ಮುಂಬೈ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 10 ಮಂದಿ ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಅಹ್ಮದ್‍ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕೋವಿಡ್-19 ಚಿಕಿತ್ಸೆ ಪಡೆಯುತ್ತಿದ್ದ ಸುಮಾರು ಹತ್ತು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಮತ್ತು ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪುನೀತ್ ಸಾವಿನ ನಂತರ ಜಯದೇವ ಆಸ್ಪತ್ರೆ ರೋಗಿಗಳಲ್ಲಿ 30% ಹೆಚ್ಚಳ
Maharashtra | A total of 10 people died in a fire incident at Ahmednagar District Hospital, said District Collector Rajendra Bhosale pic.twitter.com/zrUnAMKNMj
ಘಟನೆ ಕುರಿತಂತೆ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ, ಇದೀಗ ಉಳಿದಿರುವ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಒಟ್ಟು ಐಸಿಯು ವಾರ್ಡ್‍ನಲ್ಲಿ 17 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ 10 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಸತ್ತವರೆಲ್ಲರೂ ಕೋವಿಡ್-19ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿಯೇ ಮದುವೆಯಾಗಲು ಆಗಮಿಸಿದ ಪ್ರೇಮಿಗಳು
ಬೆಂಗಳೂರು: ಬೋಯಿಂಗ್ ಸಂಸ್ಥೆಯು, ‘ಸೆಲ್ಕೋ’, ‘ಡಾಕ್ಟರ್ಸ್ ಫಾರ್ ಯು’ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಭೇಟಿ ನೀಡಿದರು.
ಯಲಹಂಕದಲ್ಲಿ ಬೋಯಿಂಗ್ ಸಂಸ್ಥೆಯು ಕೋವಿಡ್ ಕೇರ್ ಆಸ್ಪತ್ರೆ ನಿರ್ಮಿಸುತ್ತಿರುವ ವಿಷಯವನ್ನು ರಾಜ್ಯಕ್ಕೆ ಮೊದಲಿಗೆ ತಿಳಿಸಿದವರೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. ಮೇ 7ರಂದು ಈ ವಿಷಯವನ್ನು ಟ್ವೀಟ್ ಮಾಡಿದ್ದ ವಿತ್ತ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಧನ್ಯವಾದ ಹೇಳಿದ್ದರು.
ಬೋಯಿಂಗ್ ಸಂಸ್ಥೆಯು ‘ಸೆಲ್ಕೋ’ ಮತ್ತು ‘ಡಾಕ್ಟರ್ಸ್ ಫಾರ್ ಯು’ ಸಹಯೋಗದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದರು. ಕಾರ್ಪೋರೇಟ್ ಕಂಪನಿಗಳು ತಮ್ಮ ಸಮುದಾಯಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಕೋವಿಡ್ ಅಲೆ ನಿಯಂತ್ರಣ, ಚಿಕಿತ್ಸೆಯಲ್ಲಿ ಭಾಗಿಯಾಗಿರುವುದು ಶ್ಲಾಘನೀಯ ಎಂದರು.
ಕರ್ನಾಟಕ ವಿದ್ಯುತ್ ನಿಗಮ ಆಸ್ಪತ್ರೆ ನಿರ್ಮಾಣಕ್ಕೆ ಅರ್ಧ ಎಕರೆ ಜಾಗ ಅಗತ್ಯ ಜಾಗ ಒದಗಿಸಿದೆ. ಡಾಕ್ಟರ್ಸ್ ಫಾರ್ ಯು ಸರ್ಕಾರೇತರ ಸಂಸ್ಥೆಯು ಆಸ್ಪತ್ರೆ ನಿರ್ವಹಣೆ ಮತ್ತು ಆರೋಗ್ಯ ಸೇವೆ ಒದಗಿಸುವ ಜವಾಬ್ದಾರಿ ವಹಿಸಿಕೊಂಡಿದೆ. ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನು ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ.
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣಾ ಉಪಸ್ಥಿತರಿದ್ದರು.
ಬೆಂಗಳೂರು: ಕೋವಿಡ್ ಅಲೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೋಯಿಂಗ್ ಸಂಸ್ಥೆಯು, ‘ಸೆಲ್ಕೋ’, ‘ಡಾಕ್ಟರ್ಸ್ ಫಾರ್ ಯು’ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೊವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಇಂದು ಉದ್ಘಾಟಿಸಿದರು.
ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ವಿದ್ಯುತ್ ನಿಗಮ ತನ್ನ ಕ್ಯಾಂಪಸ್‍ನಲ್ಲಿ ಜಾಗ ನೀಡಿದ್ದು, ಸುಮಾರು ಅರ್ಧ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನು ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಎಸ್‍ವೈ, ಕೋವಿಡ್ ಎರಡನೇ ಅಲೆ ನಿಯಂತ್ರಣ, ಚಿಕಿತ್ಸೆ ಹಾಗೂ ಲಸಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು ಹಾಗೂ ಎನ್‍ಜಿಓಗಳು ಕೈ ಜೋಡಿಸಿರುವುದು ಅತ್ಯಂತ ಶ್ಲಾಘನೀಯ. ಬೋಯಿಂಗ್ ಸಂಸ್ಥೆಯು ‘ಸೆಲ್ಕೋ’ ಮತ್ತು ‘ಡಾಕ್ಟರ್ಸ್ ಫಾರ್ ಯು’ ಸಹಯೋಗದೊಂದಿಗೆ ಅತ್ಯಂತ ಕಡಿಮೆ ಸಮಯದಲ್ಲಿ ಕೊವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿರುವುದು ಬಹಳ ಸಂತಸದ ವಿಷಯ. ಕಾರ್ಪೋರೇಟ್ ಕಂಪನಿಗಳು ತಮ್ಮ ಸಮುದಾಯಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಇಂಥ ಜನಪರ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಅನುಕರಣೀಯ ಎಂದರು.
ಕರ್ನಾಟಕ ವಿದ್ಯುತ್ ನಿಗಮದ ಯಲಹಂಕ ಕ್ಯಾಂಪಸ್‍ನಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಕೋವಿಡ್ ಕೇರ್ ಆಸ್ಪತ್ರೆ ತಲೆ ಎತ್ತಿದೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಪ್ರಯತ್ನಗಳಿಗೆ ಕಾರ್ಪೋರೇಟ್ ಸಂಸ್ಥೆಗಳು ಎನ್‍ಜಿಓಗಳು ಕೈ ಜೋಡಿಸಿರುವುದು ಸಂತಸದ ವಿಷಯ. ರಾಜ್ಯದ ಆರೋಗ್ಯ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳುವ ಎಲ್ಲ ಕಾರ್ಯಕ್ರಮಗಳಲ್ಲಿ ಸರ್ಕಾರದ ಜೊತೆ ಇನ್ನಿತರ ಖಾಸಗಿ ಸಂಸ್ಥೆಗಳು ಕೈ ಜೋಡಿಸಲಿ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದರು.
ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್. ವಿಶ್ವನಾಥ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಾಜ್ ಕುಮಾರ್ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್. ಎಂ. ರೇವಣ್ಣಗೌಡ ಉಪಸ್ಥಿತರಿದ್ದರು. ಇದನ್ನೂ ಓದಿ: ಬಿಎಸ್‍ವೈ ಅನ್ನ ಹಾಕಿದ ದೇವರು – ಸಿದ್ದರಾಮಯ್ಯಗೆ ಕಾಟ ಕೊಟ್ಟ ಕುಡುಕ
ಆಸ್ಪತ್ರೆ ವೈಶಿಷ್ಟ್ಯ:
ಅತಿ ಕಡಿಮೆ ಅವಧಿ ಅಂದರೆ ಕೇವಲ 20 ದಿನಗಳಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೌರ ವ್ಯವಸ್ಥೆಯನ್ನು ಒಳಗೊಂಡಿದೆ. ತಾಪಮಾನ ನಿಯಂತ್ರಿಸಬಲ್ಲ ಮಾದರಿ ವ್ಯವಸ್ಥೆ ಇದೆ. ಔಷಧಾಲಯ, ಪ್ರಯೋಗಾಲಯ, ವಿಶ್ರಾಂತಿ ಕೊಠಡಿ, ದಾದಿಯರ ಕೇಂದ್ರ, ತಾಯಿಯರ ಆರೈಕೆ ಕೇಂದ್ರ ಹಾಗೂ ಸಭಾಂಗಣವನ್ನು ಒಳಗೊಂಡಿದೆ. 10 ಐಸಿಯು ಹಾಸಿಗೆ, 20 ಎಚ್‍ಡಿಯು ಹಾಸಿಗೆಗಳಿವೆ. ಉಳಿದ ಹಾಸಿಗೆಗಳು ವೈದ್ಯಕೀಯ ಆಮ್ಲಜನಕದ ಸಂಪರ್ಕ ಹೊಂದಿವೆ.
ವೆಚ್ಚ, ನಿರ್ವಹಣೆ:
ಆಸ್ಪತ್ರೆ ನಿರ್ಮಾಣಕ್ಕೆ ಒಟ್ಟು 5.5 ಕೋಟಿ ರೂ. ವೆಚ್ಚವಾಗಿದ್ದು, ಬೊಯಿಂಗ್ ಡಿಫೆನ್ಸ್ ಇಂಡಿಯಾ ಪ್ರೈ. ಲಿ 3 ಕೋಟಿ ರೂ., ಸೆಲ್ಕೋ ಫೌಂಡೇಷನ್ 2.5 ಕೋಟಿ ರೂ. ನೀಡಿದೆ. ಕರ್ನಾಟಕ ವಿದ್ಯುತ್ ನಿಗಮ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಜಾಗ ಒದಗಿಸಿದೆ. ಡಾಕ್ಟರ್ಸ್ ಫಾರ್ ಯು ಸರ್ಕಾರೇತರ ಸಂಸ್ಥೆಯು ಆಸ್ಪತ್ರೆ ನಿರ್ವಹಣೆ ಮತ್ತು ಆರೋಗ್ಯ ಸೇವೆ ಒದಗಿಸುವ ಜವಾಬ್ದಾರಿ ವಹಿಸಿಕೊಂಡಿದೆ.
ಅತಿ ಕಡಿಮೆ ಅವಧಿಯಲ್ಲಿ ಅತ್ಯಂತ ಶೀಘ್ರವಾಗಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಿಸಿ ಸಾರ್ವಜನಿಕರಿಗೆ ಸೌಲಭ್ಯ ಒದಗಿಸುತ್ತಿರುವ ಇಡೀ ತಂಡದ ಪರಿಶ್ರಮ ಶ್ಲಾಘನೀಯ ಎಂದು ಬೋಯಿಂಗ್ ಡಿಫೆನ್ಸ್ ಇಂಡಿಯಾದ ಅಧ್ಯಕ್ಷ ಸಲೀಲ್ ಗುಪ್ತೆ ಹೇಳಿದರು. ಈ ಆಸ್ಪತ್ರೆಯ ಸುಸ್ಥಿರತೆಯ ಎಲ್ಲ ಪರಿಕಲ್ಪನೆಗಳನ್ನು ಒಳಗೊಂಡಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸೌರಶಕ್ತಿಯಂತಹ ಸುಸ್ಥಿರ ಶಕ್ತಿಯು ನಿರ್ಣಾಯಕ ಪಾತ್ರವಹಿಸಲಿದೆ ಎಂಬುದನ್ನು ಈ ಕಟ್ಟಡ ಸಾಬೀತುಪಡಿಸಲಿದೆ ಎಂದು ಸೆಲ್ಕೋ ಫೌಂಡೇಷನ್‍ನ ಸಂಸ್ಥಾಪಕ ಡಾ. ಹರೀಶ್ ಹಂದೆ ತಿಳಿಸಿದರು.
– ಸಂಚಾರಿ ಕೋವಿಡ್ ಆಸ್ಪತ್ರೆ ಬಸ್‍ಗಳು ಇಂದಿನಿಂದ ಕಾರ್ಯಾರಂಭ
ರಾಯಚೂರು: ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರು ಹಾಗೂ ರಿಮ್ಸ್ ಆಸ್ಪತ್ರೆ ರೋಗಿಗಳ ಆಮ್ಲಜನಕ ಕೊರತೆ ನೀಗಿಸಲು ಸಿದ್ದಪಡಿಸಿದ್ದ 20 ಕೆ.ಎಲ್. ಆಮ್ಲಜನಕ ಪ್ಲಾಂಟ್ ಇಂದು ಲೋಕಾರ್ಪಣೆಯಾಗಿದೆ. ನಗರದ ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾದ ಘಟಕವನ್ನು ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.
ಸಾರಿಗೆ ಇಲಾಖೆಯ ಮೂರು ಬಸ್‍ಗಳನ್ನು ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದ್ದು, ಕೋವಿಡ್ ಮೊಬೈಲ್ ಆಸ್ಪತ್ರೆಗೆ ಸಾರಿಗೆ ಸಚಿವರಾಗಿರುವ ಲಕ್ಷ್ಮಣ ಸವದಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಚಾಲನೆ ನೀಡಿದರು. ಇದನ್ನು ಓದಿ: ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ
ಪ್ರತಿ ಬಸ್‍ನಲ್ಲಿ 4 ಬೆಡ್ ಹಾಗೂ ಸೋಂಕಿತರು ಕುಳಿತುಕೊಂಡು ಆಕ್ಸಿಜನ್ ಪಡೆಯಲು 4 ಸೀಟ್ ವ್ಯವಸ್ಥೆ ಮಾಡಲಾಗಿದೆ. ಬಸ್‍ನಲ್ಲಿ 5 ಆಕ್ಸಿಜನ್ ಸಿಲಿಂಡರ್, ವೆಂಟಿಲೇಟರ್, ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆಯಿದೆ. ಈ ಮೂರು ಬಸ್ ಗಳನ್ನ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆ ಮುಂದೆ ನಿಲ್ಲಿಸಲಾಗುತ್ತಿದೆ.
ಜಿಲ್ಲಾ ಭೇಟಿಯಲ್ಲಿರುವ ಡಿಸಿಎಂ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ನಿಯಂತ್ರಣ ಹಿನ್ನೆಲೆ ಜಿಲ್ಲಾಡಳಿತದ ಕ್ರಮಗಳ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಮಾರಂಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ್, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಡಿಸಿಎಂ ಲಕ್ಷ್ಮಣ ಸವದಿ ಜೊತೆ ಪಾಲ್ಗೊಂಡಿದ್ದರು. ಇದನ್ನು ಓದಿ:ಜಿಲ್ಲೆಗಳಲ್ಲಿ ಕೇಸ್ ಇಳಿಕೆಯಾದ್ರೂ, ಸಾವಿನ ಪ್ರಮಾಣ ಇಳಿಕೆ ಇಲ್ಲ – ವಾರ್ ರೂಮ್ ಡೆತ್ ರಿಪೋರ್ಟ್
ಚಿತ್ರದುರ್ಗ: ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಡವಟ್ಟು ಮಾಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಡಿಸಿ ಕವಿತಾ ಮನ್ನಿಕೇರಿ ಅವರು ಚಿತ್ರದುರ್ಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಎಡವಟ್ಟೊಂದನ್ನು ಮಾಡಿದ್ದಾರೆ. ಅದೇನಂದರೆ ಆಸ್ಪತ್ರೆ ಭೇಟಿ ವೇಳೆ ಧರಿಸಿದ್ದ ಗೌನ್ ತೆಗೆದು ತನ್ನ ಗನ್ ಮ್ಯಾನ್ ಗೆ ನೀಡಿದ್ದಾರೆ.
ಡಸ್ಟ್ ಬಿನ್ ಗೆ ಹಾಕುವ ಬದಲು ಕವಿತಾ, ಗನ್‍ಮ್ಯಾನ್ ಗೆ ನೀಡಿದ್ದಾರೆ. ಈ ವೇಳೆ ಗನ್ ಮ್ಯಾನ್ ಡಿಸಿ ಧರಿಸಿದ್ದ ಗೌನ್ ತನ್ನ ಕೈಯಿಂದ ಹಿಡಿದು ಡಸ್ಟ್ ಬಿನ್ ಗೆ ಹಾಕಿದ್ದಾರೆ.
ಗಾಂಧಿನಗರ: ಮಹಾಮಾರಿ ಕೊರೊನಾ ವೈರಸ್ ನಿಂದ ಒಂದೆಡೆ ಬೆಡ್, ಆಕ್ಸಿಜನ್ ಸಿಗದೆ ಜನ ಸಾವನ್ನಪ್ಪುತ್ತಿದ್ದರೆ, ಇತ್ತ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 16 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
Gujarat| Fire breaks out at a COVID-19 care centre in Bharuch. Affected patients are being shifted to nearby hospitals. Details awaited. pic.twitter.com/pq88J0eRXY
ಈ ಘಟನೆ ಗುಜರಾತ್ ನ ಭಾರುಚ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದೆ. ಘಟನೆಯಿಂದ ಸುಮಾರು 16 ಮಂದಿ ಕೊರೊನಾ ಸೋಂಕಿತರು ಸಜೀವ ದಹನವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಮೋಧ್ಯ ಮಾಹಿತಿ ನೀಡಿದ್ದಾರೆ.
“According to primary information, probably 12 people have been killed in the incident of fire at Patel Welfare Hospital’s dedicated COVID-19 care centre at 12:30 pm in Bharuch,” says police pic.twitter.com/4Y5IUg0XYB
ಅಗ್ನಿ ಅವಗಢ ಹಾಗೂ ಹೊಗೆ ತುಂಬಿಕೊಂಡಿದ್ದರಿಂದ ಸೋಂಕಿತರು ಆಸ್ಪತ್ರೆಯ ಒಳಗಡೆಯೇ ಮೃತಪಟ್ಟಿದ್ದಾರೆ ಎಂದು ಎಸ್‍ಪಿ ರಾಜೇಂದ್ರ ಸಿನ್ಹಾ ತಿಳಿಸಿದ್ದಾರೆ. ನಾಲ್ಕು ಮಹಡಿಯ ಆಸ್ಪತ್ರೆ ಇದಾಗಿದ್ದು, ಸುಮಾರು 70 ಮಂದಿ ಚಿಕಿತ್ಸೆ ಪಡೆಯುತ್ತಿದ್ದರು.
Gujarat: Fire broke out at a #COVID19 care centre in Bharuch last night. 16 people, including 14 patients, died in the incident. pic.twitter.com/gbbLZzML6I
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೆ ಆಸ್ಪತ್ರೆಯ ಒಳಗಡೆ ಸಿಲುಕಿದ್ದ ರೋಗಿಗಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.
ಅಗ್ನಿ ಅವಘಡ ಸಂಭವಿಸಿದ 1 ಗಂಟೆಯಲ್ಲೇ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಯಾದಗಿರಿ: ಇಲ್ಲಿನ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ವಿದ್ಯುತ್ ಕಟ್ ಆಗಿದ್ದು, ಸೋಂಕಿತರು ನರಕಯಾತನೆ ಅನುಭವಿಸುತ್ತಿದ್ದಾರೆ.
ಯಾದಗಿರಿ ತಾಲೂಕಿನ ಮುದ್ನಾಳ್ ಬಳಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ಗಂಟೆಗಳಿಂದ ಕರೆಂಟ್ ಬರದಿದ್ದರಿಂದ ಆಕ್ಸಿಜನ್, ವೆಂಟಿಲೆಟರ್ ಬಂದ್ ಆಗಿ ಸೋಂಕಿತರು ಪರದಾಡುತ್ತಿದ್ದಾರೆ.
ಏಕಾಏಕಿ ವಿದ್ಯುತ್ ಕಟ್ ಆಗಿದ್ದಕ್ಕೆ ಸೋಂಕಿತರ ಸ್ಥಿತಿ ಗಂಭೀರವಾಗಿದೆ. ಸೋಂಕಿತರ ಸಂಬಂಧಿಕರು ಕೈಯಲ್ಲಿ ಟವೆಲ್ ಹಿಡಿದು ಗಾಳಿ ಬೀಸುತ್ತಿದ್ದಾರೆ. ಇನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕರೆಂಟ್ ಹೋದ್ರೆ ಜನರೆಟರ್ ವ್ಯವಸ್ಥೆ ಇದೆ, ಆದ್ರೆ ಡೀಸೆಲ್ ಇಲ್ಲ.
ಜಿಲ್ಲಾಡಳಿತದ ದೊಡ್ಡ ಎಡವಟ್ಟಿಗೆ ಸೋಂಕಿತರ ಸಂಬಂಧಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಒಟ್ಟಿನಲ್ಲಿ ಕರೆಂಟ್ ಇಲ್ಲದೆ ಸೋಂಕಿತರು ನರಕಯಾತನೆ ಅನುಭವಿಸುತ್ತಿದ್ದು, ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕೋಡಿ: ಗಡಿ ಜಿಲ್ಲೆಯ ಬೆಳಗಾವಿಯ ನಿಪ್ಪಾಣಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ ಅವರ ಪರಿಶ್ರಮ ನೂತನ ಕೋವಿಡ್ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಆಯುಷ್ಮಾನ್ ಭಾರತ್, ಸುವರ್ಣ ಕರ್ನಾಟಕ, ಜೊಲ್ಲೆ ಉದ್ಯೋಹ ಸಮೂಹ ಸಹಯೋಗದಲ್ಲಿ ನೂತನ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.
ಸಚಿವೆ ಶಶಿಕಲಾ ಜೊಲ್ಲೆ ಅವರ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ ಮಾಡಲಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರರಕಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ರೋಗಿಗಳಿಗೆ ಬೆಡ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ 40 ಬೆಡ್‍ಗಳ ಸುಸಜ್ಜಿತ ಸೆಂಟರ್ ಆರಂಭ ಮಾಡಲಾಗಿದೆ.
ಕೋವಿಡ್ ಕೇಂದ್ರದಲ್ಲಿರುವ 16 ಆಕ್ಸಿಜನ್ ಬೆಡ್ ಸೇರಿ 40 ಬೆಡ್ ವ್ಯವಸ್ಥೆ ಮಾಡಲಾಗಿದೆ. ನಿಪ್ಪಾಣಿಯ ಎಲ್ಲಾ ವೈದ್ಯರ ಸಹಯೋಗದಲ್ಲಿ ಪ್ರಾರಂಭವಾದ ಸೆಂಟರ್ ಇದಾಗಿದ್ದು, ಕೊವಿಡ್ ರೋಗಿಗಳಿಗಾಗಿ ಒಂದು ಪ್ರತ್ಯೇಕ ಅಂಬುಲೆನ್ಸ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ಇದರೊಂದಿಗೆ ಪೌಷ್ಠಿಕ ಆಹಾರದ ವ್ಯವಸ್ಥೆ ಕೂಡ ಸೆಂಟರ್ ನಲ್ಲಿ ಮಾಡಲಾಗಿದೆ. ಅತ್ಯಂತ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಜೊಲ್ಲೆ ಉದ್ಯೋಗ ಸಮೂಹ ಮುಂದಾಗಿದ್ದು, ಬಡ ಜನರಿಗೆ ಆಸ್ಪತ್ರೆ ಸಾಕಷ್ಟು ಅನುಕೂಲವಾಗಲಿದೆ.
ರಾಯಚೂರು: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನ ಕೂಡಲೇ ಶವಾಗಾರಕ್ಕೆ ಸಾಗಿಸಬೇಕು. ಆದರೆ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸುಮಾರು ಗಂಟೆಗಳ ಕಾಲ ಸೋಂಕಿತರ ಪಕ್ಕದಲ್ಲೇ ಶವವನ್ನು ಇಡಲಾಗಿತ್ತು.
ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು. ಹೀಗಾಗಿ ಊಟ ತೆಗೆದುಕೊಂಡು ಹೋಗಲು, ಬರುವ ಪ್ರತಿಯೊಬ್ಬರು ಮೃತದೇಹದ ಪಕ್ಕದಲ್ಲೇ ನಿಂತುಕೊಂಡು ಊಟ ತೆಗೆದುಕೊಳ್ಳಬೇಕಾದ ಅವ್ಯವಸ್ಥೆಗೆ ಜನರನ್ನು ಹೈರಾಣಾಗಿಸಿದೆ.
ಸಾಮಾಜಿಕ ಅಂತರ ಕಾಪಾಡಲು ಹೇಳುವ ವೈದ್ಯರೇ ಈ ರೀತಿಯ ಕೆಲಸ ಮಾಡುತ್ತಾರೆ. ರೋಗಿಗಳನ್ನ ನೋಡಲು ಸಹ ಪ್ರತಿದಿನ ಬರುವುದಿಲ್ಲ. ಮೃತದೇಹವನ್ನ ಮಾತ್ರ ಗಂಟೆಗಟ್ಟಲೇ ಆಸ್ಪತ್ರೆಯಲ್ಲಿ ಎಲ್ಲಂದರಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಊಟಕ್ಕಾಗಿ ಕೊರೊನಾ ಸೋಂಕಿತರು ಗ್ರೌಂಡ್ ಫ್ಲೋರ್ ಗೆ ಬರಬೇಕು. ಒಂದೊಂದು ಸಾರಿ ಸಮಯಕ್ಕೆ ಊಟ ಸಿಗುತ್ತೆ. ಮತ್ತೆ ಒಂದೊಂದು ಬಾರಿ ಸರಿಯಾಗಿ ಸಿಗಲ್ಲ. ಕೋವಿಡ್ ವಾರ್ಡಿನ ಗೇಟ್ ಯಾವಾಗಲೂ ತೆರೆದಿರುತ್ತೆ. ರೋಗಿಗಳು, ಸೋಂಕು ಅಲ್ಲದೆ ಇರುವವರು ಸಹ ಹೊರಗೆ ಒಳಗೆ ಓಡಾಡುತ್ತಲೇ ಇರುತ್ತಾರೆ. ಕೊರೊನಾ ಸೋಂಕಿತರು ಬಂದು ಎರಡು ಗಂಟೆಗಳಾದರೂ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯವಹಿಸುತ್ತದೆ ಎಂದು ಸೋಂಕಿತ ವ್ಯಕ್ತಿ ಹೇಳಿದ್ದಾರೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಜೊತೆಗೆ ಧೈರ್ಯ ತುಂಬಿ ಗುಣಮುಖರನ್ನಾಗಿ ಮಾಡಬೇಕಾದ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಕನಿಷ್ಠ ಸೌಲಭ್ಯ ಒದಗಿಸುವುದರ ಜೊತೆ ಆಸ್ಪತ್ರೆಯ ಪರಿಸ್ಥಿತಿ ಸುಧಾರಿಸಬೇಕಿದೆ ಎಂದು ಸೋಂಕಿತರು ಹೇಳುತ್ತಿದ್ದಾರೆ.
ಮಡಿಕೇರಿ: ಕೋವಿಡ್ 19 ಸೋಂಕಿತ ಪ್ರಕರಣಗಳು ಎಲ್ಲಾ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಹೆಚ್ಚುತ್ತಿವೆ. ಸೋಂಕಿತರ ಉತ್ತಮ ಆರೈಕೆ ಮತ್ತು ಸೂಕ್ತ ಚಿಕಿತ್ಸೆಯಿಂದಾಗಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯ ಬಿಡುಗಡೆ ಪ್ರಮಾಣ ಶೇ.76 ರಷ್ಟು ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿರುವ ಐಸಿಯು ವಿಭಾಗದ ಹಾಸಿಗೆ ಸಾಮರ್ಥ್ಯವನ್ನು 56 ಹಾಸಿಗೆಗೆ ಹೆಚ್ಚಿಸಲಾಗಿದೆ. ಕೋವಿಡ್ ಐಸಿಯು ವಿಭಾಗವನ್ನು ಅರವಳಿಕೆ (ಅನಸ್ತೇಶಿಯಾ) ವಿಭಾಗದಿಂದ ನಿಭಾಯಿಸಲಾಗುತ್ತಿದೆ. ಈ ವಿಭಾಗದಿಂದ ಕೋವಿಡ್ ಸಂಬಂಧಿತ ತುರ್ತು ಕ್ರಮಕ್ಕಾಗಿ ಹೆಚ್ಚುವರಿ ಸಿಬ್ಬಂದಿ, ದಾದಿ (ಸ್ಟಾಫ್ ನರ್ಸ್)ಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 356 ಕೋವಿಡ್ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ ಕಳೆದ ತಿಂಗಳಿನಲ್ಲಿ 30 ಮಂದಿ ಕೋವಿಡ್ ಐಸಿಯುನಲ್ಲಿ ದಾಖಲಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು, ಹಾಲಿ 5 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 23 ಮಂದಿ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.