Tag: court

  • ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸ್ಬೇಕು: ಸಿದ್ದರಾಮಯ್ಯ

    ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸ್ಬೇಕು: ಸಿದ್ದರಾಮಯ್ಯ

    – 6 ಸಚಿವರು ರಾಜೀನಾಮೆ ಕೊಡಬೇಕು

    ಬೆಂಗಳೂರು: ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಈಗಾಗಲೇ ಕೋರ್ಟಿಗೆ ಹೋಗಿರುವ 6 ಮಂದಿ ಸಚಿವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಹೋರಾಟ ಮುಂದುವರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

    6 ಸಚಿವರು ರಾಜೀನಾಮೆ ಕೊಡಬೇಕು. ಹಾಗೆಯೇ ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಹೋರಾಟ ಮುಂದುವರಿಸುತ್ತೇವೆ. ಸರ್ಕಾರ ಪ್ರಕರಣ ನಿಭಾಯಿಸಲು ವಿಫಲವಾಗಿದೆ. ತಾರತಮ್ಯ ಧೋರಣೆ ಸರಿಯಲ್ಲ ಎಂಸು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ಮಾಜಿ ಸಚಿವರ ರಾಸಲೀಲೆ ಸಿಡಿ ಹೊರಬರುತ್ತಿದ್ದಂತೆಯೇ 6 ಮಂದಿ ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು ಕೋರ್ಟ್ ಮೊರೆ ಹೋಗಿದ್ದರು. ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಆದರೆ ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

  • ನಾವೇನು ತಪ್ಪು ಮಾಡಿದ್ದೇವೆ? ರೇಪ್ ಮಾಡಿದ್ದೀವಾ? – ಸುಧಾಕರ್ ಗರಂ‌

    ನಾವೇನು ತಪ್ಪು ಮಾಡಿದ್ದೇವೆ? ರೇಪ್ ಮಾಡಿದ್ದೀವಾ? – ಸುಧಾಕರ್ ಗರಂ‌

    ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕೇವಲ ಸಿಡಿ ಬಗ್ಗೆ ಮಾತ್ರ ಚರ್ಚೆ ನಡೆಯಲಿಲ್ಲ. ಮಾನಹಾನಿ ಭಯದಲ್ಲಿ ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದ ಆರು ಸಚಿವರ ವಿರುದ್ಧವೂ ಕಾಂಗ್ರೆಸ್ ಅಸ್ತ್ರ ಝಳಪಿಸಿತು.

    ಯಾವುದೇ ಆರೋಪಗಳು ಕೇಳಿಬರದೇ ಇದ್ದರೂ ಕೋರ್ಟ್‍ಗೆ ಹೋದ ಆರು ಸಚಿವರ ತಲೆದಂಡ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

    ಆರು ಜನಕ್ಕೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲ. ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳದವರು ಇನ್ನು ಜನರನ್ನು ಹೇಗೆ ರಕ್ಷಣೆ ಮಾಡಿಕೊಳ್ತಾರೆ? ಅವರು ಬೇಕಿದ್ರೆ ಸ್ಟೇ ತಂದುಕೊಳ್ಳಲಿ? ನನ್ನ ತಕರಾರಿಲ್ಲ. ಆದರೆ ಅವರು ತನಿಖೆ ಮುಗಿಯೋವರೆಗೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

    ಆರು ಜನ ಮಾತ್ರ ಏಕೆ ಕೋರ್ಟ್‍ಗೆ ಹೋಗಿದ್ದಾರೆ? ಗೋಪಾಲಯ್ಯ, ಬೊಮ್ಮಾಯಿ ಏಕೆ ಹೋಗಲಿಲ್ಲ. ಈಶ್ವರಪ್ಪ ಯಾಕೆ ಹೋಗಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

    ಇದಕ್ಕೆ ಸಚಿವರಾದ ಶಿವರಾಂ ಹೆಬ್ಬಾರ್, ಸೋಮಶೇಖರ್, ನಾರಾಯಣಗೌಡ ಆಕ್ಷೇಪಿಸಿದರು. ನಾವು ಸರ್ಕಾರ ಉರುಳಿಸಿದ್ವಿ ಎಂಬ ಕಾರಣಕ್ಕೆ ನಮ್ಮ ವಿರುದ್ಧ ಷಡ್ಯಂತ್ರ್ಯ ನಡೆಯುತ್ತಿದೆ. ಹೀಗಾಗಿ ನಮ್ಮ ವಿರುದ್ಧ ಸುಳ್ಳು ಆಪಾದನೆಗಳು ಬರಬಾರದು ಎಂಬ ಕಾರಣಕ್ಕೆ ಕೋರ್ಟ್‍ಗೆ ಹೋಗಿದ್ದಾಗಿ ಸಮರ್ಥಿಸಿಕೊಂಡರು.

    ಪೊಲೀಸರ ಮೊರೆ ಏಕೆ ಹೋಗಲಿಲ್ಲ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಮ್ಮಿಷ್ಟ ಎಂದು ಹೆಬ್ಬಾರ್ ತಿರುಗೇಟು ನೀಡಿದರು. ಇದರಿಂದ ಗರಂ ಆದ ಸಿದ್ದರಾಮಯ್ಯ, ನೀವು ನಮ್ಮಿಷ್ಟ ಎಂದು ಹೇಳುವಂತಿಲ್ಲ. ನೀವು ಸಚಿವ ಸ್ಥಾನದಲ್ಲಿದ್ದೀರಿ. ಸ್ಪಷ್ಟನೆ ನೀಡಬೇಕು ಎಂದರು.

    ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಮಾತನಾಡಿ, ನಿಮಗೆ ಕೋರ್ಟ್‍ಗೆ ಹೋಗಲು ಸಲಹೆ ಕೊಟ್ಟಿದ್ಯಾರು? ಅವರು ಶುದ್ಧ ದಡ್ಡರು ಅಥವಾ ನಿಮ್ಮ ಏಳಿಗೆ ಸಹಿಸದವರು ಅಂತ ಕಿಚಾಯಿಸಿದರು. ಇದಕ್ಕೆ ಗರಂ ಆದ ಸೋಮಶೇಖರ್, ಇವ್ರೇನು ಸತ್ಯಹರಿಶ್ಚಂದ್ರರಾ ಎಂದು ವಾಗ್ದಾಳಿ ನಡೆಸಿದರು. ಸುಧಾಕರ್ ಸಿಟ್ಟಾಗಿ ನಾವೇನು ತಪ್ಪು ಮಾಡಿದ್ದೇವೆ? ರೇಪ್ ಮಾಡಿದ್ದೀವಾ ಎಂದು ಪ್ರಶ್ನಿಸಿ ಕಾಂಗ್ರೆಸ್‌ ಟೀಕೆಗೆ ತಿರುಗೇಟು ನೀಡಿದರು.

  • ಭಾಷೆ ತಿಳಿಯದೆ ಅಧಿಕಾರ ಕಳೆದುಕೊಂಡ ಮಹಿಳೆ

    ಭಾಷೆ ತಿಳಿಯದೆ ಅಧಿಕಾರ ಕಳೆದುಕೊಂಡ ಮಹಿಳೆ

    ಭುವನೇಶ್ವರ: ಭಾಷೆ ಗೊತ್ತಿಲ್ಲ ಎಂದು ಗ್ರಾಮ ಪಂಚಾಯತ್ ಸದಸ್ಯತ್ವ ಸ್ಥಾನದಿಂದ ಮಹಿಳೆ ಅನರ್ಹವಾಗಿರುವ ಘಟನೆ ಗಂಜಾಮ್ ಜಿಲ್ಲೆಯಲ್ಲಿ ನಡೆದಿದೆ.

    ಎಂ. ಲಕ್ಷ್ಮೀ ಗಂಜಾಮ್ ಜಿಲ್ಲೆಯ ಛತ್ರಪುರ್ ಬ್ಲಾಕ್ ಅಡಿಯಲ್ಲಿ ಬರುವ ಆರ್ಯಪಲಿ ಗ್ರಾಮ ಪಂಚಾಯ್ತಿಯಿಂದ 2017ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಆದರೆ ಲಕ್ಷ್ಮೀಯ ಆಯ್ಕೆಯ ಕುರಿತಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು. ಲಕ್ಷ್ಮೀ ಅವರಿಗೆ ಒಡಿಯಾ ಭಾಷೆ ಗೊತ್ತಿಲ್ಲ ಎಂದು ಆರೋಪಿಸಲಾಗಿತ್ತು.

    1994ರ ಒಡಿಶಾ ಗ್ರಾಮ ಪಂಚಾಯ್ತಿ ಕಾಯ್ದೆ ಪ್ರಕಾರ ಒಡಿಯಾ ಭಾಷೆಯನ್ನು ಓದಲು, ಬರೆಯಲು ಹಾಗೂ ಮಾತನಾಡಕಲು ಬರಲಿಲ್ಲವೆಂದರೆ ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಸ್ಥಾನವನ್ನು ಹೊಂದಲು ಅವಕಾಶ ಇರುವುದಿಲ್ಲ.

    ಇದೀಗ ಸುದೀರ್ಘ ವಿಚಾರಣೆ ನಂತರ ಲಕ್ಷ್ಮೀ ಅವರಿಗೆ ಭಾಷೆ ಗೊತ್ತಿಲ್ಲ ಎಂದು ನ್ಯಾಯಾಲಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದೆ. ಲಕ್ಷ್ಮೀ ಅವರಿಗೆ ಒಡಿಯಾ ಗೊತ್ತಿಲ್ಲ ಎಂದು ಸ್ಪಷ್ಟವಾದ ಬಳಿಕ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತಾಗಿ ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

  • ಕುಡಿಯಲು ಹಣ ನೀಡದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ

    ಕುಡಿಯಲು ಹಣ ನೀಡದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ

    ಬೆಂಗಳೂರು: ಕುಡಿಯಲು ಹಣ ನೀಡದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.

    ಆನೇಕಲ್‍ನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಈ ಮಹತ್ವದ ತೀರ್ಪು ಪ್ರಕಟಿಸಿದ್ದು, ಮೌಲಾ(45) ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ. ನ್ಯಾಯಾಧೀಶರಾದ ಸೈಯದ್ ಬಲಿಗೂರ್ ರೆಹಮಾನ್ ಅವರು ತಿರ್ಪು ಪ್ರಕಟಿಸಿದ್ದು, ಸರ್ಕಾರಿ ಅಭಿಯೋಜಕರಾಗಿ ಗಣೇಶ್ ನಾಯಕ್ ವಾದ ಮಂಡಿಸಿದ್ದರು.

    ಕುಡಿಯಲು ಹಣ ನೀಡದ ಕಾರಣ ಪತ್ನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. 2014ರಲ್ಲಿ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಆರೋಪಿ ಮೌಲಾ ತನ್ನ ಪತ್ನಿ ಜಬಿನಾಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ.

  • ಅಪ್ರಾಪ್ತೆಯರನ್ನು ಪ್ರೀತಿಸಿ ವಿವಾಹ- ಇಬ್ಬರು ಯುವಕರಿಗೆ 10 ವರ್ಷ ಜೈಲು, 5.20 ಲಕ್ಷ ದಂಡ

    ಅಪ್ರಾಪ್ತೆಯರನ್ನು ಪ್ರೀತಿಸಿ ವಿವಾಹ- ಇಬ್ಬರು ಯುವಕರಿಗೆ 10 ವರ್ಷ ಜೈಲು, 5.20 ಲಕ್ಷ ದಂಡ

    ಚಾಮರಾಜನಗರ: ಅಪ್ರಾಪ್ತೆಯರನ್ನು ಪ್ರೀತಿಸಿ ಮದುವೆಯಾಗಿದ್ದ ಇಬ್ಬರಿಗೆ ತಲಾ 10 ವರ್ಷ ಜೈಲು ಶಿಕ್ಷೆ, 5.20 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 2 ವರ್ಷ ಸಾಧಾರಣ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

    ಜಿಲ್ಲಾ ನ್ಯಾ.ಸದಾಶಿವ ಎಸ್.ಸುಲ್ತಾನ್ ಪುರಿ ಆದೇಶ ಹೊರಡಿಸಿದ್ದು, ಹನೂರು ತಾಲೂಕಿನ ಚೆಲುವ ಹಾಗೂ ಮುತ್ತುರಾಜ್ ಶಿಕ್ಷೆಗೊಳಗಾದ ಅಪರಾಧಿಗಳು. ಅಪ್ರಾಪ್ತೆಯರನ್ನು ಮದುವೆಯಾಗಿ ಲೈಂಗಿಕ ಕ್ರಿಯೆ ನಡೆಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಇಂದು ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿ ಆದೇಶಿಸಿದ್ದಾರೆ. ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ 5.20 ಲಕ್ಷ ರೂ. ದಂಡದ ಹಣವನ್ನು ಬಾಲಕಿಯರಿಗೆ ಪರಿಹಾರ ರೂಪದಲ್ಲಿ ನೀಡಬೇಕೆಂದು ಆದೇಶಿಸಿದ್ದು, ವಿಶೇಷ ಸರ್ಕಾರಿ ಅಭಿಯೋಜಕರಾಗಿ ಯೋಗೇಶ್ ವಾದ ಮಂಡಿಸಿದ್ದರು.

    ಹನೂರು ತಾಲೂಕಿನ ಗ್ರಾಮವೊಂದರ ನಿವಾಸಿಗಳಾದ ಚೆಲುವ ಹಾಗೂ ಮುತ್ತುರಾಜ್ ಇದೇ ಗ್ರಾಮದಲ್ಲಿ ವಾಸವಿದ್ದ ಇಬ್ಬರು ಬಾಲಕಿಯರನ್ನು 2016ರಲ್ಲಿ ಪ್ರೀತಿಸಿ, ಮನೆಯಿಂದ ತಮಿಳುನಾಡಿಗೆ ಕರೆದೊಯ್ದು ಮದುವೆಯಾಗಿ, ಕೂಲಿ ಕೆಲಸ ಮಾಡುತ್ತಿದ್ದರು. ಬಳಿಕ ಪೊಲೀಸರು ಬಾಲಕಿಯರನ್ನು ಪತ್ತೆಹಚ್ಚಿ ಕರೆತಂದಿದ್ದರು. ಈ ಸಂಬಂಧ ರಾಮಾಪುರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅಡಿ ಪ್ರಕರಣ ದಾಖಲಾಗಿತ್ತು.

  • ಪ್ರೀತಿಗೆ ಒಪ್ಪದ ಯುವತಿಗೆ ಚಾಕು ಇರಿತ – ಅಪರಾಧಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

    ಪ್ರೀತಿಗೆ ಒಪ್ಪದ ಯುವತಿಗೆ ಚಾಕು ಇರಿತ – ಅಪರಾಧಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

    ಹುಬ್ಬಳ್ಳಿ: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕನಿಗೆ ಹುಬ್ಬಳ್ಳಿಯ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಪ್ರಕರಣ ಹಿನ್ನೆಲೆ: ಜಿಲ್ಲೆಯ ವೆಂಕಟೇಶ್ವರ ನಗರದ ಮೇಘನಾ ಚಂದ್ರಶೇಖರ್ ಜಾಳಗಿ ಎಂಬವರಿಗೆ ರಾಯಚೂರು ಮೂಲದ ಅಭಿನವ್ ಕುಲಕರ್ಣಿ ಎಂಬ ಯುವಕ ಫೋನ್ ಹಾಗೂ ಮೆಸೆಜ್ ಮಾಡಿ ತನ್ನ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಯುವತಿ ಪ್ರೀತಿ ಮಾಡಲು ಒಪ್ಪದ್ದರಿಂದ ಯುವಕ ಇದೇ ಸಿಟ್ಟಿನಿಂದಾಗಿ 2015ರ ನವಂಬರ್ 29 ರಂದು ಹುಬ್ಬಳ್ಳಿ ಗೋಕುಲ್ ರೋಡ ಅರ್ಬನ್ ಓಯಾಸಿಸ್ ಮಾಲ್‍ನಲ್ಲಿ ಯುವತಿಗೆ ಚಾಕುವಿನಿಂದ ಕುತ್ತಿಗೆಗೆ ಹಾಗೂ ಹೊಟ್ಟೆಗೆ ಇರಿದು ಕೊಲೆ ಮಾಡಲು ಪ್ರಯತ್ನಿಸಿದ್ದಲ್ಲದೇ, ತಾನು ಸಹ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಹಾಗೂ ಹೊಟ್ಟೆಗೆ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದನು.

    ಈ ಬಗ್ಗೆ ಹುಬ್ಬಳ್ಳಿ ಗೋಕುಲ್ ರೋಡ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆಃ 140/2015 ಕಲಂ: 307, 354 (ಡಿ) (1), 309 ಐಪಿಸಿ ಅಡಿಯಲ್ಲಿ ಪ್ರಕರಣವನ್ನು ಆಗ ಕರ್ತವ್ಯದ ಮೇಲಿದ್ದ ಗೋಕುಲ್ ರೋಡ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಎಸ್.ಕೆ. ಕುರಗೋಡಿರವರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡು ಆರೋಪಿತನಿಗೆ ದಸ್ತಗೀರ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ಆರೋಪಿತನ ಮೇಲೆ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಸದರಿಯವನ ಮೇಲೆ ದಿನಾಂಕಃ 23-03-2016 ರಂದು ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಸದರಿ ಪ್ರಕರಣವು ಮಾನ್ಯ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹುಬ್ಬಳ್ಳಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿತನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದಿನಾಂಕಃ 08-03-2021ರಂದು ನ್ಯಾಯಾಧೀಶರಾದ ಗಂಗಾಧರ ಕೆ ಎನ್ ರವರು

    1. ಕಲಂ: 307 ಐಪಿಸಿ ಅಡಿಯಲ್ಲಿ 7 ವರ್ಷ ಕಠಿಣ ಶಿಕ್ಷೆ ಒಂದು ಲಕ್ಷ ರೂಪಾಯಿ ಜುಲ್ಮಾನೆ, ಜುಲ್ಮಾನೆ ಕಟ್ಟದಿದ್ದಲ್ಲಿ ಎರಡು ವರ್ಷ ಸಾದಾ ಶಿಕ್ಷೆ.

    2. ಕಲಂ: 354 (ಡಿ) (1) ಐಪಿಸಿ ಅಡಿಯಲ್ಲಿ ಒಂದುವರೆ ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ, ದಂಡ ತುಂಬದಿದ್ದಲ್ಲಿ 6 ತಿಂಗಳು ಸಾದಾ ಶಿಕ್ಷೆ.

    3. ಕಲಂ: 309 ಐಪಿಸಿ ಅಡಿಯಲ್ಲಿ 6 ತಿಂಗಳು ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ, ದಂಡ ತುಂಬದಿದ್ದಲ್ಲಿ 1 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಯುವತಿ ಪರವಾಗಿ ಸರ್ಕಾರಿ ಅಭಿಯೋಜಕಿ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದರು.

  • ಮಹಾನ್‌ ನಾಯಕ ಸೇರಿದಂತೆ 9 ಮಂದಿ ವಿರುದ್ಧ ಶೀಘ್ರವೇ ಕೇಸ್‌ – ಬಾಲಚಂದ್ರ ಜಾರಕಿಹೊಳಿ

    ಮಹಾನ್‌ ನಾಯಕ ಸೇರಿದಂತೆ 9 ಮಂದಿ ವಿರುದ್ಧ ಶೀಘ್ರವೇ ಕೇಸ್‌ – ಬಾಲಚಂದ್ರ ಜಾರಕಿಹೊಳಿ

    ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನ್‌ ನಾಯಕ ಸೇರಿ 9 ಜನರನ್ನು ಜೈಲಿಗೆ ಕಳಿಸುವುದು ಗ್ಯಾರಂಟಿ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯಮಟ್ಟದ ಖಾಸಗಿ ಪತ್ತೆದಾರರ ಮೂಲಕ ಮಹತ್ವದ ಸಾಕ್ಷ್ಯಗಳನ್ನು ನಾವು ಕಲೆಹಾಕಿದ್ದೇವೆ. ಬೆಂಗಳೂರು, ಬೆಳಗಾವಿ, ಗೋಕಾಕ್ ಪೈಕಿ ಎಲ್ಲಿ ಕೇಸ್ ದಾಖಲಿಸಬೇಕು ಎನ್ನುವುದನ್ನು ನಾವು ಈಗ ಪ್ಲಾನ್‌ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಕೇಸ್‌ ದಾಖಲಿಸುವ ಸಂಬಂಧ ದೆಹಲಿ ಮೂಲದ ಖ್ಯಾತ ವಕೀಲರು, ಕಾನೂನು ತಜ್ಞರ ಬಳಿ ಚರ್ಚೆ ನಡೆಸಲಾಗುತ್ತಿದೆ. ನಾಲ್ಕೈದು ದಿನಗಳಲ್ಲಿ ಆ ಒಂಭತ್ತು ಜನರ ವಿರುದ್ಧ ಕೇಸ್ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

    ಮಹಾನ್‌ ನಾಯಕ ಯಾರು ಎಂದು ಪ್ರಶ್ನಿಸಿದ್ದಕ್ಕೆ, ಮಹಾನ್ ನಾಯಕ ಪಕ್ಷವೊಂದರ ನಾಯಕ ಅಂತಾ ಅಷ್ಟೇ ಹೇಳಬಹುದು. ಒಂಭತ್ತು ಜನರಲ್ಲಿ ಸಂತ್ರಸ್ತ ಯುವತಿ ಇಲ್ಲ. ತನಿಖೆ ಮುಂದುವರಿದ ಭಾಗವಾಗಿ ಯುವತಿ ಬರಲಿದ್ದಾಳೆ. ಪ್ರಕರಣದ ಮುಗಿಯುವ ತನಕ ಇಡೀ ಕುಟುಂಬ ರಮೇಶ್ ಜಾರಕಿಹೊಳಿ ಜೊತೆಗೆ ನಿಲ್ಲಲಿದೆ ಎಂದರು.

    ರಮೇಶ್ ಜಾರಕಿಹೊಳಿ ನಿರಪರಾಧಿ ಆಗಿ ವಾಪಸ್‌ ಬರುತ್ತಾರೆ. ಸಿಎಂ ಕೂಡ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಿಬಿಐ, ಸಿಐಡಿ, ಎಸ್‌ಐಟಿ ಸೇರಿದಂತೆ ಯಾವುದೇ ಸಂಸ್ಥೆಗೆ ಬೇಕಾದರೂ ಕೇಸ್ ವರ್ಗಾವಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಹೇಳಿದರು.

  • ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾರವಾರ: ನಾಳೆ ಆಧಾರ ರಹಿತ ಎಂದು ಘೋಷಣೆ ಆದ ಮೇಲೆ ಹೋದ ಮಾನ ಮತ್ತೆ ಬರಲು ಸಾಧ್ಯವಿಲ್ಲ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಮಾಜಿ ಸಚಿವರೊಬ್ಬರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿಯಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಇದೊಂದು ರಾಜಕೀಯ ಷಡ್ಯಂತ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದೇವೆ. ನಾಳೆ ಆಧಾರ ರಹಿತ ಎಂದು ಘೋಷಣೆ ಆದ ಮೇಲೆ ಹೋದ ಮಾನ ಮತ್ತೆ ಬರಲು ಸಾಧ್ಯವಿಲ್ಲ. ಏನು ಬೇಕಾದರೂ ಸಹಿಸಿಕೊಳ್ಳಲು ಸಿದ್ಧವಿದ್ದೇವೆ. ಸೋಲನ್ನು ಸಹಿಸಿಕೊಂಡಿದ್ದೇವೆ. ಈ ರೀತಿಯ ನೈತಿಕ ಅಧಃಪತನವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದು ಹೇಳಿದ್ದಾರೆ.

    ಹಳೆ ಸರ್ಕಾರವನ್ನು ತೆಗೆದು ಹೊಸ ಸರ್ಕಾರ ಬರಲು ಯಾರು ಕಾರಣರಾದರು ಅವರನ್ನೇ ಟಾರ್ಗೆಟ್ ಮಾಡಿದ್ದಾರೆ ಎಂಬ ಅನೇಕ ಮಾಹಿತಿಯಿಂದ ತಿಳಿದುಕೊಂಡು ನಾವು ಈ ಸಿದ್ಧತೆ ಮಾಡಿಕೊಂಡಿದ್ದೇವೆ. ಒಬ್ಬ ವ್ಯಕ್ತಿಯ ಮಾನವೀಯತೆಯನ್ನ, ಗೌರವವನ್ನ ಈ ರೀತಿ ಹರಾಜು ಮಾಡುವುದು ಯಾವ ಪಕ್ಷಕ್ಕೂ ಶೋಭೆ ತರುವುದಿಲ್ಲ. ಇದನ್ನು ಪ್ರಸಾರ ಮಾಡುವ ಮಾಧ್ಯಮಕ್ಕೂ ಶೋಭೆ ತರತಕ್ಕದ್ದಲ್ಲ ಎಂದು ಕಿಡಿಕಾರಿದರು.

  • ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಬೆಂಗಳೂರು: ನಕಲಿ ಸಿಡಿ ತಯಾರಿಸಿ ನಿಮ್ಮ ಸಿಡಿ ಇದೆ ಎಂದು ಯಾರಾದರೂ ಬ್ಲ್ಯಾಕ್ ಮೇಲ್ ಮಾಡಿರುತ್ತಾರೆ. ಹೀಗಾಗಿ ರಕ್ಷಣೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ.

    ರಾಸಲೀಲೆ ಪ್ರಕರಣ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಕಲಿ ಸಿಡಿ ಯಾವುದು.? ಅಸಲಿ ಯಾವುದು ಎನ್ನು ಡೌಟ್ ಇದೆ. ನಕಲಿ ಸಿಡಿಗಳನ್ನು ತಯಾರಿಸಿ ಯಾವ ಸಿಡಿ ಎಲ್ಲಿಟ್ಟಿದ್ದಾರೆ ಎಂದು 6 ಸಚಿವರಿಗೆ ಭಯ ಇದೆ. ಹೀಗಾಗಿ ಕೋರ್ಟ್ ಮೋರೆ ಹೋಗಿರಬಹುದು.

    ಈ ಹಿಂದೆ ಹಲವು ರೀತಿಯ ಆರೋಪಿಗಳು ಬಂದಿವೆ ಅವರೆಲ್ಲ ದೋಷ ಮುಕ್ತರಾಗಿದ್ದಾರೆ. ಹೀಗೆ ಈ ಪ್ರಕರಣದಿಂದಲೂ ಹೊರಗೆ ಬರುತ್ತಾರೆ. ಯಾರು ಬೇಕಾದರೂ ಸಿಡಿ ತಯಾರಿಸುತ್ತಾರೆ. ನಕಲಿ ಸಿಡಿ ಯಾರಾದರೂ ಮಾಡಿರಬಹುದುದು ಹೀಗಾಗಿ ಅವರ ರಕ್ಷಣೆಗೆ ಕೋರ್ಟ್ ಹೋಗಿದ್ದಾರೆ.

    ಷಡ್ಯಂತ್ರ ಮಾಡುವವರು, ವಿರೋಧಿಗಳು ಇಂತಹ ಕೆಲಸ ಮಾಡುತ್ತಾರೆ. ಎಲ್ಲಾ ಕಾಲದಲ್ಲಿಯೂ ಸರ್ಕಾರದಲ್ಲಿ ಇಂತಹ ಆರೋಪಗಳು ಕೇಳಿಬಂದಿವೆ. ಆದರೆ ನಂತರ ಅವರೆಲ್ಲ ನಿರ್ದೋಷಿಗಳು ಎಂದು ಸಾಬೀತು ಪಡಿಸಿದ್ದಾರೆ. ಈ ಪ್ರಕರಣವು ಹಾಗೆ ಆಗುತ್ತದೆ ಎಂದು ಹೇಳಿದ್ದಾರೆ.

  • ಸಿಡಿ ಭಯದಲ್ಲಿ ಫೋನ್‍ನಲ್ಲಿ ಬ್ಯುಸಿಯಾದ ಬಿ.ಸಿ ಪಾಟೀಲ್, ಸುಧಾಕರ್..!

    ಸಿಡಿ ಭಯದಲ್ಲಿ ಫೋನ್‍ನಲ್ಲಿ ಬ್ಯುಸಿಯಾದ ಬಿ.ಸಿ ಪಾಟೀಲ್, ಸುಧಾಕರ್..!

    ಬೆಂಗಳೂರು: ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ್ ಮತ್ತು ಆರೋಗ್ಯ ಹಾಗೂ ವೈದ್ಯಕೀಯ ಕಲ್ಯಾಣ ಇಲಾಖಾ ಸಚಿವ ಸುಧಾಕರ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕೂಡ ವೇದಿಕೆಯ ಮೇಲೆ ಫೋನ್ ನಲ್ಲಿ ಬ್ಯುಸಿಯಾಗಿದ್ದರು.

    ಸಚಿವರೊಬ್ಬರ ರಾಸಲೀಲೆ ಸಿಡಿ ಹೊರ ಬಿದ್ದಂತೆ ಆರು ಮಂದಿ ಸಚಿವರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ವರದಿ ಪ್ರಸಾರ ಮಾಡಬಾರದು ಎಂದು ಕೋರ್ಟಿಗೆ ಮೊರೆ ಹೋಗಿದ್ದಾರೆ. ಈ ಆರು ಮಂದಿ ಸಚಿವರಲ್ಲಿ ಬಿ.ಸಿ ಪಾಟೀಲ್ ಮತ್ತು ಸುಧಾಕರ್ ಕೂಡ ಸೇರಿದ್ದಾರೆ. ಇಂದು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಿಸಿದ್ದ ಈ ಇಬ್ಬರು ಸಚಿವರುಗಳು ವೇದಿಕೆಯಲ್ಲಿ ಮಾತ್ರ ಫೋನ್ ನಲ್ಲಿ ಬ್ಯುಸಿಯಾಗಿದ್ದರು.

    ಗಂಗಾವತಿಯಲ್ಲಿ ನಡೆಯುತ್ತಿರುವ ನೂತನ ಕೃಷಿ ವಿಶ್ವವಿದ್ಯಾಲಯ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್ ವೇದಿಕೆಯ ಮೇಲೆ ಕುಳಿತಿದ್ದರು ಕೂಡ ಕೋರ್ಟಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಮೊಬೈಲ್ ನಲ್ಲಿ ಅಪ್ಡೇಡ್ ತಿಳಿದುಕೊಳ್ಳುವುದರಲ್ಲಿ ನಿರತರಾಗಿದ್ದರು. ಮೊಬೈಲ್ ಮೂಲಕ ಬೆಳವಣಿಗೆ ಗಮನಿಸುತ್ತಿದ್ದ ಬಿ.ಸಿ.ಪಾಟೀಲ್, ಬೇಗ ಬೇಗ ಕಾರ್ಯಕ್ರಮ ಮುಗಿಸಿ ಎಂದು ಅಧಿಕಾರಿಗಳಿಗೆ ಹೇಳುತ್ತಿರುವುದು ಬಯಲಾಗಿದೆ.

    ಗಂಗಾವತಿಯಲ್ಲಿ ಬಿಸಿ ಪಾಟೀಲ್ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ನಡೆದ ಬೃಹತ್ ಕ್ಯಾನ್ಸರ್ ತಪಾಸಣಾ ಹಾಗೂ ಅರಿವು ಕಾರ್ಯಕ್ರಮದಲ್ಲಿ ಭಾಗಿಯಾದ ಸುಧಾಕರ್ ಕೂಡ ಫೋನ್‍ನಲ್ಲಿ ಬ್ಯುಸಿಯಾಗಿ ಕೋರ್ಟ್ ವಿಚಾರಗಳನ್ನು ತಿಳಿದುಕೊಳ್ಳುವಲ್ಲಿ ನಿರತವಾಗಿರುವುದು ಕಂಡುಬಂತು.