ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಮೇ 24 ರಂದು ಅಂದರೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ‘ಮೇಕೆದಾಟು ಪಾದಯಾತ್ರೆ’ ನಡೆಸಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲೂ ಪಾದಯಾತ್ರೆ ಹಮ್ಮಿಕೊಂಡಿದ್ದ ವಿಚಾರ ಹೈಕೋರ್ಟ್ವರೆಗೂ ತಲುಪಿತ್ತು. ಹೈಕೋರ್ಟ್ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಕೊನೆಗೊಳಿಸಲಾಗಿತ್ತು.
ಕೀವ್: ಉಕ್ರೇನ್ ನಾಗರಿಕನನ್ನು ಕೊಂದ ರಷ್ಯಾ ಸೈನಿಕನಿಗೆ ಉಕ್ರೇನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಫೆ.24ರಿಂದ ರಷ್ಯಾದ ಆಕ್ರಮಣದಿಂದ ಉಂಟಾದ ಮೊದಲ ಯುದ್ಧಾಪರಾಧಗಳ ವಿಚಾರಣೆಯಲ್ಲಿ ನಿರಾಯುಧ ನಾಗರಿಕನನ್ನು ಕೊಂದ ರಷ್ಯಾದ ಸೈನಿಕನಿಗೆ ಉಕ್ರೇನಿಯನ್ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿತು. ಇದನ್ನೂ ಓದಿ: ಸ್ಫೋಟಕ ಆಡಿಯೋ ಲೀಕ್ – ತೈವಾನ್ ಮೇಲೆ ಆಕ್ರಮಣಕ್ಕೆ ಚೀನಾ ಯೋಜನೆ
21 ವರ್ಷ ವಯಸ್ಸಿನ ಕಮಾಂಡರ್ ವಾಡಿಮ್ ಶಿಶಿಮರಿನ್, ಫೆ.28 ರಂದು ಈಶಾನ್ಯ ಉಕ್ರೇನಿಯನ್ ಗ್ರಾಮ ಚುಪಾಖಿವ್ಕಾದಲ್ಲಿ 62 ವರ್ಷದ ವ್ಯಕ್ತಿಗೆ ಗುಂಡು ಹಾರಿಸಿ ಕೊಂದ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಸಾಂದರ್ಭಿಕ ಚಿತ್ರ
ಫೆ.24ರಂದು ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿತು. ರಷ್ಯಾದ ಆಕ್ರಮಣ ಮುಂದುವರಿದಿದ್ದು, ಈಗಾಗಲೇ ಉಕ್ರೇನ್‌ನ ಮರಿಯುಪೋಲ್‌ನ್ನು ಸಂಪೂರ್ಣ ವಶಕ್ಕೆ ಪಡೆದಿದೆ. ಈ ಭಾಗದಲ್ಲಿ ಉಕ್ರೇನ್ ಸೈನಿಕರು ರಷ್ಯಾ ಸೈನಿಕರಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ
ಈ ಬಗ್ಗೆ ಸಿಧು ಅವರ ಮಾಧ್ಯಮ ಸಲಹೆಗಾರ ಸುರೇಂದರ್ ದಲ್ಲಾ ಪ್ರತಿಕ್ರಿಯಿಸಿ, ಪಟಿಯಾಲದ ಮುಖ್ಯ ನ್ಯಾಯಾಧೀಶರ ಮುಂದೆ ಸಿಧು ಶರಣಾಗಿದ್ದಾರೆ. ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
ಇಂದು ಬೆಳಗ್ಗೆ ನ್ಯಾಯಾಲಯದ ಮುಂದೆ ಶರಣಾಗಲು ಕೆಲವು ವಾರಗಳ ಸಮಯಬೇಕು ಎಂದು ಸಿಧು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದರು.
Patiala, Punjab | He (Navjot Singh Sidhu) has surrendered himself before Chief Judicial Magistrate. He is under judicial custody. Medical examination and other legal procedures will be adopted: Surinder Dalla, media advisor to Congress leader Navjot Singh Sidhu pic.twitter.com/U13TDDOPju
ಈ ವೇಳೆ ವಕೀಲರು, ಆರೋಗ್ಯ ಸಮಸ್ಯೆಗಳ ಕಾರಣದಿಂದ ತಕ್ಷಣ ಪೊಲೀಸರ ಮುಂದೆ ಶರಣಾಗಲು ಸಾಧ್ಯವಿಲ್ಲ. ವೈದ್ಯಕೀಯ ಸಲಹೆಗಳ ಬಳಿಕ ಸಿಧು ಪೊಲೀಸರ ಮುಂದೆ ಶರಣಾಗಲಿದ್ದಾರೆ ಎಂದು ತಿಳಿಸಿದ್ದರು. ಮನವಿ ಪ್ರತಿಕ್ರಿಯಿಸಿದ ನ್ಯಾಯಪೀಠ, ಇದಕ್ಕೆ ಸಂಬಂಧಿಸಿದ ಪ್ರತ್ಯೇಕ ಔಪಚಾರಿಕ ಅರ್ಜಿ ಸಲ್ಲಿಸಿ. ಆ ಬಳಿಕ ನಾವು ಈ ವಿಚಾರದ ಬಗ್ಗೆ ಪರಿಶೀಲನೆ ನಡೆಸಿ ಆದೇಶ ನೀಡುತ್ತೇವೆ ಎಂದು ಹೇಳಿತ್ತು.
ಗುರುವಾರ ನ್ಯಾ.ಎಂ.ಎಂ.ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ 1988ರ ಪ್ರಕರಣವೊಂದರಲ್ಲಿ ಸಿಧುಗೆ ಒಂದು ವರ್ಷ ಶಿಕ್ಷೆ ವಿಧಿಸಿತ್ತು.
ನವದೆಹಲಿ: ಪೆಗಾಸಸ್ ಮೂಲಕ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನ್ಯಾ.ರವೀಂದ್ರನ್ ನೇತೃತ್ವದ ಸಮಿತಿಗೆ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಹೆಚ್ಚುವರಿ ಕಾಲಾವಕಾಶ ನೀಡಿದೆ. ಇಂದು ಪ್ರಕರಣ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಜೂನ್ 28 ವರೆಗೂ ಸಮಯ ವಿಸ್ತರಿಸಿದೆ.
ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದು ಸಮಿತಿ ತನ್ನ ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಕೆ ಮಾಡಿತು. ಸಮಿತಿಯು 29 ಮೂಬೈಲ್ ಸಾಧನಗಳನ್ನು ತನಿಖೆಗೆ ಒಳಪಡಿಸಿದೆ. ಈ ಪ್ರಕ್ರಿಯೆ ಮುಗಿಸಲು ಹೆಚ್ಚುವರಿ ಸಮಯದ ಅವಶ್ಯಕತೆ ಇದೆ. ಹೀಗಾಗಿ ಸಮಯ ವಿಸ್ತರಿಸಬೇಕು ಎಂದು ಸಮಿತಿ ಪರ ವಕೀಲರು ಮನವಿ ಮಾಡಿದರು. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ
ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ತಾಂತ್ರಿಕ ವರದಿ ಪಡೆದ ಬಳಿಕ ನ್ಯಾಯಾಧೀಶರು ತಮ್ಮ ಅಭಿಪ್ರಾಯವನ್ನು ಕೂಡಾ ತಿಳಿಸಬೇಕು, ಅದಕ್ಕೆ ಸಮಯ ಬೇಕಾಗಬಹುದು. ಹೀಗಾಗಿ ಸಮಯ ವಿಸ್ತರಿಸಲಾಗುತ್ತಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ ನಾಲ್ಕು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳು ಅಂತ್ಯವಾಗಬೇಕು. ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದ ಕೋರ್ಟ್ ವಿಚಾರಣೆ ಮುಂದೂಡಿತು.
ಹಗರಣದ ತನಿಖೆಗಾಗಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸಿತ್ತು. ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಮತ್ತು ಅಲೋಕ್ ಜೋಶಿ(ಮಾಜಿ IPS ಅಧಿಕಾರಿ) ಮತ್ತು ಡಾ.ಸಂದೀಪ್ ಒಬೆರಾಯ್, ಉಪ ಸಮಿತಿಯ ಅಧ್ಯಕ್ಷರು (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಕಮಿಟಿ) ರನ್ನು ಸಮಿತಿ ಒಳಗೊಂಡಿದೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು
ಏನಿದು ಪ್ರಕರಣ?
2017ರಲ್ಲಿ 2 ಶತಕೋಟಿ ಡಾಲರ್ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಖರೀದಿ ಸಂಬಂಧ ಭಾರತ ಮತ್ತು ಇಸ್ರೇಲ್ ಮಧ್ಯೆ ಒಪ್ಪಂದ ನಡೆದಿತ್ತು. ಈ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್ ತಂತ್ರಾಂಶವನ್ನೂ ಭಾರತ ಖರೀದಿಸಿದೆ ಎಂಬ ಆರೋಪ ಬಂದಿದೆ.
ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್ ಸಾಫ್ಟ್‌ವೇರ್ ಅನ್ನು ಬಳಸುತ್ತಿವೆ. ಪೆಗಾಸಸ್ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂದು ಪತ್ರಕರ್ತರು, ರಾಜಕೀಯ ನಾಯಕರು ದೂರಿದ್ದರು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಸರ್ಕಾರ ಆರೋಪಗಳನ್ನು ತಳ್ಳಿ ಹಾಕಿತ್ತು.
ಲಕ್ನೋ: ಉತ್ತರಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವರದಿ ನ್ಯಾಯಾಲಯಕ್ಕೆ ಸಲ್ಲುವ ಮೊದಲೇ ಸೋರಿಕೆಯಾಗಿರುವ ಕುರಿತಂತೆ ವಾರಣಾಸಿ ನ್ಯಾಯಾಲಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಉನ್ನತ ಅಧಿಕಾರಿ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.
ನ್ಯಾಯಾಲಯ ಜ್ಞಾನವಾಪಿ ಮಸೀದಿಯ ವರದಿ ಸಲ್ಲಿಸಲು 2 ದಿನಗಳ ಕಾಲಾವಕಾಶ ನೀಡಿದೆ. ವರದಿ ಸಲ್ಲಿಕೆಗೂ ಮುನ್ನವೇ ಮಾಧ್ಯಮಗಳಿಗೆ ಚಿತ್ರೀಕರಣದ ಸಂಗತಿಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಅಡ್ವೋಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್
ಈ ಹಿಂದೆ ನ್ಯಾಯಾಲಯ ಮೇ 17ರ ಒಳಗಾಗಿ ಸಮೀಕ್ಷಾ ವರದಿಗಳನ್ನು ನೀಡಬೇಕೆಂದು ಆದೇಶ ನೀಡಿತ್ತು. ಇದೀಗ ವರದಿ ಸಲ್ಲಿಸಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ವರದಿ ಸೋರಿಕೆಯಲ್ಲಿ ಪಾತ್ರವಹಿಸಿದ್ದ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಸಹಾಯಕ ವಕೀಲ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ
ಅಜಯ್ ಮಿಶ್ರಾ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ. ಈ ಹಿಂದೆ ಮಿಶ್ರಾ ಅವರನ್ನು ಅಡ್ವೋಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕೆಂದು ಮಸೀದಿ ಆಡಳಿತ ಮಂಡಳಿಯ ವಕೀಲರು ಕೋರಿದ್ದರು. ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದಲ್ಲದೇ ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಹಾಗೂ ಸಹಾಯಕ ಕಮಿಷನರ್‌ಗಳನ್ನು ಕೋರ್ಟ್ ನೇಮಕ ಮಾಡಿತ್ತು.
ಪಾಟ್ನಾ: ದೇಶದಲ್ಲಿ ನ್ಯಾಯದಾನ ವಿಳಂಬಕ್ಕೆ ಇದು ಒಂದು ಉದಾಹರಣೆ. ನಾಲ್ಕು ತಲೆಮಾರುಗಳ ಸುದೀರ್ಘ ನಿರೀಕ್ಷಣೆ, ಲೆಕ್ಕವಿಲ್ಲದಷ್ಟು ವಿಚಾರಣೆ. ಎಷ್ಟೋ ವಾದ-ಪ್ರತಿವಾದಗಳ ಭಾರತದ ಅತ್ಯಂತ ಹಳೆಯ ಪ್ರಕರಣ ಎಂದು ಭಾವಿಸಲಾದ ಒಂದು ಭೂವಿವಾದದ ತೀರ್ಪು ಬರೋಬ್ಬರಿ 108 ವರ್ಷದ ಬಳಿಕ ಹೊರಬಿದ್ದಿದೆ.
ಬಿಹಾರದ ಭೋಜ್‍ಪುರಿ ಜಿಲ್ಲಾ ಕೋರ್ಟ್ ಮೇ 11 ರಂದು ತೀರ್ಪು ನೀಡಿದೆ. ಕೊಯಿಲ್‍ವಾರ್ ಗ್ರಾಮದ ದರ್ಬಾರಿ ಸಿಂಗ್ ಎಂಬುವವರು ಅಜಾರ್ ಖಾನ್ ವಿರುದ್ಧ 1914ರಲ್ಲಿ ಆರಾ ಸಿವಿಲ್ ಕೋರ್ಟ್ ದಾಖಲಿಸಿದ್ದರು. ಈವರೆಗೂ ಎರಡು ಕುಟುಂಬಗಳು ರಾಜಿಗೆ ಮುಂದಾಗಲಿಲ್ಲ. ಈ ವಿವಾದದ ತೀರ್ಪು ಇದೀಗ ಹೊರಬಿದ್ದಿದೆ.
ತೀರ್ಪಿನ ಪರಿಣಾಮ 91 ವರ್ಷದ ಸರ್ಕಾರದ ವಶದಲ್ಲಿದ್ದ 3 ಎಕರೆ ಭೂಮಿ ಈಗ ದರ್ಬಾರಿ ಸಿಂಗ್ ಕುಟುಂಬದ ನಾಲ್ಕನೇ ತಲೆಮಾರಿನ ವ್ಯಕ್ತಿಗೆ ಹಸ್ತಾಂತರ ಆಗಲಿದೆ
ಕೋಯಿಲ್‍ವಾರ್ ಗ್ರಾಮದಲ್ಲಿ ಈಗ ಒಂದು ಎಕರೆ ಭೂಮಿ ಬೆಲೆ 5 ಕೋಟಿ ರೂಪಾಯಿ. ಹೀಗಾಗಿ ಸೋತವರು ಹೈಕೋರ್ಟ್, ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಂಭವವೂ ಇದೆ.
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ಒಟ್ಟು 8 ಮಂದಿಗೆ ಜಾಮೀನು ನೀಡಿದೆ.
ಹುಬ್ಬಳ್ಳಿಯ 4ನೇ ಹುಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿಗಳೆಂಬ ಕಾರಣಕ್ಕೆ ಕೋರ್ಟ್ ಬೇಲ್ ಕೊಟ್ಟಿದೆ.
ಸಮೀರ್ ಪಂತೋಜಿ, ಮೊಹಮ್ಮದ್ ಶಾದಿಕ್ ಕಾಂಚಗಾರ, ಅನ್ವರ್ ಮೊಗರೇ, ಮಲಿಕ್ ರಿಹಾನ ಖಾನ್ ಸೂರ್, ಮೊಹಮ್ಮದ್ ಮುದಸಿರ್ ಅಲಿಯಾಸ್ ಬಬಲು, ನಜಿರ್ ಅಹಮ್ಮದ್, ಹೊನ್ನಯಲ್ ಇಮ್ಮತಿಯಾಜ್ ಹಾಗೂ ಅಹಮ್ಮದ್ ಗದಗವಾಲೆಗೆ ಜೈಲಿನಿಂದ ಮುಕ್ತರಾಗಿದ್ದಾರೆ. ಇದನ್ನೂ ಓದಿ: ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ
ಓರ್ವನಿಗೆ ವೈದ್ಯಕೀಯ ಗ್ರೌಂಡ್ ಮೇಲೆ ಬೇಲ್ ಕೊಟ್ಟರೆ, ಇನ್ನೊಬ್ಬನಿಗೆ ಚಾರ್ಜ್ ರ್ಶೀಟ್ ಆಗದ ಹಿನ್ನೆಲೆಯಲ್ಲಿ ಬೇಲ್ ನೀಡಲಾಗಿದೆ. ಒಟ್ಟಿನಲ್ಲಿ ವಿಜಯಪುರ ಮತ್ತು ಬೀದರ್ ಜೈಲಿನಲ್ಲಿದ್ದ ಒಟ್ಟು 8 ಮಂದಿ ಪುಂಡರು ಜೈಲಿನಿಂದ ಹೊರಬಂದರು.
ಹೈದರಾಬಾದ್: ಈಗಾಗಲೇ ಬಾಬರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಇದು ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬಹುದು ಎಂದು ತಿಳಿಸಿದ್ದಾರೆ.
1947, ಆಗಸ್ಟ್ 15ರ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವ ಯಾವುದೇ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು 1991ರ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ. ಈ ಕಾಯ್ದೆಯಡಿ ಯೋಗಿ ಸರ್ಕಾರವು ಈ ಜನರ ವಿರುದ್ಧ ತಕ್ಷಣವೇ ಎಫ್ಐಆರ್ ಅನ್ನು ದಾಖಲಿಸಬೇಕು. ನ್ಯಾಯಾಲಯದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾದರೆ, ಅವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಓವೈಸಿ ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್
ನ್ಯಾಯಾಲಯದ ಆದೇಶವು, ಪೂಜಾ ಸ್ಥಳಗಳ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಬಾಬರಿ ಮಸೀದಿ ಹಕ್ಕು ವಿವಾದದಲ್ಲಿ ನೀಡಲಾದ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 15 ಮತ್ತು ಜನವರಿ 26 ರಂದು ಎಲ್ಲಾ ಮದರಸಾಗಳು ದೇಶಪ್ರೇಮದ ಬಗ್ಗೆ ಮಾತನಾಡುತ್ತವೆ. ಮದರಸಾಗಳಲ್ಲಿ ದೇಶಪ್ರೇಮ ಕಲಿಸಲಾಗುತ್ತಿದೆ. ನೀವು ಅವರನ್ನು ಅನುಮಾನದಿಂದ ನೋಡುತ್ತೀರಿ, ಅದಕ್ಕಾಗಿಯೇ ನೀವು ಅಂತಹ ಕಾನೂನುಗಳನ್ನು ಮಾಡುತ್ತಿದ್ದೀರಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್
ಯೋಗಿ ಆದಿತ್ಯನಾಥ್, ಬಿಜೆಪಿಯವರು ನನಗೆ ದೇಶಭಕ್ತಿಯ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟ ನಡೆದಾಗ ಸಂಘಪರಿವಾರ ಇರಲಿಲ್ಲ. ಈ ಮದರಸಾಗಳು ಬ್ರಿಟಿಷರ ವಿರುದ್ಧ ಹೋರಾಡಿದ್ದವು ಎಂದು ತಿರುಗೇಟು ನೀಡಿದ್ದಾರೆ.
ಡೆಹ್ರಾಡೂನ್: ಮಗ ಮತ್ತು ಸೊಸೆ ಮೊಮ್ಮಗುವನ್ನು ನೀಡಲು ನಿರಾಕರಿಸಿದ್ದರಿಂದ ತಾನು ಮಾನಸಿಕ ಸಂಕಟವನ್ನು ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ನೀಡುವಂತೆ ಮಹಿಳೆಯೊಬ್ಬಳು ಇದೇ ಮೊದಲ ಬಾರಿಗೆ ಹರಿದ್ವಾರದ ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಸದ್ಯ ಈ ವಿಚಾರವಾಗಿ ಮಗ ಮತ್ತು ಸೊಸೆ ವಿರುದ್ಧ 5 ಕೋಟಿ ರೂ.ಗಳ ಮೊಕದ್ದಮೆ ಹೂಡಿ, ವಕೀಲ ಎ.ಕೆ. ಶ್ರೀವಾಸ್ತವ್ ಮೂಲಕ ಮಹಿಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತನ್ನ ಮಗನ ವಿದ್ಯಾಭ್ಯಾಸಕ್ಕೆ ಸಾಕಷ್ಟು ಹಣ ಖರ್ಚು ಮಾಡಿ ಉತ್ತಮ ಪೈಲಟ್ ಮಾಡಿದ್ದೇನೆ. 2016ರಲ್ಲಿ ಭಾರೀ ಖರ್ಚು ಮಾಡಿ ತನ್ನ ಮಗನ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದೇನೆ. ಅಲ್ಲದೇ ನವದಂಪತಿಯನ್ನು ಹನಿಮೂನ್‍ಗೆ ನನ್ನ ಸ್ವಂತ ಹಣದಿಂದ ಥೈಲ್ಯಾಂಡ್‍ಗೆ ಕಳುಹಿಸಿದ್ದೇನೆ ಎಂದು ಮಹಿಳೆ ತನ್ನ ಅರ್ಜಿಯಲ್ಲಿ ತಿಳಿಸಿದ್ದಾರೆ.
ಮದುವೆಯ ನಂತರ ನನ್ನ ಸೊಸೆ ಮಗನನ್ನು ಹೈದರಾಬಾದ್‍ಗೆ ಶಿಫ್ಟ್ ಆಗೋಣಾ ಎಂದು ಒತ್ತಾಯಿಸಿದಳು. ಅಂದಿನಿಂದ ಮಗ, ಸೊಸೆ ನಮ್ಮೊಂದಿಗೆ ಮಾತನಾಡುತ್ತಿಲ್ಲ. ಅಲ್ಲದೇ ನನ್ನ ಸೊಸೆಯ ಕುಟುಂಬದ ಜವಾಬ್ದಾರಿಯನ್ನು ನನ್ನ ಮಗನ ಸಂಪೂರ್ಣ ಸಂಬಳದಲ್ಲಿ ನಡೆಸಲಾಗುತ್ತಿದೆ. ಪ್ರತಿ ನಿರ್ಧಾರ ತೆಗೆದುಕೊಳ್ಳಬೇಕಾದರೂ ಮಗ ಹೆಂಡತಿಯ ಮಾತನ್ನು ಕೇಳುತ್ತಾನೆ ಮತ್ತು ಆಕೆಯನ್ನೇ ಬೆಂಬಲಿಸುತ್ತಾನೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಅಂಧ ವ್ಯಕ್ತಿ ಮಗಳ ಕನಸ್ಸನ್ನು ಕೇಳಿ ಮೋದಿ ಭಾವುಕ – ವೀಡಿಯೋ ವೈರಲ್
ಹುಬ್ಬಳ್ಳಿ: ನಗರದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಮೌಲ್ವಿ ವಾಸೀಂ ಪಠಾಣ್‍ನನ್ನು ಇಂದು ಪೊಲೀಸರು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ.
ಮೌಲ್ವಿಯ ಪೊಲೀಸ್ ಕಸ್ಟಡಿ ಇಂದಿಗೆ (ಬುಧವಾರ) ಅಂತ್ಯವಾದ ಹಿನ್ನೆಲೆ ಆತನನ್ನು ಪೊಲೀಸರು ಹುಬ್ಬಳ್ಳಿಯ 4ನೇ ಹೆಚ್ಚುವರಿ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ. ಖಾಕಿ ಪಡೆಯು ಆತನನ್ನ 11 ಗಂಟೆಗೆ ಕೋರ್ಟ್‍ಗೆ ಕರೆತರಲಿದೆ. ಈಚೆಗೆ ಹಳೇ ಹುಬ್ಬಳ್ಳಿ ಪೊಲೀಸರು ಏ.21ರಂದು ಈತನನ್ನು ಕೋರ್ಟ್‍ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯವು ವಿಚಾರಣೆಗಾಗಿ 5 ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು. ಇದನ್ನೂ ಓದಿ: ಪತ್ನಿ ಸಂಬಳ ನೀಡದಿದ್ದಕ್ಕೆ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿ ಮೇಲೆ ಪತಿಯಿಂದ ಹಲ್ಲೆ
ಪೊಲೀಸರು ವಾಸೀಂ ಮತ್ತು ಆತನ ಸಹಚರರನ್ನೂ ಮತ್ತೆ 5 ದಿನ ಕಸ್ಟಡಿಗೆ ಕೇಳಲಿದ್ದಾರೆ. ಆರೋಪಿ ವಾಸೀಂ ಪಠಾಣ್, ಈ ಹಿಂದೆ ಹುಬ್ಬಳ್ಳಿ ಗಲಭೆಗೆ ಸಂಬಂಧಪಟ್ಟಂತೆ ಪ್ರಚೋದನಾಕರಿ ವೀಡಿಯೋ ರಿಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದ. ವಾಸೀಂ ವೀಡಿಯೋ ರಿಲೀಸ್ ಮಾಡುತ್ತಿದ್ದಂತೆ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಇನ್ಸ್‌ಪೆಕ್ಟರ್ ಜಗದೀಶ್ ಹಂಚಿನಾಳ ತಂಡವು ಕಾರ್ಯಾಚರಣೆ ನಡೆಸಿ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿ ಕರೆತರಲಾಗಿತ್ತು. ಇದನ್ನೂ ಓದಿ:ರಥೋತ್ಸವದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಕ್ಕಳು ಸೇರಿ 11 ಮಂದಿ ದುರ್ಮರಣ