Tag: Covid-19 Basavaraj Bommai

  • ಮತ್ತಷ್ಟು ರಿಲೀಫ್ ನೀಡಲಾಗುವುದು: ಅಶೋಕ್

    ಮತ್ತಷ್ಟು ರಿಲೀಫ್ ನೀಡಲಾಗುವುದು: ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಕೊರೊನಾ ನಿಯಮಗಳಲ್ಲಿ ಮತ್ತಷ್ಟು ರಿಲೀಫ್ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

    ಇಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್‍ಡೌನ್ ಇಲ್ಲ. ಶುಕ್ರವಾರ ಸಭೆ ನಡೆಸಿ ಮತ್ತೆ ವೀಕೆಂಡ್ ಲಾಕ್‍ಡೌನ್ ಬಗ್ಗೆ ಚರ್ಚೆ ಮಾಡುತ್ತೇವೆ. ನಾವು ಡಬ್ಲ್ಯೂಎಚ್‍ಒ, ತಜ್ಞರ ಸಮಿತಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸೋಂಕು ಲಕ್ಷಣಗಳು ಕಡಿಮೆ ಆದ ತಕ್ಷಣ ಇರುವ ನಿಯಮಗಳನ್ನು ಸಡಿಲಿಕೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

    ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆದಿದೆ. ಬಂದಿದ್ದ ಎಲ್ಲಾ ತಜ್ಞರು ವ್ಯಾಕ್ಸಿನೇಷನ್ ಹಾಗೂ ಟೆಸ್ಟಿಂಗ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಟೆಸ್ಟಿಂಗ್ ಜಾಸ್ತಿ ಮಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ತಜ್ಞರೆಲ್ಲರ ಅಭಿಪ್ರಾಯದಂತೆ ಜನವರಿ ಅಂತ್ಯದ ವೇಳೆ ಹೆಚ್ಚಾಗಬಹುದು ಎಂದು ಬೇರೆ ರಾಜ್ಯಗಳ ಬೆಳವಣಿಗೆ, ಹೋಲಿಕೆ ಮಾಡಿ ಈ ರೀತಿ ಹೇಳಿದ್ದಾರೆ. ಸೋಂಕು ಹೆಚ್ಚಳಗೊಂಡು ನಂತರ ಕಡಿಮೆ ಆಗಬಹುದು. ಇದೀಗ ಜಾರಿಯಲ್ಲಿರುವ ನಿಯಮ ಹೀಗೆ ಮುಂದುವರಿಯುತ್ತದೆ. ಶುಕ್ರವಾರದವರೆಗೆ ಯಥಾಸ್ಥಿತಿ ಶುಕ್ರವಾರದ ಬಳಿಕ ಮುಂದಿನ ತೀರ್ಮಾನವನ್ನು ಕಾದು ನೋಡಿ ಎಂದರು. ಇದನ್ನೂ ಓದಿ: ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

  • ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

    ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಎರಡನೇ ಟೆಸ್ಟ್‌ನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ.

    ಜನವರಿ 10 ರಂದು ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಇಂದು ಟೆಸ್ಟ್‌ನಲ್ಲಿ ಕೋವಿಡ್ ನೆಗೆಟಿವ್ ಬಂದಿದ್ದು, ಈ ಮೂಲಕ ಸಿಎಂ ಸೋಂಕಿನಿಂದ ಮುಕ್ತವಾಗಿದ್ದಾರೆ. ಇದನ್ನೂ ಓದಿ: ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಕೆಲದಿನಗಳ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್. ಅಶೋಕ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಮಂದಿಗೆ ಸೋಂಕು ಕಾಣಿಸಿಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ನಡುವೆ ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ – ಬೊಮ್ಮಾಯಿಗೆ ಮನವಿ

    ಕೊರೊನಾ ನೆಗೆಟಿವ್ ರಿಪೋರ್ಟ್ ಬಂದೊಡನೆ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ಸಂಬಂಧಪಟ್ಟಂತೆ ತಜ್ಞರ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆದಿದೆ.