Tag: covovax

  • 7 ರಿಂದ 11 ವರ್ಷದ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದನೆಗೆ ಶಿಫಾರಸು

    7 ರಿಂದ 11 ವರ್ಷದ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದನೆಗೆ ಶಿಫಾರಸು

    ನವದೆಹಲಿ: 7 ರಿಂದ 11 ವರ್ಷದ ಮಕ್ಕಳಿಗೆ ಸೆರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಕೇಂದ್ರಿಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಎಸ್‍ಇಸಿ) ತಜ್ಞರ ತಂಡ ಶಿಫಾರಸು ಮಾಡಿದೆ.

    7 ರಿಂದ 11 ವರ್ಷದ ಮಕ್ಕಳಿಗೆ ಕೋವೊವ್ಯಾಕ್ಸ್ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಎರಡು ಅರ್ಜಿಗಳನ್ನು ಸೀರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‍ಎಸ್‍ಐ) ಸಲ್ಲಿಸಿತ್ತು. ಈ ಅರ್ಜಿ ಸಲ್ಲಿಕೆಯ ಬಳಿಕ ತಜ್ಞರ ಸಮಿತಿ ಮತ್ತಷ್ಟು ಮಾಹಿತಿ ನೀಡುವಂತೆ ಸೀರಮ್ ಕಂಪನಿಗೆ ಸೂಚಿಸಿತ್ತು. ಇದನ್ನೂ ಓದಿ: ವೃದ್ಧೆಯ ಹೊಟ್ಟೆ ಕೊಯ್ದು ಹಾಗೆ ಬಿಟ್ಟ – ವೈದ್ಯನ ಯಡವಟ್ಟಿಗೆ ವೃದ್ಧೆ ನರಳಾಟ

    vaccine

    ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಈ ಹಿಂದೆ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು. ಆ ಬಳಿಕ 2022ರ ಮಾರ್ಚ್ 16 ರಿಂದ ಕೋವೊವ್ಯಾಕ್ಸ್ ತುರ್ತು ಬಳಕೆ ಆರಂಭಿಸಲಾಗಿತ್ತು. ಇದನ್ನೂ ಓದಿ: ಫಿಫಾ ವಿಶ್ವಕಪ್ ವೇಳೆ ಸೆಕ್ಸ್‌ ಮಾಡಿದ್ರೆ 7 ವರ್ಷ ಜೈಲು!

    ಇದೀಗ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. 2 ಡೋಸ್ ಲಸಿಕೆ ಪಡೆದುಕೊಂಡವರು ಇದೀಗ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ. 18 ವರ್ಷ ಮೇಲ್ಪಟ್ಟವರು ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಎಪ್ರಿಲ್ 10 ರಿಂದ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

    Live Tv

  • 12-17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆಗೆ ಅನುಮೋದನೆ

    12-17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆಗೆ ಅನುಮೋದನೆ

    ನವದೆಹಲಿ: 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಭಾರತದ ಸೇರಂ ಇನ್‌ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ನೀಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (NTAGI) ಅನುಮೋದನೆ ನೀಡಿದೆ ಎಂದು ಮೂಲಗಳಿಂದ ವರದಿಯಾಗಿದೆ.

    ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತಜ್ಞರು ಸೇರಂ ಇನ್‌ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಈ ಮೊದಲೇ ಅನುಮತಿ ನೀಡಿದ್ದರು. ಇದೀಗ ಎಲ್ಲಾ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ನೀಡಿರುವ ಬಗ್ಗೆ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಐಐಟಿಯಲ್ಲೂ ಹೆಚ್ಚಿದ ಸೋಂಕು

    ಕೋವೊವ್ಯಾಕ್ಸ್ ಲಸಿಕೆ 12 ವರ್ಷದಿಂದ ಮೇಲ್ಪಟ್ಟ ಮಕ್ಕಳಿಗೆ ನೀಡುವ ಕುರಿತಾಗಿ ಕೇಂದ್ರ ಆರೋಗ್ಯ ಇಲಾಖೆ ಚಿಂತನೆ ನಡೆಸಿತ್ತು. ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ 900 ರೂ. ಒಂದು ಡೋಸ್ ಲಸಿಕೆಗೆ ದರ ನಿಗದಿ ಪಡಿಸಲಾಗಿದೆ. ಆದರೆ ಸರ್ಕಾರದಿಂದ ಯಾವುದೇ ದರ ನಿಗದಿಯಾಗಿಲ್ಲ. ಇದನ್ನೂ ಓದಿ: 6 ವರ್ಷದ ಮಗುವಿನೊಂದಿಗೆ ವೇಳಾಪಟ್ಟಿ ಒಪ್ಪಂದ ಮಾಡಿಕೊಂಡ ಅಪ್ಪ

    ಈ ಹಿಂದೆ ನೋವೊವ್ಯಾಕ್ಸ್ ಲಸಿಕೆ ಮಕ್ಕಳಿಗೆ 80% ಪರಿಣಾಮಕಾರಿ ಎಂದು ವರದಿಯಾಗಿತ್ತು. ಇದೀಗ ಕೊನೆಯ ಹಂತದ ಟೆಸ್ಟ್ ನಡೆಯುತ್ತಿದೆ. ಈ ಮಧ್ಯೆ ಇದೀಗ ಕೋವೊವ್ಯಾಕ್ಸ್ ಲಸಿಕೆಗೆ ಅನುಮತಿ ದೊರೆತಿದೆ.

  • 2 ಕೋವಿಡ್‌ ಲಸಿಕೆ, ಮೊಲ್ನುಪಿರವಿರ್‌ ಮಾತ್ರೆ ತುರ್ತು ಬಳಕೆಗೆ ಶಿಫಾರಸು

    2 ಕೋವಿಡ್‌ ಲಸಿಕೆ, ಮೊಲ್ನುಪಿರವಿರ್‌ ಮಾತ್ರೆ ತುರ್ತು ಬಳಕೆಗೆ ಶಿಫಾರಸು

    ನವದೆಹಲಿ: ಕೋವಿಡ್‌-19 ವಿರುದ್ಧದ ಎರಡು ಲಸಿಕೆಗಳು ಹಾಗೂ ಮಾತ್ರೆಯ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಅನುಮತಿ ನೀಡಲು ಶಿಫಾರಸು ಮಾಡಿದೆ.

    ಸೆರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಕೋವೊವ್ಯಾಕ್ಸ್‌, ಬಯೋಲಾಜಿಕಲ್‌-ಇ ಸಂಸ್ಥೆಯ ಕೋರ್ಬೆವ್ಯಾಕ್ಸ್‌ ಲಸಿಕೆ ಹಾಗೂ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಎಸ್‌ಇಸಿ) ತಜ್ಞರ ಸಮಿತಿಯು ತಯಾರಿಸಿರುವ ಮೊಲ್ನುಪಿರವಿರ್‌ ಮಾತ್ರೆ ತುರ್ತು ಬಳಕೆಗೆ ಅನುಮೋದನೆ ಪಡೆದಿವೆ. ಕೋರ್ಬೆವ್ಯಾಕ್ಸ್‌ ಭಾರತದ ಮೊದಲ ಸ್ವದೇಶಿ ʼಆರ್‌ಬಿಡಿ ಪ್ರೊಟೀನ್‌ ಉಪ ಘಟಕ ಲಸಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾಮಾನ್ಯ ಜನರಲ್ಲಿ ಮತ್ತೆ ಹೆಚ್ಚುತ್ತಿದೆ ಪಾಸಿಟಿವಿಟಿ – ಸಮುದಾಯಕ್ಕೆ ಹಬ್ಬಿತಾ ಓಮಿಕ್ರಾನ್ ಸೋಂಕು

    ಕೋವಿಡ್‌ ವಿರುದ್ಧದ ಮೂರನೇ ಲಸಿಕೆಯನ್ನು ತಯಾರಿಸುವ ಮೂಲಕ ಭಾರತ ಹ್ಯಾಟ್ರಿಕ್‌ ಸಾಧನೆ ಮಾಡಿದೆ ಎಂದು ಸಚಿವರು ಹೇಳಿದ್ದಾರೆ.

    ಮೊಲ್ನುಪಿರವಿರ್‌ ಮಾತ್ರೆಯನ್ನು ಕೆಲವು ಷರತ್ತುಬದ್ಧ ನಿಯಮಗಳೊಂದಿಗೆ ಬಳಕೆಗೆ ಸೂಚಿಸಲಾಗಿದೆ. ಆಮ್ಲಜನಕ ಮಟ್ಟ ಶೇ.93ಕ್ಕಿಂತ ಕಡಿಮೆ ಇರುವ ವಯಸ್ಕರು, ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಮಾತ್ರ ನೀಡಬಹುದಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಸೆರಮ್ ಸಂಸ್ಥೆಯ 2ನೇ ಲಸಿಕೆ ಕೋವೊವ್ಯಾಕ್ಸ್‌ ತುರ್ತು ಬಳಕೆಗೆ ಶಿಫಾರಸು

    ಈವರೆಗೆ ಒಟ್ಟು 8 ಲಸಿಕೆಗಳು ಭಾರತದ ಔಷಧ ನಿಯಂತ್ರಕದಿಂದ ತುರ್ತು ಬಳಕೆಗೆ ಅನುಮೋದನೆ ಪಡೆದಿವೆ. ಕೋವಿಶೀಲ್ಡ್‌, ಜೈಕೋವ್‌-ಡಿ, ಸ್ಪುಟ್ನಿಕ್‌ ವಿ, ಮೋಡೆರ್ನಾ, ಜಾನ್ಸನ್‌ ಅಂಡ್‌ ಜಾನ್ಸನ್‌, ಕೋರ್ಬೆವ್ಯಾಕ್ಸ್‌, ಕೋವೊವ್ಯಾಕ್ಸ್‌ ಲಸಿಕೆಗಳಿಗೆ ಅನುಮತಿಸಲಾಗಿದೆ.

  • ಸೆರಮ್ ಸಂಸ್ಥೆಯ 2ನೇ ಲಸಿಕೆ ಕೋವೊವ್ಯಾಕ್ಸ್‌ ತುರ್ತು ಬಳಕೆಗೆ ಶಿಫಾರಸು

    ಸೆರಮ್ ಸಂಸ್ಥೆಯ 2ನೇ ಲಸಿಕೆ ಕೋವೊವ್ಯಾಕ್ಸ್‌ ತುರ್ತು ಬಳಕೆಗೆ ಶಿಫಾರಸು

    ನವದೆಹಲಿ: ಸೆರಮ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್-‌19 ಲಸಿಕೆ ಕೋವೊವ್ಯಾಕ್ಸ್‌ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಅಮಿತಿ ಸೋಮವಾರ ಶಿಫಾರಸು ಮಾಡಿದೆ.

    ಕೋವೊವ್ಯಾಕ್ಸ್‌ ತುರ್ತು ಬಳಕೆಗೆ ಅವಕಾಶ ನೀಡುವಂತೆ ಸೆರಮ್ ಸಂಸ್ಥೆ ನಿರ್ದೇಶಕ ಪ್ರಕಾಶ್‌ ಕುಮಾರ್‌ ಸಿಂಗ್‌, ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ (ಡಿಸಿಜಿಐ) ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಲವು ಷರತ್ತುಗಳೊಂದಿಗೆ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ: ಭಾರತದ 2ನೇ ಲಸಿಕೆ ತುರ್ತು ಬಳಕೆಗೆ WHO ಅನುಮೋದನೆ

    ಲಸಿಕೆಗೆ ಬಳಸಲಾದ ಮ್ಯಾಟ್ರಿಕ್ಸ್‌ ಅಂಶದ ಬಗ್ಗೆ ವಿವರ ನೀಡುವಂತೆ ಉನ್ನತ ಔಷಧ ನಿಯಂತ್ರಕವು ಸೀರಮ್ ಸಂಸ್ಥೆಗೆ ತಿಳಿಸಿದೆ.

    ಭಾರತದ ಮತ್ತೊಂದು ಲಸಿಕೆ ಕೋವೊವ್ಯಾಕ್ಸ್‌ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಈಚೆಗೆ ಅನುಮೋದನೆ ನೀಡಿತ್ತು. ನೋವಾವ್ಯಾಕ್ಸ್‌ ಮೂಲಕ ನೀಡಲಾದ ಪರವಾನಗಿ ಅಡಿಯಲ್ಲಿ ಸೆರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (ಎಸ್‌ಐಐ) ಸಂಸ್ಥೆ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

    ಕೋವೊವ್ಯಾಕ್ಸ್‌ ಅನ್ನು ಗುಣಮಟ್ಟ, ಸುರಕ್ಷತೆ, ಪರಿಣಾಮಕಾರಿ, ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ (ಡಿಸಿಜಿಐ) ನಡೆಸಿದ ತಪಾಸಣೆ ಆಧಾರದ ಮೇಲೆ ಬಳಕೆಗೆ ಪರಿಗಣಿಸಲಾಗಿದೆ. ಸೆರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ತಯಾರಿಸಿದ ಎರಡನೇ ಲಸಿಕೆ ಕೋವೊವ್ಯಾಕ್ಸ್‌ ಆಗಿದೆ. ಅಮೆರಿಕದ ಆಸ್ಟ್ರಾಜೆನೆಕಾ ಸಂಸ್ಥೆ ಸಹಯೋಗದಿಂದ ಸೆರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಸಂಸ್ಥೆ ಈ ಹಿಂದೆ ಕೊವಿಶೀಲ್ಡ್‌ ಲಸಿಕೆ ತಯಾರಿಸಿದೆ.

  • ಭಾರತದ 2ನೇ ಲಸಿಕೆ ತುರ್ತು ಬಳಕೆಗೆ WHO ಅನುಮೋದನೆ

    ಭಾರತದ 2ನೇ ಲಸಿಕೆ ತುರ್ತು ಬಳಕೆಗೆ WHO ಅನುಮೋದನೆ

    ನವದೆಹಲಿ: ಭಾರತದ ಮತ್ತೊಂದು ಲಸಿಕೆ ಕೊವೊವ್ಯಾಕ್ಸ್‌ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.

    ನೋವಾವ್ಯಾಕ್ಸ್‌ ಮೂಲಕ ನೀಡಲಾದ ಪರವಾನಗಿ ಅಡಿಯಲ್ಲಿ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (ಎಸ್‌ಐಐ) ಸಂಸ್ಥೆ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದ ಐವರು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌

    ಕಡಿಮೆ ಆದಾಯದ ದೇಶಗಳಲ್ಲಿ ಲಸಿಕೆ ವಿತರಣೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೊವೊವ್ಯಾಕ್ಸ್‌ಗೆ ಡಬ್ಲ್ಯೂಎಚ್‌ಒ ಅನುಮೋದನೆ ನೀಡಿದೆ. ತುರ್ತು ಬಳಕೆಗೆ ಅನುಮೋದನೆ ಪಡೆದ 9ನೇ ಲಸಿಕೆ ಇದಾಗಿದೆ.

    ಕೊವೊವ್ಯಾಕ್ಸ್‌ ಅನ್ನು ಗುಣಮಟ್ಟ, ಸುರಕ್ಷತೆ, ಪರಿಣಾಮಕಾರಿ, ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ (ಡಿಸಿಜಿಐ) ನಡೆಸಿದ ತಪಾಸಣೆ ಆಧಾರದ ಮೇಲೆ ಬಳಕೆಗೆ ಪರಿಗಣಿಸಲಾಗಿದೆ. ಇದನ್ನೂ ಓದಿ: ಅಮಿತ್ ಶಾ ಹೆಸರಿನಲ್ಲಿ ನಕಲಿ ಲಸಿಕಾ ಪ್ರಮಾಣಪತ್ರ

    ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ತಯಾರಿಸಿದ ಎರಡನೇ ಲಸಿಕೆ ಕೊವೊವ್ಯಾಕ್ಸ್‌ ಆಗಿದೆ. ಅಮೆರಿಕದ ಆಸ್ಟ್ರಾಜೆನೆಕಾ ಸಂಸ್ಥೆ ಸಹಯೋಗದಿಂದ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಸಂಸ್ಥೆ ಈ ಹಿಂದೆ ಕೊವಿಶೀಲ್ಡ್‌ ಲಸಿಕೆ ತಯಾರಿಸಿದೆ.