Tag: CP Yogeshwara

  • ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯ ಮಾಡ್ತೀನಿ: ಹೆಚ್‌.ಡಿ ದೇವೇಗೌಡ

    ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯ ಮಾಡ್ತೀನಿ: ಹೆಚ್‌.ಡಿ ದೇವೇಗೌಡ

    – ಉಪ ಚುನಾವಣೆ ಫಲಿತಾಂಶದಿಂದ ಧೃತಿಗೆಡಲ್ಲವೆಂದ ಗೌಡರು

    ನವದೆಹಲಿ: ಟೀಕೆ ಮಾಡುವ ಜನರು ಯಾವಾಗಲೂ ಇರ್ತಾರೆ, ನನ್ನ ವಿರುದ್ಧ ಬರುವ ಟೀಕೆಗಳನ್ನು ಸ್ವೀಕಾರ ಮಾಡುತ್ತೇನೆ. ಉಪ ಚುನಾವಣೆಯಲ್ಲಿ (BY Elecction) ಸೋತ ತಕ್ಷಣ ನಾನು ರಾಜಕೀಯ ಬಿಡುವುದಿಲ್ಲ ನಾನು ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಹೇಳಿದ್ದಾರೆ.

    ಶಾಸಕ ಸಿ.ಪಿ ಯೋಗೇಶ್ವರ್ (CP Yogeshwara) ಹೇಳಿಕೆಗೆ ನವದೆಹಲಿಯಲ್ಲಿ ತಿರುಗೇಟು ನೀಡಿದ ಅವರು, ಶುಕ್ರವಾರ ಸಂಸತ್ ನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಬಗ್ಗೆ ಮಾತನಾಡಿದ್ದೇನೆ. ನನ್ನ ರಾಜ್ಯಸಭೆ ಅವಧಿ 18 ತಿಂಗಳು ಇದೆ, ನನ್ನ ಆರೋಗ್ಯ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ, ಆರೋಗ್ಯ ವ್ಯತಾಸ ಆದರೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    ಹಾಸನದಲ್ಲಿ ಕಾಂಗ್ರೆಸ್‌ ಜನ ಕಲ್ಯಾಣ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಹಾಸನದಲ್ಲಿ ಸಮಾವೇಶದಿಂದ ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಜೆಡಿಎಸ್ ಟಾರ್ಗೆಟ್ ಮಾಡಲೆಂದೇ ಹಾಸನದಲ್ಲಿ ಸಮಾವೇಶ ಮಾಡಿದ್ದಾರೆ. ಅದನ್ನು ಎದುರಿಸುವ ಸಾಮರ್ಥ್ಯ ಜೆಡಿಎಸ್‌ಗೆ ಇದೆ ಇಂದೂ ಎದುರಿಸುತ್ತೇವೆ, ನಾಳೆಯೂ ಎದುರಿಸುತ್ತೇವೆ. ಸಮಾವೇಶದಿಂದ ಏನ್ ಲಾಭ ಒಂದು ದಿನ ಬಂದರು ಮಾತನಾಡಿ ಹೋದರು ಎಂದರು. ಇದನ್ನೂ ಓದಿ: ಜಿ.ಪಂ ಸಿಇಓ ಸಹಿ ನಕಲು ಮಾಡಿ ಎಂಜಿನಿಯರ್‌ಗೆ ನೇಮಕಾತಿ ಪತ್ರ – ಎಫ್‌ಡಿಎ ಮೇಲೆ ಎಫ್‌ಐಆರ್

    ದೇವೇಗೌಡರನ್ನು ನಾವೇ ಸಿಎಂ ಮಾಡಿದ್ದು ಎನ್ನುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜಕೀಯಕ್ಕೆ ಬಂದಿದ್ದು ಯಾವಾಗ? ರಾಮಕೃಷ್ಣ ಹೆಗೆಡೆ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯನಾ? ಕನಕಪುರದಲ್ಲಿ ನಿಲ್ಲಿಸಿ ಗೆಲ್ಲಿಸಿ ಸಿಎಂ ಮಾಡಿದ್ದು ಸಿದ್ದರಾಮಯ್ಯ ನಾ? ಆ ಹೆಗೆಡೆ ಅವರು ಸಿದ್ದರಾಮಯ್ಯ ಅವರನ್ನು ಕಾವಲು ಸಮಿತಿ ಅಧ್ಯಕ್ಷ ಮಾಡಿದ್ರಾ? ಯಾರಿಗೇಳ್ತಾರೆ, ಸುಳ್ಳು ಎಷ್ಟು ದಿನ ಹೇಳಬಹುದು ಎಂದು ಕುಟುಕಿದರು.

    ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಸೋತರೂ ಅವರ ನಾಯಕತ್ವ‌ ಮುಂದೆ ಬೆಳೆಯುತ್ತೆ, ಅವರಿಗೆ ಶಕ್ತಿ ಕೊಡಲು ಪಕ್ಷ ನಿರ್ಣಯ ಮಾಡಿದೆ. ಸೋಲಿನಿಂದ ಧೃತಿಗೆಟ್ಟಿಲ್ಲ, ಹೋರಾಟ ಮಾಡುವ ಕೆಚ್ಚೆದೆ ಇದೆ. ಸೋಲನ್ನು ಸಮತಲದಲ್ಲಿ ತೆಗೆದುಕೊಂಡಿದ್ದೇವೆ, ಇವತ್ತು ಜನರು ಸೋಲಿಸಿದ್ದಾರೆ, ನಾಳೆ ಗೆಲ್ಲಿಸುತ್ತಾರೆ, ಸೋಲು ಗೆಲುವಿಗಾಗಿ ಧೃತಿಗೆಟ್ಟು ಕೂರಲು ಸಾಧ್ಯವಿಲ್ಲ. ನಿಖಿಲ್ ಸಿನಿಮಾ ಬಿಟ್ಟು ಬಹಳ ದಿನ ಆಗಿದೆ. ಹಿರಿಯ ನಾಯಕರ ಒಂದಾಗಿ ಸದಸ್ಯತ್ವ ಅಭಿಯಾನ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಎಲ್ಲ ನಾಯಕರು ಸೇರಿ ಪಕ್ಷವನ್ನು ಮರು ಸಂಘಟನೆ ಮಾಡಬೇಕು ಅಂದರೆ ಮಾಡುತ್ತಾರೆ ಎಂದು ನಿಖಿಲ್ ಗೆ ರಾಜ್ಯಧ್ಯಕ್ಷ ಜವಾಬ್ದಾರಿ ನೀಡುವ ಬಗ್ಗೆ ಸುಳಿವು ನೀಡಿದರು. ಇದನ್ನೂ ಓದಿ:  ಹಾಸನ | ಓಲ್ಡ್ ಬೆಲ್ಟ್ ಗುಂಪಿನ ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ

    ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್‌ ಚುನಾವಣೆಯಲ್ಲೂ ಮೈತ್ರಿ ಹೋರಾಟ ವಿಚಾರ ಕುರಿತು ಮಾತನಾಡಿ, ಸಂಸತ್‌ನಲ್ಲಿ ಜೊತೆಗೆ ಹೋರಾಟ ಮಾಡಿದ್ದೇವೆ, ಈಗಲೂ ಮಾಡುತ್ತೇವೆ, ಜೊತೆಗೆ ಹೋಗುತ್ತೇವೆ ಎಂದರು. ಜಿಟಿ ದೇವೇಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಮಾತನಾಡಲು ಅವರು ನಿರಾಕರಿಸಿದರು.

  • ಡಿಕೆಶಿಗೆ ಸಿಎಂ ಆಗುವ ಅವಕಾಶ ಇದೆ, ಯೋಗೇಶ್ಬರ್ ಗೆಲ್ಲಿಸಿದ್ರೆ ಶಕ್ತಿ ಬರುತ್ತೆ: ಎಂಎಲ್‌ಸಿ ಪುಟ್ಟಣ್ಣ

    ಡಿಕೆಶಿಗೆ ಸಿಎಂ ಆಗುವ ಅವಕಾಶ ಇದೆ, ಯೋಗೇಶ್ಬರ್ ಗೆಲ್ಲಿಸಿದ್ರೆ ಶಕ್ತಿ ಬರುತ್ತೆ: ಎಂಎಲ್‌ಸಿ ಪುಟ್ಟಣ್ಣ

    ರಾಮನರಗ: ಸಿದ್ದರಾಮಯ್ಯ ಅವರ ಬಳಿಕ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಸಿಎಂ ಆಗುವ ಎಲ್ಲಾ ಅವಕಾಶ ಇದೆ. ಸಿ.ಪಿ ಯೋಗೇಶ್ವರ್‌ ಅವರನ್ನ ಗೆಲ್ಲಿಸಿದ್ರೆ ಡಿ.ಕೆ ಶಿವಕುಮಾರ್‌ಗೆ ಶಕ್ತಿ ಬರುತ್ತೆ ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ (MLC Puttanna) ಹೇಳಿದ್ದಾರೆ.

    ಚನ್ನಪಟ್ಟಣ ಉಪಚುನಾವಣೆ (Channapatna By Election) ಹಿನ್ನೆಲೆಯಲ್ಲಿ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮನ್ವಯ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ

    ಸಿದ್ದರಾಮಯ್ಯ (Siddaramaiah) ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಕೆಶಿಗೆ ಇದೆ. ಯೋಗೇಶ್ವರ್ ಗೆಲ್ಲಿಸಿದ್ರೆ ಶಿವಕುಮಾರ್‌ಗೆ ಶಕ್ತಿ ಬರುತ್ತೆ. ಡಿ.ಕೆ ಸುರೇಶ್ ಸೋಲಿಸಲು ಕುಮಾರಸ್ವಾಮಿ ಬಾವನನ್ನ ತಂದು ನಿಲ್ಲಿಸಿದ್ರು. ಈಗ ಈ ಕ್ಷೇತ್ರವನ್ನ ಯೋಗೇಶ್ವರ್‌ಗೆ ಬಿಟ್ಟುಕೊಡಬಹುದಿತ್ತು. ಆದರೆ ಅವರ ಮನೆಯವರಿಗೆ ಬಿಟ್ಟು ಬೇರೆ ಯಾರಿಗೂ ಕುಮಾರಸ್ವಾಮಿ ಟಿಕೆಟ್ ಕೊಡಲ್ಲ. ಕುಮಾರಸ್ವಾಮಿ ಟೂರಿಂಗ್ ಟಾಕೀಸ್, ಎಲ್ಲೂ ನಿಲ್ಲಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕ್ಷೇತ್ರದ 5,000ಕ್ಕೂ ಅಧಿಕ ಹೆಣ್ಣುಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ, ಇದು ಪರ್ಮನೆಂಟ್ ಗ್ಯಾರಂಟಿ: ಭರತ್ ಬೊಮ್ಮಾಯಿ

    ಡಿ.ಕೆ ಸುರೇಶ್ ಅವರ ಸೋಲನ್ನು ಮರೆಯೋಕೆ ಸಿಪಿವೈ ಗೆಲ್ಲಿಸಬೇಕು. ಅದಕ್ಕಾಗಿ ಎಲ್ಲರನ್ನೂ ಮನವೊಲಿಸಿ ಯೋಗೇಶ್ವರ್ ಪರ ಕೆಲಸ ಮಾಡಬೇಕು. ಯೋಗೇಶ್ವರ್ ಕ್ಷೇತ್ರಕ್ಕೆ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ. ಡಿಕೆಶಿ ಕ್ಷೇತ್ರದ ಜನರಿಗೆ ಟ್ರಾನ್ಸ್ಫಾರ್ಮರ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಎರಡು ಬಾರಿ ಗೆದ್ದು ಏನು ಕೊಟ್ಟಿದ್ದಾರೆ? ಕಾಂಗ್ರೆಸ್‌ ಸರ್ಕಾರ ಇನ್ನೂ 3 ವರ್ಷ ಇರುತ್ತೆ. ಸಿಪಿವೈ ಗೆದ್ದರೆ ಹೆಚ್ಚಿನ ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡ್ತಾರೆ. ಸ್ವಾಭಿಮಾನ ಉಳಿಸಿಕೊಳ್ಳಬೇಕು ಅಂದ್ರೆ ಯೋಗೇಶ್ವರ್ ಗೆಲ್ಲಿಸಬೇಕು ಎಂದು ಕರೆ ಕೊಟ್ಟಿದ್ದಾರೆ.

    ಬಳಿಕ ಶಾಸಕ ಹೆಚ್.ಸಿ ಬಾಲಕೃಷ್ಣ ಮಾತನಾಡಿ, ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ. ಕುಮಾರಸ್ವಾಮಿ ಯಾರನ್ನೂ ಬೆಳೆಸುವ ಕೆಲಸ ಮಾಡಿಲ್ಲ. ಎಲ್ಲಾ ಕಡೆ ಅವರ ಕುಟುಂಬದರನ್ನ ಪ್ರತಿಷ್ಠಾಪನೆ ಮಾಡ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ಕುಮಾರಸ್ವಾಮಿಗೆ ನಾವ್ಯಾರೂ ಒಕ್ಕಲಿಗರ ರೀತಿ ಕಾಣುವುದಿಲ್ವಾ? ನಾವು ಅಣ್ಣ-ತಮ್ಮಂದಿರು, ಈ ಜಿಲ್ಲೆಯ ಮಕ್ಕಳು ನಾವು. ಜಗಳ ಆಡಿದ್ದೀವಿ, ಆದ್ರೆ ದ್ವೇಷ ಮಾಡಿಲ್ಲ. ಸಿಪಿವೈಗೆ ಅನ್ಯಾಯ ಆಗೋದು ಗೊತ್ತಾದಾಗ ಅವರನ್ನು ಕರೆತಂದು ಟಿಕೆಟ್ ಕೊಟ್ಟಿದ್ದೀವಿ. ಅವರು ಟೂರಿಂಗ್ ಟಾಕೀಸ್. ಮಂಡ್ಯಕ್ಕೆ ಹೋದ್ರು, ರಾಮನಗರಕ್ಕೂ ಹೋದ್ರು ಈಗ ಇಲ್ಲಿಗೆ ಬಂದವ್ರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 2025ರ ಐಪಿಎಲ್‌ನಲ್ಲೂ ಮಹಿ ಆಡೋದು ಫಿಕ್ಸ್‌ – ಅ.31ಕ್ಕೆ ರಿಟೇನ್‌ ಆಟಗಾರರ ಭವಿಷ್ಯ!

    ಚನ್ನಪಟ್ಟಣದವರಿಗೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್‌ ಗೆಲ್ಲಿಸಿ:
    ರಾಮನಗರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನ ತಂದು ಶಾಸಕನನ್ನಾಗಿ ಸುರೇಶ್ ಮಾಡಿದ್ರು. ಚನ್ನಪಟ್ಟಣದವರಿಗೆ ಸ್ವಾಭಿಮಾನ ಇಲ್ವಾ? ತಾಲೂಕಿಗೆ ನೀರುಕೊಟ್ಟ ಯೋಗೇಶ್ವರ್‌ನ ಸೋಲಿಸಿದ್ರಿ. ನೀರು ಕೊಟ್ಟ ಯೋಗೇಶ್ವರ್‌ಗೆ ವಿಷ ಹಾಕಿದ್ರಿ. ನಿಮಗೆ ದೇವರು ಒಳ್ಳೆಯದು ಮಾಡಲ್ಲ. ಈಗ ಸ್ವಾಭಿಮಾನ ಬೆಳೆಸಿಕೊಳ್ಳಿ ಯೋಗೇಶ್ವರ್ ಗೆಲ್ಲಿಸಿ ಎಂದು ಶಾಸಕ ಮಾರ್ಮಿಕವಾಗಿ ನುಡಿದಿದ್ದರೆ.

  • ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ

    ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ

    – ಚನ್ನಪಟ್ಟಣ ಜನಕ್ಕೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್‌ ಗೆಲ್ಲಿಸಿ ಎಂದ ಶಾಸಕ

    ರಾಮನಗರ: ಕುಮಾರಸ್ವಾಮಿ (HD Kumaraswamy) ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಲೇವಡಿ ಮಾಡಿದ್ದಾರೆ.

    ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (CP Yogeshwar) ಪರ ಮಾಜಿ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಸಮನ್ವಯ ಸಭೆ ನಡೆಸಿದರು. ತಾಲೂಕಿನ ಕೋಡಂಬಳ್ಳಿ ಜಿ.ಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಅಭ್ಯರ್ಥಿ ಯೋಗೇಶ್ವರ್‌, ಶಾಸಕ ಹೆಚ್.ಸಿ ಬಾಲಕೃಷ್ಣ, ಎಂಎಲ್‌ಸಿಗಳಾದ ಎಸ್.ರವಿ, ಪುಟ್ಟಣ್ಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲ್ಲ – ಮಹಾ ವಿಕಾಸ್‌ ಅಘಾಡಿ ಒಕ್ಕೂಟಕ್ಕೆ ಬೆಂಬಲ

    ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ. ಕುಮಾರಸ್ವಾಮಿ ಯಾರನ್ನೂ ಬೆಳೆಸುವ ಕೆಲಸ ಮಾಡಿಲ್ಲ. ಎಲ್ಲಾ ಕಡೆ ಅವರ ಕುಟುಂಬದರನ್ನ ಪ್ರತಿಷ್ಠಾಪನೆ ಮಾಡ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ವಿಜಯಪುರದ ಸೈಬರ್ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಮನ್ ಕಿ ಬಾತ್‌ನಲ್ಲಿ ಮೋದಿ ಜಾಗೃತಿ

    ಕುಮಾರಸ್ವಾಮಿಗೆ ನಾವ್ಯಾರೂ ಒಕ್ಕಲಿಗರ ರೀತಿ ಕಾಣುವುದಿಲ್ವಾ? ನಾವು ಅಣ್ಣ-ತಮ್ಮಂದಿರು, ಈ ಜಿಲ್ಲೆಯ ಮಕ್ಕಳು ನಾವು. ಜಗಳ ಆಡಿದ್ದೀವಿ, ಆದ್ರೆ ದ್ವೇಷ ಮಾಡಿಲ್ಲ. ಸಿಪಿವೈಗೆ ಅನ್ಯಾಯ ಆಗೋದು ಗೊತ್ತಾದಾಗ ಅವರನ್ನು ಕರೆತಂದು ಟಿಕೆಟ್ ಕೊಟ್ಟಿದ್ದೀವಿ. ಅವರು ಟೂರಿಂಗ್ ಟಾಕೀಸ್. ಮಂಡ್ಯಕ್ಕೆ ಹೋದ್ರು, ರಾಮನಗರಕ್ಕೂ ಹೋದ್ರು ಈಗ ಇಲ್ಲಿಗೆ ಬಂದವ್ರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ಚನ್ನಪಟ್ಟಣದವರಿಗೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್‌ ಗೆಲ್ಲಿಸಿ:
    ರಾಮನಗರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನ ತಂದು ಶಾಸಕನನ್ನಾಗಿ ಸುರೇಶ್ ಮಾಡಿದ್ರು. ಚನ್ನಪಟ್ಟಣದವರಿಗೆ ಸ್ವಾಭಿಮಾನ ಇಲ್ವಾ? ತಾಲೂಕಿಗೆ ನೀರುಕೊಟ್ಟ ಯೋಗೇಶ್ವರ್‌ನ ಸೋಲಿಸಿದ್ರಿ. ನೀರು ಕೊಟ್ಟ ಯೋಗೇಶ್ವರ್‌ಗೆ ವಿಷ ಹಾಕಿದ್ರಿ. ನಿಮಗೆ ದೇವರು ಒಳ್ಳೆಯದು ಮಾಡಲ್ಲ. ಈಗ ಸ್ವಾಭಿಮಾನ ಬೆಳೆಸಿಕೊಳ್ಳಿ ಯೋಗೇಶ್ವರ್ ಗೆಲ್ಲಿಸಿ ಎಂದು ಶಾಸಕ ಮಾರ್ಮಿಕವಾಗಿ ನುಡಿದಿದ್ದರೆ.

  • ಕರ್ನಾಟಕ ಫ್ರಾಡ್‌ಗಳ ಸಂತೆಯಾಗಲು ಸಿದ್ದರಾಮಯ್ಯ ಕಾರಣ – ಹೆಚ್‌. ವಿಶ್ವನಾಥ್‌ ಲೇವಡಿ

    ಕರ್ನಾಟಕ ಫ್ರಾಡ್‌ಗಳ ಸಂತೆಯಾಗಲು ಸಿದ್ದರಾಮಯ್ಯ ಕಾರಣ – ಹೆಚ್‌. ವಿಶ್ವನಾಥ್‌ ಲೇವಡಿ

    – ಬೈರತಿ ಸುರೇಶ್‌ನನ್ನ ಒದ್ದು ಒಳಗೆ ಹಾಕಿ, ಮುಡಾ ಹಗರಣ ಬಯಲಾಗುತ್ತೆ
    – ʻಸೈನಿಕʼ ಕುಲಕ್ಕೆ ಯೋಗೇಶ್ವರ್ ಅಪಮಾನ ಎಂದ ಎಂಎಲ್‌ಸಿ

    ಮೈಸೂರು: ಮುಡಾ ಹಾಗೂ ವಾಲ್ಮೀಕಿ ಹಗರಣ (MUDA And Valmiki Scam) ಪ್ರಕರಣದಲ್ಲಿ ಕಾಂಗ್ರೆಸ್‌ ಮುಳುಗಿದೆ. ಇದರ ಜೊತೆಗೆ ಯೋಗೇಶ್ವರ್ ಎಂಬ ಮತ್ತೊಬ್ಬ ಫ್ರಾಡ್‌ ಕಾಂಗ್ರೆಸ್‌ಗೆ ಜೊತೆಯಾಗಿದ್ದಾನೆ. ಕರ್ನಾಟಕ ಫ್ರಾಡ್‌ಗಳ ಸಂತೆಯಾಗಿದೆ, ಇದಕ್ಕೆ ಕಾರಣರು ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ (H Vishwanath) ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಸೈನಿಕʼ ಕುಲಕ್ಕೆ ಯೋಗೇಶ್ವರ್ (CP Yogeshwara) ಅಪಮಾನ. ಅವನನ್ನ ಸೈನಿಕ ಅಂತ ಕರೆಯಬೇಡಿ. ಹುಣಸೂರು ಉಪ ಚುನಾವಣೆ ವೇಳೆ ಪಾರ್ಟಿ ಕೊಟ್ಟ ಹಣ ತೆಗೆದು ಕೊಂಡು ಓಡಿ ಹೋದ. ಕಾಂಗ್ರೆಸ್‌ಗೆ ಒಬ್ಬ ಫ್ರಾಡ್‌ ಯೋಗೇಶ್ವರ್‌ ಅನಿವಾರ್ಯ ಆಗಿಬಿಟ್ನಾ? ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

    ಮುಡಾ ಹಾಗೂ ವಾಲ್ಮೀಕಿ ವಂಚನೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಳುಗಿದೆ. ಇದರ ಜೊತೆಗೆ ಯೋಗೇಶ್ವರ್ ಎಂಬ ಮತ್ತೊಬ್ಬ ಫ್ರಾಡ್‌ ಕಾಂಗ್ರೆಸ್‌ಗೆ ಜೊತೆಯಾಗಿದ್ದಾನೆ. ಕರ್ನಾಟಕ ಫ್ರಾಡ್‌ಗಳ ಸಂತೆಯಾಗಿದೆ, ಇದಕ್ಕೆ ಕಾರಣರು ಸಿಎಂ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ – ಸಿಪಿವೈ ಪಕ್ಷ ಸೇರುವ ಮುನ್ಸೂಚನೆ ಕೊಟ್ಟ ಸಿಎಂ

    ಇದೇ ವೇಳೆ ʻನಾನು ಪ್ರಾಮಾಣಿಕ ಎಂಬ ಸಿದ್ದರಾಮಯ್ಯ ಭಾಷಣಕ್ಕೆ ತಿರುಗೇಟು ನೀಡಿದ ವಿಶ್ವನಾಥ್‌, ಈ ಉಪಚುನಾವಣೆಯಿಂದ ಸರಕಾರಕ್ಕೆ ಏನೂ ಆಗಲ್ಲ. ಅದಕ್ಕೆ ಯಾಕೆ ಇಷ್ಟು ತಲೆ ಕೆಡಿಸಿ ಕೊಂಡಿದ್ದಾರೆ? ಸಿದ್ದರಾಮಯ್ಯ ಕಾಂಗ್ರೆಸ್‌ ಅನ್ನು ಹಾಳು ಮಾಡಿಬಿಟ್ಟರು. ಸಿದ್ದರಾಮಯ್ಯನವರೇ ರಾಜ್ಯದ ಜನ ಮಂಗರಲ್ಲ. ನಿಮ್ಮ ಸುಳ್ಳು ಜನರಿಗೆ ಅರ್ಥವಾಗುತ್ತಿದೆ. ಸಿದ್ದರಾಮಯ್ಯ ಒಬ್ಬ ಭ್ರಷ್ಟ ಎಂಬುದು ಜನರಿಗೆ ಗೊತ್ತಾಗಿದೆ. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮುಡಾದಲ್ಲಿ ಬರೋಬ್ಬರಿ 5,000 ಕೋಟಿ ಅವ್ಯವಹಾರ ಆಗಿದೆ – ಶಾಸಕ ಎ ಮಂಜು ಹೊಸ ಬಾಂಬ್‌

    ಸಿದ್ದರಾಮಯ್ಯ ಅವರೇ ನಿಮ್ಮ ಸೊಸೆ ಹೆಸರಿನಲ್ಲಿ ಪಬ್ ಇಲ್ವಾ? ಅದಕ್ಕೆ ಕೋಟ್ಯಂತರ ಬಾಡಿಗೆ ಬರೋದಿಲ್ವಾ? ಬೈರತಿ ಸುರೇಶ್‌ನನ್ನ ಒದ್ದು ಒಳಗೆ ಹಾಕಿ. ಮುಡಾದ ಎಲ್ಲಾ ಹಗರಣ ಬಯಲಾಗುತ್ತದೆ. ಒಳ್ಳೆ ಕೆಲಸಕ್ಕೆ ಕುರುಬರನ್ನು ಕರೆಯಿರಿ ಅಂತಿದ್ದರು. ಈಗ ಅದಕ್ಕೂ ಸಿದ್ದರಾಮಯ್ಯ, ಬೈರತಿ ಸುರೇಶ್ ಅಂತವರು ಮಸಿ ಬಳಿದು ಬಿಟ್ಟರು. ಸಿದ್ದರಾಮಯ್ಯಗೆ ಅಂಟಿರುವ ಕೊಳಕು ತೊಳೆದುಕೊಳ್ಳಲು ಆಗಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ, ಮುಡಾದಲ್ಲಿ 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದಿದ್ದೇ ಕಾಂಗ್ರೆಸ್‌ನವರು: ಅಶೋಕ್

    ಸಿದ್ದರಾಮಯ್ಯ 16ನೇ ಲೂಯಿ ದೊರೆ ಇದ್ದಂಗೆ. ಲೂಯಿ ತನ್ನ ನಂತರ ಜಲಪ್ರಳಯ ಆಗಲಿ ಅಂದಿದ್ದ. ಅದೇ ರೀತಿ ಸಿದ್ದರಾಮಯ್ಯ ತನ್ನ ನಂತರ ಯಾರು ಇರಬಾರದು ಎಂಬ ಮನಃಸ್ಥಿತಿ ಹೊಂದಿದ್ದಾರೆ. ಒಕ್ಕಲಿಗರು, ಲಿಂಗಾಯತರು ಸಿದ್ದರಾಮಯ್ಯಗೆ ಮತ ಹಾಕಿಲ್ವಾ? ಯಾಕೆ ಈಗ ಹಿಂದುಳಿದ ಕಾರ್ಡ್ ಅನ್ನು ಸಿಎಂ ಪ್ಲೇ ಮಾಡುತ್ತಿದ್ದಾರೆ? ಹಿಂದುಳಿದವರ ಮೂಗಿಗೆ ಸಿದ್ದರಾಮಯ್ಯ ಬೆಣ್ಣೆ ಸವರಿದ್ದಾರೆ. ಪ್ರದೇಶ ಕುರುಬರ ಸಂಘ ಒಡೆದಿದ್ದು ಯಾರು? ನಾನು ಕಟ್ಟಿದ ಕುರುಬರ ಮಠ ಒಡೆದಿದ್ದು ಯಾರು? ಇದೇ ಸಿದ್ದರಾಮಯ್ಯ ತಾನೇ ಎಂದು ಆರೋಪ ಮಾಡಿದ್ದಾರೆ.

  • ದೇವೇಗೌಡರ ತುರ್ತು ಬುಲಾವ್‌ – ಚನ್ನಪಟ್ಟಣದಲ್ಲಿ ಅಖಾಡಕ್ಕಿಳಿಯುತ್ತಾರಾ ನಿಖಿಲ್‌ ಕುಮಾರಸ್ವಾಮಿ?

    ದೇವೇಗೌಡರ ತುರ್ತು ಬುಲಾವ್‌ – ಚನ್ನಪಟ್ಟಣದಲ್ಲಿ ಅಖಾಡಕ್ಕಿಳಿಯುತ್ತಾರಾ ನಿಖಿಲ್‌ ಕುಮಾರಸ್ವಾಮಿ?

    – ಯೋಗೇಶ್ವರ್‌ ವಿಚಾರದಲ್ಲಿ ನಾವು ದೊಡ್ಡ ಔದಾರ್ಯತೆ ತೋರಿದ್ದೇವೆ: ನಿಖಿಲ್‌

    ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ (MLC) ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಇತ್ತ ಜೆಡಿಎಸ್‌ನಲ್ಲಿ ಅಭ್ಯರ್ಥಿ ಆಯ್ಕೆ ಚಟುವಟಿಕೆ ಚುರುಕುಗೊಂಡಿದೆ. ಈ ನಡುವೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರನ್ನ ಭೇಟಿ ಮಾಡಿದ್ದಾರೆ.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ನಿಲ್ಲುತ್ತೇನೆ ಅಂತ ಹೇಳಿಲ್ಲ. ಕಳೆದ ಎರಡೂ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಕುಮಾರಣ್ಣನನ್ನ (Channapatna) ಜನ ಗೆಲ್ಲಿಸಿದ್ದಾರೆ. ಇದು ಕುಮಾರಣ್ಣ ಅವರ ಸ್ವಕ್ಷೇತ್ರ. ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರಿಗೆ ಯಾವುದೇ ರೀತಿಯ ತೀರ್ಮಾನ ತಗೊಳ್ಳಿ ಅಂತ ಹೇಳಿದ್ದಾರೆ. ಆದರೂ ಮೈತ್ರಿಗೆ ಭಂಗವಾಗಬಾರದು ಅಂತ ನಾವಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

    ನಮ್ಮ ತೀರ್ಮಾನ ಏನೇ ಇದ್ರೂ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ತಗೋತೀವಿ. ನಮಗೆ ಸ್ವಾತಂತ್ರ‍್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಇದಕ್ಕೆ ಕಾರಣ ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಬೇಕು ಅಂತ. ಒಬ್ಬ ವ್ಯಕ್ತಿಯ ನಡವಳಿಕೆ ನೋಡಿ, ನಾವು ಯಾವುದೇ ರೀತಿಯ ಆತುರದ ನಿರ್ಧಾರ ಮಾಡಲ್ಲ. ಯೋಗೀಶ್ವರ್ ವಿಚಾರದಲ್ಲಿ ನಾವು ದೊಡ್ಡ ಔದಾರ್ಯತೆ ತೋರಿದ್ದೇವೆ. ನಮ್ಮ ನಾಯಕರು ಯೋಗೇಶ್ವರ್ ಅವರಿಗೆ ಆಹ್ವಾನ ಕೊಟ್ಟಿದ್ದಾರೆ. ಇನ್ನೇನು ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

    ಲೋಕಸಭೆಯಲ್ಲಿ ಮೈತ್ರಿಕೂಟದ ಭಾಗವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಹೊಂದಾಣಿಕೆ ಬೆಳೆದಿದೆ. ಒಬ್ಬ ವ್ಯಕ್ತಿಯ ನಡವಳಿಕೆಯಿಂದ ಯಾವುದೇ ತೀರ್ಮಾನ ಕೈಗೊಳ್ಳುವ ಉದ್ವೇಗಕ್ಕೆ ಒಳಗಾಗೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: PSI Selection List | ದೀಪಾವಳಿ ಗಿಫ್ಟ್‌ – 545 ಪಿಎಸ್‌ಐ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

  • ನಾವು ಗೆಲ್ಲಬೇಕು ಅಂದ್ರೆ ಸಿಪಿವೈ ಅವರಿಗೆ ಟಿಕೆಟ್ ಕೊಡಬೇಕು:  ಬೆಲ್ಲದ್ ಬ್ಯಾಟಿಂಗ್

    ನಾವು ಗೆಲ್ಲಬೇಕು ಅಂದ್ರೆ ಸಿಪಿವೈ ಅವರಿಗೆ ಟಿಕೆಟ್ ಕೊಡಬೇಕು: ಬೆಲ್ಲದ್ ಬ್ಯಾಟಿಂಗ್

    ಹುಬ್ಬಳ್ಳಿ: ನಾವು ಗೆಲ್ಲಬೇಕು ಅಂದ್ರೆ ಯೋಗೇಶ್ವರ್ ( C P Yogeshwar) ಅವರಿಗೆ ಟಿಕೆಟ್ ಕೊಡಬೇಕು. ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಮನಸ್ಸಿನಲ್ಲಿ ಯೋಗೇಶ್ವರ್ ಅಭ್ಯರ್ಥಿ ಆಗಬೇಕು ಅನ್ನೋ ಆಸೆ ಇದೆ. ಅವರೇ ಚನ್ನಪಟ್ಟಣ ಅಭ್ಯರ್ಥಿ ಆಗಬೇಕು. ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿ ಆಗಬೇಕು. ನಮ್ಮೆಲ್ಲರಿಗೂ ಯೋಗೇಶ್ವರ್ ಅವರನ್ನೇ ಅಭ್ಯರ್ಥಿ ಮಾಡಬೇಕು ಅನ್ನೋ ಒತ್ತಾಯ ಇದೆ. ನಾವೆಲ್ಲ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡುತ್ತೇವೆ. ಅಂತಿಮವಾಗಿ ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಹಾಗೇ ನೋಡಿದರೆ ಕುಮಾರಸ್ವಾಮಿ ಅವರೇ ಯೋಗಿಶ್ವರ್ ಅವರನ್ನು ಕರೆದು ಟಿಕೇಟ್ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಹಣಕಾಸು ವಹಿವಾಟು ನಡೆದಿಲ್ಲ, ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ: ಡಿ.ಕೆ.ಸುರೇಶ್

    ನಾನು ಶಿಗ್ಗಾಂವಿ ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ (Basavaraj Bommai) ಕುಟುಂಬಕ್ಕೆ ಅವಕಾಶ ಕೊಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ಬೊಮ್ಮಾಯಿ ಬದ್ಧವಾಗಿರಬೇಕು. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರುವ ಬಗ್ಗೆ ಮಾಹಿತಿ ಇದೆ. ಪಕ್ಷ ಅಂದ ಮೇಲೆ ಭಿನ್ನಾಭಿಪ್ರಾಯ ಸಹಜ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

  • Channapatna By Election| ಕಾದು ನೋಡುವ ತಂತ್ರಕ್ಕೆ ಮುಂದಾದ ಯೋಗೇಶ್ವರ್‌

    Channapatna By Election| ಕಾದು ನೋಡುವ ತಂತ್ರಕ್ಕೆ ಮುಂದಾದ ಯೋಗೇಶ್ವರ್‌

    ರಾಮನಗರ: ಚನ್ನಪಟ್ಟಣ ಉಪಚುನಾವಣಾ (Channapatna By Election) ಕಣ ರಂಗೇರಿದೆ. ಮೈತ್ರಿ ಅಭ್ಯರ್ಥಿ ಗೊಂದಲ ಮುಂದುವರಿದಿದೆ. ಟಿಕೆಟ್ ಸಿಗದಿದ್ದರೆ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ್ದ ಸಿ.ಪಿ.ಯೋಗೇಶ್ವರ್ (CP Yogeshwar) ಇದೀಗ ಕೊನೆ ಕ್ಷಣದಲ್ಲಿ ಕಾದುನೋಡುವ ತಂತ್ರಕ್ಕೆ ಮುಂದಾಗಿದ್ದಾರೆ.

    ಬುಧವಾರ ಬೆಂಬಲಿಗರ ಸಭೆ ನಡೆಸಿದ ಸಿಪಿ ಯೋಗೇಶ್ವರ್, ನನಗೆ ಹೈಕಮಾಂಡ್ ನಾಯಕರು ಮಾತುಕೊಟ್ಟಿದ್ದಾರೆ ನೂರಕ್ಕೆ ನೂರರಷ್ಟು ಟಿಕೆಟ್ ನನಗೇ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ 500 ಕೋಟಿ ಪಾವತಿಸಿಲ್ಲ : ಈಶ್ವರ್ ಖಂಡ್ರೆ

     

    ನನಗೆ ಟಿಕೆಟ್ ಕೈತಪ್ಪುವುದು ಹೊಸದಲ್ಲ.ಆದರೆ ಈ ಚುನಾವಣೆಯನ್ನ ಡಿಕೆ ಶಿವಕುಮಾರ್‌ (DK Shivakumar) ಗಂಭೀರವಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ (HD Kumaraswamy) ಕೂಡಾ ಬಂದು ಇಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಹಾಗಾಗಿ ಯಾರಿಗೂ ಆತಂಕ ಬೇಡ ನನಗೆ ಟಿಕೆಟ್ ಸಿಗುತ್ತದೆ. ನನಗೆ ಆಶೀರ್ವಾದ ಮಾಡಿ ಎಂದು ಸಿಪಿ ಯೋಗೇಶ್ವರ್ ಕೋರಿದ್ದಾರೆ.

    ಜೆಡಿಎಸ್‌ ಕ್ಷೇತ್ರ:
    ನಾವು ನಮ್ಮ ಪ್ರಯತ್ನ ಮಾಡಿದ್ದೇವೆ. ಆದರೆ ನ್ಯಾಚುರಲ್ ಆಗಿ ಅದು ಜೆಡಿಎಸ್ ಕ್ಷೇತ್ರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಅಶೋಕ್ (Ashok) ಹೇಳಿದ್ದಾರೆ. ಈ ಮೂಲಕ ಟಿಕೆಟ್ ಜೆಡಿಎಸ್ ಪಾಲಾಗುವ ಸುಳಿವು ನೀಡಿದ್ದಾರೆ.

    ಬಿಜೆಪಿಯವರು ಯಾವುದೇ ಪ್ರಯತ್ನ ಮಾಡಿಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು. ಜೆಡಿಎಸ್ ಕ್ಷೇತ್ರ ಇರುವ ಕಾರಣ ಅಭ್ಯರ್ಥಿ ಆಯ್ಕೆ ಬಗ್ಗೆ ಕುಮಾರಸ್ವಾಮಿಯವರೇ ನಿರ್ಧಾರ ಮಾಡುತ್ತಾರೆ ಎಂದರು.

  • ಅಭ್ಯರ್ಥಿ ಆಯ್ಕೆಯಲ್ಲಿ ಹೆಚ್‌ಡಿಕೆ ನಿರ್ಧಾರ ಮುಖ್ಯ, ಅವರ ನಿರ್ಧಾರಕ್ಕೆ ಬದ್ಧ: ಸಿಪಿವೈ

    ಅಭ್ಯರ್ಥಿ ಆಯ್ಕೆಯಲ್ಲಿ ಹೆಚ್‌ಡಿಕೆ ನಿರ್ಧಾರ ಮುಖ್ಯ, ಅವರ ನಿರ್ಧಾರಕ್ಕೆ ಬದ್ಧ: ಸಿಪಿವೈ

    ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna By Election) ಮೈತ್ರಿ ಅಭ್ಯರ್ಥಿಯಾಗಿ ಆಯ್ಕೆಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ನಿರ್ಧಾರ ಮುಖ್ಯ ಎಂದು ಮಾಜಿ ಶಾಸಕ ಸಿಪಿ ಯೋಗೇಶ್ವರ್‌ (CP Yogeshwara) ಹೇಳಿದ್ದಾರೆ.

    ತಾನು ಆಕಾಂಕ್ಷಿ ಎಂಬ ವಿಚಾರಕ್ಕೆ ಸ್ವತ: ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ಪಕ್ಷ ತೀರ್ಮಾನ ಮಾಡುತ್ತದೆ. ಎರಡೂ ಪಕ್ಷ ತೀರ್ಮಾನ ಮಾಡಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: PublicTV Explainer: ದರ್ಶನ್‌ ಗ್ಯಾಂಗ್‌ ಕ್ಲೀನ್‌ ಮಾಡಿದ್ದ ರಕ್ತದ ಕಲೆ ಪತ್ತೆಗೆ ಲೂಮಿನಲ್‌ ಟೆಸ್ಟ್‌; ಏನಿದು ಪರೀಕ್ಷೆ?

     

    ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕುಮಾರಸ್ವಾಮಿ ಅವರ ನಿರ್ಧಾರ ಮುಖ್ಯ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

    ಈ ಕ್ಷೇತ್ರದಲ್ಲಿ ಸ್ಥಳೀಯ ಮುಖಂಡರು ಸೇರಿ ಡಿಕೆ ಸುರೇಶ್ (DK Suresh) ನಿಂತರೂ ಸೋಲುತ್ತಾರೆ. ಹೀಗಾಗಿ ಡಿಕೆ ಶಿವಕುಮಾರ್‌ (DK Shivakumar) ತಾನೇ ಬಂದು ವಾಮಾಮಾರ್ಗದಲ್ಲಿ ಚುನಾವಣೆ (Election) ಮಾಡಲು ಮುಂದಾಗಿದ್ದಾರೆ ಎಂದು ಸಿಪಿವೈ ತಿಳಿಸಿದರು.

     

    ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸಮಿತಿ ರಚನೆ ವಿಚಾರ ಕುರಿತು ಮಾತನಾಡಿದ ಅವರು, ಚಲುವರಾಯಸ್ವಾಮಿ ಯಶಸ್ವಿಯಾಗಿ ಮಂಡ್ಯ ಚುನಾವಣೆ ಮಾಡಿದ್ದಾರೆ. ಮಂಡ್ಯದಲ್ಲಿ (Mandya) ಉತ್ತಮ ರಿಸಲ್ಟ್ ಕೊಟ್ಟಿದ್ದಾರೆ. ಹಾಗಾಗಿ ಅವರಿಗೆ ಈ ಕ್ಷೇತ್ರದ ಜವಾಬ್ದಾರಿ ಕೊಟ್ಟಿರಬಹುದು ಎಂದು ವ್ಯಂಗ್ಯವಾಡಿದರು.

    ಪಾಪ ಇಲ್ಲಿನ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಸಮಿತಿಯಲ್ಲಿ ಸ್ಥಾನ ಪಡೆದಿಲ್ಲ. ಅವರು ಹಿಂದೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಅಂತವರನ್ನು ಕಡೆಗಣಿಸಿದ್ದಾರೆ. ಅವರು ಯಾವ ಸಮಿತಿ ಮಾಡಿ, ಏನು ಮಾಡುತ್ತಾರೋ ಮಾಡಲಿ ಎಂದರು.

  • ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಬಯಸಿದ್ರಾ ನಟ ದರ್ಶನ್? – ಕಾಂಗ್ರೆಸ್‌ ಅಚ್ಚರಿ ಅಭ್ಯರ್ಥಿ ಜೈಲುಪಾಲಾಗಿದ್ದಾರೆ ಎಂದ ಸಿಪಿವೈ

    ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಬಯಸಿದ್ರಾ ನಟ ದರ್ಶನ್? – ಕಾಂಗ್ರೆಸ್‌ ಅಚ್ಚರಿ ಅಭ್ಯರ್ಥಿ ಜೈಲುಪಾಲಾಗಿದ್ದಾರೆ ಎಂದ ಸಿಪಿವೈ

    ರಾಮನಗರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ನಟ ದರ್ಶನ್ (Actor Darshan), ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಬಯಸಿದ್ರಾ ಅನ್ನೋ ಬಗ್ಗೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್‌ ಸುಳಿವು ಕೊಟ್ಟಿದ್ದಾರೆ. ದರ್ಶನ್‌ ಅವರನ್ನ ಕಾಂಗ್ರೆಸ್‌ನಿಂದ ನಿಲ್ಲಿಸಲು ಡಿಕೆ ಬ್ರದರ್ಸ್‌ ಸಿದ್ಧತೆ ನಡೆಸಿದ್ದರು ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwara) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಹಾಕ್ತೇವೆ ಎಂದಿದ್ದ ಡಿ.ಕೆ ಸುರೇಶ್ (DK Syu ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ನವರ ಅಚ್ಚರಿ ಅಭ್ಯರ್ಥಿ ಇದೀಗ ಜೈಲುಪಾಲಾಗಿದ್ದಾರೆ. ಚಿತ್ರನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿ.ಕೆ ಬ್ರದರ್ಸ್ ಪ್ಲ್ಯಾನ್‌ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನೀವೆ ಊಹೆ ಮಾಡಿಕೊಳ್ಳಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ದರ್ಶನ್‌‌ ಸ್ಪರ್ಧೆಗೆ ಬಯಸಿದ್ದರು ಅನ್ನೋ ಸುಳಿವು ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: ಚರಂಡಿಗೆ ಬೇಡ, ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!

    ದರ್ಶನ್ ಮೇಲೆ ಕೊಲೆ ಆರೋಪ ಕುರಿತು ಮಾತನಾಡಿ, ಈ‌ ವಿಚಾರವನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸ್ತಿದೆ. ಪಾಪ ಅವರಿಗೆ ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ. ಆದರೆ ಈ ರೀತಿ ಅನಾಹುತ ಆಗೋಗಿದೆ. ಮುಂದೆ ಏನಾಗುತ್ತೋ ನೋಡೊಣ ಎಂದು ಸಿಪಿವೈ ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಏರ್ಪೋರ್ಟ್ ಬಳಿ ಅದ್ದೂರಿ ಸ್ವಾಗತ

    ಇದೇ ವೇಳೆ ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರೆಂಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ಕಾಂಗ್ರೆಸ್ ನವರ ದ್ವೇಷದ ರಾಜಕಾರಣ. ಯಡಿಯೂರಪ್ಪರನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಏನಾಗುತ್ತೋ ನೋಡೋಣ, ಅವರು ಸಹ ಕಾನೂನು ಹೋರಾಟ ಮಾಡ್ತಿದ್ದಾರೆ. ಅವರಿಗೆ ಏನು ತೊಂದರೆ ಆಗೋದಿಲ್ಲ ಅಂದುಕೊಳ್ಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕೋಳಿ ಎಸೆದಂತೆ ಎಸೆದು ಟ್ರಕ್‌ಗೆ ಗುದ್ದಿ, ಸಿಕ್ಕ ಸಿಕ್ಕ ವಸ್ತುಗಳಲ್ಲಿ ಹೊಡೆದು ಹತ್ಯೆ

  • ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶೋಕ್, ಅಶ್ವಥ್ ನಾರಾಯಣ್ ಸಮರ್ಥರು – ಸಿಪಿವೈ ಅಚ್ಚರಿ ಹೇಳಿಕೆ

    ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶೋಕ್, ಅಶ್ವಥ್ ನಾರಾಯಣ್ ಸಮರ್ಥರು – ಸಿಪಿವೈ ಅಚ್ಚರಿ ಹೇಳಿಕೆ

    ನವದೆಹಲಿ: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಸ್ಪರ್ಧೆ ಮಾಡಬಹುದು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwara) ಹೇಳಿದ್ದಾರೆ.

    ಕ್ಷೇತ್ರದಲ್ಲಿ ನಡೆದ ಮೈತ್ರಿ ಮಾತುಕತೆ ಸಂಬಂಧ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಡಾ.ಮಂಜುನಾಥ್ (Dr. CN Manjunath) ಅವರ ಹೆಸರು ಪ್ರಸ್ತಾಪಿಸಿದ್ದೇನೆ, ಅವರನ್ನು ಒಪ್ಪಿಸುವ ಜವಬ್ದಾರಿ ನನ್ನದು ಎಂದು ಹೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಸ್ಕರಣೆ ಮಾಡಿದ ನೀರು ಮರುಬಳಕೆಗೆ ಶೀಘ್ರವೇ ಆದೇಶ: ಈಶ್ವರ್ ಖಂಡ್ರೆ

    ಈ ಚುನಾವಣೆಯನ್ನು (Elections) ಸವಾಲಾಗಿ ಸ್ವೀಕರಿಸಿದ್ದೇವೆ, ನಾನು ರಾಜ್ಯ ರಾಜಕಾರಣದಲ್ಲಿ ಇರಬೇಕು ಅಂತ ಅಂದುಕೊಂಡಿದ್ದೇನೆ. ಹೀಗಾಗೀ ನಾನು ಸ್ಪರ್ಧಿಸುವ ಆಸಕ್ತಿ ಇಲ್ಲ. ನಾನು ಮಂಜುನಾಥ್ ಹೆಸರು ಪ್ರಸ್ತಾಪಿಸಿದ್ದೇನೆ, ಕೆಲವು ನಾಯಕರು ನಾನು ಸ್ಪರ್ಧಿಸಿದರೆ ಕಠಿಣ ಪೈಪೊಟಿ ಇರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ

    ಮಂಜುನಾಥ್ ಅವರನ್ನು ಹೊರತುಪಿಡಿಸದರೂ ಅಶ್ವಥ್ ನಾರಾಯಣ್ ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದರು, ಆರ್.ಅಶೋಕ್ ವಿರೋಧ ಪಕ್ಷದ ನಾಯಕರು ಸ್ಪರ್ಧಿಸಲು ಸಮರ್ಥರಿದ್ದಾರೆ. ಅಂತಿಮವಾಗಿ ಪಕ್ಷದ ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣಹತ್ಯೆ ಮತ್ತೆ ಬೆಳಕಿಗೆ- ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ 74 ಗರ್ಭಪಾತ