Tag: court

  • ಕೇರಳ | ಮಹಿಳೆ, ಅವಳಿ ಮಕ್ಕಳ ಕೊಲೆ ಕೇಸ್ – 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರು ಅರೆಸ್ಟ್!

    ಕೇರಳ | ಮಹಿಳೆ, ಅವಳಿ ಮಕ್ಕಳ ಕೊಲೆ ಕೇಸ್ – 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರು ಅರೆಸ್ಟ್!

    ತಿರುವನಂತಪುರಂ: ಮಹಿಳೆ ಹಾಗೂ ಆಕೆಯ 17 ದಿನದ ಅವಳಿ ಮಕ್ಕಳನ್ನು ಕೊಲೆಗೈದು 19 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಕೇರಳ (Kerala) ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ದಿಬಿಲ್ ಕುಮಾರ್ ಬಿ ಹಾಗೂ ರಾಜೇಶ್.ಪಿ ಎಂದು ಗುರುತಿಸಲಾಗಿದೆ. ಆರೋಪಿಗಳು ಫೆಬ್ರವರಿ 10, 2006 ರಂದು ಕೃತ್ಯ ಎಸಗಿದ್ದರು. ಪಿತೃತ್ವ ಪರೀಕ್ಷೆಯಲ್ಲಿ ಅವಳಿ ಹೆಣ್ಣುಮಕ್ಕಳ ತಂದೆ ಎಂದು ಸಾಬೀತಾಗುತ್ತದೆ ಎಂದು ಹೆದರಿ ಆರೋಪಿ ಕುಮಾರ್ ತನ್ನ ಸಹ ಸೈನಿಕನ ಸಹಾಯದಿಂದ ಅವಳನ್ನು ಮತ್ತು ಶಿಶುಗಳನ್ನು ಕೊಲೆಗೈದಿದ್ದ. ಬಳಿಕ ಇಬ್ಬರು ಸೈನ್ಯವನ್ನು ತೊರೆದಿದ್ದರು.

    ಕೇರಳದ ಕೊಲ್ಲಂ ಜಿಲ್ಲೆಯ ಆಂಚಲ್ ಬಳಿಯ ಯೆರಮ್‍ನಲ್ಲಿ ರಂಜಿನಿ (24) ಮತ್ತು ಅವಳ ನವಜಾತ ಹೆಣ್ಣುಮಕ್ಕಳನ್ನು ಅವರ ಬಾಡಿಗೆ ಮನೆಯಲ್ಲಿ ಹತ್ಯೆ ಮಾಡಲಾಗಿತ್ತು. ಅವಳಿ ಮಕ್ಕಳ ಜನನ ಪ್ರಮಾಣ ಪತ್ರ ಪಡೆಯಲು ಹೋಗಿದ್ದ ರಂಜಿನಿ ಅವರ ತಾಯಿ ಪಂಚಾಯತ್ ಕಚೇರಿಯಿಂದ ಹಿಂತಿರುಗಿದಾಗ ಮನೆಯಲ್ಲಿ ಶವಗಳು ಪತ್ತೆಯಾಗಿದ್ದವು.

    ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದಾಗ, ಪಠಾಣ್‍ಕೋಟ್‍ನಲ್ಲಿ ಭಾರತೀಯ ಸೇನೆಯ 45 ಎಡಿ ರೆಜಿಮೆಂಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಂಚಲ್‍ನ ದಿಬಿಲ್ ಕುಮಾರ್ ಬಿ (28) ರಂಜಿನಿ ಅವರೊಂದಿಗೆ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿತ್ತು. ಜನವರಿ 24, 2006 ರಂದು ಅವಳಿ ಮಕ್ಕಳು ಜನಿಸಿದ ನಂತರ, ಅವರು ಅವಳಿಂದ ದೂರವಾಗಲು ಪ್ರಾರಂಭಿಸಿದ್ದರು.

    ನಂತರ ಮಹಿಳೆಯ ತಾಯಿ ಕೇರಳ ರಾಜ್ಯ ಮಹಿಳಾ ಆಯೋಗವನ್ನು ಸಂಪರ್ಕಿಸಿದ್ದರು. ಇದು ಅವಳಿ ಮಕ್ಕಳ ಡಿಎನ್‍ಎ ಪರೀಕ್ಷೆಗೆ ಆದೇಶಿಸಿತ್ತು. ಇದರಿಂದ ಕುಮಾರ್ ಆಕೆಯ ಕೊಲೆಗೆ ಸಂಚು ರೂಪಿಸಿದ್ದ. ಬಳಿಕ ಸೈನ್ಯದಲ್ಲಿದ್ದ ರಾಜೇಶ್.ಪಿ ಎಂಬಾತ ರಂಜಿನಿಯನ್ನು ಮದುವೆಯಾಗಲು ಕುಮಾರ್‌ಗೆ ಮನವರಿಕೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದ. ಆದರೆ ಆತ ಕುಮಾರ್ ಜೊತೆ ಸೇರಿಕೊಂಡು ಹತ್ಯೆಗೆ ಕೈ ಜೋಡಿಸಿದ್ದ.

    ಸ್ಥಳೀಯ ಪೊಲೀಸರು ವ್ಯಾಪಕ ತನಿಖೆ ನಡೆಸಿದರೂ ಮತ್ತು ಅವರ ಸೆರೆಗೆ ಕಾರಣವಾಗುವ ಮಾಹಿತಿಗೆ 2 ಲಕ್ಷ ರೂಪಾಯಿ ಬಹುಮಾನ ನೀಡಿದ್ದರೂ ಸಹ ಇಬ್ಬರ ಸುಳಿವು ಸಿಕ್ಕಿರಲಿಲ್ಲ. ಕೇರಳ ಹೈಕೋರ್ಟ್‍ನ (Court) ಆದೇಶದ ಮೇರೆಗೆ 2010 ರಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತು.

    ಸಿಬಿಐ (CBI) ತನಿಖೆ ವೇಳೆ ಕುಮಾರ್ ಮತ್ತು ರಾಜೇಶ್ ಪುದುಚೇರಿಯಲ್ಲಿ ನಕಲಿ ಹೆಸರಿನಲ್ಲಿ ವಾಸಿಸುತ್ತಿದ್ದಾರೆ ಮತ್ತು ಆಧಾರ್ ಕಾರ್ಡ್ ಸೇರಿದಂತೆ ಹೊಸ ದಾಖಲೆಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸುಳಿವು ಸಿಕ್ಕಿತ್ತು. ಅಲ್ಲದೇ ಇಬ್ಬರು ಶಿಕ್ಷಕಿಯರನ್ನು ಮದುವೆಯಾಗಿದ್ದರು ಎಂದು ತಿಳಿದು ಬಂದಿತ್ತು.

    ಸಿಬಿಐನ ಚೆನ್ನೈ ಘಟಕವು ಶುಕ್ರವಾರ ಇಬ್ಬರನ್ನು ಬಂಧಿಸಿ ಕೊಚ್ಚಿಗೆ ಕರೆತಂದಿದೆ. ಅಲ್ಲಿ ಅವರನ್ನು ಶನಿವಾರ ಎರ್ನಾಕುಲಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳನ್ನು ಜ.18ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

  • ಟೆಕ್ಕಿ ಅತುಲ್ ಸುಭಾಶ್‌ ಆತ್ಮಹತ್ಯೆ ಕೇಸ್‌- ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

    ಟೆಕ್ಕಿ ಅತುಲ್ ಸುಭಾಶ್‌ ಆತ್ಮಹತ್ಯೆ ಕೇಸ್‌- ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

    ಬೆಂಗಳೂರು: ಟೆಕ್ಕಿ ಅತುಲ್ ಸುಭಾಶ್‌ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ (Bengaluru Court) ಜಮೀನು ಮಂಜೂರು ಮಾಡಿದೆ.

    ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ 29ನೇ ಸಿಸಿಹೆಚ್ ಕೋರ್ಟ್ ಜಾಮೀನು (Bail) ನೀಡಿದೆ. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

    ಅತುಲ್ ಆತ್ಮಹತ್ಯೆ ಸಂಬಂಧ ಮೂವರನ್ನ ಬಂಧಿಸಿದ್ದ ಮಾರತಹಳ್ಳಿ ಪೊಲೀಸರು ಬಂಧಿಸಿತ್ತು. ಬಂಧನ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್‌ ಜ.4 ರಂದು ಜಾಮೀನು ಅರ್ಜಿ ಇತ್ಯರ್ಥ ಮಾಡುವಂತೆ ಕೆಳ ನ್ಯಾಯಾಲಯಕ್ಕೆ ಸೂಚಿಸಿತ್ತು.ಈ ಹಿನ್ನಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಹೆತ್ತ ಮಗು ತನ್ನ ಬಳಿಯಿಲ್ಲದಿದ್ದರೂ ಅನಾಥ ಮಕ್ಕಳಿಗೆ ಸಹಾಯ – ಅತುಲ್ ಸಮಾಜಮುಖಿ ಕಾರ್ಯಕ್ಕೆ ಮನಸೋತ ಸ್ನೇಹಿತರು

    ಏನಿದು ಪ್ರಕರಣ?
    ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್‌ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.

     

  • ಬಾಂಗ್ಲಾ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ವಜಾ

    ಬಾಂಗ್ಲಾ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ವಜಾ

    ನವದೆಹಲಿ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರ  (Chinmoy Das) ಜಾಮೀನು ಅರ್ಜಿಯನ್ನು ನ್ಯಾಯಾಲಯ (Court) ತಿರಸ್ಕರಿಸಿದೆ.

    ಜಾಮೀನು ಕೋರಿ ಚಟ್ಟೋಗ್ರಾಮ್‌ ನ್ಯಾಯಾಲಯಕ್ಕೆ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅರ್ಜಿ ಸಲ್ಲಿಸಿದ್ದರು. ಢಾಕಾದಿಂದ ಬಂದಿದ್ದ ಸುಪ್ರೀಂಕೋರ್ಟ್‌ನ 11 ವಕೀಲರ ತಂಡವು ಅರ್ಧಗಂಟೆಗೂ ಹೆಚ್ಚು ಕಾಲ‌ ವಾದ ಮಂಡಿಸಿದ್ದರು. ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ನ್ಯಾಯಾಧೀಶ ಎಂ.ಡಿ ಸೈಫುಲ್ ಇಸ್ಲಾಂ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

    ನಾವು ನ್ಯಾಯಾಲಯದ ಮುಂದೆ ನಮ್ಮ ವಾದವನ್ನು ಮಂಡಿಸಿದ್ದೇವೆ. ಆದರೆ ಪ್ರಾಸಿಕ್ಯೂಷನ್ ಜಾಮೀನನ್ನು ವಿರೋಧಿಸಿತು. ಈ ಹಿನ್ನಲೆ ನ್ಯಾಯಾಲಯವು ಜಾಮೀನು ತಿರಸ್ಕರಿಸಿದೆ. ನಾವು ಉನ್ನತ ನ್ಯಾಯಾಲಯಕ್ಕೆ ತೆರಳಿ ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಬಾಂಗ್ಲಾದೇಶದ ಮಾಜಿ ಡೆಪ್ಯುಟಿ ಅಟಾರ್ನಿ ಜನರಲ್ ಅಪುರ್ಬಾ ಕುಮಾರ್ ಭಟ್ಟಾಚಾರ್ಯ ತಿಳಿಸಿದ್ದಾರೆ.

    ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತದ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯಾಪಕ ದಾಳಿ ನಡೆಯುತ್ತಿದೆ. ಇದರ ವಿರುದ್ಧ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಹಿಂದೂಗಳ ಪರ ಧ್ವನಿ ಎತ್ತಿದ್ದರು.

    ದಾಸ್ ಅವರನ್ನು ಢಾಕಾ ಪೊಲೀಸ್ ಡಿಟೆಕ್ಟಿವ್ ಬ್ರಾಂಚ್ ನ.25 ರಂದು ದೇಶದ್ರೋಹದ ಆರೋಪದಡಿ ಬಂಧಿಸಿತ್ತು. ದಾಸ್ ಬಂಧನದ ನಂತರ ಅವರ ಜಾಮೀನು ಅರ್ಜಿಯನ್ನು ಚಿತ್ತಗಾಂಗ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನ.26 ರಂದು ತಿರಸ್ಕರಿಸಿತ್ತು. ನ.29 ರಂದು ದಾಸ್ ಅವರನ್ನು ಜೈಲಿನಲ್ಲಿ ಭೇಟಿಯಾಗಲು ಹೋದ ಇಬ್ಬರು ಸನ್ಯಾಸಿಗಳನ್ನು ಸಹ ಜೈಲಿಗೆ ಹಾಕಲಾಗಿದೆ.

  • ವಂಚನೆ ಕೇಸಲ್ಲಿ ಐಶ್ವರ್ಯಗೌಡಗೆ ಜಾಮೀನು – ರಾತ್ರಿಯೇ ಜೈಲಿಂದ ರಿಲೀಸ್

    ವಂಚನೆ ಕೇಸಲ್ಲಿ ಐಶ್ವರ್ಯಗೌಡಗೆ ಜಾಮೀನು – ರಾತ್ರಿಯೇ ಜೈಲಿಂದ ರಿಲೀಸ್

    ಬೆಂಗಳೂರು: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿ ಅರೆಸ್ಟ್ ಆಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್‌ ಗೌಡಗೆ ಹೈಕೋರ್ಟ್‌ ಜಾಮೀನು ನೀಡಿದೆ.

    ವಂಚನೆ ಕೇಸ್‌ನಲ್ಲಿ ಚಂದ್ರಾ ಲೇಔಟ್ ಪೊಲೀಸರು ಆರೋಪಿಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು. ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆ ಆರೋಪಿಗಳನ್ನು ಮಂಗಳವಾರ ರಾತ್ರಿಯೇ ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿದೆ.

    ಆರೋಪಿ ಐಶ್ವರ್ಯ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ (D.K Suresh) ಸಹೋದರಿ ಅಂತ ಹೇಳಿಕೊಂಡು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಅಲ್ಲಿಂದ ಪೊಲೀಸರು ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದರು.

    ಏನಿದು ಪ್ರಕರಣ?
    ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದಳು. ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದರು. ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.

    ಧಮೇಂದ್ರ ಡಿ.ಕೆ ಸುರೇಶ್ ವಾಯ್ಸ್‌ನಲ್ಲಿ ಕರೆ ಮಾಡಿದ್ದ ಧರ್ಮೇಂದ್ರ ಮಾಲೀಕರಾದ ವನಿತಾ ಐತಾಳ್‌ಗೆ ಕರೆ ಮಾಡಿ ಸಮಯ ಕೇಳಿದ್ದರು. ಕೊನೆಗೆ ತಾನೇ ಧರ್ಮೇಂದ್ರನನ್ನ ಕಳುಹಿಸಿ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು. ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಜ್ಯುವೆಲರಿ ಮಾಲೀಕಾರದ ವನಿತಾ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

  • ಸ್ಫೋಟ ಪ್ರಕರಣ – ಡ್ರೋನ್ ಪ್ರತಾಪ್‌ಗೆ ಜಾಮೀನು

    ಸ್ಫೋಟ ಪ್ರಕರಣ – ಡ್ರೋನ್ ಪ್ರತಾಪ್‌ಗೆ ಜಾಮೀನು

    ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಸ್ಫೋಟಿಸಿ ಜೈಲು ಸೇರಿರುವ ಡ್ರೋನ್ ಪ್ರತಾಪ್‌ಗೆ (Drone Pratap) ಜಾಮೀನು ಮಂಜೂರಾಗಿದೆ.

    ಮಧುಗಿರಿ ಜೆಎಮ್‌ಎಫ್‌ಸಿ ಕೋರ್ಟ್ (Court) ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಪ್ರಕ್ರಿಯೆ ಮುಗಿಯಲು ಇನ್ನೂ ಎರಡು ದಿನಗಳ ಕಾಲ ಸಮಯ ಬೇಕಾಗಿದ್ದರಿಂದ ಗುರುವಾರ ಪ್ರತಾಪ್ ಬಿಡುಗಡೆ ಆಗುವ ಸಾಧ್ಯತೆ ಇದೆ. ಸದ್ಯ ಡ್ರೋನ್ ಪ್ರತಾಪ್ ಮಧುಗಿರಿಯ ಉಪ ಕಾರಾಗೃಹದಲ್ಲಿ ಇದ್ದಾನೆ.

    ಮಧುಗಿರಿಯ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಸ್ಫೋಟಿಸಿ ಡ್ರೋನ್ ಪ್ರತಾಪ್ ಎಡವಟ್ಟು ಮಾಡಿಕೊಂಡಿದ್ದ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಆತನನ್ನು ಬಂಧಿಸಲಾಗಿತ್ತು. ಬಳಿಕ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

    ಏನಿದು ಪ್ರಕರಣ?
    ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾನೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದ.

    ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್‌ನಲ್ಲಿ ಹೇಳಿದ್ದ. ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸತವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು.

    ಈ ರೀತಿಯ ಪ್ರಯೋಗ ಅಪಾಯಕಾರಿ ಮತ್ತು ಕಾನೂನು ಬಾಹಿರವಾದದ್ದು. ಈ ಬ್ಲಾಸ್ಟ್ ವಿಡಿಯೋ ಮಾಡುವ ಮುನ್ನ ಕನಿಷ್ಟ ಪಕ್ಷ ಡ್ರೋನ್ ಪ್ರತಾಪ್ ಯೋಚನೆ ಮಾಡಬೇಕಾಗಿತ್ತು ಇದ್ಯಾವ ಸೀಮೆ ವಿಜ್ಞಾನದ ಬಗ್ಗೆ ಮಾಹಿತಿ ಕೊಡ್ತಾ ಇರೋದು ಎಂದು ಜನರು ಆಕ್ರೋಶ ಹೊರಹಾಕಿದ್ದರು.

  • Haveri | ಅಪಘಾತ ಪ್ರಕರಣ – ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ 27,000 ರೂ. ದಂಡ

    Haveri | ಅಪಘಾತ ಪ್ರಕರಣ – ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ 27,000 ರೂ. ದಂಡ

    ಹಾವೇರಿ: ಅಪಘಾತ ಪ್ರಕರಣದಲ್ಲಿ (Accident Case) ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ್ದಕ್ಕಾಗಿ ತಂದೆಗೆ 27,000 ರೂ. ದಂಡ ವಿಧಿಸಿ ರಾಣೆಬೆನ್ನೂರು (Ranebennur) ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

    ಕಳೆದ ಜುಲೈ 30ರಂದು ರಾಣೆಬೆನ್ನೂರು ನಗರದ ಹಲಗೇರಿ ಕ್ರಾಸ್ ಬಳಿ ಬೈಕ್ ಅಪಘಾತವಾಗಿತ್ತು. ಅಪಘಾತದಲ್ಲಿ ಜಾಕಿರ್ ಜಮಾಲುದ್ದೀನ್ ಕಮದೋಡ ಎಂಬ ವ್ಯಕ್ತಿ ಗಾಯಗೊಂಡಿದ್ದು, ಅಪರಾಧ ಪ್ರಕರಣ ದಾಖಲಾಗಿತ್ತು. ರಾಣೆಬೆನ್ನೂರು ನಗರದ ಕಡ್ರಕಟ್ಟಿ ನಗರದ ನಿವಾಸಿ ದಿಳ್ಳೆಪ್ಪ ಕಾಟೆ ತನ್ನ ಅಪ್ರಾಪ್ತ ಮಗನಿಗೆ ಬೈಕ್ ನೀಡಿ ಅಪಘಾತವಾಗಿತ್ತು. ಈ ಪ್ರಕರಣದಲ್ಲಿ ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ರಾಣೆಬೆನ್ನೂರು ಸ್ಥಳೀಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು 27,000 ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ದೇವರಕೋಣಕ್ಕಾಗಿ ಎರಡು ಗ್ರಾಮಸ್ಥರ ನಡುವೆ ಫೈಟ್ – ಡಿಎನ್‍ಎ ಟೆಸ್ಟ್ ನಡೆಸುವಂತೆ ಆಗ್ರಹ

    ಅಪಘಾತದ ಘಟನೆಯ ಕುರಿತು ರಾಣೆಬೆನ್ನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದಿಳ್ಳೆಪ್ಪ ಕಾಟೆ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಬೈಕ್ ಮಾಲೀಕ ತಪ್ಪಿತಸ್ಥ ಎಂದು ತೀರ್ಪು ನೀಡಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರೈತರ ಪ್ರತಿಭಟನೆ; ಹರಿಯಾಣದಲ್ಲಿ ಡಿ.17 ರ ವರೆಗೆ ಇಂಟರ್ನೆಟ್‌ ಸೇವೆ ಸ್ಥಗಿತ

  • Ramanagara | ಸ್ನೇಹಿತನನ್ನು ಕೊಲೆಗೈದ ಪ್ರಕರಣ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 50,000 ರೂ. ದಂಡ

    Ramanagara | ಸ್ನೇಹಿತನನ್ನು ಕೊಲೆಗೈದ ಪ್ರಕರಣ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 50,000 ರೂ. ದಂಡ

    ರಾಮನಗರ: ಸ್ನೇಹಿತನನ್ನು ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 50,000 ದಂಡ ವಿಧಿಸಿ ರಾಮನಗರ (Ramanagara) ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

    ಹಾರೋಹಳ್ಳಿ (Harohalli) ತಾಲೂಕಿನ ಕೊಟ್ಟಗಾಳು ಗ್ರಾಮದಲ್ಲಿ 2018ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಅಣ್ಣಯ್ಯಪ್ಪ ಎಂಬಾತನನ್ನು ಸ್ನೇಹಿತರಾದ ಚಿಕ್ಕೇಗೌಡ ಹಾಗೂ ಕುಮಾರ್ ಎಂಬವರು ಕೊಲೆಗೈದಿದ್ದರು. ಚಿಕ್ಕೇಗೌಡ ಪತ್ನಿಯೊಂದಿಗೆ ಅಣ್ಣಯ್ಯಪ್ಪ ಅಸಭ್ಯವಾಗಿ ವರ್ತಿಸಿದ್ದ ಎಂಬ ವಿಚಾರಕ್ಕೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಅಣ್ಣಯ್ಯಪ್ಪನಿಗೆ ಚಾಕು ಇರಿದು ಚಿಕ್ಕೇಗೌಡ ಹಾಗೂ ಕುಮಾರ್ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನ ಬಂಧಿಸಲಾಗಿತ್ತು. ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಲೋಕಸಭೆಯಲ್ಲಿ ಡಿ.16 ಕ್ಕೆ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ

    ಈ ಬಗ್ಗೆ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ಸಾಕ್ಷ್ಯಗಳ ಆಧಾರದ ಮೇಲೆ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟ ಮಾಡಿದೆ. ಇಬ್ಬರೂ ಆಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 50,000 ದಂಡ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಹೆಚ್.ಎನ್.ಕುಮಾರ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: Mandya | ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ

  • ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಕೇಸ್ – ಆರೋಪಿಗಳಿಗೆ ಜಾಮೀನು

    ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಕೇಸ್ – ಆರೋಪಿಗಳಿಗೆ ಜಾಮೀನು

    ಕೋಲ್ಕತ್ತಾ: ಇಲ್ಲಿನ (Kolkata) ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (RG Kar Hospital Case) ಸಂಬಂಧಿಸಿದಂತೆ ಕೋಲ್ಕತ್ತಾದ ಸೀಲ್ದಾ ನ್ಯಾಯಾಲಯವು (Court) ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಅಧಿಕಾರಿ ಅಭಿಜಿತ್ ಮೊಂಡಲ್‌ಗೆ ಜಾಮೀನು ಮಂಜೂರು ಮಾಡಿದೆ.

    ಕೋಲ್ಕತ್ತಾ ಹೈಕೋರ್ಟ್‌ನಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿಲಾಗಿತ್ತು. ಸಿಬಿಐ 90 ದಿನಗಳ ಅವಧಿಯಲ್ಲಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿದೆ. ಇದು ಆರೋಪಗಳಿಗೆ ಜಾಮೀನು ಸಿಗಲು ಕಾರಣವಾಯಿತು.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ವೈದ್ಯೆಯ ತಾಯಿ, ಸಿಬಿಐ ತನಿಖೆಯನ್ನು ಚುರುಕುಗೊಳಿಸುತ್ತದೆ ಮತ್ತು ನ್ಯಾಯ ಸಿಗುವಂತೆ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ ಈಗ, ಆರೋಪಿಗಳಿಗೆ ಜಾಮೀನು ನೀಡಿರುವುದರಿಂದ, ವ್ಯವಸ್ಥೆ ನಮ್ಮನ್ನು ವಿಫಲಗೊಳಿಸುತ್ತಿದೆ ಎಂದು ಭಾಸವಾಗುತ್ತಿದೆ. ಅಲ್ಲದೇ ಪ್ರತಿದಿನ ಪ್ರಭಾವಶಾಲಿಗಳು ಶಿಕ್ಷೆಯಿಲ್ಲದೆ ತಪ್ಪಿಸಿಕೊಳ್ಳುವ ಮತ್ತೊಂದು ಪ್ರಕರಣ ಇದಾಗಲಿದೆಯೇ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

    ಬಂಧಿತ ಪೊಲೀಸ್ ಅಧಿಕಾರಿಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸಂದೀಪ್ ಘೋಷ್ ಸಾಕ್ಷ್ಯವನ್ನು ನಾಶಗೊಳಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಇಬ್ಬರನ್ನೂ ಸಿಬಿಐ ಬಂಧಿಸಿತ್ತು.

    ನ್ಯಾಯಾಲಯದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮೊಂಡಾಲ್ ಅವರ ವಕೀಲರು, ಶೀಘ್ರದಲ್ಲೇ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರದ ಪ್ರತ್ಯೇಕ ಪ್ರಕರಣದಲ್ಲಿ ಆರೋಪಿಯಾಗಿರುವ ಸಂದೀಪ್ ಘೋಷ್, ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರೂ ಸಹ ಬಂಧನದಲ್ಲಿಯೇ ಇರಲಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

    ಏನಿದು ಕೇಸ್?‌
    ಈ ವರ್ಷ ಆಗಸ್ಟ್‌ನಲ್ಲಿ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿದಾಗ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಸಂಜಯ್ ರಾಯ್ ಎಂಬಾತನನ್ನು ಬಂಧಿಸಲಾಗಿತ್ತು. ಅಲ್ಲದೇ ಕೆಲವು ಪ್ರಮುಖ ಆರೋಪಿಗಳನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಸುತ್ತಿದೆ.

  • ಸಂಧ್ಯಾ ಥಿಯೇಟರ್ ದುರಂತ ಕೇಸ್‌ – ಅಲ್ಲು ಅರ್ಜುನ್‌ ಜೈಲುಪಾಲು

    ಸಂಧ್ಯಾ ಥಿಯೇಟರ್ ದುರಂತ ಕೇಸ್‌ – ಅಲ್ಲು ಅರ್ಜುನ್‌ ಜೈಲುಪಾಲು

    ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ (Sandhya Theatre Stampede Case) ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್‌ (Allu Arjun) ಅವರು ಜೈಲಿಗೆ ಶಿಫ್ಟ್‌ ಆಗಲಿದ್ದಾರೆ.

    ಬಂಧನಕ್ಕೆ ಒಳಗಾದ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್‌ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್‌ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ. ಇದನ್ನೂ ಓದಿ: It’s Too Much, ಬೆಡ್‌ ರೂಮ್‌ವರೆಗೆ ಬಂದಿದ್ದು ಸರಿಯಲ್ಲ – ಪೊಲೀಸರ ವಿರುದ್ಧ ಅಲ್ಲು ಅರ್ಜುನ್‌ ಗರಂ

     

    ಡಿ. 4 ರಂದು ‘ಪುಷ್ಪ 2’ ಸಿನಿಮಾ (Pushpa 2) ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದನ್ನೂ ಓದಿ: ನಟ ದರ್ಶನ್‌ಗೆ ಬಿಗ್‌ ರಿಲೀಫ್‌; 7 ತಿಂಗಳ ಬಳಿಕ ಜಾಮೀನು ಮಂಜೂರು

    ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚಿಕ್ಕಡಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಈ ನೋಟಿಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್ ಈ ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

     

  • DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

    DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

    – ಅಜಿತ್ ಪವಾರ್ ಮೇಲಿನ ಬೇನಾಮಿ ಆಸ್ತಿ ಆರೋಪ ವಜಾ

    ಮುಂಬೈ: ಬಿಜೆಪಿ ಮೈತ್ರಿ ಪಕ್ಷವಾದ ಎನ್‌ಸಿಪಿಯ ನಾಯಕ ಅಜಿತ್ ಪವಾರ್ (Ajit Pawar) ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಆರೋಪವೊಂದರಿಂದ ಮುಕ್ತವಾಗಿದ್ದಾರೆ.

    ಬೇನಾಮಿ ಆಸ್ತಿ (Benami Property Case) ವಹಿವಾಟು ತಡೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮಂಡಳಿಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪವನ್ನು ಶುಕ್ರವಾರ ವಜಾಗೊಳಿಸಿತು. ನ್ಯಾಯಾಲಯದ ತೀರ್ಪಿನ ನಂತರ, ಆದಾಯ ತೆರಿಗೆ ಇಲಾಖೆಯು 2021ರ ಬೇನಾಮಿ ವಹಿವಾಟು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಜಿತ್ ಪವಾರ್‌ ಅವರಿಗೆ ಬಿಡುಗಡೆ ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇತ್ತೀಚೆಗೆ ಚುನಾಯಿತರಾದ ಮಹಾಯುತಿ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಸಾಕಷ್ಟು ಪುರಾವೆಗಳ ಆಧಾರದ ಮೇಲೆ ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಬೇನಾಮಿ ಮಾಲೀಕತ್ವದ ಅಡಿಯಲ್ಲಿ ಆಸ್ತಿಗಳನ್ನು ಲಿಂಕ್ ಮಾಡಿದ 2021ರ ಪ್ರಕರಣವನ್ನು ನ್ಯಾಯಮಂಡಳಿ ವಜಾಗೊಳಿಸಿದೆ ಎಂದು ವರದಿಗಳು ತಿಳಿಸಿವೆ.

    ಆದಾಯ ತೆರಿಗೆ ಇಲಾಖೆಯು 2021ರ ಅಕ್ಟೋಬರ್ 7 ರಂದು ಅಜಿತ್ ಪವಾರ್‌ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಮತ್ತು ಮಹಾರಾಷ್ಟ್ರದಾದ್ಯಂತ ಹಲವಾರು ಭೂಮಿ ಸೇರಿದಂತೆ ಹಲವು ಆಸ್ತಿಗಳು ಸೇರಿತ್ತು.

    ಆದಾಯ ತೆರಿಗೆ ಇಲಾಖೆ ದಾಳಿ ವೇಳೆ, ಅಜಿತ್ ಪವಾರ್ ಅವರು ಅವಿಭಜಿತ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು. ಈ ವೇಳೆ ಜೂನ್ 2022ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು. ಈ ವೇಳೆ ಅಜಿತ್ ಪವಾರ್ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಪತನದ ನಂತರ ಅವರು ಪಕ್ಷವನ್ನು ಒಡೆದು ಜುಲೈ 2023 ರಿಂದ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು. ಈ ಸರ್ಕಾರಕ್ಕೆ ಬಿಜೆಪಿ ಕೂಡಾ ಸೇರಿದ್ದು, ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿದ್ದರು. ಶುಕ್ರವಾರ ನ್ಯಾಯಪೀಠವು ಬೇನಾಮಿ ವ್ಯವಹಾರದ ಪ್ರತಿಪಾದನೆಯನ್ನು ತಿರಸ್ಕರಿಸಿ, ಆರೋಪಗಳಿಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಹೇಳಿದೆ.

    ಅಜಿತ್ ಪವಾರ್, ಪತ್ನಿ ಸುನೇತ್ರಾ ಪವಾರ್ ಮತ್ತು ಮಗ ಪಾರ್ಥ್ ಪವಾರ್ ಬೇನಾಮಿ ಆಸ್ತಿಗಳನ್ನು ಸಂಗ್ರಹಿಸಲು ಹಣವನ್ನು ವರ್ಗಾಯಿಸಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ. ಎಲ್ಲಾ ಆಸ್ತಿ ವಹಿವಾಟುಗಳನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ. ದಾಖಲೆಗಳಲ್ಲಿ ಯಾವುದೇ ಅಕ್ರಮಗಳಿಲ್ಲ ಎಂದು ಅಜಿತ್ ಪವಾರ್ ಅವರ ಕಾನೂನು ಸಲಹೆಗಾರರು ವಾದಿಸಿದ್ದರು.