Tag: court

  • ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಚಿತ್ರದುರ್ಗ: ಮುರುಘಾ ಶ್ರೀಗಳ ಮೇಲಿನ ಪೋಕ್ಸೋ ಕೇಸ್ ತನಿಖೆ ತೀವ್ರಗೊಂಡಿದೆ. ಪ್ರಕರಣ ವರದಿಯಾದ ಮೂರು ದಿನಗಳ ಬಳಿಕ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ಚಿತ್ರದುರ್ಗದ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

    CRPC 164 ಅಡಿ ಸಂತ್ರಸ್ತರು, ಮಹಿಳಾ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಧೀಶರ ಸಮ್ಮುಖದಲ್ಲಿ ಸಂತ್ರಸ್ತ ಬಾಲಕಿಯರ ರಕ್ತದ ಮಾದರಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿದೆ. ಸದ್ಯ ಮುಚ್ಚಿದ ಲಕೋಟೆಯಲ್ಲಿರುವ ಸಂತ್ರಸ್ತರ ಹೇಳಿಕೆಯನ್ನು ಗೌಪ್ಯವಾಗಿ ಇರಿಸಲಾಗಿದೆ. ಸಂತ್ರಸ್ತ ಬಾಲಕಿಯರ ಈ ಹೇಳಿಕೆ ಮೇಲೆ ಮುರುಘಾ ಶರಣರ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಮುಂದಿನ ಪೀಳಿಗೆ ಭವಿಷ್ಯವನ್ನು ಉಜ್ವಲಗೊಳಿಸಲಿದೆ: ರಾಜ್ಯಪಾಲರು

    ಇಂದು ಕೋರ್ಟ್ ಮುಂದೆ ಪರ-ವಿರೋಧಿ ಪ್ರತಿಭಟನೆಗಳು ನಡೆದಿದ್ದು, ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಬೇಕಾಯ್ತು. ಈ ಮಧ್ಯೆ, ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬರು ಪರಿಶಿಷ್ಟ ಜಾತಿಗೆ ಸೇರಿರುವ ಕಾರಣ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಈ ಮಧ್ಯೆ, 20ಕ್ಕೂ ಹೆಚ್ಚು ಸ್ವಾಮೀಜಿಗಳು ಸುದ್ದಿಗೋಷ್ಟಿ ನಡೆಸಿ, ಮುರುಘಾ ಮಠದ ಶ್ರೀಗಳಿಗೆ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿವಿಧ ಮಠದ ಶ್ರೀಗಳು, ಮುರುಘಾ ಶರಣರು ಮಕ್ಕಳು ದೇವರ ಸಮಾನ ಎಂದು ತಿಳಿದಿರುವವರು, ಅವರು ನಾಡಿನ ಗಮನ ಸೆಳೆದಿದ್ದಾರೆ. ಬಹಳ ಮುಂಚೂಣಿಯಲ್ಲಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಸ್ವಾಮೀಜಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಶ್ರೀಗಳು ಖಂಡಿತಾಗಿಯೂ ಈ ಪ್ರಕರಣದಿಂದ ಹೊರ ಬರ್ತಾರೆ, ಸತ್ಯಕ್ಕೆ ಜಯವಾಗುತ್ತದೆ ಎಂದು ಎಲ್ಲಾ ಮಠಾಧೀಶರು ಶ್ರೀಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಯು.ಯು ಲಲಿತ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.

    ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ವಕೀಲ ವರ್ಗದಿಂದ ನೇರವಾಗಿ ಪದೋನ್ನತಿ ಪಡೆದ 2ನೇ ಸಿಜೆಐ ಆಗಿದ್ದಾರೆ. ಪದೋನ್ನತಿ ಪಡೆದ ಮೊದಲ ಸಿಜೆಐ ಆಗಿ ಎಸ್.ಎಂ ಸಿಕ್ರಿ ಅವರು 1971 ರಿಂದ ಏಪ್ರಿಲ್ 1973ರ ವರೆಗೆ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಿಂದ ಉದಯ್‌ ಸೂರ್ಯ ಔಟ್

    ನ್ಯಾಯಮೂರ್ತಿ ಲಲಿತ್ ಅವರು ಹಿರಿಯ ವಕೀಲ ಯು.ಆರ್ ಲಲಿತ್ ಪುತ್ರನಾಗಿ 1957ರ ನವೆಂಬರ್ 9ರಲ್ಲಿ ಜನಿಸಿದರು. 1983ರ ಜೂನ್‌ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ ಲಲಿತ್ ಅವರು ಡಿಸೆಂಬರ್ 1985ರ ವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಅಭ್ಯಾಸ ಮಾಡಿದರು. 1986ರಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಿ ಅಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅವರು 2004ರ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಇದನ್ನೂ ಓದಿ: 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್‌ – ಪೊಲೀಸರ ಅತಿಥಿ

    ಮುಂದೆ ಅವರು 2014ರ ಆಗಸ್ಟ್ 13ರಂದು ವಕೀಲ ವರ್ಗದಿಂದ ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ಇದೇ ವರ್ಷ ನವೆಂಬರ್ 8 ರಂದು ಅವರು ಸಿಜೆಐ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಪ್ಪಿಗೆಯಿಲ್ಲದೇ ಅಪ್ರಾಪ್ತೆಯೊಂದಿಗೆ ಸೆಕ್ಸ್ ನಡೆಸಿದ ವ್ಯಕ್ತಿಗೆ 100 ವರ್ಷ ಜೈಲು!

    ಒಪ್ಪಿಗೆಯಿಲ್ಲದೇ ಅಪ್ರಾಪ್ತೆಯೊಂದಿಗೆ ಸೆಕ್ಸ್ ನಡೆಸಿದ ವ್ಯಕ್ತಿಗೆ 100 ವರ್ಷ ಜೈಲು!

    ವಾಷಿಂಗ್ಟನ್: ಒಪ್ಪಿಗೆಯಿಲ್ಲದೇ 9 ವರ್ಷದ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯೊಬ್ಬನಿಗೆ ಅಮೆರಿಕದ ಗ್ಯಾಲಿಟಿನ್ ಕೌಂಟಿ ಜಿಲ್ಲಾ ನ್ಯಾಯಾಲಯವು 100 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    2018ರ ಅಕ್ಟೋಬರ್ ಹಾಗೂ 2019ರ ಡಿಸೆಂಬರ್ ಅವಧಿಯಲ್ಲಿ 9 ವರ್ಷದ ಬಾಲಕಿಯೊಂದಿಗೆ ಒಪ್ಪಿಗೆಯಿಲ್ಲದೇ ಲೈಂಗಿಕ ಕ್ರಿಯೆ ನಡೆಸಿದ್ದಕ್ಕಾಗಿ ಜೇರೆಡ್ ಜೇಮ್ಸ್ ಫೀಲ್ಡ್ (33) ಎಂಬಾತನಿಗೆ ನ್ಯಾಯಾಲಯವು 100 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಆದರೆ ಆರೋಪಿಯು ತನ್ನ ಅಪರಾಧಗಳ ತಪ್ಪೊಪ್ಪಿಕೊಂಡಿದ್ದು, ಆಲ್ಫೋರ್ಡ್ ಮನವಿ (ಲೈಂಗಿಕ ಅಪರಾಧಗಳನ್ನು ಮನ್ನಿಸುವಂತೆ ಮನವಿ) ಸಲ್ಲಿಸಿದ್ದಕ್ಕಾಗಿ ಆತನಿಗೆ 75 ವರ್ಷಗಳನ್ನು ತೆಗೆದುಹಾಕಿ, 25 ವರ್ಷ ಜೈಲು ಶಿಕ್ಷೆಗೆ ನ್ಯಾಯಾಲಯವು ಒಳಪಡಿಸಿದೆ.

    ಇದರೊಂದಿಗೆ ಕಂಫರ್ಟ್ ಇನ್ ಸ್ಟ್ಯಾಂಡ್‌ಆಫ್‌ನಲ್ಲಿ ಭಾಗಿಯಾಗಿದ್ದ ಎರಡು ಅಪರಾಧ ಪ್ರಕರಣಗಳಿಗೆ ತಲಾ 5 ವರ್ಷ ಹೆಚ್ಚುವರಿ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಪಾಕ್ ಮೇಲೆ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ – ವಾಯುಪಡೆಯ ಮೂವರು ಅಧಿಕಾರಿಗಳು ವಜಾ

    ಪಾಕ್ ಮೇಲೆ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ – ವಾಯುಪಡೆಯ ಮೂವರು ಅಧಿಕಾರಿಗಳು ವಜಾ

    ನವದೆಹಲಿ: ಪ್ರಸಕ್ತ ವರ್ಷದ ಮಾರ್ಚ್‌ 9ರಂದು ಭಾರತದ ಬ್ರಹ್ಮೋಸ್ ಕ್ಷಿಪಣಿಯನ್ನು ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ್ದ ಕಾರಣಕ್ಕಾಗಿ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾಗೊಳಿಸಿದೆ.

    ಭಾರತದ ಸೂಪರ್‌ಸಾನಿಕ್ ಕ್ಷಿಪಣಿ ಆಕಸ್ಮಿಕವಾಗಿ ಪಾಕಿಸ್ತಾನದ ಭೂಪ್ರದೇಶದ ಒಳಗೆ ಹೋಗಿರುವುದನ್ನು ಭಾರತದ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿತ್ತು. ತಾಂತ್ರಿಕ ಸಮಸ್ಯೆಯಿಂದ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆಯಾಗಿದ್ದು, ಈ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ರಕ್ಷಣಾ ಸಚಿವಾಲಯ ಹೇಳಿತ್ತು. ಜತೆಗೆ ಈ ಘಟನೆಯನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ಕೋರ್ಟ್‌ ತನಿಖೆಗೆ ಆದೇಶಿತ್ತು. ಇದನ್ನೂ ಓದಿ: ಸೆ.2ರಂದು ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ ನೌಕಾಪಡೆಗೆ ಅಧಿಕೃತ ಸೇರ್ಪಡೆ

    ಅದರಂತೆ ತನಿಖೆ ನಡೆಸಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌, ವಿಂಗ್‌ ಕಮಾಂಡರ್‌ ಹಾಗೂ ಸ್ಕ್ವಾಡ್ರನ್‌ ಲೀಡರ್‌ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ವಾಯುಪಡೆ ತಿಳಿಸಿದೆ.

    ಪಾಕಿಸ್ತಾನದ ಪ್ರಕಾರ, ಕ್ಷಿಪಣಿಯು ಅಲ್ಲಿನ ವಾಯು ವಲಯದಲ್ಲಿ 100 ಕಿಲೋ ಮೀಟರ್‌ಗೂ ಹೆಚ್ಚು ದೂರ, ಒಳಭಾಗಕ್ಕೆ ಸುಮಾರು 40,000 ಅಡಿಗಳಷ್ಟು ಎತ್ತರದಿಂದ ಅಪ್ಪಳಿಸಿತ್ತು. ಭಾರತದ ಬ್ರಹ್ಮೋಸ್ ಕ್ಷಿಪಣಿಯು ಶಬ್ದದ ಮೂರು ಪಟ್ಟು ವೇಗದಲ್ಲಿ ಹಾರಿತ್ತು. ಕ್ಷಿಪಣಿಯಲ್ಲಿ ಯಾವುದೇ ಸಿಡಿತಲೆ ಇರಲಿಲ್ಲ, ಆದ್ದರಿಂದ ಅದು ಸ್ಫೋಟಿಸಲಿಲ್ಲ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನ ಆಗ್ರಹಿಸಿತ್ತು. ಇದನ್ನೂ ಓದಿ: ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

    ಭಾರತ ಮತ್ತು ಪಾಕಿಸ್ತಾನ ನಡುವೆ 2005ರಲ್ಲಿ ನಡೆದ ಒಪ್ಪಂದದ ಪ್ರಕಾರ, ಭೂಮಿಯ ಮೇಲ್ಮೈ ಮೇಲ್ಲೈನಿಂದ ಅಥವಾ ಸಮುದ್ರ ಉಡಾವಣಾ ಕ್ಷಿಪಣಿಗಳ ಪರೀಕ್ಷಾರ್ಥ ಪ್ರಯೋಗ ನಡೆಸುವುದಿದ್ದರೆ, ಕನಿಷ್ಠ ಮೂರು ದಿನಗಳ ಮುಂಚೆ ಇನ್ನೊಂದು ದೇಶಕ್ಕೆ ಅದರ ಮಾಹಿತಿ ನೀಡಬೇಕು. ಈ ಬಗ್ಗೆ ಖಂಡಾಂತರ ಕ್ಷಿಪಣಿ ಪರೀಕ್ಷೆಗಳ ಹಾರಾಟದ ಪೂರ್ವ ಅಧಿಸೂಚನೆ ಮಾಡಿಕೊಳ್ಳಲಾಗಿತ್ತು. ಜತೆಗೆ ಉಡಾವಣಾ ಸ್ಥಳಗಳು ಎರಡೂ ದೇಶಗಳ ನಡುವಿನ ಅಂತಾರಾಷ್ಟ್ರೀಯ ಗಡಿ ಅಥವಾ ಎಲ್‌ಒಸಿಯ 40 ಕಿಮೀ ಒಳಗೆ ಇರಬಾರದು ಹಾಗೂ ಅದರ ಪರಿಣಾಮ ಉಂಟಾಗುವ ವಲಯವು 75 ಕಿಮೀ ಒಳಗೆ ಇರಬಾರದು.

    Live Tv
    [brid partner=56869869 player=32851 video=960834 autoplay=true]

  • ಸಂಜಯ್ ರಾವತ್‍ಗೆ ಸೆ.5ರ ವರೆಗೆ ಜೈಲೇ ಗತಿ

    ಸಂಜಯ್ ರಾವತ್‍ಗೆ ಸೆ.5ರ ವರೆಗೆ ಜೈಲೇ ಗತಿ

    ಮುಂಬೈ: ಪತ್ರಾ ಚಾಲ್ ಭೂಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಸೆಪ್ಟೆಂಬರ್ 5 ರವರೆಗೂ ವಿಸ್ತರಣೆ ಮಾಡಿದೆ.

    court order law

    ಮುಂಬೈನ ಚಾಲ್ ಮರುಅಭಿವೃದ್ಧಿ ಯೋಜನೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಯಲ್ಲಿದ್ದ ಸಂಜಯ್ ರಾವತ್‍ರನ್ನು ಮುಂಬೈನ ವಿಶೇಷ ನ್ಯಾಯಾಲಯ ಆಗಸ್ಟ್ 8 ರಂದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿದೆ.

    ಇಂದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಜಿ ದೇಶಪಾಂಡೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಿದರು. ಪ್ರಕರಣದ ತನಿಖೆ ಇನ್ನೂ ಮುಂದುವರಿದಿದೆ ಎಂದು ಇಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಇದನ್ನೂ ಓದಿ: ನಾನೇನು ವಿಜಯ್‌ ಮಲ್ಯಾನಾ: ಆಸ್ತಿ ಜಪ್ತಿಗೆ ಸಂಜಯ್‌ ರಾವತ್‌ ಕಿಡಿ

    ಸಂಜಯ್ ರಾವತ್ ಅವರನ್ನು ಆಗಸ್ಟ್ 1 ರಂದು ಇಡಿ. ಬಂಧಿಸಿದೆ. ಗೋರೆಗಾಂವ್‍ನ ಉಪನಗರದಲ್ಲಿರುವ ಪತ್ರಾ ಚಾಲ್ ಮರು ಅಭಿವೃದ್ಧಿಯಲ್ಲಿ ಯೋಜನೆಯಲ್ಲಿ 1,034 ಕೋಟಿ ರೂ. ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಸಂಜಯ್ ರಾವತ್ ವಿರುದ್ಧ ತನಿಖೆ ನಡೆಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್

    ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್

    ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ.

    ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ(35) ಬಂಧಿತ ಆರೋಪಿ. ಪ್ರಕರಣ ಹಿನ್ನೆಲೆ ನೋಡುವುದಾದರೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು. ಈ ಬೋರ್ಡ್‍ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ವಿಕೃತಿ ಮೆರೆದಿದ್ದರು.  ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?

    ಇತ್ತ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸಿ ಟಾಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಗೋಕಾಕ್ ಗ್ರಾಮೀಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    Live Tv
    [brid partner=56869869 player=32851 video=960834 autoplay=true]

  • ಸರ್..! ಸಿಎಂ ಆಗಲು ಪಕ್ಷ ಒಡಿಬೇಡಿ – ದೆಹಲಿಯಲ್ಲಿ ಡಿಕೆಶಿಗೆ ವಕೀಲ ಮನವಿ

    ಸರ್..! ಸಿಎಂ ಆಗಲು ಪಕ್ಷ ಒಡಿಬೇಡಿ – ದೆಹಲಿಯಲ್ಲಿ ಡಿಕೆಶಿಗೆ ವಕೀಲ ಮನವಿ

    ನವದೆಹಲಿ: ಮುಖ್ಯಮಂತ್ರಿಯಾಗುವ ಸಲುವಾಗಿ ಪಕ್ಷವನ್ನು ಒಡೆಯಬೇಡಿ ಒಟ್ಟಾಗಿ ಪಕ್ಷವನ್ನು ಮುನ್ನೆಡೆಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ  ದೆಹಲಿ ಮೂಲದ ಅನಾಮಧೇಯ ಹಿರಿಯ ವಕೀಲರೊಬ್ಬರು ಮನವಿ ಮಾಡಿದ್ದಾರೆ.

    ಇಂದು ಇಡಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಗಿಸಿ ಡಿ.ಕೆ ಶಿವಕುಮಾರ್ ವಾಪಸ್ ಬರುವಾಗ, ನ್ಯಾಯಾಲಯ ಕಟ್ಟಡದ ಲಿಫ್ಟ್‌ನಲ್ಲಿ ಆಕಸ್ಮಿಕವಾಗಿ ಸಿಕ್ಕ ದೆಹಲಿ ಮೂಲದ ವಕೀಲರೊಬ್ಬರು ಡಿ.ಕೆ ಶಿವಕುಮಾರ್‌ಗೆ ಹೀಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಫಸ್ಟ್‌ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ ವಿಶ್ವದ ಅತಿ ದೊಡ್ಡ ಸೂಪರ್‌ಜಂಬೋ ವಿಮಾನ

    dkshivakumar

    ಡಿ.ಕೆ ಶಿವಕುಮಾರ್ ಲಿಫ್ಟ್ ಪ್ರವೇಶ ಮಾಡುತ್ತಿದ್ದಂತೆ ವಕೀಲರೊಬ್ಬರು ಅವರನ್ನು ಗುರುತಿಸಿದರು. ನೀವೂ ಡಿ.ಕೆ ಶಿವಕುಮಾರ್ ಅಲ್ಲವೇ ಎಂದು ಕೇಳಿದರು. ಅದಕ್ಕೆ ಡಿ.ಕೆ ಶಿವಕುಮಾರ್ ಹೌದು ಎಂದರು. ಬಳಿಕ ಮಾತು ಮುಂದುವರಿಸಿದ ಆ ಹಿರಿಯ ವಕೀಲ, ನಾನು ನಿಮ್ಮನ್ನು ಟಿವಿಯಲ್ಲಿ ಬಹಳ ಸಲ ನೋಡಿದ್ದೇನೆ. ಉತ್ತಮ ನಾಯಕರು, ನೀವೂ ಪಕ್ಷವನ್ನು ಕಟ್ಟುತ್ತಿದ್ದೀರಿ ಎಂದರು.

    ಕರ್ನಾಟಕದಲ್ಲಿ ನಿಮಗೆ ಅವಕಾಶಗಳಿದಿಯೇ ಎಂದು ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿದರು. ಅದಕ್ಕೆ ಹೌದು ಉತ್ತಮ ಅವಕಾಶಗಳಿದೆ ಎಂದರು. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ವಕೀಲ ನೀವೂ ಸಿಎಂ ಆಗಬೇಕು ಸರ್..! ಆದರೆ ಸಿಎಂ ಆಗಲು ಪಕ್ಷವನ್ನು ಒಡೆಯಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರತದ ಅತಿ ಉದ್ದದ ಸರಕು ರೈಲು ‘ಸೂಪರ್ ವಾಸುಕಿ’ – ಇದರ ವಿಶೇಷತೆ ಏನು ಗೊತ್ತಾ?

    ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ನಾನು ಪಕ್ಷ ಒಡೆಯುವ ಕೆಲಸ ಎಂದೂ ಮಾಡುವುದಿಲ್ಲ, ಪಕ್ಷ ಕಟ್ಟುತ್ತಿದ್ದೇನೆ, ಅಧಿಕಾರಕ್ಕೆ ತರುತ್ತೇವೆ ಎಂದು ಮುಗುಳು ನಗುತ್ತಾ ಭರವಸೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಪ್ರಕರಣ – ಸೆ.27ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

    ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಪ್ರಕರಣ – ಸೆ.27ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

    ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆಯಾಗಿದೆ. ಪ್ರಕರಣ ಮೂವರು ಆರೋಪಿಗಳು ಜಾರ್ಜ್‍ಶೀಟ್ ಜೊತೆಗೆ ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದಾಖಲೆಗಳನ್ನು ಒದಗಿಸುವಂತೆ ಕೇಳಿದ ಹಿನ್ನೆಲೆ ವಿಚಾರಣೆ ಮುಂದೂಡಲಾಯಿತು.

    ಇಂದು ವಿಚಾರಣೆ ವೇಳೆ ಪ್ರಕರಣ ಇತರೆ ಆರೋಪಿಗಳಾದ ಸಚಿನ್ ನಾರಯಣ್, ಸುನೀಲ್ ಶರ್ಮಾ, ರಾಜೇಂದ್ರ. ಎನ್, ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಗೋಡಾನ್‍ನಿಂದ ಬರೋಬ್ಬರಿ 17 ಲಕ್ಷ ಮೌಲ್ಯದ ಚಾಕ್ಲೇಟ್ ಬಾರ್‌ಗಳನ್ನು ಕದ್ದ ಖದೀಮರು!

    ಇದಕ್ಕೆ ಒಪ್ಪಿದ ಇಡಿ ಪರ ವಕೀಲರು, ತರ್ಜುಮೆ ಮಾಡಿ ದಾಖಲೆಗಳನ್ನು ನೀಡಲು ನಾಲ್ಕೈದು ವಾರಗಳ ಸಮಯಬೇಕು ಎಂದು ಕೋರ್ಟ್‍ಗೆ ಹೇಳಿದರು. ವಾದ ಪ್ರತಿ ವಾದ ಆಲಿಸಿದ ಬಳಿಕ ಕೋರ್ಟ್ ವಿಚಾರಣೆ ಮುಂದೂಡಿತು. ಇದನ್ನೂ ಓದಿ: ಬಿಜೆಪಿ ಜೊತೆಗೆ ಯಾವುದೇ ರಾಜಿ ಇಲ್ಲ – ದೆಹಲಿ ಭೇಟಿಗೂ ಮುನ್ನವೇ ಸ್ಟಾಲಿನ್ ಸ್ಪಷ್ಟನೆ

    ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ಈಗಾಗಲೇ ಜಾಮೀನು ಸಿಕ್ಕಿದೆ. ಅದಾಗ್ಯೂ ನ್ಯಾಯಾಲಯಕ್ಕೆ ಗೌರವ ಕೊಟ್ಟು ಕೋರ್ಟ್‍ಗೆ ಹಾಜರಾಗಿದ್ದೆ. ಇತರೆ ಆರೋಪಿಗಳು ದಾಖಲೆಗಳನ್ನು ಕೇಳಿದ್ದಾರೆ. ಅವುಗಳನ್ನು ಕೊಟ್ಟ ಬಳಿಕ ಮುಂದೆ ನೋಡಿಕೊಂಡು ಮಾತನಾಡುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ನಾನು ಚೀನಾದ ಪ್ರಜೆ, ಭಯೋತ್ಪಾದಕನಲ್ಲ: ನ್ಯಾಯಾಲಯಕ್ಕೆ ಹುವಾವೇ ಸಿಇಒ

    ನಾನು ಚೀನಾದ ಪ್ರಜೆ, ಭಯೋತ್ಪಾದಕನಲ್ಲ: ನ್ಯಾಯಾಲಯಕ್ಕೆ ಹುವಾವೇ ಸಿಇಒ

    ನವದೆಹಲಿ: ನಾನು ಚೀನಾದ ಪ್ರಜೆ, ನಾನು ಭಯೋತ್ಪಾದಕನಲ್ಲ ಎಂದು ಹುವಾವೇ ಟೆಲಿಕಮ್ಯುನಿಕೇಶನ್ಸ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಲಿ ಕ್ಸಿಯಾಂಗ್‌ವೇ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಹುವಾವೇ ಸಿಇಒ ಆದಾಯ ತೆರಿಗೆ ಇಲಾಖೆಯ ಜಾಮೀನು ಅರ್ಜಿಗೆ ಪ್ರತಿಕ್ರಿಯೆಯಾಗಿ ನಾನು ಚೀನಾದ ಪ್ರಜೆ, ಭಯೋತ್ಪಾದಕನಲ್ಲ ಎಂದು ತಿಳಿಸಿದ್ದಾರೆ ಹಾಗೂ ಚೀನಾಗೆ ಮರಳಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

    ಜಾಮೀನು ಅರ್ಜಿಯನ್ನು ತಿರಸ್ಕರಿಸುವಂತೆ ಆದಾಯ ತೆರಿಗೆ ಇಲಾಖೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಲಿ ಅವರ ವಕೀಲ ವಿಜಯ್ ಅಗರ್ವಾಲ್ ಕಕ್ಷಿದಾರರ ಪರವಾಗಿ ಈ ಹೇಳಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ: 75ನೇ ಸ್ವಾತಂತ್ರ್ಯಕ್ಕೆ ಬಾಹ್ಯಾಕಾಶದಿಂದಲೂ ಬಂತು ಶುಭ ಹಾರೈಕೆ

    ಚೀನಾದ ಟೆಲಿಕಾಂ ಕಂಪನಿಯ ಭಾರತೀಯ ಶಾಖೆಗಳ ಮೇಲೆ ಕಳೆದ ಕೆಲವು ತಿಂಗಳುಗಳ ಹಿಂದೆ ಐಟಿ ಇಲಾಖೆ ರೇಡ್ ನಡೆಸಿತ್ತು. ಅದರ ತನಿಖೆ ಇನ್ನೂ ನಡೆಯುತ್ತಿದ್ದು, ಲಿ ಅವರು ತಮ್ಮ ತಾಯ್ನಾಡು ಚೀನಾಗೆ ಮರಳಿದರೆ, ಅವರನ್ನು ವಿಚಾರಣೆಗಾಗಿ ವಾಪಸ್ ಕರೆತರುವುದು ಭಾರತಕ್ಕೆ ಅತ್ಯಂತ ಕಷ್ಟವಾಗಬಹುದು ಎಂದು ಐಟಿ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.

    ಐಟಿ ಇಲಾಖೆ ಲಿ ವಿರುದ್ಧ ಹೊರಡಿಸಿರುವ ಲುಕೌಟ್ ನೋಟಿಸ್ ರದ್ದುಗೊಳಿಸುವಂತೆ ವಕೀಲರು ಮನವಿ ಮಾಡಿದ್ದಾರೆ. ಆದರೆ ಲುಕೌಟ್ ನೋಟಿಸ್ ರದ್ದು ಮಾಡದಂತೆ ಐಟಿ ಆಕ್ಷೇಪಣೆ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಮೊಬೈಲ್‌, ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌ಗೆ ಇನ್ಮುಂದೆ ಒಂದೇ ಚಾರ್ಜರ್‌?

    Live Tv
    [brid partner=56869869 player=32851 video=960834 autoplay=true]

  • ಹೊಳೆನರಸೀಪುರ ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ

    ಹೊಳೆನರಸೀಪುರ ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ

    – ಎಸ್ಕೇಪ್ ಆಗ್ತಿದ್ದ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

    ಹಾಸನ: ಕೋರ್ಟ್ ಆವರಣದಲ್ಲೇ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆ ಮಾಡಲು ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

    ಚೈತ್ರಾ (32) ಕೊಲೆಯಾದ ಮಹಿಳೆಯಾಗಿದ್ದು, ಶಿವಕುಮಾರ್ ಕೊಲೆ ಆರೋಪಿಯಾಗಿದ್ದಾನೆ. ಹೊಳೆನರಸೀಪುರ ತಾಲ್ಲೂಕಿನ, ತಟ್ಟೆಕೆರೆ ಗ್ರಾಮದ ಶಿವಕುಮಾರ್ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ, ನುಗ್ಗೇಹಳ್ಳಿ ಹೋಬಳಿ ಅವೇರಹಳ್ಳಿ ಗ್ರಾಮದ ಚೈತ್ರಾ ಕಳೆದ 7 ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಎರಡು ಹೆಣ್ಣುಮಕ್ಕಳಿದ್ದು, ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಮೂರು ವರ್ಷಗಳ ಹಿಂದೆ ಶಿವಕುಮಾರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದನು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ಕಾಂತಾರ ಸಿನಿಮಾದಿಂದ ಮೊದಲ ಹಾಡು ಗಿಫ್ಟ್

    ಚೈತ್ರಾ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು. ಇಂದು ಹೊಳೆನರಸೀಪುರದ ನ್ಯಾಯಾಲಯದಲ್ಲಿ ಲೋಕ ಅದಾಲತ್ ನಡೆದಿದ್ದು, ಇಲ್ಲಿ ನ್ಯಾಯಧೀಶರು ದಂಪತಿ ಮನವೊಲಿಸಿ ಒಂದಾಗಿ ಬಾಳುವಂತೆ ತಿಳಿ ಹೇಳಿದ್ದರು. ನಂತರ ಇಬ್ಬರು ಪರಸ್ಪರ ಮಾತನಾಡಿಕೊಂಡು ಬರುವಂತೆ ಕಳುಹಿಸಿದ್ದರು. ಈ ವೇಳೆ ಚೈತ್ರಾ ಮಗಳನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ. ಆಕೆಯನ್ನು ಹಿಂಬಾಲಿಸಿ ಹೋದ ಶಿವಕುಮಾರ್ ಶೌಚಾಲಯದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಚೈತ್ರಾ ಕುಸಿದು ಬಿದ್ದು ರಕ್ತಸ್ರಾವದಿಂದ ಒದ್ದಾಡುತ್ತಿದ್ದನ್ನು ಕಂಡ ವಕೀಲರು ಹಾಗೂ ಸಾರ್ವಜನಿಕರು ಕೂಡಲೇ ಆಕೆಯನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಿ, ತಪ್ಪಿಸಿಕೊಂಡು ಓಡುತ್ತಿದ್ದ ಶಿವಕುಮಾರ್‌ನ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮಡಿಕೇರಿಗೆ ತೆರಳುತ್ತಿದ್ದ KSRTC ಬಸ್ ಅಪಘಾತ – ಜನರ ರಕ್ಷಣೆಗೆ ಮುಂದಾದ ಅಪ್ಪಚ್ಚು ರಂಜನ್

    ಚೈತ್ರಾಗೆ ಹೊಳೆನರಸೀಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ನಿಮಿಷಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಚೈತ್ರಾ ಕೊನೆಯುಸಿರೆಳೆದಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]