Tag: cow

  • ದಿನಗಳ ಅಂತರದಲ್ಲಿ ಎಮ್ಮೆ ಬಳಿಕ ಹಸುವಿಗೆ ಗುದ್ದಿದ ವಂದೇ ಭಾರತ್ ಎಕ್ಸ್‌ಪ್ರೆಸ್

    ದಿನಗಳ ಅಂತರದಲ್ಲಿ ಎಮ್ಮೆ ಬಳಿಕ ಹಸುವಿಗೆ ಗುದ್ದಿದ ವಂದೇ ಭಾರತ್ ಎಕ್ಸ್‌ಪ್ರೆಸ್

    ಗಾಂಧಿನಗರ: ಇತ್ತೀಚೆಗಷ್ಟೇ ಆರಂಭವಾಗಿದ್ದ ಗಾಂಧಿನಗರ-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಅ.8 ರಂದು ಎಮ್ಮೆಗಳಿಗೆ (Buffalo) ಡಿಕ್ಕಿ ಹೊಡೆದಿತ್ತು. ಇದೀಗ ಅ.9 ರಂದು ಹಸುವಿಗೆ (Cow) ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ.

    ಗುಜರಾತ್‍ನ ಆನಂದ್ ರೈಲ್ವೇ ನಿಲ್ದಾಣದ ಸಮೀಪ ಏಕಾಏಕಿ ಹಸುವಿಗೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಅ.8 ರಂದು ಗುಜರಾತ್‍ನ ವತ್ವಾ ರೈಲು ನಿಲ್ದಾಣದ ಬಳಿ ಟ್ರ್ಯಾಕ್‍ನಲ್ಲಿ ಎಮ್ಮೆಗಳಿಗೆ ರೈಲು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ 4 ಎಮ್ಮೆಗಳು ಸಾವನ್ನಪ್ಪಿದ್ದವು. ರೈಲಿನ ಮುಂಭಾಗ ಹೊಡೆದು ಹೋಗಿತ್ತು. ಇದನ್ನೂ ಓದಿ: ‘ಕಬ್ಬಿಣದ ಕಾಲುಗಳ ವ್ಯಕ್ತಿ’ ಭಾರತಕ್ಕೆ ಗರಬಡಿಸಿದ್ದಾನೆ: ಮೋದಿಯನ್ನು ವ್ಯಂಗ್ಯವಾಡಿದ ಕಾಂಗ್ರೆಸ್

    ವಂದೇ ಭಾರತ್ ರೈಲಿಗೆ ಫೈಬರ್ ಬಲವರ್ಧಿತ ಪ್ಲಾಸ್ಟಿಕ್‍ನಿಂದ ಮಾಡಿದ ಬಂಪರ್ ಅಳವಡಿಕೆ ಮಾಡಿರುವುದರಿಂದ ಕಾರ್ಯನಿರ್ವಹಣೆಗೆ ಅದೇನು ಅನಿವಾರ್ಯವಲ್ಲ ಹಾಗಾಗಿ ರೈಲು ಕಾರ್ಯಚರಿಸುತ್ತದೆ. ಆ ಬಳಿಕ ಇದನ್ನು ಬದಲಾಯಿಸಬಹುದಾಗಿದೆ. ಇದನ್ನೂ ಓದಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಜಖಂ – ಎಮ್ಮೆಗಳ ಮಾಲೀಕನ ವಿರುದ್ಧ FIR

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ಜಾನುವಾರುಗಳೊಂದಿಗೆ ಇಂತಹ ಘರ್ಷಣೆಯನ್ನು ತಪ್ಪಿಸಲು ಕಷ್ಟ. ಹಾಗಾಗಿ ರೈಲು ವಿನ್ಯಾಸ ಮಾಡುವಾಗ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ವಿನ್ಯಾಸ ಮಾಡಲಾಗಿದೆ. ರೈಲಿನ ಮುಂಭಾಗವನ್ನು ಸಂಪೂರ್ಣವಾಗಿ ಬದಲಾಯಿಸಬಹುದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಜಾನುವಾರುಗಳಿಗೆ ಡಿಕ್ಕಿ – ಕಳೆದ ವಾರ ಆರಂಭವಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮುಂಭಾಗ ಜಖಂ

    ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗಾಂಧಿನಗರ ನಿಲ್ದಾಣದಲ್ಲಿ ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಬಳಿಕ ಅವರು ಅದೇ ರೈಲಿನಲ್ಲಿ ಅಹಮದಾಬಾದ್‍ನ ಕಲುಪುರ್ ರೈಲು ನಿಲ್ದಾಣದ ವರೆಗೆ ಪ್ರಯಾಣಿಸಿದ್ದರು. ಈ ರೈಲು ಕೇವಲ ಗಂಟೆಗೆ 160 ಕಿ.ಮೀ ತಲುಪುವ ಸಾಮರ್ಥ್ಯ ಹೊಂದಿದೆ.

    Live Tv
    [brid partner=56869869 player=32851 video=960834 autoplay=true]

  • ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಬೆಂಗಳೂರು: ಚರ್ಮಗಂಟು ರೋಗದಿಂದ (Lumpy Virus) ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗವು ನೇರವಾಗಿ ಜಾನುವಾರುಗಳ ಉತ್ಪಾದಕತೆಯನ್ನು ಕುಂಠಿತಗೊಳಿಸುವುದರಿಂದ ರೈತರು ಹಾಗೂ ಜಾನುವಾರು ಮಾಲೀಕರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದನ್ನು ತಡೆಗಟ್ಟಲು ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ : ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

    ಚರ್ಮಗಂಟು ರೋಗದಿಂದ ಉಂಟಾಗುವ ಜಾನುವಾರುಗಳ ಮರಣದಿಂದ ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಸ್ಟ್ 1ನೇ ತಾರೀಖಿನಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗಳಿಗೆ ಗರಿಷ್ಠ 20,000 ರೂ. ಮತ್ತು ಎತ್ತುಗಳಿಗೆ 30,000 ರೂ. ಹಾಗೂ ಪ್ರತಿ ಕರುವಿಗೆ 5,000 ರೂ. ಪರಿಹಾರ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

    ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದೆ. ರಾಜ್ಯಾದ್ಯಂತ 2,65,646 ರಾಸುಗಳಿಗೆ ಲಸಿಕೆ ನೀಡಲಾಗಿದ್ದು, ಲಭ್ಯವಿರುವ 3,42,156 ಡೋಸ್ ಲಸಿಕೆಯನ್ನು ಜಾನುವಾರುಗಳಿಗೆ ನೀಡಲಾಗುತ್ತಿದೆ. ಈ ವಾರ 35,000 ಲಸಿಕೆ ಲಭ್ಯವಾಗಲಿದ್ದು, ಚರ್ಮಗಂಟು ರೋಗವನ್ನು ನಿಯಂತ್ರಣಕ್ಕೆ ತರಲು ಬೇಕಾದ ಔಷಧ, ಚಿಕಿತ್ಸೆ ನೀಡಲಾಗುತ್ತಿದೆ. ರೈತರು ಆತಂಕಕ್ಕೆ ಒಳಗಾಗದೇ ಸರ್ಕಾರದೊಂದಿಗೆ ಸಹಕರಿಸುವಂತೆ ಪ್ರಭು ಚವ್ಹಾಣ್ ಮನವಿ ಮಾಡಿಕೊಂಡಿದ್ದಾರೆ.

    ರಾಜ್ಯದಲ್ಲಿ ಈವರೆಗೆ 23,784 ರಾಸುಗಳು ಚರ್ಮಗಂಟು ರೋಗದಿಂದ ಬಳಲುತ್ತಿದ್ದು, ಈ ಪೈಕಿ 11,494 ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 680 ಜಾನುವಾರುಗಳು ಮೃತಪಟ್ಟಿರುತ್ತವೆ. ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಪರಿಹಾರ ಧನ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ- ಸಿದ್ದರಾಮಯ್ಯರನ್ನು ಜೋಡಿಸಲು ರಾಹುಲ್ ಗಾಂಧಿ ಬಂದಿದ್ದಾರೆ: ಭೈರತಿ ಬಸವರಾಜ್

    ಚರ್ಮಗಂಟು ರೋಗವು ಜಾನುವಾರುಗಳಲ್ಲಿ ಕಂಡು ಬರುವ ಸಾಂಕ್ರಾಮಿಕ ವೈರಸ್ ಕಾಯಿಲೆಯಾಗಿದೆ. ರೋಗಗ್ರಸ್ತ ಪ್ರಾಣಿಗಳಲ್ಲಿ ಪ್ರಾರಂಭಿಕ ಹಂತದಲ್ಲಿ ಜ್ವರ, ತದನಂತರ ಚರ್ಮಗಂಟು ಗಂಟು ಕಾಣಿಸಿ ಕ್ರಮೇಣ ಚರ್ಮ ಗಂಟು, ಹಕ್ಕಳೆ, ತುರಿಗಳಾಗಿ ಜಾನುವಾರುಗಳಲ್ಲಿ ಕಂಡು ಬರುತ್ತದೆ. ರೋಗಗ್ರಸ್ಥ ದನಗಳು ಜ್ವರದಿಂದ ಬಳಲಿ ಮಂಕಾಗಿ ಮೂಗು, ಕಣ್ಣುಗಳಲ್ಲಿ ಸೋರುವಿಕೆ, ಜೊಲ್ಲು ಸೋರುವುದು, ಮೇವು ತಿನ್ನದೇ ಬಡಕಲಾಗುತ್ತವೆ. ರಾಸುಗಳು ಶ್ವಾಸಕೋಶದ ಉರಿಯೂತದಿಂದ ಸಾವನ್ನಪ್ಪುವುದು ಸಾಮಾನ್ಯವಾಗಿದೆ. ರಾಸುಗಳ ಕೊಟ್ಟಿಗೆಯನ್ನು ಸ್ವಚ್ಛವಾಗಿಡಬೇಕು. ರೋಗ ಕಾಣಿಸಿಕೊಂಡ ತಕ್ಷಣ ಸಮೀಪದ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ, ಲಸಿಕೆ ಪಡೆದು ಜಾನುವಾರು ಸಂರಕ್ಷಿಸಿ ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

    ಅಭಿನಂದನೆ : ಚರ್ಮಗಂಟು ರೋಗದಿಂದ ಬಳಲಿ ಮೃತಪಟ್ಟ ಜಾನುವಾರುಗಳ ಮಾಲೀಕರು ಮತ್ತು ರೈತರ ಆರ್ಥಿಕ ನಷ್ಟವನ್ನು ತಪ್ಪಿಸಲು ಮೃತ ರಾಸುಗಳಿಗೆ ಪರಿಹಾರ ನೀಡುವುದಕ್ಕೆ ಅನುಮತಿ ನೀಡಿ, ಬಿಜೆಪಿ ನೇತೃತ್ವದ ನಮ್ಮ ಸರ್ಕಾರ ಸದಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿದೆ ಎನ್ನುವುದನ್ನು ಸಾರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಭು ಚವ್ಹಾಣ್ ಅಭಿನಂದಿಸಿ, ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

    ಕೂಡಲೇ ಸ್ಪಂದಿಸಿ : ಚರ್ಮಗಂಟು ರೋಗ ಕಾಣಿಸಿಕೊಂಡ ಜಾನುವಾರುಗಳ ಆರೋಗ್ಯ ಸಮಸ್ಯೆ ಹೊತ್ತು ಬರುವ ರೈತರು ಹಾಗೂ ದೂರವಾಣಿ ಕರೆಗಳಿಗೆ ಕೂಡಲೇ ಸ್ಪಂದಿಸಿ, ಸೂಕ್ತ ಚಿಕಿತ್ಸೆ ನೀಡಿ, ರೋಗ ಹರಡದಂತೆ ಪಶು ವೈದ್ಯಾಧಿಕಾರಿಗಳು ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಶ್ರಮಿಸುವಂತೆ ಸೂಚನೆ ನೀಡಿದ್ದಾರೆ. ಜನರಿಗೆ ಆರೋಗ್ಯ ಸಮಸ್ಯೆ ಎದುರಾದರೆ ತಮ್ಮ ನೋವನ್ನು ತೋಡಿಕೊಳ್ಳುತ್ತಾರೆ. ಮಾತು ಬಾರದ ಮೂಕ ಪ್ರಾಣಿಗಳು ತಮ್ಮ ನೋವನ್ನು ಹೇಗೆ ವ್ಯಕ್ತಪಡಿಸುತ್ತವೆ ಎನ್ನುವುದನ್ನು ನಿರ್ಲಕ್ಷ್ಯ ಮಾಡದೇ ಕೂಡಲೇ ಜಾನುವಾರುಗಳ ಚಿಕಿತ್ಸೆ ಧಾವಿಸಿ, ಗೋಮಾತೆ ಸಂರಕ್ಷಿಸೋಣ ಎಂದು ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

    ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

    ಬೆಳಗಾವಿ: ಜಿಲ್ಲೆಯ ಬೆಳಗಾವಿ (Belgavi) ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Skin Disease) (ಲಂಪಿ ಸ್ಕಿನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ, ನೊಣ, ಉಣ್ಣೆ) ಇತ್ಯಾದಿಗಳಿಂದ ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ (Rainy Season) ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಹೀಗಾಗಿ ಜನರು ಎಚ್ಚರಿಕೆ ವಹಿಸಬೇಕು.

    ಚರ್ಮಗಂಟು ರೋಗದ ಲಕ್ಷಣಗಳು
    ಅತಿಯಾದ ಜ್ವರ (105-180ಈ) ಕಣ್ಣುಗಳಿಂದ ನೀರು ಸೋರುವುದು. ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಸೊಳ್ಳೆ, ಉಣ್ಣೆ, ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ ಕಲುಷಿತಗೊಂಡ ನೀರು (Contaminated water) ಹಾಗೂ ಆಹಾರದಿಂದ ಜಾನುವಾರುಗಳ ನೇರ ಸಂಪರ್ಕದಿಂದ ರೋಗ ಹರಡುವಿಕೆ ಪ್ರಮಾಣ 10-20% ರಷ್ಟು ಹಾಗೂ ರೋಗದ ಸಾವಿನ ಪ್ರಮಾಣ 1-5% ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಿಂಪಿ ವೈರಸ್‌ಗೆ 5 ಸಾವಿರಕ್ಕೂ ಅಧಿಕ ಹಸುಗಳ ಮಾರಣ ಹೋಮ – ಹೆದರಿ ವಲಸೆ ಹಾದಿ ಹಿಡಿದ ಜನ

    ಚರ್ಮಗಂಟು ರೋಗದ ಚಿಕಿತ್ಸೆ ಹಾಗೂ ತಡೆಗಟ್ಟುವಿಕೆ
    ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಹಾಗೂ ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ. ಜಾನುವಾರುಗಳಿಗೆ ರೋಗದ ಲಕ್ಷಣಗಳ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು. ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರಮಾಂಗನೇಟ್ ದ್ರವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು. ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರುಗಳನ್ನು ಬೇರ್ಪಡಿಸುವುದು. ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು. ಹಸಿರು ಮೇವು, ಪೌಷ್ಠಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು. ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ 5-6 ಬಾರಿ ಕುಡಿಸಬೇಕು. ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಇದನ್ನೂ ಓದಿ: ಹಸುಗಳನ್ನು ರಕ್ಷಿಸಿ – ಲಂಪಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಖರ್ ಧವನ್

    ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ ಫಾರ್ಮಾಲಿನ್(1%)ಫಿನೈಲ್(2%) ಅಥವಾ ಸೋಡಿಯಂ ಹಾಪೀಕ್ಲೊರೈಡ್ (2%) ದಿನಕ್ಕೆ 2 ಬಾರಿ ಸಿಂಪಡಿಸಬೇಕು. ರೋಗಗ್ರಸ್ಥ ಜಾನುವಾರು ಮರಣ ಹೊಂದಿದ್ದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು ಹಾಗೂ ಹೆಚ್ಚಿನ ಮಾಹಿತಿ, ಚಿಕಿತ್ಸೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ (Animal Husbandry Departmentz) ಜಿಲ್ಲಾ ಉಪ ನಿರ್ದೇಶಕ ಡಾ.ರಾಜೀವ ಎನ್, ಕೂಲೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಪಿ ವೈರಸ್ ಕಾಟ: ಹಾಲಿನ ಸಂಗ್ರಹ ಕುಸಿತ – ಸಿಹಿ ತಿಂಡಿಗಳ ಬೆಲೆ ದಿಢೀರ್ ಏರಿಕೆ

    Live Tv
    [brid partner=56869869 player=32851 video=960834 autoplay=true]

  • ಹಸುಗಳನ್ನು ರಕ್ಷಿಸಿ – ಲಂಪಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಖರ್ ಧವನ್

    ಹಸುಗಳನ್ನು ರಕ್ಷಿಸಿ – ಲಂಪಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಖರ್ ಧವನ್

    ಮುಂಬೈ: ಜಾನುವಾರುಗಳಿಗೆ (Cattle) ಮಾರಕವಾಗಿ ಪರಿಣಮಿಸಿರುವ ಲಂಪಿ ವೈರಸ್‌ನಿಂದಾಗಿ (Lumpy Virus) ರಾಜಸ್ಥಾನದಲ್ಲಿ ಪ್ರತೀ ದಿನ ನೂರಾರು ಹಸುಗಳು ಸಾವನ್ನಪ್ಪುತ್ತಿವೆ. ದೇಶದ 10 ಕ್ಕೂ ಹೆಚ್ಚು ರಾಜ್ಯಗಳಿಗೆ ಹರಡಿರುವ ಈ ವೈರಸ್ ಬಗ್ಗೆ ಎಲ್ಲೆಡೆ ಆತಂಕ ವ್ಯಕ್ತವಾಗಿದೆ.

    ಇದೀಗ ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ (Shikhar Dhawan) ಕೂಡಾ ವೈರಸ್‌ನಿಂದಾಗಿ ಮುಗ್ಧ ಜಾನುವಾರುಗಳು ಸಾವನ್ನಪ್ಪುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ವೈರಸ್ ವಿರುದ್ಧ ಹೋರಾಡಲು ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

    ಈಗಾಗಲೇ ಹೆಚ್ಚಿನ ಸಂಖ್ಯೆಯ ಜಾನುವಾರುಗಳು ಲಂಪಿ ವೈರಸ್‌ಗೆ ತುತ್ತಾಗಿವೆ. ಅದೆಷ್ಟೋ ಹಸುಗಳು ಸಾವನ್ನಪ್ಪಿವೆ. ಲಂಪಿ ವೈರಸ್ ವಿರುದ್ಧ ಹೋರಾಡಲು ನಾನು ಅಧಿಕಾರಿಗಳನ್ನು ಕೇಳಿಕೊಳ್ಳುತ್ತಿದ್ದೇನೆ. ಮುಗ್ಧ ಜಾನುವಾರುಗಳನ್ನು ರಕ್ಷಿಸಿ ಎಂದು ಶಿಖರ್ ಧವನ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಓಡೆನ್ ಸ್ಮಿತ್, ಬೇಬಿ ಎಬಿಡಿ ಹೊಡಿಬಡಿ ಆಟ – ತಲಾ ಆರಾರು ಎಸೆತ ಐದೈದು ಸಿಕ್ಸ್ 60 ರನ್‌

    ಲಂಪಿ ವೈರಸ್ ಕೆಲವು ಜಾತಿಯ ನೊಣ, ಸೊಳ್ಳೆಗಳಂತಹ ಕೀಟಗಳಿಂದ ಹರಡುತ್ತದೆ. ಹೆಚ್ಚಾಗಿ ಹಸು, ಎಮ್ಮೆ ಹಾಗೂ ಜಿಂಕೆಗಳ ಮೇಲೆ ಪರಿಣಾಮ ಬೀರುವ ಈ ವೈರಸ್‌ನಿಂದ ಜ್ವರ ಹಾಗೂ ಚರ್ಮದ ಮೇಲೆ ಗಂಟುಗಳು ಉಂಟಾಗುತ್ತವೆ. ಇದು ಜಾನುವಾರುಗಳ ಸಾವಿಗೂ ಕಾರಣವಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: 2022ರಲ್ಲಿ ಭಾರತ ಆಡಿದ್ದು 27 ಟಿ20 ಪಂದ್ಯ – ಬುಮ್ರಾ ಆಡಿದ್ದು ಬರೀ 3 ಪಂದ್ಯ!

    ಜಾನುವಾರುಗಳ ವಿನಾಶವನ್ನು ಸೃಷ್ಟಿಸುತ್ತಿರುವ ಲಂಪಿ ವೈರಸ್ ಈಗಾಗಲೇ 10ಕ್ಕೂ ಹೆಚ್ಚು ರಾಜ್ಯಗಳಿಗೆ ಪ್ರವೇಶಿಸಿದೆ. ದೇಶದಲ್ಲಿ ಇಲ್ಲಿಯವರೆಗೆ 75 ಸಾವಿರಕ್ಕೂ ಹೆಚ್ಚು ಜಾನುವಾರುಗಳ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಿಧಾನಸಭೆಗೆ ಹಸುವನ್ನು ತಂದ ಬಿಜೆಪಿ ಶಾಸಕ – ದಾರಿ ಮಧ್ಯೆಯೇ ಪರಾರಿ

    ವಿಧಾನಸಭೆಗೆ ಹಸುವನ್ನು ತಂದ ಬಿಜೆಪಿ ಶಾಸಕ – ದಾರಿ ಮಧ್ಯೆಯೇ ಪರಾರಿ

    ಜೈಪುರ: ಲಂಪಿ ವೈರಸ್‌ನಿಂದಾಗಿ (Lumpy Virus) ರಾಜಸ್ಥಾನದಾದ್ಯಂತ (Rajasthan) ಹಸುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಲುವಾಗಿ ಬಿಜೆಪಿ (BJP) ಶಾಸಕರೊಬ್ಬರು (MLA) ಹಸುವಿನೊಂದಿಗೆ (Cow) ವಿಧಾನಸಭೆಗೆ (Assembly) ಆಗಮಿಸಿದ್ದಾರೆ. ಆದರೆ ಹಸು ವಿಧಾನಸೌಧದ ಆವರಣವನ್ನು ಪ್ರವೇಶಿಸುತ್ತಿದ್ದಂತೆಯೇ ಪರಾರಿಯಾಗಿದೆ.

    ಬಿಜೆಪಿ ಶಾಸಕ ಸುರೇಶ್ ಸಿಂಗ್ ರಾವತ್ ಅವರು ಸೋಮವಾರ ರಾಜಸ್ಥಾನ ವಿಧಾನಸಭೆಗೆ ಹಸುವಿನೊಂದಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ಮಾಧ್ಯಮದವರು ಅಡ್ಡಗಟ್ಟಿ ಮಾತನಾಡಿಸಿದ್ದಾರೆ. ಈ ವೇಳೆ ಅವರು ಕೈಯಲ್ಲಿ ಕೋಲೊಂದನ್ನು ಹಿಡಿದುಕೊಂಡು, ಹಸುಗಳು ಲಂಪಿ ವೈರಸ್‌ನಿಂದ ಬಳಲುತ್ತಿವೆ. ಆದರೆ ರಾಜ್ಯ ಸರ್ಕಾರ ಗಾಢ ನಿದ್ರೆಯಲ್ಲಿದೆ. ಹಸುಗಳಿಗೆ ಮಾರಕವಾಗಿರುವ ಕಾಯಿಲೆಯತ್ತ ಗಮನ ಸೆಳೆಯಲು ನಾನು ಹಸುವನ್ನು ವಿಧಾನಸೌಧಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೋಲ್ಡ್ ರಿಕವರಿಗೆ ಬಂದ ತಮಿಳುನಾಡು ಪೊಲೀಸರು ಚಿಕ್ಕಬಳ್ಳಾಪುರದಲ್ಲಿ ಲಾಕ್

    ಈ ವೇಳೆ ಹಸು ತನಗೆ ಕಟ್ಟಿದ್ದ ಹಗ್ಗವನ್ನು ಎಳೆದುಕೊಂಡು ಸ್ಥಳದಿಂದ ಕಾಲ್ಕಿತ್ತಿದೆ. ಈ ವೀಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಪಶುಸಂಗೋಪನಾ ಇಲಾಖೆಯ ಅಂಕಿಅಂಶಗಳ ಪ್ರಕಾರ ಸೋಮವಾರದ ವರೆಗೆ ರಾಜಸ್ಥಾನದಲ್ಲಿ 59,027 ಜಾನುವಾರುಗಳು ಚರ್ಮದ ಕಾಯಿಲೆಯಿಂದ ಸಾವನ್ನಪ್ಪಿವೆ ಮತ್ತು 13,02,907 ಬಾಧಿತವಾಗಿವೆ. ಇದನ್ನೂ ಓದಿ: 24.5 ಕಿ.ಮೀ ಮೈಲೇಜ್‌ ನೀಡ್ತಿದ್ದ ಮಾರುತಿ 800ಸಿಸಿ ಎಂಜಿನ್‌ಗೆ ಗುಡ್ ಬೈ

    Live Tv
    [brid partner=56869869 player=32851 video=960834 autoplay=true]

  • ರಾಮಮಂದಿರ ಹೋರಾಟದ ಪ್ರಮುಖ, ಗೋವುಗಳ ರಕ್ಷಣೆಗೆ 52 ದಿನ ಉಪವಾಸವಿದ್ದ ಆಚಾರ್ಯ ಧರ್ಮೇಂದ್ರ ಇನ್ನಿಲ್ಲ

    ರಾಮಮಂದಿರ ಹೋರಾಟದ ಪ್ರಮುಖ, ಗೋವುಗಳ ರಕ್ಷಣೆಗೆ 52 ದಿನ ಉಪವಾಸವಿದ್ದ ಆಚಾರ್ಯ ಧರ್ಮೇಂದ್ರ ಇನ್ನಿಲ್ಲ

    ಜೈಪುರ: ರಾಮಂದಿರ (Rama Mandir) ಹೋರಾಟದ ಸಕ್ರಿಯರಾಗಿದ್ದ ಹಾಗೂ ಗೋವುಗಳ ರಕ್ಷಣೆಗಾಗಿ ಬರೋಬ್ಬರಿ 52 ದಿನಗಳ ಕಾಲ ಉಪವಾಸವಿದ್ದ ಆಚಾರ್ಯ ಧರ್ಮೇಂದ್ರ (Acharya Shri Dharmendra)  ಇಂದು ನಿಧನರಾಗಿದ್ದಾರೆ.

    80 ವರ್ಷದ ಆಚಾರ್ಯ ಧರ್ಮೇಂದ್ರ ಅವರು ಕರುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜೈಪುರದ ಸವಾಯಿ ಮಾನ್ ಸಿಂಗ್ (Sawai Mansingh Hospital) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

    ತಮ್ಮ ಆವೇಶಭರಿತ ಭಾಷಣಗಳಿಗೆ ಹೆಸರಾದ ಧರ್ಮೇಂದ್ರ ಅವರು, ಗೋವುಗಳ ಕಲ್ಯಾಣಕ್ಕಾಗಿ ಧರ್ಮೇಂದ್ರ ಆಚಾರ್ಯ ಅವರು ಒಮ್ಮೆ 52 ದಿನಗಳ ಕಾಲ ಉಪವಾಸ ಮಾಡಿದ್ದರು. ದೇಶದಲ್ಲಿ ಈ ಹಿಂದೆ ನಡೆದಿದ್ದ ಬಾಬ್ರಿ (Babri Masjid) ಧ್ವಂಸ ಪ್ರಕರಣದಲ್ಲಿ ಆಚಾರ್ಯ ಧರ್ಮೇಂದ್ರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್ ಮತ್ತು ಉಮಾಭಾರತಿ ಅವರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು.

    ರಾಮ ಜನ್ಮಭೂಮಿ ಮಂದಿರ ಚಳವಳಿಯಲ್ಲಿ ಸಕ್ರಿಯ ಅಲ್ಲದೇ ಆಚಾರ್ಯ ಧರ್ಮೇಂದ್ರ ಅವರು ಮಹಾತ್ಮ ರಾಮಚಂದ್ರ ವೀರ ಮಹಾರಾಜರ ಪುತ್ರ ಆಚಾರ್ಯ ಧರ್ಮೇಂದ್ರ ಅವರು ರಾಮ ಜನ್ಮಭೂಮಿ ಮಂದಿರ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರು ತಮ್ಮ ಇಡೀ ಜೀವನವನ್ನು ಹಿಂದೂ, ಹಿಂದುತ್ವ ಮತ್ತು ಹಿಂದೂಸ್ತಾನದ ಪ್ರಗತಿಗೆ ಮುಡಿಪಾಗಿಟ್ಟಿದ್ದರು.

    ಸದ್ಯ ಹಿಂದೂ ಮುಖಂಡ ಆಚಾರ್ಯ ಧರ್ಮೇಂದ್ರ ಅವರ ನಿಧನಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಸಂತಾಪ ಸೂಚಿಸಿದ್ದಾರೆ. ಶ್ರೀಮದ್ ಪಂಚಖಂಡ ಪೀಠಾಧೀಶ್ವರ ಆಚಾರ್ಯ ಧರ್ಮೇಂದ್ರ ಜಿ ಅವರ ನಿಧನ ಸನಾತನ ಧರ್ಮಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅದಲ್ಲದೇ ಆರ್‍ಎಸ್‍ಎಸ್ ಮುಂಡರು ಕೂಡ ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲಿಂಪಿ ವೈರಸ್ ಕಾಟ: ಹಾಲಿನ ಸಂಗ್ರಹ ಕುಸಿತ – ಸಿಹಿ ತಿಂಡಿಗಳ ಬೆಲೆ ದಿಢೀರ್ ಏರಿಕೆ

    ಲಿಂಪಿ ವೈರಸ್ ಕಾಟ: ಹಾಲಿನ ಸಂಗ್ರಹ ಕುಸಿತ – ಸಿಹಿ ತಿಂಡಿಗಳ ಬೆಲೆ ದಿಢೀರ್ ಏರಿಕೆ

    ಜೈಪುರ: ಮಾರಣಾಂತಿಕ ಲಿಂಪಿ ವೈರಸ್‌ನಿಂದಾಗಿ (Lumpy Virus Disease) ರಾಜಸ್ಥಾನದಲ್ಲಿ (Rajasthan) ಹಾಲಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಹಾಲಿನಿಂದ ತಯಾರಿಸುವ ಸಿಹಿ ತಿನಿಸುಗಳ (Milk Production) ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

    ಲಿಂಪಿ ವೈರಸ್ ಚರ್ಮರೋಗದಿಂದ (Skin Diseases) ಪ್ರತಿದಿನ 600 ರಿಂದ 700 ಹಸುಗಳು ಸಾಯುತ್ತಿದ್ದು, ಇದರಿಂದ ಹಾಲಿನ ಸಂಗ್ರಹ ಪ್ರಮಾಣ ಶೇ.15 ರಿಂದ 18ರಷ್ಟು ಕಡಿಮೆಯಾಗಿದೆ.

    ಈ ಕುರಿತು ಜೈಪುರ ಡೈರಿ ಫೆಡರೇಶನ್‌ನ ಅಧ್ಯಕ್ಷ ಓಂ. ಪೂನಿಯಾ ಮಾತನಾಡಿ, ದಿನನಿತ್ಯದ ಹಾಲಿನ ಸಂಗ್ರಹ ಪ್ರಮಾಣವು 14 ಲಕ್ಷದಿಂದ 12 ಲಕ್ಷ ಲೀಟರ್‌ಗಳಿಗೆ ಇಳಿಕೆಯಾಗಿದೆ. ಸದ್ಯ ಹಾಲು ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಆದರೆ ಪ್ರಾಣಿಗಳ ಸಾವಿನ ಸಂಖ್ಯೆ ಹೀಗೇ ಮುಂದುವರಿದರೆ, ಬಿಕ್ಕಟ್ಟು ಎದುರಾಗಬಹುದು. ಕೋವಿಡ್ ಸಮಯಕ್ಕಿಂತಲೂ ಕೆಟ್ಟ ಪರಿಸ್ಥಿತಿಯನ್ನು ನಾವೀಗ ಎದುರಿಸುತ್ತಿದ್ದೇವೆ. ಹಾಲಿನ ಉತ್ಪಾದನೆ ಕಡಿಮೆಯಾಗುತ್ತಿದ್ದಂತೆ ಸಿಹಿ ತಿನಿಸುಗಳ ಬೆಲೆ ದುಬಾರಿಯಾಗುತ್ತಿದೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿ 11 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಮಾರಕ ವೈರಸ್‌ಗೆ ತುತ್ತಾಗಿದ್ದು, ಈಗಾಗಲೇ 51 ಸಾವಿರ ಜಾನುವಾರುಗಳು ಮೃತಪಟ್ಟಿವೆ. ಉಳಿದವುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದ್ದು, 12.32 ಲಕ್ಷ ಜಾನುವಾರುಗಳಿಗೆ ಗಾಟ್ ಪಾಕ್ಸ್ ಲಸಿಕೆ ವಿತರಣೆ ಮಾಡಲಾಗಿದೆ. ಇನ್ನೂ 16.22 ಲಕ್ಷ ಡೋಸ್ ಲಸಿಕೆಯನ್ನು ಸಂಗ್ರಹ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • 15 ದಿನದಲ್ಲಿ 50ಕ್ಕೂ ಹೆಚ್ಚು ದನಗಳು ಸಾವು – ಸ್ಥಳೀಯರ ಆಕ್ರೋಶ

    15 ದಿನದಲ್ಲಿ 50ಕ್ಕೂ ಹೆಚ್ಚು ದನಗಳು ಸಾವು – ಸ್ಥಳೀಯರ ಆಕ್ರೋಶ

    ಚಿಕ್ಕಮಗಳೂರು: ಹದಿನೈದು ದಿನಗಳ ಅವಧಿಯಲ್ಲಿ 50ಕ್ಕೂ ಹೆಚ್ಚು ದನಗಳು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ-ಕೊಟ್ಟಿಗೆಹಾರ ಮಾರ್ಗದಲ್ಲಿ ನಡೆದಿದೆ.

    ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಬಳಿ ಇಂದು ಕೂಡ ಅಪಘಾತದಿಂದ ಎರಡು ಜಾನುವಾರುಗಳು ಸಾವನ್ನಪ್ಪಿವೆ. ಮೂಡಿಗೆರೆಯಲ್ಲಿ ಹಾದುಹೋಗುವ ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತದಿಂದ ಒಂದು ಅಥವಾ ಎರಡು ಜಾನುವಾರುಗಳು ಸಾವನ್ನಪ್ಪುತ್ತಿವೆ. ಹೀಗೆ ಸಾವನ್ನಪ್ಪುತ್ತಿರುವ ಜಾನುವಾರುಗಳ ಸಂಖ್ಯೆ 15 ದಿನದಲ್ಲಿ 50ಕ್ಕೂ ಹೆಚ್ಚಾಗಿದೆ. ಕೈಮರದಿಂದ ಕೊಟ್ಟಿಗೆಹಾರದವರೆಗೆ ಹಾದುಹೋಗುವ ಹತ್ತಾರು ಹಳ್ಳಿಗಳಲ್ಲಿ ರಸ್ತೆ ಮಧ್ಯೆ ನಿಲ್ಲುವ ಅಥವಾ ರಸ್ತೆ ಬದಿ ಮೇಯುತ್ತಿರುವ ದನಗಳು ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿವೆ. ಇದನ್ನೂ ಓದಿ: ಪ್ರಧಾನಿ ಮೋದಿ ತಿಂಗಳಿಗೊಮ್ಮೆ ಗೊಂಬೆ ಕುಣಿಸಲು ಬರ್ತಾರ – ಹೆಚ್‌ಡಿಕೆ ವ್ಯಂಗ್ಯ

    ರಾತ್ರಿ ವೇಳೆ ಹೆಚ್ಚಾಗಿ ದನಗಳು ರಸ್ತೆ ಮಧ್ಯೆ ಮಲಗುವುದರಿಂದ ರಾತ್ರಿ ವೇಳೆ ವಾಹನ ಸಾವರರು ವೇಗವಾಗಿ ಹೋಗುವುದರಿಂದ ಒಂದೆಡೆ ಅಪಘಾತಕ್ಕೀಡಾಗಿ ಸಾವನ್ನಪುತ್ತಿವೆ. ಮತ್ತೊಂದೆಡೆ ಅಪಘಾತಗಳನ್ನು ತಪ್ಪಿಸಲು ಹೋಗಿ ಕಾರು-ಬೈಕ್‍ಗಳು ಅಪಘಾತಗಳಾಗಿ ವಾಹನ ಸವಾರರು ಗಾಯಗೊಳ್ಳುತ್ತಿದ್ದಾರೆ. ಮೂಡಿಗೆರೆ ಹ್ಯಾಂಡ್ ಪೋಸ್ಟ್‌ನಿಂದ ಕೊಟ್ಟಿಗೆಹಾರದವರೆಗೂ ಸುಮಾರು 300ಕ್ಕೂ ಅಧಿಕ ಬಿಡಾಡಿ ದನಗಳಿವೆ. ಜೊತೆಗೆ ರೈತರು ಸಾಕಿರುವ ದನಗಳಿವೆ. ರೈತರು ಕೂಡ ದನಗಳನ್ನು ಮೇಯಲು ಬಿಟ್ಟಿರುತ್ತಾರೆ. ಹಾಗಾಗಿ, ರಸ್ತೆಯಲ್ಲಿ ನಿತ್ಯ ದನಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಈ ಬಗ್ಗೆ ಜಿಲ್ಲಾಡಳಿತವಾಗಲಿ, ಹೆದ್ದಾರಿ ಪ್ರಾಧಿಕಾರವಾಗಲಿ ಅಥವಾ ಗ್ರಾಮ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಸರ್ಕಾರ ಬಿಡಾಡಿ ದನಗಳನ್ನು ಗೋಶಾಲೆಗೆ ಸೇರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ರಾರಾಜಿಸಿದ ನೂಪುರ್ ಶರ್ಮಾ ಫ್ಲೆಕ್ಸ್

    ಜಾನುವಾರುಗಳ ಮೇವಿಗೆ ಇದ್ದ ಗೋಮಾಳಗಳು ಒತ್ತುವರಿಯಾದ ಹಿನ್ನೆಲೆ ದನಗಳು ಎಲ್ಲೆಂದರಲ್ಲಿ ಮೇಯಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿವೆ ಎಂದು ಸ್ಥಳೀಯರು ಗೋಮಾಳ ಒತ್ತುವರಿದಾರರ ವಿರುದ್ಧವೂ ಕಿಡಿಕಾರಿದ್ದಾರೆ. ಕೂಡಲೇ ಸರ್ಕಾರ ಇತ್ತ ಗಮನ ಹರಿಸಿ ಒತ್ತುವರಿಯಾಗಿರುವ ಗೋಮಾಳವನ್ನು ತೆರವು ಮಾಡಿ ಗೋವುಗಳು ಮೇವಿಗೆ ಮೀಸಲಿರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಬ್ಬದ ಹಸುವನ್ನು ಕೊಂದು ಹೊಟ್ಟೆಯಲ್ಲಿದ್ದ ಕರುವನ್ನು ಕಾಡಿಗೆ ಎಸೆದ ಕಿಡಿಗೇಡಿಗಳು

    ಗಬ್ಬದ ಹಸುವನ್ನು ಕೊಂದು ಹೊಟ್ಟೆಯಲ್ಲಿದ್ದ ಕರುವನ್ನು ಕಾಡಿಗೆ ಎಸೆದ ಕಿಡಿಗೇಡಿಗಳು

    ಚಿಕ್ಕಮಗಳೂರು: ಮಾಂಸಕ್ಕಾಗಿ ಹಸುವನ್ನು ಕೊಂದ ದುರುಳರು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಕಾಡಿಗೆ ಎಸೆದು ಹೋಗಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಳೆಕಡುಬಗೆರೆ ಗ್ರಾಮದಲ್ಲಿ ನಡೆದಿದೆ.

    ಮೇವಿಗೆ ಹೋಗಿದ್ದ ಹಳೆಕಡುಬಗೆರೆ ಗ್ರಾಮದ ರವೀಂದ್ರ ಎಂಬುವರಿಗೆ ಸೇರಿದ ಹಸು ಮನೆಗೆ ಬಂದಿರಲಿಲ್ಲ. ಗಬ್ಬದ ಹಸು ಮನೆಗೆ ಬಾರದ ಕಾರಣ ರವೀಂದ್ರ ಹಸುವನ್ನು ಹುಡುಕಿಕೊಂಡು ಹೋಗಿದ್ದರು. ಈ ವೇಳೆ, ಕಾಡಿನಲ್ಲಿ ಹಸುವಿನ ತಲೆ ಪತ್ತೆಯಾಗಿದೆ. ಮಾಂಸಕ್ಕಾಗಿ ಹಸುವನ್ನು ಕೊಂದ ಕಿಡಿಗೇಡಿಗಳು ಹಸುವಿನ ಹೊಟ್ಟೆಯಲ್ಲಿದ್ದ ಹಸುಗೂಸಿನಂತಹಾ ಕರುವನ್ನು ಕಾಡಿಗೆ ಎಸೆದು ಹೋಗಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಯಲ್ಲಿ ಬದುಕುಳಿದ 17ರ ಹುಡುಗಿ ದೆಹಲಿಗೆ ಏರ್‌ಲಿಫ್ಟ್‌

    ಮೇಯುತ್ತಿದ್ದ ಹಸುವನ್ನು ಕದ್ದ ಗೋಕಳ್ಳರು ಎಲೇಕಲ್ ಕಾಡಿನ ಬಳಿ ತಂದು ಹಸುವಿನ ತಲೆಕಡಿದು, ಕರುವನ್ನು ಕಾಡಿಗೆ ಎಸೆದು ಮಾಂಸವನ್ನು ಬೇರೆಡೆ ಸಾಗಿಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ರವೀಂದ್ರ ಈ ಕೃತ್ಯವನ್ನು ಯಾರೇ ಮಾಡಿದ್ದರೂ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಬಾಳೆಹೊನ್ನೂರು ಪೊಲೀಸರು ಹಾಗೂ ಪಶುವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂತಹಾ ಹೇಯ ಕೃತ್ಯ ಕೆಲಸಕ್ಕೆಂದು ಅಸ್ಸಾಮಿಗರು ಎಂದು ಹೇಳಿಕೊಂಡು ಬಂದಿರುವ ಅಕ್ರಮ ಬಾಂಗ್ಲಾ ನಿವಾಸಿಗಳದ್ದೇ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ. ಅಕ್ರಮ ಬಾಂಗ್ಲಾ ನಿವಾಸಿಗಳಿಂದ ಆಗಾಗ್ಗೆ ಇಂತಹಾ ದುಷ್ಕಕೃತ್ಯಗಳು ನಡೆಯುತ್ತಲೇ ಇವೆ. ಹಾಗಾಗಿ, ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕೂಡಲೇ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಗುರುತಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದ್ದಾರೆ. ಕೆಲಸಕ್ಕೆಂದು ಅವರನ್ನು ಕರೆದುಕೊಂಡು ಬರುವ ದೊಡ್ಡ-ದೊಡ್ಡ ಎಸ್ಟೇಟ್ ಮಾಲೀಕರ ವಿರುದ್ಧವೂ ಸ್ಥಳಿಯರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥವಾಗಿದ್ದ ಯುವತಿ ನೇಣಿಗೆ ಶರಣು- ಕುಟುಂಬಸ್ಥರ ಆರೋಪವೇನು..?

    Live Tv
    [brid partner=56869869 player=32851 video=960834 autoplay=true]

  • ಹಸುವಿನ ಜೊತೆ ಸೆಕ್ಸ್‌ ಮಾಡ್ತಿದ್ದ ಸರ್ಕಾರಿ ನಿವೃತ್ತ ಅಧಿಕಾರಿ ಬಂಧನ

    ಹಸುವಿನ ಜೊತೆ ಸೆಕ್ಸ್‌ ಮಾಡ್ತಿದ್ದ ಸರ್ಕಾರಿ ನಿವೃತ್ತ ಅಧಿಕಾರಿ ಬಂಧನ

    ಅಮರಾವತಿ: ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 62 ವರ್ಷದ ನಿವೃತ್ತ ಸರ್ಕಾರಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

    ವಿಜಯನಗರ ಜಿಲ್ಲೆಯ ರಾಜಂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಚರಂ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ಕೃತ್ಯದ ವೀಡಿಯೋ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕುಡಿದ ಮತ್ತಲ್ಲಿ ತಾಯಿಯನ್ನೇ ಥಳಿಸಿ ಕೊಂದ ಪಾಪಿ ಪುತ್ರ

    ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕರಾಗಿ ನಿವೃತ್ತರಾಗಿರುವ ಪಿ.ರಾಮಕೃಷ್ಣ ಅವರನ್ನು ಬಂಧಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಹಸುಗಳು ಮತ್ತು ಸಾಕುನಾಯಿಗಳೊಂದಿಗೆ ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆತನ ಅಸ್ವಾಭಾವಿಕ ಮಾರ್ಗಗಳ ಬಗ್ಗೆ ಆತನ ಸಂಬಂಧಿಕರು ಮತ್ತು ಗ್ರಾಮಸ್ಥರು ತಿಳಿದಿದ್ದರೂ, ಅವರು ಅದನ್ನು ಯಾರಿಗೂ ಬಹಿರಂಗಪಡಿಸಲಿಲ್ಲ. ಈ ವಿಚಾರ ತಿಳಿದ ನಂತರ ಅವನಿಂದ ದೂರವಿದ್ದರು. ಅವರು ಇಂತಹ ಕೃತ್ಯಗಳಲ್ಲಿ ತೊಡಗಿರುವುದಕ್ಕೆ ನಿಖರವಾದ ಕಾರಣ ನಮಗೆ ಇನ್ನೂ ತಿಳಿದಿಲ್ಲ ಎಂದು ಸ್ಥಳೀಯ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಡಿ.ನವೀನ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ – 2 ಎಕೆ-47 ರೈಫಲ್‌ಗಳು ವಶ

    ಹಸುವಿನ ಜೊತೆ ಅಸ್ವಾಭಾವಿಕ ಸಂಭೋಗ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ರಾಮಕೃಷ್ಣರನ್ನು ಬಂಧಿಸಲಾಗಿದೆ. ದೂರಿನ ಆಧಾರದ ಮೇಲೆ ನಾವು ಐಪಿಸಿ ಸೆಕ್ಷನ್ 377 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]