Tag: Covid Test

  • ಕೊರೊನಾ ರೀ ಎಂಟ್ರಿ – ನಿತ್ಯ 150 ರಿಂದ 200 ಸ್ಯಾಂಪಲ್ ಟೆಸ್ಟಿಂಗ್‌ಗೆ ಟಾರ್ಗೆಟ್

    ಕೊರೊನಾ ರೀ ಎಂಟ್ರಿ – ನಿತ್ಯ 150 ರಿಂದ 200 ಸ್ಯಾಂಪಲ್ ಟೆಸ್ಟಿಂಗ್‌ಗೆ ಟಾರ್ಗೆಟ್

    – ಸಾರಿ ಕೇಸ್‌ಗಳ ಕಡ್ಡಾಯ ಟೆಸ್ಟಿಂಗ್‌ಗೆ ಸೂಚನೆ

    ಬೆಂಗಳೂರು: ಮಹಾಮಾರಿ ಕೊರೊನಾ (Corona) ಮತ್ತೆ ಎಂಟ್ರಿ ಕೊಟ್ಟ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ (Health Department) ಟೆಸ್ಟಿಂಗ್ ಟಾರ್ಗೆಟ್ ನೀಡಿದೆ. ನಿತ್ಯ 150 ರಿಂದ 200 ಸ್ಯಾಂಪಲ್ ಟೆಸ್ಟಿಂಗ್‌ಗೆ ಟಾರ್ಗೆಟ್ ನೀಡಲಾಗಿದೆ.

    ಸಾರಿ (SARI) ಕೇಸ್‌ಗಳ ಕಡ್ಡಾಯ ಟೆಸ್ಟಿಂಗ್‌ಗೆ ಸೂಚನೆ ನೀಡಿದ್ದು, ಸರ್ಕಾರಿ ಪ್ರಯೋಗಾಲಯಕ್ಕೆ ಸ್ಯಾಂಪಲ್ ರವಾನಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ಕೋವಿಡ್-19 ಟೆಸ್ಟಿಂಗ್‌ಗೆ ಅಗತ್ಯ ಟೆಸ್ಟಿಂಗ್ ಕಿಟ್‌ಗಳು ಲಭ್ಯವಿದ್ದು, ಸಾರಿ ಪ್ರಕರಣ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಳೆ-ಗಾಳಿಗೆ ನೆಲಕ್ಕೆ ಉದುರಿದ ದಾಳಿಂಬೆ ಹೂಗಳು – ಸಾಲ ಸೋಲ ಮಾಡಿ ಬಂಡವಾಳ ಹೂಡಿದ್ದ ರೈತ ಕಂಗಾಲು

    ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ?
    – ಎಲ್ಲಾ ಸಾರಿ (ಉಸಿರಾಟದ ತೊಂದರೆ) ಪ್ರಕರಣಗಳಿಗೆ ಕಡ್ಡಾಯ.
    – ವಯೋವೃದ್ಧರಲ್ಲಿ ಕೊರೊನಾ ಗುಣಲಕ್ಷಣಗಳು ಇದ್ರೆ ಟೆಸ್ಟಿಂಗ್ ಕಡ್ಡಾಯ.
    – ಗರ್ಭಿಣಿ ಸ್ತ್ರೀಯರಲ್ಲಿ ಗುಣಲಕ್ಷಣಗಳು ಕಂಡು ಬಂದರೆ ಟೆಸ್ಟಿಂಗ್ ಕಡ್ಡಾಯ.

    ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ ವಿಆರ್‌ಡಿಎಲ್ ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, ಎನ್‌ಐವಿ ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಒಂದು ತಿಂಗಳಿಗಾಗುವಷ್ಟು 5,000 ಆರ್‌ಟಿಪಿಸಿಆರ್ ಟೆಸ್ಟಿಂಗ್ ಕಿಟ್‌ಗಳನ್ನ ತೆಗೆದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ನೀನೇ ಬೇಕೆಂದು ಪ್ರೀತಿಸಿ ಮದುವೆ – 3 ತಿಂಗಳ ಗರ್ಭಿಣಿ ಮಾಡಿ ಪತಿ ಎಸ್ಕೇಪ್

  • ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬೆಂಗಳೂರು: ಚೀನಾ (China) ಸೇರಿ ಹಲವು ದೇಶಗಳಲ್ಲಿ ಕೋವಿಡ್ (Covid) ಆರ್ಭಟ ಜೋರಾಗಿದ್ದು, ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯಗಳೂ ಅಲರ್ಟ್ ಆಗಿವೆ. ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿರೋ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ಕೂಡ ಸಿಎಂ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಸಭೆ ಸೇರಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ (Karnataka Covid Guidelines) ಬಿಡುಗಡೆ ಮಾಡಿದೆ.

    ಹೊಸ ಮಾರ್ಗಸೂಚಿಯಲ್ಲಿ ಏನಿದೆ?
    ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಇದನ್ನೂ ಓದಿ: ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ

    ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು.

    ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ. ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಪ್ರೇಮಿಗಳ ಸ್ವರ್ಗ ತಾಜ್‌ಮಹಲ್ ಭೇಟಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

    ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರೇಮಿಗಳ ಸ್ವರ್ಗ ತಾಜ್‌ಮಹಲ್ ಭೇಟಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

    ಪ್ರೇಮಿಗಳ ಸ್ವರ್ಗ ತಾಜ್‌ಮಹಲ್ ಭೇಟಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

    ಲಕ್ನೋ: ವಿಶ್ವಪ್ರಸಿದ್ಧ ಪ್ರವಾಸಿ ತಾಣ, ಪ್ರೇಮಿಗಳ ಸ್ವರ್ಗ ತಾಜ್‌ಮಹಲ್‌ಗೆ (Taj Mahal) ಭೇಟಿ ನೀಡಬಯಸುವ ಪ್ರವಾಸಿಗರಿಗೂ (Tourists) ಕೋವಿಡ್ ಪರೀಕ್ಷೆ (Covid Test) ಕಡ್ಡಾಯಗೊಳಿಸಲಾಗಿದೆ ಎಂದು ಆಗ್ರಾದ (Agra) ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

    ದೇಶದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಸಲಾಯಿತು. ಸಭೆಯ ಬಳಿಕ ಆರೋಗ್ಯಾಧಿಕಾರಿಗಳು ನಿರ್ಣಯ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷ.. ಹಳೇ ವೈರಸ್‌; ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ – ಭಾರತದ ಕಥೆ ಏನು?

    ಆಗ್ರಾದ ತಾಜ್‌ಮಹಲ್ ವೀಕ್ಷಿಸಲು ದೇಶ, ವಿದೇಶ ಪ್ರವಾಸಿಗರು ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹಾಗಾಗಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭೇಟಿಗೂ ಮುನ್ನ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ

    ಅಲ್ಲದೇ ಸೋಂಕು ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಈಗಾಗಲೇ ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಹೈ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲ ಸಂದರ್ಶಕರಿಗೂ ಕೋವಿಡ್ ಟೆಸ್ಟಿಂಗ್ ಕಡ್ಡಾಯಗೊಳಿಸಲಾಗಿದೆ ಎಂದು ಆಗ್ರಾ ಜಿಲ್ಲಾ ಆರೋಗ್ಯಾಧಿಕಾರಿ ಅನಿಲ್ ಸತ್ಸಂಗಿ ತಿಳಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಪ್ರಕರಣ ಹೆಚ್ಚಳ – ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರದಿಂದ ಪತ್ರ

    ಕೋವಿಡ್ ಪ್ರಕರಣ ಹೆಚ್ಚಳ – ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರದಿಂದ ಪತ್ರ

    ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಮುಂದುವರಿಸಲು ಸೂಚನೆ ನೀಡಿದೆ. ಈ 5 ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ.

    ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣಗಳ ಹಿನ್ನೆಲೆ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಇದನ್ನೂ ಓದಿ: ಕಾಶ್ಮೀರದ ಹತ್ಯೆಗಳಿಗೆ ಪಾಕಿಸ್ತಾನವನ್ನು ದೂರಿದ ಕೇಂದ್ರ

    corona

    ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ. ಜನರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಹಾಗೂ ಉಸಿರಾಟದ ಸಮಸ್ಯೆ ಇದ್ದಲ್ಲಿ ತಕ್ಷಣವೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರಿಂದ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಬಹುದು ಎಂದಿದ್ದಾರೆ. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್

    ಈ 5 ರಾಜ್ಯಗಳು ಕೇಂದ್ರಕ್ಕೆ ನೀಡುವ ಅಂಕಿ ಅಂಶಗಳ ಪ್ರಕಾರ ಕೇರಳದ 11 ಜಿಲ್ಲೆಗಳು, ತಮಿಳುನಾಡುನ 2 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.

  • ಬೇಡ ಎಂದರೂ ಬಿಡ್ಲಿಲ್ಲ, ನೆಲಕ್ಕೆ ಕೆಡವಿ ಮಹಿಳೆಗೆ ಕೋವಿಡ್ ಪರೀಕ್ಷೆ – ವೀಡಿಯೋ ವೈರಲ್

    ಬೇಡ ಎಂದರೂ ಬಿಡ್ಲಿಲ್ಲ, ನೆಲಕ್ಕೆ ಕೆಡವಿ ಮಹಿಳೆಗೆ ಕೋವಿಡ್ ಪರೀಕ್ಷೆ – ವೀಡಿಯೋ ವೈರಲ್

    ಬೀಜಿಂಗ್: ಚೀನಾದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಪರೀಕ್ಷೆಯನ್ನು ತೀವ್ರಗೊಳಿಸಲಾಗಿದೆ. ದೇಶದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ಹಾಗೂ ಲಾಕ್‌ಡೌನ್‌ನಿಂದ ಜನ ಆತಂಕಗೊಂಡಿದ್ದಾರೆ. ಸೋಂಕಿತರು ಕಠಿಣ ನಿಯಮಗಳನ್ನು ಪಾಲಿಸಬೇಕೆಂಬ ಭಯದಿಂದ ಅನೇಕರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲೂ ಹಿಂಜರಿಯುತ್ತಿದ್ದಾರೆ.

    ಚೀನಾದಲ್ಲಿ ಮಹಿಳೆಯೊಬ್ಬರಿಗೆ ಕೋವಿಡ್ ಪರೀಕ್ಷೆ ಮಾಡಲು ಆರೋಗ್ಯ ಸಿಬ್ಬಂದಿ ಹರಸಾಹಸಪಟ್ಟ ಘಟನೆ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೊರೊನಾ ಪರೀಕ್ಷೆಗೆ ಒಳಗಾಗಲು ಮಹಿಳೆ ನಿರಾಕರಿಸುತ್ತಾಳೆ. ಈ ವೇಳೆ ಆಕೆಯನ್ನು ನೆಲಕ್ಕೆ ಕೆಡವಿ ಆರೋಗ್ಯ ಸಿಬ್ಬಂದಿ ಕೊರೊನಾ ಪರೀಕ್ಷೆ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

    ಮತ್ತೊಂದು ವೀಡಿಯೋದಲ್ಲಿ ವೃದ್ಧೆಯೊಬ್ಬರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ. ಆಗ ನಾಲ್ಕೈದು ಮಂದಿ ಆಕೆಯನ್ನು ಹಿಡಿದು, ಕೊರೊನಾ ಪರೀಕ್ಷೆ ಮಾಡುತ್ತಾರೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

    ಇನ್ನೊಂದು ವೀಡಿಯೋದಲ್ಲಿ ವ್ಯಕ್ತಿಯೊಬ್ಬನನ್ನು ನೆಲದ ಮೇಲೆ ಕೆಡವಿ ಬಲವಂತವಾಗಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಚೀನಾದಲ್ಲಿ ಜನರು ಕೋವಿಡ್ ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಿರುವ ಬಗ್ಗೆ ಅನೇಕ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

  • ಎರಡೂ ಡೋಸ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲ: ಬ್ರಿಟನ್‌ ಪ್ರಧಾನಿ

    ಎರಡೂ ಡೋಸ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲ: ಬ್ರಿಟನ್‌ ಪ್ರಧಾನಿ

    ಲಂಡನ್‌: ಹೊರ ದೇಶಗಳಿಂದ ಇಂಗ್ಲೆಂಡ್‌ಗೆ ಬರುವವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸುವ ನಿಯಮವನ್ನು ತೆಗೆದು ಹಾಕಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಬೋರಿಸ್‌ ಜಾನ್ಸನ್‌ ತಿಳಿಸಿದ್ದಾರೆ.

    ಸೋಂಕು ಪ್ರಕರಣಗಳ ಸಂಖ್ಯೆ ಇಳಿಯುತ್ತಿದೆ. ಹೀಗಾಗಿ ಬೇರೆ ದೇಶಗಳಿಂದ ಬರುವವರಿಗೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ವಿನಾಯಿತಿ ಸಂಪೂರ್ಣವಾಗಿ ಕೋವಿಡ್‌ ಲಸಿಕೆ ಪಡೆದವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!

    ಇಂಗ್ಲೆಂಡ್‌ ವ್ಯಾಪಾರ ಹಾಗೂ ಪ್ರಯಾಣಿಕರಿಗೆ ಮುಕ್ತವಾಗಿದೆ. ಆದ್ದರಿಂದ ಕೋವಿಡ್‌ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ನಿರ್ಧರಿಸಿದೆ. ಲಸಿಕೆ ಎರಡೂ ಡೋಸ್ ಪಡೆದವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ ಎಂದು ಹೇಳಿದ್ದಾರೆ. ‌

    ನಿರ್ಬಂಧ ಸಡಿಲಿಕೆ ದಿನಾಂಕವನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಆದರೆ ಕೋವಿಡ್‌ ಲಸಿಕೆಯನ್ನು ಸಂಪೂರ್ಣವಾಗಿ ಪಡೆದವರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ: WHO ಮುಖ್ಯಸ್ಥ

    ಯೂರೋಪ್‌ನಲ್ಲಿ ಕೋವಿಡ್‌ ಹೊಡೆತಕ್ಕೆ ಹೆಚ್ಚು ತುತ್ತಾದ ದೇಶ ಇಂಗ್ಲೆಂಡ್‌. ಇಲ್ಲಿ ಈವರೆಗೆ ಸೋಂಕಿನಿಂದ 1,54,000 ಮಂದಿ ಸಾವಿಗೀಡಾಗಿದ್ದಾರೆ. ಆದರೆ ಈಚೆಗೆ ಇಂಗ್ಲೆಂಡ್‌ನಲ್ಲಿ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಆದ್ದರಿಂದ ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಮುಂದಾಗಿದೆ.

    ನಿರ್ಬಂಧ ಸಡಿಲಿಕೆ ಬಗೆಗಿನ ಸರ್ಕಾರದ ನಿಲುವಿಗೆ ವಿರೋಧ ವ್ಯಕ್ತವಾಗಿದೆ. ನಿರ್ಬಂಧಗಳನ್ನು ಸಡಿಲಗೊಳಿಸಿದರೆ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣಬಹುದು. ಇದರಿಂದ ಮತ್ತಷ್ಟು ಸಮಸ್ಯೆಯಾಗಬಹುದು ಅಭಿಪ್ರಾಯ ವ್ಯಕ್ತವಾಗಿದೆ.

  • ಮೂರನೇ ಅಲೆ ಭೀತಿ – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು

    ಮೂರನೇ ಅಲೆ ಭೀತಿ – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು

    ಬೆಂಗಳೂರು: ಮೂರನೇ ಅಲೆಯ ಭೀತಿ ಹೆಚ್ಚುತ್ತಿದ್ದಂತೆ, ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಅಂತರ್ ಜಿಲ್ಲೆ, ಅಂತರ್ ರಾಜ್ಯಗಳಿಂದ ಬರುವ ಪ್ರತಿ ಪ್ರಯಾಣಿಕರ ಮೇಲೂ ನಿಗಾ ವಹಿಸಲಾಗಿದ್ದು, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

    ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಬೆಳಗಿನ ಜಾವ 4 ಗಂಟೆಯಿಂದ 15ಕ್ಕೂ ಹೆಚ್ಚು ತಂಡಗಳಿಂದ ಕೋವಿಡ್ ಪರೀಕ್ಷೆ ನಡೆಯುತ್ತಿದ್ದು, ಎಂಟ್ರಿ, ಎಕ್ಸಿಟ್ ಭಾಗಗಳಲ್ಲಿ ಪ್ರತಿ ಪ್ರಯಾಣಿಕರ ಮೇಲೂ ಆರೋಗ್ಯ ಸಿಬ್ಬಂದಿ ನಿಗಾ ವಹಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಟ್ಟು 30 ತಂಡಗಳಿಂದ ತಲಾ 300 ಜನರಿಗೆ ನಿತ್ಯ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ರೈಲ್ವೆ ನಿಲ್ದಾಣದಲ್ಲಿ ಮಾರ್ಷಲ್ಸ್ ಗಳು ಕೂಡ ಪ್ರಯಾಣಿಕರ ಮೇಲೆ ನಿಗಾ ವಹಿಸಿತ್ತಿದ್ದೂ ಮಾಸ್ಕ್ ಹಾಕದವರಿಗೆ ದಂಡವನ್ನು ವಿಧಿಸಲಾಗುತ್ತಿದೆ.

    ಆಟೋ ಚಾಲಕರ ಹಾವಳಿ:
    ಅಂತರ್ ರಾಜ್ಯ, ಅಂತರ್ ಜಿಲ್ಲೆಯ ಪ್ರಯಾಣಿಕರಿಗೆ ಆರೋಗ್ಯ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡುತ್ತಿದ್ದಾರೆ. ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಆತುರದಲ್ಲಿ ಆರೋಗ್ಯ ಸಿಬ್ಬಂದಿಗೆ ಆಟೋ ಚಾಲಕರು ಕಿರಿಕಿರಿ ಮಾಡುತ್ತಿದ್ದಾರೆ. ಸರಿಯಾಗಿ ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಓಡಾಡುತ್ತಿದ್ದಾರೆ. ಮಾಸ್ಕ್ ಹಾಕಿ ಎಂದು ಮಾರ್ಷಲ್ಸ್ ಗಳು ಪ್ರಶ್ನೆ ಮಾಡಿದರೆ, ಮಾರ್ಷಲ್ಸ್ ಗಳ ಮೇಲೆಯೇ ಆಟೋ ಚಾಲಕರು ಗಲಾಟೆ ಮಾಡುತ್ತಿದ್ದಾರೆ ಎಂದು ಮಾರ್ಷಲ್ಸ್ ಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ:ಮುಂದಿನ ಚುನಾವಣೆ ಜವಾಬ್ದಾರಿ ನನ್ನ ಮೇಲಿದೆ: ಸಿಎಂ ಬಿಎಸ್‍ವೈ

  • ಕೋವಿಡ್ ನಂತರ ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ಮಹತ್ತರ ಪ್ರಗತಿ – ಸುಧಾಕರ್

    ಕೋವಿಡ್ ನಂತರ ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ಮಹತ್ತರ ಪ್ರಗತಿ – ಸುಧಾಕರ್

    -ಕಳೆದೊಂದು ವರ್ಷದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಚುರುಕು
    -ಹಾಸಿಗೆ ಸಾಮಥ್ರ್ಯ ದುಪ್ಪಟ್ಟು, ಆಕ್ಸಿಜನ್ ಉತ್ಪಾದನೆಗೆ ಒತ್ತು

    ಬೆಂಗಳೂರು: ದಿನಕ್ಕೆ ಒಂದೂವರೆ-ಎರಡು ಲಕ್ಷ ಕೋವಿಡ್ ಪರೀಕ್ಷೆ ನಡೆಸುವ ಸಾಮಥ್ರ್ಯ, 1,015 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯತೆ, 22 ಸಾವಿರಕ್ಕೂ ಅಧಿಕ ಆಕ್ಸಿಜನ್ ಹಾಸಿಗೆ, ಅಗತ್ಯಕ್ಕೆ ತಕ್ಕಷ್ಟು ರೆಮ್ ಡಿಸಿವಿರ್ ಔಷಧಿ ಪೂರೈಕೆ ಸೇರಿದಂತೆ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಆರೋಗ್ಯ ಮೂಲ ಸೌಕರ್ಯವನ್ನು ರಾಜ್ಯ ಸರ್ಕಾರ ಗಣನೀಯವಾಗಿ ಅಭಿವೃದ್ಧಿಪಡಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ರವರು  ಹೇಳಿದ್ದಾರೆ.

    ಸಚಿವ ಡಾ.ಕೆ.ಸುಧಾಕರ್‌ರವರು ಎರಡೂ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಈ ಹಿಂದೆಯೇ ಸೂಚನೆ ನೀಡಿದ್ದು, ಅದರಂತೆ ಎರಡೂ ಇಲಾಖೆಗಳು ಒಂದಾಗಿ ಕಾರ್ಯನಿರ್ವಹಿಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಿವೆ. ಇದರಿಂದಾಗಿ ಕೋವಿಡ್ ಎರಡನೇ ಅಲೆಯ ತೀವ್ರತೆಯನ್ನು ತಗ್ಗಿಸಲು, ರೋಗಿಗಳಿಗೆ ಸೂಕ್ತ ಕಾಲದಲ್ಲಿ ಉತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದರು.

    ಪರೀಕ್ಷೆ ಹೆಚ್ಚಳ: ಫೆಬ್ರವರಿ ಅಂತ್ಯಕ್ಕೆ ದಿನಕ್ಕೆ 60-70 ಸಾವಿರ ಪರೀಕ್ಷೆ ನಡೆಸುತ್ತಿದ್ದು, ನಂತರ ಒಂದೂವರೆ ಲಕ್ಷಕ್ಕೆ ಏರಿಸಲಾಯಿತು. ಮೇ 22 ರವರೆಗೆ, 2.85 ಕೋಟಿ ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 2.38 ಕೋಟಿ ಪರೀಕ್ಷೆಗಳು ಆರ್ ಟಿ-ಪಿಸಿಆರ್ ಟೆಸ್ಟ್‍ಗಳಾಗಿವೆ. ಕೇಂದ್ರ ಸರ್ಕಾರ 70:30 ಅನುಪಾತದಲ್ಲಿ ಆರ್‍ಟಿಪಿಸಿಆರ್ ಹಾಗೂ ರಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಲು ಸೂಚಿಸಿದ್ದರೆ, ರಾಜ್ಯದಲ್ಲಿ ಶೇ.80%ಕ್ಕಿಂತ ಹೆಚ್ಚು ಪರೀಕ್ಷೆಗಳು ಆರ್ ಟಿ-ಪಿಸಿಆರ್ ಪರೀಕ್ಷೆಗಳಾಗಿವೆ. 2020 ರ ಫೆಬ್ರವರಿಯಲ್ಲಿ 2 ಲ್ಯಾಬ್ ಗಳಿದ್ದರೆ, ಈಗ 241 (91 ಸರ್ಕಾರಿ, 150 ಖಾಸಗಿ) ಲ್ಯಾಬ್ ಗಳಿವೆ ಎಂದು ಹೇಳಿದರು.

    ಹಾಸಿಗೆ ಸಾಮಥ್ರ್ಯ ಏರಿಕೆ: 2020ರ ಮಾರ್ಚ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ 1,970 ಆಕ್ಸಿಜನ್ ಹಾಸಿಗೆಗಳಿದ್ದು, 22,001 ಹೊಸದಾಗಿ ಅಳವಡಿಸಲಾಗಿದೆ. ಇದರಿಂದ ಒಟ್ಟು ಆಕ್ಸಿಜನ್ ಹಾಸಿಗೆ ಸಂಖ್ಯೆ 23,971ಕ್ಕೆ ಏರಿಕೆಯಾಗಿದೆ. 444 ಐಸಿಯು ಹಾಸಿಗೆ ಇದ್ದು, 701 ಹೊಸದಾಗಿ ಅಳವಡಿಸಲಾಗಿದೆ. ಇದರಿಂದ ಒಟ್ಟು ಐಸಿಯು ಹಾಸಿಗೆ ಸಂಖ್ಯೆ 1,145 ಕ್ಕೆ ಏರಿಕೆಯಾಗಿದೆ. 610 ವೆಂಟಿಲೇಟರ್ ಇದ್ದು, ಹೊಸದಾಗಿ 1,548 ಅಳವಡಿಸಿ ಒಟ್ಟು ಸಂಖ್ಯೆಯನ್ನು 2,158 ಕ್ಕೆ ಏರಿಸಲಾಗಿದೆ. ಹೊಸದಾಗಿ 1,248 ಎಚ್‍ಎಫ್‍ಎನ್‍ಸಿ ಹಾಸಿಗೆ ಅಳವಡಿಸಲಾಗಿದೆ ಎಂದು ಹೇಳಿದರು.

    ವೈದ್ಯಕೀಯ ಶಿಕ್ಷಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ, 4,700 ಆಕ್ಸಿಜನ್ ಹಾಸಿಗೆಗಳಿದ್ದು, ಹೊಸದಾಗಿ 4,705 ಅಳವಡಿಸಲಾಗಿದೆ. ಇದರಿಂದ ಒಟ್ಟು ಆಕ್ಸಿಜನ್ ಹಾಸಿಗೆ ಸಂಖ್ಯೆ 9,405 ಕ್ಕೆ ಏರಿಕೆಯಾಗಿದೆ. 341 ವೆಂಟಿಲೇಟರ್ ಇದ್ದು, ಹೊಸದಾಗಿ 305 ಅಳವಡಿಸಿ ಒಟ್ಟು ಸಂಖ್ಯೆಯನ್ನು 646 ಕ್ಕೆ ಏರಿಸಲಾಗಿದೆ. 15 ಎಚ್‍ಎಫ್‍ಎನ್ಸಿ ಹಾಸಿಗೆ ಇದ್ದು, 555 ಹೊಸದಾಗಿ ಅಳವಡಿಸಿದ್ದರಿಂದ ಒಟ್ಟು ಸಂಖ್ಯೆ 570 ಕ್ಕೆ ಏರಿಕೆಯಾಗಿದೆ. 151 ಕೆಎಲ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸೌಲಭ್ಯವಿದ್ದು, 73 ಕೆಎಲ್ ಅಳವಡಿಸಿ, ಒಟ್ಟು ಸಾಮಥ್ರ್ಯವನ್ನು 224 ಕೆಎಲ್ ಗೆ ಏರಿಸಲಾಗಿದೆ ಎಂದು ತಿಳಿಸಿದರು.

    ವೈದ್ಯಕೀಯ ಆಮ್ಲಜನಕ: ರಾಜ್ಯದಲ್ಲಿ 815 ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 1,015 ಟನ್ ಹಂಚಿಕೆಯಾಗಿದೆ. ಯಾದಗಿರಿ, ಕೆಜಿಎಫ್ ನಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಡಿಆರ್ ಡಿಒ ನೆರವಿನಲ್ಲಿ 1,000 ಎಲ್ ಪಿಎಂ ಸಾಮಥ್ರ್ಯದ ಮೂರು ಆಕ್ಸಿಜನ್ ಘಟಕಗಳನ್ನು ಸಿವಿ ರಾಮನ್ ಆಸ್ಪತ್ರೆ, ಕಲಬುರ್ಗಿ ಇಎಸ್‍ಐ ಮೆಡಿಕಲ್ ಕಾಲೇಜು, ಕೊಪ್ಪಳ ಮೆಡಿಕಲ್ ಸೈನ್ಸಸ್ ಸಂಸ್ಥೆಯಲ್ಲಿ ಆರಂಭಿಸಲಾಗುತ್ತಿದೆ. ಬಳ್ಳಾರಿಯಲ್ಲಿ 1,000 ಆಕ್ಸಿಜನ್ ಹಾಸಿಗೆಯುಳ್ಳ ಆಸ್ಪತ್ರೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರವು 600 ಎಲ್‍ಪಿಎಂ ಸಾಮಥ್ರ್ಯದ 6 ಪಿಎಸ್‍ಎ ಘಟಕ ಆರಂಭಕ್ಕೆ ಅನುಮೋದನೆ ನೀಡಿದೆ. 10 ಆಕ್ಸಿಜನ್ ಎಕ್ಸ್ ಪ್ರೆಸ್ ರೈಲುಗಳಲ್ಲಿ ಸುಮಾರು 1000 ಮೆಟ್ರಿಕ್ ಟನ್ ಆಕ್ಸಿಜನ್ ರಾಜ್ಯಕ್ಕೆ ಪೂರೈಕೆಯಾಗಿದೆ ಎಂದರು.

    ರೆಮ್ ಡಿಸಿವಿರ್: 5 ಲಕ್ಷ ವೈಲ್ಸ್ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗಿದೆ. ಮೇನಲ್ಲಿ 51,360 ವೈಲ್ ಖರೀದಿಗೆ ಆದೇಶಿಸಿದ್ದು, 11,000 ದೊರೆತಿದೆ. ಸಿಎಸ್‍ಆರ್ ನಡಿ, 900 ವೈಲ್ ಪಡೆಯಲಾಗಿದೆ. ಕೇಂದ್ರ ಸರ್ಕಾರದಿಂದ 56,943 ವೈಲ್ ಪಡೆಯಲಾಗಿದೆ ಎಂದು ತಿಳಿಸಿದರು.

    ಕೋವಿಡ್ ಲಸಿಕೆ: ರಾಜ್ಯದ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿಯೊಂದಿಗೆ ಹಂತಹಂತವಾಗಿ ಲಸಿಕೆ ನೀಡಲಾಗುತ್ತಿದೆ. ಮೇ 22 ರವರೆಗೆ, 1,20,14,015
    ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಪೂರೈಸಿರುವ 1,13,26,340 ಡೋಸ್ ಜೊತೆಗೆ ರಾಜ್ಯ ಸರ್ಕಾರ ಖರೀದಿ ಮಾಡಲು ಮುಂದಾಗಿರುವ ಲಸಿಕೆಯಲ್ಲಿ 14,94,170 ಲಭ್ಯವಾಗಿದೆ ಎಂದು ನುಡಿದರು.

    ಕೋವಿಡ್ ನಂತರದ ಕಾಲದಲ್ಲಿ ಆರೋಗ್ಯ ಮೂಲಸೌಕರ್ಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಆರ್ಥಿಕ ಸಂಕಷ್ಟವಿದ್ದರೂ ಹೆಚ್ಚು ಸಂಪನ್ಮೂಲವನ್ನು ಬಳಸಿ ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಗಮನಹರಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ‘ಆರೋಗ್ಯ ಕರ್ನಾಟಕ’ ನಿರ್ಮಾಣ ಸಾಕಾರವಾಗಲಿದೆ ಎಂದು ಹೇಳಿದರು.

  • ಕೊರೊನಾ ಸೋಂಕಿನ ಶಂಕೆ – ಮಹಿಳೆ ಆತ್ಮಹತ್ಯೆ

    ಕೊರೊನಾ ಸೋಂಕಿನ ಶಂಕೆ – ಮಹಿಳೆ ಆತ್ಮಹತ್ಯೆ

    ಗದಗ: ಕೊರೊನಾ ಸೋಂಕಿನ ಶಂಕೆಗೆ ಮಹಿಳೆ ಆತ್ಮಹತ್ಯೆ ಮಾಡಿರುವ ಘಟನೆ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ.

    ಮೃತಪಟ್ಟ ಮಹಿಳೆಯನ್ನು ಲಲಿತಾ ರೋಣ(45) ಎಂದು ಗುರುತಿಸಲಾಗಿದ್ದು, ಇವರು ನಿತ್ಯ ತರಕಾರಿ ಮಾರುತ್ತಿದ್ದರು. ಆದರೆ ಕಳೆದ ಹತ್ತಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಕುಟುಂಬಸ್ಥರು ಹಾಗೂ ಸ್ಥಳಿಯರು ಒತ್ತಾಯಿಸಿದ್ದಾರೆ.

    ಮಹಿಳೆ ನನಗೂ ಕೊರೊನಾ ಇರಬಹುದೆಂದು ಭಯಗೊಂಡು ಯಾರು ಇಲ್ಲದ ವೇಳೆ ಹೊರವಲಯದಲ್ಲಿ ತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕುಂಭಮೇಳದಲ್ಲಿ ಭಾಗವಹಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಕುಂಭಮೇಳದಲ್ಲಿ ಭಾಗವಹಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಡೆಹ್ರಾಡೂನ್: ಈ ಬಾರಿಯ ಕುಂಭಮೇಳಕ್ಕೆ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಎಂದು ಉತ್ತರಾಖಂಡದ ಸರ್ಕಾರ ಆದೇಶ ಹೊರಡಿಸಿದೆ.

    ಉತ್ತರಾಖಂಡದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ ಒಂದೇ ದಿನ 200 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಹಾಗಾಗಿ ಹರಿದ್ವಾರದಲ್ಲಿ ನಡೆಯಲಿರುವ ಈ ಬಾರಿಯ ಕುಂಭಮೇಳಕ್ಕೆ ಬರುವ ಭಕ್ತರಿಗೆ 72 ಗಂಟೆಗಳ ಒಳಗಿನ ಕೊರೊನಾ ನೆಗೆಟಿವ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.

    ಈಗಾಗಲೇ ಹರಿದ್ವಾರದಲ್ಲಿ ಕುಂಭಮೇಳಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎಪ್ರಿಲ್ 1 ರಿಂದ ಕುಂಭಮೇಳ ಆರಂಭವಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಒಂದೇ ದಿನ ಹರಿದ್ವಾರದಲ್ಲಿ 71, ಡೆಹ್ರಾಡೂನ್ 63, ನೈನಿತಾಲ್ 22 ಮತ್ತು ಇತರ ನಗರಗಳಲ್ಲಿ ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.

    ಕುಂಭಮೇಳಕ್ಕೆ ಆಗಮಿಸುವ ಭಕ್ತರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಅಥವಾ ಕೊರೊನಾ ಲಸಿಕೆ ಪಡೆದುಕೊಂಡ ವರದಿಯನ್ನು ಸಲ್ಲಿಸಿ ಕುಂಭಮೇಳದಲ್ಲಿ ಪಾಲ್ಗೊಳ್ಳುವಂತೆ ಉತ್ತರಾಖಂಡದ ಹೈಕೋರ್ಟ್ ಆದೇಶ ಹೊರಡಿಸಿರುವುದಾಗಿ ಕುಂಭಮೇಳದ ಮುಖ್ಯ ಕಾರ್ಯದರ್ಶಿ ಓಂ ಪ್ರಕಾಶ್ ಸ್ಥಳೀಯ ಮಾಧ್ಯಮದೊಂದಿಗೆ ಸ್ಪಷ್ಟಪಡಿಸಿದ್ದಾರೆ.