Tag: court

  • ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ

    ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಎ2 ಆರೋಪಿ ನಟ ದರ್ಶನ್‌ರನ್ನು (Darshan) ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸಂಬಂಧ ಸಿಸಿಎಚ್ 64ರಲ್ಲಿ ವಿಚಾರಣೆ ನಡೆಸಿ, ಆ.23ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ 23ಕ್ಕೆ ವಿಚಾರಣೆಯನ್ನು ಮುಂದೂಡಿದರು. ಇನ್ನು ಸರ್ಕಾರಿ ಪರ ವಕೀಲರು ಹಾಜರಾಗಿ, ಕೊಲೆ ಕೇಸ್‌ನಲ್ಲಿ ಜಾಮೀನು ಸಿಗುವ ಹಿಂದೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಯಾವ್ಯಾವ ಜೈಲಿನಲ್ಲಿದ್ರು ಅಲ್ಲಿಗೆ ಶಿಫ್ಟ್ ಮಾಡಬೇಕು ಅಂತಾ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: `ವೇಷಗಳು’ ಚಿತ್ರದ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಿದ ಶರತ್ ಲೋಹಿತಾಶ್ವ

    ಆದರೆ ಜಾಮೀನು ರದ್ದಾದ ದಿನವೇ ದರ್ಶನ್ ಪರ ವಕೀಲರು ಒಂದು ವೇಳೆ ಬಳ್ಳಾರಿಗೆ ಶಿಫ್ಟ್ ಮಾಡುವುದಾದರೆ ನಮ್ಮ ವಾದವನ್ನು ಅಲಿಸಬೇಕು ಅಂತಾ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರಿಗೆ ಅವಕಾಶ ನೀಡಲಾಗಿದೆ. ಮುಂದಿನ ವಿಚಾರಣೆ ವೇಳೆ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾ (Parappana Agrahara Jail) ಅಥವಾ ಬಳ್ಳಾರಿ ಜೈಲಾ (Ballary Jail) ಅನ್ನೋದು ತೀರ್ಮಾನವಾಗುವ ಸಾಧ್ಯತೆ ಇದೆ.

  • ಸ್ಯಾಂಡಲ್‌ವುಡ್‌ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

    ಸ್ಯಾಂಡಲ್‌ವುಡ್‌ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

    ಇತ್ತೀಚೆಗೆ ಸೆಲೆಬ್ರಿಟಿಗಳು ವಿಚ್ಛೇದನ (Divorce) ತೆಗೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರ ಡಿವೋರ್ಸ್ ಸುದ್ದಿಗಳು ಬೆಳಕಿಗೆ ಬರುತ್ತಲೇ ಇವೆ, ಈಗ ಆ ಸಾಲಿಗೆ ಸ್ಯಾಂಡಲ್‌ವುಡ್‌ನ ನಟ ಅಜಯ್‌ ರಾವ್‌ (Ajay Rao) ಕೂಡ ಸೇರಿಕೊಂಡಿದ್ದಾರೆ. ಹೌದು. ನಟ ಅಜಯ್‌ ರಾವ್‌ ಪತ್ನಿ ಸಪ್ನಾ (Sapna) ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ.

    2014ರಲ್ಲಿ ಡಿಸೆಂಬರ್‌ 18ರಲ್ಲಿ ಪ್ರೀತಿಸಿ ಮದ್ವೆಯಾಗಿದ್ದ (Love Marriage) ಈ ಜೋಡಿ ಇತ್ತೀಚಿಗೆ ಹೊಸ ಮನೆಯ ಗೃಹ ಪ್ರವೇಶ ಮಾಡಿತ್ತು. ಹೊಸಪೇಟೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇತ್ತೀಚೆಗಷ್ಟೇ ಹೊಸ ಮನೆಗೆ ಗೃಹ ಪ್ರವೇಶ ಮಾಡಿತ್ತು ಈ ಜೋಡಿ. ಇದನ್ನೂ ಓದಿ: `ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್

    ಇದೀಗ ನಟನ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಪತ್ನಿ ಸ್ವಪ್ನ ರಾವ್‌ ವಿಚ್ಛೇದನ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಜಯ್‌ ರಾವ್‌ ಸಪ್ನಾ ದಂಪತಿಗೆ ಓರ್ವ ಪುತ್ರಿ ಕೂಡ ಇದ್ದಾರೆ. ಇದನ್ನೂ ಓದಿ: ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ

    11 ವರ್ಷಗಳ ಬಳಿಕ ದೂರಾಗಲು ನಿರ್ಧರಿಸಿದ್ದೇಕೆ? 
    2014ರಲ್ಲಿ ಮದ್ವೆಯಾಗಿದ್ದ ಈ ಜೋಡಿ 11 ವರ್ಷಗಳ ಬಳಿಕ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ಬಯಸಿದೆ. ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತ್ನಿ ದೂರು ದಾಖಲಿಸಿದ್ದಾರೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌

  • ದಾವಣಗೆರೆ | ಅಪ್ರಾಪ್ತನಿಂದ ಬೈಕ್ ರೈಡ್ – ಮಾಲೀಕನಿಗೆ 25,000 ದಂಡ

    ದಾವಣಗೆರೆ | ಅಪ್ರಾಪ್ತನಿಂದ ಬೈಕ್ ರೈಡ್ – ಮಾಲೀಕನಿಗೆ 25,000 ದಂಡ

    ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು (Davangere Traffic Police) ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.

    ನಗರದ (Davanagere) ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಬೈಕ್ ಒಂದನ್ನು ತಡೆದು ನಿಲ್ಲಿಸಿದಾಗ, ಚಾಲನೆ ಮಾಡುತ್ತಿರುವುದು ಅಪ್ರಾಪ್ತ ಎಂದು ತಿಳಿದು ಬಂದಿತ್ತು. ಈ ಸಂಬಂಧ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಇದನ್ನೂ ಓದಿ: ಭದ್ರಾ ಡ್ಯಾಂನಿಂದ ಕಾಲುವೆಗೆ ನೀರು ಹರಿಯುತ್ತಿದ್ದಂತೆ ಕುಸಿದ ಸೇತುವೆ – ರೈತರ ಪರದಾಟ

    ಪ್ರಕರಣ ಸಂಬಂಧ ನ್ಯಾಯಾಲಯವು (Court) ಅಪ್ರಾಪ್ತ ಬಾಲಕನಿಗೆ ಚಾಲನೆ ಮಾಡಲು ನೀಡಿದ್ದಕ್ಕೆ ಬೈಕ್ ಮಾಲೀಕನಿಗೆ 25 ಸಾವಿರ ದಂಡ ವಿಧಿಸಿದೆ. ಈ ಮೂಲಕ ಅಪ್ರಾಪ್ತರಿಗೆ ಬೈಕ್ ನೀಡುವವರಿಗೆ ಪೊಲೀಸರು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವಕನ ಜೊತೆ ವಿವಾಹಿತೆ ಪರಾರಿ – ಹಿಂದೂ ಮುಖಂಡರಿಂದ ಪ್ರತಿಭಟನೆ

  • ಕಂತೆ ಕಂತೆ ಹಣ ಕೇಸ್ – ನ್ಯಾ.ಯಶವಂತ್ ವರ್ಮಾ ಅರ್ಜಿ ವಜಾ

    ಕಂತೆ ಕಂತೆ ಹಣ ಕೇಸ್ – ನ್ಯಾ.ಯಶವಂತ್ ವರ್ಮಾ ಅರ್ಜಿ ವಜಾ

    – ರಾಷ್ಟ್ರಪತಿ, ಪ್ರಧಾನಿಗೆ ಸಿಜೆಐ ಪತ್ರ ಬರೆದಿದ್ದು ಅಸಾಂವಿಧಾನಿಕವಲ್ಲ; ಸುಪ್ರೀಂ

    ನವದೆಹಲಿ: ತಮ್ಮ ವಿರುದ್ಧದ ಆತಂರಿಕ ತನಿಖೆ ವರದಿಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ಯಶವಂತ್ ವರ್ಮಾ (Yashwant Varma) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾ ಮಾಡಿದೆ.

    ನ್ಯಾ.ದೀಪಂಕರ್ ದತ್ತ ಮತ್ತು ಎ.ಜಿ.ಮಸಿಹ್ ಅವರ ಪೀಠವು ಆಂತರಿಕ ಸಮಿತಿಯ ರಚನೆ ಮತ್ತು ವಿಚಾರಣಾ ಕಾರ್ಯವಿಧಾನವು ಕಾನೂನುಬಾಹಿರವಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಫೈನಾನ್ಸ್ ಸಿಬ್ಬಂದಿ ಕಿರುಕುಳ – ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

    ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಹುದ್ದೆಯಿಂದ ತೆಗೆದುಹಾಕುವಂತೆ ಶಿಫಾರಸು ಮಾಡಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಸಮಿತಿಯ ಶಿಫಾರಸನ್ನು ಪ್ರಶ್ನಿಸಿ ವರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ

    ಈ ಬಗ್ಗೆ ಇಂದು ತೀರ್ಪು ನೀಡಿದ ಕೋರ್ಟ್, ಈ ಪ್ರಕರಣದಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕಳುಹಿಸಿದ ಪತ್ರವು ಸಂವಿಧಾನಬಾಹಿರವಲ್ಲ ಎಂದು ಒಪ್ಪಿಕೊಂಡಿದೆ. ನ್ಯಾಯಾಲಯವು ಆಂತರಿಕ ತನಿಖಾ ಪ್ರಕ್ರಿಯೆಯನ್ನು ನಿಯಮಗಳ ಪ್ರಕಾರವೇ ಮಾಡಲಾಗಿದೆ ಎಂದು ಹೇಳಿದೆ.

    ಮುಖ್ಯ ನ್ಯಾಯಾಧೀಶರಿಗೆ ಕೇವಲ ಹೆಸರಿಗೆ ಮಾತ್ರ ಹುದ್ದೆಯಲ್ಲ. ಅವರು ದೇಶ ಮತ್ತು ನ್ಯಾಯಾಂಗದ ಬಗ್ಗೆ ಜವಾಬ್ದಾರಿಗಳನ್ನು ಹೊಂದಿದ್ದಾರೆ. ಅವರು ಕೇವಲ ಅಂಚೆ ಕಚೇರಿಯಂತೆ ಕೆಲಸ ಮಾಡಲು ಸಾಧ್ಯವಿಲ್ಲ. ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆ ನ್ಯಾಯಾಂಗದ ಘನತೆಗೆ ಅನುಗುಣವಾಗಿಲ್ಲ. ಅವರ ವಿರುದ್ಧ ತೆಗೆದುಕೊಂಡ ತನಿಖೆ ಮತ್ತು ಕ್ರಮ ಸರಿಯಾಗಿದೆ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ: ಟ್ರಂಪ್‌ಗೆ ಮೋದಿ ಗುದ್ದು

    ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾ. ವರ್ಮಾ ಅವರು ಆಂತರಿಕ ಸಮಿತಿಯ ರಚನೆಯು ಅಸಾಂವಿಧಾನಿಕ ಎಂದು ವಾದಿಸಿದ್ದರು. ಆರಂಭದಲ್ಲಿಯೇ ಅದನ್ನು ಏಕೆ ಆಕ್ಷೇಪಿಸಲಿಲ್ಲ ಎಂದು ನ್ಯಾಯಪೀಠ ಅವರಿಗೆ ಪ್ರಶ್ನಿಸಿತ್ತು. ಯಶವಂತ್ ವರ್ಮಾ ವಿರುದ್ಧದ ದೋಷಾರೋಪಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಸತ್ತಿಗೆ ಈ ತೀರ್ಪು ಹಾದಿಯಾಗಿದೆ.

    ನ್ಯಾ. ವರ್ಮಾ ಅವರ ದೆಹಲಿಯ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದ ವೇಳೆ ಭಾರೀ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಘಟನೆ ನಂತರ ಅವರನ್ನು ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲಾಯಿತು. ಭ್ರಷ್ಟಾಚಾರದ ಆರೋಪಗಳ ಹಿನ್ನಲೆಯಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದರು.

  • ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

    ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

    ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಹತ್ಯೆ ಆರೋಪಿ ಫಯಾಜ್ (Accused Fayaz) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ (Hubballi) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.

    ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ (Dharwad) ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇದನ್ನೂ ಓದಿ: ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

    ಆರೋಪಿ ಪರವಾಗಿ ಬೆಳಗಾವಿಯ (Belagavi) ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಗೆ ಸಿಐಡಿ ಪರ ವಕೀಲರಾದ ಎಸ್‌ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬದ ಪರ ವಕೀಲ ರಾಘವೇಂದ್ರ ಮುತ್ತಗಿಕರ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಗ್ರಾ.ಪಂ ಸದಸ್ಯನ ಕಿಡ್ನ್ಯಾಪ್‌ಗೆ ಯತ್ನಿಸಿ ವಿಫಲ – ಚಾಕು ಇರಿದು ದುಷ್ಕರ್ಮಿಗಳು ಎಸ್ಕೇಪ್

    ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್‌ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್‌ ಸೂಚನೆ

    ಏನಿದು ಪ್ರಕರಣ?
    ಏ.18ರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬದಿ ಅವಿತು ಕುಳಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿತ್ತು. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳಾಗಿದ್ದವು.

  • ಅಶ್ಲೀಲ ವಿಡಿಯೋದಲ್ಲಿ ಇದ್ದದ್ದು ಪ್ರಜ್ವಲ್‌ ಅಂತ ಪತ್ತೆಹಚ್ಚಿದ್ದೇ ಹೊಸ ತಂತ್ರಜ್ಞಾನ – ದೇಶದಲ್ಲೇ ಮೊದಲ ಪ್ರಯೋಗ

    ಅಶ್ಲೀಲ ವಿಡಿಯೋದಲ್ಲಿ ಇದ್ದದ್ದು ಪ್ರಜ್ವಲ್‌ ಅಂತ ಪತ್ತೆಹಚ್ಚಿದ್ದೇ ಹೊಸ ತಂತ್ರಜ್ಞಾನ – ದೇಶದಲ್ಲೇ ಮೊದಲ ಪ್ರಯೋಗ

    ಬೆಂಗಳೂರು: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣರದ್ದು (Prajwal Revanna) ಎನ್ನಲಾದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಹಾದಿ ಬೀದಿಯಲ್ಲಿ ಸಿಕ್ಕ ಪೆನ್‌ಡ್ರೈವ್‌ಗಳಲ್ಲಿ (Pendrive) ಪ್ರಜ್ವಲ್‌ರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಭಾರೀ ಸದ್ದು ಮಾಡಿದ್ದು. ಆದ್ರೆ ಯಾವುದೇ ಒಂದು ವಿಡಿಯೋದಲ್ಲೂ ಪ್ರಜ್ವಲ್‌ ರೇವಣ್ಣನ ಮುಖ ಕಾಣಿಸಿರಿಲಿಲ್ಲ. ಆದರೀಗ ಅದೇ ವಿಡಿಯೋ ಮತ್ತು ಅಶ್ಲೀಲ ಫೋಟೋಗಳನ್ನಾಧರಿಸಿ ಕೋರ್ಟ್‌ ಜೀವಾವಧಿ ಶಿಕ್ಷೆಗೆ ವಿಧಿಸಿರೋದು ಕುತೂಹಲ.

    ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ಭಾರೀ ದಂಡವನ್ನೂ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆದ್ರೆ ವಿಡಿಯೋದಲ್ಲಿ ಎಲ್ಲಿಯೂ ಪ್ರಜ್ವಲ್‌ ಅವರ ಮುಖವೇ ಕಾಣಿಸಿರಿಲ್ಲ ಹೀಗಿದ್ರೂ ಪ್ರಕರಣ ಭೇದಿಸಿದ್ದು ಹೇಗೆ ಅನ್ನೋ ಕೌತುಕಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ವಿಡಿಯೋ ಬೆನ್ನತ್ತಿ ಹೊರಟಾಗ ಸಿಕ್ಕ ಮಾಹಿತಿ ತುಂಬಾ ರೋಚಕವಾಗಿದೆ. ಇದನ್ನೂ ಓದಿ: ಪ್ರಜ್ವಲ್ ಹಣ ಮಾಡಲು ರಾಜಕೀಯಕ್ಕೆ ಬಂದಿಲ್ಲ, ಜನಸೇವೆಗೆ ಬಂದಿದ್ದಾರೆ: ಅಪರಾಧಿ ಪರ ವಕೀಲರ ವಾದ ಏನು?

    ಪ್ರಜ್ವಲ್‌ ಪತ್ತೆಗೆ ನೆರವಾದ ತಂತ್ರಜ್ಞಾನ
    ಆರೋಪಿ ಪತ್ತೆ ಸಾಧ್ಯವಾಗಿದ್ದು ‘ಅನಾಟೋಮಿಕಲ್ ಕಾಂಪಾರಿಷನ್ ಆಫ್ ಜನೆಟಲ್ ಫೀಚರ್ಸ್’ (Anatomical Comparison of Genital Features) ಎನ್ನುವ ಹೊಸ ತಂತ್ರಜ್ಞಾನ. ಈ ತಂತ್ರಜ್ಞಾನ ಟರ್ಕಿ ಹಾಗೂ ಜಪಾನ್‌ನಲ್ಲಿದ್ದು ಇದೇ ಮೊದಲ ಬಾರಿಗೆ ಭಾರತದಲ್ಲಿ ಬಳಸಲಾಗಿದೆ. ಜನನೇಂದ್ರಿಯದ ಫಿಸಿಕಲ್ ಅಪೆಯರೆನ್ಸ್ ಮೂಲಕ ಪತ್ತೆ ಹಚ್ಚುವ ತಂತ್ರಜ್ಞಾನ ಇದಾಗಿದೆ. ಈ ತಂತ್ರಜ್ಞಾನದಿಂದ ಲೈಂಗಿಕ ಕ್ರಿಯೆಯ ಸಂದರ್ಭದಲ್ಲಿ ಮನುಷ್ಯರ ಜನನೇಂದ್ರಿಯಗಳಲ್ಲಿ ಆಗುವ ಮಾರ್ಪಾಡುಗಳ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮಗಿಂತ ಜೆಡಿಎಸ್ – ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಕೆಶಿ

    ಹೇಗೆ ನಡೆಯುತ್ತೆ ಪ್ರಕ್ರಿಯೆ?
    ವ್ಯಕ್ತಿಯಿಂದ ವ್ಯಕ್ತಿಗೆ ಜನನೇಂದ್ರಿಯದ ಬದಲಾವಣೆ ಇರೋದ್ರಿಂದ ಈ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಫಿಂಗರ್ ಫ್ರಿಂಟ್ ಮಾದರಿಯಲ್ಲಿಯೇ ಖಾಸಗಿ ಅಂಗದ ಗುರುತು ಪತ್ತೆಯನ್ನು ಇದರಲ್ಲಿ ಮಾಡಲಾಗುತ್ತದೆ. ವಿಡಿಯೋದಲ್ಲಿ ಸ್ಕ್ರೀನ್ ಶಾಟ್ ತೆಗೆದು ಹೈ ರೆಸ್ಯೂಲೆಷನ್‌ಗೆ ಕನ್ವರ್ಟ್ ಮಾಡಲಾಗುತ್ತೆ. ನಂತರ ನಂತರ ವ್ಯಕ್ತಿಯ ಖಾಸಗಿ ಅಂಗ, ಸೊಂಟ ಹಾಗೂ ಆತನ ಕೈ ಫೋಟೋ ತೆಗೆದುಕೊಳ್ಳಲಾಗುತ್ತೆ. ಇದಕ್ಕೆ ಅದರದ್ದೇ ಆದ ಮೆಡಿಕಲ್ ಪ್ರೊಸಿಜರ್ ಪ್ರಕಾರವೇ ಫೋಟೋ ತೆಗೆದುಕೊಳ್ಳಬೇಕಾಗುತ್ತದೆ. ನಂತರ ಚರ್ಮ ವೈದ್ಯರು, ಮೂತ್ರಶಾಸ್ತ್ರ ತಜ್ಞರು ಪರಿಶೀಲನೆ ಮಾಡ್ತಾರೆ. ಎರಡು ಫೋಟೋದಲ್ಲಿ ಹೋಲಿಕೆ ಆದರೆ ವಿಡಿಯೋದಲ್ಲಿ ಇರೋದು ಅದೇ ವ್ಯಕ್ತಿ ಅಂತ ಖಚಿತಪಡಿಸುತ್ತಾರೆ. ಯಾವುದರೂ ಒಂದು ಭಾಗ ಹೋಲಿಕೆ ಆದರು ಆರೋಪಿ ಪತ್ತೆಗೆ ಸಹಾಕರಿಯಾಗುತ್ತೆ.

    ಹಾಗೆಯೇ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲೂ ಇದೇ ರೀತಿ ಪ್ರಕ್ರಿಯೆ ನಡೆದಿದೆ. ಇದು ದೇಶದಲ್ಲೇ ಮೊದಲ ಪ್ರಯೋಗ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಲಬುರಗಿ ಕರ್ನಾಟಕ ಕೇಂದ್ರಿಯ ವಿವಿ ವಿದ್ಯಾರ್ಥಿನಿ ಕೆನ್ನೆಗೆ ಮುತ್ತಿಟ್ಟ ಕ್ಯಾಂಟೀನ್ ಓನರ್

  • ಪ್ರಜ್ವಲ್ ಹಣ ಮಾಡಲು ರಾಜಕೀಯಕ್ಕೆ ಬಂದಿಲ್ಲ, ಜನಸೇವೆಗೆ ಬಂದಿದ್ದಾರೆ: ಅಪರಾಧಿ ಪರ ವಕೀಲರ ವಾದ ಏನು?

    ಪ್ರಜ್ವಲ್ ಹಣ ಮಾಡಲು ರಾಜಕೀಯಕ್ಕೆ ಬಂದಿಲ್ಲ, ಜನಸೇವೆಗೆ ಬಂದಿದ್ದಾರೆ: ಅಪರಾಧಿ ಪರ ವಕೀಲರ ವಾದ ಏನು?

    ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಹಣ ಮಾಡಲು ರಾಜಕೀಯಕ್ಕೆ ಬಂದಿಲ್ಲ. ಬದಲಾಗಿ ಜನಸೇವೆಗಾಗಿ ಬಂದಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲೆ ಮಂಜುಳಾ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

    ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪದಲ್ಲಿ ಅಪರಾಧಿಯಾಗಿದ್ದ ಪ್ರಜ್ವಲ್ ರೇವಣ್ಣ ಪರ ವಾದ ಮಾಡಿ, ಚುನಾವಣೆ ಹೊತ್ತಲ್ಲೇ ವಿಡಿಯೋ ಹೊರಗೆ ಬಂದಿದೆ. ಇದನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದೆ. ರಾಜಕೀಯ ಹಿನ್ನೆಲೆಯನ್ನು ಶಿಕ್ಷೆ ವಿಧಿಸಲು ಪರಿಗಣಿಸಬಾರದು. ಪ್ರಜ್ವಲ್ ರೇವಣ್ಣ ಸಂಸದರಾಗಿ ಮಾಡಿರುವ ಕೆಲಸಕ್ಕೆ ಚ್ಯುತಿಯಾಗಬಾರದು ಎಂದು ವಾದಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್

    ಸಂತ್ರಸ್ತೆಯೂ ಸಮಾಜದಿಂದ ತಿರಸ್ಕೃತವಾಗಿಲ್ಲ. ಆಕೆ ಕುಟುಂಬದ ಜೊತೆ ಜೀವನ ಮುಂದುವರಿಸಿದ್ದಾರೆ. ಇಲ್ಲಿ ಪ್ರಜ್ವಲ್‌ಗೆ ನಷ್ಟವಾಗಿದೆ. ಹಾಗೆಯೇ ಅವರ ತೇಜೋವಧೆಯಾಗಿದೆ. ಪ್ರಜ್ವಲ್ 1 ವರ್ಷ 4 ತಿಂಗಳಿಂದ ಜೈಲಿನಲ್ಲಿದ್ದಾರೆ. ಇನ್ನೂ ಯುವಕನಾಗಿರುವ ಕಾರಣ ಅವರಿಗೆ ಮುಳುವಾಗುವಂಥ ಶಿಕ್ಷೆ ನೀಡಬಾರದು ಎಂದು ವಾದ ಮಂಡಿಸಿದರು. ಇದನ್ನೂ ಓದಿ: ಅತ್ಯಾಚಾರ ಕೇಸಲ್ಲಿ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು – ಸಂತ್ರಸ್ತೆಗೆ 11 ಲಕ್ಷ ಪರಿಹಾರ

    ಪ್ರಜ್ವಲ್ ರಾಜಕೀಯ ಜೀವನ ಹಾಳು ಮಾಡಲು ಈ ಕುತಂತ್ರ ನಡೆದಿದೆ. ಆಡಳಿತ ಪಕ್ಷವೂ ಕೂಡ ವೈಯಕ್ತಿಕವಾಗಿ ಪರಿಗಣಿಸಿತ್ತು. ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ನೀಡದೇ ಕನಿಷ್ಠ ಶಿಕ್ಷೆ ನೀಡಬೇಕು ಎಂದು ವಾದಿಸಿದರು.

    ಈ ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ಸೆಷನ್ಸ್ ಕೋರ್ಟ್ನ ನ್ಯಾ. ಗಜಾನನ ಭಟ್ ಅವರು, ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ, ಅತ್ಯಾಚಾರ ಸಂತ್ರಸ್ತೆಗೆ 11 ಲಕ್ಷ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.

  • Malegaon Blast Case | ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ

    Malegaon Blast Case | ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ

    ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ (Malegaon Blast Case) ಬಿಜೆಪಿಯ (BJP) ಮಾಜಿ ಸಂಸದೆ ಪ್ರಜ್ಞಾ ಠಾಕೂರ್ (Pragya Singh Thakur) ಸೇರಿ ಎಲ್ಲಾ 7 ಆರೋಪಿಗಳಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‍ಐಎ ವಿಶೇಷ ಕೋರ್ಟ್ (NIA Court) ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.

    ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್‌ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು. ಇದನ್ನೂ ಓದಿ: ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

    ಏನಿದು ಪ್ರಕರಣ?
    2008ರ ಸೆ.29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುಂಚಿನ ದಿನ ಬಾಂಬ್ ಸ್ಫೋಟ ನಡೆದಿತ್ತು.‌ ಈ ಸ್ಫೋಟದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

    ಈ ಪ್ರಕರಣವನ್ನು ಮುಂಬೈ ಭಯೋತ್ಪಾದಕ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿತ್ತು. ನಂತರ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು. ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿತ್ತು. ಇದನ್ನೂ ಓದಿ: ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ: ಅಮಿತ್ ಶಾ

  • ಮತಾಂತರ ಕೇಸ್;‌ ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು ನೀಡಲ್ಲ ಎಂದ ಕೋರ್ಟ್‌

    ಮತಾಂತರ ಕೇಸ್;‌ ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು ನೀಡಲ್ಲ ಎಂದ ಕೋರ್ಟ್‌

    – ಸನ್ಯಾಸಿನಿಯರ ಬಿಡುಗಡೆಗೆ ಪ್ರಿಯಾಂಕಾ ಗಾಂಧಿ ಸೇರಿ ಅನೇಕರಿಂದ ಒತ್ತಾಯ

    ರಾಯ್ಪುರ: ಮಾನವ ಕಳ್ಳಸಾಗಣೆ ಮತ್ತು ಬಲವಂತದ ಧಾರ್ಮಿಕ ಮತಾಂತರದ (Religious Conversion) ಆರೋಪದ ಮೇಲೆ ದುರ್ಗ್‌ನಲ್ಲಿ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಇಬ್ಬರು ಸನ್ಯಾಸಿನಿಯರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಛತ್ತೀಸ್‌ಗಢದ ನ್ಯಾಯಾಲಯ (Chhattisgarh Court) ನಿರಾಕರಿಸಿದೆ.

    ಮಾನವ ಕಳ್ಳಸಾಗಣೆ ಆರೋಪಗಳು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಾಯ್ದೆಯಡಿಯಲ್ಲಿ ಬರುವುದರಿಂದ ಅದು ನ್ಯಾಯವ್ಯಾಪ್ತಿಯ ಕೊರತೆಯನ್ನು ಗಮನಿಸಿದೆ. ಸನ್ಯಾಸಿನಿಯರು ಬಿಲಾಸ್‌ಪುರದ ಎನ್‌ಐಎ ನ್ಯಾಯಾಲಯವನ್ನು ಸಂಪರ್ಕಿಸಬೇಕು. ಸನ್ಯಾಸಿನಿಯರಾದ ಸಿಸ್ಟರ್ ಪ್ರೀತಾ ಮೇರಿ ಮತ್ತು ವಂದನಾ ಫ್ರಾನ್ಸಿಸ್ ನ್ಯಾಯಾಂಗ ಬಂಧನದಲ್ಲಿಯೇ ಇರುತ್ತಾರೆ ಎಂದು ದುರ್ಗ್‌ನ ಸೆಷನ್ಸ್ ನ್ಯಾಯಾಲಯವು ತಿಳಿಸಿದೆ. ಇದನ್ನೂ ಓದಿ: ಇನ್ನು ಮುಂದೆ ಅರಣ್ಯದಲ್ಲಿ ಮರ ಕಡಿದ್ರೂ ಗೊತ್ತಾಗುತ್ತೆ – ನಿಸಾರ್‌ ಉಡಾವಣೆ ಯಶಸ್ವಿ

    ಸ್ಥಳೀಯ ಬಜರಂಗದಳ ಸದಸ್ಯ ರವಿ ನಿಗಮ್ ನೀಡಿದ ದೂರಿನ ಮೇರೆಗೆ ಜು.25 ರಂದು ದುರ್ಗ್ ರೈಲು ನಿಲ್ದಾಣದಲ್ಲಿ ಸನ್ಯಾಸಿನಿಯರನ್ನು ಬಂಧಿಸಲಾಯಿತು. ಇದು, ಕೇರಳದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿತು. ದೆಹಲಿಯಲ್ಲೂ ಇದರ ಪರಿಣಾಮ ಕಂಡುಬಂದಿದೆ. ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ, ವಿರೋಧ ಪಕ್ಷ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ, ಕ್ರಿಶ್ಚಿಯನ್ ಸಮುದಾಯ ಮತ್ತು ಚರ್ಚ್ ನಾಯಕರು ಹಾಗೂ ರಾಜ್ಯ ಬಿಜೆಪಿ ಈ ಬಂಧನವನ್ನು ಖಂಡಿಸಿವೆ. ಸನ್ಯಾಸಿನಿಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿವೆ.

    ನಾರಾಯಣಪುರ ಜಿಲ್ಲೆಯಿಂದ ಆಗ್ರಾಕ್ಕೆ ಮೂವರು ಬುಡಕಟ್ಟು ಮಹಿಳೆಯರೊಂದಿಗೆ ಸನ್ಯಾಸಿಗಳು ಹೋಗುತ್ತಿದ್ದರು. ಅಲ್ಲಿ ಅವರಿಗೆ ಫಾತಿಮಾ ಆಸ್ಪತ್ರೆಯಲ್ಲಿ ತರಬೇತಿ ಮತ್ತು ಕೆಲಸ ನೀಡಲಾಗುವುದು ಎಂದು ಹೇಳಲಾಗಿತ್ತು. ಮಹಿಳೆಯರು ಮತ್ತು ಅವರ ಕುಟುಂಬಗಳು ಯಾವುದೇ ಬಲವಂತದ ಧಾರ್ಮಿಕ ಮತಾಂತರ ನಡೆದಿಲ್ಲ ಮತ್ತು ವಯಸ್ಕರಾಗಿ ತಮ್ಮ ಸ್ವಂತ ಇಚ್ಛೆಯಿಂದ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವುದಿಲ್ಲ ಎಂದು ನ್ಯಾಯಾಲಯ ಹೇಳಿರುವುದು, ರಾಜಕೀಯ ಚರ್ಚೆಯನ್ನು ತೀವ್ರಗೊಳಿಸಿದೆ. ಕೇರಳದ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಸನ್ಯಾಸಿನಿಯರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಛತ್ತೀಸ್‌ಗಢ ಸರ್ಕಾರವು ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

  • ಕೆ.ಆರ್‌ ನಗರ‌ ಸಂತ್ರಸ್ತೆ ರೇಪ್‌ ಕೇಸ್‌ | ಪ್ರಜ್ವಲ್ ದೋಷಿ ಹೌದೋ, ಅಲ್ವೋ? – ಬುಧವಾರ ಹೊರಬೀಳಲಿದೆ ತೀರ್ಪು

    ಕೆ.ಆರ್‌ ನಗರ‌ ಸಂತ್ರಸ್ತೆ ರೇಪ್‌ ಕೇಸ್‌ | ಪ್ರಜ್ವಲ್ ದೋಷಿ ಹೌದೋ, ಅಲ್ವೋ? – ಬುಧವಾರ ಹೊರಬೀಳಲಿದೆ ತೀರ್ಪು

    ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಭವಿಷ್ಯ ಬುಧವಾರ (ಜು.30) ನಿರ್ಧಾರವಾಗಲಿದೆ.

    26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ಬುಧವಾರ ತೀರ್ಪು ನೀಡಲಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಬಹಳ ಮಹತ್ವದ್ದಾಗಿರಲಿದೆ.

    ಈಗಾಗಲೇ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‍ನಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ಕ್ಕೆ ಆದೇಶ ಕಾಯ್ದಿರಿಸಿತ್ತು. ಕೆಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್‍ ದಾಖಲಾಗಿತ್ತು. ಸದ್ಯಕ್ಕೆ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ.

    ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ದೃಶ್ಯವಿದ್ದ ಪೆನ್ ಡ್ರೈವ್​ಗಳನ್ನು ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ, ಕೆ.ಆರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದರು.