Tag: court

  • ದರ್ಶನ್‌ & ಗ್ಯಾಂಗ್‌ಗೆ ಮತ್ತೆ ಶಾಕ್‌ ಕೊಟ್ಟ ಕಾಮಾಕ್ಷಿಪಾಳ್ಯ ಪೊಲೀಸರು

    ದರ್ಶನ್‌ & ಗ್ಯಾಂಗ್‌ಗೆ ಮತ್ತೆ ಶಾಕ್‌ ಕೊಟ್ಟ ಕಾಮಾಕ್ಷಿಪಾಳ್ಯ ಪೊಲೀಸರು

    ಬೆಂಗಳೂರು: ದರ್ಶನ್‌ (Darshan) ಮತ್ತು ಗ್ಯಾಂಗ್‌ಗೆ ಕಾಮಾಕ್ಷಿಪಾಳ್ಯ ಪೊಲೀಸರು (Kamakshipalya Police) ಮತ್ತೆ ಶಾಕ್‌ ನೀಡಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದೋಷಾರೋಪಪಟ್ಟಿಯನ್ನು (Supplementary Chargesheet) 57ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

    ಕೆಲವು ದಾಖಲಾತಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ(FSL Report), ಆರೋಪಿಗಳ ವಿರುದ್ಧ ಇರುವ ಕೆಲವೊಂದು ಸಾಕ್ಷ್ಯ, ಕೃತ್ಯಕ್ಕೆ ಬಳಸಿದ ವಾಹನಗಳ ರಿಲೀಸ್ ಪ್ರಕ್ರಿಯೆ ದಾಖಲೆಗಳನ್ನು ಒಳಗೊಂಡ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದರು. ಇದನ್ನೂ ಓದಿ: ವಿಚಾರಣೆ ಮುಗಿಸಿ ದರ್ಶನ್‌ ಕೈ ಹಿಡಿದುಕೊಂಡು ಹೊರ ಬಂದ ಪವಿತ್ರಾ ಗೌಡ

     

    ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾದರು. ಪವಿತ್ರಾ ಗೌಡ ಬಿಳಿ ಬಣ್ಣದ ಸೀರೆ ಧರಿಸಿದ್ದರೆ ದರ್ಶನ್‌ ಕಪ್ಪು ಬಣ್ಣ ಡ್ರೆಸ್‌ ಧರಿಸಿದ್ದರು.

    ಇಂದಿನ ವಿಚಾರಣೆಗೆ ಎ3 ಪವನ್ ಗೈರಾಗಿದ್ದರೆ ಎ11 ನಾಗರಾಜು ಕೇಸ್ ಮೇಲೆ ಹೊಸಪೇಟೆಗೆ ತೆರಳಲು ಅನುಮತಿ ನೀಡಿತು. ಆರೋಪಿಗಳ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಜುಲೈ 10 ಕ್ಕೆ ಮುಂದೂಡಿತು. ಪವಿತ್ರಾ ಗೌಡಗೆ 15 ದಿನಗಳ ಕಾಲ ಹೊರರಾಜ್ಯಕ್ಕೆ ತೆರಳಲು ಕೋರ್ಟ್‌ ಅವಕಾಶ ನೀಡಿದೆ. ಇದನ್ನೂ ಓದಿ: ಲಿಫ್ಟ್‌ನಲ್ಲಿ ಹಠ ಹಿಡಿದು ದರ್ಶನ್ ನಂಬರ್ ಪಡೆದ ಪವಿತ್ರಾಗೌಡ

    ಕಳೆದ ಬಾರಿ ಅನಾರೋಗ್ಯದ ಕಾರಣ ಹೇಳಿ ದರ್ಶನ್‌ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹಾಜರಾಗದ್ದಕ್ಕೆ ಕೋರ್ಟ್‌ ದರ್ಶನ್‌ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ನ್ಯಾಯಾಲಯಕ್ಕೆ (Court) ಹಾಜರಾಗಬೇಕೆಂಬ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್​ಗೆ ಹಾಜರಾಗಿದ್ದರು.

  • ವಿಚಾರಣೆ ಮುಗಿಸಿ ದರ್ಶನ್‌ ಕೈ ಹಿಡಿದುಕೊಂಡು ಹೊರ ಬಂದ ಪವಿತ್ರಾ ಗೌಡ

    ವಿಚಾರಣೆ ಮುಗಿಸಿ ದರ್ಶನ್‌ ಕೈ ಹಿಡಿದುಕೊಂಡು ಹೊರ ಬಂದ ಪವಿತ್ರಾ ಗೌಡ

    ಬೆಂಗಳೂರು: ವಿಚಾರಣೆ ಮುಗಿಸಿ ಹೊರಗೆ ಬರುವಾಗ ಕೋರ್ಟ್‌ (Court) ಆವರಣದಲ್ಲಿ ಪವಿತ್ರಗೌಡ (Pavithra Gowda) ಅವರು ದರ್ಶನ್ (Darshan) ಕೈ ಹಿಡಿದುಕೊಂಡು ಬಂದಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿಗಳು ಇಂದು 57ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಹಾಜರಾದರು. ಪವಿತ್ರಾ ಗೌಡ ಬಿಳಿ ಬಣ್ಣದ ಸೀರೆ ಧರಿಸಿದ್ದರೆ ದರ್ಶನ್‌ ಕಪ್ಪು ಬಣ್ಣ ಡ್ರೆಸ್‌ ಧರಿಸಿದ್ದರು.

    ಸ್ನೇಹಿತ ಧನ್ವೀರ್ ಜೊತೆ ದರ್ಶನ್ ನ್ಯಾಯಾಲಯಕ್ಕೆ ಆಗಮಿಸಿದರು. ವಿಚಾರಣೆ ಆರಂಭವಾಗುತ್ತಿದ್ದಾಗ ದರ್ಶನ್‌ ದೂರದಲ್ಲಿ ನಿಂತಿದ್ದರು. ಹೆಸರನ್ನು ಕರೆದಾಗಲೂ ದರ್ಶನ್ ದೂರದಲ್ಲೇ ಇದ್ದರು. ಈ ವೇಳೆ ಜಡ್ಜ್‌ ಆರೋಪಿ ಸಂಖ್ಯೆಗೆ ಅನುಗುಣವಾಗಿ ನಿಲ್ಲುವಂತೆ ಸೂಚಿಸಿ ಪವಿತ್ರಾ ಗೌಡ ಬಳಿ ನಿಲ್ಲಲು ಹೇಳಿದರು. ಜಡ್ಜ್‌ ಸೂಚನೆಯ ನಂತರ ದರ್ಶನ್‌ ಪವಿತ್ರಾ ಗೌಡ ಬಳಿ ಬಂದು ನಿಂತುಕೊಂಡರು.  ಇದನ್ನೂ ಓದಿ: ‘ಮುದ್ದು ರಾಕ್ಷಸಿ’ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಡ್ಯಾನ್ಸ್

     

    ಇಂದಿನ ವಿಚಾರಣೆಗೆ ಎ3 ಪವನ್ ಗೈರಾಗಿದ್ದರೆ ಎ11 ನಾಗರಾಜು ಕೇಸ್ ಮೇಲೆ ಹೊಸಪೇಟೆಗೆ ತೆರಳಲು ಅನುಮತಿ ನೀಡಿತು. ಆರೋಪಿಗಳ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಜುಲೈ 10 ಕ್ಕೆ ಮುಂದೂಡಿಕೆ ಮಾಡಲಾಯಿತು. ಕೋರ್ಟ್‌ ಪವಿತ್ರಾ ಗೌಡಗೆ 15 ದಿನ ಹೊರರಾಜ್ಯಕ್ಕೆ ತೆರಳಲು ಅವಕಾಶ ನೀಡಿದೆ. ಇದನ್ನೂ ಓದಿ: ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

    ಕಳೆದ ಬಾರಿ ಅನಾರೋಗ್ಯದ ಕಾರಣ ಹೇಳಿ ದರ್ಶನ್‌ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹಾಜರಾಗದ್ದಕ್ಕೆ ಕೋರ್ಟ್‌ ದರ್ಶನ್‌ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

    ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ನ್ಯಾಯಾಲಯಕ್ಕೆ (Court) ಹಾಜರಾಗಬೇಕು ಎಂಬ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್​ಗೆ ಹಾಜರಾಗಿದ್ದರು.

  • ಸುಪ್ರೀಂ ಕೋರ್ಟ್‌ನ 33 ಜಡ್ಜ್‌ ಪೈಕಿ 21 ಮಂದಿಯ ಆಸ್ತಿ ಬಹಿರಂಗ

    ಸುಪ್ರೀಂ ಕೋರ್ಟ್‌ನ 33 ಜಡ್ಜ್‌ ಪೈಕಿ 21 ಮಂದಿಯ ಆಸ್ತಿ ಬಹಿರಂಗ

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರಿಂ ಕೋರ್ಟ್‌ (Supreme Court) ಮೊದಲ ಬಾರಿಗೆ ತನ್ನ ಒಟ್ಟು 33 ನ್ಯಾಯಾಧೀಶರ ಪೈಕಿ 21 ಜನರ ಆಸ್ತಿಯನ್ನು (Assets) ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

    ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ (CJI Sanjiv Khanna) ಅವರು ಸೇವೆಯಿಂದ ನಿವೃತ್ತಿಯಾಗಲು ಒಂದು ವಾರ ಬಾಕಿ ಇರುವಾಗ ನ್ಯಾಯಾಧೀಶರ ಆಸ್ತಿಗಳ ವಿವರ ಪ್ರಕಟವಾಗಿದೆ. ನ್ಯಾ.ಖನ್ನಾ ಮೇ 13 ರಂದು ನಿವೃತ್ತರಾಗಲಿದ್ದಾರೆ.

    ಆಸ್ತಿ ಮಾಹಿತಿಯ ಜೊತೆಗೆ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗೆ ನೇಮಕಾತಿಗಳ ಸಂಪೂರ್ಣ ಪ್ರಕ್ರಿಯೆಯನ್ನು ಹೈಕೋರ್ಟ್ ಕೊಲಿಜಿಯಂಗೆ ನಿಯೋಜಿಸಲಾದ ಪಾತ್ರ, ರಾಜ್ಯ ಸರ್ಕಾರಗಳು, ಭಾರತ ಸರ್ಕಾರದಿಂದ ಪಡೆದ ಪಾತ್ರ ಮತ್ತು ಇನ್‌ಪುಟ್‌ಗಳು ಮತ್ತು ಸುಪ್ರೀಂ ಕೋರ್ಟ್ ಕೊಲಿಜಿಯಂನ ಪರಿಗಣನೆಯ ಪತ್ರವನ್ನು ಪ್ರಕಟಿಸಿಲಾಗಿದೆ. ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಪಾಕಿಗೆ ಮತ್ತೆ ವಿಶ್ವಸಂಸ್ಥೆಯಲ್ಲಿ ಮುಖಭಂಗ

    ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಮಹಿಳಾ ನ್ಯಾಯಾಧೀಶರ ಪೈಕಿ ನ್ಯಾ.ಬೇಲಾ ಎಂ. ತ್ರಿವೇದಿ ತಮ್ಮ ಆಸ್ತಿಯನ್ನು ಪ್ರಕಟಿಸಿದ್ದಾರೆ ಆದರೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಆಸ್ತಿ ಇನ್ನೂ ಅಪ್‌ಲೋಡ್‌ ಆಗಿಲ್ಲ. ಬಾರ್‌ನಿಂದ ನೇರವಾಗಿ ಸುಪ್ರೀಂ ಕೋರ್ಟ್ ಪೀಠಕ್ಕೆ ಬಡ್ತಿ ಪಡೆದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಕೆ.ವಿ. ವಿಶ್ವನಾಥನ್ ಅವರ ಆಸ್ತಿಯನ್ನು ಪ್ರಕಟಿಸಲಾಗಿದೆ.

     

    ನ್ಯಾಯಮೂರ್ತಿ ನಾಗರತ್ನ ಅವರಲ್ಲದೆ, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ, ದೀಪಂಕರ್ ದತ್ತ, ಅಹ್ಸಾನುದ್ದೀನ್ ಅಮಾನುಲ್ಲಾ, ಮನೋಜ್ ಮಿಶ್ರಾ, ಅರವಿಂದ್ ಕುಮಾರ್, ಪಿ.ಕೆ. ಮಿಶ್ರಾ, ಎಸ್.ಸಿ. ಶರ್ಮಾ, ಪಿ.ಬಿ. ವರಾಲೆ, ಎನ್. ಕೋಟೀಶ್ವರ್ ಸಿಂಗ್, ಆರ್. ಮಹಾದೇವನ್, ಜೋಯ್ಮಲ್ಯ ಬಾಗ್ಚಿ ಅವರ ಆಸ್ತಿಗಳನ್ನು ಸಾರ್ವಜನಿಕ ವೀಕ್ಷಣೆಗಾಗಿ ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿಲ್ಲ.

    ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾ.ಯಶವಂತ್ ವರ್ಮಾ (Justice Yashwant Varma) ಅವರ ದೆಹಲಿ ನಿವಾಸದಲ್ಲಿ ಕಂತೆ ಕಂತೆ ನಗದು ಪತ್ತೆಯಾದ ಬಳಿಕ ನ್ಯಾಯಧೀಶರು ತಮ್ಮ ಆಸ್ತಿಯನ್ನು ಬಹಿರಂಗಪಡಿಸಬೇಕೆಂಬ ಆಗ್ರಹ ವ್ಯಕ್ತವಾಗಿತ್ತು. ಇದನ್ನೂ ಓದಿ: ಜಡ್ಜ್‌ ನಿವಾಸದಲ್ಲಿ ಕಂತೆ ಕಂತೆ ನಗದು ಪತ್ತೆ ಕೇಸ್ – ಸಿಜೆಐ ಕೈ ಸೇರಿದ ತನಿಖಾ ವರದಿ

    ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಸ್ಥಿರ ಠೇವಣಿ ಮತ್ತು ಬ್ಯಾಂಕ್ ಖಾತೆಗಳಲ್ಲಿ 55.75 ಲಕ್ಷ ರೂ. ಮತ್ತು ಸಾರ್ವಜನಿಕ ಭವಿಷ್ಯ ನಿಧಿಯಲ್ಲಿ (ಪಿಪಿಎಫ್) 1.06 ಕೋಟಿ ರೂ. ಇದ್ದರೆ, ಮೇ 14 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಬ್ಯಾಂಕ್ ಖಾತೆಗಳಲ್ಲಿ 19.63 ಲಕ್ಷ ರೂ. ಮತ್ತು ಪಿಪಿಎಫ್ ಖಾತೆಯಲ್ಲಿ 6.59 ಲಕ್ಷ ರೂ. ಇದೆ.

  • ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

    ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

    ಮಡಿಕೇರಿ: ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಶಿಕ್ಷೆ ವಿಧಿಸಿದ್ದ ನ್ಯಾಯಾಲಯವೇ, `ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿ ನಿರಪರಾಧಿ ಎಂದು ಘೋಷಿಸಿದೆ. ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿ ಇದೀಗ ನ್ಯಾಯ ದೊರಕಿಸಿಕೊಟ್ಟ ವಕೀಲರಿಗೂ ಹಾಗೂ ನ್ಯಾಯಾಧೀಶರಿಗೂ ಕೃತ್ಯಜ್ಞತೆ ಸಲ್ಲಿಸಿದ್ದಾರೆ.

    ಏನಿದು ಪ್ರಕರಣ?
    4 ವರ್ಷದ ಹಿಂದೆ, ಮೈಸೂರು (Mysuru) ಜಿಲ್ಲೆಯ ಬೆಟ್ಟದಪುರದ ಶಾನುಭೋಗನಹಳ್ಳಿಯಲ್ಲಿ ಮಹಿಳೆಯ ಶವವು ಪತ್ತೆಯಾಗಿತ್ತು. ಮೃತ ಮಹಿಳೆಯನ್ನು ಕೊಡಗಿನ (Kodagu) ಕುಶಾಲನಗರದ ನಿವಾಸಿ ಮಲ್ಲಿಗೆ ಎಂದು ಗುರುತಿಸಲಾಗಿತ್ತು. ಆ ಮಹಿಳೆಯನ್ನು ಆಕೆಯ ಗಂಡ ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಬೆಟ್ಟದಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಕೊಲೆಗೈದು ಅಂತ್ಯಸಂಸ್ಕಾರ ಮಾಡಿ ಜೈಲುಪಾಲಾಗಿದ್ದ ಪತಿಗೆ ಶಾಕ್‌ – 4 ವರ್ಷದ ಬಳಿಕ ಪ್ರಿಯಕರನ ಜೊತೆ ಪತ್ನಿ ಪ್ರತ್ಯಕ್ಷ!

    ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಏ. 1ರಂದು ಮಹಿಳೆಯು ಆಕೆಯ ಪ್ರಿಯತಮ ಗಣೇಶ್‌ನೊಂದಿಗೆ ಮಡಿಕೇರಿ ನಗರದಲ್ಲೇ ಪತ್ತೆಯಾದ ಬಳಿಕ ಪ್ರಕರಣ ತಿರುವು ಪಡೆದುಕೊಂಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಪೊಲೀಸ್ ತನಿಖಾಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿಹಿಡಿದು, ಏ.23ಕ್ಕೆ ಆದೇಶ ಕಾಯ್ದಿರಿಸಿತ್ತು. ಬುಧವಾರ ಈ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಕೊಲೆ ಮಾಡದೇ 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ಎಂಬುವವರನ್ನು ನಿರಪರಾಧಿ ಎಂದು ಘೋಷಣೆ ಮಾಡಿ ಗೌರವಯುತವಾಗಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಏ.27ರೊಳಗೆ ಭಾರತ ಬಿಟ್ಟು ತೊಲಗಿ – ಪಾಕ್ ಪ್ರಜೆಗಳಿಗೆ ಭಾರತ ಖಡಕ್ ವಾರ್ನಿಂಗ್

    ಈ ಕೊಲೆ ಆರೋಪದಲ್ಲಿ ಜೈಲುವಾಸ ಅನುಭವಿಸಿದ್ದ ಕುಶಾಲನಗರದ ಬಸವನಹಳ್ಳಿ ನಿವಾಸಿ ಸುರೇಶ್ ಅವರನ್ನು ನಿರಪರಾಧಿ ಎಂದು ಘೋಷಿಸುತ್ತಿದ್ದಂತೆ ಕುಟುಂಬಸ್ಥರು ಕಣ್ಣಿರು ಹಾಕಿದರು. ಪ್ರಕರಣ ಸಂಬಂಧ, ಪೊಲೀಸ್ ದಾಖಲೆಗಳಿಂದ ಅವರ ಹೆಸರನ್ನು ತೆಗೆದು ಹಾಕುವಂತೆ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಳವರ್ ಸೂಚನೆ ನೀಡಿದರು. ಆರೋಪಿಯ ಜಾಮೀನು ಬಾಂಡ್ ಮತ್ತು ಅವರ ಶೂರಿಟಿ ಬಾಂಡ್ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದರು. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್ 193, 195ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ಸೂಚಿಸಿದ್ದಾರೆ. ಅಲ್ಲದೇ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ ಆದೇಶಿಸಿದ್ದಾರೆ. ಹಾಗೆಯೇ ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಟಾಲಿವುಡ್‌ ಸಿನಿಮಾದಲ್ಲಿ ಸುದೀಪ್‌ ಪುತ್ರಿ ಸಾನ್ವಿ- ಫ್ಯಾನ್ಸ್‌ಗೆ ಗುಡ್‌ ನ್ಯೂಸ್

    ಬಿಡುಗಡೆ ಬಳಿಕ ಮಾತನಾಡಿರುವ ಸುರೇಶ್ ಅವರು, ತಾನು ಮಾಡದೇ ಇರುವ ತಪ್ಪಿಗೆ 2 ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಯಿತು. ತಮಿಳು ಚಿತ್ರದ `ಜೈಭೀಮ್’ ಚಿತ್ರದಲ್ಲಿ ಹೇಗೆ ಪೊಲೀಸರು ಟ್ರೀಟ್‌ಮೆಂಟ್ ನೀಡಿದ್ರೋ ಹಾಗೇ ನನ್ನ ನಿಜ ಜೀವನದಲ್ಲಿ ಅಂತಹ ಟ್ರೀಟ್‌ಮೇಟ್ ಪೋಲಿಸರು ಕೊಟ್ಟಿದ್ದಾರೆ. ಕರೆಂಟ್ ಶಾಕ್, ಹಗ್ಗದಲ್ಲಿ ಕಟ್ಟಿ ಹಾಕಿ ಮಾಡದೇ ಇರುವ ಕೊಲೆಯನ್ನು ತನ್ನ ತಲೆಯ ಮೇಲೆ ಹಾಕಿದರು. ಗೊತ್ತಿಲ್ಲದ ಸ್ಥಳದಲ್ಲಿ ಮಹಜರು ಮಾಡಿದರು. ನನಗೆ ಶಿಕ್ಷೆ ಕೊಟ್ಟ ಹಾಗೆ ಬಡವರ್ಗದ ಹಲವು ಜನರಿಗೂ ಶಿಕ್ಷೆ ನೀಡಿ ಮಾಡದೇ ಇರುವ ತಪ್ಪುಗಳನ್ನು ಬೇರೆ ಯಾರೋ ಮೇಲೆ ಕೇಸ್ ಹಾಕಿದ್ದಾರೋ ಗೊತ್ತಿಲ್ಲ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಅಲ್ಲದೇ ತನ್ನ ಪರ ನ್ಯಾಯಾಲಯದಲ್ಲಿ ವಕೀಲರಾದ ಪಾಡು ಪೂಜಾರಿ ಅವರು ವಾದ ಮಾಡಿ ತನ್ನ ಬಳಿ 1 ರೂ. ಹಣವನ್ನೂ ಪಡೆಯದೇ ತನಗೆ ನ್ಯಾಯ ಕೊಡಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಬಸ್‌ ನಿಲ್ಲಿಸದಿದ್ದಕ್ಕೆ ಕಲ್ಲೆಸೆದು ಅನ್ಯಕೋಮಿನ ಯುವಕರಿಂದ ದಾಂಧಲೆ – ಸಾರ್ವಜನಿಕರಿಂದ ಬಿತ್ತು ಗೂಸಾ

    ಪತ್ನಿ ನಾಪತ್ತೆ ಆಗಿದ್ದಾಳೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿ, ನನ್ನನ್ನೇ ಕೊಲೆ ಆರೋಪಿಯನ್ನಾಗಿ ಮಾಡಿದ್ದರು. ಮಾಡದ ತಪ್ಪಿಗೆ 2 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಮಾಡಿದ ಪೋಲಿಸರಿಗೆ ತಕ್ಕ ಶಿಕ್ಷೆ ಆಗುತ್ತದೆ ಅನ್ನೋ ನಿರೀಕ್ಷೆಯಲ್ಲಿ ಸುರೇಶ್ ಇದ್ದಾರೆ.

  • ರಾಜಸ್ಥಾನ | ಅಪ್ರಾಪ್ತನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ – ಮಹಿಳೆಗೆ 20 ವರ್ಷ ಜೈಲು

    ರಾಜಸ್ಥಾನ | ಅಪ್ರಾಪ್ತನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ – ಮಹಿಳೆಗೆ 20 ವರ್ಷ ಜೈಲು

    ಜೈಪುರ್‌: ಅಪ್ರಾಪ್ತನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ 30 ವರ್ಷದ ಮಹಿಳೆಗೆ ರಾಜಸ್ಥಾನದ (Rajasthan) ಬುಂಡಿಯ ನ್ಯಾಯಾಲಯ (Court) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

    2023ರ ಅಕ್ಟೋಬರ್‌ನಲ್ಲಿ ಲಾಲಿಬಾಯಿ ಮೊಗಿಯಾ ಎಂಬಾಕೆ 16 ವರ್ಷದ ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಳು. ಈ ಸಂಬಂಧ ಪೋಕ್ಸೋ (POCSO) ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಮಹಿಳೆಗೆ 20 ವರ್ಷ ಜೈಲು, 45,000 ರೂ. ದಂಡ ವಿಧಿಸಿದೆ.

    ಬಾಲಕನ ತಾಯಿ ನೀಡಿದ್ದ ದೂರಿನಲ್ಲಿ, ಮೊಗಿಯ, 16 ವರ್ಷದ ಮಗನನ್ನು ಜೈಪುರಕ್ಕೆ ಕರೆದೊಯ್ದು, ಹೋಟೆಲ್‌ನಲ್ಲಿ ತಂಗಿದ್ದಳು. ಬಾಲಕನಿಗೆ ಕುಡಿಸಿ ಆರರಿಂದ ಏಳು ದಿನಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಳು ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಇಲ್ಲ ಜಾಮೀನು

    ತಾಯಿಯ ದೂರಿನ ಅನ್ವಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 (ಅಪಹರಣ), ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ (ಪೋಕ್ಸೋ) ಪ್ರಕರಣ ದಾಖಲಿಸಲಾಗಿತ್ತು.

    ಆರಂಭಿಕ ತನಿಖೆಯ ನಂತರ ಮೊಗಿಯಳನ್ನು ಬಂಧಿಸಲಾಯಿತು. ಆಕೆ ಜಾಮೀನಿನ ಮೇಲೆ ಹೊರಗೆ ಬಂದಿದ್ದಳು. ವಿಚಾರಣೆಯ ನಂತರ ಪೋಕ್ಸೊ ನ್ಯಾಯಾಲಯವು ಆಕೆಯನ್ನು ಅಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾರವಾರ| ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ಗೆ 8 ವರ್ಷಗಳ ಬಳಿಕ ಜೈಲು ಶಿಕ್ಷೆ

  • ಚೆಕ್‌ ಬೌನ್ಸ್‌ ಕೇಸ್‌ – ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್‌

    ಚೆಕ್‌ ಬೌನ್ಸ್‌ ಕೇಸ್‌ – ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್‌

    ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ (Cheque Bounce Case) ಮಾಜಿ ಸಚಿವ ಬಿ.ನಾಗೇಂದ್ರ (B.Nagendra) ಸೇರಿದಂತೆ ಮೂವರಿಗೆ 42ನೇ ಎಸಿಜೆಎಂ ಕೋರ್ಟ್‌ ಶಿಕ್ಷೆ ಪ್ರಕಟಿಸಿದೆ.

    ಬಿ.ನಾಗೇಂದ್ರ ಸೇರಿದಂತೆ 1.25 ಕೋಟಿ ದಂಡ ಪಾವತಿಸುವಂತೆ ಮೂವರು ಆರೋಪಿಗಳಿಗೆ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಜಡ್ಜ್‌ ಕೆ.ಎನ್.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಇದಕ್ಕೆ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ: ನಿಖಿಲ್

    ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ವಿಎಸ್ಎಲ್ ಸ್ಟೀಲ್ಸ್ ಲಿಮಿಟೆಡ್ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು.

  • ರಾಜೇಂದ್ರ ಕೊಲೆ ಸುಪಾರಿ ಕೇಸ್ – 9 ದಿನ ಕಳೆದರೂ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸದ ಪೊಲೀಸರು

    ರಾಜೇಂದ್ರ ಕೊಲೆ ಸುಪಾರಿ ಕೇಸ್ – 9 ದಿನ ಕಳೆದರೂ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸದ ಪೊಲೀಸರು

    – ಅಮಾಯಕರನ್ನು ಫಿಟ್ ಮಾಡುವ ತಂತ್ರವೇ?

    ತುಮಕೂರು: ಎಂಎಲ್‌ಸಿ ರಾಜೇಂದ್ರ ರಾಜಣ್ಣರ (MLC Rajendra Rajanna) ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಿ 9 ದಿನ ಕಳೆದರೂ ಪೊಲೀಸರು ಕೋರ್ಟಿಗೆ ಹಾಜರುಪಡಿಸದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಆರೋಪಿಗಳಾದ ಸೋಮು, ಅಮಿತ್, ಭರತ್, ಯತೀಶ್ ಹಾಗೂ ಆಡಿಯೋದಲ್ಲಿ ಮಾತನಾಡಿದ ಮಹಿಳೆ ಪುಷ್ಪಾ, ಆಕೆಯ ಸ್ನೇಹಿತೆ ಯಶೋಧಾ ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿಸಿ 9 ದಿನ ಕಳೆದಿದೆ. ಬಂಧನವಾದ 24 ಗಂಟೆಯೊಳಗೆ ಕೋರ್ಟ್ (Court) ಮುಂದೆ ಹಾಜರುಪಡಿಸಬೇಕಿತ್ತು. ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸದೇ ಲೋಪ ಎಸಗಿದ್ದಾರೆ. ಎಲ್ಲಾ ಆರೋಪಿಗಳ ಬಳಿ ಬಲವಂತವಾಗಿ ವಿಚಾರಣೆಗೆ ಬಂದು ವಾಪಸ್ ಹೋಗಿದ್ದೇವೆ ಎಂದು ಪ್ರತಿದಿನ ಬರೆಸಿಕೊಂಡು ಸಹಿ ಹಾಕಿಸಿಕೊಳ್ಳುತಿದ್ದಾರೆ ಎಂದು ಬಂಧಿತರ ಸಂಬಂಧಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ

    ಅಲ್ಲದೇ ಏ5 ಆರೋಪಿ ಯತೀಶ್ ಅವರ ಸಂಬಂಧಿಗಳು ಪೊಲೀಸರ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇವರ ಅರ್ಜಿ ಪುರಸ್ಕರಿಸಿದ ಕೋರ್ಟ್ ಪೊಲೀಸರಿಗೆ ಛಿಮಾರಿ ಹಾಕಿ ಕಳುಹಿಸಿದೆ. ಕೋರ್ಟ್ ಎಚ್ಚರಿಕೆಯಿಂದ ಎಚ್ಚೆತ್ತುಕೊಂಡ ಪೊಲೀಸರು ಯತೀಶ್‌ನನ್ನು ಬಿಟ್ಟು ಕಳುಹಿಸಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲ ಎಂದು ಹಿಂಬರಹ ಕೊಟ್ಟು ಬಿಡುಗಡೆಗೊಳಿಸಿದ್ದಾರೆ. ಇದನ್ನೂ ಓದಿ: ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ 18 ಲಕ್ಷ ರೂ. ದೋಚಿದ ಖದೀಮರು

    ಅಮಾಯಕರನ್ನು ಫಿಟ್ ಮಾಡಲು ಒತ್ತಡ?
    ಕೊಲೆ ಸುಪಾರಿ ಪ್ರಕರಣ ಒಂದು ಕಟ್ಟು ಕಥೆ ಎಂಬುದು ಆರೋಪಿಗಳ ವಿಚಾರಣೆಯಿಂದ ಪೊಲೀಸರಿಗೆ ದೃಢಪಟ್ಟಿದೆ. ಪುಷ್ಪಾ ಎಂಬ ಮಹಿಳೆ ತನ್ನ ಸ್ನೇಹಿತ ಸೋಮು ಮೇಲಿನ ವೈಮನಸ್ಸಿನಿಂದ ಅವರ ಮೇಲೆ ಕೆಟ್ಟ ಹೆಸರು ಬರಲಿ ಎಂದು ಕೊಲೆ ಸುಪಾರಿ ವದಂತಿ ಹಬ್ಬಿಸಿದ್ದಳು. ವಿಚಾರಣೆ ವೇಳೆ ಆಕೆ ಇದನ್ನು ಒಪ್ಪಿಕೊಂಡಿದ್ದಾಳೆ. ಆದರೂ ಪೊಲೀಸರು ಎಲ್ಲಾ ಆರೋಪಿಗಳನ್ನು ಊರ್ಡಿಗೆರೆ ಹಾಗೂ ಸದಾಶಿವನಗರ ಉಪ ಠಾಣೆಯಲ್ಲಿ ಇರಿಸಿದ್ದಾರೆ ಹೊರತು ಕೋರ್ಟ್‌ಗೆ ಹಾಜರುಪಡಿಸಿಲ್ಲ. ಜೊತೆಗೆ ಅಮಾಯಕರನ್ನು ಫಿಟ್ ಮಾಡಲು ಸಂಚು ನಡೆಯುತ್ತಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಲೈನ್‍ಮೆನ್ ಬೈಕ್‍ಗೆ ಕಾರು ಡಿಕ್ಕಿ – ಸವಾರ ಹಾರಿ ಬಿದ್ರೂ ನಿಲ್ಲಿಸದೇ ಪರಾರಿಯಾದ ಚಾಲಕ

    ಆಡಿಯೋದಲ್ಲಿದ್ದ ರಾಕಿಗೆ ವಿಐಪಿ ಟ್ರೀಟ್‌ಮೆಂಟ್:
    ಪುಷ್ಪಾ ಜೊತೆ ಆಡಿಯೋದಲ್ಲಿ ಮಾತನಾಡಿದ ಯುವಕ ರಾಕಿಯನ್ನು ಪೊಲೀಸರು ಬಂಧಿಸಿ ವಿಚಾರಿಸಬೇಕಿತ್ತು. ತನಿಖಾ ತಂಡದಲ್ಲಿ ಇದ್ದ ಸಿಪಿಐ ಒಬ್ಬರ ಸಂಬಂಧಿ ರಾಕಿ. ಹಾಗಾಗಿ ರಾಕಿಯನ್ನು ವಿಚಾರಣೆ ಮಾಡಿ ಕಳುಹಿಸಿದ್ದಾರೆ ಎಂಬ ಆರೋಪ ಈಗ ಬಂದಿದೆ. ಇದನ್ನೂ ಓದಿ: ಭಾರೀ ಗಾಳಿ ಮಳೆಯಿಂದ ಶಾರ್ಟ್ ಸರ್ಕ್ಯೂಟ್ – ನೂರಾರು ಮನೆಗಳ ಟಿವಿ, ಫ್ರಿಡ್ಜ್‌ಗಳಿಗೆ ಹಾನಿ

  • ವಿಚಾರಣೆಗೆ ದರ್ಶನ್‌ ಗೈರು – ಬೆಂಗಳೂರು ಕೋರ್ಟ್‌ ಅಸಮಾಧಾನ

    ವಿಚಾರಣೆಗೆ ದರ್ಶನ್‌ ಗೈರು – ಬೆಂಗಳೂರು ಕೋರ್ಟ್‌ ಅಸಮಾಧಾನ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಪ್ರಕರಣದ ಆರೋಪಿ ನಟ ದರ್ಶನ್‌ (Darshan) ಅವರು ವಿಚಾರಣೆ ಹಾಜರಾಗದಿದ್ದಕ್ಕೆ  57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

    ಇಂದು ದರ್ಶನ್‌ ಕೋರ್ಟ್‌ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು.

    ಈ ವೇಳೆ ನ್ಯಾಯಾಧೀಶರು (Judge) ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಪತಿ ವಿರುದ್ಧ ಅಕ್ರಮ ಸಂಬಂಧ ಆರೋಪ – ಪತ್ನಿ ನೇಣಿಗೆ ಶರಣು

    ವಿಚಾರಣೆ ವೇಳೆ ದರ್ಶನ್‌ ಪರ ವಕೀಲರು, ದರ್ಶನ್‌ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್‌, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್‌ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಕೃಷಿಹೊಂಡದಲ್ಲಿ ಮುಳುಗಿ ಅಕ್ಕ, ತಂಗಿಯ ದಾರುಣ ಸಾವು

    ಇಂದಿನ ವಿಚಾರಣೆಗೆ ಪವಿತ್ರಾ ಗೌಡ ಮತ್ತು ಉಳಿದ ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದರು. ಸಹೋದರನ ಜೊತೆ ಪವಿತ್ರಾ ಗೌಡ ಆರ್ ಆರ್ ನಗರದ ಮನೆಯಿಂದ ಕೋರ್ಟ್‌ಗೆ ಆಗಮಿಸಿದ್ದರು.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ (Court) ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್​ಗೆ ಹಾಜರಾಗಿದ್ದರು.

     

  • ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ದರ್ಶನ್‌, ಪವಿತ್ರ ಗೌಡ

    ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ದರ್ಶನ್‌, ಪವಿತ್ರ ಗೌಡ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) ಆರೋಪಿಗಳಾದ ದರ್ಶನ್‌ (Darshan) ಸೇರಿ ಎಲ್ಲಾ 17 ಆರೋಪಿಗಳು ಇಂದು ಮತ್ತೆ ನಗರದ 57ನೇ ಸಿಸಿಹೆಚ್ ಕೋರ್ಟ್​ಗೆ ಹಾಜರಾಗಲಿದ್ದಾರೆ.

    ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ (Court) ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಎಲ್ಲರೂ ಕೋರ್ಟ್​ಗೆ ಹಾಜರಾಗುತ್ತಿದ್ದಾರೆ. ಇದನ್ನೂ ಓದಿ: ಪತಿ ವಿರುದ್ಧ ಅಕ್ರಮ ಸಂಬಂಧ ಆರೋಪ – ಪತ್ನಿ ನೇಣಿಗೆ ಶರಣು

    ಕಳೆದ ಬಾರಿ ವಿಚಾರಣೆ ವೇಳೆ ಪವಿತ್ರಗೌಡಗೆ (Pavithra Gowda) ಕ್ಯಾರೇ ಅನ್ನದೇ ಹೊರಟ್ಟಿದ್ದ ದರ್ಶನ್ ಮತ್ತೆ ಭೇಟಿ ಆಗಿರಲಿಲ್ಲ. ಸಾಕಷ್ಟು ದಿನದ ಬಳಿಕ ಭೇಟಿಗಾಗಿ ಹಾತೊರೆಯುತ್ತಾ ಇದ್ದ ಪವಿತ್ರಗೌಡಗೆ ನಿರಾಸೆ ಆಗಿತ್ತು. ಈಗ ಹಲವು ದಿನಗಳ ನಂತರ ಮತ್ತೆ ದರ್ಶನ್ ಭೇಟಿಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಧೂರು ದೇಗುಲದಲ್ಲಿ ಅನುಷ್ಕಾ ಶೆಟ್ಟಿಯಿಂದ ಅಷ್ಟ ದ್ರವ್ಯ ಮಹಾಗಣಪತಿ ಯಾಗ

    ಈಗಾಗಲೇ ದೇಶಾದ್ಯಂತ ಸಂಚರಿಸಲು ಅನುಮತಿಯನ್ನು ಪಡೆದಿರುವ ದರ್ಶನ್ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಏಪ್ರಿಲ್‌ 18 ರಂದು ಜಾಮೀನು ಅರ್ಜಿ ವಿಚಾರಣೆ ಇರುವುದರಿಂದ ಇಂದು ವಿಚಾರಣೆಗೆ ತಪ್ಪದೇ ಹಾಜರಾಗಲಿದ್ದಾರೆ.

  • ಸಂಜನಾಗೆ ವಂಚನೆ – ಅಪರಾಧಿಗೆ 61.50 ಲಕ್ಷ ದಂಡ, 6 ತಿಂಗಳು ಜೈಲು

    ಸಂಜನಾಗೆ ವಂಚನೆ – ಅಪರಾಧಿಗೆ 61.50 ಲಕ್ಷ ದಂಡ, 6 ತಿಂಗಳು ಜೈಲು

    ಬೆಂಗಳೂರು: ನಟಿ ಸಂಜನಾ ಗಲ್ರಾನಿ (Sanjana Galrani) ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ (Rahul Thonse) ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

    ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

    ದಂಡದ ಮೊತ್ತದಲ್ಲಿ 10 ಸಾವಿರ ರೂ. ಕೋರ್ಟ್ ಶುಲ್ಕವನ್ನು ಕಡಿತಗೊಳಿಸಿ ಉಳಿದ 61.40 ಲಕ್ಷ ರೂ.ವನ್ನು ದೂರುದಾರೆ ಸಂಜನಾಗೆ ನೀಡಬೇಕು. ನಿಗದಿತ ಸಮಯದ ಒಳಗಡೆ ದಂಡದ ಮೊತ್ತವನ್ನು ಪಾವತಿ ಮಾಡಿದರೆ 6 ತಿಂಗಳ ಶಿಕ್ಷೆಯನ್ನು ಮಾಫಿ ಮಾಡಲಾಗುತ್ತದೆ. ಇಲ್ಲವಾದರೆ 6 ತಿಂಗಳು ಜೈಲು ಮತ್ತು ದಂಡವನ್ನು ಪಾವತಿ ಮಾಡಬೇಕೆಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಸಂಜನಾ ಗಲ್ರಾನಿ ಮತ್ತೆ ಗರ್ಭಿಣಿ – 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ

    ಏನಿದು ಪ್ರಕರಣ?
    ರಾಹುಲ್ ತೋನ್ಸೆ ಗೋವಾ ಮತ್ತು ಕೊಲಂಬೋದಲ್ಲಿ ಕ್ಯಾಸಿನೋಗಳ (Colombo Casino) ವ್ಯವಸ್ಥಾಪಕ ನಿರ್ದೇಶಕನಾಗಿದ್ದಾನೆ. ಈತ ಸಂಜನಾಗೆ ನಾನು ಹೇಳಿದ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಸಿಗಲಿದೆ ಎಂದು ಹೇಳಿದ್ದ. ಇದನ್ನೂ ಓದಿ: ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

    ರಾಹುಲ್‌ ಮಾತು ಕೇಳಿ 2018-19 ರಲ್ಲಿ 45 ಲಕ್ಷ ರೂ.ಗಳನ್ನು ಸಂಜನಾ ಹೂಡಿಕೆ ಮಾಡಿದ್ದರು. ಆದರೆ ನಂತರ ಯಾವುದೇ ವ್ಯವಹಾರ ಆಗದೇ ವಂಚನೆ ಮಾಡಿದ್ದ. ನಂತರ ಹೂಡಿಕೆ ಮಾಡಿದ್ದ ಹಣವನ್ನು ಮರಳಿಸುವಂತೆ ಒತ್ತಾಯ ಮಾಡಿದರೂ ರಾಹುಲ್‌ ಎರಡು ಚೆಕ್ ನೀಡಿದ್ದ. ಚೆಕ್‌ನಿಂದಲೂ ಹಣ ವಾಪಸ್ ಆಗದ ಹಿನ್ನೆಲೆ ಸಂಜನಾ ಇಂದಿರಾನಗರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.