕೆ.ಎನ್.ರಾಜಣ್ಣ

    ಹಣ ಕೊಡದೇ ಸತಾಯಿಸುತ್ತಿದ್ದ ಅಮೀಶಾಗೆ ಬುದ್ದಿ ಕಲಿಸಲೆಂದು ಅಜಯ್ ಕುಮಾರ್ 2018ರಲ್ಲಿ ವಂಚನೆ ಪ್ರಕರಣವನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟಿಗೆ (Court) ಹಾಜರಾಗುವಂತೆ ನಟಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಆದರೂ ಅಮೀಶಾ ಪಟೇಲ್ ಕೋರ್ಟಿಗೆ ಹಾಜರಾಗಿರಲಿಲ್ಲ ಎಂದು ಹೇಳಲಾಗುತ್ತಿದೆ.

    ಈ ಬಾರಿ ಕೋರ್ಟ್ ಅವರಿಗೆ ವಾರೆಂಟ್ ಜಾರಿ ಮಾಡಿತ್ತು. ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಅಮೀಶಾ ಪಟೇಲ್ ಶನಿವಾರ ಕೋರ್ಟಿಗೆ ಹಾಜರಾಗಿದ್ದರು.

  • ಸೌಜನ್ಯ ರೇಪ್‌, ಮರ್ಡರ್‌ ಕೇಸ್‌- ಆರೋಪಿ ಸಂತೋಷ್‌ ರಾವ್‌ ಖುಲಾಸೆ

    ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ (Sowjanya Rape and Murder) ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು (Santosh Rao) ಕೋರ್ಟ್‌ ದೋಷಮುಕ್ತಗೊಳಿಸಿದೆ.

    ಸಿಬಿಐ ವಿಶೇಷ ನ್ಯಾಯಾಲಯದ (CBI Special Court) ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.

    ಆರೋಪಿ ಪರ ವಾದ ಏನಿತ್ತು?
    ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಫ್ರೀ ಬಸ್ ಸೇವೆ, ನಮ್ಮ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ: ರಾಮಲಿಂಗಾ ರೆಡ್ಡಿ

    ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಅಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ಸಂಗ್ರಹಿಸಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್‌ ರಾವ್‌ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್‌ ವಾದಿಸಿದ್ದರು.

     

    ಏನಿದು ಪ್ರಕರಣ?
    ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.

    ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.

  • ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

    ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

    ಲಕ್ನೋ: ಗ್ಯಾಂಗ್‍ಸ್ಟರ್ (Gangster) ಮುಕ್ತರ್ ಸಹಚರನನ್ನು ಕೋರ್ಟ್‌ನ (Court) ಕೊಠಡಿಯಲ್ಲೇ ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಕೈಸರ್‌ಬಾಗ್ ಸ್ಥಳೀಯ ನ್ಯಾಯಾಲಯದಲ್ಲಿ ನಡೆದಿದೆ.

    ವಕೀಲರ (Lawyer) ವೇಷದಲ್ಲಿ ಬಂದ ಹಂತಕರು ಏಕಾಏಕಿ ಗ್ಯಾಂಗ್‍ಸ್ಟರ್ ಸಂಜೀವ್ ಜೀವಾ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ನೆಲಕ್ಕೆ ಕುಸಿದ ಆತನ ರಕ್ತಸ್ರಾವವನ್ನು ತಡೆಯಲು ಅಧಿಕಾರಿಗಳು ಪ್ರಯತ್ನಪಟ್ಟಿದ್ದಾರೆ. ಆದರೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೇ ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಯ ಕಾಲಿಗೆ ಗುಂಡು ತಗುಲಿದೆ.

    ಈ ಕೊಲೆ ಪ್ರಕರಣದಲ್ಲಿ ಎಷ್ಟು ಜನ ಶೂಟರ್‌ಗಳು ಇದ್ದರು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ದಾಳಿಕೋರರು ರಿವಾಲ್ವರ್ ಹಿಡಿದುಕೊಂಡು ನ್ಯಾಯಾಲಯದ ಆವರಣಕ್ಕೆ ಹೇಗೆ ಪ್ರವೇಶಿಸಿದರು ಎಂಬುದು ಸ್ಪಷ್ಟವಾಗಿಲ್ಲ. ಆದರೆ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ದಾಳಿಕೋರರಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

    ಮೃತ ಸಂಜೀವ್ ಜೀವಾ ಪಶ್ಚಿಮ ಯುಪಿಯಲ್ಲಿ ಕ್ರಿಮಿನಲ್ ಗ್ಯಾಂಗ್ ನಡೆಸುತ್ತಿದ್ದ. ಅಲ್ಲದೇ ಉತ್ತರಾಖಂಡ (Uttarakhand) ಹಾಗೂ ಉತ್ತರ ಪ್ರದೇಶದಲ್ಲಿ (Uttar Pradesh) ಆತನ ವಿರುದ್ಧ ಕನಿಷ್ಠ 50 ಕ್ರಿಮಿನಲ್ ಪ್ರಕರಣಗಳಿವೆ. ಆತ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಎಂದು ತಿಳಿದು ಬಂದಿದೆ.

  • ಉದ್ಯಮಿ ಆತ್ಮಹತ್ಯೆ ಪ್ರಕರಣ – ಅರವಿಂದ ಲಿಂಬಾವಳಿಗೆ ಬಿಗ್‌ ರಿಲೀಫ್‌

    ಉದ್ಯಮಿ ಆತ್ಮಹತ್ಯೆ ಪ್ರಕರಣ – ಅರವಿಂದ ಲಿಂಬಾವಳಿಗೆ ಬಿಗ್‌ ರಿಲೀಫ್‌

    ರಾಮನಗರ: ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೋರ್ವ ತಲೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಮಾಜಿ ಸಚಿವ ಅರವಿಂದ ಲಿಂಬಾವಳಿಗೆ (Arvind Limbavali) ಬಿಗ್ ರಿಲೀಫ್ ಸಿಕ್ಕಿದೆ.

    ಉದ್ಯಮಿ ಬರೆದಿಟ್ಟಿದ್ದ ಡೆತ್‌ನೋಟ್‌ (Death Note) ಆರೋಪಕ್ಕೆ ಸರಿಯಾದ ಸಾಕ್ಷ್ಯಗಳಿಲ್ಲದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿ ತನಿಖೆ ಮುಕ್ತಾಯಗೊಳಿಸಲಾಗಿದೆ.  ಇದನ್ನೂ ಓದಿ: India GDP – ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

     

    ಕಳೆದ ಜನವರಿ 2ರಂದು ಬೆಂಗಳೂರಿನ ಉದ್ಯಮಿ ಪ್ರದೀಪ್‌ ಕಗ್ಗಲೀಪುರ ಸಮೀಪ ಕಾರಿನಲ್ಲಿಯೇ ಡೆತ್‌ನೋಟ್‌ ಬರೆದಿಟ್ಟು ಶೂಟೌಟ್‌ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದರು. ಅದರಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ ಆತ್ಮಹತ್ಯೆಗೆ ಕಾರಣವೆಂದು ಹೆಸರು ಬರೆದಿಟ್ಟಿದ್ದರು.

     

    ಪ್ರದೀಪ್ ಪತ್ನಿ ನೀಡಿದ ದೂರಿನ ಅನ್ವಯ 6 ಮಂದಿ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು. ಡೆತ್ ನೋಟ್ ಆರೋಪಕ್ಕೆ ಸರಿಯಾದ ಸಾಕ್ಷ್ಯಗಳು ಸಿಗದ ಹಿನ್ನಲೆಯಲ್ಲಿ ತನಿಖೆ ಮುಕ್ತಾಯಗೊಳಿಸಲಾಗಿದೆ. ತನಿಖೆ ವೇಳೆ ಕೌಟುಂಬಿಕ ಕಲಹ ಹಾಗೂ ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

  • ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ : ಕುಸ್ತಿಪಟುಗಳಿಗೆ ಸಿಂಗ್‌ ಸವಾಲ್‌

    ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ : ಕುಸ್ತಿಪಟುಗಳಿಗೆ ಸಿಂಗ್‌ ಸವಾಲ್‌

    ನವದೆಹಲಿ: ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಮತ್ತು ಬಿಜೆಪಿಯ ಸಂಸತ್ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಕುಸ್ತಿಪಟುಗಳಿಗೆ (Wrestlers) ಸವಾಲು ಎಸೆದಿದ್ದಾರೆ.

    ನಿಮ್ಮ ಬಳಿ ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ (Court) ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ಲೈಂಗಿಕ ಕಿರುಕುಳ (Sexual Harassment) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು 15 ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿಕೆಯ ಬೆನ್ನಲ್ಲೇ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಂದ ಈ ಹೇಳಿಕೆ ಪ್ರಕಟವಾಗಿದೆ.

    ಇದುವರೆಗಿನ ತನಿಖೆಯ ಸಮಯದಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ಪೊಲೀಸರಿಗೆ ಸಾಕಷ್ಟು ಪುರಾವೆಗಳು ಸಿಕ್ಕಿಲ್ಲ. ಆರೋಪಗಳನ್ನು ದೃಢಪಡಿಸಲು ಕುಸ್ತಿಪಟುಗಳು ಸಾಕ್ಷ್ಯಗಳನ್ನು ನೀಡಿಲ್ಲ. 15 ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

     

    ಒಲಿಂಪಿಕ್ಸ್‌ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಕ್ರೀಡಾಪಟುಗಳು ಈ ವರ್ಷದ ಜನವರಿಯಲ್ಲಿ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಮಹಿಳಾ ಕ್ರೀಡಾಪಟುಗಳಿಗೆ ಸಿಂಗ್‌ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

  • ಸೈಟ್ ವಿಚಾರಕ್ಕೆ ಗ್ರಾಮಪಂಚಾಯ್ತಿ ಸಿಬ್ಬಂದಿಯಿಂದ ಮಹಿಳೆಗೆ ಚಾಕು ಇರಿತ

    ಸೈಟ್ ವಿಚಾರಕ್ಕೆ ಗ್ರಾಮಪಂಚಾಯ್ತಿ ಸಿಬ್ಬಂದಿಯಿಂದ ಮಹಿಳೆಗೆ ಚಾಕು ಇರಿತ

    ಹಾಸನ: ನಿವೇಶನದ (Site) ವಿಚಾರಕ್ಕೆ ಮಹಿಳೆ ಮೇಲೆ ಗ್ರಾಮ ಪಂಚಾಯ್ತಿ (Gram Panchayat) ಕಂಪ್ಯೂಟರ್ ಆಪರೇಟರೊಬ್ಬ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಹೊಳೆನರಸೀಪುರದ (Holenarasipura) ಕೋಡಿಹಳ್ಳಿಯಲ್ಲಿ ನಡೆದಿದೆ.

    ಚಾಕು ಇರಿತದಿಂದ ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಅದೇ ಗ್ರಾಮದ ಮಲ್ಲೇಶ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ಇಲ್ಲದಾಗ ಆಗಾಗ ಬರುತ್ತಿದ್ದ ಯುವಕ- ಅನೈತಿಕ ಸಂಬಂಧ ಶಂಕೆಗೆ ಬಲಿ

    ಗ್ರಾಮದ ಬೋರೇಗೌಡ ಮತ್ತು ಮಲ್ಲೇಶ್ ಎಂಬವರ ನಡುವೆ ನಿವೇಶನ ವಿಚಾರಕ್ಕೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಅಲ್ಲದೆ ಆರು ತಿಂಗಳ ಹಿಂದೆ ಬೋರೇಗೌಡ ನ್ಯಾಯಾಲಯದ (Court) ಮೆಟ್ಟಿಲೇರಿದ್ದರು. ಬೋರೇಗೌಡರ ಪರವಾಗಿ ನ್ಯಾಯಾಲಯದಲ್ಲಿ ತೀರ್ಪು ಸಹ ಬಂದಿತ್ತು.

    ಶನಿವಾರ ಅಡಿಪಾಯ ತೆಗೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದಿದ್ದ ಮಲ್ಲೇಶ್ ಹಾಗೂ ಆತನ ಸ್ನೇಹಿತರು ಜಗಳ ಶುರು ಮಾಡಿದ್ದಾರೆ. ಅಲ್ಲದೆ ಏಕಾಏಕಿ ಬೋರೇಗೌಡನ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪತಿ ರಕ್ಷಣೆಗೆ ಪತ್ನಿ ಗೀತಾ ಅಡ್ಡ ಬಂದಿದ್ದಾರೆ. ಈ ವೇಳೆ ಆರೋಪಿ ಚಾಕುವಿನಿಂದ ಮಹಿಳೆಯ ಮುಖಕ್ಕೆ ಇರಿದಿದ್ದಾನೆ.

    ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಸಾವು- ಕಾರಣ ಅದಲ್ಲ ಅಂತ ವೈದ್ಯರ ವಾದ

  • ನರೇಶ್-ಪವಿತ್ರಾ ನಟನೆಯ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಮ್ಯಾ

    ನರೇಶ್-ಪವಿತ್ರಾ ನಟನೆಯ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಮ್ಯಾ

    ತೆಲುಗಿನ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh)  ನಟನೆಯ ‘ಮತ್ತೆ ಮದುವೆ’ (ಮಲ್ಲಿ ಪೆಲ್ಲಿ) (Matte Maduve) ಸಿನಿಮಾ ವಿರುದ್ಧ ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್  (Court) ಮೋರೆ ಹೋಗಿದ್ದಾರೆ. ತಮ್ಮ ಮಾನಹಾನಿ ಮಾಡುವಂತಹ ದೃಶ್ಯಗಳು ಸಿನಿಮಾದಲ್ಲಿ ಇವೆ ಎಂದು ಅವರು ಕೋರ್ಟಿಗೆ ತಿಳಿಸಿದ್ದಾರೆ. ವೈಯಕ್ತಿಕ ಜೀವನಕ್ಕೆ ಧಕ್ಕೆ ತರುವಂತಹ ಅಂಶಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಹಾಗಾಗಿ ಸಿನಿಮಾ ಪ್ರದರ್ಶನವಾಗದಂತೆ ತಡೆಯಬೇಕು ಎಂದು ಅವರು ಕುಕಟ್ ಪಲ್ಲಿಯಲ್ಲಿರುವ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

    ಚಿತ್ರದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ. ಇದನ್ನೂ ಓದಿ:60ನೇ ವಯಸ್ಸಿಗೆ 2ನೇ ಮದುವೆಯಾದ ನಟ ಆಶಿಶ್ ವಿದ್ಯಾರ್ಥಿ

    ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ (Ramya) ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ (Suchendra Prasad) ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು (M.S. Raju) ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

  • ಮಕ್ಕಳನ್ನು ಅಪಹರಿಸಿ ಅತ್ಯಾಚಾರಗೈದು ಹತ್ಯೆ- ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

    ಮಕ್ಕಳನ್ನು ಅಪಹರಿಸಿ ಅತ್ಯಾಚಾರಗೈದು ಹತ್ಯೆ- ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

    ನವದೆಹಲಿ: 30 ಮಕ್ಕಳನ್ನು ಅಪಹರಿಸಿ ಅತ್ಯಾಚಾರಗೈದು (Rape) ನಂತರ ಹತ್ಯೆಗೈದ ಅಪರಾಧಿಗೆ ದೆಹಲಿ (Delhi) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

    ರವೀಂದರ್ ಕುಮಾರ್ ಎಂಬಾತ ಆರು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆಗೈದ ಬಳಿಕ ಮೇ 6ರಂದು ರೋಹಿಣಿ ನ್ಯಾಯಾಲಯವು ಆತ ಅಪರಾಧಿ ಎಂಬ ತೀರ್ಪನ್ನು ನೀಡಿತ್ತು. ಈ ಕುರಿತು ಕಳೆದ ವಾರ ತೀರ್ಪು ನಡೆಯಬೇಕಿತ್ತು. ಆದರೆ ಕುಮಾರ್ ಆದಾಯ ಮತ್ತು ಆಸ್ತಿಯ ಬಗ್ಗೆ ವಿವರ ತಿಳಿಯದ ಕಾರಣ ತೀರ್ಪನ್ನು ಮುಂದೂಡಲಾಯಿತು. ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯನ್ನು ಕೊಲೆಗೈದು ದೇಹದ ಭಾಗಗಳನ್ನು ಫ್ರಿಡ್ಜ್‌ನಲ್ಲಿಟ್ಟ!

    ಮೂಲತಃ ಉತ್ತರಪ್ರದೇಶದ ಕಾಸ್‌ಗಂಜ್‌ನ ನಿವಾಸಿಯಾದ ರವೀಂದರ್ ಕುಮಾರ್ 2008ರಲ್ಲಿ ದೆಹಲಿಗೆ ಬಂದಿದ್ದ. ಆಗ ಆತನ ವಯಸ್ಸು 18 ಆಗಿತ್ತು. ತೀವ್ರ ಮದ್ಯವ್ಯಸನಿ ಮತ್ತು ಡ್ರಗ್ಸ್ (Drugs) ಚಟ ಹೊಂದಿದ್ದ ಈತ ಒಂದು ಗುಡಿಸಲಿನಲ್ಲಿ ವಾಸಿಸುತ್ತಿದ್ದು, ದಿನವಿಡೀ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 7ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ – ನಾಲ್ವರು ಅಪ್ರಾಪ್ತರು ಅರೆಸ್ಟ್

    ಈತ ಡ್ರಗ್ಸ್ ಸೇವಿಸಿದ ಬಳಿಕ ಮಕ್ಕಳನ್ನು ಹುಡುಕಿಕೊಂಡು ಸುಮಾರು 40 ಕಿಲೋ ಮೀಟರ್‌ವರೆಗೂ ನಡೆದುಕೊಂಡೇ ಹೋಗುತ್ತಿದ್ದ. ಕಟ್ಟಡ ನಿರ್ಮಾಣ ಸ್ಥಳಗಳು ಮತ್ತು ಕೊಳಗೇರಿಗಳೇ ಈತನ ಟಾರ್ಗೆಟ್. ಅಲ್ಲಿ ಹಿಂದುಳಿದ ಕುಟುಂಬಗಳು ಹೆಚ್ಚಾಗಿ ವಾಸಿಸುತ್ತಿದ್ದು, ಮಕ್ಕಳಿಗೆ 10 ರೂ. ಅಥವಾ ಸಿಹಿ ತಿನಿಸುಗಳ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ಯುತ್ತಿದ್ದ. ಬಳಿಕ ಮಗುವಿನ ಮೇಲೆ ಅತ್ಯಾಚಾರಗೈದು ಕೊಲೆಮಾಡುತ್ತಿದ್ದ. ಇದನ್ನೂ ಓದಿ: ಪರಾರಿಯಾಗಲು ಯತ್ನಿಸಿದ ವರನನ್ನು 20 ಕಿ.ಮೀ ಚೇಸ್ ಮಾಡಿ ಮಂಟಪಕ್ಕೆ ಕರೆತಂದ ಗಟ್ಟಿಗಿತ್ತಿ ವಧು!

    ಹೀಗೇ 2008ರಿಂದ 2015ರ ಒಳಗಾಗಿ ಒಟ್ಟು 30 ಮಕ್ಕಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಈ ಕುರಿತು ಬೇಗಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು 2015ರಲ್ಲಿ ಈತನನ್ನು ದೆಹಲಿಯಲ್ಲಿ ಬಂಧಿಸಲಾಯಿತು. ಶಿಕ್ಷೆಯ ಕುರಿತು ವಾದ ಮಂಡಿಸುವ ಸಂದರ್ಭದಲ್ಲಿ ದೆಹಲಿ ಪೊಲೀಸರು ಈತನಿಗೆ ಗರಿಷ್ಠ ಶಿಕ್ಷೆಯನ್ನು ನೀಡಬೇಕು ಎಂದು ಕೋರಿದ್ದರು. ಹೀಗಾಗಿ ಈತನಿಗೆ ದೆಹಲಿ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿದೆ. ಇದನ್ನೂ ಓದಿ: ಐಸಿಸ್ ಸೇರಲು ಕೇರಳ ತೊರೆದಿದ್ದ ವ್ಯಕ್ತಿ ಪಾಕ್ ಜೈಲಿನಲ್ಲಿ ಸಾವು

  • ಕೊಲೆ ಪಾತಕಿಗೆ ಜೀವಾವಧಿ ಶಿಕ್ಷೆ – 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯ

    ಕೊಲೆ ಪಾತಕಿಗೆ ಜೀವಾವಧಿ ಶಿಕ್ಷೆ – 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯ

    ಶಿವಮೊಗ್ಗ: ಕೊಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗ (Shivamogga) ನ್ಯಾಯಾಲಯ (Court) ತೀರ್ಪು ನೀಡಿದೆ.

    ಶಿವಮೊಗ್ಗದ ಶರಾವತಿ ನಗರದಲ್ಲಿ 2018ರಲ್ಲಿ ಜಮೀನಿನ ವಿಷಯಕ್ಕೆ ಸಂಬಂಧಿಸಿದಂತೆ ರೇವಣ್ಣಪ್ಪ (51) ಎಂಬ ವ್ಯಕ್ತಿಯ ಕೊಲೆಯಾಗಿತ್ತು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳಲೂರಿನ ನಿವಾಸಿ ಪ್ರಕಾಶ್ (45) ಎಂಬವನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಜಲ್ಲಿಕಟ್ಟುಗೆ ಸುಪ್ರೀಂ ಅನುಮತಿ – ಕಂಬಳಕ್ಕೂ ಗ್ರೀನ್ ಸಿಗ್ನಲ್

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿ ಪ್ರಕಾಶ್‌ಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡದ ಮೊತ್ತ ಕಟ್ಟಲು ವಿಫಲವಾದರೆ ಎರಡು ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ಕೋರ್ಟ್ ತೀರ್ಪು ನೀಡಿದೆ. ಇದನ್ನೂ ಓದಿ: ಕಪ್ಪು ಸುಂದರಿಯ ಮೇಲೆ ಮುತ್ತಪ್ಪ ರೈ ಪುತ್ರನ ಕಣ್ಣು – ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ

  • ಮುಂಬೈ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಅನುಮತಿ

    ಮುಂಬೈ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಅನುಮತಿ

    ವಾಷಿಂಗ್ಟನ್: 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ (Mumbai Attack) ಭಾಗಿಯಾಗಿರುವ ತಹವ್ವುರ್ ರಾಣಾನನ್ನು (Tahawwur Rana) ಭಾರತಕ್ಕೆ (India) ಹಸ್ತಾಂತರಿಸಲು ಅಮೆರಿಕದ (America) ನ್ಯಾಯಾಲಯ ಅನುಮೋದನೆ ನೀಡಿದೆ.

    10 ಪಾಕಿಸ್ತಾನಿ ಭಯೋತ್ಪಾದಕರು (Terrorists) 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, 6 ಅಮೆರಿಕನ್ನರು ಸೇರಿದಂತೆ 160 ಕ್ಕೂ ಹೆಚ್ಚು ಜನರನ್ನು ಕೊಂದಿದ್ದರು. ಈ ದಾಳಿಗೆ ಸಂಬಂಧಿಸಿದಂತೆ ಭಾರತದ ಕೋರಿಕೆಯ ಮೇರೆಗೆ ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಯಿತು. ಆತನ ಹಸ್ತಾಂತರಕ್ಕಾಗಿ ಅಮೆರಿಕ ಸರ್ಕಾರಕ್ಕೆ ಭಾರತ ಮನವಿ ಮಾಡಿದ್ದು, ಇದೀಗ ನ್ಯಾಯಾಲಯ ಇದಕ್ಕೆ ಸಮ್ಮತಿ ನೀಡಿದೆ.

    ಕೋರ್ಟ್ ವಿನಂತಿಯನ್ನು ಬೆಂಬಲಿಸಿ ಮತ್ತು ವಿರೋಧವಾಗಿ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗಿದೆ. ವಿಚಾರಣೆಯಲ್ಲಿ ಪ್ರಸ್ತುತಪಡಿಸಿದ ವಾದಗಳನ್ನು ಪರಿಗಣಿಸಿದೆ ಎಂದು ಕ್ಯಾಲಿಫೋರ್ನಿಯ ಜಿಲ್ಲಾ ನ್ಯಾಯಾಧೀಶ ಜಾಕ್ವೆಲಿನ್ ಚೂಲ್ಜಿಯಾನ್ ಹೇಳಿದ್ದಾರೆ. ಮೇ 16 ರಂದು 48 ಪುಟಗಳ ನ್ಯಾಯಾಲಯದ ಆದೇಶವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಒಂದು ಕರೆಗೆ ಕರಗಿದ ಕನಕಪುರದ ಬಂಡೆ – ತಡರಾತ್ರಿ ನಡೆದಿದ್ದು ಏನು?

    ತಹವ್ವುರ್ ರಾಣಾ ಯಾರು?
    ತಹವ್ವುರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದಾನೆ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭಾಗವಹಿಸಿದ್ದಾನೆ ಎಂದು ಭಾರತ ಆರೋಪಿಸಿದೆ.

    ಮುಂಬೈ ದಾಳಿ:
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಇದನ್ನೂ ಓದಿ: ಡಿಸಿಎಂ ಪಟ್ಟ ಸಿಗದೇ ಇದ್ರೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸ್ತೀವಿ: ಸಿದ್ದು ಮನೆ ಮುಂದೆ ಜಮೀರ್ ಅಭಿಮಾನಿ ಆಗ್ರಹ

    ಛತ್ರಪತಿ ಶಿವಾಜಿ ಟರ್ಮಿನಸ್ (CST) ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.