Tag: CPIM

  • ಕೇರಳದ ಮಾಜಿ ಸಿಎಂ, CPI(M) ನಾಯಕ ಅಚ್ಯುತಾನಂದನ್ ನಿಧನ

    ಕೇರಳದ ಮಾಜಿ ಸಿಎಂ, CPI(M) ನಾಯಕ ಅಚ್ಯುತಾನಂದನ್ ನಿಧನ

    ತಿರುವನಂತಪುರಂ: ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್‌ ಅಚ್ಯುತಾನಂದನ್ (101) ಇಂದು ಕೊನೆಯುಸಿರೆಳೆದಿದ್ದಾರೆ.

    ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಜೂನ್ 23 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿರುವನಂತಪುರದ ಎಸ್‌ಯುಟಿ ಆಸ್ಪತ್ರೆಯಲ್ಲಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಚ್ಯುತಾನಂದನ್‌ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

    ಇಂದು ಬೆಳಗ್ಗೆ ಹಾಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಆಸ್ಪತ್ರೆಗೆ ಭೇಟಿ ನೀಡಿ, ಅಚ್ಯುತಾನಂದನ್‌ ಅವರ ಆರೋಗ್ಯ ಸ್ಥಿತಿ ವಿಚಾರಿಸಿದ್ದರು. ವೈದ್ಯಕೀಯ ಮಂಡಳಿಯೊಂದಿಗೂ ಚರ್ಚೆ ನಡೆಸಿದ್ದರು. ಆದ್ರೆ ಮಧ್ಯಾಹ್ನದ ಹೊತ್ತಿಗೆ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿತ್ತು. ರಕ್ತದೊತ್ತಡದಲ್ಲಿ ಬದಲಾವಣೆಯಾದ ಬಳಿಕ ಆರೋಗ್ಯ ಸ್ಥಿತಿ ಗಂಭೀರ ಹಂತಕ್ಕೆ ತಲುಪಿತ್ತು. ಇದಾದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬುದಾಗಿ ವೈದ್ಯ ಮೂಲಗಳು ತಿಳಿಸಿವೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ಸಿಪಿಎಂ ನಾಯಕರಾದ ಎಸ್. ರಾಮಚಂದ್ರನ್ ಪಿಳ್ಳೈ, ಎಂ.ವಿ. ಜಯರಾಜನ್, ವೀಣಾ ಜಾರ್ಜ್ ಮತ್ತು ವಿ.ಎಂ. ಸುಧೀರನ್ ಆಸ್ಪತ್ರೆಗೆ ತೆರಳಿದ್ದಾರೆ. ಇದನ್ನೂ ಓದಿ: ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳ ಆರೋಪ

    ಬುಧವಾರ ಅಂತ್ಯಕ್ರಿಯೆ
    ವಿ.ಎಸ್ ಅವರ ಪಾರ್ಥಿವ ಶರೀರವನ್ನ ತಕ್ಷಣವೇ ಎ.ಕೆ.ಜಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರಕ್ಕೆ ಕೊಂಡೊಯ್ಯಲಾಗುವುದು. ಇಂದು ರಾತ್ರಿ ಅಲ್ಲಿ ಸಾರ್ವಜನಿಕ ದರ್ಶನ ಇಡಲಾಗುತ್ತದೆ. ನಾಳೆ (ಜು.22) ಬೆಳಗ್ಗೆ 9 ಗಂಟೆಗೆ ಸಾರ್ವಜನಿಕ ದರ್ಶನಕ್ಕಾಗಿ ದರ್ಬಾರ್ ಹಾಲ್‌ಗೆ ಪಾರ್ಥೀವ ಶರೀರವನ್ನ ಇರಿಸಲಾಗುತ್ತದೆ. ಮಧ್ಯಾಹ್ನ ವಿ.ಎಸ್ ಅವರ ಪಾರ್ಥಿವ ಶರೀರವನ್ನ ರಾಷ್ಟ್ರೀಯ ಹೆದ್ದಾರಿ ಮೂಲಕ ಆಲಪ್ಪುಳದಲ್ಲಿರುವ ಮನೆಗೆ ಕೊಂಡೊಯ್ಯಲಾಗುತ್ತದೆ. ಬುಧವಾರ ಬೆಳಗ್ಗೆ ಆಲಪ್ಪುಳ ಸಿಪಿಎಂ ಜಿಲ್ಲಾ ಸಮಿತಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಅಂದು ಮಧ್ಯಾಹ್ನದ ಹೊತ್ತಿಗೆ ಅಲಪ್ಪುಳದ ವಲಿಯ ಚುಡುಕಾಡು ಎಂಬಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಮಾಹಿತಿ ನೀಡಿದ್ದಾರೆ.

  • Tripura Assembly Electionsː ಬಿಗಿ ಭದ್ರೆತೆಯಲ್ಲಿ ಮತದಾನ, ತೃತೀಯಲಿಂಗಿಗಳಿಂದಲೂ ವೋಟಿಂಗ್

    Tripura Assembly Electionsː ಬಿಗಿ ಭದ್ರೆತೆಯಲ್ಲಿ ಮತದಾನ, ತೃತೀಯಲಿಂಗಿಗಳಿಂದಲೂ ವೋಟಿಂಗ್

    ಅಗರ್ತಲಾ: ತ್ರಿಪುರಾ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Tripura Assembly Elections) ಆರಂಭವಾಗಿದ್ದು, ರಾಜ್ಯದ ಎಲ್ಲ ಕಡೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಗಿಟ್ಟೆ ಕಿರಣ್ ಕುಮಾರ್ ದಿನಕರ್ರೋ ತಿಳಿಸಿದ್ದಾರೆ.

    ಗುರುವಾರ (ಫೆ.16) ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಬೆಳಗ್ಗೆ 9 ಗಂಟೆ ವೇಳೆಗೆಲ್ಲಾ ಶೇ. 13.92 ಮತದಾನ ನಡೆದಿದೆ. ತೃತೀಯ ಲಿಂಗಿಗಳೂ ಇದರಲ್ಲಿ ಮತದಾನ ಮಾಡಿರುವುದು ವಿಶೇಷ. ಚುನಾವಣಾ ಭದ್ರತೆಗಾಗಿ 11 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ 400 ಸಿಆರ್‌ಪಿಎಫ್ (CRPF) ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

    ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಬಿಜೆಪಿ (BJP), ಕಾಂಗ್ರೆಸ್ (Congress, ಕಮ್ಯುನಿಸ್ಟ್ ಪಕ್ಷಗಳು ಸ್ಪರ್ಧೆ ಮಾಡಿವೆ. ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು 6 ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ – ಯುಪಿ ಮಾದರಿಯಲ್ಲಿ ಮಹಿಳೆಯರ ಮನ ಗೆಲ್ಲೋಕೆ ಪ್ಲಾನ್‌?

    ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದ್ದು 13 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಎಡ ಪಕ್ಷಗಳಾದ ಸಿಪಿಐ, ಫಾರ್ವರ್ಡ್ ಬ್ಲಾಕ್, CPI(M), ಆರ್‌ಎಸ್‌ಪಿ ಪಕ್ಷಗಳು 47 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿವೆ. ಸ್ಥಳೀಯ ಪಕ್ಷ ತ್ರಿಪುರಾ ಮೊರ್ಚಾ 42 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

    ಸುಮಾರು 3,337 ಮತಗಟ್ಟೆಗಳಲ್ಲಿ (Polling Booth) ಮತದಾನ ನಡೆಯುತ್ತಿದೆ. ಒಟ್ಟು ಮತಗಟ್ಟೆಗಳಲ್ಲಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 28 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಮತದಾರರು ಸರತೀ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಇದನ್ನೂ ಓದಿ: ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

    ಈ ವೇಳೆ ನಾಯಕರ ಜಟಾಪಟಿಯೂ ನಡೆದಿದೆ. ನರೇಂದ್ರ ಮೋದಿ, ಅಮಿತ್ ಶಾ ಅಭಿವೃದ್ಧಿ ಸರ್ಕಾರಕ್ಕೆ ಮತದಾನ ಮಾಡಿ ಎಂದು ಬಿಜೆಪಿ ಬೆಂಬಲಿಸುವಂತೆ ಕೋರಿದರೆ, ಯಾರ ಒತ್ತಡಕ್ಕೂ ಮಣಿಯದೇ ಪಾರದರ್ಶಕವಾಗಿ ಮತದಾನ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇರಳದ ಹಿರಿಯ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ

    ಕೇರಳದ ಹಿರಿಯ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ

    ಚೆನ್ನೈ: ಹಿರಿಯ ಸಿಪಿಎಂ (CPIM) ನಾಯಕ ಮತ್ತು ಪಕ್ಷದ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ (68) (Kodiyeri Balakrishnan) ನಿಧನರಾಗಿದ್ದಾರೆ.

    ಕೊಡಿಯೇರಿ ಬಾಲಕೃಷ್ಣನ್ ಅವರು ಹಲವು ದಿನಗಳಿಂದ ಕ್ಯಾನ್ಸರ್‌ಗೆ (Cancer) ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚೆನ್ನೈನಲ್ಲಿ (Chennai) ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ; ತ್ರಿಪಾಠಿ ನಾಮಪತ್ರ ತಿರಸ್ಕೃತ – ಖರ್ಗೆ, ಶಶಿ ತರೂರ್‌ ನಡುವೆ ಫೈಟ್

    ಕಣ್ಣೂರಿನ (Kannur) ತಲಶ್ಶೇರಿಯಿಂದ (Thalassery) ಐದು ಬಾರಿ ಶಾಸಕರಾಗಿದ್ದ ಕೊಡಿಯರಿ ಬಾಲಕೃಷ್ಣನ್ ಅವರು 2006 ರಿಂದ 2011 ರವರೆಗೆ ವಿಎಸ್ ಅಚ್ಯುತಾನಂದನ್ (Achuthanandan) ಅವರ ಸಂಪುಟದಲ್ಲಿ ಕೇರಳದ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಹೋಗ್ತಾರಲ್ಲ ಇದು ಚೈಲ್ಡಿಶ್ ತನ, ರಾಹುಲ್ ಗಾಂಧಿ ಫನ್ನಿಬಾಯ್ : ರೇಣುಕಾಚಾರ್ಯ ವ್ಯಂಗ್ಯ

    2021ರಲ್ಲಿ ಸಿಪಿಎಂ ಪಕ್ಷವನ್ನು ಎರಡನೇ ಬಾರಿಗೆ ಮುನ್ನಡೆಸುವಲ್ಲಿ ಕೊಡಿಯೇರಿ ಪ್ರಮುಖ ಪಾತ್ರ ವಹಿಸಿದ್ದರು. 2015 ರಿಂದ 2022 ರವರೆಗೆ ಕೇರಳ ಸಿಪಿಎಂನ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿದ್ದ ಕೊಡಿಯೇರಿ ಬಾಲಕೃಷ್ಣನ್ ಅವರು ಅನಾರೋಗ್ಯದ ಕಾರಣದಿಂದ ತಮ್ಮ ಸ್ಥಾನದಿಂದ ಹೊರ ನಡೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • CPI(M) ಪಕ್ಷ ವಿರೋಧ ಹಿನ್ನೆಲೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಕೆ.ಕೆ ಶೈಲಜಾ

    CPI(M) ಪಕ್ಷ ವಿರೋಧ ಹಿನ್ನೆಲೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಕೆ.ಕೆ ಶೈಲಜಾ

    ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವೆ ಮತ್ತು ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಮಾಕ್ರ್ಸಿಸ್ಟ್ (ಸಿಪಿಎಂ) ನಾಯಕಿ ಕೆ.ಕೆ ಶೈಲಜಾ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಸಿಪಿಎಂ ಪಕ್ಷ ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

    ಶೈಲಜಾ ಕೇರಳದ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ, ನಿಫಾ ವೈರಸ್ ಮತ್ತು ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ್ದರು. ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದ ಅವರ ನಾಯಕತ್ವಕ್ಕೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಹಾಗಾಗಿ ಸಾರ್ವಜನಿಕ ಆರೋಗ್ಯಕ್ಕಾಗಿ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಶೈಲಜಾ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರತಿಷ್ಠಾನದಿಂದ 64ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇದನ್ನೂ ಓದಿ: ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ರಾರಾಜಿಸಿದ ನೂಪುರ್ ಶರ್ಮಾ ಫ್ಲೆಕ್ಸ್

    2022ರ ಜುಲೈ ಕೊನೆಯ ವಾರದಲ್ಲಿ ಶೈಲಜಾಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರತಿಷ್ಠಾನ ಇ-ಮೇಲ್ ಮೂಲಕ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ತಿಳಿಸಿತ್ತು ಮತ್ತು ಪ್ರಶಸ್ತಿ ಸ್ವೀಕರಿಸುವುದಕ್ಕಾಗಿ ಅವರ ದೃಢೀಕರಣವನ್ನು ಬಯಸಿತ್ತು. ಬಳಿಕ ಈ ಬಗ್ಗೆ ಸಿಪಿಎಂನ ಕೇಂದ್ರ ಸಮಿತಿಯ ಸದಸ್ಯರಾಗಿರುವ ಶೈಲಜಾ ಪಕ್ಷದ ಹಿರಿಯರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಆ ಬಳಿಕ ಸಿಪಿಎಂ ಪ್ರಶಸ್ತಿಯನ್ನು ವಿರೋಧಿಸಿದೆ. ಹಿರಿಯ ಸಿಪಿಎಂ ನಾಯಕರ ಪ್ರಕಾರ, ಶೈಲಜಾ ಅವರು ಪಕ್ಷದಿಂದ ನಿಯೋಜಿಸಲಾದ ಕರ್ತವ್ಯವನ್ನು ಮಾತ್ರ ನಿರ್ವಹಿಸಿದ್ದಾರೆ. ಇದು ವಿಶೇಷವೇನೂ ಅಲ್ಲ ಎಂದು ಪಕ್ಷವು ಅಭಿಪ್ರಾಯಪಟ್ಟಿದೆ ಹಾಗಾಗಿ ವಿರೋಧ ವ್ಯಕ್ತಪಡಿಸಿದ್ದರು ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ

    ನಿಫಾ ಮತ್ತು ಕೊರೊನಾ ವಿರುದ್ಧದ ಹೋರಾಟವು ಸರ್ಕಾರ ಜಂಟಿ ಪ್ರಯತ್ನವಾಗಿದೆ ಎಂದು ಪಕ್ಷವು ನಂಬುತ್ತದೆ. ಇದು ವೈಯಕ್ತಿಕ ಪ್ರಯತ್ನವಲ್ಲ, ಆದ್ದರಿಂದ ಅವರು ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂಬ ಅಭಿಪ್ರಾಯ ಪಕ್ಷದ ನಾಯಕರಲ್ಲಿ ವ್ಯಕ್ತವಾಗಿತ್ತು. ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಏಷ್ಯನ್ ನೊಬೆಲ್ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ತಿರುವನಂತಪುರಂ: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ.

    ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪ – 280 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ 

    ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರರಿಗೂ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಪೇಪರ್‌ ಬಿಕ್ಕಟ್ಟು – ವಿದ್ಯಾರ್ಥಿಗಳಿಗೆ ಸಿಗ್ತಿಲ್ಲ ಪಠ್ಯ, ನೋಟ್‌ ಪುಸ್ತಕ

    ಸಿಪಿಐ(M) ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.

    Live Tv

  • ವಿಪರೀತ ಬೆಲೆ ಏರಿಕೆಯಿಂದ ಜನರ ಬದುಕು ತತ್ತರ- ಸಿಪಿಐಎಂ

    ವಿಪರೀತ ಬೆಲೆ ಏರಿಕೆಯಿಂದ ಜನರ ಬದುಕು ತತ್ತರ- ಸಿಪಿಐಎಂ

    ಮಂಗಳೂರು: ಲಾಕ್‍ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ, ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆ ಏರಿಕೆ ಮಾಡಿದೆ. ಇದರಿಂದಾಗಿ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು.

    ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಸಿಪಿಐಎಂ ಮಂಗಳೂರು ನಗರ ಸಮಿತಿಯಿಂದ ನಡೆಸುವ ವಾರಾಚರಣೆಯ ಉದ್ಘಾಟನೆಯ ಭಾಗವಾಗಿ ಮಂಗಳೂರಿನ ಬಜಾಲ್ ಪಕ್ಕಲಡ್ಕದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದರೆ ಎಂದು ಕಿಡಿಕಾರಿದರು.

    ಪ್ರತಿಭಟನೆಯಲ್ಲಿ ಸಿಪಿಐಎಂ ಮುಖಂಡರು, ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಜಯಂತಿ.ಬಿ.ಶೆಟ್ಟಿ ಅವರು ಅಣಕು ಒಲೆಗೆ ಬೆಂಕಿ ಹಚ್ಚಿ, ಬಿಸಿ ನೀರು ಕಾಯಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಈ ವೇಳೆ ಡಿವೈಎಫ್‍ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಿಪಿಐಎಂ ಕಂಕನಾಡಿ ಬಿ ಶಾಖೆಯ ಕಾರ್ಯದರ್ಶಿ ಉದಯ್ ಕುಂಟಲಗುಡ್ಡೆ, ಸ್ಥಳೀಯ ಸಿಪಿಐಎಂ ಯುವ ನಾಯಕರಾದ ದೀಪಕ್ ಬಜಾಲ್, ಧೀರಾಜ್, ನೂರುದ್ದೀನ್, ಸೋನಿಲ್, ಅಶೋಕ್ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

  • ಕೇಂದ್ರ, ರಾಜ್ಯ ಸರ್ಕಾರದಿಂದಲೇ ಮಂಗ್ಳೂರು ಗೋಲಿಬಾರ್‌ಗೆ ಆದೇಶ: ಪ್ರತಿಭಟನಾಕಾರರ ಆಕ್ರೋಶ

    ಕೇಂದ್ರ, ರಾಜ್ಯ ಸರ್ಕಾರದಿಂದಲೇ ಮಂಗ್ಳೂರು ಗೋಲಿಬಾರ್‌ಗೆ ಆದೇಶ: ಪ್ರತಿಭಟನಾಕಾರರ ಆಕ್ರೋಶ

    – ಸಿಎಎ, ಗೋಲಿಬಾರ್ ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನಾ ಸಭೆ

    ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ಸಮಾನ ಮನಸ್ಕರು ನಗರದ ಪುರಭವನದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಎದುರು ಪ್ರತಿಭಟನಾ ಸಭೆ ನಡೆಸಿದರು.

    ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ ಸೇರಿದಂತೆ ವಿವಿಧ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಸಭೆಯಲ್ಲಿ ನೂರಾರು ಜನ ಭಾಗವಹಿಸಿದ್ದರು. ಮಂಗಳೂರಿನಲ್ಲಿ ಹಿಂಸಾಚಾರ, ಗೋಲಿಬಾರ್, ಕರ್ಫ್ಯೂ ನಡೆದ ಬಳಿಕ ಇದೇ ಮೊದಲ ಬಾರಿಗೆ ವಿವಿಧ ಸಂಘಟನೆಗಳ ಧರಣಿ ನಡೆಸಲಾಯಿತು. ಇದನ್ನೂ ಓದಿ: ಸಿಎಎ ವಿರೋಧಿಸಿ ಮಂಗ್ಳೂರಿನಲ್ಲಿ ಜ.4ರಂದು ನಿಗದಿಯಾಗಿದ್ದ ಪ್ರತಿಭಟನೆ ರದ್ದು

    ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜ ಸೇರಿ ಕಾಂಗ್ರೆಸ್ ನಾಯಕರು, ಜೆಡಿಎಸ್, ಸಿಪಿಐಎಂ ನಾಯಕರು ಭಾಗಿಯಾದ ಈ ಧರಣಿ ಗುರುವಾರ ಬೆಳಗ್ಗೆಯಿಂದ ಸಂಜೆಯವರೆಗೂ ನಡೆದಿಯಿತು. ಈ ಸಭೆಯನ್ನು ಉದ್ದೇಶಿಸಿ ಅನೇಕ ಮುಖಂಡರು ಮಾತನಾಡಿದರು. ಡಿಸೆಂಬರ್ 19ರಂದು ನಡೆದ ಪ್ರತಿಭಟನೆ, ಹಿಂಸಾಚಾರದಲ್ಲಿ ಅಮಾಯಕರ ಬಂಧನವಾಗಿದೆ. ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಅಷ್ಟೇ ಅಲ್ಲದೆ ಗೋಲಿಬಾರ್ ನಲ್ಲಿ ಮೃತರಪಟ್ಟ ಇಬ್ಬರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಲಾಯಿತು. ಜೊತೆಗೆ ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ನ್ಯಾಯಾಂಗ ತನಿಖೆಯೇ ನಡೆಯಬೇಕು ಧರಣಿ ನಿರತ ಸಂಘಟನೆಗಳ ಮುಖಂಡರಿಂದ ಹಕ್ಕೊತ್ತಾಯ ನಡೆಯಿತು.

  • ಪ್ರಧಾನಿ ಮೋದಿ ಒಬ್ಬ `ನಮಕ್ ಹರಾಮ್’- ಜಿಗ್ನೇಶ್ ಮೇವಾನಿ

    ಪ್ರಧಾನಿ ಮೋದಿ ಒಬ್ಬ `ನಮಕ್ ಹರಾಮ್’- ಜಿಗ್ನೇಶ್ ಮೇವಾನಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಒಬ್ಬ ನಮಕ್ ಹರಾಮ್ ಎಂದು ಕರೆಯುವ ಮೂಲಕ ಗುಜರಾತ್ ಪಕ್ಷೇತರ ಶಾಸಕ, ದಲಿತ ಮುಖಂಡ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

    ಪಾಟ್ನಾದ ಗಾಂಧಿ ಮೈದಾನದಲ್ಲಿ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಹಮ್ಮಿಕೊಂಡಿದ್ದ ಬೃಹತ್ ರ‍್ಯಾಲಿಯೊಂದರಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಹೊರ ರಾಜ್ಯಗಳಿಂದ ಗುಜರಾತ್‍ಗೆ ವಲಸೆ ಬರುತ್ತಿರುವ ಕಾರ್ಮಿಕರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ಮೋದಿ ಜಾಣ ಮೌನವನ್ನು ವಹಿಸಿದ್ದಾರೆ ಎನ್ನುವ ಬರದಲ್ಲಿ ಅವರನ್ನು ನಮಕ್ ಹರಾಮ್ (ಅಪ್ರಾಮಾಣಿಕ) ಎಂದು ಹೇಳಿ ಟೀಕಿಸಿದ್ದಾರೆ.

    ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಗುಜರಾತಿನ ಅಹಮದಾಬಾದ್, ಸೂರತ್, ರಾಜ್‍ಕೋಟ್ ಮತ್ತು ಬರೋಡದಲ್ಲಿನ ರಸ್ತೆ, ಸೇತುವೆ ಹಾಗೂ ಫ್ಲೈ ಓವರ್ ಗಳ ಕಾಮಗಾರಿ ಕೆಲಸಗಳಲ್ಲಿ ಮಧ್ಯಪ್ರದೇಶ, ಜಾರ್ಖಂಡ್, ಉತ್ತರಪ್ರದೇಶ ಹಾಗೂ ಬಿಹಾರದಿಂದ ಅಪಾರ ಪ್ರಮಾಣದ ಕಾರ್ಮಿಕರು ವಲಸೆ ಬರುತ್ತಿದ್ದಾರೆ. ಕಳೆದ 12 ರಿಂದ 15 ದಿನಗಳಲ್ಲಿ ಇಂತಹ ವಲಸೆ ಬಂದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದರ ಎಲ್ಲಾ ಮಾಹಿತಿ ಗೊತ್ತಿದ್ದರೂ, ನಮಕ್ ಹರಾಮ್ ಒಂದು ಸಣ್ಣ ಮಾತನ್ನು ಎತ್ತಿಲ್ಲ ಎಂದು ಹೇಳಿ ವಾಗ್ದಾಳಿ ನಡೆಸಿದರು.

    ಸಮಾವೇಶದಲ್ಲಿ ಮೇವಾನಿ `ಬಿಜೆಪಿ ಹಠಾವೋ, ದೇಶ್ ಬಚಾವೊ’ ಹಾಗೂ `ಶೇಮ್ ಆನ್ ಯು ನರೇಂದ್ರ ಮೋದಿ, ಶೇಮ್ ಆನ್ ಯೂ’ ಎಂದು ಆರು ಬಾರಿ ಕೂಗಿದ್ದರು. ಕೇಂದ್ರ ಸರ್ಕಾರದ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕತೆಯನ್ನು ಸುಧಾರಿಸಲು ಅಸಮರ್ಥವಾಗಿದೆ ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ

    ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ

    ತಿರುವನಂತಪುರಂ: ಕೇರಳದಲ್ಲಿ ರಾಜಕೀಯ ಸಂಘರ್ಷದ ಸರಣಿ ಕೊಲೆ ಮುಂದುವರೆದಿದ್ದು, ಇಂದು ಆರ್‍ಎಸ್‍ಎಸ್ ಸಂಘಟನೆಯ ಕಾರ್ಯಕರ್ತರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

    28 ವರ್ಷದ ವಾಡೆಕೆತಲಾ ಆನಂದನ್ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ. ಆನಂದನ್ ಸಿಪಿಐಎಂ ಪಕ್ಷದ ಸದಸ್ಯ ಮೊಹಮ್ಮದ್ ಕಾಸಿಮ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

    ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ವೇವಾಲಯ್ಡ್ ಪ್ರದೇಶದ ಗುರುವೂರು ದೇವಾಲಯ ಬಳಿ ಬೈಕ್ ನಲ್ಲಿ ಆನಂದ್ ಹೋಗುತ್ತಿದ್ದ ವೇಳೆ ಆನಂದನ್‍ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ ನಡೆದ ಸಿಪಿಐಎಂ ಕಾರ್ಯಕರ್ತರೊಬ್ಬರ ಕೊಲೆಯ ದ್ವೇಷದ ಹಿನ್ನೆಲೆಯಲ್ಲಿ ಅನಂದನ್ ಕೊಲೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅನಂದನ್ ಕೊಲೆಯನ್ನು ಖಂಡಿಸಿ ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆಯನ್ನು ನಡೆಸಲು ನಿರ್ಧಾರಿಸಿದ್ದಾರೆ. ಘಟನಾ ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ಹೇಳಿದ್ದಾರೆ.

    ರಾಜ್ಯ ವ್ಯಾಪಿ ನಡೆಯುತ್ತಿರುವ ಆರ್‍ಎಸ್‍ಎಸ್ ಹಾಗೂ ಬಿಜೆಪಿ ನಾಯಕರ ಕೊಲೆಗಳನ್ನು ಜಿಹಾದಿ ಭಯೋತ್ಪದನೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಕುಮ್ಮಮಾನಂ ರಾಜಶೇಖರನ್ ಅವರು ರಾಜ್ಯಾದ್ಯಂತ ಜನರಕ್ಷಾ ಯಾತ್ರೆಯನ್ನು ನಡೆಸಲಾಗಿತ್ತು. ಈ ಯಾತ್ರೆಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. ಈ ಯಾತ್ರೆಯಲ್ಲಿ ಪಾಲ್ಗೊಂಡು ಅಮಿತಾ ಶಾ ದೇವರನಾಡಲ್ಲಿ ರಾಕ್ಷಸರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿದ್ದರು.