Tag: Cream

  • ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ನಟನೆಯ ‘ಕ್ರೀಂ’  ಚಿತ್ರದ ಟ್ರೈಲರ್ ರಿಲೀಸ್

    ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ನಟನೆಯ ‘ಕ್ರೀಂ’ ಚಿತ್ರದ ಟ್ರೈಲರ್ ರಿಲೀಸ್

    ಕಿರಿಕ್ ಪಾರ್ಟಿ ಚಿತ್ರದ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆ (Samyukta Hegde) ನಾಯಕಿಯಾಗಿ ನಟಿಸಿರುವ ‘ಕ್ರೀಂ’ ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.  ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರಿಂದ ಈ ಚಿತ್ರದ ಟ್ರೇಲರ್ ಅನಾವರಣವಾಯಿತು. ಡಿ.ಕೆ.ದೇವೇಂದ್ರ ಅವರು ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಅವರು ಬರೆದಿದ್ದಾರೆ. ಈ ಚಿತ್ರದ ಪ್ರಮುಖಪಾತ್ರದಲ್ಲೂ ಅಗ್ನಿ ಶ್ರೀಧರ್ ನಟಿಸಿಸಿದ್ದಾರೆ.

    ನನಗೆ ಬರವಣಿಗೆಯಲ್ಲಿ ಹೆಚ್ಚು ಆಸಕ್ತಿ. ನಟನೆಯಲ್ಲಿ ನನಗೆ ಆಸಕ್ತಿ ಇರಲಿಲ್ಲ ಎಂದು ಮಾತು ಆರಂಭಿಸಿದ ಅಗ್ನಿ ಶ್ರೀಧರ್, ನಿರ್ಮಾಪಕ ದೇವೇಂದ್ರ ಅವರು ನನ್ನನ್ನು ಈ ಪಾತ್ರ ನಿರ್ವಹಣೆ ಮಾಡಲು ಹೆಚ್ಚು ಒತ್ತಾಯಿಸಿದರು. ನಾನು ಆಗಲ್ಲ ಎಂದು ಹೇಳಿದೆ.  ನಿರ್ಮಾಪಕರು ಹಾಗೂ ನನ್ನ ಹತ್ತಿರದವರ ಒತ್ತಾಯಕ್ಕೆ ನಾನು ನಟಿಸಲು ಒಪ್ಪಿಕೊಂಡೆ. ಈ ವಿಷಯವನ್ನು ಚಿತ್ರ ಬಿಡುಗಡೆಯಾಗುವವರೆಗೂ ಗೌಪ್ಯವಾಗಿಡೋಣ ಅಂತ ಹೇಳಿದ್ದೆ. ಆದರೆ ನಿರ್ಮಾಪಕರು ಟ್ರೇಲರ್ ನಲ್ಲೇ ನನ್ನನ್ನು ತೋರಿಸಿಬಿಟ್ಟಿದ್ದಾರೆ. ಇನ್ನು ‘ಕ್ರೀಂ’ ಎಂದರೆ ಬೀಜಾಕ್ಷರ ಮಂತ್ರ. ಈ  ಚಿತ್ರದ ಕಥೆ ಹಣ ಹಾಗೂ ಅಧಿಕಾರಕ್ಕಾಗಿ ನಡೆಯುವ ಹೆಣ್ಣುಮಕ್ಕಳ ಬಲಿಯನ್ನು ಕುರಿತಾದ ಕಥಾಹಂದರ ಹೊಂದಿದೆ. ಈಗಲೂ ಕೂಡ ನಮ್ಮ ಊರು, ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಈ ಕೃತ್ಯ ನಡೆಯುತ್ತಲೇ ಇದೆ. ಇಂತಹ ಸೂಕ್ಷ್ಮ ವಿಚಾರವನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ.‌ ಅಭಿಷೇಕ್ ಬಸಂತ್ ಸೇರಿದಂತೆ ಎಲ್ಲಾ ತಂತ್ರಜ್ಞರ ಕಾರ್ಯವೈಖರಿ ಹಾಗೂ ಸಂಯುಕ್ತ ಹೆಗ್ಡೆ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು.

    ನಾನು ಸಮಯಕ್ಕೆ ಹೆಚ್ಚು ಬೆಲೆ ಕೊಡುತ್ತೇನೆ. ಹಾಗಾಗಿ ಎಲ್ಲಾ ಕಲಾವಿದರ  ಸಹಕಾರದಿಂದ ಚಿತ್ರೀಕರಣ ನಿಗದಿಯಂತೆ ಮುಕ್ತಾಯವಾಯಿತು. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನನ್ನ ಮೊದಲ ನಿರ್ದೇಶನ ಮಾಡಬೇಕೆಂಬ ಆಸೆಯಿತ್ತು‌.‌ ಅಗ್ನಿ ಶ್ರೀಧರ್ ಅವರ ಈ ಕಥೆ ಬಹಳ ಇಷ್ಟವಾಯಿತು. ನನ್ನ ಮೊದಲ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಅಭಿಷೇಕ್ ಬಸಂತ್. ಐದು ವರ್ಷಗಳ ನಂತರ ನಾನು ನಟಿಸಿರುವ ಕನ್ನಡ ಸಿನಿಮಾ ಇದು. ನಾನು ಈವರೆಗೂ ಮಾಡಿರದ ಪಾತ್ರವಿದು. ಆಕ್ಷನ್ ಕೂಡ ಮಾಡಿದ್ದೇನೆ ಎಂದು ಸಂಯುಕ್ತ ಹೆಗ್ಡೆ ತಿಳಿಸಿದರು.

     

    ನಮ್ಮ ಚಿತ್ರದಲ್ಲಿ ನಟಿಸಬೇಕಿದ್ದ  ಖಳನಟರೊಬ್ಬರು ಕಾರಣಾಂತರದಿಂದ ನಟಿಸಲು ಆಗಲ್ಲ ಎಂದಾಗ ನಾನು ಹಾಗೂ ನಿರ್ದೇಶಕರು ಬಹಳ ಒತ್ತಡದಲ್ಲಿದ್ದೆವು. ಆಗ ನನಗೆ ಈ ಪಾತ್ರವನ್ನು ಅಗ್ನಿ ಶ್ರೀಧರ್ ಅವರು ಮಾಡಿದರೆ ಚೆನ್ನಾಗಿರುತ್ತದೆ ಎಂದು ಅನಿಸಿತು. ಅವರ ಬಳಿ ನೀವೇ ಈ ಪಾತ್ರ ಮಾಡಬೇಕು ಎಂದು ಹೇಳಿದಾಗ ಅವರು ಒಪ್ಪಲಿಲ್ಲ.‌ ನಂತರ ಬಹಳ ಕಷ್ಟಪಟ್ಟು ಅವರನ್ನು ಒಪ್ಪಿಸಿದ್ದೆವು. ಚಿತ್ರತಂಡದ ಸಹಕಾರದಿಂದ ಕ್ರೀಂ ಚಿತ್ರ ಚೆನ್ನಾಗಿ ಬಂದಿದೆ. ಇದೇ ಮಾರ್ಚ್ ಒಂದರಂದು ಬಿಡುಗಡೆಯಾಗುತ್ತಿದೆ ಎಂದರು ನಿರ್ಮಾಪಕ ದೇವೇಂದ್ರ.

  • ಕಿರಿಕ್ ಹುಡುಗಿಯ ‘ಕ್ರೀಂ’ ಚಿತ್ರದ ಟ್ರೈಲರ್ ರಿಲೀಸ್

    ಕಿರಿಕ್ ಹುಡುಗಿಯ ‘ಕ್ರೀಂ’ ಚಿತ್ರದ ಟ್ರೈಲರ್ ರಿಲೀಸ್

    ಕಿರಿಕ್ ಪಾರ್ಟಿ ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ಸಂಯುಕ್ತ ಹೆಗಡೆ (Samyuktha Hegde) ಪ್ರಮುಖಪಾತ್ರದಲ್ಲಿ ನಟಿಸಿರುವ ‘ಕ್ರೀಂ’ (Cream) ಚಿತ್ರದ ವಿಷುಯಲ್ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಅಗ್ನಿ ಶ್ರೀಧರ್ ಈ ಚಿತ್ರದ ವಿಷುಯಲ್ ಟ್ರೈಲರ್ ಬಿಡುಗಡೆ ಮಾಡಿದರು. ಡಿ.ಕೆ.ದೇವೇಂದ್ರ ಅವರು ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಅವರು ಬರೆದಿದ್ದಾರೆ.

    ಈ ಚಿತ್ರದ ಬಗ್ಗೆ ತುಂಬಾ ಭರವಸೆಯಿಟ್ಟುಕೊಂಡಿದ್ದೇನೆ ಎಂದು ಮಾತು ಆರಂಭಿಸಿದ ಅಗ್ನಿ ಶ್ರೀಧರ್, ಎಲ್ಲಾ ಊರುಗಳಲ್ಲಿ, ಎಲ್ಲಾ ರಾಜ್ಯಗಳಲ್ಲಿ, ಎಲ್ಲಾ ಭಾಷೆಗಳಲ್ಲಿ ಕಾಣದ ಗರ್ಭ ಅಂತ ಇರುತ್ತದೆ. ಅಲ್ಲಿ ಏನೆಲ್ಲಾ ನಡೆಯುತ್ತದೆ. ಬೆಂಗಳೂರಿನಲ್ಲೇ ನನಗೆ ಗೊತ್ತಿರುವ ಸಂಗತಿಯಿಟ್ಟುಕೊಂಡು ಹತ್ತಾರು ವರ್ಷಗಳಿಂದ ಯೋಚನೆ ಮಾಡುತ್ತಿದೆ. ಸಿನಿಮಾ ಮಾಡಲು ಆಗಿರಲಿಲ್ಲ. ನಿರ್ಮಾಪಕ ದೇವೇಂದ್ರ ಅವರು ಸಿನಿಮಾ ಮಾಡಲೇಬೇಕು ಎಂದು ನನ್ನ ಒತ್ತಾಯಿಸಿದಾಗ ಈ ಚಿತ್ರದ ಕಥೆ ಹೇಳಿದೆ. ಈ ಚಿತ್ರ ಮಾಡುವುದಕ್ಕೆ ನಿಜವಾಗಿಯೂ ತುಂಬಾ ಧೈರ್ಯ ಬೇಕು.‌ ಆ ಧೈರ್ಯವನ್ನು ದೇವೇಂದ್ರ ಮಾಡಿದ್ದಾರೆ. ಭಾರತದಲ್ಲಿ ಪ್ರತಿವರ್ಷ ಎರಡೂವರೆ ಸಾವಿರ ಮಹಿಳೆಯರು ಒಂದಲ್ಲಾ ಒಂದು ಕಾರಣದಿಂದ ಬಲಿಯಾಗುತ್ತಿದ್ದಾರೆ?  ಅದಕ್ಕೆ ಕಾರಣ ಏನು ಎಂಬುದನ್ನು ತಿಳಿಸುವ ಕಥೆ ಕೂಡ ಈ ಚಿತ್ರದಲ್ಲಿದೆ. ಇನ್ನೂ ಸಂಯುಕ್ತ ಹೆಗಡೆ ಈ ಚಿತ್ರಕ್ಕಾಗಿ ತನ್ನ ಜೀವವನ್ನೇ ಕೊಟ್ಟು ಬಿಟ್ಟಿದ್ದಾರೆ. ಈ ಚಿತ್ರಕ್ಕಾಗಿ ಬಹಳ ಶ್ರಮ ಪಟ್ಟಿದ್ದಾರೆ. ಈ ಚಿತ್ರದ ಮೂಲಕ ಅವರು ಇನ್ನೂ ಎತ್ತರಕ್ಕೆ ಹೋಗುತ್ತಾರೆ. ನಿರ್ದೇಶಕ ಅಭಿಷೇಕ್ ಬಸಂತ್ ನನ್ನ ತಮ್ಮನ ಮಗ.‌ ಆತ ಬಹಳ ಬುದ್ದಿವಂತ. ತುಂಬಾ ಚೆನ್ನಾಗಿ ಚಿತ್ರ ಮಾಡಿದ್ದಾನೆ. ಶಿವು ಅವರ ಕಲಾ ನಿರ್ದೇಶನ ತುಂಬಾ ಚೆನ್ನಾಗಿದೆ ಎಂದು ತಿಳಿಸಿದರು.

    ಚಿತ್ರತಂಡದ ಸಹಕಾರದಿಂದ ಇಪ್ಪತ್ತೆಂಟು ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ.‌ ಇಂದು ವಿಷುಯಲ್ ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ನಿಮ್ಮ ಮುಂದೆ ಚಿತ್ರ ಬರಲಿದೆ‌ ಎಂದರು ನಿರ್ದೇಶಕ ಅಭಿಷೇಕ್ ಬಸಂತ್. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಐದು ವರ್ಷಗಳ ನಂತರ ನಾನು ನಟಿಸಿರುವ ಕನ್ನಡ ಸಿನಿಮಾ ಇದು. ಈ ಚಿತ್ರದಲ್ಲಿ ಆಕ್ಷನ್ ಕೂಡ ಮಾಡಿದ್ದೇನೆ. ಕಾಲು ಕೂಡ ಮುರಿದಿತ್ತು. ಒಟ್ಟಿನಲ್ಲಿ ಎಲ್ಲರ ಶ್ರಮದಿಂದ “ಕ್ರೀಂ” ಚಿತ್ರ ಚೆನ್ನಾಗಿ ಬಂದಿದೆ. ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ಅವರ ಛಾಯಾಗ್ರಹಣ ಸುಂದರವಾಗಿದೆ. ಸಹಕಾರ ನೀಡಿದ ನಿರ್ದೇಶಕ, ನಿರ್ಮಾಪಕರಿಗೆ ಹಾಗೂ ವಿಶೇಷವಾಗಿ ಅಗ್ನಿ ಶ್ರೀಧರ್ ಅವರಿಗೆ ಧನ್ಯವಾದ ಎಂದರು ನಾಯಕಿ ಸಂಯುಕ್ತ ಹೆಗಡೆ.

    ನಾನು ಮೊದಲು ಉತ್ತಮ ಕಥೆ ನೀಡಿರುವ ಅಗ್ನಿ ಶ್ರೀಧರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಇನ್ನು ಇಡೀ ತಂಡದ ಚಿತ್ರ ಚೆನ್ನಾಗಿ ಮೂಡಿಬರಲು ಪಟ್ಟಿರುವ ಶ್ರಮ ಅಷ್ಟಿಷ್ಟಲ್ಲ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕ ಡಿ.ಕೆ.ದೇವೇಂದ್ರ ತಿಳಿಸಿದರು. ಸಂಗೀತ ನಿರ್ದೇಶಕ ರೋಹಿತ್, ಕಲಾ ನಿರ್ದೇಶಕ ಶಿವಕುಮಾರ್ ಹಾಗೂ ಚಿತ್ರದಲ್ಲಿ ನಟಿಸಿರುವ ರೋಷನ್‌ ಅಗ್ನಿ ಶ್ರೀಧರ್ ಬಚ್ಚನ್, ಇಫ್ರಾನ್ ಮುಂತಾದವರು “ಕ್ರೀಂ” ಚಿತ್ರದ ಕುರಿತು ಮಾತನಾಡಿದರು.

    ನಿರ್ಮಾಪಕರಾದ ಕೆ.ಮಂಜು, ಸಂಜಯ್ ಗೌಡ, ನವರಸನ್, ಶ್ರೇಯಸ್ ಮೀಡಿಯಾ  ಶ್ರೀನಿವಾಸ್ ಹಾಗೂ ನಿರ್ದೇಶಕ ಜಡೇಶ್ ಕೆ ಹಂಪಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

  • ಸಂಯುಕ್ತ ಹೆಗಡೆ ನಟನೆಯ ‘ಕ್ರೀಮ್’ ಸಿನಿಮಾದ ಶೂಟಿಂಗ್ ಮುಕ್ತಾಯ

    ಸಂಯುಕ್ತ ಹೆಗಡೆ ನಟನೆಯ ‘ಕ್ರೀಮ್’ ಸಿನಿಮಾದ ಶೂಟಿಂಗ್ ಮುಕ್ತಾಯ

    ಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ (Abhishek Basant) ನಿರ್ದೇಶನದ ‘ಕ್ರೀಮ್’ (Cream) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಬಹು ನಿರೀಕ್ಷಿತ ಈ ಚಿತ್ರದ ನಾಯಕಿಯಾಗಿ ಸಂಯುಕ್ತ ಹೆಗಡೆ (Samyukta Hegde) ಅಭಿನಯಿಸಿದ್ದಾರೆ. ಅಚ್ಯುತ್ ಕುಮಾರ್ (Achyut Kumar), ಅರುಣ್ ಸಾಗರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಕಳೆದವರ್ಷ ಈ ಚಿತ್ರ ಆರಂಭವಾಗಿದ್ದು,  ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂತರ ಚಿತ್ರತಂಡದಿಂದ ಈ ಚಿತ್ರದ ಕುರಿತು ಯಾವುದೇ ವಿಷಯ ಹೊರಬಂದಿರಲಿಲ್ಲ. ಅಂತಹ ವಿಷಯ ಚಿತ್ರದಲ್ಲಿ ಏನಿರಬಹುದು? ಎಂಬ ಕೌತುಕ ಎಲ್ಲರಲ್ಲೂ ಇದೆ. ಬೆಂಗಳೂರಿನಲ್ಲಿ ನಡೆದ ನೈಜಘಟನೆ ಆಧರಿಸಿದ‌ ಚಿತ್ರವೆಂಬ ಮಾಹಿತಿ ಇದೆ. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗಡೆ ಅವರಿಗೆ ಭಾರಿ ಪೆಟ್ಟು ಬಿದ್ದ ವಿಷಯ ಮಾತ್ರ ತಿಳಿದಿತ್ತು. ಸಂಯುಕ್ತ ಅವರು ಚೇತರಿಸಿಕೊಂಡ ನಂತರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈಗ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ.  ಸುನೋಜ್ ವೇಲಾಯುಧನ್ ಛಾಯಾಗ್ರಹಣ, ಶಿವು (ಕೆಜಿಎಫ್) ಕಲಾ ನಿರ್ದೇಶನ, ಆರ್ಯನ್ ಸಂಕಲನ ಹಾಗೂ ಪ್ರಭು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿರ್ದೇಶಕ ಹೇಳಿದ ಮಾತು ಕೇಳದೇ ಆಸ್ಪತ್ರೆ ಸೇರಿದ ಕಿರಿಕ್ ನಟಿ ಸಂಯುಕ್ತ ಹೆಗ್ಡೆ

    ನಿರ್ದೇಶಕ ಹೇಳಿದ ಮಾತು ಕೇಳದೇ ಆಸ್ಪತ್ರೆ ಸೇರಿದ ಕಿರಿಕ್ ನಟಿ ಸಂಯುಕ್ತ ಹೆಗ್ಡೆ

    ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಗ್ರ್ಯಾಂಡ್ ಆಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ನಟಿ ಸಂಯುಕ್ತ ಹೆಗ್ಡೆ ಆ ನಂತರ ಹಲವಾರು ಸಿನಿಮಾಗಳಲ್ಲಿ ನಟಿಸಿದರು. ತಮಿಳು, ತೆಲುಗು ಸಿನಿಮಾ ರಂಗಕ್ಕೂ ಹೋಗಿ ಬಂದರು. ಸಿನಿಮಾಗಳಿಗಿಂತಲೂ ವಿವಾದಗಳ ಮೂಲಕವೇ ಹೆಚ್ಚು ಸುದ್ದಿಯಾದರು. ಮತ್ತೆ ಇದೀಗ ಎಲ್ಲವನ್ನೂ ಮರೆಸುವಂತೆ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡದಲ್ಲಿ ಕ್ರೀಮ್ ಸೇರಿದಂತೆ ಹಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

    ಬೆಂಗಳೂರಿನಲ್ಲಿ ಸದ್ಯ ಕ್ರೀಮ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ನೆನ್ನೆಯವರೆಗೂ ಸಂಯುಕ್ತಾ ಇದೇ ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈ ಸಮಯದಲ್ಲಿ ಫೈಟ್ ಮಾಸ್ಟರ್ ಪ್ರಭು ಎನ್ನುವವರು ನಟಿಗೆ ಡ್ಯೂಪ್ ಬಳಸಲು ಹೇಳಿದರೂ, ಕೇಳದೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಎಗರಿಸಿ ಒದೆಯುವ ದೃಶ್ಯದಲ್ಲಿ ಅವರಿಗೆ ಕಾಲು ಟ್ವಿಸ್ಟ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರ್ದೇಶಕರು ಹೇಳಿದ ಮಾತು ಕೇಳದೇ ಇರುವ ಕಾರಣಕ್ಕಾಗಿ ಈ ರೀತಿ ಆಗಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಇದನ್ನೂ ಓದಿ:ಉರ್ಫಿ ಜಾವೇದ್ ವಿಚಿತ್ರ ಡ್ರೆಸ್‌ಗೆ ಫ್ಯಾಷನ್ ಡಿಸೈನರ್ ಮಸಾಬ ಗುಪ್ತಾ ಹೇಳಿದ್ದು ಹೀಗೆ.?

    ಹಾಗಂತ ನಟಿಯೇನೂ ಹಠಮಾರಿತನ ಮಾಡಿಲ್ಲ. ಆದಷ್ಟು ದೃಶ್ಯವು ನೈಜವಾಗಿಯೇ ಬರಲಿ ಎನ್ನುವುದು ಸಂಯುಕ್ತಾರ ಆಸೆಯಾಗಿತ್ತಂತೆ. ಅಲ್ಲದೇ, ಈ ಹಿಂದೆಯೂ ಇವರು ಡ್ಯೂಪ್ ಇಲ್ಲದೇ ಹಲವು ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರಿಂದ, ಆ ಧೈರ್ಯದಿಂದಲೇ ಇಲ್ಲಿಯೂ ಡ್ಯೂಪ್ ಬಳಸಲು ನಿರಾಕರಿಸಿದ್ದಾರಂತೆ. ಕಾಲು ಟ್ವಿಸ್ಟ್ ಆಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಹಲವು ದಿನಗಳ ಕಾಲ ರೆಸ್ಟ್ ತಗೆದುಕೊಳ್ಳಬೇಕಾಗಿದೆ. ಅಂದಹಾಗೆ ಈ ಸಿನಿಮಾವನ್ನು ಅಭಿಷೇಕ್ ಬಸಂತ್ ನಿರ್ದೇಶನ ಮಾಡುತ್ತಿದ್ದು, ಡಿ ಕೆ. ದೇವೇಂದ್ರ ನಿರ್ಮಾಪಕರು.

    Live Tv
    [brid partner=56869869 player=32851 video=960834 autoplay=true]

  • ಅರವಿಂದ್ ಕಾಲಿಗೆ ಕ್ರೀಮ್ ಹಚ್ಚಿದ ದಿವ್ಯಾ ಉರುಡುಗ!

    ಅರವಿಂದ್ ಕಾಲಿಗೆ ಕ್ರೀಮ್ ಹಚ್ಚಿದ ದಿವ್ಯಾ ಉರುಡುಗ!

    ಬಿಗ್‍ಬಾಸ್ ಮನೆಯಲ್ಲಿ ಈ ವಾರದ ಕ್ಯಾಪ್ಟನ್ಸಿ ಟಾಸ್ಕ್‌ಗೆ  ದಿವ್ಯಾ ಸುರೇಶ್, ಅರವಿಂದ್ ಹಾಗೂ ನಿಧಿ ಸುಬ್ಬಯ್ಯ ಆಯ್ಕೆಯಾಗಿದ್ದರು. ಅದರಂತೆ ಬಿಗ್‍ಬಾಸ್ ನಿನ್ನೆ ಹಗ್ಗದ ಸಹಾಯದಿಂದ ಬಕೆಟ್‍ನನ್ನು ಹಿಡಿದುಕೊಳ್ಳಬೇಕು. ಈ ಟಾಸ್ಕ್‌ನಲ್ಲಿ ಯಾರು ಹೆಚ್ಚು ಸಮಯ ಬಕೆಟ್‍ನನ್ನು ಹಿಡಿದುಕೊಂಡಿರುತ್ತಾರೋ ಅವರು ಈ ವಾರದ ಕ್ಯಾಪ್ಟನ್ ಆಗುತ್ತಾರೆ ಎಂದು ಸೂಚಿಸಿರುತ್ತಾರೆ.

    ಅದರ ಅನುಸಾರ ಟಾಸ್ಕ್ ವೇಳೆ ಮೊದಲು ನಿಧಿ ಸುಬ್ಬಯ್ಯ ಬಕೆಟ್‍ನನ್ನು ಬಿಟ್ಟು ಔಟ್ ಆಗುತ್ತಾರೆ. ನಂತರ ಅರವಿಂದ್ ಹಾಗೂ ದಿವ್ಯಾ ಸುರೇಶ್ ಟಾಸ್ಕ್ ಮುಂದುವರಿಸುತ್ತಾರೆ. ಈ ವೇಳೆ ಸೊಳ್ಳೆಗಳಿಂದ ದಿವ್ಯಾ ಸುರೇಶ್ ಹಾಗೂ ಅರವಿಂದ್‍ಗೆ ಕಿರಿಕಿರಿ ಆಗುತ್ತಿರುತ್ತದೆ. ಅದನ್ನು ಕಂಡು ದಿವ್ಯಾ ಉರುಡುಗ ಕ್ರೀಮ್ ತಂದು ದಿವ್ಯಾ ಸುರೇಶ್‍ಗೆ ಹಚ್ಚಲಾ ಎಂದು ಕೇಳುತ್ತಾರೆ. ಆಗ ದಿವ್ಯಾ ಸುರೇಶ್ ಬೇಡ ಎನ್ನುತ್ತಾರೆ. ಬಳಿಕ ಅರವಿಂದ್ ರವರಿಗೆ ಹಚ್ಚಲಾ ಎಂದಾಗ ಅರವಿಂದ್ ಹೌದು ಎಂದಾಗ ದಿವ್ಯಾ ಉರುಡುಗ ಅರವಿಂದ್ ಕಾಲಿಗೆ ಕ್ರೀಮ್‍ನನ್ನು ಹಚ್ಚುತ್ತಾರೆ.

    ಇದನ್ನು ಕಂಡು ದಿವ್ಯಾ ಸುರೇಶ್ ನೈಸ್ ಕಮೆಂಟ್ ಹಾಕುತ್ತಾ ಜೋರಾಗಿ ನಗುತ್ತಾರೆ. ಆಗ ಮನೆ ಮಂದಿ ಕೂಡ ದಿವ್ಯಾ ಅರವಿಂದ್ ನೋಡಿ ನಗುತ್ತಾರೆ. ಈ ವೇಳೆ ದಿವ್ಯಾ ಸುರೇಶ್ ಆದಾದ ನಂತರ ನನನಗೆ ಲಿಪ್‍ಸ್ಟಿಕ್ ಹಾಕುತ್ತಿಯಾ ಎಂದು ಕೇಳುತ್ತಾರೆ. ಖಂಡಿತ ಹಚ್ಚುತ್ತೇನೆ ಎಂದು ಟಾಸ್ಕ್ ಮಧ್ಯೆ ಲಿಪ್ ಸ್ಟಿಕ್ ಹಚ್ಚುತ್ತಾರೆ. ಆಗ ಮನೆ ಮಂದಿಯೆಲ್ಲಾ ಓ… ಎಂದು ಜೋರಾಗಿ ಕಿರುಚುತ್ತಾ ನಗುತ್ತಾರೆ.