Tag: Covid Vaccination

  • ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ: ICMR ಸ್ಪಷ್ಟನೆ

    ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ: ICMR ಸ್ಪಷ್ಟನೆ

    ನವದೆಹಲಿ: ಕೋವಿಡ್-19 ವ್ಯಾಕ್ಸಿನೇಷನ್‌ಗೂ ಮತ್ತು ದೇಶದಲ್ಲಿ ಸಂಭವಿಸುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

    ಹೃದಯ ಸ್ತಂಭನ ಪ್ರಕರಣಗಳ ಕುರಿತು ಮಾಹಿತಿ ನೀಡುವಾಗ, ಮಾರಣಾಂತಿಕ ಕೋವಿಡ್-19 ರೋಗಕ್ಕೆ ಲಸಿಕೆಗಳನ್ನು ತೆಗೆದುಕೊಂಡ ನಂತರ ಜನರು ಹಠಾತ್ತನೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂಬ ಐಸಿಎಂಆರ್ ಅಧ್ಯಯನ ನಡೆಸಿತು. 18 ರಿಂದ 45 ವರ್ಷ ವಯಸ್ಸಿನ ಆರೋಗ್ಯವಂತ ವಯಸ್ಕರಲ್ಲಿ ಹಠಾತ್ ಸಾವಿನ ಬಗ್ಗೆ ವರದಿ ಪ್ರಕಟಿಸಿದೆ.

    ಯುವಕರಲ್ಲಿ ಹಠಾತ್‌ ಹೃದಯಾಘಾತ ಸಂಭವಿಸುತ್ತಿದೆ. ಈ ಸಾವುಗಳಿಗೂ ಕೋವಿಡ್‌ ವ್ಯಾಕ್ಸಿನೇಷನ್‌ಗೂ ಯಾವುದೇ ಸಂಬಂಧ ಇಲ್ಲ. ಅದನ್ನು ಸಾಬೀತುಪಡಿಸಲು ಯಾವುದೇ ಪುರಾವೆ ನಮಗೆ ಕಂಡುಬಂದಿಲ್ಲ ಎಂದು ಸಂಶೋಧನಾ ತಂಡವು ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ರಿಸರ್ಚ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

    ಈ ರೀತಿಯ ಹಠಾತ್ ಸಾವಿಗೆ ಕುಟುಂಬದ ಹಿನ್ನೆಲೆ, ವ್ಯಕ್ತಿಯ ಜೀವನಶೈಲಿ (ಅತಿಯಾದ ಮದ್ಯಪಾನ ಮತ್ತು ತೀವ್ರ ದೈಹಿಕ ಚಟುವಟಿಕೆಯಂತಹ ಜೀವನಶೈಲಿ) ಕಾರಣವಾಗಿರಬಹುದು ಎಂದು ಹೇಳಲಾಗಿದೆ.

    ICMR ಸಂಶೋಧಕರು ತಮ್ಮ ಸಂಶೋಧನೆಯಲ್ಲಿ 29,171 ಅನಿರೀಕ್ಷಿತ ಸಾವುಗಳನ್ನು ಗುರುತಿಸಿದ್ದಾರೆ. ಭಾರತದಲ್ಲಿ ಕೋವಿಡ್‌ ಸೋಂಕಿನ 4.5 ಕೋಟಿ ಪ್ರಕರಣಗಳು ಮತ್ತು 5,33,295 ಸಾವುಗಳಾಗಿರುವುದು ಸರ್ಕಾರ ಅಂಕಿಅಂಶಗಳ ವರದಿಯಾಗಿದೆ. ನಿಜವಾದ ಅಂಕಿಅಂಶಗಳು ಗಮನಾರ್ಹವಾಗಿ ಹೆಚ್ಚಿವೆ ಎಂದು ತಜ್ಞರು ಸೂಚಿಸುತ್ತಾರೆ.

  • ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ

    ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ

    ವಾಷಿಂಗ್ಟನ್: ವಿಶ್ವದಾದ್ಯಂತ ಕೋವಿಡ್ ಹೆಚ್ಚಳವಾಗುತ್ತಿದೆ. ಇದರಿಂದ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ.

    CHILDRENS COVID

    ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಮಕ್ಕಳ ಮೇಲೆ ನಿಗಾ ಇರಿಸಲಾಗಿದೆ. ಅದಕ್ಕಾಗಿ ಜೂನ್ 21 ರಿಂದ 5 ವರ್ಷದ ಮಳಿಗೂ ಕೊರೊನಾ ಲಸಿಕೆ ನೀಡಲು ಅಮೆರಿಕದ ಆರೋಗ್ಯ ಇಲಾಖೆ ನಿರ್ಧರಿಸಿದೆ. ಇದನ್ನೂ ಓದಿ: 140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ಬಿಟ್ಟ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

    ಇದಕ್ಕಾಗಿ ಜೂನ್ 15ರಂದೇ ಸ್ವತಂತ್ರ ತಜ್ಞರ ಸಮಿತಿಯು ಮಕ್ಕಳ ದತ್ತಾಂಶವನ್ನು ಕಲೆ ಹಾಕಲು ಸಭೆ ನಡೆಸಲಿದೆ. ಇದನ್ನೂ ಓದಿ: ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    COVID HIKE

    ಈ ಕುರಿತು ಮಾಹಿತಿ ನೀಡಿರುವ ಶ್ವೇತಭವನದ ಕೋವಿಡ್ ಪ್ರತಿಕ್ರಿಯೆ ಸಂಯೋಜಕ ಡಾ.ಆಶಿಶ್ ಝಾ, ಬೈಡನ್ ನೇತೃತ್ವದ ಸರ್ಕಾರವು 10 ಮಿಲಿಯನ್ (ದಶಲಕ್ಷ) ನಷ್ಟು ಫಿಜರ್ ಮತ್ತು ಮೊಡೆರ್ನಾ ಲಸಿಕೆಗಳನ್ನು ರಾಜ್ಯಗಳ ಔಷಧಾಲಯಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಲಭ್ಯವಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದ ನಂತರ ಲಸಿಕೆಯನ್ನು ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

  • ಕೋವಿಡ್‌ ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್‌

    ಕೋವಿಡ್‌ ಲಸಿಕೆ ಪಡೆಯುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್‌

    ನವದೆಹಲಿ: ಕೋವಿಡ್‌-19 ವಿರುದ್ಧದ ಲಸಿಕೆಯನ್ನು ಪಡೆದುಕೊಳ್ಳುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

    ಲಸಿಕೆ ಆದೇಶಗಳ ಮೂಲಕ ವ್ಯಕ್ತಿಗಳ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ಪ್ರಮಾಣೀಕರಣವೆಂದು ಕರೆಯಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಇದನ್ನೂ ಓದಿ: ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ

    SUPREME COURT

    ಲಸಿಕೆಗಳ ಪ್ರತಿಕೂಲ ಪರಿಣಾಮಗಳ ಕುರಿತು ಜನರು ಮತ್ತು ವೈದ್ಯರಿಂದ ವರದಿಗಳನ್ನು ಸಂಗ್ರಹಿಸಿ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

    ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವುದರ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿತು. ದೇಶದಲ್ಲಿ ಕೋವಿಡ್‌-19 ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಮತ್ತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರಗಳು ಮುಂದಾಗಿವೆ. ಇದನ್ನೂ ಓದಿ: ಲ್ಯಾಂಡಿಂಗ್ ವೇಳೆ ಸ್ಪೈಸ್‌ಜೆಟ್ ವಿಮಾನ ಅವಘಡ – ಪ್ರಯಾಣಿಕರ ಮೇಲೆ ಲಗೇಜ್‌ಗಳ ಸುರಿಮಳೆ

    ಈಗಾಗಲೇ ಅನೇಕ ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಸಾರ್ವಜನಿಕವಾಗಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಮಾಲ್‌ ಅಥವಾ ಇನ್ನಿತರ ತಾಣಗಳ ಪ್ರವೇಶಕ್ಕೆ ಎರಡು ಡೋಸ್‌ ಲಸಿಕೆ ಕಡ್ಡಾಯ ಎಂದು ತಿಳಿಸಲಾಗಿದೆ.

  • ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಮಾನ್ಯತೆಗೆ 110 ದೇಶಗಳ ಒಪ್ಪಿಗೆ

    ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಮಾನ್ಯತೆಗೆ 110 ದೇಶಗಳ ಒಪ್ಪಿಗೆ

    ನವದೆಹಲಿ: ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳಿಗೆ ವಿದೇಶಕ್ಕೆ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಭಾರತದ ಕೋವಿಡ್-19 ಲಸಿಕಾ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಹಾಗಾಗಿ ಈ ದೇಶಗಳ ಪ್ರಯಾಣ ಸುಲಭವಾಗಲಿದೆ.

    ವಿಶ್ವ ಆರೋಗ್ಯ ಸಂಸ್ಥೆ (WHO) ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿದ ಬಳಿಕ ಭಾರತ ಸಹಿತ ಹಲವು ದೇಶಗಳಲ್ಲಿ ಸಾವಿರಾರು ಕೋಟಿ ಜನ ಲಸಿಕೆ ಪಡೆದುಕೊಂಡಿದ್ದರು. ಜೊತೆಗೆ ವಿಶ್ವದ ಹಲವು ದೇಶಗಳೊಂದಿಗೆ ಕೇಂದ್ರ ಸರ್ಕಾರ ಉತ್ತಮ ಬಾಂಧವ್ಯ ಹೊಂದಿದೆ ಹಾಗಾಗಿ ನಮ್ಮ ದೇಶದಿಂದ ಆಸ್ಟ್ರೇಲಿಯಾ, ರಷ್ಯಾ, ಅಮೆರಿಕ, ಜರ್ಮನಿ ಸಹಿತ 110 ದೇಶಗಳಿಗೆ ಪ್ರಯಾಣಿಸಲು ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಮಾನ್ಯತೆ ಪಡೆದುಕೊಂಡಿದೆ. ಇದರಿಂದಾಗಿ ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳ ಪ್ರಯಾಣ ಸುಲಭವಾಗಲಿದೆ. ಇದನ್ನೂ ಓದಿ: ನಾನು ಭಾರತದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದೇನೆ: ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್

    WHO ಅನುಮೋದನೆ ನೀಡಿರುವ ಕೋವಿಡ್-19 ಲಸಿಕೆ ಪಡೆದ ಪ್ರಯಾಣಿಕರು ಪ್ರಯಾಣಿಸುವ ವೇಳೆ ಕೋವಿಡ್ ಲಸಿಕೆ ಪ್ರಮಾಣ ಪತ್ರ ಪಡೆದಿರುವುದು ಮುಖ್ಯ. ಇದೀಗ ಭಾರತದ ಕೋವಿಶೀಲ್ಡ್ ಪಡೆದ ಭಾರತೀಯ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹಾಗಾಗಿ ಈ ದೇಶಗಳಿಗೆ ಪ್ರಯಾಣಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. 110 ದೇಶಗಳು ಲಸಿಕೆ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ ಒಪ್ಪಿಕೊಂಡಿವೆ ಮತ್ತು ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆ ಕುರಿತು ಭಾರತದೊಂದಿಗೆ ಒಪ್ಪಂದವನ್ನು ಹೊಂದಿರುವ ಅನೇಕ ದೇಶಗಳಿವೆ. ಅದೇ ರೀತಿಯಲ್ಲಿ ಭಾರತದೊಂದಿಗೆ ಅಂತಹ ಒಪ್ಪಂದ ಹೊಂದಿಲ್ಲದ ರಾಷ್ಟ್ರಗಳು ಕೂಡಾ ಇವೆ. ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ಲಸಿಕೆ ಹಾಕಿಸಿಕೊಂಡ ಭಾರತೀಯ ನಾಗರಿಕರಿಗೆ ವಿನಾಯಿತಿ ಸಿಗುತ್ತಿದೆ. ಇದರಿಂದ ಭಾರತೀಯರ ಅಂತರಾಷ್ಟ್ರೀಯ ಪ್ರಯಾಣ ಸಲಿಸಾಗಿದೆ. ಇದನ್ನೂ ಓದಿ: ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್‌, ಪೆಟ್ರೋಲ್‌ ಇಲ್ಲ

     ಭಾರತದ ವ್ಯಾಕ್ಸಿನ್ ಸಾಧನೆ
    ಭಾರತ ಈವರೆಗೆ 100ಕ್ಕೂ ಹೆಚ್ಚು ದೇಶಗಳಿಗೆ 66 ಮಿಲಿಯನ್(6 ಕೋಟಿ)ಗೂ ಹೆಚ್ಚು, ವ್ಯಾಕ್ಸಿನ್ ಡೋಸ್‍ಗಳನ್ನು ರಫ್ತು ಮಾಡಿದೆ. ವಾಣಿಜ್ಯ ಸಾಗಣೆ ಹಾಗೂ ಕೋವ್ಯಾಕ್ಸ್ ಸೌಲಭ್ಯದ ಮೂಲಕ ರಫ್ತು ಮಾಡಿದೆ. ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್ ಅವರ ತವರು ದೇಶ ಮಾಲ್ಡೀವ್ಸ್. ಭಾರತದ ಲಸಿಕೆಯನ್ನು ಪಡೆದ ಮೊದಲ ದೇಶಗಳಲ್ಲಿ ಮಾಲ್ಡೀವ್ಸ್ ಕೂಡ ಒಂದು. 1 ಲಕ್ಷ ಡೋಸ್‍ಗಳನ್ನು ಆರಂಭದಲ್ಲಿ ಕಳುಹಿಸಲಾಗಿತ್ತು.

  • ಸೆ.17ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: 30 ಲಕ್ಷ ಲಸಿಕೆ ನೀಡುವ ಗುರಿ

    ಸೆ.17ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: 30 ಲಕ್ಷ ಲಸಿಕೆ ನೀಡುವ ಗುರಿ

    ಬೆಂಗಳೂರು: ಸೆಪ್ಟೆಂಬರ್ 17 ರಂದು ರಾಜ್ಯದಲ್ಲಿ ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

    ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು 1.10 ಕೋಟಿ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಬೇಕು ಎಂಬ ಚಿಂತನೆ ಇದೆ ಎಂದು ತಿಳಿಸಿದರು.

    ವಾರದಲ್ಲಿ ಬುಧವಾರ 15 ಲಕ್ಷ ಲಸಿಕೆ ಹಾಕುವ ಗುರಿ ಇದೆ. ದಿನಕ್ಕೆ 5 ಲಕ್ಷ ಲಸಿಕೆಯ ಗುರಿ ಹೊಂದಲಾಗಿದೆ. ಬೃಹತ್ ಲಸಿಕೆ ಕಾರ್ಯಕ್ರಮದಂದು ಕೇಂದ್ರ ಸರ್ಕಾರ ಒಂದೇ ದಿನ 2 ರಿಂದ 3 ಕೋಟಿ ಲಸಿಕೆ ನೀಡುವ ಉದ್ದೇಶವಿದ್ದು, ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇದೆ. ಲಸಿಕೆ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ವಿಶೇಷ ಬೇಡಿಕೆ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರ ಒದಗಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

    Covid Vaccination campaign meeting Karnataka 4

    ಬಡತನ ರೇಖೆಗಿಂತ ಕೆಳಗಿರುವ ದುರ್ಬಲ ವರ್ಗದವರಿಗೆ ಹಾಗೂ ದುಡಿಯುವ ವರ್ಗಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ನಗರ ಪ್ರದೇಶಗಳಲ್ಲಿ, ಬೆಂಗಳೂರಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮುಖ್ಯಮಂತ್ರಿಯವರು ಸೂಚಿಸಿದರು. ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಸೂಕ್ತ ಸಂಖ್ಯೆಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲು ತಿಳಿಸಿದರು. ಮುಂಚಿತವಾಗಿಯೇ ಲಸಿಕೆ ದಾಸ್ತಾನು ಪಡೆದು, ಲಸಿಕಾ ಕೇಂದ್ರಗಳಿಗೆ ತಲುಪಿಸಿ, ವಿಶೇಷ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೂಚಿಸಿದರು.

    ಕಲಬರುಗಿಯಲ್ಲಿ ಸಿಎಂ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬೃಹತ್ ಲಸಿಕೆ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಲಸಿಕೆ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ರಾಜ್ಯದಲ್ಲಿ ಸರಾಸರಿ ಶೇ.71 ಜನರಿಗೆ ಮೊದಲ ಡೋಸ್ ಹಾಕಲಾಗಿದೆ. ರಾಜ್ಯ ಸರಾಸರಿಗಿಂತ ಹೆಚ್ಚಿನ ಸಾಧನೆ ಮಾಡಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. ಇತರ ಜಿಲ್ಲೆಗಳಲ್ಲಿಯೂ ರಾಜ್ಯದ ಸರಾಸರಿ ಪ್ರಮಾಣದ ಸಾಧನೆ ಮಾಡುವಂತೆ ನಿರ್ದೇಶನ ನೀಡಿದರು.

    ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಭಿವೃದ್ಧಿ ಆಯುಕ್ತರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಭಾಗವಹಿಸಿದ್ದರು.

  • ದಿನಕ್ಕೆ ಕೋಟಿ ಜನರಿಗೆ ಕೋವಿಡ್‌ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ

    ದಿನಕ್ಕೆ ಕೋಟಿ ಜನರಿಗೆ ಕೋವಿಡ್‌ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ

    ಬೆಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್‌ ಲಸಿಕೆ ವ್ಯಾಕ್ಸಿನೇಷನ್‌ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ‌ ವಿ.ಆರ್.ವಾಲಾ ಅವರಿಗೆ ಮನವಿ ಮಾಡಿದೆ.

    ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ನಾಯಕರ ನಿಯೋಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಾಜಿ ಸಚಿವ ರಾಮಲಿಂಗ ರೆಡ್ಡಿ, ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್ ಸಹಾ ನಿಯೋಗದಲ್ಲಿದ್ದರು. ಪ್ರತಿದಿನ ಒಂದು ಕೋಟಿ ವ್ಯಾಕ್ಸಿನೇಷನ್‌ ದೇಶದಲ್ಲಿ ಆಗಬೇಕು. ಉಚಿತ ವ್ಯಾಕ್ಸಿನೇಷನನ್ನ ಸರ್ಕಾರ ಜನರಿಗೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದರ ಜವಾಬ್ದಾರಿ ತಗೆದುಕೊಳ್ಳಬೇಕು ಎಂದು ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ‌. ಇದನ್ನೂ ಓದಿ: ಡಿಕೆಶಿ ಹೆಲಿಕಾಪ್ಟರ್‌ ಬೆಂಗಳೂರಿನಲ್ಲಿಳಿಯದೇ ನೆಲಮಂಗಲದಲ್ಲಿ ಲ್ಯಾಂಡ್‌ ಆಗಿದ್ದೇಕೆ..?

    ರಾಜ್ಯಪಾಲರ ಮೂಲಕ, ರಾಷ್ಟ್ರಪತಿ ಗಳಿಗೆ ಮನವಿ ಮಾಡಿದ ಕೈ ನಾಯಕರು ಪ್ರಧಾನಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ನಮ್ಮ ಪಕ್ಷದ ಶಾಸಕರ ಪಾಲಿನ ಒಂದು ಕೋಟಿ ಪ್ರದೇಶಾಭಿವೃದ್ಧಿ ನಿಧಿ ನಮಗೆ ಕೊಡಿಸಿ ಎಂದು ರಾಜ್ಯಪಾಲರಲ್ಲಿ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.

  • ಹೊಂಬಾಳೆ ಸಮೂಹದ ಎಲ್ಲ ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಉಚಿತ ಕೋವಿಡ್‌ ಲಸಿಕೆ

    ಹೊಂಬಾಳೆ ಸಮೂಹದ ಎಲ್ಲ ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಉಚಿತ ಕೋವಿಡ್‌ ಲಸಿಕೆ

    ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಣ ಹಾಗೂ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರತಿಷ್ಠಿತ ಹೊಂಬಾಳೆ ಸಮೂಹವು ತನ್ನ ಉದ್ಯೋಗಿಗಳು, ನೌಕರರು ಹಾಗೂ ಅವರ ಅವಲಂಬಿತ ಅಂದಾಜು ಐದು ಸಾವಿರ ಮಂದಿಗೆ ಉಚಿತವಾಗಿ ಕೋವಿಡ್‌ ಲಸಿಕೆ ಹಾಕಿಸಲು ನಿರ್ಧರಿಸಿದೆ.

    ತನ್ನೊಂದಿಗೆ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಹೊಂಬಾಳೆ ಸಮೂಹವು ಎಲ್ಲರ ವ್ಯಾಕ್ಸಿನೇಶನ್‌ಗೆ ಆಗುವ ಪೂರ್ಣ ವೆಚ್ಚವನ್ನು ತಾನೇ ಭರಿಸಲಿದೆ.

    ಹೊಂಬಾಳೆ ಫಿಲ್ಮ್‌ ಬ್ಯಾನರ್‌ನಡಿ ಕೆಲಸ ಮಾಡುವ ಎಲ್ಲ ಸದಸ್ಯರು ಹಾಗೂ ಪೂರಕ ಸಿಬ್ಬಂದಿ ಹಾಗೂ ಅವರ ಅವಲಂಬಿತರೆಲ್ಲರಿಗೂ ವ್ಯಾಕ್ಸಿನ್‌ ನೀಡಲಾಗುವುದು. ಜತೆಗೆ ಹೊಂಬಾಳೆ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯ ಎಂದು ಹೊಂಬಾಳೆ ಸಮೂಹದ ಪ್ರಕಟಣೆ ತಿಳಿಸಿದೆ.

    ಕೇಂದ್ರ ಸರಕಾರ ಮಾರ್ಗಸೂಚಿಯಂತೆ ಮುಂದಿನ ಹಂತದಲ್ಲಿ ಅವರವರ ವಯೋಮಿತಿ ಆಧಾರದ ಮೇಲೆ ಕೋವಿಡ್‌ ವ್ಯಾಕ್ಸಿನ್‌ ಕೊಡಿಸಲಾಗುವುದು ಮತ್ತು ನಮ್ಮವರ ಆರೋಗ್ಯದ ಜತೆಗೆ ಅವರ ಕುಟುಂಬದ ಆರೋಗ್ಯವೂ ನಮಗೆ ಮುಖ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.

    https://twitter.com/VKiragandur/status/1374705049268482050