Tag: cracked

  • ಉದ್ಘಾಟನೆ ವೇಳೆ ಒಡೆದ ತೆಂಗಿನಕಾಯಿಂದ ಬಿರುಕು ಬಿಟ್ಟ 1.16ಕೋಟಿ ರೂ. ವೆಚ್ಚದ ರಸ್ತೆ!

    ಉದ್ಘಾಟನೆ ವೇಳೆ ಒಡೆದ ತೆಂಗಿನಕಾಯಿಂದ ಬಿರುಕು ಬಿಟ್ಟ 1.16ಕೋಟಿ ರೂ. ವೆಚ್ಚದ ರಸ್ತೆ!

    ಲಕ್ನೋ: 1.16ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ರಸ್ತೆ ಉದ್ಘಾಟನೆ ಸಂದರ್ಭದಲ್ಲಿ ಒಡೆದ ತೆಂಗಿನ ಕಾಯಿಯಿಂದ  ರಸ್ತೆ ಬಿರುಕು ಬಿಟ್ಟ ಅಚ್ಚರಿಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    1.16ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ 7ಕಿ.ಮೀ ಉದ್ದ ಹೊಸ ರಸ್ತೆಯ ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ, ಕಾಯಿ ಬದಲು ರಸ್ತೆಯೇ ಬಿರುಕು ಬಿಟ್ಟಿದೆ. ಈ ಘಟನೆಯಿಂದ ಮುಜುಗರಕ್ಕೀಡಾಗಿ ಕೆಂಡವಾಗಿರುವ ಆಡಳಿತಾರೂಢ ಬಿಜೆಪಿ ಶಾಸಕಿ ಸುಚಿ ಮೌಸಂ ಚೌದರಿ, ರಸ್ತೆಯ ಕಳಪೆ ಕಾಮಗಾರಿಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಜನವರಿ 1 ರಿಂದ ಎಟಿಎಂ ಶುಲ್ಕ ಹೆಚ್ಚಳ

    ಕಳಪೆ ಮಟ್ಟದ ಕಾಮಗಾರಿ ತನಿಖೆಗಾಗಿ ರಸ್ತೆ ಮಾದರಿ ಸಂಗ್ರಹಿಸಲು ಅಧಿಕಾರಿಗಳು ಬರುವವರೆಗೆ 3 ಗಂಟೆಗಳ ಕಾಲ ಸ್ಥಳದಲ್ಲೇ ಕಾದರು. ತಮ್ಮ ಕ್ಷೇತ್ರದಲ್ಲಿ 1.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾಗಿರುವ 7.5 ಕಿಮೀ ರಸ್ತೆ ಕಾಮಗಾರಿ ಕೈಗೊಂಡಿದೆ. ಇದರ ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ ಕಾಯಿ ತುಂಡಾಗದೇ ರಸ್ತೆಯೇ ಹೋಳಾಗಿದೆ. ಈ ವೇಳೆ ಪರಿಶೀಲನೆ ನಡೆಸಿದಾಗ ಕಾಮಗಾರಿಯಲ್ಲಿ ದಕ್ಷತೆ ಇಲ್ಲದಿರುವುದು ಕಂಡುಬಂದಿದೆ ಎಂದು ಬಿಜನೋರ್ ಶಾಸಕಿ ತಿಳಿಸಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

  • ಬಸವಣ್ಣನ ಐಕ್ಯಸ್ಥಳ ಕೂಡಲ ಸಂಗಮದಲ್ಲಿರುವ ಶಿವಲಿಂಗದಲ್ಲಿ ಬಿರುಕು

    ಬಸವಣ್ಣನ ಐಕ್ಯಸ್ಥಳ ಕೂಡಲ ಸಂಗಮದಲ್ಲಿರುವ ಶಿವಲಿಂಗದಲ್ಲಿ ಬಿರುಕು

    ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಬಸವಣ್ಣನ ಐಕ್ಯಸ್ಥಳದಲ್ಲಿನ ಶಿವಲಿಂಗ ಬಿರುಕು ಬಿಟ್ಟಿದ್ದರಿಂದ ಭಕ್ತರು ಆತಂಕಗೊಂಡಿದ್ದಾರೆ.

    ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ಈ ಮೂರು ನದಿಗಳ ತ್ರಿವೇಣಿ ಸಂಗಮ ಎಂದು ಕರೆಸಿಕೊಳ್ಳುವ ಕೂಡಲಸಂಗಮದಲ್ಲಿ ಬಸವಣ್ಣನವರ ಐಕ್ಯಮಂಟಪ ಇದೆ. ಈ ಐಕ್ಯ ಮಂಟಪ ವೀಕ್ಷಣೆಗೆ ನಿತ್ಯ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಆಗಮಿಸುತ್ತಿರುವ ಭಕ್ತರು ಶಿವಲಿಂಗಕ್ಕೆ ನಾಣ್ಯಗಳನ್ನು ಎಸೆಯುತ್ತಿರುವುದರಿಂದ ಬಿರುಕು ಬಿಟ್ಟಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ.

    ಇತ್ತೀಚೆಗೆ ಕೆಲ ಪಟ್ಟಭದ್ರರು ಐಕ್ಯಸ್ಥಳದ ಸುತ್ತಮುತ್ತ ಮೌಢ್ಯತೆ ಬಿತ್ತರಿಸುವ ಕಾರ್ಯ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡಾ ಕೇಳಿ ಬಂದಿದ್ದು, ಬಸವಣ್ಣನ ಐಕ್ಯಸ್ಥಳದ ಶಿವಲಿಂಗದ ಸಂರಕ್ಷಣೆಗೆ ಬಸವ ಅಭಿಮಾನಿಗಳು ಆಗ್ರಹ ಮಾಡುತ್ತಿದ್ದಾರೆ. ಕೂಡಲಸಂಗಮ ಅಭಿವೃದ್ಧಿ ಮಂಡಳಿ ಪ್ರಾಧಿಕಾರ ಗಮನ ಹರಿಸಬೇಕು. ಐಕ್ಯಸ್ಥಳದ ಶಿವಲಿಂಗದ ಸುತ್ತಲೂ ಫೈಬರ್ ಗ್ಲಾಸ್ ಅಳವಡಿಸುವಂತೆ ಭಕ್ತರು ಒತ್ತಾಯ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv