Tag: Covid Care Center

  • ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ – ಮಂಡ್ಯ ವಿದ್ಯಾರ್ಥಿಗಳ ವಿರೋಧ

    ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ – ಮಂಡ್ಯ ವಿದ್ಯಾರ್ಥಿಗಳ ವಿರೋಧ

    ಮಂಡ್ಯ: ಕೆರೆ ಅಂಗಳದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಸೆಂಟರ್ ತೆರೆಯಲು ಮುಂದಾದ ಕ್ರಮಕ್ಕೆ ಮಂಡ್ಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

    ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಮುಂದಿನ ತಿಂಗಳು ನಮಗೆ ಪರೀಕ್ಷೆ ಇದೆ. ಆದರೆ ಈಗ ಹಾಸ್ಟೆಲ್ ಬಿಟ್ಟು ಕೊಡುವಂತೆ ಹೇಳಿದ್ದಾರೆ. ಬೇರೆ ಹಾಸ್ಟೆಲ್‌ನಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅಲ್ಲಿಗೆ ನಮ್ಮನ್ನು ಕಳುಹಿಸುವುದರಿಂದ ನಮಗೆ ಓದಿಕೊಳ್ಳಲು ತೊಂದರೆಯಾಗುತ್ತದೆ ಎಂದು ಕಷ್ಟವನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿ ಹಿಜಬ್ ವಿವಾದ – NSUI ಭೇಟಿ ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿ

    ಇನ್ನೊಂದೆಡೆ ಸ್ಥಳೀಯರು ಇಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಿದರೆ ನಮಗೂ ತೊಂದರೆಯಾಗುತ್ತೆ, ನಮ್ಮನ್ನು ದಿನಗೂಲಿ ಕೆಲಸಕ್ಕೆ ಎಲ್ಲಿಯೂ ಕರೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಸಮಸ್ಯೆ ಹೇಳಲು ಫೋನ್ ಮಾಡಿದ್ದ ಮಹಿಳೆಗೆ ಅನಿಲ್ ಬೆನಕೆ ಅವಾಜ್

    ಪ್ರತಿಭಟನಾ ಸ್ಥಳಕ್ಕೆ ಹಿಂದುಳಿದ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಹರೀಶ್ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದ್ದಾರೆ. ಜಿಲ್ಲಾಧಿಕಾರಿ ಸೂಚನೆಯಂತೆ ವಿದ್ಯಾರ್ಥಿಗಳನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸುವುದಾಗಿ ತೀರ್ಮಾನಿಸಲಾಗಿದೆ. ಆದರೆ ಇಲ್ಲಿ ಕ್ವಾರಂಟೈನ್ ಕೇಂದ್ರ ಬೇಡ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದು, ಅಧಿಕಾರಿಗಳೊಂದಿಗೆ ತರಾಟೆ ನಡೆಸಿದ್ದಾರೆ.

  • ಕೋವಿಡ್ ಸೆಂಟರ್‌ನಿಂದ ಬಂದವನ ಬೈಕ್ ಸೀಜ್- ವ್ಯಕ್ತಿಯಿಂದ ಪೊಲೀಸರಿಗೇ ಕ್ಲಾಸ್!

    ಕೋವಿಡ್ ಸೆಂಟರ್‌ನಿಂದ ಬಂದವನ ಬೈಕ್ ಸೀಜ್- ವ್ಯಕ್ತಿಯಿಂದ ಪೊಲೀಸರಿಗೇ ಕ್ಲಾಸ್!

    ಮಂಡ್ಯ: ಕೋವಿಡ್ ಕೇರ್ ಸೆಂಟರ್‌ನಿಂದ ಬಂದ ವ್ಯಕ್ತಿಯೊಬ್ಬನ ಬೈಕ್ ಸೀಜ್ ಮಾಡಿದ್ದಾರೆ. ಈ ವೇಳೆ ಪೊಲೀಸರನ್ನೇ ವ್ಯಕ್ತಿ ತರಾಟೆಗೆ ತೆಗೆದುಕೊಂಡಿರುವ ಘಟನೆ ನಗರದ ಸಂಜಯ್ ಸರ್ಕಲ್‍ನಲ್ಲಿ ನಡೆದಿದೆ.

    ವ್ಯಕ್ತಿಯು ಕೋವಿಡ್ ಕೇರ್ ಸೆಂಟರ್‌ನಿಂದ ಬೈಕ್‍ನಲ್ಲಿ ತನ್ನ ತಂದೆಯನ್ನು ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಪೊಲೀಸರು ಬೈಕ್‍ನ್ನು ಅಡ್ಡಗಟ್ಟಿ ವೀಕೆಂಡ್ ಕರ್ಫ್ಯೂ ಇದ್ದರು ಯಾಕೆ ಹೊರಗಡೆ ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಆಗ ವ್ಯಕ್ತಿ, ಇಲ್ಲಾ ಸರ್ ನಮ್ಮ ತಂದೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದರು. ನಿನ್ನ ತಂದೆ ಹುಷಾರಾಗಿದ್ದಾರೆ ಡಿಸ್ಚಾರ್ಜ್ ಮಾಡಿಸಿಕೊಂಡು ಕರೆದುಕೊಂಡು ಹೋಗಬಹುದು ಅಂತಾ ಡಾಕ್ಟರ್ ಹೇಳಿದ್ದರು. ಅದಕ್ಕೆ ಅವರನ್ನು ಕರೆದುಕೊಂಡು ಹೋಗಲಿಕ್ಕೆ ಬಂದಿದ್ದೇನೆ ಎಂದು ಪೋಲಿಸರಿಗೆ ಉತ್ತರಿಸಿದ್ದಾನೆ. ಇದನ್ನೂ ಓದಿ:  ಮಿಸೆಸ್ ವರ್ಲ್ಡ್ 2022 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ನವ್ದೀಪ್ ಕೌರ್

    ಪೊಲೀಸರು, ವ್ಯಕ್ತಿಯ ಮೇಲೆ ಶಂಕೆಯನ್ನು ವ್ಯಕ್ತಪಡಿಸಿ ನಿಲ್ಲಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ವ್ಯಕ್ತಿಯು ಪೊಲೀಸರ ಮೇಲೆ ಗರಂ ಆಗಿದ್ದಾನೆ. ನಾವು ಹೋಗುತ್ತೇವೆ ಬಿಡಿ ಎಂದಿದ್ದಾರೆ. ಆದರೆ ಪೊಲೀಸರು ಇಲ್ಲ ನಿಂತುಕೊ ಅಂದಿದ್ದಕ್ಕೆ ವ್ಯಕ್ತಿಯು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ದೊಡ್ಡವರನ್ನು ಬಿಟ್ಟು ಬಿಡುತ್ತೀರಾ, ನಮ್ಮಂತ ಜನ ಸಾಮಾನ್ಯರನ್ನು ಹಿಡಿದುಕೊಳ್ಳುತ್ತೀರಾ ಎಂದು ಗರಂ ಆಗಿದ್ದಾನೆ. ಇದನ್ನೂ ಓದಿ: MPSC ಹುದ್ದೆ ಆಕಾಂಕ್ಷಿ ಅನುಮಾನಾಸ್ಪದ ರೀತಿಯಲ್ಲಿ ಕೊಠಡಿಯಲ್ಲಿ ಶವವಾಗಿ ಪತ್ತೆ

    POLICE JEEP

    ಈ ಹಿನ್ನೆಲೆ ಪೊಲೀಸರು ವ್ಯಕ್ತಿಯನ್ನು ಜೀಪ್‍ನಲ್ಲಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಕೋವಿಡ್ ಕೇರ್ ಸೆಂಟರ್‌ನಿಂದ ಬಂದ ತಂದೆಯನ್ನು ರಸ್ತೆಯಲ್ಲಿ ಬಿಟ್ಟು ಮಗನನ್ನು ಕರೆದುಕೊಂಡು ಹೋಗಿದ್ದಾರೆ.

  • ಕೋವಿಡ್ ಕೇರ್ ಸೆಂಟರ್‌ನಿಂದ ಹೋಗಲು ಹಿಂದೇಟು- ರೇಣುಕಾಚಾರ್ಯರನ್ನು ಬಿಗಿದಪ್ಪಿ ಕಣ್ಣೀರಿಟ್ಟ ಬಾಲಕಿ

    ಕೋವಿಡ್ ಕೇರ್ ಸೆಂಟರ್‌ನಿಂದ ಹೋಗಲು ಹಿಂದೇಟು- ರೇಣುಕಾಚಾರ್ಯರನ್ನು ಬಿಗಿದಪ್ಪಿ ಕಣ್ಣೀರಿಟ್ಟ ಬಾಲಕಿ

    ದಾವಣಗೆರೆ: ಹಲವರು ಕೋವಿಡ್ ಕೇರ್ ಸೆಂಟರ್ ಗೆ ತೆರಳಲು ಹಿಂದೇಟು ಹಾಕುತ್ತಾರೆ, ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿಯುತ್ತಾರೆ. ಆದರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಿಂದ ತೆರಳಲು ಬಾಲಕಿ ಹಿಂದೇಟು ಹಾಕುತ್ತಿದ್ದು, ಶಾಸಕ ರೇಣುಕಾಚಾರ್ಯರನ್ನು ಬಿಗಿದಪ್ಪಿ ಕಣ್ಣೀರಿಟ್ಟಿದ್ದಾರೆ.

    ಕೋವಿಡ್ ಶುರುವಾದಗಿನಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುತ್ತಿರುವ ರೇಣುಕಾಚಾರ್ಯ ಅವರು, ಕೋವಿಡ್ ಕೇರ್ ಸೆಂಟರ್‍ನ್ನು ಮನೆಯಂತೆ ಭಾವಿಸಿ, ಸೋಂಕಿತರ ಜೊತೆ ಕಾಲ ಕಳೆಯುತ್ತಿದ್ದಾರೆ. ಮಾತ್ರವಲ್ಲ ಗುಣಮಟ್ಟದ ಊಟ, ಮನರಂಜನೆ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿ. ಜನರ ಆರೈಕೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಕೊರೊನಾದಿಂದ ಗುಣಮುಖವಾದ ಬಾಲಕಿಯೊಬ್ಬಳು ರೇಣುಕಾಚಾರ್ಯ ರನ್ನು ಬಿಗಿದಪ್ಪಿ ಕಣ್ಣೀರಿಟ್ಟು, ಕೋವಿಡ್ ಕೇರ್ ಸೆಂಟರ್ ನಿಂದ ಹೊರ ಹೋಗಿದ್ದಾಳೆ.

    ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊರೊನಾದಿಂದ ಮುಖರಾದವರಿಗೆ ಹೂ ಮಳೆ ಸುರಿಸಿ ಬೀಳ್ಕೊಡಲಾಗುತ್ತಿದೆ. ಅದೇ ರೀತಿ ಶಾಸಕ ರೇಣುಕಾಚಾರ್ಯ ಕಾರ್ಯಕ್ರಮ ಏರ್ಪಡಿಸಿದ್ದರು. ಇಂದು ಕೊರೊನಾದಿಂದ ಗುಣಮುಖರಾಗಿ ಕೇರ್ ಸೆಂಟರ್ ನಿಂದ ಹೊರ ಹೋಗುತ್ತಿದ್ದ 32 ಜನರನ್ನು ಬೀಳ್ಕೊಡುವ ಸಂದರ್ಭದಲ್ಲಿ ಕೋವಿಡ್ ನಿಂದ ಗುಣಮುಖವಾದ ಬಾಲಕಿ ಶಾಸಕರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾಳೆ. ಅಲ್ಲದೆ ಬಾಲಕಿ ಕೇರ್ ಸೆಂಟರ್ ಬಿಟ್ಟು ಹೋಗಲು ಹಿಂದೇಟು ಹಾಕಿದ್ದಾಳೆ. ಬಳಿಕ ರೇಣುಕಾಚಾರ್ಯ ಅವರು ಬಾಲಕಿಗೆ ಸಮಾಧಾನ ಮಾಡಿ ಕಳುಹಿಸಿದ್ದಾರೆ. ಹಲವರು ಶಾಸಕರ ಕಾಲಿಗೆ ಬಿದ್ದು, ಅಭಿಮಾನ ಮೆರೆದಿದ್ದಾರೆ.

  • ಉಳುಮೆ ಮಾಡಿ, ಬೀಜ ಬಿತ್ತಿದ ರೇಣುಕಾಚಾರ್ಯ

    ಉಳುಮೆ ಮಾಡಿ, ಬೀಜ ಬಿತ್ತಿದ ರೇಣುಕಾಚಾರ್ಯ

    ದಾವಣಗೆರೆ: ಶಾಸಕ ರೇಣುಕಾಚಾರ್ಯ ಕೊರೊನಾ ಸಂಕಷ್ಟದ ಸಮಯದಲ್ಲಿ ಮಿಂಚಿನ ವೇಗದಲ್ಲಿ ಕೆಲಸ ಮಾಡುವ ಮೂಲಕ ಕ್ಷೇತ್ರದ ಜನತೆಯ ಮನ ಗೆದ್ದಿದ್ದಾರೆ. ಅದೇ ರೀತಿ ಇದೀಗ ಉಳುಮೆ ಮಾಡಿ, ಬೀಜ ಬಿತ್ತುವ ಮೂಲಕ ತಮ್ಮ ಅಭಿಮಾನಿಯನ್ನು ಸಂತಸಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿದ್ದ ರಂಗನಾಥ್ ಅವರು ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಹೊನ್ನಾಳಿಗೆ ಆಗಮಿಸಿ, ಬೇಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಬಿತ್ತನೆ ಕಾರ್ಯ ಮಾಡುತ್ತಿದ್ದರು, ಇವರು ಉಳುಮೆ ಮಾಡುತ್ತಿದ್ದ ಹೊಲದ ಬಳಿಯ ರಸ್ತೆಯಲ್ಲಿ ಸಾಗುತ್ತಿದ್ದ ಶಾಸಕ ಎಂ.ಪಿ.ರೇಣುಕಚಾರ್ಯ, ಜಮೀನಿಗೆ ಭೇಟಿ ನೀಡಿ ಅವರ ಅಪೇಕ್ಷೆಯಂತೆ ಜೊತೆಗೂಡಿ ಬೇಸಾಯ ಮಾಡಿ, ಬೀಜ ಬಿತ್ತುವ ಮೂಲಕ ಉತ್ಸಾಹ ತುಂಬಿದರು.

    ಶಾಸಕ ರೇಣುಕಾಚಾರ್ಯ ಮತ್ತೊಂದು ಮನಮುಟ್ಟುವ ಕೆಲಸ ಮಾಡಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತ ಮಕ್ಕಳ ಹುಟ್ಟುಹಬ್ಬ ಆಚರಿಸಿ ಮತ್ತೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಈಗಾಗಲೇ ಹಲವು ದಿನಗಳಿಂದ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ಸೋಂಕಿತರ ಸೇವೆ ಮಾಡುತ್ತಿರುವ ರೇಣುಕಾಚಾರ್ಯ, ಕೇರ್ ಸೆಂಟರ್ ನಲ್ಲಿದ್ದ ಇಬ್ಬರು ಬಾಲಕಿಯರ ಹುಟ್ಟುಹಬ್ಬ ಆಚರಿಸಿದ್ದಾರೆ. ತಂದೆ, ತಾಯಿ ಊರಲ್ಲಿದ್ದರಿಂದ ಮಕ್ಕಳ ಹುಟ್ಟುಹಬ್ಬ ಆಚರಿಸಿದ್ದಾರೆ. ಈ ಮೂಲಕ ಮಕ್ಕಳಿಗೆ ಯಾರೂ ಇಲ್ಲ ಎಂಬ ಕೊರಗನ್ನು ನೀಗಿಸಿದ್ದಾರೆ. ಬಾಲಕಿಯರಿಗೆ ಕೇಕ್ ತಿನ್ನಿಸಿ, ಹುಟ್ಟುಹಬ್ಬದ ಶುಭಕೋರಿದ್ದಾರೆ.

  • ಕೊರೊನಾ ಇಳಿಮುಖ- ಧಾರವಾಡದಲ್ಲಿ 64 ಕೋವಿಡ್ ಕೇಂದ್ರ ಸ್ಥಗಿತ

    ಕೊರೊನಾ ಇಳಿಮುಖ- ಧಾರವಾಡದಲ್ಲಿ 64 ಕೋವಿಡ್ ಕೇಂದ್ರ ಸ್ಥಗಿತ

    ಹುಬ್ಬಳ್ಳಿ: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಮುಖವಾಗುತ್ತಿರುವುದರಿಂದ ಜಿಲ್ಲೆಯಲ್ಲಿನ 84 ಕೋವಿಡ್ ಕೇರ್ ಸೆಂಟರ್ ಪೈಕಿ 64 ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ.

    ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸಿತ್ತು. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಎಷ್ಟೋ ಜನರು ಅಸುನೀಗಿದ್ದರು. ಜೊತೆಗೆ ಹೋಮ್ ಐಸೋಲೇಷನ್‍ನಲ್ಲಿ ಇರುವವರಿಂದ ಸೋಂಕು ಹೆಚ್ಚಾಗಿ ಹರಡಿತ್ತು. ಇದನ್ನು ಮನಗಂಡು ಜಿಲ್ಲಾಡಳಿತ ಸೋಂಕಿತರನ್ನು ಹೋಮ್ ಐಸೋಲೇಶನ್ ಮಾಡದೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ತೆರೆಯಲಾಗಿತ್ತು.

    ಗ್ರಾಮೀಣ 10, ಹುಬ್ಬಳ್ಳಿ ಗ್ರಾಮೀಣ 14, ಕಲಘಟಗಿ 12, ಅಣ್ಣಿಗೇರಿ 8, ಕುಂದಗೋಳ 16, ನವಲಗುಂದ 8, ಅಳ್ನಾವರ 5 ಹೀಗೆ ಒಟ್ಟು 84 ಕೇಂದ್ರಗಳನ್ನು ತೆರೆಯಲಾಗಿತ್ತು. ಹೋಮ್ ಐಸೋಲೇಷನ್‍ನಲ್ಲಿದ್ದ ಕೆಲವರನ್ನು ಈ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಜೊತೆಗೆ ಮನೆಗಳಲ್ಲಿ ಪ್ರತ್ಯೇಕವಾಗಿ ವಾಸವಾಗಿರಲು ಅವಕಾಶ ಇಲ್ಲದ ಸೌಮ್ಯ ಲಕ್ಷಣಗಳಿರುವ ಸೋಂಕಿತರನ್ನು ಸಹ ದಾಖಲಿಸಲಾಗಿತ್ತು. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 2,011 ಸೋಂಕಿತರು ಕೋವಿಡ್ ಕೇರ್ ಸೆಂಟರ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    2,011 ಸೋಂಕಿತರ ಪೈಕಿ ಈ ವರೆಗೆ 1,940 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಉಳಿದವರು ಬರೀ 71 ಜನ ಮಾತ್ರ. ಅದರಲ್ಲೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಕೋವಿಡ್ ಕೇರ್ ಸೆಂಟರ್ ನಲ್ಲಿ ಅತಿ ಹೆಚ್ಚು ಎಂದರೆ 39 ಸೋಂಕಿತರಿದ್ದರೆ, 14 ಜನ ಧಾರವಾಡ ಗ್ರಾಮೀಣ ಭಾಗದಲ್ಲಿದ್ದಾರೆ. ಅಣ್ಣಿಗೇರಿ 8, ಕುಂದಗೋಳ 7, ನವಲಗುಂದದಲ್ಲಿ 3 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ 20 ಕೋವಿಡ್ ಕೇರ್ ಸೆಂಟರ್ ಬಿಟ್ಟು ಉಳಿದ 64ನ್ನು ಮುಚ್ಚಲಾಗಿದೆ. ಒಂದು ವೇಳೆ ಕೋವಿಡ್ ಕೇರ್ ಸೆಂಟರ್ ಮತ್ತೆ ಬೇಕೆನಿಸಿದರೆ ಪ್ರಾರಂಭಿಸಲಾಗುವುದು. ಆದರೆ ಸದ್ಯ ಇವುಗಳನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

  • ವಿಷ ಕುಡಿತೀನಿ, ಕೋವಿಡ್ ಕೇರ್ ಸೆಂಟರ್‌ಗೆ ಮಾತ್ರ ಬರಲ್ಲ- ಸೋಂಕಿತನ ರಾದ್ಧಾಂತ

    ವಿಷ ಕುಡಿತೀನಿ, ಕೋವಿಡ್ ಕೇರ್ ಸೆಂಟರ್‌ಗೆ ಮಾತ್ರ ಬರಲ್ಲ- ಸೋಂಕಿತನ ರಾದ್ಧಾಂತ

    ದಾವಣಗೆರೆ: ಕೊರೊನಾ ಸೋಂಕಿತನೊಬ್ಬ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದಿದ್ದು, ಅರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಮುಂದೆ ವಿಷದ ಬಾಟಲ್ ಹಿಡಿದು ರಾದ್ಧಾಂತ ಮಾಡಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬಾನುವಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಇರುವವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಅದೇಶ ಮಾಡಿದ್ದಾರೆ. ಡಿಸಿ ಆದೇಶದಂತೆ ಬಾನುವಳ್ಳಿ ಪಿಡಿಒ ನಾಗರಾಜ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕಿತನನ್ನು ಕೋವಿಡ್ ಕೇರ್ ಸೆಂಟರ್ ಗೆ ಕರೆದೊಯ್ಯುಲು ಬಂದಿದ್ದಾರೆ. ಆದರೆ ವ್ಯಕ್ತಿ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದ್ದಾನೆ. ವಿಷ ಕೊಡಿ ಕುಡಿತೀನಿ, ನಾನು ಮಾತ್ರ ಕೋವಿಡ್ ಕೇರ್ ಸೆಂಟರ್ ಗೆ ಬರಲ್ಲ ಎಂದು ಮನೆಗೆ ಹೋಗಿ ವಿಷದ ಬಾಟಲ್ ತಂದು ಅಧಿಕಾರಿಗಳಿಗೆ ಅವಾಜ್ ಹಾಕಿದ್ದಾನೆ. ನೀವೇನಾದ್ರು ಕೋವಿಡ್ ಕೇರ್ ಸೆಂಟರ್ ಗೆ ಕರೆದೊಯ್ದರೆ ನಾನೇ ವಿಷ ಕುಡಿದು ಸತ್ತು ಹೋಗುತ್ತೇನೆ ಎಂದು ಅಧಿಕಾರಿಗಳಿಗೆ ಹೆದರಿಸಿದ್ದಾನೆ.

    ಸೋಂಕಿತನನ್ನು ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಲು ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಡುವಂತಾಯಿತು. ಕೊನೆಗೂ ಸೋಂಕಿತ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದು ಮನೆಯಲ್ಲೇ ಕೂತಿದ್ದಾನೆ. ಸೋಂಕಿತನ ಕುಟುಂಬದ ಐದು ಜನರಿಗೂ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಯಾರೂ ಕೋವಿಡ್ ಕೇರ್ ಸೆಂಟರ್ ಗೆ ಹೋಗದೆ ಅಧಿಕಾರಿಗಳ ಹಾಗೂ ಸಿಬ್ಬಂದಿ ಮನವಿಗೆ ಸ್ಪಂದಿಸದೆ, ಹಠ ಹಿಡಿದು ಕುಳಿತಿದ್ದಾರೆ. ಗ್ರಾಮದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯವರು ಹಲವು ಬಾರಿ ವಿಧವಿಧವಾದ ಕೇಳಿಕೊಂಡರೂ ಸೋಂಕಿತರು ಮಾತ್ರ ಕೊವೀಡ್ ಕೇರ್ ಸೆಂಟರ್ ಗೆ ಹೋಗದೆ ಹಠ ಹಿಡಿದು ಕುಳಿತಿದ್ದಾರೆ.

  • ಕೋವಿಡ್ ಕೇರ್ ಸೆಂಟರ್‌ನಲ್ಲಿ ಕುಟುಂಬ- ಶಾರ್ಟ್ ಸಕ್ಯೂಟ್‍ನಿಂದ ಮನೆ ಬೆಂಕಿಗಾಹುತಿ

    ಕೋವಿಡ್ ಕೇರ್ ಸೆಂಟರ್‌ನಲ್ಲಿ ಕುಟುಂಬ- ಶಾರ್ಟ್ ಸಕ್ಯೂಟ್‍ನಿಂದ ಮನೆ ಬೆಂಕಿಗಾಹುತಿ

    ಮಂಡ್ಯ: ಕೊರೊನಾ ಸೋಂಕು ತಗುಲಿ ಇಡೀ ಕುಟುಂಬ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದರೆ, ಇತ್ತ ಶಾರ್ಟ್ ಸಕ್ರ್ಯೂಟ್‍ನಿಂದ ಕೊರೊನಾ ಸೋಂಕಿತ ಕುಟುಂಬದವರ ಮನೆಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಇಡೀ ಮನೆ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಜರುಗಿದೆ.

    ಲಕ್ಷ್ಮೀಸಾಗರ ಗ್ರಾಮದ ಪ್ರಕಾಶ್ ಅವರ ಮನೆ ಇಂದು ಶಾರ್ಟ್ ಸಕ್ರ್ಯೂಟ್‍ಗೆ ಭಸ್ಮವಾಗಿದೆ. ಪ್ರಕಾಶ್ ಮತ್ತು ಕುಟುಂಬದರಿಗೆ ಕೊರೊನಾ ಸೋಂಕು ತಗುಲಿದ ಕಾರಣ ಇಡೀ ಕುಟುಂಬ ಕೋವಿಡ್ ಕೇರ್ ಸೆಂಟರ್‍ನಲ್ಲಿ ಇತ್ತು. ಹೀಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಕೊರೊನಾ ಪಾಸಿಟಿವ್ ರೇಟ್ ಕುಗ್ಗಿಸಲು ಜಿಲ್ಲಾಡಳಿತ ಪ್ಲ್ಯಾನ್- ಹಳ್ಳಿ, ಹಳ್ಳಿಗೆ ಲಸಿಕೆ ಅಭಿಯಾನ

    ಇಂದು ಸಂಜೆಯ ವೇಳೆ ಶಾರ್ಟ್ ಸಕ್ರ್ಯೂಟ್ ಆಗಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಗೊತ್ತಾಗಿಲ್ಲ, ನಂತರ ಶಾರ್ಟ್ ಸಕ್ರ್ಯೂಟ್‍ನ ಕಿಡಿ ಬೆಂಕಿಯಾಗಿ ಇಡೀ ಮನೆಯನ್ನು ವ್ಯಾಪಿಸಿದೆ. ಮನೆಗೆ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಬಿದ್ದ ಕಾರಣ ಪಕ್ಕದ ಮನೆಗೂ ಬೆಂಕಿ ವ್ಯಾಪಿಸಿತು. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

  • ಸೋಂಕಿತರ ರಂಜನೆಗಾಗಿ ರಸಮಂಜರಿ-ಹಾಡಿಗೆ ತಲೆದೂಗಿದ ಸೋಂಕಿತರು

    ಸೋಂಕಿತರ ರಂಜನೆಗಾಗಿ ರಸಮಂಜರಿ-ಹಾಡಿಗೆ ತಲೆದೂಗಿದ ಸೋಂಕಿತರು

    ತುಮಕೂರು: ಕೋವಿಡ್ ಕೇರ್ ಸೆಂಟರಲ್ಲಿ ಸೋಂಕಿತರ ರಂಜನೆಗಾಗಿ ರಸಮಂಜರಿ ನಡೆಸಲಾಗಿದೆ. ಮಧುಗಿರಿ ತಾಲೂಕಿನ ಬಡವನಹಳ್ಳಿ ಕೇಂದ್ರದಲ್ಲಿ ಈ ರೀತಿಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

    ರಿಯಾಲಿಟಿ ಶೋ ಗಾಯಕ ಕಂಬದ ರಂಗಯ್ಯ ಗೊಂಬೆ ಹೇಳತೈತೆ ಹಾಡು ಸೇರಿದಂತೆ ಹಲವು ಹಾಡು ಹಾಡಿ ಸೋಂಕಿತರಿಗೆ ರಂಜಿಸಿದ್ದಾರೆ. ಅದೇ ರೀತಿ ಮಧುಗಿರಿ ಎಸಿ ಸೋಮಪ್ಪ ಕೂಡ ಹಳೆ ಸಿನೆಮಾ ಹಾಡನ್ನು ಹಾಡಿ ತಲೆದೂಗುವಂತೆ ಮಾಡಿದ್ದಾರೆ.

    ಕೋವಿಡ್ ಕೇರ್ ಸೆಂಟರಲ್ಲಿ 80 ಕ್ಕೂ ಹೆಚ್ಚು ಸೋಂಕಿತರಿದ್ದು ಎಲ್ಲರ ಮಾನಸಿಕ ಆರೋಗ್ಯ ವೃದ್ದಿ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಧುಗಿರಿ ತಾಲೂಕಿನಲ್ಲಿ 04 ಕೋವಿಡ್ ಕೇರ್ ಸೆಂಟರ್ ಇದ್ದು ತಾಲೂಕು ಆಡಳಿತ ಸೋಂಕಿತರ ಮಾನಸಿಕ ಆರೋಗ್ಯ ವೃದ್ಧಿಗಾಗಿ ಈ ರೀತಿಯ ಕಾರ್ಯ ಕ್ರಮ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.

    ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

    ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,97,894 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,67,95,549ಕ್ಕೆ ತಲುಪಿದೆ.

  • ನಮ್ಮನ್ನ ಪ್ಲೀಸ್ ಮನೆಗೆ ಕಳಿಸಿ- ಕೋವಿಡ್ ಸೋಂಕಿತರ ಅಳಲು

    ನಮ್ಮನ್ನ ಪ್ಲೀಸ್ ಮನೆಗೆ ಕಳಿಸಿ- ಕೋವಿಡ್ ಸೋಂಕಿತರ ಅಳಲು

    ಮಂಡ್ಯ: ದಯವಿಟ್ಟು ನಮ್ಮನ್ನ ಮನೆಗೆ ಕಳುಹಿಸಿಕೊಟ್ಟು ಬಿಡಿ, ನಾವು ಮನೆಯಲ್ಲೇ ಚೆನ್ನಾಗಿ ಇರುತ್ತೇವೆ ಎಂದು ಕೋವಿಡ್ ಕೇರ್ ಸೆಂಟರ್‍ನಲ್ಲಿ ಇರುವ ಕೊರೊನಾ ಸೋಂಕಿತರು ಗೋಳಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಇದನ್ನೂ ಓದಿ: 200 ಕುಟುಂಬಗಳಿಗೆ ತಲಾ 3000 ನೀಡಿದ ಅಮೆರಿಕದಲ್ಲಿ ನೆಲೆಸಿರೋ ಕನ್ನಡಿಗ

    ಬದರಿಕೊಪ್ಪಲು ಗ್ರಾಮದಲ್ಲಿರುವ ಕೋವಿಡ್ ಸೆಂಟರ್‌ನಲ್ಲಿ ಸೋಂಕಿರತರಿಗೆ ಸರಿಯಾದ ಸೌಲಭ್ಯಗಳನ್ನು ನೀಡುತ್ತಿಲ್ಲ. ಶೌಚಾಲಯ ಗಬ್ಬೆದ್ದು ನಾರುತ್ತಿದೆ. ಕುಡಿಯುವ ನೀರು ಮುಗಿದು ಎರಡು ದಿನವಾದರು ನೀರು ಕೊಟ್ಟಿಲ್ಲ. ಎಲ್ಲಾ ಸವಲತ್ತು ಕೊಡುತ್ತೇವೆ ಎಂದು ನರಕದಲ್ಲಿ ತಂದು ಹಾಕಿದ್ದಾರೆ ಎಂದು ಕೋವಿಡ್ ಸೋಂಕಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ:  ಆಕ್ಸಿಜನ್ ಆಯ್ತು, ಈಗ ಮಂಡ್ಯದಲ್ಲಿ ಶುರುವಾಗಿದೆ ಅಂಬುಲೆನ್ಸ್ ಪಾಲಿಟಿಕ್ಸ್

    ನನ್ನ ಮಗುವಿಗೆ ಮೂರು ದಿನದಿಂದ ಕೆಮ್ಮು ಇದೆ. ಔಷಧಿ ಕೇಳಿದ್ರೆ ಕೊಡುತ್ತಿಲ್ಲ. ಕೊಡುವ ಊಟ ತಣ್ಣಗೆ ಇರುತ್ತೆ, ಊಟವನ್ನು ಮಾಡಲು ಆಗುವುದಿಲ್ಲ. ದಯವಿಟ್ಟು ನಮ್ಮನ್ನ ಬಿಟ್ಟು ಬಿಡಿ ನಾವು ಮನೆಗೆ ಹೋಗಿ ಔಷಧಿ ಹಾಗೂ ಒಳ್ಳೆಯ ಊಟ ಮಾಡಿಕೊಂಡು ಗುಣಮುಖರಾಗುತ್ತೇವೆ ಎಂದು ಮಹಿಳೆಯೊಬ್ಬರು ಅಳಲು ತೊಡಿಕೊಂಡಿದ್ದಾರೆ.  ಇದನ್ನೂ ಓದಿ:  ಮಂಡ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಮುಗಿ ಬಿದ್ದ ಜನ

  • ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್

    ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್

    ಬೆಂಗಳೂರು: ಇಂದು ನೆಲಮಂಗಲ ತಹಶೀಲ್ದಾರ್ ಮಂಜುನಾಥ್ ಆರೋಗ್ಯಾಧಿಕಾರಿಗಳ ಜೊತೆಗೆ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದರು.

    ಎರಡನೇ ಅಲೆಯ ಮಹಾಮಾರಿ ಕೊರೋನ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ನಡುವೆ ಜನಸಾಮಾನ್ಯರ ಚಿಕಿತ್ಸೆಗೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಟಿಬೆಟಿಯನ್ ವಸತಿ ಗೃಹದಲ್ಲಿ 120 ಹಾಸಿಗೆಯ ವ್ಯವಸ್ಥೆಯನ್ನ ನೆಲಮಂಗಲ ತಾಲೂಕು ಆಡಳಿತದಿಂದ ಕೊವೀಡ್ ಕೇರ್ ಸೆಂಟರ್ ತೆರೆಯಲಾಗಿತ್ತು. ಈಗಾಗಲೇ ಕೊವೀಡ್ ಕೇರ್ ಸೆಂಟರ್ ನಲ್ಲಿ ಪ್ರತ್ಯೇಕವಾಗಿ ಪುರುಷ ಹಾಗೂ ಮಹಿಳೆಯರಿಗೆ ಕೊಠಡಿ ವ್ಯವಸ್ಥೆಯನ್ನ ಮಾಡಲಾಗಿದೆ.

    ಹಳ್ಳಿಗಾಡಿನ ಕೊರೊನ ಸೋಂಕಿತರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್ ಮಂಜುನಾಥ್, ಕೇರ್ ಸೆಂಟರ್ ನಲ್ಲಿನ ಚಿಕಿತ್ಸೆ, ಶೌಚಾಲಯ, ಸ್ವಚ್ಛತೆ ಹಾಗೂ ಉತ್ತಮ ಗುಣಮಟ್ಟದ ಊಟ ಉಪಚಾರದ ಬಗ್ಗೆ ಸೋಂಕಿತರಿಂದಲೇ ಮಾಹಿತಿ ಪಡೆದರು. ಜೊತೆಗೆ ಸೋಂಕಿತರಿಗೆ ಕೊರೋನ ಜಾಗೃತಿ ಮೂಡಿಸಿ ಆತಂಕ ಪಡದಂತೆ ಧೈರ್ಯ ತುಂಬಿದ್ದಾರೆ.