Tag: cricket match

  • ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

    ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

    ಇಸ್ಲಾಮಾಬಾದ್‌: ಕ್ರಿಕೆಟ್‌ ಪಂದ್ಯ (Cricket Match) ನಡೆಯುತ್ತಿದ್ದಾಗಲೇ ಸ್ಟೇಡಿಯಂನಲ್ಲಿ (Stadium) ಸ್ಫೋಟ ಸಂಭವಿಸಿದ ಘಟನೆ ಪಾಕಿಸ್ತಾನದ (Pakistan) ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

    ಸ್ಫೋಟಕ್ಕೆ ಓರ್ವ ಬಲಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಬಜೌರ್ ಜಿಲ್ಲೆಯ ಖಾರ್ ತೆಹ್ಸಿಲ್‌ನಲ್ಲಿರುವ ಕೌಸರ್ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ.

    ಬಜೌರ್ ಜಿಲ್ಲಾ ಪೊಲೀಸ್ ಅಧಿಕಾರಿ ವಕಾಸ್ ರಫೀಕ್ ಅವರು ಸುಧಾರಿತ ಸ್ಫೋಟಕ ಸಾಧನದ ಮೂಲಕ ಸ್ಫೋಟವನ್ನು ನಡೆಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ನನ್ನ ಒಳ್ಳೆಯ ಸ್ನೇಹಿತ: ಮತ್ತೆ ಯೂಟರ್ನ್ಹೊಡೆದ ಟ್ರಂಪ್

    ಸ್ಫೋಟಗೊಂಡ ಬೆನ್ನಲ್ಲೇ ಪಂದ್ಯ ವೀಕ್ಷಿಸುತ್ತಿದ್ದ ಅಭಿಮಾನಿಗಳು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಮೈದಾನದಲ್ಲಿ ದಟ್ಟವಾದ ಹೊಗೆ ಏಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

     

  • ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ

    ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ

    – ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ನನ್ನದ್ದಲ್ಲ ಎಂದ ಪರಮೇಶ್ವರ್
    – ಆರೋಪಿಗಳ ಹೇಳಿಕೆಯನ್ನು ಹೇಳಿದ್ದೆ ಎಂದ ಸಚಿವ

    ಮಂಗಳೂರು/ ಬೆಂಗಳೂರು: ಕುಡುಪು (Kudupu) ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಏ.27ರ ಭಾನುವಾರ ಸಂಜೆ 5:30ರ ಸುಮಾರಿಗೆ ಮಂಗಳೂರಿನ (Manglauru) ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

    ಅಪರಿಚಿತ ಮೃತದೇಹ ಅನುಮಾನಾಸ್ಪದವಾಗಿ ಸಿಕ್ಕಿದ ಹಿನ್ನಲೆಯಲ್ಲಿ ಬಿಸಿ ಬಿಸಿ ಚರ್ಚೆಗಳು ಅದಾಗಲೇ ಆರಂಭವಾಗಿತ್ತು. ಹಿಂದೂ ಯುವಕರು ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಅಂತಾ ಸಿಪಿಐಎಂ, ಎಸ್‌ಡಿಪಿಐ ಪಕ್ಷಗಳು ಆರೋಪ ಮಾಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ನೈಜ ವಿಚಾರ ಗೊತ್ತಾಗಿದೆ. ಇದನ್ನೂ ಓದಿ: ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ

    ಕೊಲೆಯಾಗಿದ್ದು ಯಾಕೆ?
    ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: 5 ತಿಂಗಳ ಬಳಿಕ ಇಸ್ಕಾನ್‌ನ ಚಿನ್ಮಯ್ ಕೃಷ್ಣದಾಸ್‌ಗೆ ಬಾಂಗ್ಲಾ ಹೈಕೋರ್ಟ್ ಜಾಮೀನು

    ಗುಂಪು ಹತ್ಯೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇದೇ ಮೊದಲ ಬಾರಿಗೆ 2023 (BNS 2023) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಕೃತ್ಯದಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಭಾಗವಹಿಸಿರುವ ಸಂಶಯವಿದೆ. ಮೊದಲಿಗೆ 15 ಮಂದಿ ಹಾಗೂ ಮತ್ತೆ ಐವರು ಸೇರಿ ಒಟ್ಟು 20 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪತಿಯ ಹೆಸರು ಥಳಕು ಹಾಕಿಕೊಂಡಿದೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಗದಿಯಾಗಿದ್ದ ಮೋದಿ ರಷ್ಯಾ ಪ್ರವಾಸ ದಿಢೀರ್‌ ರದ್ದು!

    ಯಾವುದೇ ದಾಖಲೆ, ವಿಳಾಸ ಇಲ್ಲದ ಮೃತ ವ್ಯಕ್ತಿಯ ಗುರುತು ಪತ್ತೆ ಬಗ್ಗೆ ಪೊಲೀಸರು ಸಾಕಷ್ಟು ಪರಿಶ್ರಮವಹಿಸಿ 2 ದಿನದ ಬಳಿಕ ಗುರುತು ಪತ್ತೆಯಾಗಿದೆ. ಮಂಗಳೂರಿಗೆ ವಲಸೆ ಕಾರ್ಮಿಕನಾಗಿ ಬಂದಿದ್ದ ಕೇರಳದ ವಯನಾಡಿನ ಮನವಂತವಾಡಿಯ ಪುಲ್ಪಲ್ಲಿ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.

    ಇದೀಗ ಆತನ ಸಂಬಂಧಿಕರು ಮಂಗಳೂರಿಗೆ ಬಂದು ಮೃತದೇಹ ಅಶ್ರಫ್‌ನದ್ದೇ ಎಂದು ಗುರುತಿಸಿದ್ದಾರೆ. ಮೃತದೇಹವನ್ನು ಅಶ್ರಫ್ ಕುಟುಂಬಸ್ಥರಿಗೆ ಇಂದು ಹಸ್ತಾಂತರ ಮಾಡಲಾಗಿದ್ದು, ಸಂಬಂಧಿಕರು ಮೃತದೇಹವನ್ನು ಕೊಂಡು ಹೋಗಿದ್ದಾರೆ. ಕೊಲೆಯಾದ ಅಶ್ರಫ್ ಪಾನಮತ್ತನಾಗಿ ಪಾಕಿಸ್ಥಾನಕ್ಕೆ ಜೈಕಾರ ಕೂಗಿದ್ದಕ್ಕೆ ಗುಂಪು ಆತನ ಮೇಲೆ ಬಿದ್ದಿರುವ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ. ಒಟ್ಟಿನಲ್ಲಿ ಯುವಕರ ಬಲವಾದ ಏಟಿಗೆ ಅಮಾಯಕ ಪ್ರಾಣ ಚೆಲ್ಲಿರೋದು ನಿಜಕ್ಕೂ ಖಂಡನೀಯವಾಗಿದೆ. ಇದನ್ನೂ ಓದಿ: LKG-UKG ದಾಖಲಾತಿಗೆ ವಯಸ್ಸಿನ ಮಿತಿ ಸಡಿಲ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

    ಹೇಳಿಕೆ ನನ್ನದ್ದಲ್ಲ:
    ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾರಣ ಎಂದು ಮಂಗಳವಾರ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್ (G.Parameshwar), ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ದಕ್ಷಿಣ ಕನ್ನಡ ಜಿಪಂ ಸಿಇಒ

    ಗುಂಪು ಹಲ್ಲೆ ನಡೆಸಿದ್ದವರ ಪೈಕಿ ಈವರೆಗೆ 20 ಮಂದಿಯನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ಮಾಡುವಾಗ ಮೃತಪಟ್ಟ ಯುವಕ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಎಂದು ಹೇಳಿದರು.

  • New Zealand v/s Pakistan – ಕ್ರಿಕೆಟ್ ಪಂದ್ಯದ ವೇಳೆಯೇ ಗ್ರೌಂಡ್‌ನಲ್ಲಿ ಪವರ್‌ಕಟ್; ಮುಂದೇನಾಯ್ತು?

    New Zealand v/s Pakistan – ಕ್ರಿಕೆಟ್ ಪಂದ್ಯದ ವೇಳೆಯೇ ಗ್ರೌಂಡ್‌ನಲ್ಲಿ ಪವರ್‌ಕಟ್; ಮುಂದೇನಾಯ್ತು?

    ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ(New Zealand) ಬೇ ಓವಲ್(Bay Oval) ಸ್ಟೇಡಿಯಂನಲ್ಲಿ ಪಾಕಿಸ್ತಾನ(Pakistan) ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ನಡೆಯುತ್ತಿದ್ದಾಗಲೇ ಕರೆಂಟ್ ಹೋದ ವಿಚಿತ್ರ ಘಟನೆ ನಡೆದಿದೆ.

    ನ್ಯೂಜಿಲೆಂಡ್‌ನ ಬೌಲರ್ ಜಾಕೋಬ್ ಡಫಿ ಬೌಲಿಂಗ್ ಮಾಡುತ್ತಿದ್ದಾಗ ಏಕಾಏಕಿ ಸ್ಟೇಡಿಯಂನಲ್ಲಿ ಕರೆಂಟ್ ಹೋಗಿದೆ. ಆಗ ಪಾಕಿಸ್ತಾನದ ತಹೀರ್ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ ಅಚ್ಚರಿ ಏನೆಂದರೆ, ಕರೆಂಟ್ ಹೋಗುವಷ್ಟರಲ್ಲಿ ತಹೀರ್ ಔಟ್ ಆಗಿದ್ದರು. 31 ಎಸೆತಗಳಲ್ಲಿ 33 ರನ್ ಗಳಿಸಿದ್ದ ತಹೀರ್ ಪೆವಿಲಿಯನ್‌ನತ್ತ ಮುಖ ಮಾಡಿದರು. ಈ ಘಟನೆಯು ಸ್ಟೇಡಿಯಂನಲ್ಲಿದ್ದ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿತು. ಇದನ್ನೂ ಓದಿ: ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ಶನಿವಾರ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಮೂರನೇ ಏಕದಿನ ಪಂದ್ಯ ನಡೆಯಿತು. ಮೊದಲು ಕ್ರೀಸ್‌ಗೆ ಇಳಿದ ನ್ಯೂಜಿಲೆಂಡ್ ತಂಡ 50 ಓವರ್‌ಗಳಲ್ಲಿ 264 ರನ್ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ ಪಾಕ್ ತಂಡ, 40 ಓವರ್‌ಗಳಲ್ಲಿ 221 ರನ್‌ಗೆ ಆಲೌಟ್ ಆಯಿತು. ಈ ಮೂಲಕ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು 3-0 ಅಂತರದಲ್ಲಿ ವೈಟ್‌ವಾಶ್ ಮಾಡಿತು. ಇದನ್ನೂ ಓದಿ: ಟಾರ್ಗೆಟ್‌ ರೀಚ್‌ ಆಗ್ಲಿಲ್ಲ ಅಂತ ನೌಕರರಿಗೆ ನಾಯಿಯಂತೆ ನಡೆಯುವ, ಬೊಗಳುವ ಶಿಕ್ಷೆ

  • ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ

    ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ

    ಶ್ರೀನಗರ: ಇಂದು ಭಾರತ ಮತ್ತು ಪಾಕ್ ಹೈವೋಲ್ಟೇಜ್ ಕ್ರಿಕೆಟ್ ಮ್ಯಾಚ್ ಹಿನ್ನೆಲೆ ಶ್ರೀನಗರದಲ್ಲಿರುವ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‍ಐಟಿ) ತನ್ನ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಭಾರತ-ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸದಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.

    ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಈ ಕುರಿತಂತೆ ನೋಟಿಸ್ ನೀಡಿದ್ದು, ಮ್ಯಾಚ್ ವೇಳೆ ವಿದ್ಯಾರ್ಥಿಗಳು ನಿಗದಿ ಪಡಿಸಿರುವ ಕೊಠಡಿಗಳಲ್ಲಿಯೇ ಇರಬೇಕು ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿಚಾರವಾಗಿ ಹಿಂದೂ ಸಂಘಟನೆಗಳ ಸವಾಲು – ಎಚ್ಚೆತ್ತ ಪಾಲಿಕೆ ದಶ ದಿಕ್ಕುಗಳಲ್ಲಿ ಹದ್ದಿನ ಕಣ್ಣು

    ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿವಿಧ ರಾಷ್ಟ್ರಗಳನ್ನೊಳಗೊಂಡ ಕ್ರಿಕೆಟ್ ಸರಣಿ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿದಿದೆ. ಹೀಗಾಗಿ ಆಟವನ್ನು ಆಟದ ರೀತಿ ನೋಡುವಂತೆ ತಿಳಿಸಿದ್ದು, ಹಾಸ್ಟೆಲ್‍ನಲ್ಲಿ ಯಾವುದೇ ರೀತಿಯ ಅಶಿಸ್ತು ಸೃಷ್ಟಿಸದಂತೆ ಸೂಚಿಸಿದೆ.

    ಭಾನುವಾರದ ಪಂದ್ಯ ನಡೆಯುವ ವೇಳೆ ವಿದ್ಯಾರ್ಥಿಗಳು ತಮಗೆ ನಿಗದಿಪಡಿಸಿದ ಕೊಠಡಿಗಳಲ್ಲಿಯೇ ಇರಬೇಕು ಮತ್ತು ಇತರ ವಿದ್ಯಾರ್ಥಿಗಳ ಕೊಠಡಿಗಳಿಗೆ ಪ್ರವೇಶಿಸಬಾರದು. ಗುಂಪು ಕಟ್ಟಿಕೊಂಡು ಪಂದ್ಯವನ್ನು ವೀಕ್ಷಿಸಬಾರದು. ಇಂದು ವೇಳೆ ನಿಗದಿ ಪಡಿಸಿರುವ ಕೊಠಡಿಯಲ್ಲಿ ಮ್ಯಾಚ್ ವೀಕ್ಷಿಸಿದರೆ, ಆ ಕೊಠಡಿಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಹಾಸ್ಟೆಲ್ ವಸತಿಯಿಂದ ಡಿಬಾರ್ ಮಾಡಲಾಗುತ್ತದೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕನಿಷ್ಠ 5,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.

    ಪಂದ್ಯಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬಾರದು. ಇದಲ್ಲದೆ ಪಂದ್ಯದ ಸಮಯದಲ್ಲಿ ಅಥವಾ ನಂತರ ಹಾಸ್ಟೆಲ್ ಕೊಠಡಿಗಳಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಇಂಡಿಯಾ, ಪಾಕ್ ಹೈವೋಲ್ಟೇಜ್ ಕ್ರಿಕೆಟ್- ಭಾರತ ಗೆಲುವಿಗೆ ಮುಸ್ಲಿಮರಿಂದ ವಿಶೇಷ ಪೂಜೆ

    2016ರಲ್ಲಿ ಟಿ-20 ವಿಶ್ವಕಪ್ ಸೆಮಿ-ಫೈನಲ್‍ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತ ನಂತರ ಹೊರರಾಜ್ಯ ಮತ್ತು ಸ್ಥಳೀಯ ವಿದ್ಯಾರ್ಥಿಗಳ ನಡುವೆ ನ್ಯಾಷನಲ್ ಇನ್‍ಸ್ಟಿಟ್ಯೂಟ್‍ನಲ್ಲಿ ಘರ್ಷಣೆಗಳು ಸಂಭವಿಸಿತ್ತು. ಇದರಿಂದ ಕೆಲ ದಿನಗಳವರೆಗೆ ಎನ್‍ಐಟಿ ಕಾಲೇಜನ್ನು ಮುಚ್ಚಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನವನ್ನು ಬಗ್ಗುಬಡಿಯಲು ಉಡುಪಿಯಿಂದ ಟೀಂ ಇಂಡಿಯಾಗೆ ಆಲ್ ದಿ ಬೆಸ್ಟ್

    ಪಾಕಿಸ್ತಾನವನ್ನು ಬಗ್ಗುಬಡಿಯಲು ಉಡುಪಿಯಿಂದ ಟೀಂ ಇಂಡಿಯಾಗೆ ಆಲ್ ದಿ ಬೆಸ್ಟ್

    ಉಡುಪಿ: ಏಷ್ಯಾ ಕಪ್ ಎಂಬ ರಣರಂಗದಲ್ಲಿ ಇಂದು ಇಂಡಿಯಾ ಪಾಕಿಸ್ತಾನ ಕಾದಾಟ ಮಾಡಲಿದೆ. ಏಕದಿನ ಲೀಗ್ ಪಂದ್ಯವಾದ್ರೂ ಮ್ಯಾಚ್ ಫೈನಲ್ ನಷ್ಟೇ ಬಿಸಿಯನ್ನು ಪಡೆದುಕೊಂಡಿದೆ. ಕ್ರಿಕೆಟ್ ಪ್ರೇಮಿಗಳು ಹೈವೋಲ್ಟೇಜ್ ಮ್ಯಾಚ್ ನೋಡಲು ಸಿದ್ಧತೆ ಮಾಡಿಕೊಂಡಿದ್ದಾರೆ.

    ದೀರ್ಘ ಸಮಯದ ಬಳಿಕ ಇಂಡೋ-ಪಾಕ್ ದುಬೈ ಮೈದಾನದಲ್ಲಿ ಎದುರಾಗುತ್ತಿದೆ. ಮ್ಯಾಚ್ ಬಗ್ಗೆ ಎರಡು ದೇಶದ ಕ್ರಿಕೆಟ್ ಪ್ರೇಮಿಗಳಿಗೂ ಬಹಳ ಕುತೂಹಲವಿದೆ. ಉಡುಪಿಯ ಕ್ರಿಕೆಟ್ ಆಸಕ್ತರಂತೂ ಸಿಕ್ಕಾಪಟ್ಟೆ ಕ್ರೇಜ್ ಆಗಿದ್ದಾರೆ. ಟೀಂ ಇಂಡಿಯಾ ಪಾಕ್ ಅನ್ನು ಬಗ್ಗು ಬಡಿಯೋದನ್ನು ನೋಡಲು ಕಾತರರಾಗಿದ್ದಾರೆ.

    ನಗರದ ಎಂಜಿಎಂ ಮೈದಾನದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕ್ರಿಕೆಟ್ ಪ್ರೇಮಿಗಳು, ಇಂಡಿಯಾ ಇಂದಿನ ಫೇವರೇಟ್ ಅಂದ್ರು. ಕೂಲ್ ಕ್ಯಾಪ್ಟನ್ ರೋಹಿತ್ ಗೆ ಇದು ಚಾಲೆಂಜ್, ಧೋನಿಯ ಮಾರ್ಗದರ್ಶನ ಯಂಗ್ ಟೀಂ ನ ಅಗ್ರೆಸಿವ್ ನೆಸ್ ನಿಂದ ಟೀಂ ಇಂಟಿಯಾ ಗೆಲ್ಲುತ್ತೆ ಅಂತ ಹೇಳಿದ್ರು.

    ಅಪ್ಪಟ ಕ್ರಿಕೆಟ್ ಅಭಿಮಾನಿ ಚಿರಂತ್ ಮಾತನಾಡಿ, ಕೋಹ್ಲಿ ಗ್ರೌಂಡಿಗೆ ಇಳಿಯುತ್ತಿಲ್ಲ. ಈ ಬಗ್ಗೆ ಬೇಸರವಿದೆ. ಆದ್ರೆ ಒಬ್ಬರ ಮೇಲೆ ಇಡೀ ಟೀಂ ಅವಲಂಬಿತವಾಗಬಾರದು. 100% ನಾವು ಗೆಲ್ಲುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.

    ಏಷ್ಯಾ ಕಪ್ ನ ಲೀಗ್ ಮ್ಯಾಚ್ ನಲ್ಲಿ ಒಂದು ಸಾಂಪ್ರದಾಯಿಕ ಎದುರಾಳಿಗಳ ಕಾದಾಟ ಯುವಕರಲ್ಲಿ ಮಾತ್ರ ಕ್ರೇಜ್ ಹುಟ್ಟಿಸಿಲ್ಲ. ಮಹಿಳೆಯರೂ ಮ್ಯಾಚ್ ನೋಡಲು ತಯಾರು ಮಾಡ್ಕೊಂಡಿದ್ದಾರೆ. ಇಂಡಿಯಾ ಮತ್ತು ಪಾಕಿಸ್ತಾನ ಇಂದು ಸಂಜೆ ಮುಖಾಮುಖಿಯಾಗಲಿದೆ. ಇದು ಮ್ಯಾಚ್ ಅಲ್ಲ ಬಿಗ್ ವಾರ್ ಅಂತ ಬಣ್ಣಿಸಿದರು. ಬೇಗ ಕೆಲಸ ಮುಗಿಸಿ ಟಿವಿ ಮುಂದೆ ಕೂತ್ಕೋತ್ತೇವೆ ಅಂತ ಸಿಮ್ರಾನ್ ಹೇಳಿದ್ರು.

    ಇಂದಿನ ಮ್ಯಾಚ್ ಸಿಕ್ಕಾಪಟ್ಟೆ ಟೈಟ್ ಇದ್ದು ಏಷ್ಯಾ ಕಪ್ ನಲ್ಲಿ ಈವರೆಗೆ ನಡೆದ 12 ಪಂದ್ಯಗಳಲ್ಲಿ ಇಂಡಿಯಾ 6 ಮತ್ತು ಪಾಕ್ 5 ಪಂದ್ಯಗಳನ್ನು ಗೆದ್ದಿದೆ. . ತಂಡದ ನಾಯಕನಾಗಿರುವ ರೋಹಿತ್ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಇಂಡಿಯಾ-ಪಾಕ್ ಕ್ರಿಕೆಟ್ ಪ್ರೇಮಿಗಳು ಮಾತ್ರ ದುಬೈ ಕಡೆ ದೃಷ್ಟಿಯಿಟ್ಟಿಲ್ಲ. ವಿಶ್ವದ ಎಲ್ಲಾ ಕ್ರಿಕೆಟ್ ಆಸಕ್ತರು ಇಂದಿನ ಪಂದ್ಯವನ್ನು ಎದುರು ನೋಡುತ್ತಿದ್ದಾರೆ. ಭಾರತೀಯರು ಟೀಂ ಇಂಡಿಯಾ ಗೆಲ್ಲಲೇಬೇಕು ಅಂತ ಪ್ರಾರ್ಥನೆ ಮಾಡುತ್ತಿದ್ದಾರೆ. ಉಡುಪಿಯ ಕ್ರಿಕೆಟ್ ಪ್ರೇಮಿಗಳು ಟೀಂ ಇಂಡಿಯಾಕ್ಕೆ ಹೋಲ್ ಸೇಲಾಗಿ ವಿಷ್ ಮಾಡಿದ್ದಾರೆ. ನಮ್ಮ ಕಡೆಯಿಂದಲೂ ರೋಹಿತ್ ಆಂಡ್ ಟೀಂ ಗೆ ಆಲ್ ದಿ ಬೆಸ್ಟ್.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv