Tag: cow

  • ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ರಾಯ್ಪುರ: ಹಸುವೊಂದು ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ.

    ಸದ್ಯ ಮೂರು ಕಣ್ಣಿನ್ನು ಹೊಂದಿರುವ ಕರುವನ್ನು ನೋಡಲು ದೂರದ ಊರುಗಳಿಂದ ಜನ ಜಮಾಯಿಸುತ್ತಿದ್ದು, ಎಲ್ಲರೂ ಕರುವಿಗೆ ಹೂವಿನ ಮಾಲೆ ಹಾಕಿ, ಕಾಣಿಕೆ ರೂಪದಲ್ಲಿ ಹಣವನ್ನು ಅರ್ಪಿಸಿ ಮಹಾದೇವನ ರೂಪವೆಂದು ಪೂಜಿಸುತ್ತಿದ್ದಾರೆ. ಮತ್ತೊಂದೆಡೆ ಪಶು ವೈದ್ಯರು ಕರು ಸರಿಯಾಗಿ ಬೆಳವಣಿಗೆಯಾಗದ ಕಾರಣ ಹೀಗೆ ಜನಿಸಿದೆ ಎನ್ನುತ್ತಿದ್ದಾರೆ.  ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ

    ಜನವರಿ 14 ರಂದು ಸಂಜೆ 7 ಗಂಟೆ ಸುಮಾರಿಗೆ ಹಸು ಕರುವಿಗೆ ಜನ್ಮ ನೀಡಿದ್ದು, ಅಂದು ಮಕರ ಸಂಕ್ರಾಂತಿ ಹಬ್ಬದವಾಗಿದ್ದರಿಂದ ಕರುವಿನ ಜನನದ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚಾಗಿದೆ. 3 ಕಣ್ಣಿನ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದು, ಗ್ರಾಮಸ್ಥರು ದೀಪ ಹಚ್ಚಿ, ತೆಂಗಿನಕಾಯಿ ಒಡೆದು ಕರು ಮಹಾದೇವನ ರೂಪ ತಾಳಿದೆ ಎಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

    ರೈತ ಹೆಮಂತ್ ಚಂದೇಲ್ ಅವರು ಕೃಷಿ ಕೆಲಸದ ಜೊತೆಗೆ ಹಸು ಸಾಕಣೆಯಲ್ಲಿ ತೊಡಗಿಸಿಕೊಂಡಿದ್ದು, ಜರ್ಸಿ ಹಸುವನ್ನು ಸಾಕಿದ್ದಾರೆ. ಸಂಕ್ರಾತಿ ಹಬ್ಬದಂದು ಹಸು ಕರುವಿಗೆ ಜನ್ಮ ನೀಡಿದ್ದು, ಎರಡು ಕಣ್ಣುಗಳ ಮಧ್ಯೆ ಹಸುವಿನ ಹಣೆಯ ಮೇಲೆ ಮತ್ತೊಂದು ಕಣ್ಣಿದೆ. ವಿಶೇಷವೆಂದರೆ ಈ ಹಸು ಎರಡು ಮೂಗಿನ ರಂಧ್ರಗಳ ಬದಲಿಗೆ 4 ರಂಧ್ರಗಳನ್ನು ಹೊಂದಿದೆ ಹಾಗೂ ಅದರ ಬಾಲ ಜಡೆಯ ಮಾದರಿ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

  • ಹಸುಗೆ ಸೀಮಂತ ಕಾರ್ಯ ನೆರವೇರಿಸಿ ಸಂಭ್ರಮಿಸಿದ ಕುಟುಂಬಸ್ಥರು

    ಹಸುಗೆ ಸೀಮಂತ ಕಾರ್ಯ ನೆರವೇರಿಸಿ ಸಂಭ್ರಮಿಸಿದ ಕುಟುಂಬಸ್ಥರು

    ಚಿಕ್ಕೋಡಿ(ಬೆಳಗಾವಿ): ತುಂಬು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯ ಮಾಡುವುದು ವಾಡಿಕೆ. ಆದರೇ ಇಲ್ಲೊಂದು ಗ್ರಾಮದಲ್ಲಿ ಮನೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಆಕಳಿಗೆ ಸೀಮಂತ ಕಾರ್ಯ ನೆರವೇರಿಸಿ ಸಂಭ್ರಮಿಸಿದ್ದಾರೆ.

    ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಅಪ್ಪಾಸಾಹೇಬ ಪಾಟೋಳೆ ಎಂಬವರು ತಮ್ಮ ಆಕಳಿಗೆ ಸೀಮಂತ ಕಾರ್ಯಕ್ರಮ ನೆರೆವೇರಿಸಿದವರು. ಕಳೆದ ಹಲವಾರು ವರ್ಷಗಳಿಂದ ಅಪ್ಪಾಸಾಹೇಬ ಪಾಟೋಳೆ ಅವರು ತಮ್ಮ ಮನೆಯಲ್ಲಿರುವಂತಹ ಆಕಳುಗಳಿಗೆ ವಿಶೇಷ ಸ್ಥಾನಮಾನ ನೀಡುವದಲ್ಲದೇ ತಮ್ಮ ಮನೆಯ ಮಕ್ಕಳಂತೆ ಸಾಕುತ್ತಿದ್ದಾರೆ.

    ಇದೇ ಸಂದರ್ಭದಲ್ಲಿ ತಮ್ಮ ಮನೆಯಲ್ಲಿದ್ದ ಆಕಳೊಂದು 7 ತಿಂಗಳ ಗರ್ಭಿಣಿಯಾಗಿದೆ. ಹೀಗಾಗಿ ತಮ್ಮ ಮನೆ ಮಗಳಂತೆ ಹಸುಗೆ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಪಾಟೋಳೆ ಕುಟುಂಬಸ್ಥರು ಸೇರಿಕೊಂಡು ಆಕಳಿಗೆ ಕುಂಕುಮ-ಅರಿಶಿಣ ಹಚ್ಚಿ, ಸೀರೆ ಉಡಿಸಿ, ಸೋಬಾನೆ ಪದಗಳನ್ನು ಹಾಡಿ, ಹೊಳಿಗೆ ತಿನ್ನಿಸಿ ಶಾಸ್ತ್ರೋಕ್ತವಾಗಿ ಸಂಭ್ರಮದಿಂದ ಸೀಮಂತ ಕಾರ್ಯಕ್ರಮವನ್ನು ಮಾಡಿದ್ದಾರೆ. ಇನ್ನೂ ಇವರ ಕಾರ್ಯಕ್ಕೆ ಜಿಲ್ಲೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

    ಸಂಧರ್ಭದಲ್ಲಿ ರೂಪಾಲಿ, ಪಾಟೋಳೆ, ಅಕ್ಕಾತಾಯಿ ಪಾಟೀಲ್, ರಾಧಿಕಾ ಶಿರಹಟ್ಟಿ, ರಾಜಶ್ರೀ ಘೋಸರವಾಡೆ ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಆನ್‌ಸ್ಕ್ರೀನ್‌ ಮೇಲೆ ಸಮಂತಾ, ನನ್ನ ಜೋಡಿ ಚೆನ್ನಾಗಿತ್ತು: ನಾಗ ಚೈತನ್ಯ

  • ಸರಳತೆ ಮೆರೆದ ನಿರ್ದೇಶಕ ಪ್ರೇಮ್- ಅಭಿಮಾನಿಗಳಿಂದ ಮೆಚ್ಚುಗೆ

    ಸರಳತೆ ಮೆರೆದ ನಿರ್ದೇಶಕ ಪ್ರೇಮ್- ಅಭಿಮಾನಿಗಳಿಂದ ಮೆಚ್ಚುಗೆ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ದೇಶಕ ಪ್ರೇಮ್ ಅವರು ದನಗಳ ಮೈತೊಳೆದು ಶೃಂಗಾರ ಮಾಡುತ್ತಿರುವ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪ್ರೇಮ್ ಕುಟುಂಬಸ್ಥರ ಸರಳತೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪ್ರೇಮ್ ಅವರು ತಮ್ಮ ತಾಯಿಯವರ ತೋಟಕ್ಕೆ ಕುಟುಂಬದವರು ಹಾಗೂ ಏಕಲವ್ಯ ಚಿತ್ರ ತಂಡದ ಜೊತೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಅಲ್ಲಿ ಅವರು ತಮ್ಮ ಜಮೀನಿನಲ್ಲಿರುವ ದನಗಳ ಮೈತೊಳೆಸಿ ಅವುಗಳಿಗೆ ತಿನ್ನಲು ಹುಲ್ಲನ್ನು ಹಾಕಿ, ಹೂವಿನ ಹಾರಗಳನ್ನು ಹಾಕಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮಗನಿಗೆ ಪೇಟವನ್ನು ಕಟ್ಟುತ್ತಿರುವ ಮತ್ತೊಂದು ಫೋಟೋ ಹಂಚಿಕೊಂಡಿದ್ದಾರೆ. ಪ್ರೇಮ್ ಜೊತೆಗೆ ರಕ್ಷಿತಾ ಪ್ರೇಮ್ ಹಾಗೂ ಏಕಲವ್ಯ ಟೀಂ ಸಾಥ್ ಕೊಟ್ಟಿದ್ದಾರೆ.

    ಸಂಕ್ರಾಂತಿಯಂದು ಹಸುಗಳಿಗೆ ಕಿಚ್ಚು ಹಾಯಿಸುವ ವೀಡಿಯೋವನ್ನು ಹಾಕಿಕೊಂಡು ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯವನ್ನು ಕೋರಿದ್ದಾರೆ. ಈ ಫೋಟೋ ಹಾಗೂ ವೀಡಿಯೋಕ್ಕೆ ಹಲವಾರು ಜನರು ಕಾಮೆಂಟ್ ಮಾಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇವರ ನಡೆ, ನುಡಿ ಹಾಗೂ ಸಂಪ್ರದಾಯವನ್ನು ನೋಡಿದರೆ ಖುಷಿಯಾಗುತ್ತದೆ ಎಂದು ಒಬ್ಬರು ಕಾಮೆಂಟ್ ಹಾಕಿದ್ದಾರೆ. ನಿಮ್ಮನ್ನು ನೋಡಿದರೇ ಸಂತೋಷವಾಗುತ್ತದೆ ಎಂದು ಇನ್ನೊಬ್ಬರು ಪ್ರೇಮ್ ಅವರ ಫೋಟೋ ಕುರಿತು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಮಲಯಾಳಂ ನಟ ಮಮ್ಮುಟ್ಟಿಗೆ ಕೋವಿಡ್-19 ಪಾಸಿಟಿವ್

    ಸದ್ಯ ಪ್ರೇಮ್ ನಿರ್ದೇಶನದ ಏಕಲವ್ಯ ಚಿತ್ರ ಬಿಡುಗಡೆಗೆ ಸಿದ್ಧತೆಗೊಂಡಿದೆ. ಅದರ ಪ್ರಚಾರದಲ್ಲಿ ಪ್ರೇಮ್ ಬ್ಯುಸಿಯಾಗಿದ್ದಾರೆ. ಕೊರೊನಾ ಕಾರಣದಿಂದಾಗಿ ಸಿನಿಮಾ ಬಿಡುಗಡೆಯ ದಿನಾಂಕವನ್ನೂ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ ಭಾಮ

  • ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ

    ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ

    ವಾರಣಾಸಿ: ಕೋಟ್ಯಂತರ ಜನರ ಜೀವನವು ಜಾನುವಾರುಗಳ ಮೇಲೆ ಅವಲಂಬಿತವಾಗಿದೆ ಎನ್ನುವ ಸೂಕ್ಷ್ಮ ವಿಚಾರವು ಕೆಲವರಿಗೆ ತಿಳಿದಿರುವುದಿಲ್ಲ. ಗೋವು ನಮಗೆ ತಾಯಿ ಮತ್ತು ಪವಿತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ವಾರಣಾಸಿಯಲ್ಲಿ 2095 ಕೋಟಿ ರೂಪಾಯಿ ವೆಚ್ಚದ 27 ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಾರಣಾಸಿಗೆ  ಒಂದೇ ವಾರದಲ್ಲಿ ಎರಡನೇ ಬಾರಿ ಭೇಟಿಯಾಗುತ್ತಿದ್ದೇನೆ. ಈ ಯೋಜನೆಗಳಲ್ಲಿ (Banas Dairy Sankul project) ಬನಾಸ್ ಡೈರಿ ಸಂಕುಲ್ ಯೋಜನೆಯೂ ಸೇರಿದೆ. ಈ ಡೈರಿಯು ದಿನಕ್ಕೆ 5 ಲಕ್ಷ ಲೀಟರ್ ಹಾಲನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದ್ದು, 30 ಎಕರೆ ಪ್ರದೇಶದಲ್ಲಿ ಅಂದಾಜು 475 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

    ಗೋವು ನಮಗೆ ತಾಯಿ ಪವಿತ್ರ ಎಂದು ಪೂಜೆ ಮಾಡುತ್ತೇವೆ. ಆದರೆ ಹೀಗೆ ಹೇಳಿದರೆ ಕೆಲವರಿಗೆ ಅಪರಾಧ ಎನಿಸುತ್ತದೆ. ಅವರಿಗೆ ಕೋಟ್ಯಂತರ ಜನರ ಜೀವನ ಗೋವುಗಳ ಮೇಲೆ ಅವಲಂಬಿತವಾಗಿರುವುದು ತಿಳಿಯುವುದಿಲ್ಲ. ಗೋಹತ್ಯೆ ನಿಷೇಧವನ್ನು ವಿರೋಧಿಸುವ ರಾಜಕೀಯ ಎದುರಾಳಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ  ಹಿಂದಿನ ಸರ್ಕಾರವೇ ರೈತರ ಆತ್ಮಹತ್ಯೆಗೆ ಕಾರಣ – ಯೋಗಿ ಆದಿತ್ಯನಾಥ್

  • ಹಸುವಿನ ಹೊಟ್ಟೆಯಲ್ಲಿ ಸಿಕ್ತು ಐಸ್‍ಕ್ರೀಂ ಕಪ್, ಸ್ಪೂನ್ ಸೇರಿ 77 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ!

    ಹಸುವಿನ ಹೊಟ್ಟೆಯಲ್ಲಿ ಸಿಕ್ತು ಐಸ್‍ಕ್ರೀಂ ಕಪ್, ಸ್ಪೂನ್ ಸೇರಿ 77 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ!

    ಗಾಂಧಿನಗರ: ದೇಶಾದ್ಯಂತ ಪ್ಲಾಸ್ಟಿಕ್ ಬ್ಯಾನ್ ಮಾಡಿದ್ದರೂ ಅದರ ಬಳಕೆ ಮಾತ್ರ ಇನ್ನೂ ನಿಂತಿಲ್ಲ.

    ಭೂಮಿಯಲ್ಲಿ ಕರಗದೆ ಅನೇಕ ಸಮಸ್ಯೆಗಳಿಗೆ ಕಾರಣವಾಗುವ ಈ ಪ್ಲಾಸ್ಟಿಕ್ ಅನ್ನು ಜನ ಈಗಲೂ ಬಳಕೆ ಮಾಡುತ್ತಾರೆ. ಇದು ಪ್ರಾಣಿಗಳ ಮೇಲೆ ತೀವ್ರ ರೀತಿಯ ಪರಿಣಾಮ ಬೀರುತ್ತದೆ. ಇದಕ್ಕೆ ಈ ಹಸುವೇ ಸ್ಪಷ್ಟ ನಿದರ್ಶನ.

    ಹೌದು. ಹಸುವೊಂದರ ಹೊಟ್ಟೆಯಿಂದ ಶಶ್ಸತ್ರಚಿಕಿತ್ಸೆಯ ಮೂಲಕ ಬರೋಬ್ಬರಿ 77 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೊರಕ್ಕೆ ತೆಗೆಯಲಾಗಿದೆ. ಐಸ್ ಕ್ರೀಂ ಕಪ್, ಚಮಚಗಳು ಮತ್ತು ಪ್ಲಾಸ್ಟಿಕ್ ಚೀಲಗಳು ಹಸುವಿನ ಹೊಟ್ಟೆಯೊಳಗೆ ಸಿಕ್ಕಿದೆ. ಇದನ್ನು ಗುಜರಾತ್ ನ ಆನಂದ್ ಜಿಲ್ಲೆಯ ಪಶುವೈದ್ಯರು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮೈಸೂರಿನ ಗೀತಾ ಗೋಪಿನಾಥ್‌ಗೆ ಐಎಂಎಫ್‌ನ ಉನ್ನತ ಹುದ್ದೆಗೆ ಬಡ್ತಿ

    ರಸ್ತೆ ಬದಿ ಅಸ್ವಸ್ಥಗೊಂಡಿದ್ದ ಹಸುವನ್ನು ಆನಂದ್‍ನಲ್ಲಿರುವ ಪಶು ಆಸ್ಪತ್ರೆಗೆ ಸ್ಥಳೀಯ ಸರ್ಕಾರೇತರ ಸಂಸ್ಥೆಯೊಂದು ಕರೆದೊಯ್ದಿತ್ತು. ಈ ವೇಳೆ ಹಸುವನ್ನು ಪರೀಕ್ಷಿಸಿದ ವೈದ್ಯರು, ಹಸು ಪ್ಲಾಸ್ಟಿಕ್ ತ್ಯಾಜ್ಯ ತಿಂದಿರುವುದಾಗಿ ಹೇಳಿದ್ದಾರೆ. ಅಲ್ಲದೆ ಈ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯುವಂತೆಯೂ ತಿಳಿಸಿದ್ದಾರೆ. ಅಂತೆಯೇ ಬರೋಬ್ಬರಿ ಎರಡೂವರೆ ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆಯ ಬಳಿಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೊರತೆಗೆಯಲಾಗಿದೆ.

  • ನಾಡಗೀತೆ ಪೂರ್ಣವಾಗುವವರೆಗೆ ಕದಲದ ದನ

    ನಾಡಗೀತೆ ಪೂರ್ಣವಾಗುವವರೆಗೆ ಕದಲದ ದನ

    ಉಡುಪಿ: ರಾಷ್ಟ್ರಗೀತೆ, ನಾಡಗೀತೆಗೆ ಗೌರವ ಕೊಡಬೇಕು ಎಂಬುದು ನಿಯಮ. ಬುದ್ಧಿ ತಿಳಿದ ಮನುಷ್ಯರೇ ಕೆಲವೊಮ್ಮೆ ನಿಯಮ ಉಲ್ಲಂಘನೆ ಮಾಡಿ ಉಡಾಫೆ ತೋರಿಸುತ್ತಾರೆ. ಆದರೆ ನಿಯಮ ಗೊತ್ತಿಲ್ಲದ ಹಸುವೊಂದು ನಾಡಗೀತೆ ಕೇಳಿದ ತಕ್ಷಣ ಕೊಂಚವೂ ಅಲುಗಾಡದೆ ನಿಂತು ಗೌರವ ತೋರಿದೆ.

    ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬೈಂದೂರು ವಲಯದ ಮಾವಿನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದೃಶ್ಯ ಕಂಡುಬಂದಿದೆ. ಶಾಲಾ ವಿದ್ಯಾರ್ಥಿಗಳು ಮುಂಜಾನೆ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಹಸು ಶಾಲಾ ಆವರಣದೊಳಗೆ ಬಂದಿದೆ. ವಿದ್ಯಾರ್ಥಿಗಳು ಸಾಮೂಹಿಕವಾಗಿ ನಾಡಗೀತೆ ಹಾಡುವಾಗ ಶಿಸ್ತಿನಲ್ಲಿ ಹಸು ಒಂದೇ ಕಡೆ ನಿಂತಿದೆ. ಇದನ್ನೂ ಓದಿ: ಮುಂದಿನ ಆದೇಶದವರೆಗೆ ದೆಹಲಿಯ ಎಲ್ಲಾ ಶಾಲೆಗಳನ್ನು ಮುಚ್ಚಲಾಗುವುದು: ಗೋಪಾಲ್ ರೈ

    ಅದರಲ್ಲಿಯೂ ಈ ಹಸುವಿನ ವಿಶೇಷವೆಂದರೆ ನಾಡಗೀತೆ ಮುಗಿಯುವವರೆಗೂ ಕದಲದೆ ನಿಂತಲ್ಲೆ ನಿಂತಿದ್ದು, ನಂತರ ಹುಲ್ಲು ಅರಸುತ್ತಾ ಹೋಗಿದೆ. ನಾಡಗೀತೆಗೆ ಹಸು ಪ್ರತಿಕ್ರಿಯಿಸಿದ ಈ ವಿಶೇಷ ದೃಶ್ಯವನ್ನು ಶಿಕ್ಷಕರೊಬ್ಬರು ಸೆರೆ ಹಿಡಿದಿದ್ದಾರೆ.

  • ಹಸು ಜೊತೆಗೆ ವಿವಾಹವಾದ ಮಹಿಳೆ

    ಹಸು ಜೊತೆಗೆ ವಿವಾಹವಾದ ಮಹಿಳೆ

    ಕಾಂಬೋಡಿಯಾ: ವೃದ್ಧೆಯೊಬ್ಬಳು ತನ್ನ ತೀರಿ ಹೋದ ಪತಿಯ ಎಲ್ಲಾ ಗುಣ ಲಕ್ಷಣಗಳು ಈ ಹಸುವಿನಲ್ಲಿ ಇದೆ ಎಂದು  ಅದರ ಜೊತೆಗೆ ವಿವಾಹವಾಗಿರುವುದು  ಸುದ್ದಿಯಾಗಿದೆ.

    ಕಾಂಬೋಡಿಯಾದ ಕ್ರಾತಿ ಪ್ರಾಂತ್ಯದಲ್ಲಿ ವಾಸಿಸುವ 74 ವರ್ಷದ ಖಿಮ್ ಹ್ಯಾಂಗ್ ಹೆಸರಿನ ವೃದ್ಧೆ ತೀರಿ ಹೋದ ತನ್ನ  ಪತಿಯ ಎಲ್ಲಾ ಗುಣಲಕ್ಷಣಗಳನ್ನು ಒಂದು ಹಸುವಿನಲ್ಲಿ ಕಂಡಿದ್ದಾಳೆ. ಆ ಹಸುವನ್ನು ಮದುವೆಯಾಗಿದ್ದಾಳೆ. ಈಕೆ ವಯೋವೃದ್ಧೆಯಾಗಿದ್ದು, ಮದುವೆಯಾಗಿರುವುದಕ್ಕೆ ಯಾವುದೇ ವೀಡಿಯೋ ಸಾಕ್ಷಿಗಳಿಲ್ಲ. ಆದರೆ ಗ್ರಾಮದ ಅನೇಕ ಜನರು ಮದುವೆಯನ್ನು ನೋಡಿದ್ದೇವೆ, ಮದುವೆಯಲ್ಲಿ ಭಾಗವಹಿಸಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಶಿಶುವಿನ ತಲೆ ಕಂಡು ಭಯಭೀತರಾದ ಜನ

    ಮರುಜನ್ಮ ಪಡೆದು ತನ್ನ ಪತಿ ಹಸುವಿನ ರೂಪದಲ್ಲಿ ಮರಳಿದ್ದಾನೆ ಎಂದು ಮಹಿಳೆಗೆ ಹೇಗೆ ಅನಿಸಿತು ಎಂಬ ಪ್ರಶ್ನೆ ಉದ್ಭವಿಸುತ್ತದೆ? ಇದಕ್ಕೆ ಉತ್ತರವನ್ನು ನೋಡೋದಾದರೆ ಹಸು ಜನಿಸಿದಾಗ, ಮಹಿಳೆ ಅದರೊಂದಿಗೆ ಸಾಕಷ್ಟು ಸಮಯ ಕಳೆಯುತ್ತಿದ್ದಳು. ಆಗ ಹಸು ಆಕೆಯ ಕೈ ಮತ್ತು ಮುಖವನ್ನು ನೆಕ್ಕುತ್ತಿತ್ತು ಮತ್ತು ಅನೇಕ ಬಾರಿ ಮುಖಕ್ಕೆ ಮುತ್ತು ನೀಡುತ್ತಿತ್ತು. ತನ್ನ ಪತಿ ತನ್ನನ್ನು ಹೇಗೆ ಪ್ರೀತಿಸುತ್ತಿದ್ದನೋ ಅದೇ ರೀತಿ ಹಸು ತನ್ನನ್ನು ಪ್ರೀತಿಸುತ್ತದೆ ಎಂದು ಅಂದುಕೊಂಡು ಹಸುವನ್ನು ತನ್ನ ಗಂಡನಂತೆ ಪ್ರೀತಿಸುತ್ತಾಳೆ. ಇದನ್ನೂ ಓದಿ: ನಾಗರಹಾವಿನೊಂದಿಗೆ ಹುಡುಗಾಟವಾಡಿ ಮಸಣ ಸೇರಿದ ವೃದ್ಧ

    ಗಂಡನ ಕೋಣೆಯಲ್ಲಿ ಇಟ್ಟಿದ್ದ ದಿಂಬನ್ನು ಹಸುವಿಗೆ ಕೊಟ್ಟಿದ್ದಾಳೆ. ಅಷ್ಟೇ ಅಲ್ಲ ಆಕೆ ಹಸು ಒಟ್ಟಿಗೆ ವಾಸವಾಗಿದ್ದಾಳೆ. ಖಿಮ್ ಮಕ್ಕಳೂ ಈ ಹಸುವೇ ತಮ್ಮ ತಂದೆ ಎಂದು ನಂಬಿಕೊಂಡಿದ್ದಾರೆ. ಅವರು ಗೋವಿಗೆ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ಮರಣದ ನಂತರ ಹಸುವನ್ನು ತಂದೆಯಂತೆ ಪ್ರೀತಿಸಬೇಕು, ಅದನ್ನು ಮಾರಾಟ ಮಾಡಬಾರದು, ಅದು ಮರಣ ಹೊಂದಿದರೆ ಅಂತ್ಯಕ್ರಿಯೆಯನ್ನು ಮಾಡಬೇಕು. ಚೆನ್ನಾಗಿ ಮೇವು ನೀಡಬೇಕು ಎಂದು ಖಿಮ್ ಆಣೆ ಪ್ರಮಾಣವನ್ನು ತನ್ನ ಮಕ್ಕಳಿಂದ  ಮಾಡಿಸಿಕೊಂಡಿದ್ದಾಳೆ ಎನ್ನಲಾಗಿದೆ.

  • ಆರೋಗ್ಯಕ್ಕಾಗಿ ಹಸುವಿನ ಸಗಣಿ ತಿನ್ನುವ ವೈದ್ಯ – ವೀಡಿಯೋ ವೈರಲ್

    ಆರೋಗ್ಯಕ್ಕಾಗಿ ಹಸುವಿನ ಸಗಣಿ ತಿನ್ನುವ ವೈದ್ಯ – ವೀಡಿಯೋ ವೈರಲ್

    ತ್ತಮ ಆರೋಗ್ಯಕ್ಕಾಗಿ ಗೋ ಶಾಲೆಯಲ್ಲಿ ವೈದ್ಯರೊಬ್ಬರು ಸಗಣಿ ತಿನ್ನುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಸಾಮಾನ್ಯವಾಗಿ ಹಸುವಿನ ಸಗಣಿ ಮತ್ತು ಮೂತ್ರವು ಹಲವಾರು ರೋಗಗಳನ್ನು ಗುಣಪಡಿಸುವ ಶಕ್ತಿಹೊಂದಿದೆ ಎಂದು ಭಾರತೀಯರು ನಂಬಿದ್ದಾರೆ. ಆದರೆ ವಿಜ್ಞಾನ ಬೇರೆ ರೀತಿಯೇ ಹೇಳುತ್ತದೆ. ಈ ನಡುವೆ ಮನೋಜ್ ಮಿತ್ತಲ್ ಎಂಬ ವೈದ್ಯರೊಬ್ಬರು ಹಸುವಿನ ಸಗಣಿ ತಿನ್ನುತ್ತಿರುವ ವೀಡಿಯೋವನ್ನು ತಮ್ಮ  ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    ವೀಡಿಯೋದಲ್ಲಿ ಡಾ. ಮನೋಜ್ ಮಿತ್ತಲ್ ಅವರು, ನೆಲದ ಮೇಲಿದ್ದ ಹಸುವಿನ ಸಗಣಿಯನ್ನು ತೆಗೆದುಕೊಂಡು ಅದನ್ನು ಬಾಯಿಗೆ ಹಾಕಿಕೊಂಡು ಸವಿಯುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಗೋ ಮೂತ್ರ ಹಾಗೂ ಹಸುವಿನ ಸಗಣಿ ತಿನ್ನುವುದರಿಂದ ಅನೇಕ ಕಾಯಿಲೆಗಳು ದೂರವಾಗುತ್ತದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ನಟ ದುನಿಯಾ ವಿಜಯ್‍ಗೆ ಪಿತೃ ವಿಯೋಗ

    ಹೆಂಗಸರಿಗೆ ನಾರ್ಮಲ್ ಡೆಲಿವರಿ ಆಗಬೇಕೆಂದರೆ ಹಸುವಿನ ಸಗಣಿ ಸೇವಿಸಬೇಕು ಇದರಿಂದ ಸಿಸೇರಿಯನ್‍ಗೆ ಆಗುವುದನ್ನು ತಪ್ಪಿಸಬಹುದು ಎಂದಿದ್ದಾರೆ. ಜೊತೆಗೆ ಗೋವಿನಿಂದ ಸಿಗುವ ಪಂಚಗವ್ಯದ ಪ್ರತಿಯೊಂದು ಭಾಗವೂ ಮನುಕುಲಕ್ಕೆ ಅತ್ಯಮೂಲ್ಯವಾದದ್ದು, ಗೋವಿನ ಸಗಣಿ ತಿಂದರೆ ನಮ್ಮ ದೇಹ ಮತ್ತು ಮನಸ್ಸು ಶುದ್ಧವಾಗುತ್ತದೆ. ನಮ್ಮ ಆತ್ಮ ಶುದ್ಧವಾಗುತ್ತದೆ. ಒಮ್ಮೆ ಅದು ನಮ್ಮ ದೇಹವನ್ನು ಪ್ರವೇಶಿಸಿದರೆ, ಅದು ನಮ್ಮ ದೇಹವನ್ನು ಶುದ್ಧೀಕರಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂರ್ನಾಲ್ಕು ದಿನ ಮಳೆ ಸೂಚನೆ – ಆತಂಕದಲ್ಲಿ ಬಯಲುಸೀಮೆ ಮಂದಿ

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವೈದ್ಯರನ್ನು ಪ್ರಶ್ನಿಸಲು ಆರಂಭಿಸಿದ್ದಾರೆ. ವೈದ್ಯರ ಹೇಳಿಕೆಗಳನ್ನು ಕೆಲವರು ಒಪ್ಪಿದರೆ, ಮತ್ತೆ ಕೆಲವರು ಅವರ ಪದವಿಯನ್ನು ಪ್ರಶ್ನಿಸಿ, ಅಪಹಾಸ್ಯ ಮಾಡಿದ್ದಾರೆ.

  • ಗೋವುಗಳಿಗೂ ಬಂತು ಅಂಬುಲೆನ್ಸ್ ಸೇವೆ

    ಗೋವುಗಳಿಗೂ ಬಂತು ಅಂಬುಲೆನ್ಸ್ ಸೇವೆ

    ಲಕ್ನೋ: ದೇಶದಲ್ಲೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಹಸುಗಳಿಗೆ ಅಂಬುಲೆನ್ಸ್ ಸೇವೆಯನ್ನು ಒದಗಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

    ರಾಜ್ಯದ ಪಶುಸಂಗೋಪನೆ, ಮೀನುಗಾರಿಕೆ, ಡೈರಿ ಅಭಿವೃದ್ಧಿ ಸಚಿವ ಲಕ್ಷ್ಮಿ ನಾರಾಯಣ್ ಚೌಧರಿ ಅವರು ಈ ಯೋಜನೆ ಕುರಿತಾಗಿ ಮಾತನಾಡಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಸುಗಳಿಗೆ ತ್ವರಿತವಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಅಂಬುಲೆನ್ಸ್ ಸೇವೆಯನ್ನು ಜಾರಿಗೆ ತರುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?

    ಪ್ರಾರಂಭಿಕ ಹಂತದಲ್ಲಿ ಈ ಯೋಜನೆಯಡಿ 515 ಅಂಬುಲೆನ್ಸ್ ಕಾರ್ಯನಿರ್ವಹಣೆ ಮಾಡಲಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಂತಹ ಯೋಜನೆ ಜಾರಿಗೊಳ್ಳುತ್ತಿದೆ. 112 ತುರ್ತು ಸೇವೆ ನಂಬರ್ ನಂತೆಯೇ ಈ ಸೇವೆಯೂ ಕಾರ್ಯನಿರ್ವಹಣೆ ಮಾಡಲಿದ್ದು, ತೀವ್ರವಾದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಹಸುಗಳು ಬೇಗ ಚೇತರಿಸಿಕೊಳ್ಳುವುದಕ್ಕೆ ತ್ವರಿತವಾದ ಚಿಕಿತ್ಸೆ ಲಭ್ಯವಾಗಲು ಈ ಯೋಜನೆ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ

    ಡಿಸೆಂಬರ್‌ನಲ್ಲಿ ಇದಕ್ಕಾಗಿ ಪ್ರತ್ಯೇಕ ಕಾಲ್ ಸೆಂಟರ್ ಪ್ರಾರಂಭವಾಗಲಿದ್ದು, ಕರೆ ಮಾಡಿದ 15-20 ನಿಮಿಷಗಳಲ್ಲಿ ಅಂಬುಲೆನ್ಸ್ ನಿಗದಿತ ಸ್ಥಳಕ್ಕೆ ಆಗಮಿಸಲಿದೆ. ಇದೇ ವೇಳೆ ಉತ್ತಮ ಗುಣಮಟ್ಟದ ವೀರ್ಯ ಹಾಗೂ ಭ್ರೂಣ ಕಸಿ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿ ತಳಿ ಸುಧಾರಣೆ, ಅಭಿವೃದ್ಧಿ ಯೋಜನೆಗೂ ಹೆಚ್ಚಿನ ಒತ್ತು ನೀಡಲಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಭ್ರೂಣ ಕಸಿ ತಂತ್ರಜ್ಞಾನವು ರಾಜ್ಯದಲ್ಲಿ ಕ್ರಾಂತಿ ಮಾಡಲಿದೆ. ಹಸುಗಳು ಹೆಚ್ಚಿನ ಪ್ರಮಾಣದಲ್ಲಿ ಹಾಲು ನೀಡುವಂತೆ ಮಾಡಲಿದೆ. ವಯಸ್ಸಾದ ಹಸುಗಳು ಅಧಿಕ ಹಾಲು ಕೊಡಲಾರಂಭಿಸಿದರೆ ಸಾಕುವವರು ಅವುಗಳನ್ನು ಬೀದಿಗೆ ಬಿಡುವುದಿಲ್ಲ. ಇದರಿಂದ ಬಿಡಾದಿ ಹಸುಗಳ ಸಮಸ್ಯೆಯೂ ತಾನಾಗಿಯೇ ನಿಲ್ಲುತ್ತದೆ. ಯೋಗಿ ಆದಿತ್ಯನಾಥ ಅವರ ನೇತೃತ್ವದ ಸಕಾರದವು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬಿಡಾಡಿ ದನಗಳಿಗೆ ಆಶ್ರಯ ಕಲ್ಪಿಸಲು ಅನುದಾನ ನೀಡುತ್ತಿದೆ. ಈ ಹಿಂದಿನ ಯಾವುದೇ ಸರ್ಕಾರವು ಇಂತಹ ಕ್ರಮವನ್ನು ಕೈಗೊಂಡಿರಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್

    ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್

    ಭೋಪಾಲ್: ಹಸು ಸಗಣಿ ಹಾಗೂ ಮೂತ್ರವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

    ಭಾರತೀಯ ಪಶುವೈದ್ಯಕೀಯ ಸಂಘದಿಂದ ಆಯೋಜಿಸಲಾದ ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರವು ಗೋವುಗಳ ರಕ್ಷಣೆಗಾಗಿ ಗೋಶಾಲೆಗಳನ್ನು ಸ್ಥಾಪಿಸಿದೆ. ಆದರೆ ಅವುಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಮಾಜದ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ನಾವು ಬಯಸಿದರೆ ನಮ್ಮ ಆರ್ಥಿಕತೆಯನ್ನು ಬಲಪಡಿಸಬಹುದು. ಗೋವುಗಳು, ಅವುಗಳ ಸಗಣಿ ಮತ್ತು ಮೂತ್ರದ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢಗೊಳಿಸಬಹುದು. ಮರದ ಬಳಕೆಯನ್ನು ಕಡಿಮೆ ಮಾಡಲು ಮಧ್ಯಪ್ರದೇಶದ ಚಿತಾಗಾರದಲ್ಲಿ ಗೋಕಾಷ್ಟ (ಗೋವಿನ ಸಗಣಿಯಿಂದ ಮಾಡಿದ ತುಂಡು) ವನ್ನು ಬಳಸಲಾಗುತ್ತಿದೆ. ಸಣ್ಣ ರೈತರು ಮತ್ತು ಜಾನುವಾರು ಮಾಲೀಕರಿಗೆ ಹಸು ಸಾಕಣೆ ಹೇಗೆ ಲಾಭದಾಯಕ ವ್ಯವಹಾರವಾಗಬಲ್ಲದು ಎಂಬುದರ ಕುರಿತು ಪಶುವೈದ್ಯರು ಮತ್ತು ತಜ್ಞರು ಫಲಿತಾಂಶ ಆಧಾರಿತ ಕೆಲಸದಲ್ಲಿ ತೊಡಗಬೇಕು ಎಂದಿದ್ದಾರೆ. ಇದನ್ನೂ ಓದಿ:   ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

    ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರುಷೋತ್ತಮ ರೂಪಾಲ ಮಾತನಾಡಿ, ಗುಜರಾತ್‍ನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಹಸು ಸಾಕುವುದರಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಡೈರಿ ಉದ್ಯಮವು ಯಶಸ್ವಿಯಾಗಿದೆ. ಈ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಆಯ್ಕೆ ಮಾಡುವ ಮಹಿಳಾ ಪಶುವೈದ್ಯಕೀಯ ಪದವೀಧರರಿಗೆ ಕೇಂದ್ರ ಸರ್ಕಾರವು ಸಹಾಯ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.