Tag: court

  • ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಗೆಲುವು – ಕೋರ್ಟ್‌ ಮೊರೆ ಹೋಗಲು ಮುಂದಾದ ಕಾಂಗ್ರೆಸ್‌

    ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಗೆಲುವು – ಕೋರ್ಟ್‌ ಮೊರೆ ಹೋಗಲು ಮುಂದಾದ ಕಾಂಗ್ರೆಸ್‌

    ಬೆಂಗಳೂರು: ಚಿಕ್ಕಮಗಳೂರು ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸದಂತೆ ಕಾಂಗ್ರೆಸ್‌ ಕೋರ್ಟ್‌ ಮೊರೆ ಹೋಗಲು ಮುಂದಾಗಿದೆ.

    ಇಂದು ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಅ‍ಭ್ಯರ್ಥಿ ಪ್ರಾಣೇಶ್‌ ಅವರು 6 ಮತಗಳ ಅಂತರದಿಂದ ಕಾಂಗ್ರೆಸ್ಸಿನ ಗಾಯತ್ರಿ ಶಾಂತೇಗೌಡ ಅವರನ್ನು ಸೋಲಿಸಿದ್ದಾರೆ. 9 ಮಂದಿ ನಾಮನಿರ್ದೇಶನ ಸದಸ್ಯರ ಬೆಂಬಲದಿಂದ ಬಿಜೆಪಿ ಅಭ್ಯರ್ಥಿ ಜಯಗಳಿಸಿದ ಹಿನ್ನೆಲೆಯಲ್ಲಿ ಫಲಿತಾಂಶ ತಡೆ ಹಿಡಿಯಬೇಕೆಂದು ಕಾಂಗ್ರೆಸ್‌ ಆಗ್ರಹಿಸಿದೆ.

    ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಗೆ ಮಾಜಿ ಸಿಎಂ ಸಿದ್ದರಾಮಯ್ಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕರೆ ಮಾಡಿ ಕೂಡಲೇ ನಾಮಿನೇಟೆಡ್ ಸದಸ್ಯರ ವೋಟು ಅಸಿಂಧುಗೊಳಿಸಬೇಕು ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

    ಅಷ್ಟೇ ಅಲ್ಲದೇ ಚಿಕ್ಕಮಗಳೂರು ಫಲಿತಾಂಶ ಪೆಂಡಿಂಗ್ ಇಡುವಂತೆ ರಾಜ್ಯ ಚುನಾವಣಾ ಆಯುಕ್ತರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ: ಡಿಕೆಶಿ

    ಕಾಂಗ್ರೆಸ್‌ ವಾದ ಏನು?
    6 ಮತದ ಅಂತರದಲ್ಲಿ ಬಿಜೆಪಿ ಗೆದ್ದುಕೊಂಡಿದೆ. ಇಲ್ಲಿ 9 ಮಂದಿ ನಾಮಿನೇಟ್ ಸದಸ್ಯರಿದ್ದಾರೆ. ನಾಮಿನೇಟ್ ಸದಸ್ಯರ ವಿಚಾರ ಕೋರ್ಟ್‌ನಲ್ಲಿ ಇತ್ಯರ್ಥವಾಗಿಲ್ಲ. ಹೀಗಾಗಿ ಈ ಸದಸ್ಯರ ವೋಟು ಅಸಿಂಧುಗೊಳಿಸಿ ಈಗಲೇ ಗೆಲುವನ್ನು ಘೋಷಿಸಬಾರದು ಎನ್ನುವುದು ಕಾಂಗ್ರೆಸ್‌ ವಾದ.

    ಚುನಾವಣೆಗೆ ನೊಂದಣಿಯಾಗಿದ್ದ 2,417 ಮತದಾರರ ಪೈಕಿ 7 ಮಂದಿ ಗೈರಾಗಿದ್ದರು. ಚಲಾವಣೆಯಾದ 2,410 ಮತಗಳ ಪೈಕಿ 39 ಮತಗಳನ್ನು ಅಸಿಂಧುಗೊಳಿಸಲಾಗಿದೆ. ಹೀಗಾಗಿ ಗೆಲುವಿಗೆ 1,186 ಮತಗಳ ಅಗತ್ಯವಿತ್ತು. ಬಿಜೆಪಿಯ ಎಂ.ಕೆ.ಪ್ರಾಣೇಶ್ 1,188 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದಿದ್ದಾರೆ.

  • WFH ವೇಳೆ ಮೂಳೆ ಮುರಿತ – ಕೊನೆಗೂ ಕೋರ್ಟ್ ಮೊರೆ ಹೋಗಿ ವಿಮೆ ಪಡೆದ ಉದ್ಯೋಗಿ

    WFH ವೇಳೆ ಮೂಳೆ ಮುರಿತ – ಕೊನೆಗೂ ಕೋರ್ಟ್ ಮೊರೆ ಹೋಗಿ ವಿಮೆ ಪಡೆದ ಉದ್ಯೋಗಿ

    – ಉದ್ಯೋಗಿ ಕೆಲಸಕ್ಕೆ ಹೋಗುವಾಗ ಅಪಘಾತ ನಡೆದಿಲ್ಲ
    – ಹಾಸಿಗೆಯಿದ್ದ ಜಾರಿಬಿದ್ದಿದ್ದಕ್ಕೆ ವಿಮೆ ಕೊಡಲು ಸಾಧ್ಯವಿಲ್ಲ ಎಂದಿದ್ದ ಕಂಪನಿ
    – ವಿಮಾ ಕಂಪನಿಯ ವಾದ ತಿರಸ್ಕರಿಸಿದ ಕೋರ್ಟ್

    ಬರ್ಲಿನ್: ವರ್ಕ್ ಫ್ರಮ್ ಹೋಮ್( work from home) ಮೂಲಕ ಕೆಲಸ ಮಾಡುತ್ತಿದ್ದಾಗ ಬೆನ್ನು ಮೂಳೆ ಮುರಿದುಕೊಂಡ ಉದ್ಯೋಗಿಗೆ ವಿಮೆ ನೀಡಬೇಕೆಂದು ಜರ್ಮನಿ ಕೋರ್ಟ್ ಮಹತ್ವದ ಆದೇಶ ನೀಡಿದೆ.

    ಕೆಲಸ ಮಾಡುತ್ತಿದ್ದಾಗ ಅಚಾನಕ್ಕಾಗಿ ಕೆಳಗೆ ಬಿದ್ದು, ಬೆನ್ನು ಮೂಳೆ ಮುರಿದುಕೊಂಡ ಉದ್ಯೋಗಿಯು ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪರಿಹಾರ ನೀಡಲು ನಿರಾಕರಿಸಿದ ವಿಮಾ ಕಂಪನಿಗೆ ಕೋರ್ಟ್ ಖಡಕ್ ಸೂಚನೆಯನ್ನು ನೀಡಿ ಪರಿಹಾರ ನೀಡುವಂತೆ ಆದೇಶಿಸಿದೆ. ಇದನ್ನೂ ಓದಿ: ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ

    ನಡೆದಿದ್ದೇನು?
    ಕೋವಿಡ್ ಲಾಕ್ ಡೌನ್ ಸಮಯದಲ್ಲಿ ವರ್ಕ್ ಫ್ರಮ್ ಹೋಮ್‍ನಲ್ಲಿದ್ದ ಉದ್ಯೋಗಿಯೊಬ್ಬರು ಹಾಸಿಗೆಯಿಂದ ಎದ್ದು ಕಂಪ್ಯೂಟರ್ ಇರುವ ಮೇಜಿನ ಬಳಿಗೆ ಹೋಗುವಾಗ ಜಾರಿ ಬಿದ್ದಿದ್ದರು. ಇದರಿಂದ ಉದ್ಯೋಗಿಯ ಬೆನ್ನುಹುರಿ ಮುರಿದಿತ್ತು. ಉದ್ಯೋಗಿ ಕೆಲಸಕ್ಕೆ ಹೋಗುವಾಗ ಅಪಘಾತ ನಡೆದಿಲ್ಲ ಎಂಬ ಕಾರಣವನ್ನು ನೀಡಿ ವಿಮಾ ಕಂಪನಿ ಪರಿಹಾರ ನೀಡಲು ನಿರಾಕರಿಸಿತ್ತು. ಇದನ್ನೂ ಓದಿ:  ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ವಿಮಾ ಕಂಪನಿಯ ನಿರ್ಧಾರದಿಂದ ಬೇಸತ್ತಿದ್ದ ಉದ್ಯೋಗಿ ಕೋರ್ಟ್‍ನಲ್ಲಿ ಪ್ರಶ್ನೆ ಮಾಡಿದ್ದರು. ಆದರೆ ಜರ್ಮನಿಯ ಎರಡು ಕೆಳಹಂತದ ನ್ಯಾಯಾಲಯಗಳು ಉದ್ಯೋಗಿಯ ಹಕ್ಕನ್ನು ತಿರಸ್ಕರಿಸಿದ್ದವು. ಆದರೆ ಈಗ ಸಾಮಾಜಿಕ ಭದ್ರತಾ ವ್ಯವಹಾರಗಳ ಫೆಡರಲ್ ನ್ಯಾಯಾಲಯವು ಉದ್ಯೋಗಿಯ ಪರವಾಗಿ ತೀರ್ಪು ನೀಡಿರುವುದರಿಂದ ಈಗ ವಿಶ್ವದೆಲ್ಲಡೆ ಸುದ್ದಿಯಾಗಿದೆ. ಇದನ್ನೂ ಓದಿ: ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ: ಮಠಾಧೀಶರಿಗೆ ವಿದ್ಯಾರ್ಥಿನಿ ಸವಾಲು

    ಕೋರ್ಟ್ ಹೇಳಿದ್ದೇನು?
    ಫೆಡರಲ್ ನ್ಯಾಯಾಲಯದ ಪ್ರಕಾರ, ವರ್ಕ್ ಫ್ರಮ್ ವೇಳೆ ಹಾಸಿಗೆಯಿಂದ ಕೆಲಸಕ್ಕೆ ಹೋಗುವುದನ್ನು ವಿಮೆಯ ವ್ಯಾಪ್ತಿಯೊಳಗೆ ಬರಲಿದೆ. ಕೆಲಸದ ವೇಳೆ ಉದ್ಯೋಗಿ ಹಾಸಿಗೆಯಿಂದ ಉಪಾಹಾರ ಸೇವಿಸದೇ ಟೇಬಲ್ ಮೇಲಿದ್ದ ಕಂಪ್ಯೂಟರ್ ಕಡೆಗೆ ಹೋಗುತ್ತಿದ್ದಾಗ ಉದ್ಯೋಗಿ ಗಾಯಗೊಂಡಿದ್ದಾನೆ. ಆದ್ದರಿಂದ ವಿಮೆ ಕಂಪನಿ ಉದ್ಯೋಗಿಗೆ ಪರಿಹಾರ ಪಾವತಿಸಬೇಕೆಂದು ತೀರ್ಪು ನೀಡಿದೆ. ಇದನ್ನೂ ಓದಿ: ಪಾಕ್‍ನೊಂದಿಗೆ ಮಾತುಕತೆ ಇಲ್ಲದೇ ಉಗ್ರವಾದ ಅಂತ್ಯ ಅಸಾಧ್ಯವಾಗಿದೆ: ಫಾರೂಕ್ ಅಬ್ದುಲ್ಲಾ

    ಜರ್ಮನ್ ಫೆಡರಲ್ ಕೋರ್ಟ್ ಉದ್ಯೋಗಿಯ ಪರವಾಗಿ ತೀರ್ಪು ನೀಡುವಾಗ, ಉದ್ಯೋಗಿ ಕೆಲಸ ಮಾಡುವ ಸ್ಥಳದಲ್ಲಿ ಟೆಲಿವರ್ಕಿಂಗ್ಅನ್ನು ಸಹ ಕಚೇರಿಯ ಎಂದು ಪರಿಗಣಿಸಲಾಗುತ್ತದೆ. ಟೆಲಿವರ್ಕಿಂಗ್ ಅಂದರೆ ಮನೆಯಿಂದ ಕೆಲಸ ಮಾಡುವುದಕ್ಕೆ ಕಂಪನಿ ನೀಡಿದ ಒಪ್ಪಿಗೆಯಾಗಿರುತ್ತದೆ. ಈ ವೇಳೆ ನಡೆದ ಈ ಘಟನೆಯ ಅಪಘಾತದ ವ್ಯಾಪ್ತಿಯಲ್ಲೇ ಬರುತ್ತದೆ. ಹೀಗಾಗಿ ಉದ್ಯೋಗಿ ವಿಮಾ ಪ್ರಯೋಜನವನ್ನು ಪಡೆಯಬೇಕು ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

  • ಪತ್ನಿಯನ್ನು ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ – ಎರಡು ಲಕ್ಷ ದಂಡ

    ಪತ್ನಿಯನ್ನು ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ – ಎರಡು ಲಕ್ಷ ದಂಡ

    ಚಾಮರಾಜನಗರ: ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದ್ದು, ಎರಡು ಲಕ್ಷ ರೂ. ದಂಡ ವಿಧಿಸಿದೆ.

    HUSBAND WIFE FIGHT

    ಉತ್ತುವಳ್ಳಿ ಗ್ರಾಮದ ಮಂಜು ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಮದ್ಯ ವ್ಯಸನಿಯಾಗಿದ್ದ ಈತ ಪ್ರತಿದಿನ ಕುಡಿದು ಬಂದು ಪತ್ನಿ ಚಿನ್ನತಾಯಮ್ಮಳೊಂದಿಗೆ ಗಲಾಟೆ ಮಾಡುತ್ತಿದ್ದ. ಕುಡಿತದ ಬಗ್ಗೆ ಪ್ರಶ್ನಿಸಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಈ ಘಟನೆಯು 2017 ರ ಅಕ್ಟೋಬರ್ 26 ರಂದು ರಾತ್ರಿ ನಡೆದಿದ್ದು, ಚಾಮರಾಜನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ 373 ಪಾಸಿಟಿವ್, 4 ಸಾವು – 29 ಜಿಲ್ಲೆಗಳಲ್ಲಿ ಶೂನ್ಯ ಮರಣ

    ಈ ಪ್ರಕರಣದ ಹಿನ್ನೆಲೆ ಇಂದು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಲೋಕಪ್ಪ, ಆರೋಪಿಗೆ ಜೀವಾವಧಿ ಶಿಕ್ಷೆ 2 ಲಕ್ಷ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಉಷಾ ವಾದ ಮಂಡಿಸಿದ್ದರು. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್

  • ತಿರುಪತಿ ದೇವಸ್ಥಾನದ ದೈನಂದಿನ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

    ತಿರುಪತಿ ದೇವಸ್ಥಾನದ ದೈನಂದಿನ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

    ನವದೆಹಲಿ: ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಅರ್ಚನೆ ಮತ್ತು ಪೂಜೆಯಲ್ಲಿ ಅಕ್ರಮ ನಡೆಯುತ್ತಿದ್ದು ಈ ಸಂಬಂಧ ವಿಚಾರಣೆ ನಡೆಸುವಂತೆ ಭಕ್ತರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

    ಆಂಧ್ರಪ್ರದೇಶ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ, ಕೋರ್ಟ್ ದೇವಾಲಯದ ದೈನಂದಿನ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಥ್ರೋಬಾಲ್ ಆಡಿ ಗಮನಸೆಳೆದ ನಟಿ ರೋಜಾ

    ಅಭಿಷೇಕ ಪ್ರಕ್ರಿಯೆಗಳನ್ನು ಸಂಪ್ರದಾಯಿಕವಾಗಿ ಅನುಸರಿಸಬೇಕು ಎಂದು ಭಕ್ತ ಶ್ರೀವಾರಿ ದಾದಾ ಕೋರಿದ್ದರು. ವಿಚಾರಣೆ ವೇಳೆ ಮು.ನ್ಯಾ ಎನ್.ವಿ ರಮಣ ಭಕ್ತರಿಗೆ ಏಕೆ ಸರಿಯಾದ ಸ್ಪಷ್ಟನೆ ನೀಡುತ್ತಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿಯನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಟಿಟಿಡಿ ಪರ ಅರ್ಜಿದಾರರ ಪ್ರತಿಯೊಂದು ಕುಂದುಕೊರತೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರತಿ-ಅಫಿಡವಿಟ್‍ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಸ್ಪಷ್ಟನೆಗಳನ್ನು ನೇರವಾಗಿ ಭಕ್ತರಿಗೆ ನೀಡಬೇಕು, ಕೋರ್ಟ್ ಇವುಗಳನ್ನು ಆದೇಶಿಸಲು ಸಾಧ್ಯವಿಲ್ಲ, ದೇವಸ್ಥಾನದ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ ಎಂದಿತು. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    ದೇವಸ್ಥಾನದ ವಿಚಾರಗಳಲ್ಲಿ ಏನೇ ಸಮಸ್ಯೆಗಳು ಕಂಡು ಬಂದರು ಅದನ್ನು ಭಕ್ತರು ಕೇಳಬಹುದಾಗಿದ್ದು ಅದಕ್ಕೆ ಟಿಟಿಡಿ ಸ್ಪಷ್ಟನೆ ನೀಡಬೇಕು ಅಂತಯೇ ಈ ಅರ್ಜಿದಾರರ ಪ್ರಶ್ನೆಗಳಿಗೆ ಉತ್ತರವನ್ನು ನೀಡಬೇಕು ಎಂದ ಪೀಠ ಅರ್ಜಿಯನ್ನು ತಿರಸ್ಕರಿಸಿತು. ಈ ಅರ್ಜಿ ಆಂಧ್ರಪ್ರದೇಶ ಹೈಕೋರ್ಟ್‍ನಲ್ಲೂ ತಿರಸ್ಕೃತಗೊಂಡಿತ್ತು.

  • ಬಿಟ್‍ಕಾಯಿನ್ ಹಗರಣಕ್ಕೆ ಸ್ಫೋಟಕ ತಿರುವು – ಪೊಲೀಸ್ ಕಸ್ಟಡಿಯಲ್ಲೇ ಶ್ರೀಕಿಗೆ ಮಾದಕ ದ್ರವ್ಯ!

    ಬಿಟ್‍ಕಾಯಿನ್ ಹಗರಣಕ್ಕೆ ಸ್ಫೋಟಕ ತಿರುವು – ಪೊಲೀಸ್ ಕಸ್ಟಡಿಯಲ್ಲೇ ಶ್ರೀಕಿಗೆ ಮಾದಕ ದ್ರವ್ಯ!

    – ಪೊಲೀಸರ ವಿರುದ್ಧ ಶ್ರೀಕಿ ತಂದೆ ಆರೋಪ

    ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬೆಂಗಳೂರು ಪೊಲೀಸರ ವಿರುದ್ಧವೇ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ ಈ ಸಂಬಂಧ ಹ್ಯಾಕರ್ ಶ್ರೀಕಿ ತಂದೆ ಗೋಪಾಲ್ ರಮೇಶ್ ಕೋರ್ಟ್ ಮೆಟ್ಟಿಲೇರಿದ್ದಾರೆ.

    ಹೌದು. ಹ್ಯಾಕರ್ ಶ್ರೀಕಿಗೆ ಪೊಲೀಸರೇ ಮಾದಕ ದ್ರವ್ಯ ನೀಡಿದ್ದಾರಂತೆ. ಕಸ್ಟಡಿಯಲ್ಲಿದ್ದಾಗಲೇ ಪೊಲೀಸರೇ ಡ್ರಗ್ಸ್ ನೀಡಿದ್ದರು ಎಂದು ನ್ಯಾಯಾಧೀಶರ ಎದುರೇ ಇನ್ಸ್‍ಪೆಕ್ಟರ್ ಚಂದ್ರಾಧರ್ ವಿರುದ್ಧ ಶ್ರೀಕಿ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಶ್ರೀಕಿ ಆರೋಪ ಹಿನ್ನೆಲೆಯಲ್ಲಿ ಮಾದಕದ್ರವ್ಯ ಪರೀಕ್ಷೆಗೆ ಕೋರ್ಟ್ ಆದೇಶ ನೀಡಿದೆ.

    ಮೊದಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಕೋರ್ಟ್ ಆದೇಶಿಸಿತ್ತು. ಆದರೆ ವಿಕ್ಟೋರಿಯಾದಲ್ಲಿ ಕೋವಿಡ್ ವಾರ್ಡ್ ಇದ್ದ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಮಾದಕ ದ್ರವ್ಯ ಪರೀಕ್ಷೆಗೆ ಸೂಚಿಸಿತ್ತು. ನಂತರ ಪೊಲೀಸರ ಮನವಿ ಪರಿಗಣಿಸಿ ಬೌರಿಂಗ್ ಆಸ್ಪತ್ರೆಗೆ ಪರೀಕ್ಷೆಗೆ ಆದೇಶ ನೀಡಿದೆ. ಇದನ್ನೂ ಓದಿ: ಹ್ಯಾಕರ್ ಶ್ರೀಕಿಯಿಂದ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ

    ಇತ್ತ ಪ್ರಕರಣ ಸಂಬಂಧ ಗೋಪಾಲ್ ರಮೇಶ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಪೊಲೀಸರ ವಿರುದ್ಧ ನನ್ನ ಮಗ ಮಾಡಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಎಂದು ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಶ್ರೀಕಿ ತಂದೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಕಿ ನನಗೆ ಪರಿಚಯ ಇರೋದು ನಿಜ: ಮೊಹಮ್ಮದ್ ನಲಪಾಡ್

    ನನ್ನ ಮಗನಿಂದ ಒತ್ತಾಯಪೂರ್ವಕವಾಗಿ ಬೇರೆ ಕೆಲಸ ಮಾಡಿಸಲು ಯತ್ನ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸರ ವಿರುದ್ಧವೇ ಶ್ರೀಕಿ ತಂದೆ ಸ್ಫೋಟಕ ಆರೋಪ ಮಾಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿ ನನ್ನ ಮಗನಿಗೆ ಮಾದಕ ದ್ರವ್ಯ ನೀಡಿದ್ದಾರೆ. ಆತನಿಂದ ಬೆಂಗಳೂರು ಪೊಲೀಸರು ಬಲವಂತವಾಗಿ ಹೇಳಿಕೆ ಪಡೀತಿದ್ದಾರೆ. ಆತನಿಂದ ಏನೋ ಬೇರೆ ಬೇರೆ ಕೆಲಸ ಮಾಡಿಸಲು ಪೊಲೀಸರು ಯತ್ನಿಸ್ತಿದ್ದಾರೆ. ನನ್ನ ಮಗನೇ ಆರೋಪಿಸಿರುವ ಕಾರಣ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಿ. ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಿಸಿ ಎಂದು ಶ್ರೀಕಿ ತಂದೆ ಗೋಪಾಲ್ ರಮೇಶ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

  • ಮಗನಿಗೆ ಬೇಲ್ ಸಿಕ್ಕ ಖುಷಿಗೆ ವಕೀಲರ ತಂಡದೊಂದಿಗೆ ಫೋಟೋಗೆ ಪೋಸ್ ಕೊಟ್ಟ ಶಾರೂಖ್ ಖಾನ್

    ಮಗನಿಗೆ ಬೇಲ್ ಸಿಕ್ಕ ಖುಷಿಗೆ ವಕೀಲರ ತಂಡದೊಂದಿಗೆ ಫೋಟೋಗೆ ಪೋಸ್ ಕೊಟ್ಟ ಶಾರೂಖ್ ಖಾನ್

    ಮುಂಬೈ: ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ಬಂಧನಕಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ 22 ದಿನಗಳ ಜೈಲುವಾಸದ ಬಳಿಕ ಇಂದು ಜಾಮೀನು ಮಂಜೂರಾಗಿದೆ. ಆರ್ಯನ್ ಖಾನ್ ಬಿಡುಗಡೆಗಾಗಿ ಕೋರ್ಟ್‍ನಲ್ಲಿ ವಾದ ಮಂಡಿಸಿದ ವಕೀಲರ ತಂಡೊಂದಿಗೆ ಶಾರೂಖ್ ಖಾನ್ ಫೋಟೋಗೆ ಪೋಸ್ ನೀಡುವ ಮೂಲಕ ಸಂಭ್ರಮಿಸಿದ್ದಾರೆ.

    ಡ್ರಗ್ಸ್ ಕೇಸ್‍ನಲ್ಲಿ ಎನ್‍ಸಿಬಿ ಬಲೆಗೆ ಬಿದ್ದಿದ್ದ ಆರ್ಯನ್ ಖಾನ್‍ಗೆ ಮುಂಬೈನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಬಳಿಕ ಆರ್ಯನ್ ಖಾನ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಆರ್ಯನ್ ಪರ ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

    ಆರ್ಥರ್ ಜೈಲಿನಲ್ಲಿ ಕಂಬಿ ಎಣಿಸಿದ್ದ ಆರ್ಯನ್ ಖಾನ್‍ಗೆ 13 ಷರತ್ತು ವಿಧಿಸಿ ಬಾಂಬೆ ಹೈಕೋರ್ಟ್ ಬೇಲ್ ನೀಡಿದೆ. ನವೆಂಬರ್ 2ಕ್ಕೆ ಆರ್ಯನ್ ಖಾನ್ ಬರ್ತ್‍ಡೇ ಇದ್ದು, ಜಾಮೀನು ಸಿಗೋ ಮುನ್ನ ದೀಪಾವಳಿ ಗಿಫ್ಟ್ ಸಿಕ್ಕಿದ್ದು, ನಾಳೆ ಅಥವಾ ನಾಡಿದ್ದು ರಿಲೀಸ್ ಆಗಲಿದ್ದಾರೆ. ಆರ್ಯನ್‍ಗೆ ಇಂಟರ್ನ್ಯಾಷನಲ್ ಡ್ರಗ್ಸ್ ಪೆಡ್ಲರ್‍ ಗಳ ನಂಟಿದೆ. ಬೇಲ್ ಕೊಡಬಾರದು ಎಂದು ಎನ್‍ಸಿಬಿ ವಾದ ಮಾಡಿತ್ತು. ಆದರೆ, ಆರ್ಯನ್ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಎರಡು ದಿನಗಳ ಕಾಲ ಪ್ರಬಲ ವಾದ ಮಂಡಿಸಿದ್ದರು. ಆರ್ಯನ್ ಬಳಿ ಡ್ರಗ್ಸ್ ಸಿಕ್ಕಿಲ್ಲ, ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿಲ್ಲ, ವಾಟ್ಸಪ್ ಚಾಟ್ ಒಂದರ ಆಧಾರದ ಮೇಲೆ ಅರೆಸ್ಟ್ ಮಾಡುವ ಅವಕಾಶ ಇರಲಿಲ್ಲ ಅಂತ ವಾದಿಸಿದ್ದರು.

    ಕೋರ್ಟ್‍ನಲ್ಲಿ ಜಾಮೀನು ಮಂಜೂರಾದ ಬಳಿಕ ವಕೀಲರ ತಂಡದೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುವ ಮೂಲಕ ಶಾರೂಖ್ ಖಾನ್ ಸಂಭ್ರಮಾಚರಣೆ ಮಾಡಿಕೊಂಡರೆ, ಶಾರೂಖ್ ಅಭಿಮಾನಿಗಳು ಪಟಾಕಿ ಸಿಡಿಸಿ ಆರ್ಯನ್ ಬಿಡುಗಡೆ ಸುದ್ದಿಯನ್ನು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

  • ಜಮೀನು ವಿವಾದ ಎರಡು ಗ್ರಾಮಗಳ ನಡುವೆ ಮಾರಾಮಾರಿ

    ಜಮೀನು ವಿವಾದ ಎರಡು ಗ್ರಾಮಗಳ ನಡುವೆ ಮಾರಾಮಾರಿ

    ದಾವಣಗೆರೆ: ಜಮೀನು ವಿವಾದ ಹಿನ್ನೆಲೆ ಎರಡು ಗ್ರಾಮಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದೊಣ್ಣೆ, ಕುಡುಗೋಲುಗಳಿಂದ ಪರಸ್ಪರವಾಗಿ ಸಿನಿಮೀಯ ರೀತಿ ಹಲ್ಲೆ ನಡೆಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಂಚಿಕೊಪ್ಪ ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ನಡುವೆ ಮಾರಾಮಾರಿಯಾಗಿದೆ. ಕಂಚಿಕೊಪ್ಪ ಗ್ರಾಮದ 30 ದಲಿತ ಕುಟುಂಬಗಳು ತುಗ್ಗಲಹಳ್ಳಿ ಗ್ರಾಮದ ಬಳಿ ಇರುವ ಸರ್ವೇ ನಂಬರ್ 29- 30 ರಲ್ಲಿ 40 ಎಕರೆ ಜಮೀನನಲ್ಲಿ ಉಳುಮೆ ಮಾಡುತ್ತಿದ್ದು, ಸಾಗುವಳಿ ಚೀಟಿ, ಪಹಣೆ ಕೂಡ ನೀಡಲಾಗಿದೆ. ಇದನ್ನೂ ಓದಿ: ಸ್ಕೂಟರ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ದೊಡ್ಡ ರಸ್ತೆ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರು!

     Davanagere

    ಈ ಜಮೀನು ಖಾತೆ ಮಾಡಿಕೊಡುವಂತೆ ಕಂಚಿಕೊಪ್ಪ ಗ್ರಾಮದ ದಲಿತ ಕುಟುಂಬಗಳು ಕೋರ್ಟ್ ಮೊರೆ ಹೋಗಿದ್ದವು. ಆದರೆ ಇದೇ ಸಂದರ್ಭದಲ್ಲಿ ತುಗ್ಗಲಹಳ್ಳಿ ಗ್ರಾಮದ ಕೆಲವರು ದಲಿತರು ಉಳುಮೆ ಮಾಡುತ್ತಿರುವ ಜಮೀನು ನಮಗೆ ಸೇರಿದ್ದು ಎಂದು ತಕರಾರು ತೆಗೆದಿದ್ದಾರೆ. ಬಳಿಕ ಬುಧವಾರ ಸಂಜೆ ಏಕಾಏಕಿ ಜಮೀನಿನಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದರು. ಇದರಿಂದ ಮಾತಿನ ಚಕಮಕಿಯಾಗಿ ನಡೆದಿದ್ದು, ನಂತರ ಎರಡು ಗ್ರಾಮದವರು ಕುಡಗೋಲು, ದೊಣ್ಣೆಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವರಿಗೆ ಒಂದೇ ವರ್ಷದಲ್ಲಿ ಎರಡು ಬಾರಿ ಕೊರೊನಾ ಪಾಸಿಟಿವ್

     Davanagere

    ಹಲ್ಲೆಗೊಳಗದ ಕಂಚಿಕೊಪ್ಪದ 13 ಜನರು ಆಸ್ಪತ್ರೆಗೆ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಹೊನ್ನಾಳಿ ಸಿಪಿಐ ದೇವರಾಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೂ ಹಲ್ಲೆಗೊಳಗಾದವರಿಂದ ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತುಗ್ಗಲಹಳ್ಳಿ ಗ್ರಾಮದ ಇಬ್ಬರನ್ನು ಹೊನ್ನಾಳಿ ಪೊಲೀಸರು ಬಂಧಿಸಿದ್ದಾರೆ.

  • ಹಾವಿನಿಂದ ಕಚ್ಚಿಸಿ ಪತ್ನಿ ಕೊಂದಿದ್ದಾತನಿಗೆ ಡಬಲ್ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ

    ಹಾವಿನಿಂದ ಕಚ್ಚಿಸಿ ಪತ್ನಿ ಕೊಂದಿದ್ದಾತನಿಗೆ ಡಬಲ್ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ

    ತಿರುವನಂತಪುರಂ: ಕೇರಳದಲ್ಲಿ ಹಾವಿನಿಂದ ಕಚ್ಚಿಸಿ ಪತ್ನಿಯನ್ನ ಕೊಂದಿದ್ದ ಖತರ್ನಾಕ್ ಪತಿಗೆ ಕೊನೆಗೂ ಶಿಕ್ಷೆಯಾಗಿದೆ.

    ಯಾರಿಗೂ ಅನುಮಾನ ಬಾರದಂತೆ, ಹಾವಿನಿಂದ ಕಚ್ಚಿಸಿ ಪತ್ನಿ ಉತ್ತರಾಳನ್ನು ಪತಿ ಸೂರಜ್ ಕೊಲೆ ಮಾಡಿದ್ದ. ಈತನ ಮೇಲಿನ ಕೊಲೆ ಆರೋಪ ಸಾಬೀತಾಗಿ ಇಂದಿಗೆ ತೀರ್ಪನ್ನು ಕಾಯ್ದಿರಿಸಲಾಗಿತ್ತು. ಇದೀಗ ಸೂರಜ್‍ಗೆ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ 5 ಲಕ್ಷ ರೂ. ದಂಡವನ್ನು ವಿಧಿಸಿದೆ.

    ಏನಿದು ಪ್ರಕರಣ?:
    ಉತ್ತರಾಗೆ 20201 ಫೆಬ್ರವರಿಯಲ್ಲಿ ಹಾವು ಕಚ್ಚಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ಇದ್ದಾಗಲೇ ಅಂದ್ರೆ ಮೇ 7ರಂದು ಎರಡನೇ ಬಾರಿ ಹಾವು ಕಚ್ಚಿತ್ತು. ಆದರೆ ಉತ್ತರಾಳ ಪೋಷಕರು ಅಳಿಯನ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ದೂರಿದ್ದರು.  ಇದನ್ನೂ ಓದಿ: ಆಸ್ತಿಗಾಗಿ ಪತ್ನಿಯನ್ನ ಕೊಂದು ಹಾವಿನ ದ್ವೇಷದ ಕಥೆ ಕಟ್ಟಿದ್ದ ಪತಿ ಅರೆಸ್ಟ್

    ಈ ಹಿನ್ನೆಲೆ ತನಿಖೆ ಆರಂಭಿಸಿದ ಪೊಲೀಸರಿಗೆ ಆಘಾತವೇ ಕಾದಿತ್ತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೆಲ ಸತ್ಯಗಳು ಬೆಳಕಿಗೆ ಬಂದಿದ್ದವು. ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್ ಕಳೆದ ಐದು ತಿಂಗಳುಗಳಿಂದ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ. ಈ ಕುರಿತು ಇಂಟರ್ನೆಟ್‍ನಲ್ಲಿ ವಿಡಿಯೋ ಕೂಡ ನೋಡಿದ್ದ. ಇದನ್ನೂ ಓದಿ: ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ

    ಸೂರಜ್ 10 ಸಾವಿರ ರೂ. ಪಾವತಿಸಿ ಕೊಲ್ಲಂ ಜಿಲ್ಲೆಯ ಹಾವಾಡಿಗ ಸುರೇಶ್‍ನಿಂದ ಹಾವನ್ನು ಖರೀದಿಸಿದ್ದ. ಬಳಿಕ ತನ್ನ ರೂಮ್‍ನಲ್ಲಿ ಹಾವನ್ನು ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ತಿಳಿಸಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು. ಅಳಿಯನ ಮೇಲೆ ಆಗಲೇ ಅನುಮಾನ ವ್ಯಕ್ತಪಡಿಸಿದ್ದ ಉತ್ತರಾಳ ಪೋಷಕರು ಮಗಳನ್ನು ತಮ್ಮ ಊರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದರು. ಇದನ್ನೂ ಓದಿ: ಮರ್ಯಾದಾ ಹತ್ಯೆ – ಮಗಳು ಪ್ರೀತಿಸಿ ವಿವಾಹವಾಗಿದ್ದಕ್ಕೆ ಇಡೀ ಕುಟುಂಬವನ್ನೇ ಜೀವಂತ ಸುಟ್ಟ ತಂದೆ

    ಆರೋಪಿ ಮೇ 6ರಂದು ಮತ್ತೆ ಹಾವಿನಿಂದ ಪತ್ನಿಗೆ ಕಚ್ಚಿಸಿ ಕೊಲೆಗೈದಿದ್ದ. ಅಷ್ಟೇ ಅಲ್ಲದೆ ಹಾವನ್ನು ಕೊಂದು ಒಳ್ಳೆಯವನಂತೆ ನಾಟಕವಾಡಿದ್ದ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು. ಪತ್ನಿಯನ್ನ ಕೊಂದರೆ ಆಕೆಯ ಹೆಸರಿನಲ್ಲಿದ್ದ ಆಸ್ತಿ ತನಗೆ ಬರುತ್ತದೆ ಎಂದು ಸೂರಜ್ ಕೃತ್ಯ ಎಸೆಗಿದ್ದಾನೆ. ಅಷ್ಟೇ ಅಲ್ಲದೆ ವರದಕ್ಷಿಣೆಗಾಗಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನುವುದು ವಿಚಾರಣೆ ವೇಳೆ ಸ್ಪಷ್ಟವಾಗಿತ್ತು.

  • ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ  ಮುಂದೂಡಿಕೆ – ಇನ್ನೆರಡು ದಿನ ಜೈಲೇ ಗತಿ

    ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಇನ್ನೆರಡು ದಿನ ಜೈಲೇ ಗತಿ

    ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ಮುಂಬೈ ಸೆಷನ್ಸ್ ಕೋರ್ಟ್ ಹೇಳಿದೆ. ಬುಧವಾರ ಮಧ್ಯಾಹ್ನದ ಬಳಿಕ ಸುದೀರ್ಘ ವಿಚಾರಣೆ ನಡೆಯಲಿದೆ.

    ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡ ಬಳಿಕ ಸೆಷನ್ಸ್ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ವಿ.ವಿ ಪಾಟೀಲ್ ತನಿಖಾ ವರದಿ ಸಲ್ಲಿಸಲು ಎನ್‍ಸಿಬಿ(NCB) ಕಾಲಾವಕಾಶ ಕೇಳಿದ ಹಿನ್ನೆಲೆ ವಿಚಾರಣೆ ಮುಂದೂಡಿತು.

    ವಿಚಾರಣೆ ವೇಳೆ ವಾದ ಆರಂಭಿಸಿದ ಎನ್‍ಸಿಬಿ(NCB) ಪರ ವಕೀಲರು, ತನಿಖಾ ವರದಿ ಸಲ್ಲಿಸಲು ಒಂದು ವಾರದ ಸಮಯ ಬೇಕು ಈ ಹಿನ್ನೆಲೆ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಆದರೆ ಎನ್‍ಸಿಬಿ(NCB) ವಾದಕ್ಕೆ ಆರ್ಯನ್ ಖಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ದೇಸಾಯಿ ಮತ್ತು ವಕೀಲ ಸತೀಶ್ ಮನೇಶಿಂಧೆ ಆಕ್ಷೇಪ ವ್ಯಕ್ತಪಡಿಸಿ, ಒಂದು ವಾರದ ಸಮಯ ಸಾಧ್ಯವಿಲ್ಲ ಕೂಡಲೇ ವಿಚಾರಣೆ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಗ ಇಲ್ಲದೇ ಹುಟ್ಟುಹಬ್ಬ ಆಚರಿಸಲ್ಲ: ಶಾರೂಖ್ ಪತ್ನಿ ಗೌರಿ ಖಾನ್

    ಆರ್ಯನ್ ಖಾನ್ ಪರ ವಕೀಲರ ಆಕ್ಷೇಪ ಹಿನ್ನೆಲೆ ಕನಿಷ್ಠ ಎರಡು ದಿನಗಳ ಕಾಲಾವಕಾಶ ಬೇಕು .ವಿಚಾರಣೆ ಗುರುವಾರ ನಡೆಸುವಂತೆ ಎನ್‍ಸಿಬಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎ.ಎಮ್ ಚಿಮಲ್ಕರ್ ಮನವಿ ಮಾಡಿದರು. ಬಳಿಕ ಮಧ್ಯಪ್ರವೇಶ ಮಾಡಿದ ನ್ಯಾಯಾಧೀಶರು ಬುಧವಾರ ಮಧ್ಯಾಹ್ನ ಬಳಿಕ ವಿಚಾರಣೆ ನಡೆಸೋಣ ಎಂದು ಹೇಳಿದರು. ಇದನ್ನೂ ಓದಿ: ಡ್ರಗ್ಸ್‌ ಕೇಸ್‌ – ಶಾರೂಖ್ ಪುತ್ರ ಆರ್ಯನ್ ಜೈಲುಪಾಲು

    ವಿಚಾರಣೆ ವೇಳೆ ವಾದ ಮಂಡಿಸಿದ ಆರ್ಯನ್ ಖಾನ್ ಪರ ವಕೀಲರಾದ ಮನೇಶಿಂಧೆ ಮತ್ತು ದೇಸಾಯಿ, ಆರ್ಯನ್ ಖಾನ್ ನಿಂದ ಯಾವುದೇ ಕಾನೂನು ಬಾಹಿರ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ. ಜಾಮೀನು ನೀಡುವುದರಿಂದ ತನಿಖೆಗೆ ತೊಂದರೆಯಾಗುವುದಿಲ್ಲ ಎಂದರು. ಇನ್ನು ಕಳೆದ ಭಾನುವಾರದಿಂದ ಶುಕ್ರವಾರದವರೆಗೂ ಎನ್‍ಸಿಬಿ ಕಡ್ಡಿಯಲ್ಲಿ ಆರ್ಯನ್ ಇದ್ದು ಒಂದೇ ದಿನ ಮಾತ್ರ ಹೇಳಿಕೆ ಪಡೆಯಲಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಕಿಂಗ್ ಖಾನ್ ಮಗನ ಡ್ರಗ್ಸ್ ಪ್ರಕರಣದಲ್ಲಿ ಕನ್ನಡಿಗನ ವಕಾಲತ್ತು 

    ಇದಕ್ಕೆ ಉತ್ತರಿಸಿದ ಎನ್‍ಸಿಬಿ ವಕೀಲರು, ಆರ್ಯನ್ ಖಾನ್ ಪರ ವಕೀಲರ ವಾದವನ್ನು ತಿರಸ್ಕರಿಸಿದರು. ಆರ್ಯನ್ ಖಾನ್ ಸೇರಿ ಇತರೆ ಆರೋಪಿಗಳಿಗೆ ಪ್ರಕರಣದೊಂದಿಗ ನಂಟಿದೆ. ಈ ಹಿನ್ನೆಲೆ ಅವರು ಜಾಮೀನು ನೀಡಬಾರದು. ಅಲ್ಲದೆ ಇದಕ್ಕೂ ಮುನ್ನ ಎಲ್ಲ ಅರ್ಜಿಗಳನ್ನು ಪ್ರತ್ಯೇಕ ವಿಚಾರಣೆ ನಡೆಸಬೇಕು ಎಂದಿದ್ದು ಮತ್ತೊರ್ವ ಆರೋಪಿಯ ಮನವಿಗೂ ಎನ್‍ಸಿಬಿ ವಿರೋಧ ವ್ಯಕ್ತಪಡಿಸಿತು.

  • ಡಿಕೆಶಿ ಸಾಕ್ಷ್ಯ ವೇಳೆ ಸುಳ್ಯ ಕೋರ್ಟಲ್ಲಿ ಕೈ ಕೊಟ್ಟ ಕರೆಂಟ್!

    ಡಿಕೆಶಿ ಸಾಕ್ಷ್ಯ ವೇಳೆ ಸುಳ್ಯ ಕೋರ್ಟಲ್ಲಿ ಕೈ ಕೊಟ್ಟ ಕರೆಂಟ್!

    ಮಂಗಳೂರು: ಫೋನ್ ಸಂಭಾಷಣೆಯ ಪ್ರಕರಣ ಸಂಬಂಧ ಕೋರ್ಟಿಗೆ ಹಾಜರಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಕ್ಷ್ಯ ಹೇಳುತ್ತಿದ್ದ ಸಂದರ್ಭದಲ್ಲಿ ಕರೆಂಟ್ ಕೈಕೊಟ್ಟ ಪ್ರಸಂಗ ಇಂದು ನಡೆದಿದೆ.

    ಸುಳ್ಯದ ಜನ ವಿದ್ಯುತ್ ವ್ಯತ್ಯಯವಾಗುವ ಸಮಸ್ಯೆ ಆಗಾಗ ಎದುರಿಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಇಂದು ಮಾಜಿ ಪವರ್ ಮಿನಿಸ್ಟರ್ ಕೋರ್ಟ್ ಕಟೆಕಟೆಯ್ಲಲಿರುವಾಗಲೇ ಕರೆಂಟ್ ಹೋಗಿದೆ. ಇದೇ ಸಂದರ್ಭದಲ್ಲಿ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರು, ವಿದ್ಯುತ್ ಸಮಸ್ಯೆಯ ಬಗ್ಗೆ ಡಿಕೆಶಿಗೆ ಮನವರಿಕೆ ಮಾಡಿದರು.  ಇದನ್ನೂ ಓದಿ: ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು

    ಈ ವಿಚಾರದಲ್ಲಿ ನಿಮಗೆ ಅವರು ಬೈದಿದ್ದು ತಪ್ಪು. ಸುಳ್ಯದಲ್ಲಿ ವಿದ್ಯುತ್ ಸಮಸ್ಯೆ ಅಷ್ಟೊಂದಿದೆ. ಇದನ್ನು ನೀವೇ ಈಗ ಸ್ವತಃ ಅನುಭವಿಸಿದ್ದೀರಿ. ಎಲ್ಲರೂ ಪ್ರತೀ ದಿನ ವಿದ್ಯುತ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ನಿಮಗೂ ಇಂದು ವಿದ್ಯುತ್ ಸಮಸ್ಯೆಯ ಅರಿವಾಗಿದೆ ಎಂದು ಡಿಕೆಶಿಗೆ ನ್ಯಾಯಾಧೀಶರು ತಿಳಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಭೇಟಿ ಅಂತ್ಯ- ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಆಹ್ವಾನ?

    ಕೋರ್ಟಿನಲ್ಲಿ ಸಾಕ್ಷ್ಯ ನುಡಿದು ಹೊರ ಬಂದ ಬಳಿಕ ಮಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಕಾನೂನಿಗೆ ತಲೆ ಬಾಗಿ ಕೋರ್ಟ್‍ಗೆ ಹಾಜರಾಗಿದ್ದೇನೆ. ಆ ವ್ಯಕ್ತಿ ನನಗೆ ಮಾತ್ರವಲ್ಲದೇ ಅಧಿಕಾರಿಗಳಿಗೂ ಅವಾಚ್ಯ ಶಬ್ದದಿಂದ ಬೈದಿದ್ದಾರೆ. ಸಾರ್ವಜನಿಕ ಕೆಲಸ ಮಾಡೋವಾಗ ಕರ್ತವ್ಯಕ್ಕೆ ಅಡ್ಡಿ ಮಾಡುವ ಪ್ರಯತ್ನ ನಡೆಯುತ್ತದೆ. ಈ ಕಾರಣಕ್ಕಾಗಿ ಅಧಿಕಾರಿಗಳು ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ವಿಚಾರವನ್ನು ಕೋರ್ಟ್ ಮುಂದೆ ಹೇಳಿದ್ದೇನೆ ಎಂದರು.

    ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಇದೆ. ನಾನು ಸಚಿವನಾಗಿದ್ದ ಸಂದರ್ಭ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಿದ್ದೇನೆ. ಈಗಿನ ನೂತನ ಸಚಿವರು ಸಮಸ್ಯೆ ಬಗೆಹರಿಸಬಹುದು ಎಂಬ ಭರವಸೆ ಇದೆ ಎಂದರು. ಇದನ್ನೂ ಓದಿ: ನಿರ್ಭೀತ, ನೈಜ ಕಾಂಗ್ರೆಸ್ಸಿಗಳು ಪ್ರಿಯಾಂಕಾ ಗಾಂಧಿ: ರಾಗಾ