Tag: Covid vaccine

  • ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

    ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

    ಬೆಂಗಳೂರು: ಶ್ರೀರಾಮ ಸೇವಾ ಮಂಡಳಿ ವತಿಯಿಂದ ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡಿದ ಸಲುವಾಗಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ರಾಜಾಜಿನಗರ ಶ್ರೀರಾಮಮಂದಿರದ ಬಳಿ ಇರುವ ಶ್ರೀರಾಮದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಶ್ರೀರಾಮ ಸೇವಾ ಮಂಡಳಿ ಅಧ್ಯಕ್ಷರಾದ ಕೆ.ಎಸ್.ಶ್ರೀಧರ್, ನಿರ್ದೇಶಕರಾದ ಬಾಬುನರಸಿಂಹ, ಡಾ||ಸಿಂಧೂ, ಡಾ||ಪೂಜಾ ಮತ್ತು ಆರೋಗ್ಯ ನಿರೀಕ್ಷಕರಾದ ಸುಬ್ರಮಣ್ಯ ಪದಕಿರವರು ಮತ್ತು ಶ್ರೀರಾಮ ಸೇವಾ ಮಂಡಳಿ ಪದಾಧಿಕಾರಿಗಳು ಈ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. 25ಸಾವಿರ ಲಸಿಕೆ ಪಡೆದ ಫಲಾನುಭವಿಗಳಿಗೆ ಸನ್ಮಾನಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನೆಲಮಂಲಗದಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್

    ಅಧ್ಯಕ್ಷ ಕೆ.ಎಸ್.ಶ್ರೀಧರ್ ಈ ಕುರಿತು ಮಾತನಾಡಿ, ಶ್ರೀರಾಮ ಸೇವಾ ಮಂಡಳಿ ಸಮಾಜಮುಖಿ ಕಾರ್ಯಗಳು ಮತ್ತು ಜನರ ಸೇವೆ ಮಾಡುವಲ್ಲಿ ನಿರತವಾಗಿದೆ. ಕಳೆದ 20 ತಿಂಗಳಿಂದ ಕೊರೊನಾ ಎಂಬ ಮಹಾಮಾರಿ ಜನರ ಜೀವನವನ್ನು ತತ್ತರಗೊಳಿಸಿದೆ. ಆದರೆ ಶ್ರೀರಾಮ ಸೇವಾ ಮಂಡಳಿ ಜನರ ಸಂಕಷ್ಟಕ್ಕೆ ನೆರವು ನೀಡಬೇಕೆಂದು ಕೊವಿಡ್ ಮೊದಲನೆಯ ಮತ್ತು ಎರಡನೇ ಅಲೆಯಲ್ಲಿ 35ಸಾವಿರ ಆಹಾರ ಪ್ಯಾಕೇಟ್ ವಿತರಿಸಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ತನ್ನ ವಿರುದ್ಧ ಟೀಕೆ ಮಾಡುತ್ತಿರೋರಿಗೆ ಸ್ಟ್ರಾಂಗ್ ಉತ್ತರ ಕೊಟ್ಟ ಸಮಂತಾ

    ಸಾವಿರಾರು ಆಹಾರ ಕಿಟ್ ಗಳನ್ನು ವಿತರಿಸಲಾಯಿತು. ಕೋವಿಡ್ ನಿಂದ ಉಸಿರಾಟದ ತೊಂದರೆ ಇರುವವರಿಗೆ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ 11ಆಕ್ಸಿಜನ್ ಸಾಂದ್ರಕಗಳನ್ನು ಉಚಿತವಾಗಿ ನೀಡಲಾಯಿತು. ಬಿಬಿಎಂಪಿ ಮತ್ತು ಶ್ರೀರಾಮ ಸೇವಾ ಮಂಡಳಿ ಸಹಯೋಗದಲ್ಲಿ 25ಸಾವಿರ ಕೋವಿಡ್-19ಲಸಿಕೆಗಳನ್ನು 120ದಿನದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗಿದೆ. ಶ್ರೀರಾಮ ಸೇವಾ ಮಂಡಳಿ ಭಕ್ತರ ಸೇವೆಯ ಜೊತೆಯಲ್ಲಿ ಜನರ ಸೇವೆಗೆ ಸದಾ ಮುಂದೆ ಇರುತ್ತದೆ ಎಂದು ಹೇಳಿದರು.

  • ವೈದ್ಯರ ಎಡವಟ್ಟು- ಕೊರೊನಾ ಲಸಿಕೆ ಬದಲು ರೇಬಿಸ್ ವ್ಯಾಕ್ಸಿನ್

    ವೈದ್ಯರ ಎಡವಟ್ಟು- ಕೊರೊನಾ ಲಸಿಕೆ ಬದಲು ರೇಬಿಸ್ ವ್ಯಾಕ್ಸಿನ್

    ಮುಂಬೈ: ವ್ಯಕ್ತಿಯೋರ್ವನಿಗೆ ಕೋವಿಡ್ ಲಸಿಕೆ ಬದಲು ಆ್ಯಂಟಿ ರೇಬಿಸ್ ಲಸಿಕೆ ನೀಡಲಾಗಿದೆ. ಇದರಿಂದ ಆ ಆಸ್ಪತ್ರೆಯ ವೈದ್ಯರು ಮತ್ತು ನರ್ಸ್‍ನನ್ನು ಅಮಾನತು ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

    ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಆ್ಯಂಟಿ ರೇಬಿಸ್ ಲಸಿಕೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ನಿರ್ಲಕ್ಷ್ಯ ವಹಿಸಿದ ವೈದ್ಯ ಹಾಗೂ ನರ್ಸ್‍ನನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಸ್ಥಳೀಯರಾದ ರಾಜಕುಮಾರ್ ಯಾದವ್ ಕಲ್ವಾದಲ್ಲಿರುವ ಸರ್ಕಾರಿ ಮೆಡಿಕಲ್ ಸೆಂಟರ್‍ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ತೆರಳಿದ್ದರು. ಆದರೆ ಅಲ್ಲಿ ಆ್ಯಂಟಿ ರೇಬಿಸ್ ಲಸಿಕೆಯ ಕ್ಯೂನಲ್ಲಿ ನಿಂತ ಅವರಿಗೆ ವೈದ್ಯರು ಯಾವ ಪ್ರಶ್ನೆಯನ್ನೂ ಕೇಳದೆ ಆ್ಯಂಟಿ ರೇಬಿಸ್ ಲಸಿಕೆ ಹಾಕಿದ್ದಾರೆ.

    ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡ ಬಳಿಕ ಎರಡನೇ ಲಸಿಕೆಗೆ ಯಾವಾಗ ಬರಬೇಕೆಂದು ಕೇಳಿದಾಗ ಅಲ್ಲಿನ ಸಿಬ್ಬಂದಿ ಆತನಿಗೆ ನೀಡಿದ್ದು ರೇಬಿಸ್ ಲಸಿಕೆ ಎಂದು ತಿಳಿಸಿದ್ದಾರೆ. ಇದರಿಂದ ಆಘಾತಗೊಂಡ ಆ ವ್ಯಕ್ತಿ ಬೇರೆ ವೈದ್ಯರ ಬಳಿ ಹೋಗಿ ವಿಷಯ ತಿಳಿಸಿದ್ದಾರೆ. ಆ ವ್ಯಕ್ತಿ ಆರೋಗ್ಯದಿಂದಿದ್ದು, ಯಾವುದೇ ಅಡ್ಡಪರಿಣಾಮಗಳು ಉಂಟಾಗಿಲ್ಲ. ಆದರೆ ಯಾವ ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದಾರೆ ಎಂಬುದನ್ನು ವಿಚಾರಿಸದೆ ನಿರ್ಲಕ್ಷ್ಯ ತೋರಿದ್ದಕ್ಕೆ ವೈದ್ಯರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ರೌಡಿಗಳಿಗೆ ಕಾನೂನಿನ ಭಯವಿಲ್ಲದೆ ಅಟ್ಟಹಾಸ ತೋರಿಸುತ್ತಿದ್ದಾರೆ: ಯು.ಟಿ.ಖಾದರ್

    ತನಗೆ ತಪ್ಪು ಲಸಿಕೆ ನೀಡಿದ ಬಗ್ಗೆ ರಾಜಕುಮಾರ್ ಯಾದವ್ ಆಸ್ಪತ್ರೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಜೆಕ್ಷನ್ ನೀಡಿದ ವೈದ್ಯೆ, ನರ್ಸ್‍ನನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ – ಶಿವನ ಭಕ್ತನಾಗಿದ್ದ ಗಾಂಜಾ ಆರೋಪಿ

    ಈ ರೀತಿಯ ಘಟನೆಗಳು ನಮ್ಮ ಆಸ್ಪತ್ರೆಯಲ್ಲಿ ಹಿಂದೆ ನಡೆದಿಲ್ಲ, ಅವರು ತಪ್ಪಾಗಿ ಬೇರೆ ಕ್ಯೂನಲ್ಲಿ ನಿಂತಿದ್ದರಿಂದ ಈ ರೀತಿ ತಪ್ಪಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯುವುದಿಲ್ಲ ಎಂದು ಆಸ್ಪತ್ರೆಯ ಹಿರಿಯ ವೈದ್ಯರು ಭರವಸೆ ನೀಡಿದ್ದಾರೆ. ಈ ವಿಷಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೈದ್ಯರ ತಪ್ಪಿನಿಂದ ಆ ವ್ಯಕ್ತಿಗೆ ಏನಾದರೂ ತೊಂದರೆ ಆಗಿದ್ದರೆ ಯಾರು ಜವಾಬ್ದಾರಿ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ..

  • ಕೋವಿಡ್ ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ಹಣ: ಸಿಐಟಿಯು ತೀವ್ರ ಖಂಡನೆ

    ಕೋವಿಡ್ ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ಹಣ: ಸಿಐಟಿಯು ತೀವ್ರ ಖಂಡನೆ

    – ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ತೀವ್ರ ಖಂಡನೆ

    ಬೆಂಗಳೂರು: ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ 40 ಲಕ್ಷ ಕೋವಿಡ್ ಲಸಿಕೆಗಳನ್ನು ನೀಡುವ ನೆಪದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಖಾಸಗಿ ಆಸ್ಪತ್ರೆಗಳಿಗೆ 312 ಕೋಟಿ ರೂಪಾಯಿಗಳನ್ನು ಧಾರೆ ಎರೆಯಲು ಹೊರಟಿದ್ದಾರೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕೈಗೊಂಡಿರುವ ಈ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ತೀವ್ರವಾಗಿ ಖಂಡಿಸಿದೆ. ಕೂಡಲೇ ಈ ತೀರ್ಮಾನವನ್ನು ಹಿಪಡೆಯಬೇಕೆಂದು ಆಗ್ರಹಿಸಿದೆ.

    ಕಾರ್ಮಿಕ ಸಚಿವರು ಖಾಸಗಿ ಆಸ್ಪತ್ರೆಗಳ ಮಾಲಿಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದು ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಕಾರ್ಮಿಕ ಸಚಿವರು ಹಾಗೂ ಮಂಡಳಿ ಅಧಿಕಾರಿಗಳ ಕೂಟವು ದುರ್ಬಳಕೆ ಮಾಡಿಕೊಳ್ಳಲು ಇಂತಹ ಪ್ರಯತ್ನ ನಡೆಸಿದೆ ಎಂಬ ಆರೋಪ ಕೇಳಿ ಬಂದಿವೆ.

    ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯು ದೇಶಾದ್ಯಾಂತ ಎಲ್ಲ ನಾಗರಿಕರಿಗೂ ಉಚಿತವಾಗಿ ಕೋವಿಡ್ ಲಸಿಕೆಗಳನ್ನು ವಿತರಿಸುತ್ತಿದೆ. ಕರ್ನಾಟಕದಲ್ಲೂ ನಿರ್ಮಾಣ ವಲಯದ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ವಲಸೆ ಕಾರ್ಮಿಕರು ಮೊದಲನೆ ಹಾಗೂ ಎರಡನೇ ಡೋಸ್‍ಗಳನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಹೀಗಿದ್ದೂ ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಖರೀದಿಸುವ ಅಗತ್ಯವಾದರೂ ಏನಿದೆ ಎಂದು ಸಿಐಟಿಯು ಪ್ರಶ್ನಿಸಿದೆ. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಬೂಸ್ಟಪ್ ಕಿಟ್ ಹಾಗೂ ಸುರಕ್ಷಾ ಕಿಟ್, ಹೊಸ ತಂತ್ರಾಂಶ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ. ಅಲ್ಲದೆ 2021-22 ಸಾಲಿನಲ್ಲಿ 2688.90 ಕೋಟಿ ಮಂಡಳಿ ಹಣವನ್ನು ವಿವಿಧ ಬಾಬ್ತುಗಳಿಗೆ ಖರ್ಚು ಮಾಡಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಕೆಪಿಟಿಟಿ ಕಾಯ್ದೆ 1999 ನ್ನು ಕಾರ್ಮಿಕ ಸಚಿವರು ಮತ್ತು ಮಂಡಳಿ ಹಿರಿಯ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಮನಬಂದಂತೆ ದುರುಪಯೋಗ ಮಾಡುತ್ತಿದ್ದಾರೆ. ಇದನ್ನೂ ಓದಿ: ಟೋಕಿಯೊ ಪ್ಯಾರಾಲಿಂಪಿಕ್ಸ್- ಹೈಜಂಪ್‍ನಲ್ಲಿ ಬೆಳ್ಳಿ ಗೆದ್ದ ತಂಗವೇಲು, ಕಂಚು ಶರದ್ ಕುಮಾರ್‌ಗೆ

    ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ರಾಜ್ಯ ಸರ್ಕಾರ ಇದಕ್ಕಾಗಿ ಖಜಾನೆಯಿಂದ ಖರ್ಚು ಮಾಡುವ ಬದಲು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡು ಕಾರ್ಮಿಕ ಸಚಿವರು ಹಾಗೂ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕೋಟ್ಯಾಂತರ ಹಣ ಲೂಟಿ ಹೊಡೆಯುತ್ತಿದ್ದಾರೆ. ಇದು ಬಡ ಕಾರ್ಮಿಕರ ಹೆಸರಲ್ಲಿ ನಡೆಸುತ್ತಿರುವ ಹಗಲು ದರೋಡೆಯಾಗಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ಸಿಐಟಿಯು ಆಗ್ರಹಿಸಿದೆ.

  • ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

    ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

    ಬೆಂಗಳೂರು: ದೇಶದಲ್ಲಿ ಮೂರನೇ ಅಲೆ ಭೀತಿ ಹೆಚ್ಚಾಗ್ತಿದೆ. ದೇಶದ ಕೆಲ ರಾಜ್ಯಗಳಲ್ಲಿ ಕೇಸ್ ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸೊಂಕು ತಗುಲುತ್ತೆ ಅಂತಾ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಿಗೆ ವ್ಯಾಕ್ಸಿನ್ ಇಲ್ಲದ ಕಾರಣ ಮಕ್ಕಳಿಗೆ ಸೋಂಕು ಹೆಚ್ಚುವ ಸಾಧ್ಯತೆಗಳಿವೆ. ಈ ಮಧ್ಯೆ ಮಕ್ಕಳಿಗೆ ಕೋವಿಡ್ ಲಸಿಕೆ ಸೆಪ್ಟೆಂಬರ್ ವೇಳೆಗೆ ಸಿಗಬಹುದು ಅಂತಾ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಭಾರತ್ ಬಯೋಟೆಕ್‍ನ ಕೋವಾಕ್ಸಿನ್ ಪ್ರಯೋಗಗಳು ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಮುಗಿಯಬೇಕು ಮತ್ತು ಆ ಹೊತ್ತಿಗೆ ನಾವು ವ್ಯಾಕ್ಸಿನ್ ಬಳಕೆಗೆ ಅನುಮೋದನೆ ಪಡೆಯಬೇಕು. ಫೈಜರ್ ಲಸಿಕೆಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಸೆಪ್ಟೆಂಬರ್ ವೇಳೆಗೆ ನಾವು ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಬೇಕು. ಚೈನ್ ಲಿಂಕ್ ಕಟ್ ಮಾಡಬೇಕಾದ್ರೆ ಇದು ತುಂಬಾ ಸಹಕಾರಿ ಆಗುತ್ತೆ ಅಂತಾ ಡಾ.ರಣದೀಪ್ ಗುಲೇರಿಯಾ ತಿಳಿಸಿದ್ದಾರೆ.

    ರಾಜ್ಯದಲ್ಲಿ ತಜ್ಞರು ಕೂಡ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್ ವೇಳೆಗೆ ಕಾಣಿಸಿಕೊಳ್ಳಬಹುದು ಅಂತಾ ಹೇಳುತ್ತಿದ್ದಾರೆ. ಮಕ್ಕಳಿಗೆ ಲಸಿಕೆ ಸೆಪ್ಟೆಂಬರ್ ಗೆ ಬಂದರೆ ಕೋವಿಡ್ ನಿಂದ ಪಾರು ಮಾಡಬಹುದು ಅಂತಾ ರಾಜ್ಯದ ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: ಅತಿವೃಷ್ಟಿ ಪರಿಹಾರ ಕಾರ್ಯಕ್ಕೆ ಡಿಸಿ ಖಾತೆಯಲ್ಲಿ 950 ಕೋಟಿ ಮೀಸಲು: ಸಚಿವ ಆರ್.ಅಶೋಕ್

  • ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಸುಧಾಕರ್

    ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಸುಧಾಕರ್

    -ಕುಲಪತಿ ನೇಮಕ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ
    – ನಾನು ಮಂತ್ರಿಯಾಗಿರುವವರೆಗೂ ಅಪವಾದ ಹೊತ್ತುವರು ಕುಲಪತಿಯಾಗಲು ಸಾಧ್ಯವಿಲ್ಲ

    ಬೆಂಗಳೂರು: ರೋಗ ಬಾರದಂತೆ ತಡೆಯುವ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಲೋಪತಿಯಲ್ಲಿ ಸಂಶೋಧನೆಗಳನ್ನು ಮಾಡುವಂತೆ ಆಯುರ್ವೇದದಲ್ಲೂ ಹೆಚ್ಚು ಸಂಶೋಧನೆಗಳು ನಡೆಯಬೇಕು. ಎಷ್ಟೇ ನಂಬಿಕೆ ಇದ್ದರೂ ಅದನ್ನು ಸಾಕ್ಷಿ ಸಮೇತ ನಿರೂಪಿಸಬೇಕು. ಸಂಶೋಧನೆ ಮತ್ತು ಆವಿಷ್ಕಾರವನ್ನು ಹೆಚ್ಚಾಗಿ ಮಾಡಬೇಕು. ಪ್ರತಿ ಮೆಡಿಕಲ್ ಕಾಲೇಜುಗಳಲ್ಲಿ ಕೂಡ ಸಂಶೋಧನೆಗಳನ್ನು ಹೆಚ್ಚಿಸಬೇಕಿದೆ. ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಸಂಶೋಧನೆ ಅಗತ್ಯ ಎಂದರು.

    ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಕೋವಿಡ್ ಲಸಿಕೆ ತಯಾರಿಸಿದೆ. ಅದೇ ರೀತಿ, ರಾಜೀವ್ ಗಾಂಧಿ ವಿವಿ ಕೂಡ ಯಾವುದೇ ರೋಗಗಳಿಗೆ ಪರಿಹಾರ ಕಂಡು ಹಿಡಿಯುವಂತೆ ಸಂಶೋಧನೆ ನಡೆಸಬೇಕು. ಎನ್‍ಸಿಡಿ ಸಮಸ್ಯೆಯಿಂದಾಗಿ ಬಡ ರಾಷ್ಟ್ರಗಳಲ್ಲಿ ವಾರ್ಷಿಕ 28 ದಶಲಕ್ಷ ಜನರು ಮೃತರಾಗುತ್ತಿದ್ದಾರೆ. ಭಾರತದಲ್ಲಿ ಕೂಡ ಈ ಸಮಸ್ಯೆ ಹೆಚ್ಚಿದೆ. ಈ ರೋಗಗಳಿಗೆ ಆಯುರ್ವೇದ ಪದ್ಧತಿ ಹೆಚ್ಚು ಪರಿಹಾರ ನೀಡುತ್ತದೆ ಎಂದು ತಿಳಿಸಿದರು.

    ರಾಜ್ಯಪಾಲರೊಂದಿಗೆ ಚರ್ಚೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್ ನಿಂದಾಗಿ ರಾಜ್ಯಪಾಲರು ಚರ್ಚೆ ನಡೆಸಲು ಆಗಿಲ್ಲ. ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ನಂತರ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಅವರು ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

    ಶುದ್ಧ ಚಾರಿತ್ರ್ಯವಿರುವವರು ಕುಲಪತಿಯಾಗಲು ಸಾಧ್ಯ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸ್ಥಾನ ತುಂಬುವ ಬಗ್ಗೆ ಚರ್ಚಿಸಲಾಗುವುದು. ಈ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಆ ನಿಟ್ಟಿನಲ್ಲಿ ಸ್ಥಾನ ತುಂಬಬೇಕೆಂಬುದನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ. ಕನಿಷ್ಠಪಕ್ಷ ನಾನು ಸಚಿವನಾಗಿರುವವರೆಗೂ ಅದು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ರಾಂಡಮ್ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಅನ್ ಲಾಕ್ ಹಂತದಲ್ಲೇ ಬಹಳಷ್ಟು ಜನರು ಹೊರಗೆ ಓಡಾಡುತ್ತಿದ್ದಾರೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾಲ್, ಥಿಯೇಟರ್, ಹೋಟೆಲ್ ಎಲ್ಲವನ್ನೂ ತೆರೆಯಲು ಅವಕಾಶ ನೀಡಿಲ್ಲ. ಆದರೂ ಕೈಗಾರಿಕೆಗೆ ಅವಕಾಶ ನೀಡಿರುವುದರಿಂದ ಜನರು ಹೊರಗೆ ಓಡಾಡುತ್ತಿರಬಹುದು. ಇದಕ್ಕೆ ಪೂರಕವಾಗಿ ಪರೀಕ್ಷೆ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು ಎಂದರು.

    ರಾಜ್ಯದಲ್ಲಿ ಕೋವಿಡ್ ನಿಂದ 25 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. 1.70 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ನೀಡಲಾಗಿರುತ್ತದೆ. ಕೋವಿಡ್ ಮೂರನೇ ಅಲೆಗೆ ಸಿದ್ಧತೆಯಾಗಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಿಭಾಗ ಬಲಪಡಿಸಲಾಗುತ್ತಿದೆ. 1,763 ವೈದ್ಯರು, ವೈದ್ಯಾಧಿಕಾರಿಗಳನ್ನು ಐತಿಹಾಸಿಕದಂತೆ ಅತಿ ಕಡಿಮೆ ಅವಧಿಯಲ್ಲಿ ನೇಮಿಸಲಾಗಿದೆ. ವೈದ್ಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಕಡಿಮೆ. ವೈದ್ಯರು ನಗರಗಳಲ್ಲೇ ಆಯ್ಕೆ ಮಾಡಿಕೊಳ್ಳುತ್ತಾರೆ. ಹೆಚ್ಚಿನ ವೈದ್ಯರು ಹಳ್ಳಿಗಳಲ್ಲಿ ಕೆಲಸ ಮಾಡುವ ಛಲ ಹೊಂದಬೇಕು ಎಂದು ತಿಳಿಸಿದರು.  ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಬಾವಿ ಪಾಲಾದ ಕಾರು

  • ಕೋವಿಡ್ ಲಸಿಕೆ ಪಡೆದ ಹಿರಿಯ ನಟಿ ಡಾ.ಲೀಲಾವತಿ, ಪುತ್ರ ವಿನೋದ್ ರಾಜ್

    ಕೋವಿಡ್ ಲಸಿಕೆ ಪಡೆದ ಹಿರಿಯ ನಟಿ ಡಾ.ಲೀಲಾವತಿ, ಪುತ್ರ ವಿನೋದ್ ರಾಜ್

    ಬೆಂಗಳೂರು: ಹಿರಿಯ ನಟಿ ಡಾ.ಲೀಲಾವತಿ ಮತ್ತು ಪುತ್ರ ನಟ ವಿನೋದ್ ರಾಜ್ ಇಂದು ಕೋವಿಡ್ ಲಸಿಕೆಯನ್ನ ಪಡೆದರು.

    ಬೆಂಗಳೂರು ಹೊರವಲಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು. ಬಳಿಕ ಎಲ್ಲರೂ ಕಡ್ಡಾಯ ಕೊರೊನಾ ಲಸಿಕೆಯನ್ನ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

    ಯಾವ ಅಲೆಯಾದರೂ ಬರಲಿ ನಮ್ಮ ಎಚ್ಚರಿಕೆಯಲ್ಲಿರಬೇಕು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ, ಲಸಿಕೆಗೂ ಒತ್ತು ನೀಡಿ ಎಂದರು. ಈ ವೇಳೆ ಆರೋಗ್ಯ ನಿರೀಕ್ಷಕ ನಾಗೇಶ್ ಇದ್ದರು.

  • ಭಾರತೀಯ ಸೇನೆಯಿಂದ ನೇಪಾಳದ ಸೇನೆಗೆ 1 ಲಕ್ಷ ಕೊರೊನಾ ಲಸಿಕೆ ಗಿಫ್ಟ್

    ಭಾರತೀಯ ಸೇನೆಯಿಂದ ನೇಪಾಳದ ಸೇನೆಗೆ 1 ಲಕ್ಷ ಕೊರೊನಾ ಲಸಿಕೆ ಗಿಫ್ಟ್

    ನವದೆಹಲಿ: ಕೊರೊನಾ ಮಾಹಾಮಾರಿಗೆ ಲಸಿಕೆ ಕಂಡು ಹಿಡಿದಿರುವ ಭಾರತ ಹಲವು ದೇಶಗಳಿಗೆ ಈಗಾಗಲೇ ಲಸಿಕೆಯನ್ನು ನೀಡಿ ಸಹಾಯ ಮಾಡಿದೆ. ಇದೀಗ ಭಾರತೀಯ ಸೇನೆ, ನೇಪಾಳದ ಸೇನೆಗೆ 1 ಲಕ್ಷ ಡೋಸ್ ಲಸಿಕೆಯನ್ನು ಉಡುಗೊರೆಯಾಗಿ ನೀಡಿದೆ.

    ಭಾರತದ ಪಕ್ಕದ ರಾಷ್ಟ್ರವಾಗಿರುವ ನೇಪಾಳ ಕೊರೊನಾದಿಂದಾಗಿ ನಲುಗಿ ಹೋಗಿತ್ತು. ಹಾಗಾಗಿ ಭಾರತೀಯ ಸೇನೆ ತ್ರಿಭುವನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್‍ನಲ್ಲಿ ಕೋವಿಡ್ ಲಸಿಕೆಯನ್ನು ನೇಪಾಳದ ಸೇನೆಗೆ ಗಿಫ್ಟ್ ಆಗಿ ನೀಡಿದೆ. ಈ ಮೂಲಕ ಭಾರತ ಮತ್ತು ನೇಪಾಳದ ಸಂಬಂಧ ಇನ್ನಷ್ಟು ಗಟ್ಟಿಗೊಂಡಂತಾಗಿದೆ.

    ಭಾರತದ ಸೇನೆ ನೇಪಾಳದ ಸೇನೆಗೆ ಉಡುಗೊರೆಯಾಗಿ ಲಸಿಕೆಯನ್ನು ನೀಡಿರುವ ಕುರಿತು ಭಾರತೀಯ ರಾಯಭಾರ ಕಚೇರಿ ಟ್ಟಿಟ್ಟರ್‍ ನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ತಿಳಿಸಿದೆ. ಈ ಮೊದಲು ಚೀನಾ ನೇಪಾಳಕ್ಕೆ 8 ಲಕ್ಷ ಲಸಿಕೆ ನೀಡಿತ್ತು.

  • ಕೊರೋನಾ ವ್ಯಾಕ್ಸಿನ್‌ ಪಡೆದ ಸಿದ್ದರಾಮಯ್ಯ

    ಕೊರೋನಾ ವ್ಯಾಕ್ಸಿನ್‌ ಪಡೆದ ಸಿದ್ದರಾಮಯ್ಯ

    ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಂಡರು.
    Leader of Opposition siddaramaiah takes covid vaccine at Victoria hospital in Bengaluru
  • ಕೋವಿಡ್‌ ಲಸಿಕೆ – ನಿಮ್ಮ ಗೊಂದಲಗಳಿಗೆ ಇಲ್ಲಿದೆ ಉತ್ತರ

    ಕೋವಿಡ್‌ ಲಸಿಕೆ – ನಿಮ್ಮ ಗೊಂದಲಗಳಿಗೆ ಇಲ್ಲಿದೆ ಉತ್ತರ

    ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 16ರಂದು ಕೋವಿಡ್‌ ಲಸಿಕೆ ನೀಡುವ ಮಹಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋವಿಡ್‌ ಲಸಿಕೆ ಪ್ರಶ್ನೋತ್ತರಗಳನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ಜನಸಾಮಾನ್ಯರ ಮನದಲ್ಲಿರುವ ಗೊಂದಲದ ನಿವಾರಣೆಗೆ ಮುಂದಾಗಿದೆ. ಈ ಲಸಿಕೆಯ ಬಗ್ಗೆ ನಿಮಗೆ ಯಾವುದಾದರೂ ಅನುಮಾನವಿದ್ದರೆ ಅದನ್ನು ಈ ವೀಡಿಯೋ ನೋಡಿ ಬಗೆಹರಿಸಿಕೊಳ್ಳಿ.

  • ಕೊರೊನಾ ಲಸಿಕೆಯಿಂದ ತಲೆನೋವು – ವ್ಯಕ್ತಿಯ ವಿರುದ್ಧ 100 ಕೋಟಿ ಕೇಸ್‌ ಹೂಡಿದ ಸೀರಂ

    ಕೊರೊನಾ ಲಸಿಕೆಯಿಂದ ತಲೆನೋವು – ವ್ಯಕ್ತಿಯ ವಿರುದ್ಧ 100 ಕೋಟಿ ಕೇಸ್‌ ಹೂಡಿದ ಸೀರಂ

    ನವದೆಹಲಿ: ಕೋವಿಶೀಲ್ಡ್‌ ಕೋವಿಡ್‌ ಲಸಿಕೆ ಪಡೆದ ಬಳಿಕ ಆರೋಗ್ಯ ಸಮಸ್ಯೆಯಾಗಿದೆ ಎಂದು ದೂಷಿಸಿದ ವ್ಯಕ್ತಿಯ ವಿರುದ್ಧ ಸೀರಂ ಇನ್‌ಸ್ಟಿಟ್ಯೂಟ್‌ 100 ಕೋಟಿ ರೂ. ಮಾನನಷ್ಟ ಕೇಸ್‌ ಹೂಡಿದೆ.

    ಚೆನ್ನೈ ಮೂಲದ 40 ವರ್ಷದ ಸ್ವಯಂಸೇವಕರೊಬ್ಬರು ಕೋವಿಶೀಲ್ಡ್‌ ಲಸಿಕೆಯನ್ನು ಪಡೆದುಕೊಂಡಿದ್ದರು. ಲಸಿಕೆ ಪಡೆದ ಬಳಿಕ ನನಗೆ ತಲೆ ಸಿಡಿತ ಕಾಣಿಸಿಕೊಂಡಿದೆ. ಹೀಗಾಗಿ ನನಗೆ ಸೀರಂ ಸಂಸ್ಥೆ 5 ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು.

    ಈ ವಿಚಾರಕ್ಕೆ ಪ್ರತಿಕ್ರಿಯಿಸಿದರುವ ಸೀರಂ ಕಂಪನಿ ಲಸಿಕೆ ಪರೀಕ್ಷೆಗೆ ಒಳಗಾದ ಸ್ವಯಂಸೇವಕನ ಆರೋಗ್ಯ ಸ್ಥಿತಿಗೂ ಕೋವಿಡ್‌ ಲಸಿಕೆಗೆ ಯಾವುದೇ ಸಂಬಂಧವಿಲ್ಲ. ಇದು ದೂರುದ್ದೇಶಪೂರಿತ ಆರೋಪವಾಗಿದ್ದು ತನ್ನ ಆರೋಗ್ಯ ಸಮಸ್ಯೆಗೆ ಈ ಲಸಿಕೆಯನ್ನು ದೂಷಿಸುತ್ತಿದ್ದಾನೆ ಎಂದು ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

    ಸುಳ್ಳು ಆರೋಪ ಮಾಡಿ ಸಂಸ್ಥೆಯ ಘನತೆಗೆ ಧಕ್ಕೆ ತಂದಿದ್ದಕ್ಕೆ ಸೀರಂ ಕಂಪನಿ 100 ಕೋಟಿ ರೂ. ಕ್ರಿಮಿನಲ್‌ ಮಾನನಷ್ಟ ಕೇಸ್‌ ಹೂಡಿದ್ದು ಇಂದು ಸ್ವಯಂಸೇವಕನಿಗೆ ನೋಟಿಸ್‌ ಜಾರಿಯಾಗುವ ಸಾಧ್ಯತೆಯಿದೆ.

    ಸೀರಂ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ವಿಶ್ವ ಪ್ರಸಿದ್ಧ ಸಂಸ್ಥೆಯ ವಿರುದ್ಧ ಹಣ ಪಡೆಯಲು ಸುಳ್ಳು ಆರೋಪ ಮಾಡಿದ್ದಾನೆ. ಸ್ವಯಂಸೇವಕನ ಮೇಲೆ ಈಗಾಗಲೇ ಪ್ರಯೋಗ ನಡೆಸಿ ಹಲವು ದಿನಗಳು ನಡೆದಿದೆ. ಈಗ ಸಂಪೂರ್ಣವಾಗಿ ಚೇತರಿಕೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.

    ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ (ಐಸಿಎಂಆರ್‌)  ಹಿರಿಯ‌ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಸ್ವಯಂಸೇವಕನ ಆರೋಪದ ಹಿನ್ನೆಲೆಯಲ್ಲಿ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ಸ್ವಯಂ ಸೇವಕನ ಆರೋಗ್ಯ ಸಮಸ್ಯೆಗೂ ಲಸಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

    ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಜೊತೆಯಾಗಿ ಕೋವಿಶೀಲ್ಡ್‌ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು, ಪುಣೆಯ ಸೀರಂ ಇನ್‌ಸ್ಟಿಟ್ಯೂಟ್‌ನಲ್ಲಿ ತಯಾರಾಗುತ್ತಿದೆ.