Tag: covid Third Wave

  • ಕೊರೊನಾ ಮೂರನೇ ಅಲೆ ಎದುರಿಸಲು ಯಾದಗಿರಿ ಜಿಲ್ಲಾಡಳಿತದ ವಿಭಿನ್ನ ಹೆಜ್ಜೆ

    ಕೊರೊನಾ ಮೂರನೇ ಅಲೆ ಎದುರಿಸಲು ಯಾದಗಿರಿ ಜಿಲ್ಲಾಡಳಿತದ ವಿಭಿನ್ನ ಹೆಜ್ಜೆ

    ಯಾದಗಿರಿ: ಕೊರೊನಾ ಮೂರನೇ ಅಲೆ ಎದುರಿಸಲು ಯಾದಗಿರಿ ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಮೂರನೇ ಅಲೆ ಮಕ್ಕಳಿಗೆ ಡೇಂಜರ್ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹೈಟೆಕ್ ತಂತ್ರಕ್ಕೆ ಮುಂದಾಗಿದೆ. ಜಿಲ್ಲಾ ಪಂಚಾಯತಿ ಸಿಇಓ ಶಿಲ್ಪಾ ಶರ್ಮಾ ಇದಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.

    ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿ ವಿಶೇಷ ವಾರ್ಡ್ ಆರಂಭಿಸಲಾಗಿದೆ. ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದ ಸೌಲಭ್ಯ ಇಲ್ಲಿ ನೀಡಲಾಗುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿನ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಅಪೌಷ್ಟಿಕತೆ ಹೆಚ್ಚಾಗಿದ್ದು, ಇದನ್ನು ನಿವಾರಣೆ ಮಾಡಲು ವಿಭಿನ್ನ ಪ್ರಯತ್ನಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಅಪೌಷ್ಟಿಕತೆ ಸಮಸ್ಯೆಯಿಂದ ಮಕ್ಕಳನ್ನು ಆಸ್ಪತ್ರೆ ಕರೆತರುವ ನಿಟ್ಟಿನಲ್ಲಿ, ಒಟ್ಟು 14 ದಿನ ಇರುವ ಮಕ್ಕಳಿಗೆ ನಿತ್ಯ 270 ರೂ. ಅವರ ಪಾಲಕರಿಗೆ 285 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಊಟ, ಟಿವಿ, ಆಟ ಎಲ್ಲಾ ಸೌಲಭ್ಯ ಸಹ ಒದಗಿಸಲಾಗಿದೆ. ಇದನ್ನೂ ಓದಿ: ಕಾಮಗಾರಿಗಳ ಅಸಮರ್ಪಕ ನಿರ್ವಹಣೆ – ಅಧಿಕಾರಿಗಳಿಗೆ ಸಿಇಓ ಶಿಲ್ಪಾ ಶರ್ಮಾ ಕ್ಲಾಸ್

    ಯಾದಗಿರಿ ಹಳೆ ಜಿಲ್ಲಾಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳಿಗಾಗಿ ಈ ವಿಶೇಷ ವಾರ್ಡ್ ಆರಂಭವಾಗಿದೆ. ರಾಷ್ಟ್ರೀಯ ಆರೋಗ್ಯ ಯೋಜನೆ, ಜಿಲ್ಲಾ ಪಂಚಾಯತ, ಜಿಲ್ಲಾಡಳಿತ ನೇತೃತ್ವದಲ್ಲಿ ಅಭಿಯಾನ ಆರಂಭಿಸಲಾಗಿದೆ. ಆರೋಗ್ಯ ,ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಇದಕ್ಕೆ ಸಾಥ್ ನೀಡಿವೆ.

  • ಕೋವಿಡ್ 3ನೇ ಅಲೆ ತಪ್ಪಿಸಲು ಸಿದ್ಧತೆ ಕೈಗೊಳ್ಳಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಸೂಚನೆ

    ಕೋವಿಡ್ 3ನೇ ಅಲೆ ತಪ್ಪಿಸಲು ಸಿದ್ಧತೆ ಕೈಗೊಳ್ಳಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಸೂಚನೆ

    – ಟೆಲಿಕನ್ಸಲ್ಟೇಷನ್ ಮೂಲಕ ಮಕ್ಕಳಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ
    – ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ರೀಫಿಲಿಂಗ್ ಸೌಲಭ್ಯ ವ್ಯವಸ್ಥೆ
    – ಸಹಾಯವಾಣಿ ಆರಂಭ

    ಕಲಬುರಗಿ: ರಾಜ್ಯದಲ್ಲಿ 3ನೇ ಕೋವಿಡ್-19 ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದೆಂಬ ತಜ್ಞರ ಸಲಹೆಯಂತೆ ಜಿಲ್ಲಾಡಳಿತವು ಕೂಡಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಂಭಾವ್ಯ ದಾಳಿಯನ್ನು ತಪ್ಪಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಸೂಚಿಸಿದರು.

    ಸೋಮವಾರ ಐವಾನ್-ಇ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೋವಿಡ್ -19 2ನೇ ಅಲೆಯನ್ನು ಯಾವ ರೀತಿ ಯಶಸ್ವಿಯಾಗಿ ನಿಭಾಯಿಸಲಾಯಿತೊ ಅದೇ ಮಾದರಿಯಲ್ಲೂ 3ನೇ ಅಲೆಯನ್ನು ಎದುರಿಸಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಮೂರನೇ ಕೋವಿಡ್ ಅಲೆಯ ಕಾರ್ಯಪಡೆ ಅಧ್ಯಕ್ಷರಾದ ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿಯು ಸರ್ಕಾರಕ್ಕೆ ನೀಡಿರುವ ಮಧ್ಯಂತರ ವರದಿಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದೆ. ಇದನ್ನು ತಡೆಗಟ್ಟುವುದು ಜಿಲ್ಲಾಡಳಿತದ ಮೊದಲ ಕರ್ತವ್ಯ ಎಂದು ಸಲಹೆ ಮಾಡಿದರು.

    ಮಕ್ಕಳಿಗೆ ಸೋಂಕು ಹೆಚ್ಚು ತಗಲಬಹುದೆಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹೀಗಾಗಿ ತಕ್ಷಣವೇ ಜಿಲ್ಲಾದ್ಯಂತ ಪ್ರತ್ಯೇಕ ಮಕ್ಕಳ ವಿಭಾಗ ಸ್ಥಾಪನೆ, ಆಸ್ಪತ್ರೆಯಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕು. ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ರೀಫಿಲಿಂಗ್ ಸೌಲಭ್ಯ, 50 ಎಲ್‍ಪಿಎಂ ಲಿಕ್ವಿಡ್ ಆಕ್ಸಿಜನ್ ಜನರೇಟರ್ ಘಟಕಗಳನ್ನು ಸ್ಥಾಪಿಸಲು ಮುಂದಾಗಬೇಕು, 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಜೊತೆಗೆ ಅಗತ್ಯ ಜಂಬು ಸಿಲಿಂಡರ್ ಗಳನ್ನು ಇಟ್ಟುಕೊಳ್ಳಬೇಕೆಂದು ಅಧಿಕಾರಿಗಲಿಗೆ ನಿರ್ದೇಶಿಸಿದರು. ಹೆಚ್ಚಿನ ಭಾಗದಲ್ಲಿ ಮಕ್ಕಳಿಗೆ ಸೋಂಕು ತಗಲುಗುವ ಮಕ್ಕಳ ಚಿಕಿತ್ಸೆಗೆ ಬೆಡ್‍ಗಳ ಸಂಖ್ಯೆ ಹೆಚ್ಚಳ ಮಾಡುವುದು. ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಸ್‍ಎನ್‍ಸಿಯು ಘಟಕವನ್ನು ಸಂಪೂರ್ಣವಾಗಿ ಮಕ್ಕಳಿಗೆ ಮೀಸಲಿಡಬೇಕೆಂದು ತಾಕೀತು ಮಾಡಿದರು.

    ಅಗತ್ಯಕ್ಕೆ ಅನುಗುಣವಾಗಿ 500 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ಗಳನ್ನುಬಳಸಿಕೊಂಡು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮುಂದಿನ ಎರಡು ವಾರದೊಳಗೆ ಪೋಷಣಾ ಪುನರ್ವಸತಿ ಕೇಂದ್ರ ಸ್ಥಾಪನೆ, ಟೆಲಿಕನ್ಸಲ್ಟೇಷನ್ ಸೇವೆ, ತಾಲೂಕು ಆಸ್ಪತ್ರೆಗಳಿಗೆ ಜಿಲ್ಲಾಸ್ಪತ್ರೆ ಮತ್ತು ಇಎಸ್‍ಐ ಆಸ್ಪತ್ರೆಯ ಹಿರಿಯ ತಜ್ಞ ವೈದ್ಯರನ್ನು ನೇಮಿಸುವುದು, ಅಗತ್ಯವಿರುವ ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ನೀಡಬೇಕೆಂದು ತಿಳಿಸಿದರು.

    ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುವ ಸೂಚನೆಗಳನ್ನು ತಪ್ಪದೆ ಪಾಲನೆ ಮಾಡಬೇಕು. ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಸಾಮಾಜಿಕ ಜಾಲತಾಣ, ಕರಪತ್ರಘಿ ಸೇರಿದಂತೆ ಬೇರೆ ಬೇರೆ ವಿಭಾಗದಿಂದಲೂ ಸಾರ್ವಜನಿಕರಲ್ಲಿ ಜನಜಾಗೃತಿಯನ್ನು ಮೂಡಿಸುವಂತೆಯೂ ಸಚಿವರು ಕಿವಿಮಾತು ಹೇಳಿದರು.

    ಜಿಲ್ಲಾಧಿಕಾರಿ ವಿ.ವಿ.ಜೋಸ್ನಾ, ನಗರ ಪೊಲೀಸ್ ಆಯುಕ್ತ ರವಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯನ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಿಲಿಶಾ ಸಾಸಿ, ಮಹಾನಗರ ಪಾಲಿಕೆ ಆಯುಕ್ತ ಲೋಕಲ್‍ಡೇ ಸ್ನೇಹಲ್ ಸುಧಾಕರ್, ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕವಿತಾ ಪಾಟೀಲ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರಣಬಸಪ್ಪಘಿ ಗಣಜಲಖೇಡ, ಇಎಸ್‍ಐಡಿನ್ ಡಾ.ಇವಾನೊಲೊಗೊ ಸೇರಿದಂತೆ ಮತ್ತಿತರ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ನಿರಾಣಿ ತಿಳಿಸಿದರು.

    7 ಆಸ್ಪತ್ರೆಗಳು ಸಿದ್ಧ:
    ಮಕ್ಕಳಿಗೆ ಉಂಟಾಗಬಹುದಾದ 3ನೇ ಅಲೆ ಕೋವಿಡ್ ಅಲೆಯನ್ನು ತಪ್ಪಿಸಲು ಕಲಬುರಗಿ ಜಿಲ್ಲಾಡಳಿತ ನಗರದಲ್ಲಿ ತಾತ್ಕಾಲಿಕವಾಗಿ 7 ಮಕ್ಕಳ ಆಸ್ಪತ್ರೆಗಳನ್ನು ಗುರುತಿಸಿದೆ. ನಗರದಲ್ಲಿರುವ 15 ಆಸ್ಪತ್ರೆಗಳ ಪೈಕಿ ಈಗಾಗಲೇ 7 ಆಸ್ಪತ್ರೆಗಳನ್ನು ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಗತ್ಯ ಬಿದ್ದರೆ 2ರಿಂದ 3 ಹೆಚ್ಚುವರಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇಂಡಿಯನ್ ಪೀಡಿಯಾಟ್ರಿಕ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ವಾಣಿಶ್ರೀ ಪಾಟೀಲ್ ಅವರ ಸಲಹೆ ಮೇರೆಗೆ ಜಿಲ್ಲೆಯಾದ್ಯಂತ 90 ಪೀಡಿಯಾಟ್ರಿಶಿಯನ್‍ಗಳನ್ನು ಗುರುತಿಸಲಾಗಿದೆ. ಈಗಾಗಲೇ ಇವರೆಲ್ಲರಿಗೂ ವೆಬಿನಾರ್ ಮೂಲಕ ಮಕ್ಕಳಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದರ ಬಗ್ಗೆ ಸಲಹೆ ನೀಡಲಾಗಿದೆ. ಇದನ್ನೂ ಓದಿ: ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ, ಜುಲೈ 6ರವರೆಗೆ 11 ಲಕ್ಷ ಸಸಿ ನೆಡಲು ಯೋಜನೆ: ರವಿಕುಮಾರ್

    ಸಹಾಯವಾಣಿ ಆರಂಭ:
    ಮಕ್ಕಳಲ್ಲಿನ ಮಾನಸಿಕ ಒತ್ತಡ ನಿವಾರಣೆಗಾಗಿ ಜಿಲ್ಲಾಡಳಿತ 144499 ಟೋಲ್ ಫ್ರೀ ಸಹಾಯವಾಣಿಯನ್ನು ಪ್ರಾರಂಭಿಸಿದೆ. ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ, ಶೀತ, ಕೆಮ್ಮು ಸೇರಿದಂತೆ ಯಾವುದೇ ಲಕ್ಷಣ ಕಂಡುಬಂದರೆ ತಕ್ಷಣವೇ ಪೋಷಕರು ಈ ಸಂಖ್ಯೆಗೆ ಕರೆ ಮಾಡಿದರೆ ನುರಿತ ವೈದ್ಯರು ಅಗತ್ಯವಾದ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಕೋವಿಡ್ ಮೊದಲನೇ ಅಲೆಯಲ್ಲಿ 22,007 ಸೋಂಕಿತರ ಪೈಕಿ 3149 ಹಾಗೂ 2ನೇ ಅಲೆಯಲ್ಲಿ 31,226 ಪೈಕಿ 5019 ಮಕ್ಕಳು ಸೋಂಕಿಗೆ ಸಿಲುಕಿದ್ದರು. 3ನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜಿಲ್ಲಾದ್ಯಂತ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿ, ಕಾಲೇಜು ತೆರೆಯಿರಿ – ತಜ್ಞರ ವರದಿಯಲ್ಲಿ ಏನಿದೆ?

  • ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ

    ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಸೋಮವಾರ ವಿಕಾಸಸೌಧದಲ್ಲಿ ಕೋವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ ಸೇವಾ ಯೋಜನೆಯ ಮೂಲಕ ಪ್ರತಿ ತಿಂಗಳು ಮಗುವಿಗೆ 3,500 ರೂ. ನೀಡುವುದು, ಅಲ್ಲದೆ ಉಚಿತ ಶಿಕ್ಷಣ ನೀಡುವುದು, 21 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

    ತಂದೆ ತಾಯಿಗಳನ್ನು ಮಕ್ಕಳನ್ನು ನೋಡಿಕೊಳ್ಳಲು ಸಂಬಂಧಿಗಳು ಶಕ್ತರಿಲ್ಲದಿದ್ದರೆ ಇಲಾಖೆ ಮೂಲಕ ದತ್ತು ಸ್ವೀಕಾರ ಕ್ರಮ ಕೈಗೊಳ್ಳಲಾಗುವುದು. ಯಾರಾದರೂ ದಾನಿಗಳು ಅವರ ಜೀವನಕ್ಕೆ ಉಜ್ವಲ ಭವಿಷ್ಯ ರೂಪಿಸಲು ಮುಂದೆ ಬಂದರೆ ಅಂತ ಮಕ್ಕಳ ಭವಿಷ್ಯ ರೂಪಿಸಲು ಇಲಾಖೆ ಕೊಂಡಿಯಾಗಿ ಕೆಲಸ ಮಾಡಲಿದೆ. ಮೂರನೇ ಅಲೆ ನಿಯಂತ್ರಿಸಲು ಮಹಿಳಾ ಮತ್ತು ಮಕ್ಕಳ ಇಲಾಖೆ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ದಿ ಮತ್ತು ಪೊಲೀಸ್ ಇಲಾಖೆ ಮಕ್ಕಳನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ. ಮಕ್ಕಳಿಗೆ ಸೋಂಕು ದೃಢ ಪಟ್ಟರೆ ಕೊವಿಡ್ ಕೇರ್ ಸೆಂಟರ್ ಗೆ ಮಗುವಿನೊಂದಿಗೆ ತಾಯಿಯೂ ಇರಲು ಅವಕಾಶ ಮಾಡಲಾಗಿದೆ. ಯುವತಿಯರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಅಂಗವಿಕಲರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

    ಬೆಂಗಳೂರಲ್ಲಿ ಪ್ರತ್ಯೇಕ ಮಕ್ಕಳ ಕೋವಿಡ್ ಆಸ್ಪತ್ರೆಗೆ ಚಿಂತನೆ:
    ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾಕಷ್ಟು ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಅದರ ಹೊರತಾಗಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ತೆರೆಯಲು ಸಲಹೆ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು. ಈಗಾಗಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ 1,419 ಬೆಡ್ ಗಳನ್ನು ಗುರುತಿಸಲಾಗಿದೆ. 141 ವೆಂಟಿಲೇಟರ್ ಉಳ್ಳ ಐಸಿಯು ಬೆಡ್ ಗಳು, 116 ಐಸಿಯು ರಹಿತ ಬೆಡ್ ಗಳು, 430 ಹೆಚ್‍ಡಿಯು ಬೆಡ್ ಗಳು, 712 ಸಾಮಾನ್ಯ ಬೆಡ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಬೆಡ್ ಬೇಡಿಕೆ ಇದೆ. ಮಕ್ಕಳಿಗೆ ಪ್ರತ್ಯೇಕವಾದ ಮಾಸ್ಕ್, ವೆಂಟಿಲೇಟರ್, ಬೆಡ್, ಔಷಧ, ಮಾತ್ರೆ ಬೇಕಾಗುತ್ತದೆ ಅದರ ಸಿದ್ದತೆಯೂ ನಡೆಯುತ್ತಿದೆ ಎಂದರು.

    ಜಿಲ್ಲೆಯಲ್ಲಿ ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ತಜ್ಞರನ್ನು ಗುರುತಿಲಾಗಿದೆ. ಕಳೆದ ಒಂದು ವರ್ಷದಲ್ಲಿ ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ 51 ಮಕ್ಕಳು ನಿಧನ ಹೊಂದಿದ್ದಾರೆ. ರಾಜ್ಯದಲ್ಲಿ ಇದುವರೆಗೂ 0-9 ವಯಸ್ಸಿನ 67,687 ಮತ್ತು 09-18 ವಯಸ್ಸಿನ 1,70,565 ಮಕ್ಕಳು ಒಟ್ಟು 0-18 ವಯಸ್ಸಿನ 2,38,252 ಮಕ್ಕಳು ಸೋಂಕಿಗೆ ತುತ್ತಾಗಿವೆ. ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ 2 ಮಕ್ಕಳು ತಂದೆ ತಾಯಿ ಕಳೆದುಕೊಂಡು ಅನಾಥರಾಗಿದ್ದಾರೆ. ಅವರಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಸಹಾಯಧನ ನೀಡಲಾಗುವುದು ಎಂದು ಸಚಿವರು ಹೇಳಿದರು.

    ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿ ಕಾರ್ಯಕರ್ತೆಯರಾಗಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್ ನಿಂದ ನಿಧನ ಹೊಂದಿದರೆ ಅವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಬೆಂಗಳೂರು ನಗರದಲ್ಲಿ 3 ಅಗನವಾಡಿ ಕಾರ್ಯಕರ್ತೆಯರು ನಿಧನ ಹೊಂದಿದ್ದಾರೆ. ಅವರಲ್ಲಿ ಇಬ್ಬರಿಗೆ ಪರಿಹಾರ ನೀಡಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 2,587 ಅಂಗನವಾಡಿ ಕೇಂದ್ರಗಳಿವೆ. 4,564 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿದ್ದಾರೆ. ಅವರಲ್ಲಿ ಶೇ.90 ರಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೋವಿಡ್ ಮೊದಲ ಲಸಿಕೆ ಪಡೆದಿದ್ದಾರೆ. ಶೇ.49 ರಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಅಂಗನವಾಡಿ ಬಂದ್ ಇರುವುದರಿಂದ ಪ್ರತಿ 15 ದಿನಕ್ಕೊಮ್ಮೆ ಮಕ್ಕಳಿಗೆ ಆಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಜೊತೆಗೆ ಅವರ ಆರೋಗ್ಯದ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

    ಜಿಲ್ಲೆಯಲ್ಲಿ 22,871 ಗರ್ಭಿಣಿಯರು, 19,131 ಬಾಣಂತಿಯರು, 97 ಕಿಶೋರಿಯರು ಇದ್ದಾರೆ. ಜಿಲ್ಲೆಯಲ್ಲಿ 124 ಮಕ್ಕಳು ತೀವ್ರ ಅಪೌಷ್ಡಿಕತೆಯಿಂದ ಬಳಲುತ್ತಿದ್ದಾರೆ. 9,761 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜಿಲ್ಲೆಯಲ್ಲಿ 39 ಪೋಕ್ಸೊ ಪ್ರಕರಣಗಳು ನಡೆದಿದ್ದು, 37 ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 168 ಬಾಲ್ಯ ವಿವಾಹಗಳಾಗಿದ್ದು, 122 ಬಾಲ್ಯ ವಿವಾಹ ತಡೆಯಲಾಗಿದೆ. 28 ಬಾಲ್ಯ ವಿವಾಹ ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಈ ಬಾರಿಯ ಲಾಕ್‍ಡೌನ್ ಅವಧಿ ಏಪ್ರಿಲ್ ನಿಂದ ಇಲ್ಲಿಯವರೆಗೆ 3 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು, 2 ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಒಂದು ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇನ್ನು ಹೊರಗಡೆಯಿಂದ ಬೆಂಗಳೂರಿಗೆ ವಲಸೆ ಬಂದಿರುವ 513 ಮಕ್ಕಳಿಗೆ ಆಹಾರ ವಿತರಣೆ ಮಾಡಲಾಗಿದೆ ಎಂದು ಸಚಿವರು ವಿವರಣೆ ನೀಡಿದರು. ಇದನ್ನೂ ಓದಿ: ಕೋವಿಡ್ 3ನೇ ಅಲೆ ಸಂಭವ – ಮಕ್ಕಳ ಸಂರಕ್ಷಣೆ, ಚಿಕಿತ್ಸೆಗೆ ಸಂಬಂಧಿಸಿದಂತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ

    ಇದೇ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿದೆ. ಅದು ಯಶಸ್ವಿಯಾದರೆ ಮುಂದಿನ ತೀರ್ಮಾನ ಸಿಎಂ, ಪಿಎಂ ತೆಗೆದುಕೊಳ್ಳುತ್ತಾರೆ. ಶಾಲೆ ತೆರೆಯುವ ಬಗ್ಗೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗುವುದು. ತಜ್ಞರ ವರದಿಯಲ್ಲಿ ಅಧಿಕೃತವಾಗಿ ಏನು ವರದಿ ನೀಡಿದ್ದಾರೆ ಎನ್ನುವುದು ನಮ್ಮ ಇಲಾಖೆಗೆ ಇನ್ನೂ ಮಾಹಿತಿ ಬಂದಿಲ್ಲ. ಸಿಎಂ ನೋಡಿ ನಮ್ಮ ಇಲಾಖೆಗೆ ಕಳುಹಿಸಿಕೊಡುತ್ತಾರೆ. ಇನ್ನು ಮಕ್ಕಳಿಗೆ ಮೊಟ್ಟೆ ಕೊರತೆಯಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಾರುಕಟ್ಟೆಯಲ್ಲಿ ಮೊಟ್ಟೆ ದರ ಹೆಚ್ಚಳವಾಗಿದ್ದು ಸಮಸ್ಯೆಯಾಗಿತ್ತು. ಅದನ್ನು ಗ್ರಾಮ ಪಂಚಾಯತಿಯಿಂದ ಮೊಟ್ಟೆ ವಿತರಣೆಗೆ ಸೂಚನೆ ನೀಡಲಾಗಿದೆ. ಪಂಚಾಯತಿಯಲ್ಲಿ ಹಣದ ಕೊರತೆಯ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೋಂಕಿನಿಂದ ಪೋಷಕರ ಕಳೆದುಕೊಂಡ ಮಗುವಿನ ಮನೆಗೆ ಶಶಿಕಲಾ ಜೊಲ್ಲೆ ಭೇಟಿ

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

    ಹಾವೇರಿ: ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಮಕ್ಕಳು ಸೋಂಕಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೋಂಕಿಗೆ ತುತ್ತಾದಲ್ಲಿ ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

    ಹಾವೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ರಾಜ್ಯದಲ್ಲಿ ಮೊದಲ ಅಲೆಯಿಂದ ಈವರೆಗೆ 1,735 ಹಾಗೂ ಹಾವೇರಿ ಜಿಲ್ಲೆಯಲ್ಲಿ 89 ಮಕ್ಕಳು ಕೋವಿಡ್ ಪಾಸಿಟಿವ್ ಸೋಂಕಿನಿಂದ ಬಳಲುತ್ತಿದ್ದಾರೆ. ಕೋವಿಡ್ ಸೋಂಕಿನ ಮಕ್ಕಳ ಮರಣ ಪ್ರಮಾಣ ಕಡಿಮೆ ಎಂದು ಹೇಳಿದರು. ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಈ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಆರೋಗ್ಯ ಸಚಿವರ ಜೊತೆಗೂಡಿ ಚರ್ಚಿಸಲಾಗಿದೆ. ಮಕ್ಕಳಿಗಾಗಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತ್ಯೇಕ ಮಕ್ಕಳ ಕೋವಿಡ್ ವಾರ್ಡ್ ವ್ಯವಸ್ಥೆ, ಐ.ಸಿ.ಯು ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಇಲಾಖೆಯ ಪ್ರವಾಸ್ತವನೆಯನ್ನು ಒಪ್ಪಿದ ಕಾರಣ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಈ ಕುರಿತಂತೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಅಪೌಷ್ಠಿಕ ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳು ಕೋವಿಡ್‍ಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಎಲ್ಲ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿ 7751 ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. 4.47 ಲಕ್ಷ ಮಕ್ಕಳು ಅಪೌಷ್ಠಿಕತೆಯ ಅಂಚಿನಲ್ಲಿರುವ ಮಕ್ಕಳಿದ್ದಾರೆ. ಸಾಮಾನ್ಯ ಮಕ್ಕಳ ಜೊತೆಗೆ ಈ ಮಕ್ಕಳ ಮೇಲೆ ವಿಶೇಷ ನಿಗಾವಹಿಸಿ ಕೋವಿಡ್ ಸೋಂಕು ತಗಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದರು.

    ಅನಾಥ ಮಕ್ಕಳಿಗೆ ನೆರವು: ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಹಾಗೂ ಏಕಪೋಷಕ ಮಕ್ಕಳಿಗೆ ಆರ್ಥಿಕ, ಶೈಕ್ಷಣಿಕ ನೆರವು ಒದಗಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕ್ರಮಕೈಗೊಂಡಿದೆ. ಮುಖ್ಯಮಂತ್ರಿಗಳ ಬಾಲ ಸೇವಾ ಯೋಜನೆ ಹಾಗೂ ಬಾಲ ಹಿತೈಷಿ ಯೋಜನೆಯಡಿ ಪ್ರತಿ ತಿಂಗಳು ಮಕ್ಕಳಿಗೆ ಮೂರುವರೆಸಾವಿರ ರೂ. ಹಾಗೂ ಉಚಿತ ಶಿಕ್ಷಣ, ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 21 ವರ್ಷ ಪೂರೈಸಿದ ಹೆಣ್ಣುಮಕ್ಕಳಿಗೆ ಮುಂದಿನ ಭವಿಷ್ಯಕ್ಕೆ ಒಂದು ಲಕ್ಷ ರೂ. ನೆರವು ನೀಡಲಾಗುವುದು. ಅನಾಥ ಮಕ್ಕಳನ್ನು ಪಾಲಕರು ಪೋಷಿಸಲು ಅಸಮರ್ಥರಾಗಿದ್ದರೆ ದಾನಿಗಳ ನೆರವಿನಿಂದ ಇವರಿಗೆ ಶಿಕ್ಷಣ, ತರಬೇತಿ, ಉದ್ಯೋಗಾವಕಾಶಗಳನ್ನು ಕಲ್ಪುಸಲು ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೋವಿಡ್‍ನಿಂದ ಪಾಲಕರು ಮೃತರಾಗಿ ಅನಾಥವಾಗಿರುವ 43 ಮಕ್ಕಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

    ದತ್ತು ಪ್ರಕ್ರಿಯೆ: ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಯಾರೂ ನೇರವಾಗಿ ದತ್ತು ಪಡೆಯಲು ಅವಕಾಶವಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ದತ್ತು ಪ್ರಕ್ರಿಯೆ ನಡೆಸಿ ಪಡೆಯಬೇಕು. ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳು ಇದ್ದಲ್ಲಿ ಇಲಾಖೆಯ ಸಹಾಯವಾಣಿ 1098ಕ್ಕೆ ಸಂಪರ್ಕಿಸಿ ಮಾಹಿತಿ ಕೊಡಬೇಕು. ಕೆಲವು ಸಾಮಾಜಿಕ ಜಾಲತಾಣದಲ್ಲಿ ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಾಕುವುದಾಗಿ ಸಂದೇಶಗಳು ಹರಿದಾಡುತ್ತಿವೆ. ಯಾರೂ ಸಹ ಈ ಸಂದೇಶಗಳನ್ನು ನಂಬದೇ ಸಂದೇಶದಲ್ಲಿರುವ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ಮೋಸಹೋಗದಂತೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು. ಇದನ್ನೂ ಓದಿ: 

    ಕೋವಿಡ್ ಸೋಂಕಿನಿಂದ ಮೂರು ಜನ ಅಂಗನವಾಡಿ ಕಾರ್ಯಕರ್ತೆಯರು ಮರಣಹೊಂದಿದ್ದಾರೆ. ತಲಾ 30 ಲಕ್ಷ ರೂ. ಪರಿಹಾರ ಪಾವತಿ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಬಾರಿ ಕೋವಿಡ್‍ಗೆ ಬಲಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಿದೇಶಕ್ಕೆ ತೆರಳುವ ಫಲಾನುಭವಿಗಳ ಕೋವಿಶೀಲ್ಡ್ ಲಸಿಕೆ ಪಡೆಯುವ ಅಂತರ ಕಡಿತ

    ಜಿಲ್ಲಾಡಳಿತ ಉತ್ತಮ ಕ್ರಮ: ಕೋವಿಡ್ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲಾಡಳಿತ ಉತ್ತಮ ಸಿದ್ಧತೆ ಮಾಡಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಮೂರನೇ ಅಲೆ ಕುರಿತಂತೆ ವ್ಯಾಪಕವಾದ ಪ್ರಚಾರದ ಜೊತೆಗೆ ಸಿದ್ಧತೆಗಳನ್ನು ಎಚ್ಚರದಿಂದ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಪಂತರಪಾಳ್ಯದಲ್ಲಿ 10 ತಿಂಗಳಲ್ಲಿ 150 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಿದ್ಧ: ವಿ. ಸೋಮಣ್ಣ

    ಜಿಲ್ಲೆಯ ಏಳು ತಾಲೂಕಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ವಾರ್ಡ್ ಗಳನ್ನು ಮಾಡಲಾಗಿದೆ. 119 ಬೆಡ್‍ಗಳನ್ನು ಕಾಯ್ದಿಸಲಾಗಿದೆ. ಕೋವಿಡ್ ಆರೈಕೆ ಕೇಂದ್ರಗಳಲ್ಲಿ 195 ಬೆಡ್‍ಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಲಾಗಿದೆ. ಜಿಲ್ಲೆಯಲ್ಲಿ ಮೊದಲನೇ ಅಲೆಯಿಂದ ಈವರೆಗೆ 991 ಮಕ್ಕಳಿಗೆ ಸೋಂಕು ತಗಲಿದ್ದು, 901 ಸೋಂಕಿನಿಂದ ಗುಣಮುಖರಾಗಿದ್ದಾರೆ. 89 ಮಕ್ಕಳ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ದೀರ್ಘಕಾಲದ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಒಂದು ಮಗುವಿಗೆ ಕೋವಿಡ್ ಸೋಂಕು ತಗುಲಿ ಮರಣಹೊಂದಿದೆ. ಕೋವಿಡ್ ಸೋಂಕಿನಿಂದ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್‍ಗೆ ಆನ್‍ಲೈನ್ ನೋಂದಣಿ ಕಡ್ಡಾಯವಲ್ಲ

  • ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

    ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

    ಶಿವಮೊಗ್ಗ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

    ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

    ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್‍ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಟ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

    1,780 ವೈದ್ಯರ ನೇಮಕಾತಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ 1,780 ವೈದ್ಯರನ್ನು ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ಪಡೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

    ತಜ್ಞರ ಸಮಿತಿಯಿಂದ ಆಡಿಟ್: ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72ಗಂಟೆಯೊಳಗೆ ಸಾವಿಗೀಡಾದವರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಸಭೆಯಲ್ಲಿ ತಿಳಿಸಿದರು.

    ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರ ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‍ಗೆ ಅವಕಾಶ ನೀಡದರೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿಯೇ ಪೀಡಿತರಿಗೆ ಚಿಕಿತ್ಸೆ ಒದಗಿಸಬೇಕು. ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಇದಕ್ಕೆ ಅನುಗುಣವಾಗಿ ವೈದ್ಯರು ಸೇರಿದಂತೆ ಮೂಲಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನರ್ಸ್ ಗಳು ಹಾಗೂ ಡಿ ಗ್ರೂಪ್ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವ ಅನಿವಾರ್ಯತೆಯಿದ್ದು, ಈ ಕುರಿತು ಆದಷ್ಟು ಬೇಗನೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

    ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಜಿಲ್ಲೆಯ ಕೋವಿಡ್ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿಯನ್ನು ನೀಡಿದರು. ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.