Tag: crematorium

  • ರಾತ್ರೋರಾತ್ರಿ ಸ್ಮಶಾನ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ – ಸ್ಥಳೀಯರಿಂದ ಆಕ್ರೋಶ

    ರಾತ್ರೋರಾತ್ರಿ ಸ್ಮಶಾನ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ – ಸ್ಥಳೀಯರಿಂದ ಆಕ್ರೋಶ

    ಹುಬ್ಬಳ್ಳಿ: ರಾತ್ರೋರಾತ್ರಿ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ (Indira Canteen) ನಿರ್ಮಾಣ ಮಾಡುತ್ತಿದ್ದು, ಸರ್ಕಾರದ ನಡೆಗೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಜಿಲ್ಲೆಯ ಮಂಟೂರು ರಸ್ತೆಯ ಸತ್ಯಹರಿಶ್ಚಂದ್ರ ಕಾಲೋನಿಯಲ್ಲಿ (Satya Harishchandra) ನಡೆದಿದೆ.

    ಇಂದಿರಾ ಕ್ಯಾಂಟೀನ್ ಬಡವರ, ಶ್ರಮಿಕರ, ಕಾರ್ಮಿಕರ ಹೊಟ್ಟೆ ತುಂಬಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಆರಂಭಿಸಿರುವ ಯೋಜನೆಯಾಗಿದೆ. ಯೋಜನೆ ಆರಂಭದಿಂದಲೂ ಈ ಯೋಜನೆ ಒಂದಿಲ್ಲಾ ಒಂದು ವಿವಾದಕ್ಕೆ ಕಾರಣವಾಗಿದೆ. ಈ ಕ್ಯಾಂಟೀನ್ ದಲಿತರ ಮತ್ತು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ವಾಣಿಜ್ಯ ನಗರಿಯಲ್ಲಿ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿಗೆ ಭಾರಿ ವಿರೋಧ ವ್ಯಕ್ತವಾಗಿದೆ.ಇದನ್ನೂ ಓದಿ: ನಾಗಮಂಗಲ ಗಲಭೆ; ಕಿಡಿಗೇಡಿಗಳು ಅಂಗಡಿಗೆ ಪೆಟ್ರೋಲ್ ಬಾಂಬ್ ಎಸೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

     ಒಂದು ಕಡೆ ಇಂದಿರಾ ಕ್ಯಾಂಟೀನ್ ಕಾಮಗಾರಿ, ಇನ್ನೊಂದು ಕಡೆ ಹಿಂದೂಪರ ಸಂಘಗಳ ತೀವ್ರ ಆಕ್ರೋಶ. ಹುಬ್ಬಳ್ಳಿ ಮಂಟೂರು ರಸ್ತೆಯಲ್ಲಿ ಸತ್ಯಹರಿಶ್ಚಂದ್ರ ಕಾಲೋನಿಯ ಪಕ್ಕದಲ್ಲಿ ಸರ್ವೆ ನಂಬರ್ 212ರಲ್ಲಿ ಸುಮಾರು ಏಂಟು ಎಕರೆಯಲ್ಲಿ ಹಿಂದೂಗಳ ರುದ್ರಭೂಮಿಯಿದೆ. ಸ್ಮಶಾನದ ಕಾಂಪೌಂಡ್ ಗೋಡೆ ಒಡೆದು ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ.

    ಕಾಮಗಾರಿ ಸ್ಥಳಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ (Pramod Mutalik) ಭೇಟಿ ನೀಡಿ ಮಾತನಾಡಿ, ಅಬ್ಬಯ್ಯ ಅವರು ದಲಿತರ ವೋಟ್ ಮೇಲೆ ಗೆದ್ದಿದ್ದಾರೆ. ಆದರೆ ಈಗ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇವತ್ತು ಇಂದಿರಾ ಕ್ಯಾಂಟೀನ್, ನಾಳೆ ಅಬ್ಬಯ್ಯ ಕ್ಯಾಂಟೀನ್ ಕಟ್ಟುತ್ತಾರೆ. ಹಿಂದೂ ರುದ್ರಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ಬೇಡ. ಕೂಡಲೇ ಇಂದಿರಾ ಕ್ಯಾಂಟೀನ್ ಕಟ್ಟಡ ಸ್ಥಳಾಂತರ ಮಾಡಿ. ಇಲ್ಲದಿದ್ದರೆ ಉಗ್ರ ಹೋರಾಟ ಮೂಲಕ ನಾವೇ ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಮತ್ತು ಹೋರಾಟ ಸಮಿತಿ ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತಮ್ಮ ಪ್ರತಿಷ್ಠೆಗಾಗಿ ರುದ್ರಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುತ್ತಿದ್ದು, ಅಧಿಕಾರಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎನ್ನಲಾಗಿದೆ. ಈಗ ಈ ಹೋರಾಟಕ್ಕೆ ಹಿಂದೂಪರ ಸಂಘಟನೆಗಳು ಸಹ ಕೈ ಜೋಡಿಸಿದ್ದು, ರುದ್ರಭೂಮಿ ಹೋರಾಟ ತೀವ್ರತೆ ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ನಮ್ಮ ಪಾರ್ಟಿ, ನಮ್ಮ ಲೀಡರ್, ನನ್ನಿಷ್ಟ: ವಿದೇಶದಲ್ಲಿ ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಸಿಎಂ ಪ್ರತಿಕ್ರಿಯೆ

  • ದೆವ್ವವಿಲ್ಲ ಎಂದು ಸಾರಲು ಸ್ಮಶಾನದಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ

    ದೆವ್ವವಿಲ್ಲ ಎಂದು ಸಾರಲು ಸ್ಮಶಾನದಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ

    ಮುಂಬೈ: ಮೂಢನಂಬಿಕೆಗಳ ವಿರುದ್ಧ ಸಂದೇಶವನ್ನು ಸಾರಲು ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ಕಲ್ಯಾಣ್ ಪಟ್ಟಣದ ನಿವಾಸಿಯೊಬ್ಬರು ಸ್ಮಶಾನದಲ್ಲಿ (Crematorium) ತಮ್ಮ ಜನ್ಮದಿನವನ್ನು (Birthday) ಆಚರಿಸಿಕೊಂಡರು.

    54ನೇ ವರ್ಷಕ್ಕೆ ಕಾಲಿಟ್ಟ ಗೌತಮ್ ರತನ್ ಮೋರೆ ಅವರು ಮೊಹಾನೆ ಸ್ಮಶಾನದಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜಿಸಿದ್ದರು. ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಬಂದ ಅತಿಥಿಗಳಿಗೆ ಕೇಕ್ ಹಾಗೂ ಬಿರಿಯಾನಿಗಳನ್ನು ನೀಡಿ ಸತ್ಕರಿಸಿದರು. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ಮಶಾನದಲ್ಲಿ ದೊಡ್ಡ ಬ್ಯಾನರ್‌ನ್ನು ಹಾಕಲಾಗಿದ್ದು, ಕೇಕ್‌ನ್ನು ಕತ್ತರಿಸುತ್ತಿರುವ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ: ಖಾಲಿದ್ ಆಕ್ರೋಶ

    ಸ್ಮಶಾನದಲ್ಲಿ ನಡೆದ ಗೌತಮ್ ರತನ್ ಮೋರೆಯ ಹುಟ್ಟುಹಬ್ಬದ ಪಾರ್ಟಿಯಲ್ಲಿ 40 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದರು. ಗೌತಮ್ ಈ ಬಗ್ಗೆ ಮಾತನಾಡಿ, ಸಾಮಾನ್ಯವಾಗಿ ಸ್ಮಶಾನಗಳು ಅಂದರೆ ಜನರು ಭಯಪಡುತ್ತಾರೆ. ಆದರೆ ಅಂತಹ ಇತರ ಸ್ಥಳಗಳಿಗೆ ಸಂಬಂಧಿಸಿದ ದೆವ್ವಗಳು ಅಸ್ತಿತ್ವದಲ್ಲಿಲ್ಲ ಎಂಬ ಸಂದೇಶವನ್ನು ಜನರಿಗೆ ಕಳುಹಿಸಲು ಇಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಪಕ್ಷ ಬಿಡಲ್ಲ, ಭವಿಷ್ಯ ಬಿಜೆಪಿಯಲ್ಲೇ ಇದೆ: ಯತ್ನಾಳ್

    Live Tv
    [brid partner=56869869 player=32851 video=960834 autoplay=true]

  • ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಶೆಟ್ಟರ್, ಜೋಶಿ ಭೂಮಿ ಪೂಜೆ

    ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಶೆಟ್ಟರ್, ಜೋಶಿ ಭೂಮಿ ಪೂಜೆ

    ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆಯನ್ನು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ನೆರವೇರಿಸಿದರು.

    ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕೆನರಾ ಬ್ಯಾಂಕ್‍ನ ಸಾಮಾಜಿಕ ಹೊಣೆಗಾರಿಕಾ ನಿಧಿಯಡಿ ವಿದ್ಯಾನಗರ ಸ್ಮಶಾನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, 11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್‍ಗಳನ್ನು ಒದಗಿಸಲಾಗುತ್ತಿದೆ. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆಗಸ್ಪ್ 31ರ ಒಳಗಾಗಿ ನಿರ್ಮಾಣಕ್ಕೆ ಗಡುವು ನೀಡಲಾಗಿದೆ ಎಂದರು.

    ನಗರದ ಮಂಟೂರು ಹರಿಶ್ಚಂದ್ರ ಸನ್ಮಾಶನದಲ್ಲಿ ಸ್ಮಾರ್ಟ್ ಸಿಟಿ ಅನುದಾನ ಅಡಿ 2.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗರದ ಕಾಮಗಾರಿ ಪ್ರಗತಿಯಲ್ಲಿದೆ. ಹೆಗ್ಗೇರಿ ಸ್ಮಶಾನದಲ್ಲಿ 1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ. ಅಲ್ಲದೆ ಆನಂದ ನಗರ ಸನ್ಮಾಶನದಲ್ಲಿ 74 ಲಕ್ಷ ವೆಚ್ಚದಲ್ಲಿ ಗ್ಯಾಸ್ ಆಧಾರಿತ ಚಿತಾಗರ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಧಾರವಾಡ ಹೊಸ ಯಲ್ಲಾಪುರ ಸ್ಮಶಾನದಲ್ಲಿ 4.40 ಲಕ್ಷ ವೆಚ್ಚದಲ್ಲಿ ಗ್ಯಾಸ್ ಕ್ರಿಮೇಷನ್ ಚೆಂಬರ್ ಅಳವಡಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.