Tag: court

  • ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

    ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

    ತುಮಕೂರು: ಮೂಢನಂಬಿಕೆಗೆ ಒಳಗಾಗಿ ಬೇರೆಯಾಗಿದ್ದ ಜೋಡಿಯನ್ನು (Couple) ನ್ಯಾಯಾಧೀಶರು ಒಂದು ಮಾಡಿದ ಘಟನೆ ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

    ದಸೂಡಿ ಸಮೀಪದ ಮರೆನಾಡು ಗ್ರಾಮದ ಪಾರ್ವತಮ್ಮ, ಹಂದನಕೆರೆ ಹೋಬಳಿಯ ಮಂಜುನಾಥ್ ದಂಪತಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶಪ್ಪನವರ ಮುಂದೆ ತಮ್ಮ ವಿಚ್ಛೇದನಾ (Divorce) ಅರ್ಜಿಯ ವಿಚಾರಣೆಗೆ ಹಾಜರಾಗಿದ್ದರು. ಮೂಢನಂಬಿಕೆಗೆ ಒಳಗಾಗಿ ಹೆಂಡತಿಯನ್ನು ಬಿಡುವಂತೆ ದೇವರು ಹೇಳಿದ್ದಾರೆ ಎಂದು ಮಂಜುನಾಥ್ ಪತ್ನಿ ಪಾರ್ವತಮ್ಮಗೆ ವಿಚ್ಛೇದನ ನೀಡಲು ಮುಂದಾದ ಬಗ್ಗೆ ನ್ಯಾಯಾಧೀಶರ ಬಳಿ ಹೇಳಿಕೊಂಡಿದ್ದಾರೆ. ಬಳಿಕ ಈ ಬಗ್ಗೆ ದಂಪತಿಗೆ ಚಿಕ್ಕನಾಯಕನಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು ತಿಳುವಳಿಕೆ ಹೇಳಿದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆಂಡತಿ, ಮಕ್ಕಳ ಮೇಲೆ ರಾಕ್ಷಸ ಕೃತ್ಯ – 6ರ ಬಾಲಕ ಬಲಿ

    ಈ ವೇಳೆ ದಂಪತಿ ನ್ಯಾಯಾಧೀಶರು ಹೇಳಿದ ಬುದ್ಧಿ ಮಾತು ಕೇಳಿ ಒಂದಾಗಿದ್ದಾರೆ. ಮನಸ್ತಾಪವನ್ನು ಮರೆತು ನ್ಯಾಯಾಧೀಶರ ಮಾತಿಗೆ ಬೆಲೆಕೊಟ್ಟು ಮತ್ತೆ ಒಂದಾದ ಜೋಡಿಗೆ ನ್ಯಾಯಾಲಯದಲ್ಲಿ ಹಾರ ಬದಲಾಯಿಸಿ ಶುಭ ಹಾರೈಸಲಾಯಿತು. ಇದನ್ನೂ ಓದಿ: ಬೆಂಗಳೂರಿನ ಗೋವಿಂದರಾಜು ಮೃತದೇಹ ಚಾರ್ಮಾಡಿ ಘಾಟಿಯಲ್ಲಿ ಪತ್ತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

    ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

    ತಿರುವನಂತಪುರಂ: ತನ್ನ ಅಪ್ರಾಪ್ತ ಮಗಳ (Minor Daughter) ಮೇಲೆ ಪದೇ ಪದೇ ಅತ್ಯಾಚಾರವೆಸಗಿ (Rape), ಆಕೆಯನ್ನು ಗರ್ಭಿಣಿ (Pregnant) ಮಾಡಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ (Kerala Court) 3 ಜೀವಾವಧಿ ಶಿಕ್ಷೆ ವಿಧಿಸಿದೆ.

    ಮಂಜೇರಿ ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಕೆ ವ್ಯಕ್ತಿಯನ್ನು ದೋಷಿಯೆಂದು ಪ್ರಕಟಿಸಿದ್ದಾರೆ. ಐಪಿಸಿ ಸೆಕ್ಷನ್ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ (POCSO) ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಎಲ್ಲಾ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ 3 ಜೀವಾವಾಧಿ ಶಿಕ್ಷೆಯ ಜೊತೆಗೆ 6.6 ಲಕ್ಷ ರೂ. ದಂಡವನ್ನು ವಿಧಿಸಿದೆ.

    ಪ್ರಕರಣದ ಬಗ್ಗೆ ವಿವರಣೆ ನೀಡಿದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಎ ಸೋಮಸುಂದರನ್, ಅಪರಾಧಿ ಮದರಸಾದಲ್ಲಿ ಶಿಕ್ಷಕನಾಗಿದ್ದು, ಮೊದಲ ಬಾರಿಗೆ 2021ರ ಮಾರ್ಚ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ 15 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಆ ಸಂದರ್ಭ ಕೋವಿಡ್-19 ಇದ್ದಿದ್ದರಿಂದ ಬಾಲಕಿ ಆನ್‌ಲೈನ್ ತರಗತಿಯಲ್ಲಿ ಓದುತ್ತಿದ್ದಳು. ಈ ಸಂದರ್ಭ ಆತ ಮಗಳನ್ನು ತನ್ನ ಮಲಗುವ ಕೋಣೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದ ಎಂದು ವಾದಿಸಿದ್ದರು. ಇದನ್ನೂ ಓದಿ: ಸದಾ ಟಚ್‍ನಲ್ಲಿರುವಂತೆ 15ರ ಬಾಲಕನಿಗೆ 20 ಸಾವಿರ ರೂ. ಮೌಲ್ಯದ ಮೊಬೈಲ್ ಕೊಡಿಸಿದ್ಳು!

    ತಂದೆಯ ಕೃತ್ಯವನ್ನು ಸಂತ್ರಸ್ತೆ ವಿರೋಧಿಸಿದಾಗ ಆಕೆಯ ತಾಯಿಯನ್ನು ಕೊಲ್ಲುವುದಾಗಿ ಆತ ಬೆದರಿಕೆ ಹಾಕಿದ್ದ. ಆತ 2021ರ ಅಕ್ಟೋಬರ್‌ವರೆಗೂ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತನ್ನ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ.

    2021ರಲ್ಲಿ ಆನ್‌ಲೈನ್ ತರಗತಿಗಳು ಮುಕ್ತಾಯವಾಗಿ ಶಾಲೆಗಳು ಪುನರಾರಂಭವಾದಾಗ ಬಾಲಕಿ ಶಾಲೆಗೆ ಹೋಗಲು ಪ್ರಾರಂಭಿಸಿದ್ದಾಳೆ. ಈ ವೇಳೆ ಆಕೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆ ಸಂದರ್ಭ ಏನೂ ಪತ್ತೆಯಾಗಿರಲಿಲ್ಲ. 2022ರ ಜನವರಿಯಲ್ಲಿ ಆಕೆಗೆ ಮತ್ತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

    ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಂತ್ರಸ್ತ ಬಾಲಕಿಯ ತಂದೆಯನ್ನು ಬಂಧಿಸಿದ್ದರು. ಬಳಿಕ ಸಂತ್ರಸ್ತೆಯ ಗರ್ಭಪಾತ ಮಾಡಿಸಲಾಗಿದ್ದು, ಭ್ರೂಣದ ಡಿಎನ್‌ಎ ಸಂಗ್ರಹಿಸಿ ಆಕೆಯ ತಂದೆಯ ಡಿಎನ್‌ಎಯೊಂದಿಗೆ ವಿಶ್ಲೇಷಣೆ ಮಾಡಲಾಗಿತ್ತು. ಇದರಿಂದ ಬಾಲಕಿಯ ತಂದೆಯೇ ಅಪರಾಧಿ ಎಂಬುದು ಸಾಬೀತಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೆಳೆಯನ ವಿರುದ್ಧವೇ ಹೇಳಿಕೆ ದಾಖಲಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್

    ಗೆಳೆಯನ ವಿರುದ್ಧವೇ ಹೇಳಿಕೆ ದಾಖಲಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್

    ವಿಕ್ರಾಂತ್ ರೋಣ ಸಿನಿಮಾದಲ್ಲಿ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಗೆಳೆಯನ ವಿರುದ್ಧವೇ ದೂರು ದಾಖಲಿಸಿದ್ದಾರೆ. ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಖೇಶ್ ಚಂದ್ರಶೇಖರ್ ವಿರುದ್ಧವೇ ದೆಹಲಿ ಪಟಿಯಾಲಾ ಹೌಸ್ ಕೋರ್ಟಿನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೀಚ್ ಫೋಟೋ: ದೇವರಕೊಂಡ ಕ್ಲಿಕ್ಕಿಸಿದ್ದಾ ಎಂದ ನೆಟ್ಟಿಗರು

    ಪಿಂಕಿ ಇರಾನಿ ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆದಿಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅವನು ನನ್ನ ಜೀವನ ನರಕವಾಗಿಸಿದ : ನಟಿ ಜಾಕ್ವೆಲಿನ್ ಫರ್ನಾಂಡಿಸ್

    ಅವನು ನನ್ನ ಜೀವನ ನರಕವಾಗಿಸಿದ : ನಟಿ ಜಾಕ್ವೆಲಿನ್ ಫರ್ನಾಂಡಿಸ್

    ರ್ನಾಟಕ ಮೂಲದ ಸುಖೇಶ್ ಚಂದ್ರಶೇಖರ್ (Sukhesh Chandrasekhar) ಸ್ನೇಹದಿಂದಾಗಿ ನಾನು ನೆಮ್ಮದಿ ಕಳೆದುಕೊಂಡೆ ಎಂದಿದ್ದಾರೆ ಬಾಲಿವುಡ್ ನಟಿ ಹಾಗೂ ಕನ್ನಡದ ವಿಕ್ರಾಂತ್ ರೋಣ ಚಿತ್ರದ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez). ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಖ್ಯಾತ ನಟ ವಿಜಯ್ ಆಂಟನಿ ಅಪಘಾತ: ಸ್ಥಿತಿ ಚಿಂತಾಜನಕ

    ಪಿಂಕಿ ಇರಾನಿ (Pinky Irani) ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಲವು ಜಿಲ್ಲೆಗಳಲ್ಲಿ ಬೃಹತ್ ಕಾರ್ಯಕ್ರಮದಲ್ಲಿ `ಸಿದ್ದು ನಿಜಕನಸುಗಳು’ ಕೃತಿ ಬಿಡುಗಡೆಗೆ ಪ್ಲಾನ್?

    ಹಲವು ಜಿಲ್ಲೆಗಳಲ್ಲಿ ಬೃಹತ್ ಕಾರ್ಯಕ್ರಮದಲ್ಲಿ `ಸಿದ್ದು ನಿಜಕನಸುಗಳು’ ಕೃತಿ ಬಿಡುಗಡೆಗೆ ಪ್ಲಾನ್?

    ಬೆಂಗಳೂರು: ಸದ್ಯ ರಾಜಾದ್ಯಂತ ಸಂಚಲನ ಸೃಷ್ಟಿಸಿರುವ `ಸಿದ್ದು ನಿಜಕನಸುಗಳು’ (Siddu NijaKanasugalu) ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಈಗ ಆಯೋಜಿಸಿದ್ದಕ್ಕಿಂತಲೂ ದೊಡ್ಡಮಟ್ಟದಲ್ಲಿ ನಡೆಸಲು ಆಡಳಿತ ಪಕ್ಷ ಬಿಜೆಪಿ (BJP) ಪ್ಲಾನ್ ಮಾಡಿರುವುದಾಗಿ ಮೂಲಗಳು ತಿಳಿಸಿವೆ.

    `ಸಿದ್ದು ನಿಜ ಕನಸುಗಳು’ ಪುಸ್ತಕದಿಂದ ವಿಚಲಿತರಾಗಿದ್ದ ಸಿದ್ದರಾಮಯ್ಯ (Siddaramaiah) ಅಂಡ್ ಟೀಂ ಪುಸ್ತಕ ಬಿಡುಗಡೆ ಅಂತಾ ಘೋಷಣೆ ಆಗ್ತಿದ್ದಂತೆ ಕೋರ್ಟ್‌ನಿಂದ (Court) ತಡೆಯಾಜ್ಞೆ ತಂದಿದೆ. ಇದೇ ಸಿದ್ದರಾಮಯ್ಯ ಅವರ ವೀಕ್ನೆಸ್ ಅನ್ನ ಬಳಸಿಕೊಳ್ಳೋಕೆ ಬಿಜೆಪಿ ಪ್ಲಾನ್ ಮಾಡಿದೆ. ಸಿದ್ದರಾಮಯ್ಯರನ್ನೇ ನೇರ ಟಾರ್ಗೆಟ್‌ಗೆ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ.

    ಹೌದು. ಸಿದ್ದರಾಮಯ್ಯ ಅವರನ್ನ ಮಾತ್ರವೇ ಟಾರ್ಗೆಟ್ ಮಾಡ್ತಿರೋ ಬಿಜೆಪಿ, ಮತ್ತೆ ಪುಸ್ತಕ ರಿಲೀಸ್‌ಗೆ ಸಿದ್ಧತೆ ನಡೆಸಿದೆ. ಕೋರ್ಟ್ನ ತಡೆಯಾಜ್ಞೆ ತೆರವುಗೊಳಿಸೋಕೆ ವಿಶೇಷ ವಕೀಲರ ತಂಡವನ್ನ ಸಿದ್ಧತೆ ಮಾಡಿಕೊಂಡಿದೆ. ತಡೆಯಾಜ್ಞೆ ತೆರವಾಗುತಿದ್ದಂತೆ ಈಗ ಆಯೋಜಿಸಿದ್ದಕ್ಕಿಂತಲೂ ದೊಡ್ಡ ಮಟ್ಟದ ಕಾರ್ಯಕ್ರಮದಲ್ಲಿ ಸಿದ್ದು ನಿಜಕನಸುಗಳು ಕೃತಿ ಬಿಡುಗಡೆಗೆ ಪ್ಲಾನ್ ಮಾಡಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ

    ಹಾಗಾದ್ರೆ ಬಿಜೆಪಿ ಪ್ಲಾನ್ ಏನಿದೆ?: ಅದಕ್ಕಾಗಿ ವಿಶೇಷ ಲಾಯರ್‌ಗಳ ತಂಡ ಸಿದ್ಧತೆ ಮಾಡಕೊಂಡಿರೋ ಕಮಲ ಪಾಳಯ ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಕೋರ್ಟ್ ಕೊಟ್ಟಿರೋ ತಡೆಯಾಜ್ಞೆ ತೆರವು ಮಾಡಲು ಕ್ರಮವಹಿಸೋದು. ತಡೆಯಾಜ್ಞೆ ತೆರವಾದ ಕೂಡಲೇ ಮತ್ತೆ ಸಿದ್ದರಾಮಯ್ಯ ವಿರುದ್ಧ ಅಟ್ಯಾಕ್ ಮಾಡೋದು. ಈಗ ಮಾಡಿದ ಕಾರ್ಯಕ್ರಮಕ್ಕಿಂತ ದೊಡ್ಡ ಕಾರ್ಯಕ್ರಮ ಮಾಡಿ ಪುಸ್ತಕ ರಿಲೀಸ್ ಮಾಡುವುದು. ಇದನ್ನೂ ಓದಿ: ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್- ಸರಣಿ ಪೋಸ್ಟರ್ ಮೂಲಕ ತಿರುಗೇಟು

    ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಸಿದ್ದು ನಿಜ ಕನಸುಗಳು ಪುಸ್ತಕ ರಿಲೀಸ್ ಮಾಡೋದು. ಕೊಲೆಯಾದ ಹಿಂದೂ ಕಾರ್ಯಕರ್ತರ ಕುಟುಂಬ ಸದಸ್ಯರು, ಮತಾಂತರಕ್ಕೆ ಬಲಿಯಾದ ಕೊಡಗು ಭಾಗದ ಜನರನ್ನ ಕರೆಸಿ ಕಾರ್ಯಕ್ರಮದಲ್ಲಿ ಮಾತನಾಡಿಸುವುದು. ಕೇವಲ ಬೆಂಗಳೂರು ಮಾತ್ರವಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪುಸ್ತಕ ಬಿಡುಗಡೆ ಮಾಡಲು  ಪ್ಲಾನ್‌. ಪಕ್ಷದ ಪ್ರಮುಖ ಮನೇತೃತ್ವದಲ್ಲೇ ಪ್ರಮುಖ ಜಿಲ್ಲೆಗಳಲ್ಲಿ ಪುಸ್ತಕ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

    ಕೋರ್ಟ್ ತಡೆಯಾಜ್ಞೆ: ಸೋಮವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ `ಸಿದ್ದು ನಿಜಕನಸುಗಳು ಸಂಪುಟ-1′ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ (CN Ashwath Narayan) ಅವರು ಪುಸ್ತಕ ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್ ಕೋರ್ಟ್ (City Civil Court) ಪುಸ್ತಕ ಬಿಡುಗಡೆಗೆ ತಡೆ ನೀಡಿದೆ. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ – ಇಬ್ಬರಿಗೆ 25 ಸಾವಿರ ದಂಡ

    ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ – ಇಬ್ಬರಿಗೆ 25 ಸಾವಿರ ದಂಡ

    ಮಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ (Sunil Kumar) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.

    ಕೊರೊನಾ (Corona) ಲಾಕ್‍ಡೌನ್ (Lock Down) ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.

    ಈ ಹಿನ್ನೆಲೆಯಲ್ಲಿ ನ್ಯಾಯಾಲಯದ (Court) ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೋಷಿಗಳಿಗೆ ಕ್ಷಮೆ ಯಾಚಿಸುವ ಜತೆಗೆ ತಲಾ 25 ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ. ಇದನ್ನೂ ಓದಿ: ಪುರಭವನದಲ್ಲಿ ಭಾರೀ ಹೈಡ್ರಾಮಾ – ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್, ನನ್ನ ವಿರುದ್ಧ ಜಾಲತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾಸಕ ಎ.ಮಂಜುನಾಥ್ ಬಿಜೆಪಿ ಸೇರಲು ಸಿ.ಪಿ.ಯೊಗೇಶ್ವರ್ ಜೊತೆ ಸುತ್ತುತ್ತಿದ್ರು: ಬಾಲಕೃಷ್ಣ ಬಾಂಬ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪುರಭವನದಲ್ಲಿ ಭಾರೀ ಹೈಡ್ರಾಮಾ – ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

    ಪುರಭವನದಲ್ಲಿ ಭಾರೀ ಹೈಡ್ರಾಮಾ – ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

    ಬೆಂಗಳೂರು: ಸಿಟಿ ಸಿವಿಲ್‌ ಕೋರ್ಟ್‌ (City Civil Court) ತಡೆ ನೀಡಿದ ಹಿನ್ನೆಲೆಯಲ್ಲಿ ʼಸಿದ್ದು ನಿಜಕನಸುಗಳುʼ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ರದ್ದಾಗಿದೆ

    ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ʼಸಿದ್ದು ನಿಜಕನಸುಗಳು ಸಂಪುಟ 1ʼ (Siddu Nija Kanasugalu) ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು.

    ಉನ್ನತ ಶಿಕ್ಷಣ ಸಚಿವ ಡಾ. ಸಿಎನ್‌ ಅಶ್ವತ್ಥನಾರಾಯಣ ಪುಸ್ತಕವನ್ನು ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಕೋಲಾರದಿಂದಲೇ ಸ್ಪರ್ಧೆ – ಸಿದ್ದರಾಮಯ್ಯ ಅಧಿಕೃತ ಘೋಷಣೆ

    ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರು ಕೋರ್ಟ್‌ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು.

    ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ.  ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್‌  ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.

    ತಡೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕಾ? ಬೇಡವೇ ಎಂಬುದರ ಬಗ್ಗೆ ಆಯೋಜಕರ ನಡುವೆ ಗೊಂದಲ ಇತ್ತು. ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದರೆ ಕೆಲವರು ಪುರಭವನದ ಒಳಗಡೆ ನುಗ್ಗಿದ್ದರು. ಹೀಗಾಗಿ ಒಳಗಡೆ ಭಾರೀ ಹೈಡ್ರಾಮಾವೇ ನಡೆದಿತ್ತು.

    ಕೊನೆಗೆ ಆಯೋಜಕರು ಇಂದಿನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ರದ್ದು ಮಾಡುತ್ತೇವೆ ಎಂದು ವೇದಿಕೆ ಮೇಲೆ ಪ್ರಕಟಿಸಿದರು. ಪರಿಷತ್‌ ಸದಸ್ಯ, ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಪ್ರತಿಕ್ರಿಯಿಸಿ, ಕೋರ್ಟ್‌ ಆದೇಶವನ್ನು ಗೌರವಿಸಿ ಇಂದಿನ ಕಾರ್ಯಕ್ರಮವನ್ನು ರದ್ದು ಮಾಡಿದ್ದೇವೆ. ಮುಂದೆ ಪುಸ್ತಕ ಬಿಡುಗಡೆಯ ದಿನಾಂಕ ತಿಳಿಸಲಾಗುವುದು ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ

    ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ

    ಬೆಂಗಳೂರು: ʼಸಿದ್ದು ನಿಜ ಕನಸುಗಳುʼ ಪುಸ್ತಕ ಬಿಡುಗಡೆ ಸಿಟಿ ಸಿವಿಲ್‌ ಕೋರ್ಟ್‌ (City Civil Court) ತಡೆ ನೀಡಿದೆ.

    ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ʼಸಿದ್ದು ನಿಜಕನಸುಗಳು ಸಂಪುಟ 1ʼ (Siddu Nija Kanasugalu) ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು.

     

    ಉನ್ನತ ಶಿಕ್ಷಣ ಸಚಿವ ಡಾ. ಸಿಎನ್‌ ಅಶ್ವತ್ಥನಾರಾಯಣ್ ಪುಸ್ತಕವನ್ನು ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್- ಸರಣಿ ಪೋಸ್ಟರ್ ಮೂಲಕ ತಿರುಗೇಟು

    ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರು ಕೋರ್ಟ್‌ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು.

    ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ.  ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್‌  ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅತ್ಯಾಚಾರ ಎಸಗಿ ಮದ್ವೆ ಆಗಿದ್ದ – ಜಡ್ಜ್ ಮುಂದೆ ಸ್ಯಾಂಟ್ರೋ ರವಿ ಪತ್ನಿ ಹೇಳಿಕೆ

    ಅತ್ಯಾಚಾರ ಎಸಗಿ ಮದ್ವೆ ಆಗಿದ್ದ – ಜಡ್ಜ್ ಮುಂದೆ ಸ್ಯಾಂಟ್ರೋ ರವಿ ಪತ್ನಿ ಹೇಳಿಕೆ

    ಮೈಸೂರು: ತಲೆಮರೆಸಿಕೊಂಡು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿರೋ ಮೈಸೂರಿನ (Mysuru) ಸ್ಯಾಂಟ್ರೋ ರವಿ (Santro Ravi) ಕೇಸ್ ಬಗೆದಷ್ಟೂ ರೋಚಕವಾಗಿದೆ. ಸ್ಯಾಂಟ್ರೋ ರವಿಯ ಕರಾಳ ಮುಖ ಅನಾವರಣ ಆಗ್ತಿದೆ.

    ಸಂತ್ರಸ್ತೆಯೂ ಆಗಿರೋ ಸ್ಯಾಂಟ್ರೋ ರವಿ ಪತ್ನಿ ಮೈಸೂರಿನ ಜಿಲ್ಲಾ ನ್ಯಾಯಾಧೀಶರ ಮುಂದೆ ಐಪಿಸಿ (IPC) ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಿಸಿದ್ದಾರೆ. ಇದನ್ನೂ ಓದಿ: ಪ್ರತಿ ತಿಂಗಳು 6 ಸಾವಿರ ಪಿಂಚಣಿ ಕೊಡಿ – ಸರ್ಕಾರಕ್ಕೆ ಬೋಳುತಲೆ ಪುರುಷರ ಸಂಘ ಮನವಿ

    `ಅತ್ಯಾಚಾರ ಎಸೆಗಿ ಮದುವೆಯಾದ (Marriage) ರವಿ, ನಿರಂತರವಾಗಿ ಲೈಂಗಿಕ ದೌರ್ಜನ್ಯ ಮಾಡಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ. ನನ್ನ ತಂಗಿಯ ಮೇಲೂ ದೈಹಿಕ ಹಲ್ಲೆ ಮಾಡಿದ್ದಾನೆ’ ಅಂತಾ ಪತ್ನಿ ಹೇಳಿಕೆ ದಾಖಲಿಸಿದ್ದಾರೆ. ಇದನ್ನೂ ಓದಿ: ಬಸ್‌ ಟೈರ್‌ ಪಂಕ್ಚರ್‌ ಆಗಿ ಮತ್ತೊಂದು ಬಸ್‌ಗೆ ಡಿಕ್ಕಿ – 40 ಸಾವು, 78 ಮಂದಿಗೆ ಗಾಯ

    ಆದ್ದರಿಂದ ಸ್ಯಾಂಟ್ರೋ ರವಿಗೆ ನಿರೀಕ್ಷಣಾ ಜಾಮೀನು ಸಿಗೋದು ಕಷ್ಟಸಾಧ್ಯವಾಗಿದೆ. ಐಷಾರಾಮಿ ಜೀವನ ನಡೆಸುತ್ತಿದ್ದ ಸ್ಯಾಂಟ್ರೋ ರವಿ, ಮೈಸೂರು, ಬೆಂಗಳೂರಿನಲ್ಲಿ ದೊಡ್ಡ ದೊಡ್ಡ ಮನೆಗಳನ್ನು ಬಾಡಿಗೆ ಪಡೆದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸಿದ್ದಾನೆ. ದಂಧೆಯಲ್ಲಿದ್ದ ಯುವತಿಗೆ ರ‍್ಯಾಡೋ ವಾಚ್ ಗಿಫ್ಟ್ ಸಹ ಕೊಟ್ಟಿರೋದಕ್ಕೆ ಸಾಕ್ಷಿಗಳು ಲಭ್ಯವಾಗಿವೆ.

    ಇನ್ನೂ ವರ್ಗಾವಣೆ ದಂಧೆಯಲ್ಲೂ ಕಿಂಗ್‌ಪಿನ್ ಆಗಿದ್ದು, ಸಚಿವರ ಲೇಟರೆಡ್‌ಗಳು ಪತ್ತೆಯಾಗಿವೆ. ವರ್ಗಾವಣೆ ಜೊತೆಗೆ ಪ್ರಮೋಷನ್ ಮಾಸ್ಟರ್ ಆಗಿದ್ದು, ಇದರಿಂದ ಬಂದ ಹಣವನ್ನು ಸ್ಟೇಟಸ್‌ಗೆ ಅಪ್ಲೋಡ್ ಮಾಡಿಕೊಂಡಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ.

    ಇದಿಷ್ಟೇ ಅಲ್ಲದೆ, ಸ್ಯಾಂಟ್ರೋ ರವಿ ಬಳಿ ಕಪ್ಪು ಬಣ್ಣದ ಪಿಸ್ತೂಲ್ ಇರೋದು ಬೆಳಕಿಗೆ ಬಂದಿದೆ. ಸಂಚಲನ ಅಂತ ವಾರಪತ್ರಿಕೆ ನಡೆಸ್ತಿದ್ದು, ಪತ್ರಕರ್ತನ ಸೋಗು ಹಾಕಿದ್ದಾನೆ. ಈ ಮಧ್ಯೆ ಸ್ಯಾಂಟ್ರೋ ರವಿ ಆಗುವ ಮುನ್ನ ಮಂಜುನಾಥನಾಗಿದ್ದ ಈತ ಮಂಡ್ಯದಲ್ಲಿ ಕಾರ್‌ಗಳನ್ನು ಕದ್ದು, ಕಾಲೇಜು ಹುಡುಗಿಯರ ಮುಂದೆ ಶೋಕಿ ತೋರಿಸ್ತಿದ್ದ. ಒಮ್ಮೆ ಮೈಸೂರು ಪೊಲೀಸರು ಮನೆಗೆ ನುಗ್ಗಿ ಒದ್ದು ರ‍್ಕೊಂಡು ಹೋಗಿದ್ರು. ಅಲ್ಲದೆ, ಈತ 4 ಮದುವೆ ಆಗಿದ್ದ ಅನ್ನೋ ಸತ್ಯ ಪೊಲೀಸ್ ತನಿಖೆ ವೇಳೆ ಬಯಲಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಧಾನಸೌಧದಲ್ಲಿ ಪತ್ತೆಯಾದ 10 ಲಕ್ಷ ಹಣ ನನ್ನದೇ, ಕೋರ್ಟ್‌ಗೆ ಪಾವತಿಸಲು ಸಂಗ್ರಹಿಸಿದ್ದೆ: ಜಗದೀಶ್‌

    ವಿಧಾನಸೌಧದಲ್ಲಿ ಪತ್ತೆಯಾದ 10 ಲಕ್ಷ ಹಣ ನನ್ನದೇ, ಕೋರ್ಟ್‌ಗೆ ಪಾವತಿಸಲು ಸಂಗ್ರಹಿಸಿದ್ದೆ: ಜಗದೀಶ್‌

    ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಪತ್ತೆಯಾದ 10 ಲಕ್ಷ  ರೂ. ಹಣ ನನ್ನದೇ. ನ್ಯಾಯಾಲಯಕ್ಕೆ ಪಾವತಿಸಲು ಆ ಹಣವನ್ನು ಸಂಗ್ರಹಿಸಿದ್ದೆ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ಜಗದೀಶ್‌ (PWD Engineer Jagadish) ತಿಳಿಸಿದ್ದಾರೆ.

    10 ಲಕ್ಷ ರೂ. ಹಣ ಸಿಕ್ಕಿದ ಪ್ರಕರಣದಲ್ಲಿ ಆರೋಪಿ ಜಗದೀಶ್‌ಗೆ ಜಾಮೀನು (Bail) ಸಿಕ್ಕಿದೆ. ಮೆಯೋಹಾಲ್ ಕೋರ್ಟ್ 1 ರ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದು, ಜಾಮೀನು ಪಡೆದ ಬಳಿಕ ಎಂಜಿನಿಯರ್ ಜಗದೀಶ್ ಹಣದ ಮೂಲದ ಬಗ್ಗೆ ಹೇಳಿಕೆ ನೀಡಿದ್ದಾರೆ.

    ಜಗದೀಶ್‌ ಹೇಳಿದ್ದು ಏನು?
    ಸ್ವಂತ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದೆ. ಚೆಕ್ ಬೌನ್ಸ್ (Cheque Bounce) ಆಗಿದ್ದ ಹಿನ್ನೆಲೆಯಲ್ಲಿ ಕೋರ್ಟ್ (Court) ಮುಖಾಂತರ ದಂಡವಾಗಿ ಹಣವನ್ನು ಪಾವತಿ ಮಾಡಬೇಕಿತ್ತು. ಸಂಬಂಧಿಕರಿಂದ ಹಣವನ್ನು ಸಂಗ್ರಹಿಸಿದ್ದೆ. ಈ ಬಗ್ಗೆ ಎಲ್ಲಾ ದಾಖಲಾತಿಗಳನ್ನು ಪೊಲೀಸರಿಗೆ ಮತ್ತು ನ್ಯಾಯಾಲಯಕ್ಕೆ ಕೊಟ್ಟಿದ್ದೇನೆ. ನಾನು ಮಂಡ್ಯಕ್ಕೆ ಹೋಗಬೇಕಿತ್ತು. ಆಗ ನನಗೆ ವಿಧಾನಸೌಧಕ್ಕೆ ಹೋಗಬೇಕಾಗಿ ಬಂತು.‌ ಇದನ್ನೂ ಓದಿ: ದಶಪಥದಲ್ಲಿ ಬೈಕ್‌ಗಳ ಓಡಾಟಕ್ಕೆ ಅನುಮತಿ ಇಲ್ಲ- ಪ್ರತಾಪ್ ಸಿಂಹ

    ಸಂಜೆ 6 ಗಂಟೆಯಾಗಿ ಕತ್ತಲಾಗಿದ್ದರಿಂದ ನಾನು ವಾಪಸ್ ಬಂದೆ.‌ ಆಗ ಪೊಲೀಸರು ಉದ್ಧೇಶಪೂರ್ವಕವಾಗಿ ನನ್ನನ್ನು ತಪಾಸಣೆ ಮಾಡಿದಾಗ ಹಣ ಸಿಕ್ಕಿದೆ. ಕಾರು ತೆಗೆದುಕೊಂಡು ಹೋಗಿದ್ದರೆ ಅದರಲ್ಲಿಯೇ ಇಡುತ್ತಿದ್ದೆ. ಆದರೆ ಹಣದ ರಕ್ಷಣೆಗಾಗಿ ಕೈಯಲ್ಲೇ ಇಟ್ಟುಕೊಂಡಿದ್ದೆ. ಕೆಲವರು ಇದರ ಬಗ್ಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ.‌ ಇದು ನನ್ನು ಸ್ವಂತ ಹಣ ಆಗಿರುವುದರಿಂದ ಇದರಲ್ಲಿ ಅರೆಸ್ಟ್ ಏನು ಬರುವುದಿಲ್ಲ. ತಕ್ಷಣವೇ ನನ್ನನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

    ಮಾಧ್ಯಮದಲ್ಲಿಯೂ ಸಹ ಸಿಕ್ಕಾಪಟ್ಟೆ ಪ್ರಚಾರ ಆಗಿದೆ. ಆ ಹಣವನ್ನು ನಾನು ವಾಪಸ್ ಮಂಡ್ಯಕ್ಕೆ ತೆಗೆದುಕೊಂಡು ಹೋಗಬೇಕಿತ್ತು. ರಾಜಕೀಯ ಅದು ಇದು ಆರೋಪ ಕೇಳಿ ಬಂತು.‌ ಹೀಗಾಗಿ ನನಗೂ ಸಹ ತುಂಬಾ ನೋವಾಗಿದೆ. ಎಲ್ಲಾ ದಾಖಲಾತಿಗಳನ್ನು ನಾನು ಮರು ದಿನವೇ ಕೊಟ್ಟಿದ್ದೇನೆ. ಮೂರನೇ ಮಹಡಿಯಲ್ಲಿ ನಮ್ಮ ಆಫೀಸ್ ಬಿಲ್ಡಿಂಗ್ ಇದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k