Tag: Cricket Australia

  • ಟೆಸ್ಟ್‌ ಕ್ರಿಕೆಟ್‌ ಉತ್ತೇಜಕ್ಕೆ 125 ಕೋಟಿ ಮೊತ್ತದ ನಿಧಿ ಸ್ಥಾಪನೆಗೆ ಐಸಿಸಿ ನಿರ್ಧಾರ – ಭಾರತ, ಆಸೀಸ್‌ಗಿಲ್ಲ ಲಾಭ ಏಕೆ?

    ಟೆಸ್ಟ್‌ ಕ್ರಿಕೆಟ್‌ ಉತ್ತೇಜಕ್ಕೆ 125 ಕೋಟಿ ಮೊತ್ತದ ನಿಧಿ ಸ್ಥಾಪನೆಗೆ ಐಸಿಸಿ ನಿರ್ಧಾರ – ಭಾರತ, ಆಸೀಸ್‌ಗಿಲ್ಲ ಲಾಭ ಏಕೆ?

    ಅಭುದಾಬಿ: ಇತ್ತೀಚಿನ ದಿನಗಳಲ್ಲಿ ಟೆಸ್ಟ್‌ ಕ್ರಿಕೆಟ್‌ನತ್ತ ಆಟಗಾರರ ಆಸಕ್ತಿ ಕಡಿಮೆಯಾಗುತ್ತಿದೆ. ಆದ್ದರಿಂದ ಟೆಸ್ಟ್ ಕ್ರಿಕೆಟ್‌ಗೆ (Test Cricket) ಉತ್ತೇಜನ ನೀಡುವ ಸಲುವಾಗಿ, ಯುವ ಕ್ರಿಕೆಟಿಗರನ್ನು ಸೆಳೆಯವ ನಿಟ್ಟಿನಲ್ಲಿ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. 125 ಕೋಟಿ ರೂ. (15 ಮಿಲಿಯನ್ USD) ಮೊತ್ತದ ನಿಧಿ ಮೀಸಲಿಡಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ICC) ನಿರ್ಧರಿಸಿದೆ.

    ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ (Cricket Australia) ಐಸಿಸಿಗೆ ಈ ಪ್ರಸ್ತಾವನೆ ಸಲ್ಲಿಸಿದೆ. ಈಗಾಗಲೇ ಐಸಿಸಿ ಟೆಸ್ಟ್‌ ಕ್ರಿಕೆಟ್‌ ಉತ್ತೇಜಿಸಲು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಟೂರ್ನಿ ಆಯೋಜಿಸಿದೆ. 2019 ರಿಂದ 2023ರ ವರೆಗೆ ಎರಡು ಆವೃತ್ತಿಗಳೂ ಕಳೆದು, ಇದೀಗ 3ನೇ ಆವೃತ್ತಿಗೆ ಕಾಲಿಟ್ಟಿದೆ. ಈ ನಡುವೆ ಐಸಿಸಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: Ind vs Eng Test | 2025ರ ಭಾರತ – ಇಂಗ್ಲೆಂಡ್ ವೇಳಾಪಟ್ಟಿ ಬಿಡುಗಡೆಗೊಳಿಸಿದ ಬಿಸಿಸಿಐ

    ಈ ನಿಧಿಯ ಮೂಲಕ ಟೆಸ್ಟ್ ಕ್ರಿಕೆಟ್ ಆಡಲಿರುವ ಆಟಗಾರರ ಪಂದ್ಯದ ಕನಿಷ್ಠ ಸಂಭಾವನೆಯನ್ನು ಹೆಚ್ಚಿಸುವ ಜೊತೆಗೆ ವಿದೇಶಿ ಸರಣಿಗಳಿಗೆ ತಂಡಗಳನ್ನು ಕಳುಹಿಸುವ ತಂಡದ ಪ್ರವಾಸ ಶುಲ್ಕದ ಜೊತೆಗೆ ಟೆಸ್ಟ್ ಕ್ರಿಕೆಟ್ ಆಡಲಿರುವ ಪ್ರತಿ ಆಟಗಾರರರಿಗೆ ಕನಿಷ್ಠ 8 ಲಕ್ಷ ರೂ. ಸಂಭಾವನೆ ನೀಡಲು ಇದು ನೆರವಾಗಲಿದೆ. ಇದನ್ನೂ ಓದಿ: ಮಾಜಿ ಪ್ರಧಾನಿ ಶೇಖ್‌ ಹಸೀನಾ, ಬಾಂಗ್ಲಾದ ಆಲ್‌ರೌಂಡರ್‌ ಶಕೀಬ್‌ ವಿರುದ್ಧ ಕೊಲೆ ಪ್ರಕರಣ ದಾಖಲು

    ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುವ ಜೊತೆಗೆ ಆಟಗಾರರನ್ನು ಪ್ರೋತ್ಸಾಹಿಸಲು ಬಿಸಿಸಿಐ ಹೊಸ ಯೋಜನೆಯ ಅಡಿಯಲ್ಲಿ ಈಗಾಗಲೇ ಭಾರತದ ಟೆಸ್ಟ್ ಕ್ರಿಕೆಟಿಗರಿಗೆ ಬೋನಸ್ ರೂಪದಲ್ಲಿ ಹೆಚ್ಚಿನ ಸಂಭಾವನೆ ನೀಡುತ್ತಿದೆ. ವಾರ್ಷಿಕ ಶೇ.75 ಟೆಸ್ಟ್ ಪಂದ್ಯಗಳಲ್ಲಿ ಭಾರತದ ತಂಡವನ್ನು ಪ್ರತಿನಿಧಿಸಲಿರುವ ಆಟಗಾರರಿಗೆ ಪ್ರತಿ ಪಂದ್ಯಕ್ಕೆ ತಲಾ 45 ಲಕ್ಷ ರೂ. ಜೊತೆಗೆ ಪಂದ್ಯದ ಶುಲ್ಕ 15 ಲಕ್ಷ ರೂ. ನೀಡಲಿದ್ದು, ಶೇ.50-70 ಪಂದ್ಯಗಳನ್ನು ಆಡಲಿರುವ ಆಟಗಾರರು ಪ್ರತಿ ಪಂದ್ಯಕ್ಕೆ ತಲಾ 30 ಲಕ್ಷ ಬೋನಸ್ ಪಡೆದುಕೊಳ್ಳಲಿದ್ದಾರೆ.

    ಭಾರತಕ್ಕೆ ಈ ಲಾಭವಿಲ್ಲ?
    ಐಸಿಸಿಯ ಈ ನಿಧಿ ಯೋಜನೆಯ ಲಾಭ, ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ ದೇಶಗಳಿಗೆ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಈ ರಾಷ್ಟ್ರಗಳು ಈಗಾಗಲೇ ತಮ್ಮ ತಂಡದ ಆಟಗಾರರಿಗೆ ಉತ್ತಮ ಸಂಭಾವನೆ ನೀಡುತ್ತಿದೆ. ಜೊತೆಗೆ ಶ್ರೀಮಂತ ಕ್ರಿಕೆಟ್‌ ಸಂಸ್ಥೆಗಳೆಂದು ಗುರುತಿಸಿಕೊಂಡಿವೆ. ಆದ್ದರಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವೆಸ್ಟ್ ಇಂಡೀಸ್, ಪಾಕಿಸ್ತಾನ ಕ್ರಿಕೆಟ್ ಮಂಡಳಿಯಂತಹ ಸಂಸ್ಥೆಗಳ ಚೇತರಿಕೆ ಈ ನಿಧಿ ಸಹಕಾರಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್‌ ಧವನ್‌

  • Ind Vs Aus ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಇಳಿದಿದ್ದು ಯಾಕೆ?

    Ind Vs Aus ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಇಳಿದಿದ್ದು ಯಾಕೆ?

    ಅಹಮದಾಬಾದ್: ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ತಂಡದ ಆಟಗಾರರು ಕಪ್ಪು ಪಟ್ಟಿ (Black armbands) ಧರಿಸಿ ಟೀಂ ಇಂಡಿಯಾ (Team India) ವಿರುದ್ಧ ಕ್ರಿಕೆಟ್ ಅಂಗಳಕ್ಕೆ ಇಳಿದಿದ್ದಾರೆ.

    ಸಹ ಆಟಗಾರ ಪ್ಯಾಟ್ ಕಮ್ಮಿನ್ಸ್ (Pat Cummins) ತಾಯಿ ನಿಧನರಾದ ಹಿನ್ನೆಲೆಯಲ್ಲಿ ಅಗಲಿದ ಜೀವಕ್ಕೆ ಗೌರವ ಸೂಚಿಸಿ ಆಟಗಾರರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾರಿಯಾ ಕಮ್ಮಿನ್ಸ್ ಅವರ ಅಗಲಿಕೆಗೆ ಬಿಸಿಸಿಐ (BCCI) ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ (Cricket Australia) ಸಂತಾಪ ಸೂಚಿಸಿವೆ. ಇದನ್ನೂ ಓದಿ: ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

    2005 ರಿಂದ ಸ್ತನ ಕ್ಯಾನ್ಸರ್‌ನಿಂದ (Breast cancer)  ಬಳಲುತ್ತಿದ್ದ ಪ್ಯಾಟ್ ಅವರ ತಾಯಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ತಾಯಿಯ ಆರೋಗ್ಯ ತೀವ್ರ ಹದಗೆಟ್ಟ ವಿಷಯ ತಿಳಿಯುತ್ತಿದ್ದಂತೆ ಪ್ಯಾಟ್, ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡದಿರಲು ನಿರ್ಧರಿಸಿ ತವರಿಗೆ ಮರಳಿದ್ದರು. ಇದರಿಂದಾಗಿ ಈ ಪಂದ್ಯದಲ್ಲಿ ಸ್ಟೀವ್ ಸ್ಮಿತ್ (Steve Smith) ತಂಡದ ಕ್ಯಾಪ್ಟನ್ ಸ್ಥಾನ ವಹಿಸಿದ್ದಾರೆ.

    ಆಸ್ಟ್ರೇಲಿಯಾ ತಂಡ 167.2 ಓವರ್‍ಗಳಿಗೆ ಆಲೌಟ್ ಆಗಿ 480 ರನ್ ಪೇರಿಸಿದೆ. ಇದನ್ನೂ ಓದಿ: ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ

  • 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿರುವ ಪ್ಯಾಟ್ – ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಸಾರಥ್ಯ

    4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿರುವ ಪ್ಯಾಟ್ – ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಸಾರಥ್ಯ

    ಅಹಮದಾಬಾದ್: ಭಾರತದ (Team India) ವಿರುದ್ಧ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ತಂಡದ ಸಾರಥ್ಯವನ್ನು ಸ್ಟೀವ್ ಸ್ಮಿತ್ (Steve Smith) ವಹಿಸಲಿದ್ದಾರೆ.

    ತಾಯಿಯ ಅನಾರೋಗ್ಯದಿಂದ ತವರಿಗೆ ಮರಳಿರುವ ಪ್ಯಾಟ್ ಕಮ್ಮಿನ್ಸ್ (Pat Cummins) ಭಾರತಕ್ಕೆ ಮರಳದೇ ಇರಲು ನಿರ್ಧರಿಸಿದ ಬೆನ್ನಲ್ಲಿ ಮತ್ತೊಮ್ಮೆ ಸ್ಮಿತ್ ಅವರಿಗೆ ನಾಯಕನಾಗುವ ಅವಕಾಶ ಸಿಕ್ಕಿದೆ. ಇದನ್ನೂ ಓದಿ: ವಿರಾಟ್ ಶತಕಗಳಿಂದಲೇ ಭಾರತ ಗೆಲ್ಲುತ್ತಿತ್ತು – ಕೊಹ್ಲಿಯನ್ನು ಹೊಗಳಿ ಸಚಿನ್ ವಿರುದ್ಧ ಅಖ್ತರ್ ಟೀಕೆ

    ಈ ಬಗ್ಗೆ ಮಾಹಿತಿ ನೀಡಿರುವ ಕ್ರಿಕೆಟ್ ಆಸ್ಟ್ರೇಲಿಯಾ (Cricket Australia), ಪ್ಯಾಟ್ ತಮ್ಮ ಕುಟುಂಬದೊಂದಿಗೆ ಉಳಿಯಲು ನಿರ್ಧರಿಸಿದ್ದು ಭಾರತದ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದಿದೆ. ಮುಂಬರುವ ಏಕದಿನ ಸರಣಿಯಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ಅದು ಪ್ರಕಟಿಸಿಲ್ಲ.

    ಸ್ಮಿತ್ ಮಾತನಾಡಿ, ಭಾರತ ನನ್ನ ನೆಚ್ಚಿನ ಜಾಗ, ನನ್ನ ನೆಚ್ಚಿನ ಜಾಗದಲ್ಲಿ ನಾಯಕತ್ವ ವಹಿಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:  ಜೀವನದಿ ಕಾವೇರಿ ತೀರ್ಥ ಪ್ರಸಾದ ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ

  • ಬಿಸಿಸಿಐಗೆ ಗುಡ್‍ನ್ಯೂಸ್ ಕೊಟ್ಟ ಆಸೀಸ್ ಕ್ರಿಕೆಟ್ ಮಂಡಳಿ

    ಬಿಸಿಸಿಐಗೆ ಗುಡ್‍ನ್ಯೂಸ್ ಕೊಟ್ಟ ಆಸೀಸ್ ಕ್ರಿಕೆಟ್ ಮಂಡಳಿ

    ಮೆಲ್ಬರ್ನ್: ಹಣದ ಹೊಳೆಯನ್ನೇ ಹರಿಸುವ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಸಲು ಬಿಸಿಸಿಐ ಸರ್ವ ಪ್ರಯತ್ನ ನಡೆಸಿದೆ. ಈ ನಿರ್ಧಾರಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯಿಂದ ಗುಡ್‍ನ್ಯೂಸ್ ಸಿಕ್ಕಿದೆ.

    2020ರ ಐಸಿಸಿ ಟಿ20 ವಿಶ್ವಕಪ್ ಆಥಿತ್ಯವನ್ನು ಆಸ್ಟ್ರೇಲಿಯಾ ವಹಿಸಿಕೊಂಡಿದೆ. ಆದರೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಟೂರ್ನಿಯನ್ನು ನಡೆಸದಿರಲು ನಿರ್ಧರಿಸಿದೆ. ಹೀಗಾಗಿ ಐಪಿಎಲ್ ನಡೆಸಲು ಬಿಸಿಸಿಐಗೆ ಸೂಕ್ತ ವೇಳಾಪಟ್ಟಿ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಇದನ್ನೂ ಓದಿ: ‘ಬಿಸಿಸಿಐ ಹಣಕ್ಕಾಗಿ ಐಪಿಎಲ್ ಆಡಿಸುತ್ತಿದೆ’ – ಟೀಕಾಕಾರರಿಗೆ ಅರುಣ್ ಧುಮಾಲ್ ಆರ್ಥಿಕ ಪಾಠ

    ಇದೇ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಸುವ ಹಾಗೂ ಬಿಡುವ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇತ್ತ ಹೋಸ್ಟಿಂಗ್ ಹಕ್ಕುಗಳನ್ನು ಹೊಂದಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಕೊರೊನಾ ವೈರಸ್ ಭೀತಿಯ ಮಧ್ಯೆ ಟೂರ್ನಿಯ ಆತಿಥ್ಯ ವಹಿಸುವುದಿಲ್ಲ ಎಂದು ಪುನರುಚ್ಚರಿಸಿದೆ. ಇದರಿಂದಾಗಿ ಐಪಿಎಲ್ ನಡೆಸಲು ಬಿಸಿಸಿಐಗೆ ಅವಕಾಶ ಸಿಕ್ಕಂತಾಗಿದೆ. ಇದನ್ನೂ ಓದಿ: ಈ ವರ್ಷ ಖಾಲಿ ಸ್ಟೇಡಿಯಂನಲ್ಲಿ ಐಪಿಎಲ್‌ – ಹಣ ಹೇಗೆ ಬರುತ್ತೆ?

    ಕ್ರಿಕೆಟ್ ಆಸ್ಟ್ರೇಲಿಯಾದ ಅಧ್ಯಕ್ಷ ಕಾರ್ಲ್ ಎಡ್ಡಿಂಗ್ಸ್ ಅವರು, “ಈ ವರ್ಷದ ಟಿ20 ಟೂರ್ನಿಯ ಆತಿಥ್ಯ ವಹಿಸುವ ಸಾಧ್ಯತೆಗಳೇ ಇಲ್ಲ. ಟೂರ್ನಿಯ ಹಿನ್ನೆಲೆ 16 ದೇಶಗಳ ತಂಡಗಳು ಆಸ್ಟ್ರೇಲಿಯಾಕ್ಕೆ ಆಗಮಿಸುತ್ತವೆ. ಹೀಗಾಗಿ ಕೊರೊನಾ ವೈರಸ್ ಹರಡುವ ಭೀತಿ ಹೆಚ್ಚಾಗಿದೆ. ಯಾವುದೇ ಕಾರಣಕ್ಕೂ ಟೂರ್ನಿಯನ್ನು ಈ ವರ್ಷ ನಡೆಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

    ಐಪಿಎಲ್‍ನ 13ನೇ ಆವೃತ್ತಿ ವೇಳಾಪಟ್ಟಿಯು ಟಿ20 ವಿಶ್ವಕಪ್‍ನ ಮೇಲೆ ನಿಂತಿತ್ತು. ಐಸಿಸಿಯಿಂದ ಅಧಿಕೃತ ಪ್ರಕಟಣೆಯನ್ನು ಕಾಯುತ್ತಿದ್ದರೂ, ಆಸ್ಟ್ರೇಲಿಯಾದ ನಿರ್ಧಾರರಿಂದ ಬಿಸಿಸಿಐಗೆ ಮತ್ತಷ್ಟು ಬಲ ಬಂದಂತಾಗಿದೆ.