Tag: crime

  • ಬರ್ತ್‌ಡೇ ಆಚರಿಸಲು ಬಂದ ಸ್ನೇಹಿತರಿಂದ್ಲೇ ಡೆತ್ ಡೇ – ಪಾರ್ಟಿಯ ಬಿಲ್ ಕಟ್ಟೋ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ

    ಬರ್ತ್‌ಡೇ ಆಚರಿಸಲು ಬಂದ ಸ್ನೇಹಿತರಿಂದ್ಲೇ ಡೆತ್ ಡೇ – ಪಾರ್ಟಿಯ ಬಿಲ್ ಕಟ್ಟೋ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ

    ಆನೇಕಲ್: ಬರ್ತ್‌ಡೇ ಆಚರಿಸೋಕೆ ಬಂದ ದಿನವೇ ಪಾರ್ಟಿಯ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು, ಅದೇ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಬೆಂಗಳೂರು (Bengaluru) ಹೊರವಲಯ ಜಿಗಣಿ (Jigani) ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯದಲ್ಲಿ ನಡೆದಿದೆ.

    ಅ.16ರಂದು ಸಂದೀಪ್‌ನ ಬರ್ತಡೇ ಇತ್ತು. ಆ ದಿನ ಸ್ನೇಹಿತರ ಜೊತೆ ಪಾರ್ಟಿ ಮಾಡಲು ಕುಂಬಾರನಹಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಹೋಗಿದ್ದರು. ಅಲ್ಲಿ ಕೇಕ್ ಕಟ್ ಮಾಡಿ, ಬಳಿಕ ಸ್ನೇಹಿತರೆಲ್ಲ ಸೇರಿಕೊಂಡು ಎಣ್ಣೆ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದಿದ್ದರು. ಕೊನೆಯಲ್ಲಿ ಬಿಲ್ ಕಟ್ಟುವಾಗ ಸಂದೀಪ್ ನನ್ನ ಬಳಿ ಅಷ್ಟೊಂದು ಹಣ ಇಲ್ಲ ಎಂದಿದ್ದ. ಆಗ ಸಂದೀಪ್ ಮತ್ತು ಸಂತೋಷ್ ನಡುವೆ ಗಲಾಟೆ ಆಗಿದೆ. ಇದನ್ನೂ ಓದಿ: ಟೋಲ್ ಸಿಬ್ಬಂದಿ ಮೇಲೆ ಪುತ್ರನಿಂದ ಹಲ್ಲೆ – ನನ್ನ ಮಗನ ತಪ್ಪಿದ್ದರೆ ಕ್ಷಮೆ ಕೇಳಿಸ್ತೀನಿ: ವಿಜೂಗೌಡ ಪಾಟೀಲ್‌

    ಅಲ್ಲಿದ್ದ ಉಳಿದ ಸ್ನೇಹಿತರು ಜಗಳ ಬಿಡಿಸಿ ಇಬ್ಬರನ್ನು ಕಳುಹಿಸಿದ್ದರು. ಆದರೆ ಮನೆಗೆ ಹೋಗದ ಸಂದೀಪ್ ಅಲ್ಲಿಂದ ಊರಿನ ಬಳಿಯಿರುವ ವಾಲಿಬಾಲ್ ಕೋರ್ಟ್‌ಗೆ ಎಣ್ಣೆ ಹಾಕೋಕೆ ಹೋಗಿದ್ದ. ವಿಚಾರ ತಿಳಿದ ಸಂತೋಷ್ ಮತ್ತು ಸಾಗರ್ ಅಲ್ಲಿಗೆ ಎಂಟ್ರಿ ಕೊಟ್ಟು ಏಕಾಏಕಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದರು. ಆಗ ಸಂದೀಪ್ ಅಲ್ಲಿಂದ ಜಿಗಣಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ, ಮನೆಗೆ ಬಂದಿದ್ದ.

    ಗಲಾಟೆಯ ಬಳಿಕ ಮನೆಯಲ್ಲಿದ್ದ ಸಂದೀಪ್‌ಗೆ ವಾಂತಿ, ತಲೆನೋವು ಶುರುವಾಗಿದೆ. ತಲೆಯೊಳಗೆ ರಕ್ತ ಹೆಪ್ಪುಗಟ್ಟಿ ಮೆದುಳಿಗೆ ಪೆಟ್ಟು ಬಿದ್ದಿತ್ತು. ಹತ್ತಿರದ ಕ್ಲಿನಿಕ್‌ಗೆ ಹೋಗಿ ಇಂಜೆಕ್ಷನ್ ತೆಗೆದುಕೊಂಡು ಬಂದು ಮನೆಯಲ್ಲಿ ಮಲಗಿದ್ದ. ಮತ್ತೆ ಒಂದು ದಿನದ ಬಳಿಕ ಅದೇ ರೀತಿ ತಲೆನೋವು, ವಾಂತಿ ಶುರುವಾಯ್ತು. ಬಳಿಕ ಖಾಸಗಿ ಆಸ್ಪತ್ರೆಗೆ ಬಂದಿದ್ದ ಸಂದೀಪ್‌ಗೆ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ಕಳುಹಿಸಿದ್ದರು.

    ಅಲ್ಲಿನ ವೈದ್ಯರು ಪರೀಕ್ಷೆ ನಡೆಸಿದಾಗ ಸಂದೀಪ್ ತಲೆಗೆ ಗಂಭೀರ ಗಾಯವಾಗಿರೋದು ತಿಳಿದಿದೆ. ಅಲ್ಲಿಂದ ಮಡಿವಾಳದ ಕಾವೇರಿ ಆಸ್ಪತ್ರೆಗೆ ಶಿಫ್ಟ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿತ್ತು. ಸಂಪೂರ್ಣ ಪ್ರಜ್ಞೆ ಕಳೆದುಕೊಂಡು ಕೋಮಾಗೆ ತಲುಪಿದ ಸಂದೀಪ್ ಚಿಕಿತ್ಸೆ ಫಲಕಾರಿಯಾಗದೇ ಅ.28ರಂದು ಸಾವನ್ನಪ್ಪಿದ್ದಾನೆ.

    ಮಗನ ಸಾವಿನ ವಿಷಯ ತಿಳಿದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸೂಕ್ತ ತನಿಖೆ ನಡೆಸಿ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಮೃತ ಸಂದೀಪ್ ತಂದೆ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಸಂತೋಷ್ ಮತ್ತು ಸಾಗರ್ ಇಬ್ಬರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ.ಇದನ್ನೂ ಓದಿ: Mumbai Hostage | 17 ಮಕ್ಕಳನ್ನ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರೋಪಿ ಪೊಲೀಸರ ಗುಂಡಿಗೆ ಬಲಿ

  • ನೆಲಮಂಗಲ | ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಕೇಸ್ – PDO ಅಮಾನತು

    ನೆಲಮಂಗಲ | ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಕೇಸ್ – PDO ಅಮಾನತು

    ನೆಲಮಂಗಲ: ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ (PDO) ಗೀತಾಮಣಿಯನ್ನು ಅಮಾನತು ಮಾಡಲಾಗಿದೆ.

    ನೆಲಮಂಗಲ (Nelamangala) ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ರಾಮಚಂದ್ರಯ್ಯ ಅವರ ಅಣ್ಣನ ಮಗ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪಿಡಿಓ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎಸ್ ಅವರ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಪಿಡಿಓ ಕಿರುಕುಳಕ್ಕೆ ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ?

    ಕಳೆದ ಮೂರು ತಿಂಗಳಿಂದ ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದರು. ಜೊತೆಗೆ ಬಯೋಮೆಟ್ರಿಕ್ ಹಾಜರಾತಿ ಹಾಕದೇ, ಇಲ್ಲಸಲ್ಲದ ಕಾರಣ ಹೇಳಿ ಕಿರುಕುಳಕ್ಕೆ ನೀಡಿದ್ದರು ಎಂದು ಪಿಡಿಓ ಗೀತಾಮಣಿ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿತ್ತು.

  • ನೆಲಮಂಗಲ | ರಸ್ತೆ ದುರಸ್ತಿ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ – ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ

    ನೆಲಮಂಗಲ | ರಸ್ತೆ ದುರಸ್ತಿ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ – ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ

    ನೆಲಮಂಗಲ: ರಸ್ತೆ ದುರಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ವೇಳೆ ಮಹಿಳೆ (Woman) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ನೆಲಮಂಗಲ (Nelamangala) ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಜನಸಾಮಾನ್ಯರು ಓಡಾಡುವ ಅನುಮತಿ ರಸ್ತೆ ಸರಿ ಮಾಡಿಸುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ದೊಣ್ಣೆ ಕಲ್ಲುಗಳಿಂದ ಗ್ರಾಮದ ನಾಗರತ್ನ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರೇಮ್ ಕುಮಾರ್, ಜಯಮ್ಮ, ಮಹಿಮೆಗೌಡ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಲವ್ವರ್‌ ನೋಡಲು ಬಂದ ಯುವಕನಿಗೆ ಥಳಿಸಿ ಹತ್ಯೆ; ಮನನೊಂದು ಕತ್ತು ಕೊಯ್ದುಕೊಂಡ ಪ್ರೇಯಸಿ

    ಗ್ರಾಮದ ರಸ್ತೆಯಲ್ಲಿ ಮಳೆಯಿಂದ ಗುಂಡಿಗಳು ಬಿದ್ದಿದ್ದು, ಜನ ಸಂಚಾರಕ್ಕೆ ಸಮಸ್ಯೆ ಆಗುತ್ತಿತ್ತು. ಹೀಗಾಗಿ ರಸ್ತೆಗೆ ಮಣ್ಣು ಹಾಕಿ ಸರಿ ಮಾಡಲು ಜನರೇ ಮುಂದಾಗಿದ್ದರು. ರಸ್ತೆ ದುರಸ್ತಿ ಮಾಡದಂತೆ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಿದ್ದಾರೆ ಎಂದು ನಾಗರತ್ನಮ್ಮ ಆರೋಪಿಸಿದ್ದಾರೆ.

    ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮಹಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಮಗುವಿನ ಎದುರೇ ಪತ್ನಿಯನ್ನು ಥಳಿಸಿ ಕೊಂದ ಪತಿ

  • ಚಿಕ್ಕಮಗಳೂರು | ಮಗುವಿನ ಎದುರೇ ಪತ್ನಿಯನ್ನು ಥಳಿಸಿ ಕೊಂದ ಪತಿ

    ಚಿಕ್ಕಮಗಳೂರು | ಮಗುವಿನ ಎದುರೇ ಪತ್ನಿಯನ್ನು ಥಳಿಸಿ ಕೊಂದ ಪತಿ

    ಚಿಕ್ಕಮಗಳೂರು: ಕೌಟುಂಬಿಕ ಕಲಹದದಿಂದ ಬೇಸತ್ತು ಪತಿಯೇ ಪತ್ನಿಯನ್ನು ಕಬ್ಬಿಣದ ಪೈಪಿನಿಂದ ಥಳಿಸಿ ಕೊಂದ ಅಮಾನವೀಯ ಘಟನೆ ಕಳಸದ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.

    ಮಂಜುಳಾ (32) ಹತ್ಯೆಯಾದ ದುರ್ದೈವಿ. ದಂಪತಿ ಕಳಸ ತಾಲೂಕಿನ ಯಮಗೊಂಡ ಕಾಫಿ ತೋಟದ ಲೈನ್‌ ಮನೆಯಲ್ಲಿ ವಾಸವಾಗಿದ್ದರು. ಮೂಲಗಳ ಪ್ರಕಾರ, ಪತಿ-ಪತ್ನಿಯರ ನಡುವೆ ನಿತ್ಯವೂ ಜಗಳ ನಡೆಯುತ್ತಿತ್ತು. ಜಗಳ ಹೆಚ್ಚಾಗಿದ್ದರಿಂದ ಇವರನ್ನು ನೋಡಿ ಬೇಸತ್ತ ತೋಟದ ರೈಟರ್, ಇನ್ನು ಮುಂದೆ ಕೆಲಸಕ್ಕೆ ಬರಬೇಡಿ ಎಂದು ಹೇಳಿದ್ದರು ಎನ್ನಲಾಗಿದೆ.

    ಹತ್ಯೆ ನಡೆದ ದಿನವೂ ದಂಪತಿ ನಡುವೆ ತೀವ್ರ ಜಗಳ ನಡೆದಿತ್ತು. ಇದರಿಂದ ಕೋಪಗೊಂಡ ಪತಿ ಮಗುವಿನ ಎದುರೇ ಕಬ್ಬಿಣದ ಪೈಪ್‌ನಿಂದ ಮಂಜುಳಾ ಅವರ ತಲೆಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪಿಡಿಓ ಕಿರುಕುಳಕ್ಕೆ ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ?

    ಕೃತ್ಯವೆಸಗಿದ ಪತಿಯ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರಿನ ಮಿರರ್‌ಗೆ ಟಚ್‌ ಆಯ್ತು ಅಂತ ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ; ದಂಪತಿ ಬಂಧನ

  • ಪಿಡಿಓ ಕಿರುಕುಳಕ್ಕೆ ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ?

    ಪಿಡಿಓ ಕಿರುಕುಳಕ್ಕೆ ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ?

    ನೆಲಮಂಗಲ: ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ (Nelamangala) ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಗ್ರಾಮ ಪಂಚಾಯತ್‌ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಕಳೆದ 25 ವರ್ಷದಿಂದ ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಇದನ್ನೂ ಓದಿ: ಅಲ್ಲಾಹು ಅಕ್ಬರ್‌ ಎನ್ನುತ್ತಾ ಗರ್ಭಗುಡಿಗೆ ನುಗ್ಗಿ ವಿಗ್ರಹಕ್ಕೆ ಚಪ್ಪಲಿಯಿಂದ ಒದ್ದು ವಿಕೃತಿ!

    ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತಿ PDO ಗೀತಾಮಣಿ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಕಳೆದ ಮೂರು ತಿಂಗಳಿಂದ ಸಂಬಳ ನೀಡದೇ ಕಿರುಕುಳ ನೀಡುತ್ತಿದ್ದರು. ಜೊತೆಗೆ ಬಯೋಮೆಟ್ರಿಕ್ ಹಾಜರಾತಿ ಹಾಕದೇ, ಇಲ್ಲಸಲ್ಲದ ಕಾರಣ ಹೇಳಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ರಾಮಚಂದ್ರಯ್ಯ ಅವರು ವಿಷ ಸೇವನೆ ಮಾಡಿದ್ದಾರೆ. ಒದ್ದಾಡುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತುಮಕೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಈ ಸಂಬಂಧ ಮೃತ ರಾಮಚಂದ್ರಯ್ಯ ಅವರ ಅಣ್ಣನ ಮಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ದಾಖಲಿಸಿದ್ದು, ದೂರಿನನ್ವಯ ಪಿಡಿಓ ಗೀತಾಮಣಿ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.ಇದನ್ನೂ ಓದಿ: ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ

  • ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ

    ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ

    – ಪ್ರೀತಿ ನಿರಾಕರಿಸಿದ್ದಕ್ಕೆ ದುಷ್ಕೃತ್ಯ ಶಂಕೆ, ಓರ್ವ ಯುವಕ ವಶಕ್ಕೆ

    ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ (Koppa) ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ.

    ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿತ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಿಂದ ಬಸರೀಕಟ್ಟೆ ಗ್ರಾಮಕ್ಕೆ ಹೋಗಿ ಬರುತ್ತಿದ್ದರು. ಮಂಗಳವಾರ (ಅ.28) ಅದೇ ರೀತಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ನಾಲ್ಕೈದು ಯುವಕರ ಗುಂಪು ದಾರಿಯಲ್ಲಿ ಕಾಯುತ್ತಾ ನಿಂತಿದ್ದರು. ಶಿಕ್ಷಕಿ ಬರುತ್ತಿದ್ದಂತೆ ಅವರ ಮೇಲೆ ಎರಗಿ ದೌರ್ಜನ್ಯ ಎಸಗಿದ್ದು, ಬಳಿಕ ಅಡಿಕೆ ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಮುಂದಾಗಿದ್ದಾರೆ. ಕಿರುಚಿಕೊಳ್ಳುತ್ತಿದಂತೆ ಬಾಯಿಗೆ ಮಣ್ಣು ಹಾಕಿ ವಿಕೃತಿ ಮೆರೆದಿದ್ದಾರೆ. ಆದರೂ ಶಿಕ್ಷಕಿ ಕಿರುಚಿದ ಶಬ್ದ ಕೇಳಿಸಿಕೊಂಡ ಸ್ಥಳೀಯರು ಸ್ಥಳಕ್ಕೆ ಬಂದಿದ್ದಾರೆ. ಜನರು ಬರುತ್ತಿದ್ದಂತೆ ಆರೋಪಿಗಳು ಕಬ್ಬಿಣ ರಾಡ್‌ನಿಂದ ಶಿಕ್ಷಕಿ ತಲೆಗೆ ಹೊಡೆದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಇದನ್ನೂ ಓದಿ: ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಅದೃಷ್ಟಾವಶಾತ್ ಸಾವಿನಿಂದ ಪಾರಾಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಕೂಡಲೇ ಶಿಕ್ಷಕಿಯನ್ನು ಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ತನಿಖೆ ಕೈಗೆತ್ತಿಕೊಂಡ ಪೊಲೀಸರು ಸದ್ಯ ಬಾಳೆಹೊನ್ನೂರು ಮೂಲದ ಭವಿತ್ (24) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಯುವತಿ ಪ್ರೀತಿ ನಿರಾಕರಿಸಿ, ಎರಡು ತಿಂಗಳಿನಿಂದ ಆತನ ಮೊಬೈಲ್ ನಂಬರ್‌ನ್ನು ಬ್ಲಾಕ್ ಮಾಡಿದ್ದಳು. ಹೀಗಾಗಿ ದುಷ್ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.ಇದನ್ನೂ ಓದಿ: ಹೈಕೋರ್ಟ್ ತೀರ್ಪು ಪಾಲಿಸುತ್ತೇವೆ, ಎಲ್ಲರಿಗೂ ಸಮಾನ ಅವಕಾಶ ನೀಡಿ: ಕಲಬುರಗಿ ಆರ್‌ಎಸ್‌ಎಸ್‌

  • ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್

    ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್

    ಬೆಂಗಳೂರು: ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳನ್ನೇ ಕೊಲೆ ಮಾಡಿದ ಮಲತಂದೆಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ದರ್ಶನ್ ಕೊಲೆ ಮಾಡಿದ ಆರೋಪಿ. ಶುಕ್ರವಾರ (ಅ.24) ಸಂಜೆ ಕುಂಬಳಗೋಡಿನ ರಾಮಸಂದ್ರದಲ್ಲಿ ಈ ಘಟನೆ ನಡೆದಿತ್ತು. ಸದ್ಯ ಆರೋಪಿಯ ಜಾಡು ಹಿಡಿದು ಬಂಧಿಸಿರುವ ಪೊಲೀಸರಿಗೆ ಕೊಲೆಯ ಸ್ಫೋಟಕ ವಿಚಾರಗಳು ಗೊತ್ತಾಗಿದೆ. ಇದನ್ನೂ ಓದಿ: ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಬಾಲಕಿ ಸಿರಿಯ ತಾಯಿ ಶಿಲ್ಪಾಳನ್ನ ದರ್ಶನ್ ಎರಡನೇ ಮದುವೆಯಾಗಿದ್ದ. ಬಳಿಕ ದರ್ಶನ್ ತನ್ನ ಪ್ರೈವಸಿಯ ಬಗ್ಗೆ ತಲೆಕೆಡಿಸಿಕೊಂಡಿದ್ದ. ಹೀಗಾಗಿ ಆರೋಪಿಯು ಬಾಲಕಿಯ ಅಜ್ಜಿ ಇರೋತನಕ ಯಾವುದೇ ಕಿರಿಕ್ ಮಾಡುತ್ತಿರಲಿಲ್ಲ. ಆದರೆ ಆಕೆಯ ಅಜ್ಜಿ ಇತ್ತೀಚೆಗೆ ಮೃತಪಟ್ಟಿದ್ದರು.

    ಬಳಿಕ ತನ್ನ ಬುದ್ಧಿ ತೋರಿಸಲು ಶುರು ಮಾಡಿದ ದರ್ಶನ್, ಬಾಲಕಿಗೆ ಹೊಡೆದು ಬಡಿದು ಚಿತ್ರಹಿಂಸೆ ಕೊಡ್ತಿದ್ದ. ನಾಲ್ಕು ದಿನಗಳ ಹಿಂದೆ ಮನೆಗೆ ಬಂದಾಗ ಆರೋಪಿ ಬಾಲಕಿಯನ್ನ ಕೊಲೆ ಮಾಡಿದ್ದ. ಬಾಲಕಿಯನ್ನ ಕೊಲೆ ಮಾಡಿದ್ದಲ್ಲದೆ ಸಾಕ್ಷ್ಯ ನಾಶಕ್ಕೂ ಯತ್ನಿಸಿದ್ದ. ಆದರೆ ಅದೇ ವೇಳೆ ಶಿಲ್ಪಾ ಮನೆಗೆ ಬಂದಿದ್ದರಿಂದ ಗಾಬರಿಯಾದ ದರ್ಶನ್, ಆಕೆಯನ್ನ ರೂಮಿನಲ್ಲಿ ಕೂಡಿ ಹಾಕಿ ಎಸ್ಕೇಪ್ ಆಗಿದ್ದ.

    ಪೊಲೀಸರು ಆತನ ಬೆನ್ನು ಬಿದ್ದು, ನೆಲಮಂಗಲ ಬಳಿ ಹೆಡೆಮುರಿ ಕಟ್ಟಿದ್ದಾರೆ. ಸದ್ಯ ಪ್ರೈವಸಿ ತೊಂದರೆಯಿಂದಲೇ ದರ್ಶನ್ ಬಾಲಕಿಯನ್ನು ಕೊಲೆ ಮಾಡಿರೋದು ಗೊತ್ತಾಗಿದೆ. ಪೊಲೀಸರು ಆತನನ್ನು ತೀವ್ರ ವಿಚಾರಣೆ ಒಳಪಡಿಸಿದ್ದು, ಮತ್ತಷ್ಟು ವಿಚಾರ ಬಯಲಾಗಲಿದೆ.

  • ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ನವದೆಹಲಿ: ದೆಹಲಿ (Delhi) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದೀಗ ತನಿಖೆ ನಡೆಸಿದ ಪೊಲೀಸರು ಸುಳ್ಳು ಕಥೆ ಕಟ್ಟಿದ ಆರೋಪದಲ್ಲಿ ವಿದ್ಯಾರ್ಥಿನಿಯ ತಂದೆಯನ್ನೇ ಬಂಧಿಸಿದ್ದಾರೆ.

    ನಕಲಿ ಆ್ಯಸಿಡ್ ದಾಳಿಯ ಸೂತ್ರಧಾರ ಅಕೀದ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ 20 ವರ್ಷದ ಮಗಳ ಕೈಗಳ ಮೇಲೆ ತಾನೇ ಟಾಯ್ಲೆಟ್ ಕ್ಲೀನರ್ ಸುರಿದು ಸುಳ್ಳು ಕಥೆ ಕಟ್ಟಿರುವುದಾಗಿ ಆರೋಪಿಯು ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ – 30 ಲಕ್ಷ ಮೌಲ್ಯದ ಐಫೋನ್ ದೋಚಿದ್ದ ಗ್ಯಾಂಗ್ ಅರೆಸ್ಟ್

    ಏನಿದು ಪ್ರಕರಣ?
    ಭಾನುವಾರ (ಅ.26) ದೆಹಲಿಯ ಲಕ್ಷ್ಮಿಬಾಯಿ ಕಾಲೇಜಿನ ಹೊರಗೆ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ (Acid Attack)  ಮಾಡಲಾಗಿದೆ ಎಂದು ಸುದ್ದಿಯಾಗಿತ್ತು. ಬೈಕ್‌ನಲ್ಲಿ ಬಂದ ಮೂವರು ಆ್ಯಸಿಡ್ ಎಸೆದು ಪರಾರಿಯಾಗಿದ್ದಾರೆ. ಮುಖವನ್ನು ರಕ್ಷಿಸುವ ಭರದಲ್ಲಿ ತನ್ನ ಕೈಗಳಿಗೆ ಸುಟ್ಟ ಗಾಯಗಳಾಗಿವೆ. ಆರೋಪಿಗಳಲ್ಲಿ ಓರ್ವ ಮುಕುಂದ್‌ಪುರದ ನಿವಾಸಿ ಜಿತೇಂದ್ರ ಮತ್ತು ಆತನ ಮತ್ತಿಬ್ಬರು ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಎಂದು ಆರೋಪಿಸಿದ್ದಳು. ಇದನ್ನೂ ಓದಿ: ಬ್ರೆಜಿಲ್ ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಡೆಲಿವರಿ ಬಾಯ್ ಅರೆಸ್ಟ್

    ತನಿಖೆಯ ವೇಳೆ ವಿದ್ಯಾರ್ಥಿನಿಯ ಹೇಳಿಕೆಯಲ್ಲಿ ಗೊಂದಲವಿರುವುದನ್ನು ಪೊಲೀಸರು ಗಮನಿಸಿದ್ದರು. ಕೂಡಲೇ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ, ಆರೋಪಿ ಜಿತೇಂದ್ರ ಹಾಗೂ ಆತನ ಬೈಕ್ ಕೃತ್ಯ ನಡೆದಿದೆ ಎಂದು ಹೇಳಿದ ಸಮಯದಲ್ಲಿ ಬೇರೆ ಕಡೆ ಇರುವುದು ಕಂಡು ಬಂದಿತ್ತು. ಕರೆಗಳ ವಿವರ, ಸಿಸಿಟಿವಿ ದೃಶ್ಯಗಳು, ಸಾಕ್ಷಿಗಳ ಹೇಳಿಕೆಗಳಿಂದ ಇದು ದೃಢಪಟ್ಟಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ರವೀಂದರ್ ಯಾದವ್ ತಿಳಿಸಿದ್ದಾರೆ.

    ಈ ಕುರಿತು ಹೆಚ್ಚಿನ ತನಿಖೆ ನಡೆಸಿದ ವೇಳೆ ಘಟನೆಯ 2 ದಿನದ ಹಿಂದೆ ವಿದ್ಯಾರ್ಥಿನಿಯ ತಂದೆಯ ಮೇಲೆ ಜಿತೇಂದ್ರ ಪತ್ನಿ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ದೂರು ನೀಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆಯೂ ವಾಗ್ವಾದ ನಡೆದಿತ್ತು. ಇದೇ ಕಾರಣಕ್ಕಾಗಿ ವಿದ್ಯಾರ್ಥಿನಿಯ ತಂದೆಯು ಜಿತೇಂದ್ರ ವಿರುದ್ಧ ಸಂಚು ರೂಪಿಸಿ, ಆ್ಯಸಿಡ್ ದಾಳಿಯ ಸುಳ್ಳು ಕಥೆ ಕಟ್ಟಿದ್ದ ಎಂದು ತನಿಖೆ ವೇಳೆ ಬಯಲಾಗಿದೆ.

  • ದಾವಣಗೆರೆ | ಇಬ್ಬರು ಬೈಕ್ ಕಳ್ಳರ ಬಂಧನ – 16.52 ಲಕ್ಷ ಮೌಲ್ಯದ 30 ಬೈಕ್ ವಶಕ್ಕೆ

    ದಾವಣಗೆರೆ | ಇಬ್ಬರು ಬೈಕ್ ಕಳ್ಳರ ಬಂಧನ – 16.52 ಲಕ್ಷ ಮೌಲ್ಯದ 30 ಬೈಕ್ ವಶಕ್ಕೆ

    ದಾವಣಗೆರೆ: ಇಬ್ಬರು ಬೈಕ್ ಕಳ್ಳರನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 16.52 ಲಕ್ಷ ರೂ. ಮೌಲ್ಯದ 30 ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ.

    ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರಿನ ಪ್ರತಾಪ್ ಹಾಘೂ ಬಳ್ಳಾರಿ ಜಿಲ್ಲೆಯ ಬೋಜರಾಜ್ ಎಂದು ಗುರುತಿಸಲಾಗಿದೆ. ಆರೋಪಿಗಳು ಹರಿಹರದ ಇಂದಿರಾನಗರ, ವಿದ್ಯಾನಗರ ಸೇರಿದಂತೆ ಹಲವು ಕಡೆ ಬೈಕ್ ಕಳ್ಳತನ ಮಾಡಿದ್ದರು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಪೊಲೀಸರು ಕಾನೂನು ಪ್ರಕ್ರಿಯೆ ಮುಗಿಸಿ ಮಾಲೀಕರಿಗೆ ಬೈಕ್‍ಗಳನ್ನು ಮರಳಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಎಸ್‍ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಕೊಪ್ಪಳ | ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

    ಕೊಪ್ಪಳ | ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

    ಕೊಪ್ಪಳ: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕುಕನೂರು (Kuknoor) ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಶವಗಳು ಮನಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಹಿಳೆ ತನ್ನಿಬ್ಬರು ಮಕ್ಕಳಿಗೆ ಮೊದಲು ನೇಣು ಹಾಕಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.

    ಲಕ್ಷ್ಮವ್ವ ಗಂಡ ಹಾಗೂ ಅತ್ತೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಕಳೆದ 2016 ರಲ್ಲಿ ಲಕ್ಷ್ಮವ್ವ ಮದುವೆ ಆಗಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ

    ಡೆತ್ ನೋಟ್ ಪತ್ತೆ?
    ಮೃತ ಮಹಿಳೆಯ ಕೈ ಬಳೆಯಲ್ಲಿ ಚೀಟಿಯೊಂದು ಪತ್ತೆಯಾಗಿದ್ದು, ಸಾವಿಗೆ ಕಾರಣ ಬರೆದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.

    ಮೃತ ಮಹಿಳೆ ಕೂಲಿ ಕೆಲಸ ಮಾಡುತ್ತಿದ್ದು, ಆಕೆಯ ಪತಿ ಕಟ್ಟಡ ಕಾರ್ಮಿಕನಾಗಿದ್ದಾನೆ. ಲಕ್ಷ್ಮವ್ವರ ಗಂಡ ಮೂಲತಃ ಕೊಪ್ಪಳ ತಾಲೂಕು ಕರ್ಕಿಹಳ್ಳಿ ಗ್ರಾಮದವರಾಗಿದ್ದು, ಪತ್ನಿ ಮನೆಯಲ್ಲೇ ಬಂದು ವಾಸವಾಗಿದ್ದ. ನಮ್ಮಲ್ಲಿ ಯಾವುದೇ ಜಗಳ ಇರಲಿಲ್ಲ. ಯಾವುದೇ ತೊಂದರೆ ಇರಲಿಲ್ಲ ಎಂದು ಪತಿ ಹನುಮಂತಪ್ಪ ಪ್ರತಿಕ್ರಿಯಿಸಿದ್ದಾರೆ.

    ಘಟನಾ ಸ್ಥಳಕ್ಕೆ ಕೊಪ್ಪಳ (Koppal) ಎಸ್ ಡಾ.ರಾಮ್ ಎಲ್ ಅರಸಿದ್ದಿ ಭೇಟಿ ನೀಡಿ, ಪರಿಶೀಲನೆ‌ ನಡೆಸಿದ್ದಾರೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ದಂಡ ಕಟ್ಟುತ್ತೇನೆ ಎಂದಿದ್ದಕ್ಕೆ ಒಪ್ಪದ ಪೊಲೀಸರು – ಸವಾರ, ಟ್ರಾಫಿಕ್ ಪೊಲೀಸರ ನಡುವೆ ವಾಗ್ವಾದ