Tag: Covid vaccine

  • ಎರಡೂ ಡೋಸ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲ: ಬ್ರಿಟನ್‌ ಪ್ರಧಾನಿ

    ಎರಡೂ ಡೋಸ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲ: ಬ್ರಿಟನ್‌ ಪ್ರಧಾನಿ

    ಲಂಡನ್‌: ಹೊರ ದೇಶಗಳಿಂದ ಇಂಗ್ಲೆಂಡ್‌ಗೆ ಬರುವವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸುವ ನಿಯಮವನ್ನು ತೆಗೆದು ಹಾಕಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಬೋರಿಸ್‌ ಜಾನ್ಸನ್‌ ತಿಳಿಸಿದ್ದಾರೆ.

    ಸೋಂಕು ಪ್ರಕರಣಗಳ ಸಂಖ್ಯೆ ಇಳಿಯುತ್ತಿದೆ. ಹೀಗಾಗಿ ಬೇರೆ ದೇಶಗಳಿಂದ ಬರುವವರಿಗೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ವಿನಾಯಿತಿ ಸಂಪೂರ್ಣವಾಗಿ ಕೋವಿಡ್‌ ಲಸಿಕೆ ಪಡೆದವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!

    ಇಂಗ್ಲೆಂಡ್‌ ವ್ಯಾಪಾರ ಹಾಗೂ ಪ್ರಯಾಣಿಕರಿಗೆ ಮುಕ್ತವಾಗಿದೆ. ಆದ್ದರಿಂದ ಕೋವಿಡ್‌ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ನಿರ್ಧರಿಸಿದೆ. ಲಸಿಕೆ ಎರಡೂ ಡೋಸ್ ಪಡೆದವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ ಎಂದು ಹೇಳಿದ್ದಾರೆ. ‌

    ನಿರ್ಬಂಧ ಸಡಿಲಿಕೆ ದಿನಾಂಕವನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಆದರೆ ಕೋವಿಡ್‌ ಲಸಿಕೆಯನ್ನು ಸಂಪೂರ್ಣವಾಗಿ ಪಡೆದವರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ: WHO ಮುಖ್ಯಸ್ಥ

    ಯೂರೋಪ್‌ನಲ್ಲಿ ಕೋವಿಡ್‌ ಹೊಡೆತಕ್ಕೆ ಹೆಚ್ಚು ತುತ್ತಾದ ದೇಶ ಇಂಗ್ಲೆಂಡ್‌. ಇಲ್ಲಿ ಈವರೆಗೆ ಸೋಂಕಿನಿಂದ 1,54,000 ಮಂದಿ ಸಾವಿಗೀಡಾಗಿದ್ದಾರೆ. ಆದರೆ ಈಚೆಗೆ ಇಂಗ್ಲೆಂಡ್‌ನಲ್ಲಿ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಆದ್ದರಿಂದ ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಮುಂದಾಗಿದೆ.

    ನಿರ್ಬಂಧ ಸಡಿಲಿಕೆ ಬಗೆಗಿನ ಸರ್ಕಾರದ ನಿಲುವಿಗೆ ವಿರೋಧ ವ್ಯಕ್ತವಾಗಿದೆ. ನಿರ್ಬಂಧಗಳನ್ನು ಸಡಿಲಗೊಳಿಸಿದರೆ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣಬಹುದು. ಇದರಿಂದ ಮತ್ತಷ್ಟು ಸಮಸ್ಯೆಯಾಗಬಹುದು ಅಭಿಪ್ರಾಯ ವ್ಯಕ್ತವಾಗಿದೆ.

  • ವಿಷ ಕೊಟ್ಬಿಡ್ರಿ ಆದ್ರೆ ಲಸಿಕೆ ಮಾತ್ರ ಬೇಡ: ಆರೋಗ್ಯ ಸಿಬ್ಬಂದಿಗೆ ಮಹಿಳೆ ಖಡಕ್‌ ಮಾತು

    ವಿಷ ಕೊಟ್ಬಿಡ್ರಿ ಆದ್ರೆ ಲಸಿಕೆ ಮಾತ್ರ ಬೇಡ: ಆರೋಗ್ಯ ಸಿಬ್ಬಂದಿಗೆ ಮಹಿಳೆ ಖಡಕ್‌ ಮಾತು

    ಬೆಂಗಳೂರು: ಕೋವಿಡ್‌-19 ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕ ಒಳ್ಳೆಯ ಹೆಸರು ಮಾಡಿದೆ. ಲಸಿಕಾ ಅಭಿಯಾನದಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೂ ಹಲವೆಡೆ ಜನರು ಕೋವಿಡ್‌ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಪಡೆದುಕೊಳ್ಳಿ ಎನ್ನುತ್ತಾ ಮನೆ ಮುಂದೆ ಹೋಗುವ ಅಧಿಕಾರಿಗಳಿಗೆ ಜನರಿಂದ ಕಹಿ ಅನುಭವಗಳಾಗಿವೆ.

    ನೆಲಮಂಗಲ ತಾಲ್ಲೂಕಿನ ಗೋವಿಂದಪುರದಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂದು ಜಾಗೃತಿ ಮೂಡಿಸಿದ ಆರೋಗ್ಯ ಸಿಬ್ಬಂದಿ ಜೊತೆಗೆ ಮಹಿಳೆ ಕಿರಿಕ್‌ ಮಾಡಿಕೊಂಡಿರುವ ಘಟನೆ ನಡೆದಿದೆ. ಲಸಿಕೆ ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗೆ, ಒಂದು ತೊಟ್ಟು ವಿಷ ಕೊಟ್ಬಿಡಿ ಆದ್ರೆ ವ್ಯಾಕ್ಸಿನ್‌ ಮಾತ್ರ ಬೇಡ ಎಂದು ಮಹಿಳೆ ನಿರಾಕರಿಸಿರುವ ಪ್ರಸಂಗ ನಡೆದಿದೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!

    ಅಮ್ಮ ನೀವು ಲಸಿಕೆ ಹಾಕಿಸಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿ ಹೇಳಿದ್ದಾರೆ. ನಾನು ಲಸಿಕೆ ಹಾಕಿಸಿಕೊಳ್ಳುವುದಿಲ್ಲ, ನಾಲ್ಕು ದಿನ ಚೆನ್ನಾಗಿರಲಿ ಅಂತ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ಬಿಡಿ ಎಂದು ಮಹಿಳೆ ತಿಳಿಸಿದ್ದಾರೆ. ಅದಕ್ಕೆ ಆರೋಗ್ಯ ಸಿಬ್ಬಂದಿ ಪ್ರತಿಕ್ರಿಯಿಸಿ, ನಾವು ಆರೋಗ್ಯವಾಗಿರಬೇಕು ಎಂದೇ ಲಸಿಕೆ ನೀಡುತ್ತಿರುವುದು ಎಂದು ಮನವೊಲಿಸಲು ಪ್ರಯತ್ನಿಸಿದ್ದಾರೆ. ಅದಕ್ಕೆ ಮಹಿಳೆ, ಅನ್ನದಲ್ಲಿ ವಿಷ ಹಾಕಿ ಕೊಟ್ಬಿಡಿ, ಆದರೆ ಕೊರೊನಾ ಲಸಿಕೆ ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    CORONA-VIRUS.

    ಮಹಿಳೆಗೆ ಲಸಿಕೆ ನೀಡಲು ಸಾಧ್ಯವಾಗದೇ ಆರೋಗ್ಯ ಸಿಬ್ಬಂದಿ ತಂಡ ಬೇರೆ ದಾರಿ ಇಲ್ಲದೇ ವಾಪಸ್‌ ಆಗಿದೆ. ಇದನ್ನೂ ಓದಿ: ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್

  • ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್

    ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್‍ನಲ್ಲಿ 100% ಹಾಗೂ ಎರಡನೇ ಡೋಸ್‍ನಲ್ಲಿ 85.3% ಪ್ರಗತಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15-17 ವರ್ಷದ ಮಕ್ಕಳಲ್ಲಿ ಶೇ.67.5% ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ. ಒಟ್ಟು 9,33,92,626 ಡೋಸ್‍ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಉತ್ತಮ ಪ್ರಗತಿಯಲ್ಲಿದೆ ಎಂದು ಹೇಳಿದರು.

    ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಏರುತ್ತಿದೆ. ಮತ್ತೆ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ ಎಂದ ಅವರು, ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಹೆಚ್ಚು ಆಸ್ಪತ್ರೆ ದಾಖಲಾತಿ ಕಂಡು ಬರುವಲ್ಲಿ ಕ್ರಮ ವಹಿಸಲಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದೆ. ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.

    ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.

    ಭ್ರೂಣ ಪತ್ತೆ ಮಾಡುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಸಮಾನತೆ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಹಾಗೂ ಲಿಂಗ ಸಮಾನತೆ ತರಲು ಪ್ರಯತ್ನಿಸಬೇಕಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ

    ಕೆಲ ವರ್ಷಗಳಿಂದ ಲಿಂಗಾನುಪಾತವೂ ಹೆಚ್ಚಾಗಿದೆ. 2001ರಲ್ಲಿ 946 ಇದ್ದ ಲಿಂಗಾನುಪಾತ, 2018ರಲ್ಲಿ 957ಕ್ಕೇರಿದೆ. ಅಂದರೆ, ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ. ಅವರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ: ಬೊಮ್ಮಾಯಿ

    ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವ ತಜ್ಞರು, ತಾಂತ್ರಿಕ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರವಾನಗಿಯನ್ನು ರದ್ದು ಮಾಡಲಾಗುವುದು. ಭ್ರೂಣ ಪತ್ತೆಗೆ ಅವಕಾಶ ನೀಡುವುದಿಲ್ಲ ಎಂದರು. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

  • ಲಸಿಕೆ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿ ತಲುಪಬೇಕು: ಸಿಎಂ ಸೂಚನೆ

    ಲಸಿಕೆ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿ ತಲುಪಬೇಕು: ಸಿಎಂ ಸೂಚನೆ

    ಬೆಂಗಳೂರು: ಮೊದಲನೇ ಹಾಗೂ 2 ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿಯನ್ನು ತಲುಪಬೇಕು ಎಂದು ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

    ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬೊಮ್ಮಾಯಿ ಮಾತನಾಡಿದರು. ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್‌ಗಳನ್ನು ತಲುಪಿಸಬೇಕು. ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಜಿಲ್ಲಾಧಿಕಾರಿಗಳು, ಡಿಹೆಚ್‌ಒಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: 12-14 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ನಿರ್ಧಾರವಾಗಿಲ್ಲ – ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ

    ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು. ಶೇ.94ರಷ್ಟು ಸೋಂಕಿತರು ಹೋಮ್ ಐಸೋಲೇಶನ್ ಇರುವುದರಿಂದ ಮನೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರಿಗೂ ಪರೀಕ್ಷೆ ಮಾಡಿ ಅಗತ್ಯವಿದ್ದರೆ ಚಿಕಿತ್ಸೆ ನೀಡಿ ಎಂದು ಸಲಹೆ ನೀಡಿದರು.

    ಹೊರ ರಾಜ್ಯ ಕಾರ್ಮಿಕರಿಗಾಗಿ ಲಸಿಕೆ, ಚಿಕಿತ್ಸೆ ಎಸ್‌ಒಪಿ:
    ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಪ್ರಾರಂಭ ಮಾಡಿ ವೈದ್ಯರು ಹಾಗೂ ಎಎನ್‌ಎಂಗಳು ಮನೆ ಮನೆಗೆ ಭೇಟಿ ನೀಡಬೇಕು. ಇದಕ್ಕೆ ವಿಶೇಷ ಎಸ್‌ಒಪಿ ರೂಪಿಸಬೇಕು. ಬೆಂಗಳೂರಿನಲ್ಲಿ ಖಾಸಗಿ ಹಾಗೂ ಸರ್ಕಾರಿ ಒಪಿಡಿಗಳನ್ನು ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ತೆರೆಯಬೇಕು. ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ ಕಾರ್ಮಿಕರ ಲಸಿಕೆ ಹಾಗೂ ಚಿಕಿತ್ಸೆ ಕುರಿತು ವಿಶೇಷ ಎಸ್‌ಒಪಿ ರೂಪಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ನಾನು ಮಾಸ್ಕ್ ಹಾಕಲ್ಲ : ಸಚಿವ ಉಮೇಶ್ ಕತ್ತಿ

    ಅನ್ಯರೋಗಿಗಳು, ವೃದ್ಧರ ಪರೀಕ್ಷೆ ಹೆಚ್ಚಿಸಿ:
    ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಅನ್ಯರೋಗ (ಕೋ-ಮಾರ್ಬಿಡಿಟಿ) ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್‌ನಲ್ಲಿರುವವರಿಗೆ ಟೆಸ್ಟ್ ಮಾಡಿ ಚಿಕಿತ್ಸೆ ನೀಡಬೇಕು. ಕೋ-ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಬೇಕು ಮತ್ತು ಔಷಧಿ ಒದಗಿಸಬೇಕು ಎಂದು ತಿಳಿಸಿದರು.

    ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಬೇಕು. ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು. ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಹುಟ್ಟಿದ ಒಂದು ದಿನದ ನವಜಾತ ಶಿಶುವಿಗೆ ಕೊರೊನಾ

    ಕರ್ನಾಟಕದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೋವಿಡ್ ಮೂರನೇ ಅಲೆ ಏರುಗತಿ ತಲುಪಿದರೂ ಆತಂಕ ಪಡದೆ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಸಿಎಂ ಆಶಯ ವ್ಯಕ್ತಪಡಿಸಿದರು.

  • ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯಲ್ಲ, ಕ್ಷಮಿಸುವುದೂ ಇಲ್ಲ: ಸಚಿವ ಸುಧಾಕರ್‌

    ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯಲ್ಲ, ಕ್ಷಮಿಸುವುದೂ ಇಲ್ಲ: ಸಚಿವ ಸುಧಾಕರ್‌

    ಬೆಂಗಳೂರು: ಕಾಂಗ್ರೆಸ್‌ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದಿಲ್ಲ, ಕ್ಷಮಿಸುವುದೂ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಾದಯಾತ್ರೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ನಿರ್ದೇಶನವನ್ನು ಸ್ವಾಗತಿಸುತ್ತೇನೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗೆ ಪೂರಕವಾಗಿದೆ. ಕೋವಿಡ್ ಪ್ರಕರಣ ಹೆಚ್ಚಿರುವ ಈ ಸಮಯದಲ್ಲಿ ಇದು ಸೂಕ್ತವಾಗಿದೆ. ಕಾಂಗ್ರೆಸ್‌ನ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದೂ ಇಲ್ಲ, ಕ್ಷಮಿಸುವುದೂ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ

    ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಆದರೂ ಶೇ. 5ರಿಂದ 6 ರಷ್ಟು ರೋಗಿಗಳು ಮಾತ್ರ ಆಸ್ಪತ್ರೆ ಸೇರುತ್ತಿದ್ದಾರೆ. ನರ್ಸ್‌ಗಳು ಕೂಡ ಸೋಂಕಿಗೆ ಒಳಗಾಗುತ್ತಿರುವುದು ಆತಂಕದ ವಿಚಾರ. ಹೀಗಾಗಿ ಮತ್ತಷ್ಟು ಎಚ್ಚರಿಕೆಯ ಅವಶ್ಯಕತೆ ಇದೆ. ರಾಜ್ಯದಲ್ಲಿ ಕೊರೊನಾ ಇನ್ನೂ ಪೀಕ್‌ಗೆ ಹೋಗಿಲ್ಲ ಎಂದು ತಜ್ಞರು ಕೂಡಾ ಹೇಳಿದ್ದಾರೆ. ಫೆಬ್ರವರಿ ಮೊದಲ ವಾರ ಪೀಕ್‌ಗೆ ಹೋಗುವ ಸಾಧ್ಯತೆ ಇದೆ. 3- 4ನೇ ವಾರದಿಂದ ಕಡಿಮೆ ಆಗಲಿದೆಯೆಂದು ತಜ್ಞರು ಅಂದಾಜಿಸಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ

    ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ, ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಕೋವಿಡ್ ಲಸಿಕೆಯ ಬೂಸ್ಟರ್‌ ಡೋಸ್ ಪಡೆದಿದ್ದಾರೆ. 9 ತಿಂಗಳ ಹಿಂದೆ ಅವರು ಎರಡು ಡೋಸ್ ಪಡೆದಿದ್ದರು. ಬಿಎಂಸಿಆರ್‌ಐನಲ್ಲಿ ಈವರೆಗೆ 83,937 ಡೋಸ್‌ಗಳನ್ನು ನೀಡಲಾಗಿದೆ. ಈ ಪೈಕಿ 420 ಬಾಣಂತಿ, 1,179 ಗರ್ಭಿಣಿಯರಿಗೆ ಲಸಿಕೆ ನೀಡಲಾಗಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ಅರ್ಹರು ಮುನ್ನೆಚ್ಚರಿಕೆಗೆ ಲಸಿಕೆಯನ್ನು ಪಡೆಯಬೇಕು. ಲಸಿಕಾಕರಣ ಒಂದರಿಂದಲೇ ರಕ್ಷಣೆ ಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಪ್ರಧಾನಿಗಳು ಕೂಡ ಅದನ್ನೇ ಹೇಳಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯೋಣ ಎಂದು ಕರೆ ನೀಡಿದರು.

  • ಬೂಸ್ಟರ್‌ ಡೋಸ್ ಪಡೆದ ರಾಜ್ಯಪಾಲ – ಲಸಿಕೆ ಪಡೆಯಲು ಜನತೆಗೆ ಕರೆ

    ಬೂಸ್ಟರ್‌ ಡೋಸ್ ಪಡೆದ ರಾಜ್ಯಪಾಲ – ಲಸಿಕೆ ಪಡೆಯಲು ಜನತೆಗೆ ಕರೆ

    ಬೆಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆಯ ಬೂಸ್ಟರ್‌ ಡೋಸ್‌ ಪಡೆದುಕೊಂಡರು.

    ನಂತರ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಮಾತನಾಡಿದ ರಾಜ್ಯಪಾಲರು, ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಲು ಲಸಿಕೆ ಅವಶ್ಯಕತೆ ಇದೆ. ಲಸಿಕೆ ಪಡೆಯೋದು ಅವಶ್ಯವಾಗಿದೆ. ರಾಜ್ಯದ ಜನ ಲಸಿಕೆ ಪಡೆಯಬೇಕು. ಕೊರೊನಾದಿಂದ‌ ಮುಕ್ತವಾಗಲು ಲಸಿಕೆ ಮುಖ್ಯ ಎಂದು ಸಲಹೆ ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‌ಡೌನ್‌ ಇಲ್ಲವೇ ಇಲ್ಲ: ಸಚಿವ ಸುಧಾಕರ್‌ ಸ್ಪಷ್ಟನೆ

    ದೆಹಲಿಯಲ್ಲಿ ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದಿದ್ದೇನೆ. ಇಂದು ಬೂಸ್ಡರ್ ಡೋಸ್ ಪಡೆದಿದ್ದೇನೆ. ಪ್ರಮಾಣ ಪತ್ರವನ್ನು ನನಗೆ ನೀಡಿದ್ದಾರೆ. ಇಡೀ ದೇಶದಲ್ಲಿ ‌ಲಸಿಕೆ ಅಭಿಯಾನ ನಡೆಯುತ್ತಿದೆ. ಲಸಿಕಾ ಅಭಿಯಾನದಲ್ಲಿ ಕರ್ನಾಟಕ ಮುಂದಿದೆ. ಈ ಕಾರ್ಯಕ್ಕೆ ಸಿಎಂ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರು ಲಸಿಕೆ ಪಡೆಯಬೇಕು. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಹೇಳಿದರು.

    ರಾಜ್ಯದಲ್ಲಿ 4.89 ಕೋಟಿ ಜನರು ಮೊದಲ ಡೋಸ್, 3.98 ಕೋಟಿ ಜನರು ಎರಡನೇ ಡೋಸ್ ಪಡೆದಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.81.5 ಮಂದಿಗೆ ಎರಡೂ ಡೋಸ್ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ

  • ಲಸಿಕೆ ಹಾಕಿಸಲು ಬಿಡಲ್ಲ – ಮಕ್ಕಳನ್ನೇ ಕಿಡ್ನ್ಯಾಪ್‌ಗೈದ ತಾಯಿ ವಿರುದ್ಧ ಮಾಜಿ ಪತಿ ದೂರು

    ಲಸಿಕೆ ಹಾಕಿಸಲು ಬಿಡಲ್ಲ – ಮಕ್ಕಳನ್ನೇ ಕಿಡ್ನ್ಯಾಪ್‌ಗೈದ ತಾಯಿ ವಿರುದ್ಧ ಮಾಜಿ ಪತಿ ದೂರು

    ಮಾಡ್ರಿಡ್: ಕೋವಿಡ್-19 ವಿರುದ್ಧದ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವುದರಿಂದ ತಪ್ಪಿಸಲು ತನ್ನ ಮಕ್ಕಳನ್ನೇ ತಾಯಿ ಅಪಹರಿಸಿದ್ದಾಳೆ ಎಂದು ಆರೋಪಿಸಿ ಆಕೆಯ ಮಾಜಿ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ.

    46 ವರ್ಷ ವಯಸ್ಸಿನ ಮಹಿಳೆಯನ್ನು ಬಿಟ್ಟು ಆಕೆಯ ಪತಿ ಬೇರೆ ಕಡೆ ವಾಸವಾಗಿದ್ದರು. ಇದಾದ ಬಳಿಕ ತನ್ನ ಮಕ್ಕಳನ್ನು ಆಕೆ ಅಪಹರಿಸಿದ್ದಾಳೆ ಎಂದು ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಶೀಘ್ರವೇ ಹಸೆಮಣೆ ಏರಲಿರುವ ಸಲಿಂಗಿ ವೈದ್ಯೆಯರು

    KIDNAP

    ತಿಂಗಳಿಂದ ಮಕ್ಕಳು ನನ್ನ ಕಣ್ಣಿಗೆ ಕಾಣಿಸಿಲ್ಲ. ಈ ವೇಳೆ ಶಾಲೆಯಿಂದ ನನಗೊಂದು ಪತ್ರ ಬಂದಿತ್ತು. ನಿನ್ನ ಪತ್ನಿ ಮಕ್ಕಳನ್ನು ಶಾಲೆಯಿಂದ ಬಿಡಿಸಲು ಯೋಚಿಸಿದ್ದಾರೆ. ಮಕ್ಕಳು ಕೋವಿಡ್‌ ಲಸಿಕೆ ಪಡೆಯುವುದರಿಂದ ತಪ್ಪಿಸಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿತ್ತು ಎಂದು ಮಾಜಿ ಪತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯನ್ನು ವಿಚಾರಣೆಗೆ ಒಳಪಡಿಸುವಂತೆ ಕೋರ್ಟ್‌ ಆದೇಶಿಸಿದೆ. ನಂತರ ಇಬ್ಬರೂ ಮಕ್ಕಳನ್ನು ತಂದೆಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್‍ಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್

    jail

    ಕಳೆದ ಡಿಸೆಂಬರ್‌ 15ರಿಂದ 5-11 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನವನ್ನು ಸ್ಪೇನ್‌ ಸೇರಿದಂತೆ ಅನೇಕ ಯೂರೋಪ್‌ ರಾಷ್ಟ್ರಗಳು ಆರಂಭಿಸಿವೆ.

  • ಇಂದಿನಿಂದ 15-18 ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ

    ಇಂದಿನಿಂದ 15-18 ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ

    ನವದೆಹಲಿ: ದೇಶದಲ್ಲಿ 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.

    ಸರ್ಕಾರದ ಕೋವಿನ್‌ ಪೋರ್ಟಲ್‌ನಲ್ಲಿ ಈಗಾಗಲೇ 8 ಲಕ್ಷ ಮಕ್ಕಳು ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಅವರಿಗೆ ಕೋವ್ಯಾಕ್ಸಿನ್‌ ಲಸಿಕೆ ನೀಡಲಾಗುವುದು. ಇದನ್ನೂ ಓದಿ: ಅತ್ತೆಯನ್ನು ಕೊಂದು, ಮೃತ ದೇಹಕ್ಕೆ ಬೆಂಕಿ ಹಚ್ಚಿದ ಸೊಸೆ

    ಶಾಲೆಗಳೊಂದಿಗೆ ಸಮಾಲೋಚನೆ ನಡೆಸಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಲಸಿಕಾ ಕಾರ್ಯಕ್ರಮ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಲಸಿಕೆ ಕೇಂದ್ರಗಳಾಗಿಯೂ ಬಳಸಲಾಗುತ್ತಿದೆ.

    2007ನೇ ಇಸವಿ ಅಥವಾ ಅದಕ್ಕಿಂತಲೂ ಮೊದಲು ಜನಿಸಿರುವ ಮಕ್ಕಳು ಕೋವಿಡ್‌ ಲಸಿಕೆ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಕೋವ್ಯಾಕ್ಸಿನ್‌ ಲಸಿಕೆಯನ್ನು ಮಾತ್ರ ಮಕ್ಕಳಿಗೆ ನೀಡಲಾಗುವುದು. ಲಸಿಕೆಯ ಡೋಸ್‌ಗಳನ್ನು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬಹುಕಾಲದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಸಿದ ಅನಿವಾಸಿ ಕನ್ನಡಿಗರ ಅಭಿಯಾನ ಯಶಸ್ವಿ

    ಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆ ನೀಡಲು ರಾಜ್ಯದಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಲಸಿಕೆಯ 16 ಲಕ್ಷ ಡೋಸ್‌ ಸಂಗ್ರಹವಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

    ಮೊಬೈಲ್‌ ಮೂಲಕ ನೋಂದಣಿ:
    ಮಕ್ಕಳ ಪರವಾಗಿ ಪೋಷಕರು ಅಥವಾ ಶಾಲೆಯ ಶಿಕ್ಷಕರು ಅಥವಾ ಮುಖ್ಯ ಶಿಕ್ಷಕರ ಮೊಬೈಲ್‌ ಸಂಖ್ಯೆ ಮೂಲಕ ನೋಂದಣಿ ಮಾಡಿಸಬೇಕು ಎಂದು ಇಲಾಖೆ ತಿಳಿಸಿದೆ.

  • 4 ಬಾರಿ ಕೋವಿಡ್‌ ಲಸಿಕೆ ಪಡೆದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್‌

    4 ಬಾರಿ ಕೋವಿಡ್‌ ಲಸಿಕೆ ಪಡೆದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್‌

    ಭೋಪಾಲ್: ನಾಲ್ಕು ಬಾರಿ ಕೋವಿಡ್-‌19 ಲಸಿಕೆಯನ್ನು ಪಡೆದಿದ್ದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ದುಬೈನಿಂದ ಇಂದೋರ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

    ವಿಮಾನ ನಿಲ್ದಾಣದಲ್ಲಿ ಮಹಿಳೆಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೋವಿಡ್‌ ಇರುವುದು ದೃಢಪಟ್ಟಿದೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ ಎಂದು ವೈದ್ಯ ಭುರೆ ಸಿಂಗ್‌ ಸೇಟಿಯಾ ಹೇಳಿದ್ದಾರೆ. ಇದನ್ನೂ ಓದಿ: ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರತನ್ ಟಾಟಾ

    12 ದಿನಗಳ ಹಿಂದೆ ಮಹಿಳೆ ದುಬೈನಿಂದ ಇಂದೋರ್‌ಗೆ ಆಗಮಿಸಿದ್ದರು. ನಿಯಮದಂತೆ ಅವರನ್ನು ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಪತ್ತೆಯಾಗಿದೆ.

    30 ವರ್ಷ ವಯಸ್ಸಿನ ಮಹಿಳೆ ಬೇರೆ ಬೇರೆ ದೇಶಗಳಲ್ಲಿ ಜನವರಿ ಮತ್ತು ಆಗಸ್ಟ್‌ ಅವಧಿಯಲ್ಲಿ ನಾಲ್ಕು ಡೋಸ್ ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಐವರಿಗೆ ಓಮಿಕ್ರಾನ್ ದೃಢ – 43ಕ್ಕೇರಿದ ಸೋಂಕಿತರ ಸಂಖ್ಯೆ

  • 2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್‍ಗೆ ಸಂದೇಶ

    2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್‍ಗೆ ಸಂದೇಶ

    ಪಟ್ನಾ: ಎರಡು ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಸಂದೇಶ ಬಂದಿರುವುದು ಅಚ್ಚರಿ ಮೂಡಿಸಿದೆ. ಮೃತ ಮಹಿಳೆಯ ಪತಿ ಬಳಿ ಇದ್ದ ಮೊಬೈಲ್‍ಗೆ ಈ ಸಂದೇಶ ಬಂದಿದೆ.

    ಲಾಲೊ ದೇವಿ ಅವರ ಪತಿ ರಾಮ್ ಉದ್ಗಾರ್ ಥಾಕೂರ್ ಈ ಕುರಿತು ಪ್ರತಿಕ್ರಿಯಿಸಿ, ನನ್ನ ಪತ್ನಿ ಜ್ವರ, ಅಸ್ವಸ್ಥತೆ ಕಾರಣದಿಂದಾಗಿ ಸೆಪ್ಟೆಂಬರ್ 19ರಂದು ನಿಧನರಾದರು. ಬಿಹಾರ್‍ನ ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯಿಂದ ನೀಡಲಾಗಿರುವ ಮರಣ ಪ್ರಮಾಣ ಪತ್ರವೂ ನಮ್ಮ ಬಳಿ ಇದೆ. ನನ್ನ ಪತ್ನಿ ಮೃತಪಟ್ಟು 2 ತಿಂಗಳಾಗಿದೆ. ಆದರೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಥಾಕೂರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

    ವೀರಪುರದ ಕಿಸಾನ್ ಭವನದಲ್ಲಿ ನವೆಂಬರ್ 25 ರಂದು ಪ್ರಾಥಮಿಕ ಆರೋಗ್ಯ ಕೇಂದ್ರವು ಕೋವಿಡ್ ಲಸಿಕಾ ಅಭಿಯಾನ ಶಿಬಿರ ನಡೆಸಿತ್ತು. ಶಿಬಿರ ನಂತರ ಲಾಲೊ ದೇವಿ ಹೆಸರಿನಲ್ಲೂ ಕೋವಿಡ್ ಲಸಿಕೆ ಪ್ರಮಾಣ ಪತ್ರ ನೀಡಲಾಗಿದೆ.

    ಮೃತ ಮಹಿಳೆ ಹೆಸರಿನಲ್ಲಿ ಕೋವಿಡ್ ಲಸಿಕೆ ಪ್ರಮಾಣ ಪತ್ರ ನೀಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ದತ್ತಾಂಶ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಸರ್ಕಾರಗಳು ತಂತ್ರಗಾರಿಕೆ ನಡೆಸುತ್ತಿವೆ ಎಂಬ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಇದನ್ನೂ ಓದಿ: ವ್ಯಾಕ್ಸಿನ್ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಜಾ