– ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸಿ ಕೃತಜ್ಞ ವಾಹನಕ್ಕೆ ಚಾಲನೆ – ಹುತಾತ್ಮ ಆರೋಗ್ಯ ಕಾರ್ಯಕರ್ತರ ಮಕ್ಕಳಿಗೆ 2 ಲಕ್ಷ ರೂ. ವಿದ್ಯಾರ್ಥಿ ವೇತನ
ಬೆಂಗಳೂರು: ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅವರ ಋಣ ಎಲ್ಲರ ಮೇಲೂ ಇದೆ ಎಂದು ನಟ ರಮೇಶ್ ಅರವಿಂದ್ ಹೇಳಿದ್ದಾರೆ.
ಕಾವೇರಿ ಆಸ್ಪತ್ರೆ ವತಿಯಿಂದ ಟೆನ್ನಿಸ್ ಅಸೋಸಿಯೇಷನ್‍ನಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಹಾಗೂ ಕೃತಜ್ಞಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 2 ವರ್ಷದಿಂದ ವಿಶ್ವಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ವಾರಿಯರ್ಸ್‍ಗಳಿಂದ ಇಂದು ನಾವೆಲ್ಲಾ ಜೀವಿಸುತ್ತಿದ್ದೇವೆ. ತಾಯಿಯ ಋಣದಂತೆ ಕೋವಿಡ್ ವಾರಿಯರ್ಸ್‍ಗಳ ಋಣ ತೀರಿಸುವುದು ಅಸಾಧ್ಯ. ಕಾವೇರಿ ಆಸ್ಪತ್ರೆ ವತಿಯಿಂದ ಕೃತಜ್ಞಾ ಕಾರ್ಯಕ್ರಮದ ಭಾಗವಾಗಿ ನಗರದಲ್ಲಿರುವ ಎಲ್ಲಾ ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿ ಪ್ರಶಸ್ತಿ ನೀಡುವ ಸಾರ್ಥಕ ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಎಂದಿದ್ದಾರೆ.
ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕರ ನಿರ್ದೇಶಕ ವಿಜಯ ಭಾಸ್ಕರನ್ ಮಾತನಾಡಿ, ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಕೃತಜ್ಞಾ ಕಾರ್ಯಕ್ರಮವನ್ನು ಜುಲೈ 31ರಂದು ಹಮ್ಮಿಕೊಂಡಿದ್ದೇವೆ. ಇದರ ಭಾಗವಾಗಿ ಇಂದಿನಿಂದ 5 ವಾಹನಗಳಲ್ಲಿ ನಗರದಲ್ಲಿರುವ 300ಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತೆರಳಲಿರುವ ನಮ್ಮ ತಂಡವು ಕೋವಿಡ್ ವಾರಿಯರ್ಸ್‍ಗಳನ್ನು ಅಲ್ಲಿಯೇ ಸನ್ಮಾನಿಸಿ ಪ್ರಶಸ್ತಿ ನೀಡಲಿದೆ. ಇದರ ಜೊತೆಗೆ ಕೋವಿಡ್ ಚಿಕಿತ್ಸೆಗಾಗಿ ಹೊಸ ಆವಿಷ್ಕಾರ ಮಾಡಿದ ಆಸ್ಪತ್ರೆಗಳಿಗೆ ವಿಶೇಷ ಕ್ಯಾಟಗರಿಯಲ್ಲಿ ಪಶಸ್ತಿ ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಶಿಕ್ಷಣ ಹಾಗೂ ಉದ್ಯೋಗದ ಭರವಸೆ:
ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ವಾರಿಯರ್ಸ್ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶ 2 ಲಕ್ಷದವರೆಗೆ ವಿದ್ಯಾರ್ಥಿ ವೇತನ ಹಾಗೂ ಪದವೀದರ ಮಕ್ಕಳಿಗೆ ಉದ್ಯೋಗ ಕೊಡಿಸಲು ಮುಂದಾಗಿದ್ದೇವೆ. ಸಂಬಂಧಪಟ್ಟ ಕುಟುಂಬಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.
5 ಕೃತಜ್ಞಾ ವಾಹನಗಳಿಗೆ ಚಾಲನೆ:
ಇಂದಿನಿಂದ 12 ದಿನಗಳ ಕಾಲ 5 ಕೃತಜ್ಞಾ ವಾಹನಗಳಲ್ಲಿ ತೆರಳಲಿರುವ ಕಾವೇರಿ ಆಸ್ಪತ್ರೆಯ ತಂಡವರು, 300 ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಸನ್ಮಾನ ಮಾಡಲಿದ್ದಾರೆ. ಮೊದಲ ದಿನದಂದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಅಲ್ಲಿನ ಸಿಬ್ಬಂದಿಗೆ ಸನ್ಮಾನ ಮಾಡಿದರು. ಇಂದು ಆ ವಾಹನಗಳಿಗೆ ನಟ ರಮೇಶ್ ಅರವಿಂದ್ ಅವರು ಚಾಲನೆ ನೀಡಿದರು. ಈ ವೇಳೆ ಕಾವೇರಿ ಆಸ್ಪತ್ರೆ ನಿರ್ದೇಶಕ ಡಾ. ವಿಲ್ಫೆಂಡ್ ಸ್ಯಾಮ್ಸನ್ ಉಪಸ್ಥಿತರಿದ್ದರು. ಇದನ್ನೂ ಓದಿ: ಪಡಿತರ ಅಕ್ಕಿ ಕಳ್ಳ ಸಾಗಾಣಿಕೆ – ವಾಹನ ಸಮೇತ ಓರ್ವನ ಬಂಧನ
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಕಾರ್ಯಯೋಜನೆಯನ್ನು ರೂಪಿಸಿದ್ದು, ಜೂನ್ ಮಾಸಾಂತ್ಯದೊಳಗೆ ವ್ಯಾಕ್ಸಿನೇಶನ್ ಕಾರ್ಯವು ಒಂದು ಹಂತಕ್ಕೆ ಬರಲಿದೆ. ಜುಲೈ ಮಾಸಾಂತ್ಯದೊಳಗೆ ಯಶವಂತಪುರ ಕ್ಷೇತ್ರವು ಶೇಕಡಾ ನೂರು ವ್ಯಾಕ್ಸಿನೇಶನ್ ಪಡೆದ ಕ್ಷೇತ್ರವಾಗಲಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಂದ ವೈಯಕ್ತಿಕವಾಗಿ ಕೊಡಮಾಡುವ 1 ಲಕ್ಷ ರೂಪಾಯಿ ಸಹಾಯಧನವನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವ್ಯಾಕ್ಸಿನೇಶನ್‌ಗೆ ಸಂಬಂಧಪಟ್ಟಂತೆ ಗೊಂದಲಗಳು ಬಗೆಹರಿದಿವೆ. ಕೆಲವರು ವೃಥಾ ಆರೋಪಗಳನ್ನು ಮಾಡಿದರು, ಕೊರತೆ ಇದೆ ಎಂದೆಲ್ಲ ಹೇಳಿದರು. ಆದರೆ, ಎಲ್ಲವೂ ಸರಿ ಇದ್ದು, ನಾಳೆಯಿಂದಲೇ 1 ವಾರ್ಡ್ ಗೆ 1 ಸಾವಿರ ಜನರಿಗೆ ವ್ಯಾಕ್ಸಿನೇಶನ್ ಮಾಡುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. 18ರಿಂದ 45 ವರ್ಷದವರಿಗೂ ಲಸಿಕೆ ಲಭ್ಯವಾಗಲಿದೆ ಎಂದರು.
ವ್ಯಾಕ್ಸಿನೇಶನ್ ಬಗ್ಗೆಯ ತಪ್ಪು ಕಲ್ಪನೆ ದೂರ ಮಾಡಿಕೊಳ್ಳಿ: ವ್ಯಾಕ್ಸಿನೇಶನ್ ಬಗ್ಗೆ ಅನೇಕ ಗೊಂದಲಗಳು, ತಪ್ಪು ಕಲ್ಪನೆಗಳು ಮೂಡಿದ್ದು, ಇದನ್ನು ಎಲ್ಲರೂ ದೂರ ಮಾಡಿಕೊಳ್ಳಬೇಕು. ಜ್ವರ ಬರಲಿದೆ, ತಲೆನೋವು ಬರಲಿದೆ ಹೀಗೆ ಏನೆಲ್ಲ ಹೇಳಲಾಗುತ್ತದೆ. ಆದರೆ, ಇದು ಎಲ್ಲರಿಗೂ ಆಗುವುದಿಲ್ಲ. ಒಂದು ವೇಳೆ ಜ್ವರ ಬಂದರೂ ಸಹ ಅದಕ್ಕೆ ವೈದ್ಯರು ಮಾತ್ರೆಯನ್ನು ಕೊಟ್ಟು ಕಳುಹಿಸುತ್ತಾರೆ. ಇಂದು ದೇಶದಲ್ಲಿ ಕೋಟ್ಯಂತರ ಜನ ವ್ಯಾಕ್ಸಿನೇಶನ್ ಪಡೆದಿದ್ದಾರೆ. ಹಾಗಾಗಿ ಭಯ ಬೇಡ. ಇನ್ನು ವ್ಯಾಕ್ಸಿನೇಶನ್ ಸಿಗದು ಎಂಬ ಭಯ, ಆತಂಕ ಯಾರಿಗೂ ಬೇಡ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು. ಇದನ್ನೂ ಓದಿ: ‘ನುಡಿದಂತೆ ನಡೆದವನ ಅಡಿಗೆನ್ನ ನಮನ’ ವಾಕ್ಯ ಸೋಮಶೇಖರ್ಗೆ ಅನ್ವರ್ಥ: ಕಟೀಲ್
ಚಿಕಿತ್ಸೆ ಪಡೆಯುವುದೊಂದೇ ಇದಕ್ಕೆ ಪರಿಹಾರ: ಕೊರೋನಾ ಎರಡನೇ ಅಲೆ ವಿಪರೀತವಾಗಿದೆ. ಇದರಿಂದ ಸಾವು-ನೋವಿನ ಪ್ರಮಾಣ ಹೆಚ್ಚಿವೆ. ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಸಹ ನಿಯಂತ್ರಣ ಕಷ್ಟವಾಗಿದೆ. ನನ್ನ ಕ್ಷೇತ್ರದಲ್ಲಿಯೇ ಸುಮಾರು ಏಳೂವರೆ ಸಾವಿರ ಸೋಂಕು ಪ್ರಕರಣಗಳು ದಾಖಲಾಗಿದ್ದವು. ಅವರಲ್ಲಿ ಆರೂವರೆ ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ಯಾರೂ ಧೈರ್ಯಗೆಡಬಾರದು ಚಿಕಿತ್ಸೆ ಪಡೆಯುವುದೊಂದೇ ಇದಕ್ಕೆ ಪರಿಹಾರ ಎಂದರು.
ಸೋಂಕಿನ ಲಕ್ಷಣಗಳು ಕಂಡಕೂಡಲೇ ವೈದ್ಯರ ಬಳಿ ಚಿಕಿತ್ಸೆ ಪಡೆದು, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಸೋಂಕು ತಗುಲಿದ್ದರೆ, ಕೂಡಲೇ ಟ್ರಯಾಜ್ ಸೆಂಟರ್ ಗಳಿಗೆ ಭೇಟಿ ಕೊಟ್ಟರೆ, ಅಲ್ಲಿರುವ ವೈದ್ಯರು ಸೋಂಕಿನ ತೀವ್ರತೆ, ಯಾವ ರೀತಿಯ ಚಿಕಿತ್ಸೆ ಅವಶ್ಯಕತೆ ಇದೆ, ಮನೆಯಲ್ಲಿದ್ದರೆ ಸಾಕೇ? ಕೋವಿಡ್ ಕೇರ್ ಸೆಂಟರ್‌ಗೆ ಬರಬೇಕೇ? ಆಕ್ಸಿಜನ್ ಬೆಡ್ ಅವಶ್ಯಕತೆ ಇದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಕೊಡುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.
ಮನೆಯತ್ತ ವೈದ್ಯರು: ಕೋವಿಡ್ ನಿಯಂತ್ರಣ ಮಾಡಲೇಬೇಕೆಂಬ ನಿಟ್ಟಿನಲ್ಲಿ ನಮ್ಮ ಕ್ಷೇತ್ರದಲ್ಲಿ ವೈದ್ಯರ ತಂಡದೊಂದಿಗೆ ಸಾಕಷ್ಟು ಶ್ರಮಿಸಲಾಗುತ್ತಿದೆ. ಹೀಗಾಗಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು, ಹಳ್ಳಿಗಳ ಮನೆ ಮನೆಗೆ ಭೇಟಿ ನೀಡುತ್ತಿದ್ದು, ಲಕ್ಷಣಗಳು ಕಂಡು ಬಂದರೆ ಅಲ್ಲಿಯೇ ಟೆಸ್ಟ್ ಮಾಡಿ, ಚಿಕಿತ್ಸೆ ಕೊಡಿಸುವ ಕೆಲಸವನ್ನೂ ಮಾಡಲಾಗುತ್ತಿದೆ ಎಂದರು.
ಸೋಂಕಿತರ ಸಂಖ್ಯೆ ಇಳಿಮುಖ: ಯಶವಂತಪುರ ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಮುಖ ಕಂಡಿದೆ. ಸಾವಿನ ಪ್ರಮಾಣದಲ್ಲೂ ಕಡಿಮೆಯಾಗುತ್ತಿದೆ. ಹೀಗಾಗಿ ಚಿಕಿತ್ಸೆ ಪಡೆದು ಎಲ್ಲರೂ ಗುಣಮುಖರಾಗಬೇಕು. ಜೊತೆಗೆ ವ್ಯಾಕ್ಸಿನೇಶನ್ ಪಡೆದುಕೊಳ್ಳಬೇಕು ಎಂದು ಸಚಿವ ಎಸ್.ಟಿ.ಸೋಮಶೇಖರ್ ಕಿವಿಮಾತು ಹೇಳಿದರು. ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್ ಸೇರಿದಂತೆ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಸೇರ್ಪಡೆಗೊಂಡ ಅರುಣ್ ಕುಮಾರ್: ಹೆಮ್ಮಿಗೆಪುರ ವಾರ್ಡ್ 198ರ ತಲಘಟ್ಟಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಅರುಣ್ ಕುಮಾರ್ ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇದೇ ವೇಳೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಂದ 198 ಹೆಮ್ಮಿಗೆಪುರ ವಾರ್ಡ್ ಪಡಿತರ ಕಿಟ್ ವಿತರಣೆಗೆ ಚಾಲನೆ ನೀಡಲಾಯ್ತು.
24 ಕುಟುಂಬಗಳಿಗೆ 1 ಲಕ್ಷ ರೂ. ಸಹಾಯಧನ ವಿತರಣೆ: ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಸಚಿವರಾದ ಸೋಮಶೇಖರ್ ಅವರು 1 ಲಕ್ಷ ರೂಪಾಯಿಗಳ ವೈಯಕ್ತಿಕ ಧನಸಹಾಯವನ್ನು ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ವಿತರಣೆ ಮಾಡಿದರು. ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಮಂದಿಗೆ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6 ಮಂದಿ ಹಾಗೂ ನೆಲಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಮಂದಿಯ ಆರ್ಥಿಕವಾಗಿ ಹಿಂದುಳಿದವರ ಕುಟುಂಬ ವರ್ಗದವರಿಗೆ ಸಹಾಯಧನವನ್ನು ಸಚಿವರು ವಿತರಿಸಿದರು. ಈ ಮೂಲಕ ಒಟ್ಟು 24 ಕುಟುಂಬಗಳಿಗೆ ಭಾನುವಾರ ವೈಯಕ್ತಿಕವಾಗಿ 1 ಲಕ್ಷ ರೂಪಾಯಿಗಳ ಸಹಾಯಧನವನ್ನು ಸಚಿವರು ವಿತರಣೆ ಮಾಡಿದರು.
ಕೊರೋನಾ ವಾರಿಯರ್ಸ್ ಗಳಿಗೆ ಪ್ರೋತ್ಸಾಹಧನ ವಿತರಣೆ: ಸೋಮನಹಳ್ಳಿ, ತರಳು, ನೆಲಗುಳಿ ಗ್ರಾಮ ಪಂಚಾಯಿತಿಗಳ ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಹಾಗೂ ವಾಟರ್ ಮನ್ ಗಳಿಗೆ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ಪ್ರೋತ್ಸಾಹಧನ ಮತ್ತು ಪಡಿತರ ಕಿಟ್ ವಿತರಣೆ ಮಾಡಲಾಯಿತು. ಕಗ್ಗಲಿಪುರ ಗ್ರಾಮ ಪಂಚಾಯಿತಿ ವತಿಯಿಂದ ಕೊರೋನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ಆಸ್ಪತ್ರೆ ಸಿಬ್ಬಂದಿಗೆ 5 ಸಾವಿರ ರೂಪಾಯಿ ಪ್ರೋತ್ಸಾಹಧನ, ರೇಷನ್ ಕಿಟ್‌ಗಳನ್ನು ವಿತರಿಸಲಾಯಿತು.
ಪಟ್ಟರೆಡ್ಡಿಪಾಳ್ಯದಲ್ಲಿ ಮಕ್ಕಳಿಗೆ ಪ್ರೋತ್ಸಾಹಧನ: ಪಟ್ಟರೆಡ್ಡಿಪಾಳ್ಯದ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ವತಿಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರ ಶಿಬಿರ ಕಚೇರಿಯಲ್ಲಿ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಇದೇ ವೇಳೆ, ಸದಸ್ಯರಿಗೆ ನಂದಿನಿ ತುಪ್ಪವನ್ನು ವಿತರಣೆ ಮಾಡಲಾಯಿತು.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ವಾರಿಯರ್ಸ್ ಸರ್ಕಾರದ ವಿರುದ್ಧ ಸಿಡಿದೆದ್ದು, ಮೌನ ಪ್ರತಿಭಟನೆಗೆ ಇಳಿದಿದ್ದಾರೆ.
ಕಳೆದ ಹದಿನೈದು ದಿನದಿಂದ ಕೋವಿಡ್ ವಾರಿಯರ್ಸ್ ಪ್ರತಿಭಟನೆ ಮಾಡುತ್ತಿದ್ದಾರೆ. ಸೋಮವಾರ ರಾತ್ರಿ ನಗರದ ಬೆಂಗಳೂರು ಮೆಡಿಕಲ್ ಕಾಲೇಜ್ ವಿಕ್ಟೋರಿಯಾ ಆವರಣದಲ್ಲಿ ವೈದ್ಯಕೀಯ ಸಿಬ್ಬಂದಿ ಮೇಣದ ಬತ್ತಿ ಹಿಡಿದು ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು. ಜೊತೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದಾರೆ.
ಖಾಯಂ ನೌಕರರಿಗೆ ವೇತನ ಹೆಚ್ಚಳ, ಮೂಲಭೂತ ಸೌಕರ್ಯ, ಪಿಂಚಣಿ ವ್ಯವಸ್ಥೆ ಸೇರಿದಂತೆ ಅನೇಕ ಬೇಡಿಕೆಯನ್ನು ಮುಂದಿಟ್ಟು ರಾತ್ರಿ ಆಸ್ಪತ್ರೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಕಿಮ್ಸ್ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ
ಇತ್ತ ಹುಬ್ಬಳ್ಳಿಯಲ್ಲಿ ಎನ್‍ಪಿಎಸ್ ಸೌಲಭ್ಯ ಸೇರಿದಂತೆ ಜ್ಯೋತಿ ಸಂಜೀವಿನಿ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಸಿಬ್ಬಂದಿ ಸೋಮವಾರ ಸಂಜೆ ಕೂಡ ಕಪ್ಪು ಪಟ್ಟಿ ಧರಿಸಿ, ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯವನ್ನು ನಮಗೂ ನೀಡಿ ಎಂದು ಒತ್ತಾಯಿಸಿದರು. ಅಲ್ಲದೇ ವೈದ್ಯಕೀಯ ವಿದ್ಯಾಲಯದಲ್ಲಿ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಾರತಮ್ಯವನ್ನು ನಿಭಾಯಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ವಾರಿಯರ್ಸ್ ಗೆ ಮನೆ ಮಾಲೀಕರು ಕಿರಿಕ್ ಮಾಡುತ್ತಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿದ್ದು, ಇದರ ಬೆನ್ನಲ್ಲೇ ಇದೀಗ ಅವರಿಗೆ ಉಚಿತ ರೋ ವ್ಯವಸ್ಥೆಯಾಗಿದೆ.
ಹೌದು. ಕೋವಿಡ್ ವಾರಿಯರ್ಸ್ ಗೆ ಮನೆ ಮಾಲೀಕರು ಕಿರಿಕ್ ಮಾಡುತ್ತಿರೋ ಸುದ್ದಿಯನ್ನು ಪಬ್ಲಿಕ್ ಟಿವಿ ಬಿತ್ತರಿಸಿದ ಬೆನ್ನಲ್ಲೆ ಕೋರಮಂಗಲ ದ ಡಿ ಓರಿಯಲ್ ಹೋಟೆಲ್ ಮಾಲೀಕ ಮುರುಳಿ ಕೃಷ್ಣ ಅಷ್ಟು ಜನ ವಿಕ್ಟೋರಿಯಾ ನರ್ಸ್ ಗಳಿಗೆ ವೈದ್ಯರುಗಳಿಗೆ ಉಚಿತ ರೂಂನ ವ್ಯವಸ್ಥೆ ಮಾಡಿದ್ದಾರೆ.
ವಿಕ್ಟೋರಿಯಾದಲ್ಲಿ ಕೋವಿಡ್ ವಾರ್ಡಿನಲ್ಲಿ ಸೇವೆ ಸಲ್ಲಿಸೋ ನರ್ಸ್ ಗಳು ಈ ಹೋಟೆಲ್ ನಲ್ಲಿ ಸ್ಟೇ ಆಗಿರುತ್ತಾರೆ. ಸತತ ಒಂದು ವಾರ ಸೇವೆ ಸಲ್ಲಿಸಿ ಈ ಹೋಟೆಲ್ ನಲ್ಲಿ ಕ್ವಾರಂಟೈನ್ ಆದ ಬಳಿಕ ಮತ್ತೆ ಸೇವೆಗೆ ಹೋಗುವಾಗ ಹೌ ಈಸ್ ದ ಜೋಷ್ ಅಂತ ಹೇಳಿಕೊಂಡು ತಮ್ಮನ್ನು ತಾವು ಹುರಿದುಂಬಿಸಿಕೊಂಡು ಸೇವೆಗೆ ತೆರಳಿದ್ದಾರೆ.