Tag: COVIDE

  • ಎಚ್‌.ಡಿ.ದೇವೇಗೌಡರಿಗೆ ಕೊರೊನಾ ದೃಢ

    ಎಚ್‌.ಡಿ.ದೇವೇಗೌಡರಿಗೆ ಕೊರೊನಾ ದೃಢ

    ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಶುಕ್ರವಾರ ಸಂಜೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಸದ್ಯ ಅವರಿಗೆ ಅಲ್ಪ ಪ್ರಮಾಣದ ರೋಗ ಲಕ್ಷಣ ಕಂಡು ಬಂದಿದೆ. ನಿನ್ನೆ ರಾತ್ರಿ ದೇವೇಗೌಡರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.  ಸೋಂಕಿನ ಗುಣಲಕ್ಷಣ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ನಿನ್ನೆ ಬೆಳಗ್ಗೆ ಸ್ವಲ್ಪ ನೆಗಡಿ, ಕೆಮ್ಮು ಕಂಡುಬಂದ ಹಿನ್ನೆಲೆಯಲ್ಲಿ ಮಧ್ಯಾಹ್ನ ಕೊರೊನಾ ಟೆಸ್ಟ್‍ಗೆ ಕೊಟ್ಟಿದ್ದರು. ಸಂಜೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈಗ ದೇವೇಗೌಡರು ಆರಾಮಾಗಿ ಇದ್ದಾರೆ. ಯಾವುದೇ ತೊಂದರೆ ಇಲ್ಲ.

    ಇತ್ತೀಚೆಗೆ ಸಚಿವರು ಸೇರಿದಂತೆ ವಿವಿಧ ಪಕ್ಷದ ಮುಖಂಡರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 24747 ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಇದುವರೆಗೂ 6 ಕೋಟಿ ಕೊವಿಡ್‌ ಟೆಸ್ಟ್‌ ಆಗಿದ್ದು, ದೇಶದಲ್ಲಿ ಅತಿಹೆಚ್ಚು ಕೊವಿಡ್ ಟೆಸ್ಟ್ ಮಾಡಿದ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನ ಪಡೆದಿದೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ