Tag: covid karnataka

  • ರಾಜ್ಯದಲ್ಲಿ 600 ಮಂದಿಗೆ ಕೊರೊನಾ – ಸೋಂಕಿಗೆ ಇಬ್ಬರು ಬಲಿ

    ರಾಜ್ಯದಲ್ಲಿ 600 ಮಂದಿಗೆ ಕೊರೊನಾ – ಸೋಂಕಿಗೆ ಇಬ್ಬರು ಬಲಿ

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಇಳಿಮುಖವಾಗುತ್ತಿದ್ದು, ನಿನ್ನೆ 941 ಇದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು 600ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿಂದು 600 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

    ಇಂದು ರಾಜ್ಯದಲ್ಲಿ 589 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 40,09,287 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 28,046 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,87,14,120 ಮಂದಿಗೆ ಟೆಸ್ಟ್ ಮಾಡಲಾಗಿದೆ.

    ಕೋವಿಡ್‌ನಿಂದ ಎರಡು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,205 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.2.13 ಇದೆ. 5,212 ಸಕ್ರಿಯ ಪ್ರಕರಣಗಳಿವೆ. ಇಂದು 28,046 ಮಂದಿಯನ್ನು (6,332 ರ‍್ಯಾಪಿಡ್ ಆಂಟಿಜನ್, 21,714 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 2,173 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

    ಬೆಂಗಳೂರು ನಗರದಲ್ಲೇ 312 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 11, ಬಾಗಲಕೋಟೆ 5, ಬಳ್ಳಾರಿ 6, ಬೆಳಗಾವಿ 10, ಬೀದರ್ 0, ಚಾಮರಾಜನಗರ 11, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 8, ಚಿತ್ರದುರ್ಗ 2, ದಕ್ಷಿಣ ಕನ್ನಡ 22, ದಾವಣಗೆರೆ 3, ಧಾರವಾಡ 13, ಗದಗ 2, ಹಾಸನ 19, ಹಾವೇರಿ 2, ಕಲಬುರಗಿ 7, ಕೊಡಗು 22, ಕೋಲಾರ 15, ಕೊಪ್ಪಳ 2, ಮಂಡ್ಯ 6, ಮೈಸೂರು 54, ರಾಯಚೂರು 8, ರಾಮನಗರ 22, ಶಿವಮೊಗ್ಗ 9, ತುಮಕೂರು 3, ಉಡುಪಿ 14, ಉತ್ತರ ಕನ್ನಡ 10, ವಿಜಯಪುರದಲ್ಲಿ 1 ಪ್ರಕರಣ ಪತ್ತೆಯಾಗಿದ್ದು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 941 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು

    ರಾಜ್ಯದಲ್ಲಿಂದು 941 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು

    ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಇಳಿಮುಖವಾಗುತ್ತಿದೆ. ಇಂದು ರಾಜ್ಯದಲ್ಲಿ 941 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಓರ್ವ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 788 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 40,08,698 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 23,101 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,86,86,074 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಚೈತ್ರಾ ಹಳ್ಳಿಕೇರಿ – ಅಕ್ಷತಾ ಕುಕ್ಕಿ ಔಟ್

    ಕೋವಿಡ್‌ನಿಂದ ಇಂದು ಒಂದೇ ಒಂದು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,203 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.07 ಇದೆ. 5,203 ಸಕ್ರಿಯ ಪ್ರಕರಣಗಳಿವೆ. ಇಂದು 23,101 ಮಂದಿಯನ್ನು (6,522 ರ‍್ಯಾಪಿಡ್ ಆಂಟಿಜನ್, 16,579 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 31,457 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಏರೋಪ್ಲೇನ್ ಕದ್ದು ಹಾರಾಟ ನಡೆಸಿದ ಪೈಲಟ್ – ವಾಲ್‌ಮಾರ್ಟ್‌ಗೆ ಗುದ್ದುತ್ತೇನೆಂದು ಬೆದರಿಕೆ

    ಬೆಂಗಳೂರು ನಗರದಲ್ಲೇ 526 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 16, ಬಾಗಲಕೋಟೆ 2, ಬಳ್ಳಾರಿ 13, ಬೆಳಗಾವಿ 12, ಬೀದರ್ 0, ಚಾಮರಾಜನಗರ 24, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 18, ಚಿತ್ರದುರ್ಗ 1, ದಕ್ಷಿಣ ಕನ್ನಡ 29, ದಾವಣಗೆರೆ 4, ಧಾರವಾಡ 4, ಗದಗ 0, ಹಾಸನ 36, ಹಾವೇರಿ 1, ಕಲಬುರಗಿ 15, ಕೊಡಗು 13, ಕೋಲಾರ 15, ಕೊಪ್ಪಳ 2, ಮಂಡ್ಯ 9, ಮೈಸೂರು 99, ರಾಯಚೂರು 10, ಶಿವಮೊಗ್ಗ 24, ತುಮಕೂರು 7, ಉಡುಪಿ 13, ಉತ್ತರ ಕನ್ನಡ 10, ವಿಜಯಪುರದಲ್ಲಿ 1 ಪ್ರಕರಣ ಪತ್ತೆಯಾಗಿದ್ದು ರಾಮನಗರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್‌ ಪ್ರಕರಣದಲ್ಲಿ ಏರಿಳಿತ- ರಾಜ್ಯದಲ್ಲಿಂದು 242 ಹೊಸ ಪ್ರಕರಣ ದೃಢ, 4 ಮಂದಿ ಸಾವು

    ಕೋವಿಡ್‌ ಪ್ರಕರಣದಲ್ಲಿ ಏರಿಳಿತ- ರಾಜ್ಯದಲ್ಲಿಂದು 242 ಹೊಸ ಪ್ರಕರಣ ದೃಢ, 4 ಮಂದಿ ಸಾವು

    ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಏರಿಕೆ ಕಂಡಿದ್ದ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದೆ. ಶುಕ್ರವಾರ 242 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಇಂದು ಕೂಡ ಕೋವಿಡ್‌ನಿಂದ 4 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ-2, ಚಾಮರಾಜನಗರ-1, ಕೊಪ್ಪಳದಲ್ಲಿ 1 ಸಾವು ಪ್ರಕರಣ ವರದಿಯಾಗಿದೆ. ಉಳಿದೆಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ವರದಿಯಾಗಿದೆ.

    ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,93,139 ಕ್ಕೆ ತಲುಪಿದೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,169 ಕ್ಕೇರಿದೆ. ಇಂದು 329 ಮಂದಿ ಸೇರಿದಂತೆ ಈವರೆಗೆ 29,47,683 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. 7,258 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಪ್ರಕರಣ ಪ್ರಮಾಣ ಶೇ. 0.26 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.1.65 ಇದೆ. ಇದನ್ನೂ ಓದಿ: ರಾಹುಲ್‌, ರೋಹಿತ್‌ ಶತಕದ ಜೊತೆಯಾಟ- ಟಿ20 ಸರಣಿ ಗೆದ್ದ ಟೀಂ ಇಡಿಯಾ

    ರಾಜ್ಯದಲ್ಲಿ ಇಂದು 2,39,454 ಮಂದಿಗೆ ಕೋವಿಡ್-‌19 ಲಸಿಕೆಯನ್ನು ನೀಡಲಾಗಿದೆ. ಅಲ್ಲದೇ 89,715 ಜನರಿಗೆ ಕೋವಿಡ್‌ ಪರೀಕ್ಷೆ (15,804 ರ‍್ಯಾಪಿಡ್‌ ಆ್ಯಂಟಿಜನ್‌ ಹಾಗೂ 73,911 ಆರ್‌ಟಿ-ಪಿಸಿಆರ್‌ ಪರೀಕ್ಷೆ) ನಡೆಸಲಾಗಿದೆ. ಇದನ್ನೂ ಓದಿ: ಬಿಡಿಎ ಅಧಿಕಾರಿಗಳಿಗೆ ಎಸಿಬಿ ಶಾಕ್‌- ಕಂತೆ ಕಂತೆ ನೋಟು, ಬ್ಯಾಗ್‌ಗಟ್ಟಲೆ ದಾಖಲೆಗಳು ವಶ!

    ಆರೋಗ್ಯ ಇಲಾಖೆಯ ಬುಲೆಟಿನ್‌ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 144, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 3, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 7, ಗದಗ 1, ಹಾಸನ 11, ಹಾವೇರಿ 1, ಕಲಬುರಗಿ 0, ಕೊಡಗು 11, ಕೋಲಾರ 0, ಕೊಪ್ಪಳ 0, ಮಂಡ್ಯ 5, ಮೈಸೂರು 5, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 14, ಉಡುಪಿ 5, ಉತ್ತರ ಕನ್ನಡ 10, ವಿಜಯಪುರ 1, ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.