Tag: court

  • ಕಂಗನಾ ರಣಾವತ್ ಗೆ ಚಿತ್ರ ಸಾಹಿತಿ ಜಾವೇದ್ ಅಖ್ತರ್ ರಿಂದ ಬೆದರಿಕೆ ಆರೋಪ

    ಕಂಗನಾ ರಣಾವತ್ ಗೆ ಚಿತ್ರ ಸಾಹಿತಿ ಜಾವೇದ್ ಅಖ್ತರ್ ರಿಂದ ಬೆದರಿಕೆ ಆರೋಪ

    ಬಾಲಿವುಡ್ ನ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಮತ್ತು ಕಂಗನಾ ರಣಾವತ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಾಹಿನಿಯೊಂದರಲ್ಲಿ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಕಂಗನಾ ಮಾತನಾಡಿದ್ದಾರೆ ಎಂದು ಜಾವೇದ್ ಅಖ್ತರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲು ಏರಿತ್ತು. ಹಾಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಂಗನಾಗೆ ನೋಟಿಸ್ ಜಾರಿ ಆಗಿತ್ತು.

    ಜಾವೇದ್ ಅಖ್ತರ್ ಹೂಡಿರುವ ಮಾನನಷ್ಟ ದಾವೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾದ ಕಂಗನಾ ರಣಾವತ್, ತಮಗೆ ಜಾವೇದ್ ಅಖ್ತರ್ ಅವರಿಂದ ಜೀವ ಬೆದರಿಕೆಯಿದೆ ಎಂದು ಆರೋಪ ಮಾಡಿದ್ದಾರೆ. ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಕಂಗನಾ ‘ಜಾವೇದ್ ಅವರಿಗೆ ನಾನು ಅಪಮಾನ ಮಾಡಿಲ್ಲ. ನನ್ನ ಸಹೋದರಿ ಕೂಡ ಅಂತಹ ಕೆಲಸಕ್ಕೆ ಕೈ ಹಾಕಿಲ್ಲ. ಆದರೂ, ನನ್ನ ವಿರುದ್ಧ ಅವರು ಬೆದರಿಕೆ ಹಾಕಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:ತೆಲುಗಿನ ಮಹೇಶ್ ಬಾಬುಗೆ ತಂದೆಯಾಗಿ ನಟಿಸ್ತಾರಾ ರಿಯಲ್ ಸ್ಟಾರ್ ಉಪೇಂದ್ರ

    ನ್ಯಾಯಾಲಯಕ್ಕೆ ಹಾಜರಾದ ನಂತರ, ತಮ್ಮ ಹೇಳಿಕೆಯನ್ನು ದಾಖಲಿಸುವಾಗ ತಮ್ಮ ಸಹೋದರಿ ಮತ್ತು ತಮ್ಮ ವಕೀಲರು ಮಾತ್ರ ಇರಬೇಕು ಎಂದು ಮನವಿ ಮಾಡಿದರು ಕಂಗನಾ ರಣಾವತ್. ಅದಕ್ಕೆ ನ್ಯಾಯಾಲಯವು ಪುರಸ್ಕರಿಸಿತು. ನ್ಯಾಯಾಲಯದ ಮುಂದೆ ಗಂಭೀರ ಆರೋಪವನ್ನೂ ಮಾಡಿರುವ ಕಂಗನಾ ‘ಜಾವೇದ್ ಅವರ ಮಾತು ನನ್ನನ್ನು ಆತ್ಮಹತ್ಯೆಗೆ ಪ್ರಚೋದಿಸಿದೆ ಎಂದೂ ಹೇಳಿದ್ದಾರೆ. ಜಾವೇದ್ ಮತ್ತು ಕಂಗನಾ ನಡುವಿನ ವಾಗ್ವಾದವನ್ನೂ ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ

    ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ

    ಪಾಟ್ನಾ: ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಬಲ ಭುಜದ ಮೂಳೆ ಮುರಿದಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಲಾಲು ಪ್ರಸಾದ್ ಯಾದವ್ ಅವರು ನಿನ್ನೆ ಪಾಟ್ನಾದಲ್ಲಿರುವ ತಮ್ಮ ಪತ್ನಿ ರಾಬ್ರಿ ದೇವಿ ಅವರ ನಿವಾಸದಲ್ಲಿ ತಂಗಿದ್ದರು. ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗದೇ ಎಡವಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಭುಜ ಮತ್ತು ಬೆನ್ನಿಗೆ ಪೆಟ್ಟಾಗಿದೆ. ಬಲ ಭುಜದ ಮೂಳೆ ಮುರಿದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ

    ಲಾಲೂ ಪ್ರಸಾದ್ ಅವರನ್ನು MRI ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ ಭುಜದ ಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ಬಳಿಕ ಚಿಕಿತ್ಸೆ ನೀಡಿ ಡಿಶ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ಅವರನ್ನು ಸೆರೆಹಿಡಿಯಲು ಬೆಳಗ್ಗೆಯವರೆಗೂ ಕಾದು ಕುಳಿತಿದ್ದೆವು – ಉಗ್ರರನ್ನು ಗ್ರಾಮಸ್ಥರು ಬಂಧಿಸಿದ ಕಥೆ ಓದಿ

    ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಹಲವು ವರ್ಷಗಳಿಂದ ಮೇವು ಹಗರಣ ಪ್ರಕರಣಗಳಲ್ಲಿ ದೋಷಿಯಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲೂ ಈಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು

    ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು

    ಜೈಪುರ: ಟೈಲರ್ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಹತ್ಯೆಗೈದ ಹಂತಕರ ಮೇಲೆ ಜೈಪುರ ನ್ಯಾಯಾಲಯದ ಬಳಿ ದೊಡ್ಡ ಗುಂಪೊಂದು ಶನಿವಾರ ದಾಳಿ ನಡೆಸಿದೆ.

    ಜೈಪುರ ನ್ಯಾಯಾಲಯದ ಹೊರಗೆ ಗುಂಪೊಂದು ಉದಯಪುರ ಟೈಲರ್ ಹಂತಕರ ಮೇಲೆ ಹಲ್ಲೆ ನಡೆಸಿ, ಬಟ್ಟೆಯನ್ನೆಲ್ಲಾ ಹರಿದು ಹಾಕಿದ್ದಾರೆ. ಪೊಲೀಸರು ತಕ್ಷಣ ಆರೋಪಿಗಳನ್ನು ಪೊಲೀಸ್ ವ್ಯಾನ್‌ಗೆ ಹತ್ತಿಸಿ, ಅವರನ್ನು ರಕ್ಷಿಸಿದ್ದಾರೆ.

    ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಮಂಗಳವಾರ ಇಬ್ಬರು ಪಾತಕಿಗಳು ಭೀಕರವಾಗಿ ಹತ್ಯೆ ನಡೆಸಿ, ಅದರ ವೀಡಿಯೋವನ್ನೂ ಮಾಡಿದ್ದರು. ಬಳಿಕ ಅವರು ಹತ್ಯೆಗೆ ಬಳಸಿದ ಆಯುಧದಿಂದಲೇ ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಯನ್ನೂ ನಡೆಸುವುದಾಗಿ ಬೆದರಿಕೆ ಹಾಕಿದ್ದರು. ಆ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಇದನ್ನೂ ಓದಿ: ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ – 14 ದಿನ ನ್ಯಾಯಾಂಗ ಬಂಧನ

    ವೀಡಿಯೋ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ಬೆಚ್ಚಿ ಬಿದ್ದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಹಂತಕರಾದ ಅಖ್ತಾರಿ ಹಾಗೂ ಮೊಹಮ್ಮದ್‌ನನ್ನು ಪೊಲೀಸರು ಬಂಧಿಸಿದ್ದರು. ಹತ್ಯೆಯಲ್ಲಿ ಭಾಗಿಯಾಗಿದ್ದ ಹಾಗೂ ಸಂಚು ರೂಪಿಸಿದ್ದ ಆರೋಪದ ಮೇಲೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

    Udaipur

    ನಾಲ್ಕೂ ಆರೋಪಿಗಳನ್ನು ಇಂದು ಜೈಪುರದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಆರೋಪಿಗಳ ಮೇಲೆ ಸ್ಥಳದಲ್ಲಿ ನೆರೆದಿದ್ದ ಗುಂಪು ಹಲ್ಲೆ ನಡೆಸಲು ಮುಂದಾಗಿದೆ. ಇದರೊಂದಿಗೆ ಕನ್ಹಯ್ಯ ಹಂತಕರಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಟೈಲರ್‌ ಹಂತಕರಿರೋ ಫೋಟೋ ವೈರಲ್‌ – BJPಗೂ ಹಂತಕರಿಗೂ ಇದ್ಯಾ ನಂಟು?

    Live Tv

  • ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ – 14 ದಿನ ನ್ಯಾಯಾಂಗ ಬಂಧನ

    ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ – 14 ದಿನ ನ್ಯಾಯಾಂಗ ಬಂಧನ

    ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಜಾಮೀನು ಅರ್ಜಿಯನ್ನು ಪಟಿಯಾಲ ಹೈಕೋರ್ಟ್ ಶನಿವಾರ ನಿರಾಕರಿಸಿದೆ ಹಾಗೂ 14 ದಿನಗಳ ನ್ಯಾಯಾಂಗ ಬಂಧನವನ್ನು ನೀಡಿದೆ.

    2018ರಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಹಿನ್ನೆಲೆ ಜುಬೇರ್ ಅವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಬಂಧನದ ಬಳಿಕ ಅವರ ಟ್ವಿಟ್ಟರ್ ಖಾತೆಯಲ್ಲಿ ಹೆಚ್ಚಾಗಿ ಪಾಕಿಸ್ತಾನದ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳ ಖಾತೆಗಳಿಂದ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಟೈಲರ್‌ ಹಂತಕರಿರೋ ಫೋಟೋ ವೈರಲ್‌ – BJPಗೂ ಹಂತಕರಿಗೂ ಇದ್ಯಾ ನಂಟು?

    ಮೊಹಮ್ಮದ್ ಜುಬೇರ್ ಬಂಧನದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಪೋಸ್ಟ್‌ಗಳು ಹಾಗೂ ಹ್ಯಾಶ್‌ಟ್ಯಾಗ್‌ಗಳು ಹರಿದಾಡಿವೆ. ದೆಹಲಿ ಪೊಲೀಸರ ಪ್ರಕಾರ ಜುಬೇರ್ ಅವರಿಗೆ ಬೆಂಬಲಿಸಿ ಟ್ವೀಟ್ ಮಾಡುತ್ತಿರುವ ಹೆಚ್ಚಿನ ಬಳಕೆದಾರರು ಪಾಕಿಸ್ತಾನ, ಯುಎಇ, ಕುವೈತ್‌ಗಳಂತಹ ಮಧ್ಯಪ್ರಾಚ್ಯ ದೇಶದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಣಿಪುರದಲ್ಲಿ ಭೂಕುಸಿತ – 3 ದಿನಗಳಿಂದ 24 ಸಾವು, 38 ಜನ ನಾಪತ್ತೆ

    ಮೊಹಮ್ಮದ್ ಜುಬೇರ್ ಅವರ 4 ದಿನಗಳ ಬಂಧನ ಶನಿವಾರ ಕೊನೆಗೊಂಡ ಬಳಿಕ ದೆಹಲಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಕೋರಿದ್ದಾರೆ. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಎಫ್‌ಐಆರ್‌ನಲ್ಲಿ ಅದಕ್ಕೆ ಸಂಬಂಧಿಸಿದ ಸೆಕ್ಷನ್‌ಗಳನ್ನು ಸೇರಿಸಿದ್ದಾರೆ.

    Live Tv

  • ಪಾಸ್ ಪೋರ್ಟ್ ಗಾಗಿ ಮುಂಬೈ ಹೈಕೋರ್ಟ್ ಮೆಟ್ಟಿಲು ಏರಿದ ಶಾರುಖ್ ಪುತ್ರ

    ಪಾಸ್ ಪೋರ್ಟ್ ಗಾಗಿ ಮುಂಬೈ ಹೈಕೋರ್ಟ್ ಮೆಟ್ಟಿಲು ಏರಿದ ಶಾರುಖ್ ಪುತ್ರ

    ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮುಂಬೈ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಈ ಹಿಂದೆ ಅವರ ಮೇಲೆ ಡ್ರಗ್ಸ್ ಕೇಸ್ ಆರೋಪ ಹೊರಿಸಲಾಗಿತ್ತು. ಅಲ್ಲದೇ, ಜೈಲಿಗೂ ಕಳುಹಿಸಲಾಗಿತ್ತು. ಈ ಸಮಯದಲ್ಲಿ ದೇಶ ಬಿಡದಿರುವಂತೆ ಸೇರಿದಂತೆ ಹಲವು ನಿಬಂಧನೆಗಳನ್ನು ಹಾಕಿ ಜಾಮೀನಿನ ಮೇಲೆ ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಲಾಗಿತ್ತು. ಹಾಗಾಗಿ ಅವರ ಪಾಸ್ ಪೋರ್ಟ್ ಅನ್ನು ಎನ್.ಸಿ.ಬಿ ವಶಪಡಿಸಿಕೊಂಡಿತ್ತು.

    ಇದೀಗ ಆರ್ಯನ್ ಗೆ ಕ್ಲೀನ್ ಚಿಟ್ ನೀಡಲಾಗಿದೆ. ಡ್ರಗ್ಸ್ ಕೇಸ್ ನಲ್ಲಿ ಅವರು ಡ್ರಗ್ಸ್ ಸೇವಿಸಿರಲಿಲ್ಲ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಕೇಸ್ ಕೈ ಬಿಡಲಾಗಿದೆ. ಹಾಗಾಗಿ ವಶಪಡಿಸಿಕೊಂಡಿರುವ ತಮ್ಮ ಪಾಸ್ ಪೋರ್ಟ್ ಅನ್ನು ಮರಳಿ ಕೊಡಿಸುವಂತೆ ಅವರು ಮುಂಬೈ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಅವರು ವಿದೇಶಕ್ಕೆ ತೆರಳಬೇಕಾಗಿದ್ದರಿಂದ ಆದಷ್ಟು ಬೇಗ ಪಾಸ್ ಪೋರ್ಟ್ ಕೊಡಿಸುವಂತೆ ಆರ್ಯನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಅನಾಥ ಮಹಿಳೆಗೆ ಮನೆ ಕಟ್ಟಿಸಿಕೊಟ್ಟ ಕಿಚ್ಚ ಸುದೀಪ್

    ಮುಂಬೈನ ಐಷಾರಾಮಿ ಹಡಗಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಆರ್ಯನ್ ಭಾಗಿಯಾಗಿದ್ದರು ಮತ್ತು ಡ್ರಗ್ಸ್ ಸೇವಿಸಿದ್ದರು ಎನ್ನುವ ಕಾರಣಕ್ಕಾಗಿ 2021 ಅಕ್ಟೋಬರ್ 2 ರಂದು ಬಂಧನವಾಗಿತ್ತು. 25 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೂ ಅವರನ್ನು ಕಳುಹಿಸಲಾಗಿತ್ತು. 25 ದಿನಗಳ ಬಳಿಕೆ ಅವರಿಗೆ ಜಾಮೀನು ಸಿಕ್ಕಿತ್ತು. ನಂತರ ಯಾವುದೇ ಸಾಕ್ಷಿಗಳು ಸಿಗಲಿಲ್ಲ ಅನ್ನುವ ಕಾರಣಕ್ಕಾಗಿ ಕೇಸ್ ಖುಲಾಸೆ ಆಗಿತ್ತು.

    Live Tv

  • ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಘೋರ, ಜಾಮೀನು ರಹಿತ ಅಪರಾಧ – ಹೈಕೋರ್ಟ್

    ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಘೋರ, ಜಾಮೀನು ರಹಿತ ಅಪರಾಧ – ಹೈಕೋರ್ಟ್

    ತಿರುವನಂತಪುರಂ: ದೈಹಿಕವಾಗಿ ಯಾವುದೇ ರೀತಿಯಿಂದ ಹಲ್ಲೆ ನಡೆಸದಿದ್ದರೂ ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅದು ಘೋರ ಹಾಗೂ ಜಾಮೀನು ರಹಿತ ಅಪರಾಧವಾಗುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ.

    ಹಲ್ಲೆ ನಡೆಸದೇ ಇದ್ದರೂ ಕೇರಳ ಆರೋಗ್ಯ ಸೇವಾ ಸಿಬ್ಬಂದಿ ಮತ್ತು ಆರೋಗ್ಯ ಸೇವಾ ಸಂಸ್ಥೆಗಳ (ಹಿಂಸಾಚಾರ ಮತ್ತು ಆಸ್ತಿ ಹಾನಿ ತಡೆ) ಕಾಯ್ದೆ ಅಡಿಯಲ್ಲಿ ಗಂಭೀರ ಜಾಮೀನು ರಹಿತ ಅಪರಾಧವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಸಾಂದರ್ಭಿಕ ಚಿತ್ರ

    ವೈದ್ಯೆಯೊಬ್ಬರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆರೋಪಿಯೊಬ್ಬ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಏಕ ಸದಸ್ಯ ಪೀಠವು ಈ ಆದೇಶ ನೀಡಿದ್ದು ಅರ್ಜಿದಾರರಿಗೆ ಜಾಮೀನು ನಿರಾಕರಿಸಿದೆ. ಆರೋಗ್ಯ ಸೇವೆ ಒದಗಿಸುವವರ ವಿರುದ್ಧದ ಎಲ್ಲಾ ರೀತಿಯ ಹಿಂಸಾಚಾರ ತಡೆಯುವುದು ಶಾಸನದ ಉದ್ದೇಶವಾಗಿದೆ ಎಂದು ಒತ್ತಿ ಹೇಳಿದೆ. ಇದನ್ನೂ ಓದಿ: ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? – ಉದಯಪುರ ಹತ್ಯೆಯ ಮಾಸ್ಟರ್‌ಮೈಂಡ್ ವೀಡಿಯೋ ವೈರಲ್

    ಸಾಂದರ್ಭಿಕ ಚಿತ್ರ

    ಕಾಯ್ದೆಯಲ್ಲಿರುವ ಹಿಂಸೆ ಪದಕ್ಕೆ ಸಾಕಷ್ಟು ವ್ಯಾಪಕತೆ ಇದೆ. ಕಾಯ್ದೆ ರೂಪಿಸಿರುವ ಶಾಸಕಾಂಗದ ಉದ್ದೇಶ ನಿಸ್ಸಂದೇಹವಾಗಿ ಆರೋಗ್ಯ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗೆ ಯಾವುದೇ ಬೆದರಿಕೆ ಅಥವಾ ಅಡ್ಡಿ ಉಂಟು ಮಾಡುವುದನ್ನು ತಡೆಯಬೇಕು ಎಂಬುದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

    ಆರೋಪಿ ವಿರುದ್ಧ IPC ಸೆಕ್ಷನ್ 341 (ಅಕ್ರಮ ಪ್ರತಿಬಂಧಕ್ಕಾಗಿ ದಂಡನೆ), ಸೆಕ್ಷನ್ 353 (ಸಾರ್ವಜನಿಕ ಸೇವಕರ ಕರ್ತವ್ಯವನ್ನು ತಡೆಯಲು ಹಲ್ಲೆ ಮಾಡುವುದು), ಸೆಕ್ಷನ್ 506 (ಕ್ರಿಮಿನಲ್ ಅಪರಾಧಕ್ಕಾಗಿ ದಂಡನೆ) ಹಾಗೂ ಸೆಕ್ಷನ್ 3 ಮತ್ತು 4(1) ಆರೋಗ್ಯ ಆರೈಕೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

    ಅರ್ಜಿದಾರರ ಪರ ವಕೀಲ ಆರ್.ಶ್ರೀಹರಿ ವಾದ ಮಂಡಿಸಿದರು. ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎ.ನೌಶಾದ್ ಪ್ರತಿವಾದಿಯಾಗಿದ್ದರು.

    Live Tv

  • 52 ವರ್ಷಗಳ ಹಿಂದೆ ವಿಚ್ಛೇದನ – ದಂಪತಿಯನ್ನು ಮತ್ತೆ ಒಂದು ಮಾಡಿದ ಅದೇ ಕೋರ್ಟ್‌

    52 ವರ್ಷಗಳ ಹಿಂದೆ ವಿಚ್ಛೇದನ – ದಂಪತಿಯನ್ನು ಮತ್ತೆ ಒಂದು ಮಾಡಿದ ಅದೇ ಕೋರ್ಟ್‌

    ಹುಬ್ಬಳ್ಳಿ: ಯೌವ್ವನದಲ್ಲಿ ನ್ಯಾಯಾಲಯದ ಮೂಲಕ ಬೇರೆಯಾದ ದಂಪತಿಯನ್ನು ಬೇರೊಬ್ಬರಿ 52 ವರ್ಷಗಳ ಬಳಿಕ ಮತ್ತೆ ಅದೇ ನ್ಯಾಯಾಲಯ ಒಂದು ಮಾಡಿದ ಅಪರೂಪದ ಘಟನೆ ಧಾರವಾಡ ಜಿಲ್ಲೆ ಕಲಘಟಗಿಯಲ್ಲಿ ನಡೆದಿದೆ.

    ಕಲಘಟಗಿಯಲ್ಲಿ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್‍ನಲ್ಲಿ ನ್ಯಾಯಧೀಶರಾದ ಜಿ.ಆರ್.ಶೆಟ್ಟರ್ ಅವರು ಈ ಅಪರೂಪದ ರಾಜಿ ಸಂಧಾನ ಮಾಡಿಸಿದ್ದಾರೆ. ಬಸಪ್ಪ ಅಗಡಿ(85) ಹಾಗೂ ಕಲ್ಲವ್ವ ಅಗಡಿ(80) ವೃದ್ಧಾಪ್ಯದಲ್ಲಿ ಒಂದಾದ ದಂಪತಿ. 52 ವರ್ಷದ ಹಿಂದೆ ಪರಸ್ಪರ ಒಪ್ಪಿಗೆ ಮೂಲಕ ಈ ದಂಪತಿ ವಿಚ್ಛೇದನ ಪಡೆದಿದ್ದರು. ಇದನ್ನೂ ಓದಿ: 60 ಕಿ.ಮೀ ಒಳಗಿನ ಎಲ್ಲ ಟೋಲ್ ತೆರವಿಗೆ ಸೂಚಿಸಿದ್ರೂ ದ.ಕನ್ನಡ ಜಿಲ್ಲೆಯಲ್ಲಿದೆ 48 ಕಿ.ಮೀನಲ್ಲಿ 4 ಟೋಲ್

    ಹೀಗಾಗಿ ಪ್ರತಿ ತಿಂಗಳು ಕಲ್ಲವ್ವಳಿಗೆ ಬಸಪ್ಪ ಜೀವನಾಂಶ ನೀಡುತ್ತಿದ್ದರು. ಆದರೆ ಕೆಲ ತಿಂಗಳಿನಿಂದ ಬಸಪ್ಪ ಜೀವನಾಂಶ ಕೊಡುವುದನ್ನು ನಿಲ್ಲಿಸಿದ್ದರು. ಈ ಹಿನ್ನೆಲೆ ಪತಿ ಕಲ್ಲವ್ವ ನ್ಯಾಯಾಲಯದ ಮೊರೆ ಕೇಳಿದ್ದಾಳೆ.

    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸ್ಥಳೀಯ ಹಿರಿಯ ದಿವಾನಿ ನ್ಯಾಯಾಲಯ ಇಬ್ಬರ ಆರೋಗ್ಯ ಮತ್ತು ವಯೋಮಾನದ ದೃಷ್ಟಿಯಿಂದ ರಾಜಿ ಸಂಧಾನ ಮಾಡಿಸಿ ಒಂದು ಮಾಡಿದೆ. ಈ ಸಂಧಾನಕ್ಕೆ ವಕೀಲರು ಸಹ ಸಮ್ಮತಿ ನೀಡಿ ವೃದ್ಧ ದಂಪತಿಯನ್ನು ಒಂದು ಮಾಡಿದ್ದಾರೆ. ಇದನ್ನೂ ಓದಿ:  ಅಗ್ನಿಪಥ್ ಸತ್ಯಾಗ್ರಹದಲ್ಲಿ ಮೈಕ್ ಭಾಷಣಕ್ಕೆ ಬ್ರೇಕ್ ಹಾಕಿದ ಪೊಲೀಸರು 

    Live Tv

  • ಅಜ್ಜಿ ಕುಳಿತ ಆಟೋ ರಿಕ್ಷಾದ ಬಳಿ ಬಂದು ಪ್ರಕರಣ ಇತ್ಯರ್ಥಗೊಳಿಸಿದ ಜಡ್ಜ್

    ಅಜ್ಜಿ ಕುಳಿತ ಆಟೋ ರಿಕ್ಷಾದ ಬಳಿ ಬಂದು ಪ್ರಕರಣ ಇತ್ಯರ್ಥಗೊಳಿಸಿದ ಜಡ್ಜ್

    ಉಡುಪಿ: ಕುಂದಾಪುರ, ಉಡುಪಿ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಿ ಒಂದೇ ದಿನ 30,773 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಈ ವೇಳೆ ರಿಕ್ಷಾದಲ್ಲೇ ಕುಳಿತ್ತಿದ್ದ 81 ವರ್ಷದ ವೃದ್ಧೆಯ ಪ್ರಕರಣವನ್ನು ನ್ಯಾಯಾಧೀಶರು ಆಟೋ ರಿಕ್ಷಾದ ಬಳಿ ತೆರಳಿ ಅಲ್ಲಿಯೇ ಇತ್ಯರ್ಥಗೊಳಿಸಿದ ಪ್ರಸಂಗವೂ ನಡೆಯಿತು.

    ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, 2011ರ ಅಸಲು ದಾವೆ ಪ್ರಕರಣದಲ್ಲಿ ಲೋಕ ಅದಾಲತ್‍ನಲ್ಲಿ ಭಾಗಿಯಾಗಲು ಆಟೋ ರಿಕ್ಷಾದಲ್ಲಿ ಬಂದ ವೃದ್ಧೆ ದೇವಕಿ ಶೆಡ್ತಿ (81) ತಮ್ಮ ಮಗಳಾದ ಜಯಂತಿಯವರಿಗೆ ಜಿ.ಪಿ.ಎ. ಕೊಟ್ಟಿದ್ದರು. ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೇ ಆಟೋದಲ್ಲಿ ಕುಳಿತ್ತಿದ್ದರು. ಆ ಸಂದರ್ಭದಲ್ಲಿ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೀತು ಆರ್.ಎಸ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಸಂಧಾನಕಾರರಾದ ನ್ಯಾಯವಾದಿ ಮಿತೇಶ್ ಶೆಟ್ಟಿ ಹಾಗೂ ಉಭಯ ಕಕ್ಷಿದಾರರ ನ್ಯಾಯವಾದಿಗಳು ದೇವಕಿ ಶೆಡ್ತಿರವರ ಬಳಿ ಬಂದು ಜಿ.ಪಿ.ಎ. ನೀಡಿದರು. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಹಡಗು ಮುಳುಗಡೆ – ತೈಲ ಸೋರಿಕೆ ಆತಂಕದಲ್ಲಿ ದ.ಕ ಜಿಲ್ಲಾಡಳಿತ ಅಲರ್ಟ್

    ಪ್ರಕರಣ ಬಗ್ಗೆ ಸಂಪೂರ್ಣ ಪರಿಶೀಲಿಸಿ ಅನಂತರ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮುಂಬಯಿಯಲ್ಲಿದ್ದ ನಾಲ್ಕು ಜನ ಕಕ್ಷಿದಾರು ಭಾಗಿಯಾದ ಆನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು. ಒಂದೇ ದಿನ 30,773 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು ಇದರಲ್ಲಿ ರಾಜಿಯಾಗಬಲ್ಲ ಅಪರಾಧ ಪ್ರಕರಣ -26, ಚೆಕ್ ಅಮಾನ್ಯ ಪ್ರಕರಣ-225 ಇತ್ಯರ್ಥ ಮಾಡಲಾಯ್ತು. ಇದನ್ನೂ ಓದಿ: ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು

    ಬ್ಯಾಂಕ್/ಹಣ ವಸೂಲಾತಿ ಪ್ರಕರಣ-19, ಎಂ.ವಿ.ಸಿ. ಪ್ರಕರಣ-185, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ-1, ಎಂ.ಎಂಆರ್.ಡಿ. ಆಕ್ಟ್ ಪ್ರಕರಣ-16, ವೈವಾಹಿಕ ಪ್ರಕರಣ-3 ಇತ್ಯರ್ಥ ಮಾಡಲಾಯ್ತು. ಸಿವಿಲ್ ಪ್ರಕರಣ-170, ಇತರ ಕ್ರಿಮಿನಲ್ ಪ್ರಕರಣ- 2,049 ಹಾಗೂ ವ್ಯಾಜ್ಯ ಪೂರ್ವ ದಾವೆ-28,079 ಹೀಗೆ ವಿವಿಧ ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿ 20,50,13,358 ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

    Live Tv

  • ನೂಪುರ್ ಶರ್ಮಾ ಶಿರಚ್ಛೇದನ ವೀಡಿಯೋ ಅಪ್‌ಲೋಡ್ ಪ್ರಕರಣ- ಯುಟ್ಯೂಬರ್‌ಗೆ ಕೋರ್ಟ್ ಜಾಮೀನು

    ನೂಪುರ್ ಶರ್ಮಾ ಶಿರಚ್ಛೇದನ ವೀಡಿಯೋ ಅಪ್‌ಲೋಡ್ ಪ್ರಕರಣ- ಯುಟ್ಯೂಬರ್‌ಗೆ ಕೋರ್ಟ್ ಜಾಮೀನು

    ನವದೆಹಲಿ: ನೂಪುರ್ ಶರ್ಮಾರ ಶಿರಚ್ಛೇದನ ಮಾಡುವಂತೆ ಚಿತ್ರಿಸಲಾಗಿದ್ದ ವೀಡಿಯೋ ಅಪ್‌ಲೋಡ್ ಮಾಡಿ ಜಮ್ಮು ಕಾಶ್ಮೀರ ಪೊಲೀಸರಿಂದ ಬಂಧಿತನಾಗಿದ್ದ ಯೂಟ್ಯೂಬರ್ ಫೈಸಲ್ ವಾನಿಗೆ ಶ್ರೀನಗರ ನ್ಯಾಯಾಲಯ ಜಾಮೀನು ನೀಡಿದೆ.

    ಆರೋಪಿಯ ವಿರುದ್ಧದ ಅಪರಾಧಗಳು ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಗಾಗುವಂತಹದ್ದಲ್ಲ. ಅಲ್ಲದೆ ಆರೋಪಿ ದೇಶದಿಂದ ಪಲಾಯನ ಮಾಡುವ ಸಂದರ್ಭವಾಗಲಿ ಕ್ರಿಮಿನಲ್ ಹಿನ್ನೆಲೆಯಾಗಲಿ ಇಲ್ಲ. ಹಾಗಾಗಿ ಇಂತಹ ಪ್ರಕರಣದಲ್ಲಿ ಜಾಮೀನು ನಿರಾಕರಿಸುವುದು ಅನ್ಯಾಯವಾಗುತ್ತದೆ ಎಂದು ಜಾಮೀನು ನೀಡುವ ವೇಳೆ ಶ್ರೀನಗರದ ಪ್ರಥಮ ದರ್ಜೆ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಅಜಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: RSS ಕಾರ್ಯಕರ್ತರು ಸೇನೆಗೆ ಸೇರೋದ್ರಲ್ಲಿ ತಪ್ಪೇನು: ಸುಧಾಕರ್ ಪ್ರಶ್ನೆ

    court order law

    ಆರೋಪಿ ಕಳೆದ 7 ದಿನಗಳಿಂದ ಪೊಲೀಸ್ ಬಂಧನದಲ್ಲಿದ್ದಾನೆ. ಆತನನ್ನು ಇನ್ನಷ್ಟು ಕಾಲ ಬಂಧನದಲ್ಲಿಡುವುದರಿಂದ ಉಪಯುಕ್ತ ಉದ್ದೇಶ ಈಡೇರುವುದಿಲ್ಲ. ಹಾಗಾಗಿ ಆರೋಪಿಗೆ ಜಾಮೀನು ನಿರಾಕರಿಸುವುದು ಅನ್ಯಾಯವಾಗುತ್ತದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ನನ್ನ ತಾಯಿಯನ್ನು ನೆನಪಿಸಿಕೊಂಡರು ಎಂದು ಕಣ್ಣೀರಿಟ್ಟ ರಾಮದಾಸ್ – ಇದು ಕೌಟುಂಬಿಕ ಸಂಬಂಧ

    ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆಂದು ದೇಶವ್ಯಾಪಿ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದವು. ಇದೇ ವೇಳೆ ಯುಟ್ಯೂಬರ್ ಒಬ್ಬರು ಅವರ ಶಿರಚ್ಛೇದನ ಮಾಡಿರುವಂತೆ ವೀಡಿಯೋ ಮಾಡಿ ಅಪ್‌ಲೋಡ್ ಮಾಡಿದ್ದರು. ಈ ಸಂಬಂಧ ಐಪಿಸಿ ಸೆಕ್ಷನ್ 505(2) (ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಹೇಳಿಕೆ), ಐಪಿಸಿ 506ರ(ಬೆದರಿಕೆ) ಅಡಿ ಆರೋಪಿಯನ್ನು ಬಂಧಿಸಲಾಗಿತ್ತು.

    ಅಪ್‌ಲೋಡ್ ಮಾಡಿದ ಕೂಡಲೇ ವೀಡಿಯೋ ಡಿಲೀಟ್ ಮಾಡಿ ನಂತರ ಕ್ಷಮೆ ಕೋರುವ ಮತ್ತೊಂದು ವೀಡಿಯೋವನ್ನು ಆರೋಪಿ ಹಾಕಿದ್ದ ಎಂದು ವಾನಿ ಪರ ವಕೀಲರು ವಾದಿಸಿದ್ದರು.

    Live Tv

  • ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ-ಕೋರ್ಟ್ ತೀರ್ಪು

    ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ-ಕೋರ್ಟ್ ತೀರ್ಪು

    ಟೋಕಿಯೋ: ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ ಎಂದು ಜಪಾನಿನ ಒಸಾಕಾ ನ್ಯಾಯಾಲಯ ತೀರ್ಪು ನೀಡಿದೆ. ಇದರೊಂದಿಗೆ ಸಲಿಂಗಿಗಳ ವಿವಾಹ ಸಂಬಂಧ ಎಲ್‌ಜಿಬಿಟಿಕ್ಯೂ ಕಾರ್ಯಕರ್ತರಿಗೆ 7 ರಾಷ್ಟ್ರಗಳಲ್ಲಿ ಹಿನ್ನಡೆಯಾಗಿದೆ.

    court order law

    ಸಲಿಂಗ ವಿವಾಹಕ್ಕೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ತಮಗೆ ನ್ಯಾಯ ಕಲ್ಪಿಸಿಕೊಡುವಂತೆ ಮೂರು ಸಲಿಂಗ ದಂಪತಿ ಒಸಾಕಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ವಿಷಯದ ಬಗ್ಗೆ ಜಪಾನ್‌ನಲ್ಲಿ 2ನೇ ವಿಚಾರಣೆ ನಡೆಯಿತು. ಈ ವೇಳೆ ಸಲಿಂಗ ವಿವಾಹವನ್ನು ನಿಷೇಧಿಸುವುದು ಅಸಾಂವಿಧಾನಿಕ ಎನ್ನುವ ಹಕ್ಕನ್ನು ತಿರಸ್ಕರಿಸಿತು. ಜೊತೆಗೆ ನ್ಯಾಯಾಲಯವು ಪ್ರತಿ ದಂಪತಿಗೆ ನೀಡಬೇಕಿದ್ದ ಆರ್ಥಿಕ ಬೇಡಿಕೆಯನ್ನೂ ತಿರಸ್ಕರಿಸಿತು. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

    Marrage

    ಸಪೋರೊ ನ್ಯಾಯಾಲಯವು 2021ರ ಮಾರ್ಚ್ ತಿಂಗಳಲ್ಲಿ ಸಲಿಂಗಿಗಳ ವಿವಾಹವನ್ನು ಅನುಮತಿಸುವುದು ಅಸಂವಿಧಾನಿಕವಾಗಿದೆ ಎಂದು ಹೇಳಿತ್ತು. ಈ ತೀರ್ಪಿನ ಪರವಾಗಿಯೇ ತೀರ್ಪು ಪ್ರಕಟಿಸುವಂತೆ ಜಪಾನ್ ಸರ್ಕಾರದ ಮೇಲೆ ಒತ್ತಡ ತರಲಾಗಿತ್ತು. ಅದರಂತೆ ತೀರ್ಪು ನೀಡಿರುವ ಜಪಾನ್ ಒಸಾಕಾ ನ್ಯಾಯಾಲಯವು ಸಲಿಂಗ ವಿವಾಹ ನಿಷೇಧದ ಪರವಾಗಿ ತೀರ್ಪು ನೀಡಿದೆ. ಇದನ್ನೂ ಓದಿ: ‘ವಿದ್ಯಾಪೀಠ’ದಲ್ಲಿ ಯಾರೆಲ್ಲ ಭಾಗವಹಿಸುತ್ತಿದ್ದಾರೆ? – ಉಚಿತ ಪ್ರವೇಶದ ಕಾರ್ಯಕ್ರಮಕ್ಕೆ ಬನ್ನಿ

    ಈ ತೀರ್ಪು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳಿಗೆ ಗುರಿಯಾಗಿದೆ. ಜೊತೆಗೆ ಸಲಿಂಗ ವಿವಾಹಕ್ಕೆ ಬೆಂಬಲಿಸಿ ಅಭಿಪ್ರಾಯವನ್ನೂ ಸಂಗ್ರಹಿಸಲಾಗುತ್ತಿದೆ. ವಿಚಾರಣೆ ಮುಂದುವರಿದ್ದು, ಈ ವರ್ಷದ ಕೊನೆಯಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ ಎಂದು ಜಪಾನ್‌ನ ಒಸಾಕಾ ನ್ಯಾಯಾಲಯ ತಿಳಿಸಿದೆ.

    Live Tv